Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕುಂದುಕೊರತೆಗಳನ್ನು ಪರಿಹರಿಸಲು, ಕರ್ನಾಟಕದಾದ್ಯಂತ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳ ಎರಡನೇ ಭಾನುವಾರದಂದು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಭೆಗಳನ್ನು ನಡೆಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದ್ದಾರೆ. ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತಾಲಯಗಳು, ಜಿಲ್ಲಾ ಪೊಲೀಸ್ ಕಚೇರಿಗಳು ಮತ್ತು ಪೊಲೀಸ್ ಠಾಣಾ ಮಟ್ಟದಲ್ಲಿ ಈ ಸಭೆಗಳು ನಡೆಯಲಿವೆ. ಪರಿಶಿಷ್ಟರು ಎದುರಿಸುತ್ತಿರುವ ಕಾನೂನು ಸುವ್ಯವಸ್ಥೆ ಸಮಸ್ಯೆ, ದೌರ್ಜನ್ಯ ಪ್ರಕರಣಗಳು, ದೂರುಗಳು ಮತ್ತು ಇತರ ಪೊಲೀಸ್ ಸೇವೆಗಳಿಗೆ ಕುರಿತಾದ ಸಮಸ್ಯೆಗಳನ್ನು ನೇರವಾಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ತ್ವರಿತ ಪರಿಹಾರ ಕಂಡುಕೊಳ್ಳುವುದು ಸಭೆಯ ಉದ್ದೇಶ ಎಂದು ಅವರು ಹೇಳಿದರು. ಎಲ್ಲಾ ಪೊಲೀಸ್ ಘಟಕಗಳು ಈ ಸಭೆಯನ್ನು ಕಡ್ಡಾಯವಾಗಿ ನಡೆಸಿ, ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಜಿ ಮತ್ತು ಐಜಿಪಿಗೆ ಪ್ರಿಯಾಂಕ್ ನಿರ್ದೇಶನ ನೀಡಿದರು. ನವೆಂಬರ್ 17, 2015 ರ ಸ್ಥಾಯಿ ಆದೇಶವು ರಾಜ್ಯಾದ್ಯಂತ ಎಲ್ಲಾ…
ತುಮಕೂರು: ಮೀನುಗಾರಿಕೆ ಇಲಾಖೆಯು ಮೀನುಗಾರಿಕೆಯಲ್ಲಿ ತೊಡಗಿರುವ ಅರ್ಹ ಮೀನುಗಾರರು, ಮೀನು ಕೃಷಿಕರು, ಸಂಘಗಳಿಗೆ 2026–27ನೇ ಸಾಲಿನಲ್ಲಿ ವಿವಿಧ ಜಿಲ್ಲಾ ವಲಯ ಯೋಜನೆಗಳ ಕಾರ್ಯಕ್ರಮದಡಿ ಸೌಲಭ್ಯ ವಿತರಣೆ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ. ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆ ಹಾಗೂ ಸಮಗ್ರ ಮೀನುಗಾರಿಕೆ ಅಭಿವೃದ್ಧಿ ಕಾರ್ಯಕ್ರಮದಡಿ ಮೀನುಗಾರಿಕೆ ಸಲಕರಣೆಗಳಾದ ನೈಲಾನ್ ಬಲೆ, ತಕ್ಕಡಿ, ಪ್ಲಾಸ್ಟಿಕ್ ಕ್ರೇಟ್ಸ್ , ಲೈಫ್ ಜಾಕೆಟ್, ಫೈಬರ್ ಗ್ಲಾಸ್ ಹರಿಗೋಲು, ಇನ್ಸು ಲೇಟೆಡ್ ಬಾಕ್ಸ್ ಇತ್ಯಾದಿಗಳನ್ನು 20,000 ರೂ.