Subscribe to Updates
Get the latest creative news from FooBar about art, design and business.
- ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
- ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
- ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
- ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
- ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
- ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ: AIDSO ಆಗ್ರಹ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
- ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
Author: admin
ರಾಯಚೂರು: ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಸಲಹೆ ನೀಡಿದರು. ಫೆ.24ರ ಮಂಗಳವಾರ ದಂದು ನಗರದ ಕೃಷಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಪ್ರತಿಯೊಬ್ಬರು ಕ್ರೀಡಾ ಮನೋಭಾವನೆಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಬದಲಾದ ಜೀವನ ಶೈಲಿ ಮತ್ತು ಆಹಾರ ಕ್ರಮಗಳಿಂದ ಒತ್ತಡ ಉಂಟಾಗುವುದು ಸಾಮಾನ್ಯವಾಗಿದೆ. ಹೀಗಾಗಿ ಪ್ರತಿ ನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಹೀಗಾಗಿ ಎರಡು ದಿನಗಳ ಕಾಲ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅವಕಾಶ ಸಿಕ್ಕಾಗ ಇದೆ ರೀತಿಯಲ್ಲಿ ಕ್ರೀಡೆಗಳನ್ನು ಏರ್ಪಡಿಸಿ, ನೌಕರರು…
ತುಮಕೂರು : ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಜಿ. ಹರಿವೇಸಂದ್ರ ಗ್ರಾಮದಲ್ಲಿ ಬ್ರೈನ್ ಕ್ಯಾನ್ಸರ್ ಗೆ ತುತ್ತಾದ ಯೋಗಿತಾ ಎಂಬ ಬಾಲಕಿಯ ಆಧಾರ್ ಕಾರ್ಡ್ ತಾಂತ್ರಿಕ ಸಮಸ್ಯೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಹಿನ್ನಲೆ ಕೂಡಲೇ ಸ್ಪಂದಿಸಿದ ಜಿಲ್ಲಾಡಳಿತದ ಉಪ ವಿಭಾಗಾಧಿಕಾರಿ ನಹೀದಾ ಜಮ್ ಜಮ್ ಬಾಲಕಿಯ ಮನೆಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಸ್ಥಳದಲ್ಲೇ ತಾಂತ್ರಿಕ ಸಮಸ್ಯೆ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಬ್ಬಿ ತಾಲ್ಲೂಕಿನ ಜಿ. ಹರಿವೇಸಂದ್ರ ಗ್ರಾಮಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್ ನೇರ ಯೋಗಿತಾ ಎಂಬ ಬಾಲಕಿಯ ಮನೆಗೆ ಭೇಟಿ ನೀಡಿ, ಸುಮಾರು ಒಂದು ಗಂಟೆ ಬಾಲಕಿಯ ಸಮಸ್ಯೆ ಆಲಿಸಿದರು. ಮಾರಕ ಕಾಯಿಲೆ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದ್ದ ಬಗ್ಗೆ ತೀವ್ರ ಮರುಕ ವ್ಯಕ್ತಪಡಿಸಿ ಆಧಾರ್ ಕಾರ್ಡ್ ತಿದ್ದುಪಡಿ ಆಗದ ಬಗ್ಗೆ ವಿಚಾರಿಸಿ ಜೊತೆಯಲ್ಲಿದ್ದ ತಾಂತ್ರಿಕ ಸಿಬ್ಬಂದಿಗಳಿಗೆ ಸರಿ ಪಡಿಸಲು ಸೂಚಿಸಿದರು. ಇಡೀ ಮಂಜುನಾಥ್ ಕುಟುಂಬವನ್ನು ನಲುಗಿಸಿದ್ದ ಮಾರಕ ಮೆದುಳು ಕ್ಯಾನ್ಸರ್ ಗೆ ತುತ್ತಾದ ಬಾಲಕಿ ಯೋಗೀತಾಗೆ ಚಿಕಿತ್ಸೆಗೆ ಆಧಾರ್…
