Author: admin

ನವದೆಹಲಿ: ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ ‘ಘೋರ ಅನ್ಯಾಯ’ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ-ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ಯುವಕರು ತಮ್ಮ ಕನಸುಗಳ ಈಡೇರಿಸಿಕೊಳ್ಳುವ ಪ್ರಯತ್ನದಲ್ಲಿ ವರ್ಷಗಳ ಕಾಲ ಕಳೆದಿದ್ದಾರೆ ಮತ್ತು ‘ಪರಿಣಾಮವಾಗಿ ಹತಾಶೆ ಮತ್ತು ಭರವಸೆ ಕಾಣದಿರುವುದು ಹಲವಾರು ಸಾವುಗಳಿಗೆ ಕಾರಣವಾಯಿತು’ ಎಂದು ಖರ್ಗೆ ತಿಳಿಸಿದ್ದಾರೆ. ‘ನಮ್ಮ ಯುವಕರು ಈ ರೀತಿ ತೊಂದರೆ ಅನುಭವಿಸಲು ಬಿಡಬಾರದು. ಅವರಿಗೆ ಸೂಕ್ತ ನ್ಯಾಯ ಲಭ್ಯವಾಗುವಂತೆ ನೋಡಿಕೊಳ್ಳಲು ನಾನು ನಿಮಗೆ ಮನವಿ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ. ಜೂನ್ 14, 2022 ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು ಹದಿನೇಳುವರೆಯಿಂದ 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು…

Read More

ಮಲಬದ್ಧತೆಯಿಂದ ತಕ್ಷಣ ಪರಿಹಾರ ಬೇಕಾದರೆ ಈ ಜ್ಯೂಸ್‌ ಗಳನ್ನು ಸೇವಿಸಿ: ಮಲಬದ್ಧತೆ ಬಹಳ ಹಿಂಸೆ ನೀಡುವ ಸಮಸ್ಯೆಯಾಗಿದೆ. ನಮ್ಮ ದೇಹದಲ್ಲಿ ಸಾಕಷ್ಟು ನೀರಿನಂಶ ಇಲ್ಲದಿದ್ದಾಗ, ಸೇವಿಸುವ ಆಹಾರದಲ್ಲಿ ಫೈಬ‌ರ್ ಅಂಶ ಕಡಿಮೆಯಾದಾಗ ಮಲ ವಿಸರ್ಜನೆ ಕಷ್ಟವಾಗುತ್ತದೆ. ಈ ಸಮಸ್ಯೆಯನ್ನು ಮಲಬದ್ಧತೆ ಎಂದು ಕರೆಯಲಾಗುತ್ತದೆ. ಈ ಸಮಸ್ಯೆಗೆ ಪರಿಹಾರಕ್ಕಾಗಿ ಕೆಲವು ಜ್ಯೂಸ್‌ಗಳನ್ನು ಸೇವಿಸಬಹುದು. ಅಲೋವೆರಾ ಜ್ಯೂಸ್, ಸೇಬಿನ ಜ್ಯೂಸ್, ಕಿತ್ತಳೆ ಜ್ಯೂಸ್, ಪಾಲಕ್ ಜ್ಯೂಸ್, ಪಿಯ‌ರ್ ಜ್ಯೂಸ್, ನಿಂಬೆ ಜ್ಯೂಸ್ ಇವುಗಳು ಮಲಬದ್ಧತೆಯ ಸಮಸ್ಯೆಯಿಂದ ತಕ್ಷಣದ ಪರಿಹಾರವನ್ನು ನೀಡುತ್ತದೆ. ನಿಮಗೆ ಹುಷಾರಿಲ್ಲದಿರುವಾಗ ಈ 8 ಆಹಾರಗಳನ್ನು ಸೇವಿಸಿ, ಬೇಗ ಗುಣಮುಖರಾಗುತ್ತೀರಿ..! ಶುಂಠಿ ಚಹಾವು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬೆಂಬಲಿಸುತ್ತದೆ. ಇದು ವಾಕರಿಕೆ ಕಡಿಮೆ ಮಾಡಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೇನುತುಪ್ಪವು ಆಂಟಿಆಕ್ಸಿಡೆಂಟ್‌ ಗಳನ್ನು ಹೊಂದಿದ್ದು ಅದು ರೋಗ ನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅನ್ನವು ಸುಲಭವಾಗಿ ಜೀರ್ಣವಾಗುತ್ತದೆ. ಹೊಟ್ಟೆನೋವು ಇದ್ದಾಗ ಅನ್ನ ತಿನ್ನುವುದು ಒಳ್ಳೆಯದು.…