ಗಳವರೆಗೆ ಉಚಿತವಾಗಿ ನೀಡಲಾಗುವುದು. ಜಿಲ್ಲಾ ವಲಯದಲ್ಲಿ ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕಾಗಿ ಮೀನು ಮಾರಾಟಗಾರರಿಗೆ ತ್ರಿಚಕ್ರ ವಾಹನ (ಆಟೋ), ದ್ವಿಚಕ್ರ ವಾಹನ (ಮೊಪೆಡ್) ಹಾಗೂ ಸೈಕಲ್‌ನೊಂದಿಗೆ ಶಾಖ ನಿರೋಧಕ ಪೆಟ್ಟಿಗೆ ಖರೀದಿಗೆ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯವಾಣಿ ಸಂಖ್ಯೆ: 8277200300, ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ತುಮಕೂರು ಹಾಗೂ ಪಾವಗಡ-9844665991ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ…
ತುಮಕೂರು: ರಾಜ್ಯಾದ್ಯಂತ ಸದ್ಯ ಆರಂಭವಾಗಿರುವ ‘ವಿಶೇಷ ಸಮಗ್ರ ಪರಿಷ್ಕರಣೆ’ (ಎಸ್.ಐ.ಆರ್) ಕಾರ್ಯದ ನಡುವೆಯೇ, ರಾಜ್ಯ ಸರ್ಕಾರದ ಹೊಸ ಆದೇಶವೊಂದರ ವಿರುದ್ಧ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಹೊರಡಿಸಿರುವ ‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ (ಪಿ.ಆರ್.ಸಿ.) 2026 ರ ಅಧಿಸೂಚನೆಯು ಅಕ್ರಮ ವಲಸಿಗರನ್ನು ಸಕ್ರಮಗೊಳಿಸುವ ವ್ಯವಸ್ಥಿತ ಹುನ್ನಾರವಾಗಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಾಸಕರು, ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆಯ ಮುಖ್ಯ ಉದ್ದೇಶವೇ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಪತ್ತೆ ಹಚ್ಚಿ ಹೊರದಬ್ಬುವುದಾಗಿದೆ ಎಂದರು. ಈ ಪ್ರಕ್ರಿಯೆ ದೇಶಾದ್ಯಂತ ಅತ್ಯಂತ ಸುಸೂತ್ರವಾಗಿ ನಡೆಯುತ್ತಿದೆ ಹಾಗೂ ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಮತದಾರನಾಗುವ ಹಕ್ಕಿದೆ, ಅದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕೇವಲ 10 ವರ್ಷ ವಾಸವಿರುವವರಿಗೆ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ನೀಡಲು ಮುಂದಾಗಿರುವುದು ಅತ್ಯಂತ ಖಂಡನೀಯ ಹಾಗೂ ಸಾಂವಿಧಾನಿಕ ವಿರೋಧಿ ನಡೆ…
ಮಧುಗಿರಿ: 40 ವರ್ಷದಿಂದ ಬೇಸಾಯ ಮಾಡಿಕೊಂಡಿದ್ದ ರೈತರನ್ನು ಒಕ್ಕಲೆಬ್ಬಿಸಿ ಅಲ್ಲಿದ್ದ ಸಾವಿರಾರು ಮರಗಳ ಮಾರಣ ಹೋಮ ನಡೆಸಿದ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಕ್ರಮ ಪ್ರಕೃತಿ ವಿರೋಧಿಯಾಗಿದೆ. ತಕ್ಷಣ ಇದಕ್ಕೆ ಪರಿಹಾರ ಕೊಟ್ಟು, ರೈತರಿಗೆ ಪರ್ಯಾಯ ಭೂಮಿ ನೀಡುವಂತೆ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸಿ.ಶಂಕರಪ್ಪ ಆಗ್ರಹಿಸಿದ್ದಾರೆ. ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಅವರು, ಚಿಕ್ಕನಾಯಕನಹಳ್ಳಿಯ ಬುಕ್ಕಾಪಟ್ಟಣದ ಮುತ್ತುಗಾನಹಳ್ಳಿ ಸ.ನಂ.31 ರಲ್ಲಿ ಕಳೆದ 40 ವರ್ಷದಿಂದ 59 ರೈತರಿಗೆ ಸಾಗುವಳಿ ನೀಡಿದ್ದರು. ಇಲ್ಲಿ ರೈತರು ಬೇಸಾಯ ಮಾಡುತ್ತಿದ್ದು, ಹಲವರು ಮರವಳಿ ಬೆಳೆಸಿದ್ದರು. ಜಿಲ್ಲಾಡಳಿತ, ಅರಣ್ಯ ಇಲಾಖೆಯವರು ಪೊಲೀಸ್ ಬಲಪ್ರಯೋಗ ಮಾಡಿ ಯಂತ್ರಗಳಿಂದ ಸಾವಿರಾರು ಮರಗಳನ್ನು ಕತ್ತರಿಸಿದ್ದಾರೆ. ಇದು ಮಾನವೀಯ ಗುಣವುಳ್ಳ ಅಧಿಕಾರಿಗಳ ವರ್ತನೆ ಎನ್ನಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರೇ ನೀಡಿದ್ದ ಸಾಗುವಳಿಯನ್ನು ನಂಬಿ ರೈತರು ಬಂಡವಾಳ ಹಾಕಿ ಅರಣ್ಯಕರಣ, ತೋಟಗಾರಿಕೆ ಬೆಳೆ ಜೊತೆಗೆ ತಮ್ಮ ಬದುಕನ್ನು ಕಟ್ಟಿಕೊಂಡಿದ್ದರು. ಈಗ ಏಕಾಏಕಿ ಜಿಲ್ಲಾಡಳಿತ ಈ ಪ್ರದೇಶವನ್ನು…
ಕುಣಿಗಲ್: ತಾಲೂಕಿನಲ್ಲಿ ಎಸ್ ಐಆರ್ ಶೇ. ನೂರರಷ್ಟು ಪ್ರಗತಿ ಸಾಧಿಸಲೆಂದು ಜಿ.ಪಂ, ತಾ.ಪಂ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ. ಇಒ ವಸಂತಕುಮಾರ್ ಅವರ ನೇತೃತ್ವದಲ್ಲಿ ಹುಲಿಯೂರುದುರ್ಗದಲ್ಲಿ ಜು. 13ರಂದು ಮೇಣದ ಬತ್ತಿ ದೀಪ ಹಿಡಿದು ಜನ ಜಾಗೃತಿ ಜಾಥಾ ಮೂಲಕ ಎಸ್ ಐಆರ್ ಅರಿವು ಮೂಡಿಸಿದರು. ಇಲ್ಲಿನ ಗ್ರಾಮ ಪಂಚಾಯಿತಿ ಆವರಣದಲ್ಲಿ ನೂರಾರು ಸ್ವ–ಸಹಾಯ ಸಂಘದ ಮಹಿಳೆಯರು, ನಾಗರಿಕರು, ಅಧಿಕಾರಿಗಳು ಪಂಚಾಯಿತಿಯಿಂದ ಹಳೇಪುರಮ್ಮ ದೇವಾಲಯದ ರಸ್ತೆವರೆಗೆ ಕ್ಯಾಂಡಲ್ ಹಿಡಿದು ಜಾಥಾ ನಡೆಸುವ ಮೂಲಕ ಜನ ಜಾಗೃತಿ ಮೂಡಿಸಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸೂಕ್ತ ದಾಖಲೆ ನೀಡಿ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ತಿಳಿಸಿದರು. ಅಲ್ಲದೆ ವಿವಿಧ ಪಂಚಾಯಿತಿ ಆವರಣದಲ್ಲಿ ಮೇಣದ ಬತ್ತಿ ದೀಪದ ಮೂಲಕ ಎಸ್ ಐಆರ್ ಎಂದು ಇಂಗ್ಲಿಷ್ ಅಕ್ಷರ ಆಕಾರ ಮೂಡಿಸಿದ್ದು ವಿಶೇಷವಾಗಿತ್ತು. ತಾ.ಪಂ ಇಒ ವಸಂತಕುಮಾರ್ ಮಾತನಾಡಿ, ತಾಲೂಕಿನ ಅಮೃತೂರು ಹೋಬಳಿಯಲ್ಲಿ ಶೇ.96.27 ರಷ್ಟು, ಹುಲಿಯೂರುದುರ್ಗ ಹೋಬಳಿಯಲ್ಲಿ ಶೇ.93.09 ರಷ್ಟು, ಹುತ್ತರಿದುರ್ಗದಲ್ಲಿ ಶೇ.96.54…