ಬಳ್ಳಾರಿ: ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿಶೇಷ ಘಟಕ ಉಪಯೋಜನೆಯಡಿ ಕಂಪ್ಲಿ ಮತ್ತು ಕುರುಗೋಡು ಮೀನುಗಾರರಿಗೆ ಕಂಪ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆದ ಜೆ.ಎನ್.ಗಣೇಶ್ ಅವರು ಮಂಗಳವಾರ ಮೀನುಗಾರಿಕೆ ಸಲಕರಣೆ ಕಿಟ್ ವಿತರಿಸಿದರು. ಫಲಾನುಭವಿ ಯೋಜನೆಯಡಿ ಮೀನು ಮಾರಾಟಗಾರ ರಾಹುಲ್ ನಾಗಪ್ಪ ಅವರಿಗೆ ಶಾಸಕರು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯಧನದ ಚೆಕ್ ವಿತರಿಸಿದರು. ಇದೇ ವೇಳೆ ಮತ್ಸಾö್ಯಶ್ರಯ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕಾಗಿ ಕಾರ್ಯಾದೇಶ ಪ್ರತಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಬಿ.ಭಾವನ ಸೇರಿದಂತೆ ಇಲಾಖಾ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಮುಂಬರುವ ಬಜೆಟ್ ಅಧಿವೇಶನದಲ್ಲಿ ನೇರ ನೇಮಕಾತಿ, ಪದೋನ್ನತಿ, ಬ್ಯಾಕ್ ಲಾಗ್, ಕೆಪಿಎಸ್ ಸಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಇಂದು ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ನಗರದ ಟೌನ್ ಹಾಲ್‌ನಲ್ಲಿ ಸಮಾವೇಶಗೊಂಡ ಸಾವಿರಾರು ಒಳಮೀಸಲಾತಿ ಹೋರಾಟ ಸಮಿತಿಯ ಸದಸ್ಯರುಗಳು, ಬಿಜೆಎಸ್ ವೃತ್ತದಿಂದ ಅಶೋಕ ರಸ್ತೆಯ ಮೂಲಕ ಚರ್ಚ್ ಸರ್ಕಲ್, ಕೋಡಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ತುಮಕೂರು ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಡಾ.ವೈ.ಕೆ. ಬಾಲಕೃಷ್ಣ, ಮಾದಿಗ ಸಮುದಾಯ ಕಳೆದ 35 ವರ್ಷಗಳ ನಿರಂತರ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್‌ನ 7 ನ್ಯಾಯಾಧೀಶರ ಪೀಠದ ತೀರ್ಪಿನಂತೆ, ರಾಜ್ಯ ಸರ್ಕಾರ ನ್ಯಾ.ನಾಗಮೋಹನ್ ದಾಸ್‌ರವರ ಸಮಿತಿ ವರದಿಯನ್ನು ಆಧರಿಸಿ ಒಳಮೀಸಲಾತಿಯನ್ನು ಘೋಷಣೆ ಮಾಡಿದೆ. ನಾವು ಯಾರ ಪಾಲನ್ನು…
ತುಮಕೂರು: ಜ್ಯುವೆಲರಿ ಶಾಪ್ ಗೆ ನುಗ್ಗಿ ಕಳವು ಮಾಡಿದ್ದ ಆರೋಪಿಗಳನ್ನು ಕೃತ್ಯ ನಡೆದ 12 ಗಂಟೆಯೊಳಗೆ ಸಿರಾ ಉಪವಿಭಾಗ ವ್ಯಾಪ್ತಿಯ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಕೆ.ವಿ. ಅಶೋಕ್ ಅವರು ಭಾನುವಾರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಸಿರಾ ತಾಲ್ಲೂಕು ಕಳ್ಳಂಬೆಳ್ಳ ಠಾಣಾ ಸರಹದ್ದಿನ ಬೆಂಚೆಗೇಟ್‌ನಲ್ಲಿರುವ ಶ್ರೀ ಜಗದಾಂಭ ಜ್ಯುವೆಲರ್ ಶಾಪ್‌ಗೆ ರಾಜಸ್ಥಾನ ಮೂಲದ ನಾಲ್ವರು ಸುಲಿಗೆಕೋರರು ನುಗ್ಗಿ ವ್ಯಾಪಾರದಲ್ಲಿ ನಿರತರಾಗಿದ್ದ ಅಜ್ಜು ನಾತಿದೇವಿ, ಮಮ್ಮುಗೆ ದಿನೇಶ್ ಎಂಬುವರ ಕಣ್ಣಿಗೆ ಕಾರದಪುಡಿ ಎರಚಿ ಶಟರ್ ಕ್ಲೋಸ್ ಮಾಡಿ 20 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಗೋಲ್ಡ್ ಕವರಿಂಗ್ ಆಭರಣ ದೋಚಿ ಜೀಪ್‌ನಲ್ಲಿ ಪರಾರಿಯಾಗಿದ್ದರು. ಅಂಗಡಿ ಮಾಲೀಕರ ದೂರು ಹಾಗೂ ಸ್ಥಳೀಯರ ಮಾಹಿತಿ ಆಧರಿಸಿ ತಕ್ಷಣವೇ ಕಾರ್ಯಪ್ರವೃತ್ತರಾದ ಕಳ್ಳಂಬೆಳ್ಳ ಪಿಎಸ್ ಐ ಭೈರೇಗೌಡ, ಸಿರಾ ಗ್ರಾಮಾಂತರ ಸಿಪಿಐ ಡಿ.ಜಿ. ಶ್ರೀನಿವಾಸ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬೆನ್ನಟ್ಟಿದ್ದರು. ಸಿರಾ ನಗರದಲ್ಲಿ…
