Author: admin

ಬೇಸಗೆಯ ಧಗೆಗೆ ಅನೇಕರು ಕಲ್ಲಂಗಡಿ ಹಣ್ಣಿನ ಮೊರೆಹೋಗುತ್ತಿದ್ದಾರೆ. ಕೆಜಿ ಗಟ್ಟಲೆ ಕೊಂಡು ಮನೆಗೆ ತರುತ್ತಾರೆ. ಅಂತೆಯೇ ಹೀಗೆ ಕೊಂಡುಕೊಂಡು ಬಂದು ಮನೆಯ ಅಡುಗೆ ಕೋಣೆಯಲ್ಲಿಟ್ಟ ಕಲ್ಲಂಗಡಿ ಹಣ್ಣೊಂದು ಸ್ಫೋಟವಾಗಿ ಅಕ್ಕಪಕ್ಕದವರು ಬೆಚ್ಚಿಬಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ಕೇರಳದ ಪೊನ್ನನಿಯ ನಸ್ರುದ್ದೀನ್ ಎಂಬುವರ ಮನೆಯ ಅಡುಗೆ ಕೋಣೆಯಲ್ಲಿ ಸೋಮವಾರ ಬೆಳಗ್ಗೆ ಇಂತಹ ಒಂದು ವಿಚಿತ್ರ ಘಟನೆ ನಡೆದಿದೆ. ಅಂಗಡಿಯಿಂದ ಖರೀದಿಸಿ ಮನೆಗೆ ತಂದ ಕಲ್ಲಂಗಡಿ ಹಣ್ಣು ಸ್ಫೋಟಿಸಿದೆ. ಅಂದಹಾಗೆ ಹತ್ತಿರದ ಎಂಇಎಸ್‌ ಕಾಲೇಜಿನಿಂದ ಕಲ್ಲಂಗಡಿ ಹಣ್ಣನ್ನು ಖರೀದಿಸಿ ತರಲಾಗಿತ್ತು. ಅಡುಗೆ ಮನೆಯಲ್ಲಿ ಸ್ಫೋಟಗೊಂಡ ಶಬ್ಧ ಕೇಳಿ ಬೆಚ್ಚಿಬಿದ್ದ ಅಕ್ಕಪಕ್ಕದ ಮನೆಯವರು ಓಡಿ ಬಂದು ನೋಡಲು, ನೆಲದ ಮೇಲೆ ಅಲ್ಲಲ್ಲಿ ಕೊಳಕು ವಾಸನೆಯೊಂದಿಗೆ ಕಲ್ಲಂಗಡಿ ಹಣ್ಣು ಚಿಧ್ರವಾಗಿ ಬಿದ್ದಿತ್ತು. ಮಾಹಿತಿ ತಿಳಿದು ಆರೋಗ್ಯ ಇಲಾಖೆ ಮತ್ತು ಮುನ್ಸಿಪಾಲಿಟಿಯ ಆಹಾರ ಸುರಕ್ಷತಾ ಅಧಿಕಾರಿಗಳು ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಹಣ್ಣನ್ನು ಖರೀದಿ ಮಾಡಿದ ಅಂಗಡಿಗೆ ತೆರಳಿ ಹಣ್ಣಿನ ಸ್ಯಾಂಪಲ್ ಪಡೆದು…