Read More

ಕೋಲಾರ: ಕುಮಾರಸ್ವಾಮಿ ಸದಾ ಡಬ್ಬದಲ್ಲಿ ರೀಲು ಇದೆ ಎಂದು ಸುಳ್ಳು ಹೇಳುತ್ತಾರೆ. ಆ ರೀಲು ಹೊರಬಿಡುವುದೇ ಇಲ್ಲ ಎಂದು ಡಿಕೆ ಸೋದರರು ಮಾಡಿರುವ ಟೀಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ದೊಡ್ಡಾಲಳ್ಳಿ, ಕೋಡಳ್ಳಿ ಮುಂತಾದೆಡೆ ಡಿ.ಕೆ. ಶಿವಕುಮಾರ್‌ ಟೆಂಟ್‌ ಗಳಲ್ಲಿ ತೋರಿಸಿದ ರೀಲನ್ನು ನಾವು ಯಾವತ್ತೂ ತೋರಿಸಿಲ್ಲ ಎಂದು ಪರೋಕ್ಷವಾಗಿ ಬ್ಲೂಫಿಲಂ ದಂಧೆಯ ಆರೋಪವನ್ನು ಕೆದಕಿದ್ದಾರೆ. ತಮ್ಮ ಏಕವಚನದಲ್ಲಿ ಡಿ.ಕೆ. ಶಿವಕುಮಾರ್‌ ಹರಿಹಾಯ್ದಿರುವ ಕುರಿತು ಪ್ರತಿಕ್ರಿಯಿಸಿದ ಎಚ್‌ಡಿಕೆ, ಡಿಕೆಶಿ ಈಗ ಸಂಪೂರ್ಣವಾಗಿ ತಮ್ಮ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು. ಅವರ ಶಾಸಕರಿಗೆ ಬೆದರಿಕೆ ಹಾಕಲಾಗಿದೆ, ಆಮಿಷ ಒಡ್ಡಲಾಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ಅವರ ಹಣಬಲ , ತೋಳ್ಬಲ ಮತ್ತು ಅಡ್ಜಸ್ಟ್‌ ಮೆಂಟ್‌ ರಾಜಕಾರಣದ ವಿರುದ್ದ ಜೆಡಿಎಸ್‌ ಎಲ್ಲಾದರೂ ಸೆಣಸಲು ಸಾಧ್ಯವೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಯಾವುದೇ ಶಾಸಕರೂ ಇದುವರೆಗೂ ನನ್ನ ವಿರುದ್ದ ಬೆದರಿಕೆ ಆರೋಪ ಮಾಡಿಲ್ಲ. ಆದರೆ ಡಿ.ಕೆ. ಶಿವಕುಮಾರ್‌ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕೋಲಾರ: ನಮ್ಮದು ಸಣ್ಣ ಪಕ್ಷ ನಾವು ಏನು ಮಾಡಬೇಕೋ ಮಾಡುತ್ತೇವೆ. ಸುಮಲತಾ ದೊಡ್ಡವರು ಅವರ ಕುರಿತು ಮಾತಾಡಲಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ ಕೈ ತಪ್ಪಿ ಹೋಗಿದೆ ಎಂದು ಕೆಲವರು ಮಾತನಾಡುತ್ತಿದ್ದಾರೆ. ಆದರೆ ಇನ್ನೂ ಸೀಟ್‌ ಹಂಚಿಕೆ ಆಗಿಲ್ಲ. ಸೀಟು ಹೊಂದಾಣಿಕೆ ಆಗಬೇಕು ಎಂದ ಅವರು, ಸುಮಲತಾ ಅವರ ಬಗ್ಗೆ ನಾವು ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು. ಮಂಡ್ಯದಿಂದ ತಾನು ಸ್ಪರ್ಧಿಸಬೇಕು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಆದರೆ ನನ್ನ ಗಮನವೆಲ್ಲ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ 28 ಸ್ಥಾನ ಗೆದ್ದುಕೊಡುವುದರ ಮೇಲಿದೆ. ವೈಯಕ್ತಿಕ ಸ್ಪರ್ಧೆಯ ಬಗ್ಗೆ ಯೋಚನೆ ಮಾಡುತ್ತಿಲ್ಲ ಎಂದರು. ಮಂಡ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರವಿವಾರ ತಡರಾತ್ರಿಯವರೆಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದು, ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಅವಕಾಶವಿರುವುದರಿಂದ ತಮ್ಮ ಅಭ್ಯರ್ಥಿ ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಅವರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಬಿಜೆಪಿ ವರಿಷ್ಠರಿಗೆ ನೀಡುತ್ತೇವೆ, ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ…