ಶಿವಮೊಗ್ಗ: ನಗರದ ಸೂಳೆಬೈಲು ಬಡಾವಣೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಸಹಪಾಠಿಗಳ ನಡುವಿನ ಜಗಳ ಬಿಡಿಸಲು ಹೋದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ಹತ್ಯೆಗೀಡಾಗಿದ್ದಾನೆ. ಮೃತ ಬಾಲಕನನ್ನು ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಕೇತ್ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಶಾಲೆಯಲ್ಲಿ ವಿಶೇಷ ತರಗತಿ (Special Class) ಮುಗಿಸಿ ಸಂಕೇತ್ ಹೊರಬಂದಿದ್ದಾಗ, ಹೊರಗಡೆ ಕೆಲವು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಗಮನಿಸಿದ ಸಂಕೇತ್, ಜಗಳವನ್ನು ಬಿಡಿಸಲು ಮಧ್ಯಪ್ರವೇಶಿಸಿದ್ದಾನೆ. ಈ ವೇಳೆ ನಾಲ್ವರು ವಿದ್ಯಾರ್ಥಿಗಳು ಸಂಕೇತ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯ ಸಂದರ್ಭದಲ್ಲಿ ಸಂಕೇತ್‌ನ ಎದೆಯ ಭಾಗಕ್ಕೆ ಬಲವಾದ ಹೊಡೆತ ಬಿದ್ದಿದ್ದು, ಆತ ಸ್ಥಳದಲ್ಲೇ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಯೇ ಆತ ಕೊನೆಯುಸಿರೆಳೆದಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈಗಾಗಲೇ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು…
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ಯಾವುದೇ ರಾಜಕೀಯ ಉದ್ದೇಶದಿಂದಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರೊಂದಿಗಿನ ಭೇಟಿಯ ಕುರಿತು ಉಂಟಾಗಿರುವ ರಾಜಕೀಯ ಚರ್ಚೆಗಳಿಗೆ ತೆರೆ ಎಳೆದರು. “ನಾನು ಅವರನ್ನು ರಾಜಕೀಯ ಕಾರಣಕ್ಕಾಗಿ ಭೇಟಿಯಾಗಿಲ್ಲ. ಕೈಗಾರಿಕೆಗೆ ಸಂಬಂಧಿಸಿದ ಒಂದು ಪ್ರಮುಖ ವಿಚಾರವಿತ್ತು, ಅದಕ್ಕಾಗಿ ಅವರನ್ನು ಭೇಟಿ ಮಾಡಿದ್ದೆ. ಈ ಹಿಂದೆ ನಾವು ಒಟ್ಟಾಗಿ ಸರ್ಕಾರ ನಡೆಸಿದವರು, ಹಾಗಾಗಿ ಭೇಟಿಯಾಗುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿದರು. ಇದೇ ವೇಳೆ ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ‘ದಲಿತ ಸಿಎಂ’ ಕೂಗಿನ ಬಗ್ಗೆಯೂ ಪರಮೇಶ್ವರ್ ಮಾತನಾಡಿದರು. “ದಲಿತ ಸಿಎಂ ಬಗ್ಗೆ ಚರ್ಚೆಯಾಗಲಿ, ಅದರಲ್ಲಿ ತಪ್ಪೇನಿಲ್ಲ. ಆದರೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ” ಎಂದರು. ಹೊಸ ಶಾಸಕರು ಸಚಿವ ಸ್ಥಾನಕ್ಕಾಗಿ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, “ಹೊಸಬರು ಸಂಪುಟ ಸೇರಬಾರದು ಎಂದೇನೂ ಇಲ್ಲ. ಅವರಿಗೆ ಅನುಭವ ಬರಲಿ ಎಂಬ ಕಾರಣಕ್ಕೆ ಹಿರಿಯರು ಸಲಹೆ ನೀಡುತ್ತಿರಬಹುದು. ಮಂತ್ರಿಗಳಾಗಲು…