Read More

ಆಧಾರ್​ ಕಾರ್ಡ್​, ಪಡಿತರ ಚೀಟಿ, ಪಾವತಿ, ದಾಖಲಾತಿ ನೋಂದಣಿ, ಅರ್ಜಿ, ಬ್ಯಾಂಕ್ ವಿವರ ಹೀಗೆ ಹತ್ತು ಹಲವಾರು ಕೆಲಸಗಳು ಈಗ ನಡೆಯುತ್ತಿರುವುದು ಆನ್​ ಲೈನ್​ ನಲ್ಲಿ ಮಾತ್ರ. ಆನ್​ ಲೈನ್​ ವಹಿವಾಟುಗಳು ಬಹುಸಂಖ್ಯೆಯಲ್ಲಿ ಚಾಲ್ತಿಯಲ್ಲಿರುವುದರಿಂದ ಈ ವ್ಯವಸ್ಥೆ ಈಗ ಎಲ್ಲಾ ನಾಗರಿಕರಿಗೂ ಅನುಕೂಲವೇ ಆಗಿದೆ. ಆದರೆ ವಿದ್ಯೆ ಇರುವವರಿಗೆ ಇದು ಹೆಚ್ಚು ಅನುಕೂವಾಗುತ್ತಿದೆ. ಪಾಪ ಗ್ರಾಮೀಣ ಭಾಗದಲ್ಲಿ ವಯಸ್ಸಾದ ವೃದ್ಧರೂ ಏನೂ ತಿಳಿಯದೇ ತೊಂದರೆಗೀಡಾಗುತ್ತಿದ್ದಾರೆ. ಇದರ ಬಗ್ಗೆ ಇಂದಿಗೂ ಹೆಚ್ಚಿನ ಮಾಹಿತಿ ಇಲ್ಲ. ಇದ್ದರೂ ಅದನ್ನು ಹೇಗೆ ಅರ್ಥೈಸಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ಓದಲು, ಬರೆಯಲು ಬಾರದ ವೃದ್ಧರು ನಾಡಕಛೇರಿ, ಆಧಾರ್​ ಕಛೇರಿಗಳಿಗೆ ಹೋದರೆ ಭಾರಿ ಕಷ್ಟವನ್ನೇ ಎದುರಿಸಬೇಕಾಗುತ್ತದೆ. ಇದೀಗ ಇಲ್ಲೊಬ್ಬ ಹಿರಿಯರು ತಮ್ಮ ಆಧಾರ್ ಲಿಂಕ್ ಆಗಿರುವ ಫೋನ್ ತೆಗೆದುಕೊಂಡು ಬನ್ನಿ ಎಂದರೆ, ಮನೆಯಲ್ಲಿದ್ದ ಲ್ಯಾಂಡ್ ಲೈನ್‌ ನ್ನೇ ತೆಗೆದುಕೊಂಡು ಬಂದಿದ್ದಾರೆ..! ಆಧಾರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಅಜ್ಜನಿಗೆ ನೀವು ಬರುವಾಗ ಒಟಿಪಿಗಾಗಿ ನಿಮ್ಮ ಆಧಾರ್ ಲಿಂಕ್ ಸಂಖ್ಯೆ ನೋಂದಣಿಯಾಗಿರುವ…

Read More

ಕರ್ನಾಟಕ ಮಾಜಿ ಸಿಂಗಂ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ತಮಿಳುನಾಡಿನಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‌ಜಿಒಗಳ ಕೈವಾಡ ಇದೆ ಎಂದು ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ. ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅಣ್ಣಾಮಲೈ ವಿರುದ್ಧ ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ ಮದ್ರಾಸ್ ಹೈಕೋರ್ಟ್‌ಗೆ ಅಣ್ಣಾಮಲೈ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಮದ್ರಾಸ್ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅಣ್ಣಾಮಲೈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಸ್ಟೀಸ್ ಸಂಜೀವ ಖನ್ನಾ ಅವರಿದ್ದ ಏಕಸದಸ್ಯ ಪೀಠ ಪ್ರಕರಣಕ್ಕೆ ತಡೆ ನೀಡಿ ದೂರು ದಾಖಲಿಸಿದ ವಿ. ಪಿಯೂಷ್ ಗೆ ನೋಟಿಸ್ ನೀಡಿದ್ದಾರೆ. ಇವರ ಪರ…