Read More

ಧ್ಯಾನ: ನಮ್ಮ ಮನಸ್ಸನ್ನು ನಿಯಂತ್ರಿಸಲು ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಾಯಕ. ಒತ್ತಡ, ಕೋಪ, ಕಿರಿಕಿರಿ ಇಂದ ದೂರವಾಗಲು ಧ್ಯಾನ ಅವಶ್ಯಕ. ಸಕಾರಾತ್ಮಕ ಚಿಂತನೆ: ಯಾವಾಗಲೂ ಸಕಾರಾತ್ಮಕ ಚಿಂತನೆ ಮಾಡಿದರೆ ನಮ್ಮ ಮನಸ್ಸಿಗೂ, ದೇಹಕ್ಕೂ ,ಜೀವನಕ್ಕೂ ಒಳ್ಳೆಯದು. ಎಲ್ಲದರಲ್ಲೂ ಒಳ್ಳೆಯದನ್ನು ಕಾಣಬೇಕು. ಯೋಗ ಅಥವಾ ವ್ಯಾಯಾಮ: ಮನಸ್ಸಿಗೆ ಧ್ಯಾನ, ದೇಹಕ್ಕೆ ವ್ಯಾಯಾಮ ಅಗತ್ಯ. ಏಕೆಂದರೆ ಸದೃಢ ದೇಹದಲ್ಲಿ ಸದೃಢ ಮನಸ್ಸು ಇರಲು ಸಾಧ್ಯ. ಓದುವುದು ಶೈಲಿ ರೂಢಿಸಿಕೊಳ್ಳಿ: ಓದುವ ಶೈಲಿ ರೂಢಿಸಿಕೊಂಡರೆ ನಮ್ಮ ಜ್ಞಾನ ಹೆಚ್ಚುತ್ತದೆ ಮತ್ತು ಒಂದು ರೀತಿಯ ನಿಮ್ಮದಿಯ ಅನುಭವ ಆಗುತ್ತದೆ. ಆತ್ಮ ಸಂವಹನ: ದಿನ ೫ ನಿಮಿಷ ನಮ್ಮ ಜೊತೆ ಮಾತನಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ನಮ್ಮ ಒಡಕು, ತೊಡಕುಗಳ ಬಗ್ಗೆ ತಿಳಿದುಕೊಳ್ಳಲು ಅವಶ್ಯಕ. ಇದು ನಮ್ಮ ಜೀವನವನ್ನೇ ಬದಲಿಸುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

“ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಯುವಜನರ ಮತ ಗಳಿಸಿದರು. ಈ ಲೆಕ್ಕದಲ್ಲಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ, ಮೋದಿಯವರು ಇರುವ ಉದ್ಯೋಗವನ್ನೂ ಕಸಿದುಕೊಂಡ ಕಾರಣ ನಿರುದ್ಯೋಗ ಪ್ರಮಾಣ ದೇಶದಲ್ಲಿ ಶೇ 8.40ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದ ಆಯೋಜಿಸಿರುವ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿರುದ್ಯೋಗಿ ಯುವಕರಿಗೆ ಯುವನಿಧಿ ಸಹಾಯಧನ ಕೊಡುವ ಜೊತೆಗೆ ಉದ್ಯೋಗ ಸೃಷ್ಟಿಸಲಾಗುವುದು ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಹೇಳಿದರು. “ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದ್ದರು. ಈ 10 ವರ್ಷದಲ್ಲಿ…