ಧಾರವಾಡ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಸಾವಿರಾರು ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು. ಧಾರವಾಡದ ಶ್ರೀನಗರದಿಂದ ಆರಂಭವಾದ ಈ ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.85 ಲಕ್ಷ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಬೇಕು ಮತ್ತು ಉದ್ಯೋಗಾಕಾಂಕ್ಷಿಗಳ ವಯೋಮಿತಿ ಹೆಚ್ಚಿಸಬೇಕು ಎಂಬುದು ಇವರ ಪ್ರಮುಖ ಬೇಡಿಕೆಯಾಗಿದೆ. ಬಿಜೆಪಿ ನಾಯಕರ ಸಾಥ್: ವಿದ್ಯಾರ್ಥಿಗಳ ಈ ಹೋರಾಟಕ್ಕೆ ಬಿಜೆಪಿ ನಾಯಕರು ಸಾಥ್ ನೀಡಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಅರವಿಂದ ಬೆಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ಉದ್ಯೋಗಾಕಾಂಕ್ಷಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ತಳ್ಳಾಟ–ನೂಕಾಟ ನಡೆದು…
ಬೆಂಗಳೂರು: ‘ಕಾಂತಾರ’ ಸಿನಿಮಾದ ದೈವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. “ನೀವು ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ, ಜನರ ಧಾರ್ಮಿಕ ಭಾವನೆಗಳ ವಿಚಾರದಲ್ಲಿ ನಾಲಿಗೆ ಮೇಲೆ ಹಿಡಿತವಿರಲಿ” ಎಂದು ನ್ಯಾಯಾಲಯ ಎಚ್ಚರಿಸಿದೆ. ಪ್ರಕರಣದ ಹಿನ್ನೆಲೆ: ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ವೇಳೆ ನಟ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರದ ದೈವವನ್ನು ‘ಫೀಮೇಲ್ ಗೋಸ್ಟ್’ (ಮಹಿಳಾ ದೆವ್ವ) ಎಂದು ಕರೆದಿದ್ದರು ಹಾಗೂ ಮಿಮಿಕ್ರಿ ಮಾಡಿದ್ದರು. ಇದು ತುಳುನಾಡಿನ ದೈವಾರಾಧನೆಗೆ ಮತ್ತು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ರಣವೀರ್ ಸಿಂಗ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಹೇಳಿದ್ದೇನು? ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ…
ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಗರ್ಭಿಣಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಬಳಿಕ ಪತಿಯು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ಘಟನೆಯ ವಿವರ: ರಾಮದುರ್ಗ ಪಟ್ಟಣದ ನಿವಾಸಿ ಉಮೇಶ ಬಡಿಗೇರ (34) ಮೃತಪಟ್ಟ ವ್ಯಕ್ತಿ. ಕಳೆದ ನಾಲ್ಕೈದು ವರ್ಷಗಳಿಂದ ಕುಡಿತದ ಚಟಕ್ಕೆ ದಾಸನಾಗಿದ್ದ ಉಮೇಶ, ಪದೇ ಪದೇ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಘಟನೆಯ ದಿನದಂದು ಸಾರಾಯಿ ಕುಡಿದು ಬಂದು ಪತ್ನಿಯ ಜೊತೆ ಗಲಾಟೆ ಮಾಡಿದ್ದಾನೆ. ಜಗಳ ವಿಕೋಪಕ್ಕೆ ಹೋದಾಗ, ಪತ್ನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಪತ್ನಿಯ ಮೇಲೆ ಹಲ್ಲೆ ನಡೆಸಿದ ಬಳಿಕ ಉಮೇಶ ಪಟ್ಟಣದ ಹೊರವಲಯದ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಗರ್ಭಿಣಿ ಪತ್ನಿಯನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತನ ಸಹೋದರ ನಾರಾಯಣ ಬಡಿಗೇರ ಅವರು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. “ನನ್ನ ಅಣ್ಣ…