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ಮಾಯಸಂದ್ರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ  “ಪೂರ್ಣಿಮ ವಾಸು” ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಮಂಜುನಾಥ್ ಎಂ.ಜಿ. ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. 15 ಸದಸ್ಯ ಬಲವುಳ್ಳ ಪಂಚಾಯತಿಯಲ್ಲಿ, ಪೂರ್ಣಿಮ ವಾಸು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾದ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ರವರು ಅವಿರೋಧ ಆಯ್ಕೆ ಎಂದು ಘೋಷಿಸಿದರು. ಈ ವೇಳೆ ಪತ್ರಕರ್ತರೊಂದಿಗೆ ನೂತನ ಅಧ್ಯಕ್ಷೆ ಪೂರ್ಣಿಮ ವಾಸುರವರು ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸರ್ವ‌ ಸದಸ್ಯರಿಗೂ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮತ್ತು ನಮ್ಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಿಗೂ ಮೂಲಸೌಲಭ್ಯ ಒದಗಿಸುವ ಕಾರ್ಯದಲ್ಲಿ ಪ್ರವೃತ್ತರಾಗಿರುತ್ತೇನೆ. ಹಾಗೂ ನಮ್ಮ  ಪಂಚಾಯಿತಿ ವ್ಯಾಪ್ತಿಯಲ್ಲಿ‌ನ ಅಭಿವೃದ್ಧಿಗಾಗಿ ಒತ್ತು ನೀಡುವುದರ ಮೂಲಕ, ಸಾರ್ವಜನಿಕರ ಸಮಸ್ಯೆಗೆ ಸದಾ ಸ್ಪಂದಿಸುವುದಾಗಿ ತಿಳಿಸಿದರು. ನೂತನ ಅಧ್ಯಕ್ಷರ ಆಯ್ಕೆಯ ಘೋಷಣೆಯಾಗುತ್ತಿದ್ದಂತೆ ತಮ್ಮ ಬೆಂಬಲಿಗರು, ಅಭಿಮಾನಿಗಳು, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು ಹಾಗೂ ‌ ಸ್ಥಳೀಯ ಮುಖಂಡರುಗಳು, ಗ್ರಾ.ಪಂ.…