Read More

ಬೆಂಗಳೂರು: ಕೆಂಗೇರಿಯ ಬಳಿಯಿರುವ ಹೊಯ್ಸಳ ವೃತ್ತದಲ್ಲಿ ಕಾಟನ್‌ ಉಡುಪುಗಳ ಮಳಿಗೆಯ ಶೆಡ್‌ ಗೆ ಬೆಂಕಿ ಬಿದ್ದು ಬಟ್ಟೆ ಮತ್ತಿತರ ವಸ್ತುಗಳು ಸುಟ್ಟು ಬೂದಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಯಾವುದೇ ಪ್ರಾಣಾಪಾಯ, ಗಾಯಗಳು ಸಂಭವಿಸಿಲ್ಲ. ರಸ್ತೆಯ ಬದಿಯಲ್ಲಿ ಒಣಗಿದ ಎಲೆಗಳನ್ನು ಒಟ್ಟುಗೂಡಿಸಿ ಬೆಂಕಿಯಿಟ್ಟಿದ್ದೇ ಈ ಅನಾಹುತಕ್ಕೆ ಕಾರಣವೆನ್ನಲಾಗಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಆನೇಕಲ್: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ವೀರಸಂದ್ರ ಬಳಿ ರಾಯಲ್ ಇನ್ಫೀಲ್ಡ್ ಬೈಕ್ ಮತ್ತು ಕಾರಿನ ನಡುವೆ ಅಪಘಾತ ನಡೆದಿದೆ. ಪರಿಣಾಮ ಬೈಕ್‌ ನ ಹಿಂಬದಿ ಕುಳಿತಿದ್ದ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ. ಹೊಸೂರು ಮೂಲದ ಹಿಂದೂಮತಿ ಮೃತ ದುರ್ದೈವಿ. ಸೋಮವಾರ ಬೆಳಗ್ಗೆ ಹೊಸೂರಿನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬೈಕ್‌ ನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಹಿಂದೂಮತಿ ತಲೆಗೆ ಗಂಭೀರ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಹಾಗೂ ಬೈಕ್‌ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದಲ್ಲಿ‌ ಪತಿಯೊಬ್ಬ ನಂಬಿ ಬಂದವಳನ್ನು ಬಿಟ್ಟು ಮತ್ತೊಬ್ಬ ಮಹಿಳೆಯನ್ನ ವಿವಾಹವಾದ ವಿಚಾರ ತಿಳಿದ ಮಹಿಳೆ‌ ನೇಣಿಗೆ ಶರಣಾಗಿರುವ ಘಟನೆ‌ ನಡೆದಿದೆ. ನೇಣಿಗೆ ಶರಣಾದ ಮಹಿಳೆಯನ್ನು ವಿಶಾಲಾಕ್ಷಿ(21) ಎಂದು ಗುರುತಿಸಲಾಗಿದೆ. ಈಕೆಯ ಮನೆಯ ಹತ್ತಿರವೇ ವಾಸವಿದ್ದ ತಿಪ್ಪೇಸ್ವಾಮಿ, ಜಿಟಿಟಿಸಿಯಲ್ಲಿ ತರಬೇತಿ ಪಡೆಯುತ್ತಿದ್ದ ವಿಶಾಲಾಕ್ಷಿಯನ್ನು ಪ್ರೀತಿಸಿ ಕಳೆದ ವರ್ಷವಷ್ಟೇ ವಿವಾಹವಾಗಿದ್ದ. ತಿಪ್ಪೇಸ್ವಾಮಿ ಎಸ್ಟಿ (ನಾಯಕ) ಸಮುದಾಯಕ್ಕೆ ಸೇರಿದ್ದರೆ, ವಿಶಾಲಾಕ್ಷಿ ಎಸ್ಸಿ (ಮಾದಿಗ) ಸಮುದಾಯಕ್ಕೆ ಸೇರಿದ್ದಳು. ಹೀಗಾಗಿ, ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧವಿತ್ತು. ಆದರೂ ವಿರೋಧದ ನಡುವೆ ಇಬ್ಬರೂ ಊರು ತೊರೆದು ನಾಯಕನಹಟ್ಟಿ ಬಳಿಯ ಚೌಡಮ್ಮ ದೇಗುಲದಲ್ಲಿ ಮದುವೆ ಆಗಿದ್ದರು. ಇದನ್ನು ತಿಪ್ಪೇಸ್ವಾಮಿ ಕುಟುಂಬಸ್ಥರು ವಿರೋಧಿಸಿದ್ದರಿಂದ ಆಸಾಮಿ ಪತ್ನಿಯಿಂದ ದೂರವಾಗಿದ್ದ. ದಾರಿಕಾಣದ ವಿಶಾಲಾಕ್ಷಿ ಕೂನಬೇವು ಗ್ರಾಮದಲ್ಲಿದ್ದ ತನ್ನ ತವರು ಮನೆಯಲ್ಲಿದ್ದುಕೊಂಡೇ ಮತ್ತೆ ಜಿಟಿಟಿಸಿ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದರು. ಈ ನಡುವೆ ತಿಪ್ಪೇಸ್ವಾಮಿ ಬೇರೊಬ್ಬ ಮಹಿಳೆಯೊಂದಿಗೆ ವಿವಾಹವಾದ ವಿಚಾರ ತಿಳಿದು ವಿಶಾಲಾಕ್ಷಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಟೋಲ್ ಬಳಿ ಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಓರ್ವ ಯುವಕ ಬಲಿಯಾಗಿದ್ದಾನೆ. ದಾಸರಹಳ್ಳಿಯ ರಾಜೀಶ್(18) ಮೃತ ದುರ್ದೈವಿ. ವ್ಹೀಲಿಂಗ್ ವೇಳೆ ಎರಡು ಬೈಕ್ ​ಗಳ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ವ್ಹೀಲಿಂಗ್ ಬೈಕ್ ನಲ್ಲಿದ್ದ ಮತ್ತೊಬ್ಬ ಸೊಹೈಲ್ ಗೆ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದು ಬೈಕ್​ನ ಕೆಂಪರಾಜು, ತರುಣ್​ ಗೂ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More