Subscribe to Updates
Get the latest creative news from FooBar about art, design and business.
- ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
- ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
- ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
- ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
- ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
- ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
Author: admin
ಕೋಲಾರ: ಕೋಲಾರ ತಾಲ್ಲೂಕಿನ ಮಟ್ನಹಳ್ಳಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕುಡಿದು ಬೈಕ್ ಕಳ್ಳತನ ಮಾಡಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಧರ್, ಅರುಣ್, ನವೀನ್ ಬೈಕ್ ಕಳ್ಳತನ ಮಾಡಿದ ಖದೀಮರಾಗಿದ್ದಾರೆ. ಮೂವರು ಕಳ್ಳರ ಫೈಕಿ ಇಬ್ಬರು ಸರ್ಕಾರಿ ಉದ್ಯೋಗಿ ಎಂಬ ಮಾಹಿತಿ ಸಿಕ್ಕಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ದೂರು ಕೊಟ್ಟ ಮೇಲೆ ಕಳ್ಳರು ಬೈಕ್ ತಂದು ಕೊಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೆಹಳ್ಳಿಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಅರೆಹಳ್ಳಿ ಗ್ರಾಮದ ಕೇಶವ ನಗರದ ನಿವಾಸಿ ಸಂಗಯ್ಯ(58) ಮೃತ ರ್ದುದೈವಿಯಾಗಿದ್ದಾನೆ. ಜಮೀನು ವಿವಾದ ಹಿನ್ನೆಲೆ ಅಣ್ಣ ಈರಯ್ಯ ಎಂಬಾತ ಮಚ್ಚಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆ ಆರೋಪಿ ಈರಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಕಳೆದ ವರ್ಷ ನವೆಂಬರ್ 30 ರಂದು ವಿವಾಹವಾಗಿದ್ದ ನವ ವಿವಾಹಿತ ಜೋಡಿಯೊಂದು 24 ಗಂಟೆಯೊಳಗೆ ದಾರುಣ ಅಂತ್ಯ ಕಂಡಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಕೂಡ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾರೆ. ನವವಿವಾಹಿತ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದಾಗ ದುರ್ಘಟನೆ ನಡೆದಿದ್ದು, ಅಲ್ಲಿ ಅಭಿಷೇಕ್ (25) ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತಕ್ಷಣ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಆಸ್ಪತ್ರೆಗೆ ಸೇರಿಸಿದರು. ಅಲ್ಲಿ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆತನಿಗೆ ಹೃದಯಾಘಾತವಾಗಿದ್ದಾಗಿ ತಿಳಿಸಿದ್ದಾರೆ. ಪತಿಯ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದೆ ಅಂಜಲಿ 7ನೇ ಮಹಡಿಯ ಬಾಲ್ಕನಿಯಿಂದ ಜಿಗಿದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ವೈಶಾಲಿ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಇಂದು ಮುಂಜಾನೆ ಆಕೆಯೂ ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಇತ್ತೀಚೆಗಷ್ಟೇ ಚಿತ್ರದ ಒಂದು ಹಾಡಿನ ಪ್ರೋಮೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಉಪ್ಪಿಗೆ ನೆಟ್ಟಿಗರಿಂದ ವ್ಯಾಪಕ ಪ್ರತಿಕ್ರಿಯೆಗಳು ಲಭಿಸಿತ್ತು. ಮಾತ್ರವಲ್ಲ ಹಲವಾರು ಮಂದಿ ಉಪ್ಪಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳತೊಡಗಿದ್ದಾರೆ. ಈ ಕುರಿತಂತೆ ಅಭಿಮಾನಿಗಳಲ್ಲಿಯೂ ಸಹ ಸಾಕಷ್ಟು ಗೊಂದಲ ಹುಟ್ಟಿಕೊಂಡಿತ್ತು. ಇದೇ ಬಗೆಹರಿದಿಲ್ಲ ಆಗಲೇ ಮತ್ತೊಂದು ಅನಿವಾರ್ಯ ಕಾರಣ ಹೊರಬಿದ್ದಿದೆ. ಅಸಲಿಗೆ ಏನಿದು ಅನಿವಾರ್ಯ ಕಾರಣಗಳಿಂದ ಎಂಬುದು ಸದ್ಯ ಎಲ್ಲರ ಪ್ರಶ್ನೆಯಾಗಿದೆ. ಸದಾ ಡಿಫರೆಂಟ್ ಆಗಿ ತೋರಿಸುವುದು,ಚಿತ್ರರಸಿಕರ ತಲೆಗೆ ಹುಳಬಿಡುವುದು ಉಪೇಂದ್ರ ಅವರ ರಿಯಲ್ ಸ್ಟೈಲ್. ಇನ್ನೊಂದು ವಿಚಾರವೆಂದ್ರೆ ಕರಿಮಣಿ ಮಾಲೀಕ ನೀನಲ್ಲ ಎನ್ನುವ ೨೫ ವರ್ಷಗಳ ಹಿಂದಿನ ಹಾಡೊಂದು ಇತ್ತೀಚೆಗೆ ವೈರಲ್ ಆಗಿರುವ ಬಗೆಗಿನ ವಿಚಾರ ನಿಮ್ಗೆ ಗೊತ್ತೆ ಇದೆ. ಒಂದೇ ಪದದಲ್ಲಿ ಎರಡೆರಡು ಅರ್ಥವನ್ನ ಹೇಳುವ ಹಾಡೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಇದೀಗ ಅದೇ ರೀತಿಯಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಾ ಹಾಗೂ ವಿಭಿನ್ನವಾಗಿರುವ ‘ಚೀಪ್ ಚೀಪ್’ ಲಿರಿಕಲ್ ವೀಡಿಯೋ ಕೂಡ ಸದ್ಯದಲ್ಲೇ ಹೊರಬೀಳಲಿದೆ. ಈ ಬಗ್ಗೆ…
ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಈಗಾಗಲೇ ಮೂರು ಪಕ್ಷದ ಎಲ್ಲಾ ನಾಯಕರು ಮತದಾನ ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಶಾಸಕರಿಗೆ ಆಮಿಷ ಆಸೆ ಒಡ್ಡುತ್ತಿದ್ದಾರೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಜೆಡಿಎಸ್ ಗೆ ಇರೋದೇ 19 ಮತಗಳು ಅಭ್ಯರ್ಥಿ ಹಾಕಬೇಕಿರಲಿಲ್ಲ. ಆದರೂ ಹಾಕಿದ್ದಾರೆ . ಬೇರೆ ಪಕ್ಷದವರೂ ನಮಗೆ ವೋಟ್ ಹಾಕಬಹುದು ಎಂದರು. ನಮ್ಮ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವವರು ಬೇರೆ ಪಕ್ಷದ ಶಾಸಕರಿಂದ ಮತಗಳು ಬರಬಹುದು. ನಾವು ಯಾವತ್ತೂ ಕೂಡ ಬೇರೆ ಶಾಸಕರಿಗೆ ಆಮಿಷ ಒಡ್ಡಿಲ್ಲ. ನಮಗೆ ಒಳ್ಳೆಯ ಮತದಾನಗಳು ಇರುವಾಗ ಆಮಿಷ ಒಡ್ಡುವ ಪ್ರಮೇಯವೇ ಬರುವುದಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತಮಿಳುನಾಡಿನಲ್ಲಿ 17 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಸೇಲಂ ಜಿಲ್ಲೆಯ ಓಮಲ್ಲೂರು ಬಳಿ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದ ಇಬ್ಬರು ಸದಸ್ಯರ ತಂಡ ಯುವತಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 13 ರಂದು ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ದಲಿತ ಯುವತಿಯನ್ನು ಆರೋಪಿಗಳು ಆಟೋ ರಿಕ್ಷಾದಲ್ಲಿ ಅಪಹರಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಕಟ್ಟಿ ಹಾಕಿ ,ಪರ್ಯಾಯವಾಗಿ ಚಿತ್ರಹಿಂಸೆ ನೀಡಿದ್ದಾರೆ. ಆರೋಪಿಗಳಲ್ಲಿ ಒಬ್ಬನು ತನ್ನ ಫೋನ್ ನಲ್ಲಿ ಚಿತ್ರಹಿಂಸೆಯ ದೃಶ್ಯಗಳನ್ನು ಸಹ ರೆಕಾರ್ಡ್ ಮಾಡಿದ್ದಾನೆ. ಆರೋಪಿಗಳ ಪೈಕಿ ಓರ್ವ ಬಾಲಕಿಯೊಂದಿಗೆ ಅನ್ಯೋನ್ಯವಾಗಿದ್ದು, ವಿವಾಹದ ಭರವಸೆ ನೀಡಿದ್ದ ಎಂದು ದೀವಟ್ಟಿಪಟ್ಟಿ ಪೊಲೀಸರು ತಿಳಿಸಿದ್ದಾರೆ. ಅತಿಜೀತಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಪೋಕ್ಸೋ ಕಾಯಿದೆಯ ವಿವಿಧ ವಿಭಾಗಗಳು ಮತ್ತು SC/ST (POA) ಕಾಯಿದೆಯ ಸೆಕ್ಷನ್ 3 (2) (va) ಅನ್ನು ಸಲ್ಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು…
ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಮತದಾನ ಆರಂಭಗೊಂಡಿದ್ದು, ಶಾಸಕರು ಆಗಮಿಸಿ ತಮ್ಮ ಮತ ಚಲಾಯಿಸುತ್ತಿದ್ದಾರೆ. ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಮೊದಲ ಮತವನ್ನೇ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಚಲಾಯಿಸಿದರು. ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ಸೈಯದ್ ನಾಸೀರ್ ಹುಸೇನ್, ಜಿ.ಸಿ. ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಬಾಂಡಗೆ, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಕಾಂಗ್ರೆಸ್ 134, ಬಿಜೆಪಿ 66, ಜೆಡಿಎಸ್ 19, ಇತರರು 4 ಶಾಸಕರನ್ನು ಹೊಂದಿದ್ದಾರೆ. ಉಳಿದ ನಾಲ್ವರಲ್ಲಿ ಇಬ್ಬರು ಪಕ್ಷೇತರರು ಮತ್ತು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ ಮತ್ತು ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತಚಲಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಆದಿಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡವೊಂದರಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆಂದು ಹಣ್ಣು ಕಾಯಿ ಖರೀದಿಸಲು ಹೋಗಿದ್ದರು. ಆಗ ಮಗು ರಸ್ತೆಯ ಬದಿಗೆ ಬಂದಿದೆ. ಅದೇ ಸಮಯದಲ್ಲಿ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ಮಗು ಇನ್ನೇನು ಹಾವನ್ನು ತುಳಿಯಬೇಕು ಎನ್ನುವಷ್ಟರಲ್ಲಿ ಅಲ್ಲೇ ಮಲಗಿದ್ದ ನಾಯಿಯೊಂದು ಓಡಿ ಹೋಗಿ ಮಗುವಿಗೆ ಅಡ್ಡ ನಿಂತಿದೆ. ಹಾಗೂ ಹಾವನ್ನು ತುಳಿಯದಂತೆ ಹಾಗೂ ಹಾವು ಸರಾಗವಾಗಿ ಹೋಗಲು ಅವಕಾಶ ನೀಡಿದೆ. ನಾಗ ದೇವರ ಸನ್ನಿಧಿಯಲ್ಲಿ ಮಗುವಿನ ರಕ್ಷಕನಾಗಿ ನಾಯಿಯೊಂದು ಜೀವ ಉಳಿಸಿದ್ದು, ನಿಜಕ್ಕೂ ಆಶ್ಚರ್ಯಕರ. ಇದೀಗ ಈ ಘಟನೆಯ ಪ್ರತ್ಯಕ್ಷದರ್ಶಿಗಳು ಈ ಸುದ್ದಿಯನ್ನು ತಿಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬರಹ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಮಿ ಗೌತಮ್ ಅವರ ಆರ್ಟಿಕಲ್ 370 ಸಿನಿಮಾವನ್ನು ಗಲ್ಫ್ ದೇಶಗಳಲ್ಲಿ ನಿಷೇಧಿಸಲಾಗಿದೆ. ಚಿತ್ರವು ಫೆಬ್ರವರಿ 23 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿದ್ದು, ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಆದರೆ, ಈಗ ಎಲ್ಲಾ ಗಲ್ಫ್ ರಾಷ್ಟ್ರಗಳಲ್ಲಿ ಇದನ್ನು ನಿಷೇಧಿಸಲಾಗಿದೆ. ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಫೈಟರ್ ಅನ್ನು ಕಳೆದ ತಿಂಗಳು ಎಲ್ಲಾ ಗಲ್ಫ್ ದೇಶಗಳಲ್ಲಿ (ಯುಎಇ ಹೊರತುಪಡಿಸಿ) ನಿಷೇಧಿಸಿದ ಕೆಲವೇ ದಿನಗಳಲ್ಲಿ ಮತ್ತೆ ಬಾಲಿವುಡ್ ಸಿನಿಮಾ ನಿಷೇಧ ಪುನರಾವರ್ತನೆಗೊಂಡಿದೆ. ಆರ್ಟಿಕಲ್ 370 ಯಾಮಿ ಗೌತಮ್ ಝೂನಿ ಹಕ್ಸರ್ ಎಂಬ ಗುಪ್ತಚರ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವುದರ ಸುತ್ತ ಚಿತ್ರ ಸುತ್ತುತ್ತದೆ. ಜತೆಗೆ ಚಿತ್ರವು ಕಣಿವೆಯಲ್ಲಿ ನಡೆಯುತ್ತದೆ. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದಿದ್ದು, 370 ನೇ ವಿಧಿಯನ್ನು ಕೇಂದ್ರ ಸರ್ಕಾರವು 2019 ರಲ್ಲಿ ಹಿಂತೆಗೆದುಕೊಂಡಿತು. ಚಿತ್ರವು ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ ಮೊದಲ ದಿನ 6.12 ಕೋಟಿ ರೂ.ಗಳಿದರೆ, ಇಲ್ಲಿಯವರೆಗೆ ಕೇವಲ ಮೂರು ದಿನಗಳಲ್ಲಿ…
ಉತ್ತರ ಪ್ರದೇಶದಲ್ಲಿ ವ್ಯಾನ್ ಮರಕ್ಕೆ ಡಿಕ್ಕಿ ಹೊಡೆದು ನಾಲ್ವರು ವಿದ್ಯಾರ್ಥಿಗಳು ದಾರುಣ ಅಂತ್ಯ ಕಂಡಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ರಾಜ್ಯ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಹೋಗುತ್ತಿದ್ದ ವಾಹನಕ್ಕೆ ಅಪಘಾತ ಸಂಭವಿಸಿದೆ. ಶಹಜಹಾನ್ ಪುರದ ಜರವಾವ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ರಾಜ್ಯ ಬೋರ್ಡ್ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳು ಕಾರಿನಲ್ಲಿ ಜೈತಿಪುರದ ಶಾಲೆಗೆ ಹೋಗುತ್ತಿದ್ದರು. ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಎಸ್ಪಿ(ನಗರ) ಸಂಜಯ್ ಕುಮಾರ್ ತಿಳಿಸಿದ್ದಾರೆ. ಅನುರಪ್ ಖುಷ್ವಾಹ (15), ಅನುರಾಗ್ ಶ್ರೀವಾಸ್ತವ (14) ಮತ್ತು ಪ್ರತಿಷ್ಠಾ ಮಿಶ್ರಾ (15) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಹಿನಿ ಮೌರ್ಯ (16) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಇತರ ಆರು ಮಂದಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದ ಬಲ್ಲಿಯಾ ಪ್ರದೇಶದಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಎರಡು ಕಾರುಗಳು ಮತ್ತು ಪಿಕಪ್ ಟ್ರಕ್ ಒಳಗೊಂಡ ಅಪಘಾತದಲ್ಲಿ ಹಲವಾರು…