Read More

ಬೆಂಗಳೂರು: ಶಾಸಕರಿಗೆ ಆಮಿಷ ಒಡ್ಡುವುದು ಜೆಡಿಎಸ್‌ ಸಂಸ್ಕೃತಿಯಲ್ಲ, ಕಾಂಗ್ರೆಸ್‌ ಸಂಸ್ಕೃತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ  ಹರಿಹಾಯ್ದರು. ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯ ಮತದಾನದ ವೇಳೆ ವಿಧಾನಸೌಧದ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರು ನಮ್ಮ ಶಾಸಕರನ್ನು ಸೆಳೆಯಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರ ಎಂದು ಆರೋಪಿಸಿದರು. ಕಳೆದ ಹತ್ತು ತಿಂಗಳಿಂದ ನಮ್ಮ ಶಾಸಕರಿಗೆ ಕಾಂಗ್ರೆಸ್‌ ನವರು ಗಾಳ ಹಾಕುತ್ತಲೇ ಇದ್ದಾರೆ. ಕರೆಮ್ಮ ಮತ್ತು ಶರಣಗೌಡ ಕಾಂಗ್ರೆಸ್‌ ಸೇರುತ್ತಾರೆ ಎಂದು ಸುದ್ದಿಯನ್ನೂ ಹಬ್ಬಿಸಿದ್ದರು. ಆದರೆ ನಮ್ಮ 19 ಮಂದಿ ಶಾಸಕರೂ ನಮ್ಮ ಜೊತೆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ಳಿ ಕಪ್‌ ಹಂಚಿ ಗೆದ್ದಿದ್ದಾರೆ. ಇದರ ಬಗ್ಗೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ. ಈ ಬಾರಿ ನಮಗೆ ಸೋಲು ಗೆಲುವು ಮುಖ್ಯವಲ್ಲ ಎಂದು ಹೆಚ್‌ಡಿಕೆ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ನಮ್ಮ ಪಕ್ಷದ ಮೂವರೂ ಅಭ್ಯರ್ಥಿಗಳೂ ಜಯ ಸಾಧಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರ ರಾಜ್ಯಸಭಾ ಚುನಾವಣೆಯ ಮತದಾನದ ವೇಳೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಖ್ಯಾಬಲದ ಪ್ರಕಾರ ಅಗತ್ಯ ಮತಗಳೇ ಇಲ್ಲದೇ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲ್ಲಲು ಹೇಗೆ ಸಾಧ್ಯ ಎಂದರು. ಆತ್ಮಸಾಕ್ಷಿಗೆ ಮತಹಾಕಿ ಎಂದು ಪ್ರತಿಪಕ್ಷದವರ ಮನವಿಗೆ ಪ್ರತಿಕ್ರಿಯಿಸಿದ ಸಿಎಂ ಆತ್ಮಸಾಕ್ಷಿ ಮತ ಎಂದರೇನು ಎಂದು ಪ್ರಶ್ನಿಸಿದರು. ಎಲ್ಲರೂ ಗೆಲ್ಲಬೇಕೆಂಬ ಉದ್ದೇಶದಿಂದ ಅಭ್ಯರ್ಥಿಗಳನ್ನು ಹಾಕುತ್ತಾರೆ. ಆದರೆ ಜೆಡಿಎಸ್‌ ಸೋಲುವ ಉದ್ದೇಶದಿಂದ ಅಭ್ಯರ್ಥಿಯನ್ನು ಹಾಕಿದೆ ಎಂದು ನುಡಿದ ಸಿಎಂ ಜೆಡಿಎಸ್‌ ಅಭ್ಯರ್ಥಿ ಗೆಲ್ಲಲು ಸಾಧ್ಯವೇ ಇಲ್ಲ. ಆದರೂ ಸಹ ಅವರು ಅಭ್ಯರ್ಥಿಯನ್ನು ನಿಲ್ಲಿಸಿರುವ ಉದ್ದೇಶವೇನು ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅವಕಾಡೊ ಎಣ್ಣೆಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು: ಅವಕಾಡೊ ಎಣ್ಣೆಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಈ ಎಣ್ಣೆಯನ್ನು ಸಾಮಾನ್ಯವಾಗಿ ಅದರ ತಿರುಳಿನಿಂದ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದಕ್ಷಿಣ ಮಧ್ಯ ಮೆಕ್ಸಿಕೋದಲ್ಲಿ ಬೆಳೆಯಲಾಗುತ್ತದೆ. ಇದರಲ್ಲಿ ಒಳಗೊಂಡಿರುವ ಮೊನೊಸಾಚುರೇಟೆಡ್ ಕೊಬ್ಬು ಆಲಿವ್ ಎಣ್ಣೆಯಂತೆ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಅಗತ್ಯವಾದ ಕೊಬ್ಬಿನಾಮ್ಲಗಳು, ವಿಟಮಿನ್ ಎ, ಡಿ, ಇ ಇವೆ, ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ತೂಕ ನಿಯಂತ್ರಣದಲ್ಲಿ ಸಹಾಯ ಮಾಡುತ್ತದೆ. ಕಣ್ಣು ಮತ್ತು ಚರ್ಮದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೇಸಿಗೆಯಲ್ಲಿ ಪ್ರತಿದಿನ ಎಳನೀರು ಆರೋಗ್ಯಕ್ಕೆ ಉತ್ತಮ: ಬೇಸಿಗೆ ಕಾಲದ ಸಮಯದಲ್ಲಿ ಸರಿಯಾದ ಆರೋಗ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ, ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿಯೇ ಈ ಸಮಯದಲ್ಲಿ ಕೆಲವು ವಿಶೇಷ ಆಹಾರಗಳನ್ನು ತಿನ್ನಲು ತಜ್ಞರು ಹೇಳುತ್ತಾರೆ. ಪ್ರತಿದಿನ ಎಳನೀರನ್ನು ಕುಡಿಯಿರಿ ಇದಲ್ಲದೆ, ಮೊಸರು ಸಹ ಆಹಾರದ ಭಾಗವಾಗಿರಬೇಕು ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಸಾಧ್ಯವಾದಷ್ಟು ಬಿಸಿ ಆಹಾರವನ್ನು ತ್ಯಜಿಸುವುದು ಉತ್ತಮ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ಎಸ್‌.ಟಿ. ಸೋಮಶೇಖರ್‌ ಅವರು ಯಾರಿಗೆ ಮತ ಹಾಕಿದಾರೋ ನನಗೆ ಗೊತ್ತಿಲ್ಲ. ಅದನ್ನು ಬಿಜೆಪಿಯವರೇ ಖಚಿತ ಪಡಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ರಾಜ್ಯಸಭಾ ಚುನಾವಣೆಯ ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರೇ ಹೇಳಿದ್ದಂತೆ ಅವರು ಆತ್ಮಸಾಕ್ಷಿಗೆ ಮತ ಹಾಕಿರಬಹುದು ಎಂದು ವ್ಯಂಗ್ಯವಾಡಿದರು. ಜೆಡಿಎಸ್‌ ಪಕ್ಷದಿಂದ ಮತ್ತೊಂದು ಅಭ್ಯರ್ಥಿಯನ್ನು ಹಾಕಿಸಿದ್ದೇ ಬಿಜೆಪಿಯವರು. ಅವರ ಅಭ್ಯರ್ಥಿ ಗೆಲ್ಲಲು 48 ಮತ ಸಾಕಾಗಿತ್ತು. ಈಗ ಕುಪೇಂದ್ರ ರೆಡ್ಡಿಯವರನ್ನು ಕರೆತಂದ ಮೇಲೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ಬಿಜೆಪಿಯವರದ್ದೇ ಆಗಿದೆ ಎಂದರು. ಎಸ್‌.ಟಿ. ಸೋಮಶೇಖರ್‌ ವಿರುದ್ದ ಬಿಜೆಪಿಯವರು ಕಾನೂನು ಕ್ರಮ ಕೈಗೊಳ್ಳಲಿದ್ದು, ಅವರಿಗೆ ನೀವು ನೆರವು ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಮುಂದೆ ನಡೆಯುವ ಬೆಳವಣಿಗೆಗಳನ್ನು ನೋಡಿ ಆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿಕ್ಕಮಗಳೂರು: ಅವಕಾಶವಾದಿಗಳನ್ನು ಬೆಂಬಲಿಸುವುದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಟಿಸಿದಂತೆ. ರಾಜಕಾರಣದಲ್ಲಿ ವ್ಯಭೀಚಾರ ಮಾಡುವವರು ಎಲ್ಲಾ ಕಡೆ ಸಲ್ಲುತ್ತಾರೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದರು. ರಾಜ್ಯಸಭೆ ಚುನಾವಣೆಯಲ್ಲಿ, ಎಸ್.ಟಿ. ಸೋಮಶೇಖರ್ ಅಡ್ಡ ಮತದಾನದ ಕುರಿತು ಪ್ರತಿಕ್ರಿಯಿಸಿದ ಅವರು, ವ್ಯಕ್ತಿ ಸಂಬಂಧಕ್ಕಾಗಿ ರಾಜೀ ರಾಜಕಾರಣ ಒಳ್ಳೆಯದಲ್ಲ ಎಂದು ಹೇಳಿದರು. ರಾಜಕೀಯದಲ್ಲಿ ವ್ಯಭಿಚಾರ ನಡೆಸುವವರು ಎಲ್ಲೆಡೆಯು ಸುಲಭವಾಗಿ ಸೆಟ್ ಆಗ್ತಾರೆ. ಇಂಥವರು ಎಲ್ಲರೊಂದಿಗೂ ಚೆನ್ನಾಗಿ ಇರುತ್ತಾರೆ. ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ, ಹಾಸನದಿಂದಲೇ ಸ್ಪರ್ಧೆ ಮಾಡಿದರೇ ಜೆಡಿಎಸ್​ ಕಾರ್ಯಕರ್ತರಿಗೆ ಸ್ಪೂರ್ತಿ ಜೊತೆಗೆ ಉಳಿದ ಅಭ್ಯರ್ಥಿಗಳಿಗೂ ಶಕ್ತಿ ನೀಡಿದಂತಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹಾಸನದಿಂದ ಸ್ಪರ್ಧೆ ಮಾಡಿದರೆ ಒಳ್ಳೆಯದು. ಇದರಿಂದ ಇಡೀ ರಾಜ್ಯದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು, ಕಾರ್ಯಕರ್ತರನ್ನು ಹುರಿದುಂಬಿಸಿದಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ, ಹಾಸನ ಕ್ಷೇತ್ರಗಳು ಜೆಡಿಎಸ್ ಪಾಲಾಗುತ್ತದೆಯೇ ಎಂಬ ಪ್ರಶ್ನೆಗೆ, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ನಮ್ಮ ತಾತ ಡಿಕ್ಲೇರ್ ಮಾಡಿದರೆ.. ಲೋಕಸಭೆ ಚುನಾವಣೆಯಲ್ಲಿ ಹೆಚ್‌ ಡಿಕೆ ಸ್ಪರ್ಧಿಸಲಿ ಎಂದು ಉತ್ತರಿಸಿದರು. ಲೋಕಸಭೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರದಲ್ಲಿ ನನಗೆ ಮಾಹಿತಿಯಿಲ್ಲ. ನನಗೇನೂ ಗೊತ್ತಿಲ್ಲ. ನಮ್ಮ ಜಿಲ್ಲೆ ಬಿಟ್ಟು ಹೊರಗಡೆ ಜಿಲ್ಲೆಯ ಬಗ್ಗೆ ಮಾಹಿತಿಯಿಲ್ಲ ಎಂದು ಸುಮ್ಮನಾದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. …

Read More