ಕುಣಿಗಲ್: ಸರ್ಕಾರದ ಯೋಜನೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಲ್ಲಿ ಮಧ್ಯವರ್ತಿಗಳಿಗೆ ಅವಕಾಶವಿಲ್ಲ. ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದರ ಜತೆಗೆ ಸ್ವಾಭಿಮಾನದ ಬದುಕು ಕಟ್ಟಿ ಕೊಳ್ಳುವಂತೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ತಿಳಿಸಿದರು. ಅವರು ಕೆಎಸ್ ಎಸ್ ಐಡಿಸಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಶ್ರೀ ಈಶ್ವರಿ ಮಹಿಳಾ ಸಮಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮ ಸಂಯುಕ್ತಾಶ್ರಯದಲ್ಲಿ ಸೆಲ್ಫ್ ಎಂಪ್ಲಾಯ್ಡ್ ಟೈಲರಿಂಗ್ ತರಬೇತಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಬ್ಯಾಂಕ್ ಸಹಕಾರ ಅಗತ್ಯ: ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದು, ನೂರಾರು ಕೋಟಿ ರೂ.ಗಳು ಸಹಾಯ ಧನ ನೀಡುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳು ಸರ್ಕಾರದ ಸಹಾಯಧನವನ್ನು ಬ್ಯಾಂಕ್‌ಗಳ ಸಾಲ ಸೌಲಭ್ಯದಿಂದ ಪಡೆದು, ರೊಟ್ಟಿ, ಹಪ್ಪಳ ತಯಾರಿಕೆ, ಹೊಲಿಗೆ ತರಬೇತಿ ಸೇರಿದಂತೆ ಅನೇಕ ಗೃಹ ಕಸುಬುಗಳಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದಾರೆ. ಸರ್ಕಾರ ಯೋಜನೆಗಳಿಗೆ ಯಾವುದೇ…
ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯನ್ನು ಗರ್ಭಿಣಿ ಮಾಡಿದ ಯುವಕನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ವಿಷಯ ತಿಳಿದಿದ್ದರೂ ಕಾನೂನು ಸಂಸ್ಥೆಗಳಿಗೆ ಮಾಹಿತಿ ನೀಡದೆ ಮುಚ್ಚಿಟ್ಟ ನಾಲ್ವರು ವೈದ್ಯರು ಹಾಗೂ ಬಾಲಕಿಯ ಪೋಷಕರ ವಿರುದ್ಧವೂ ಎಫ್ ಐಆರ್ (FIR) ದಾಖಲಿಸಲಾಗಿದೆ. ಕಳೆದ ವರ್ಷ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಮನೆಯೊಂದರಲ್ಲಿ ಬಲವಂತವಾಗಿ ಕೂಡಿಹಾಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಇದರಿಂದಾಗಿ ಬಾಲಕಿ ಗರ್ಭಿಣಿಯಾಗಿದ್ದಾಳೆ. ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ನಂತರ ಬಾಲಕಿ ತನ್ನ ಹೆತ್ತವರ ಮನೆಗೆ ಬಂದು ವಿಷಯ ತಿಳಿಸಿದ್ದಾಳೆ. ಆಗ ಪೋಷಕರು ಕಲಘಟಗಿ ತಾಲೂಕಿನ ಗ್ರಾಮವೊಂದರ ವೈದ್ಯರ ಬಳಿ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾರೆ. ಆ ವೈದ್ಯರ ಸಲಹೆಯಂತೆ ಹುಬ್ಬಳ್ಳಿಯ ಖಾಸಗಿ ನರ್ಸಿಂಗ್ ಹೋಮ್‌ವೊಂದಕ್ಕೆ ತೋರಿಸಲಾಗಿತ್ತು. ಬಾಲಕಿ ಅಪ್ರಾಪ್ತ ವಯಸ್ಸಿನವಳು ಮತ್ತು ಆಕೆ ಗರ್ಭಿಣಿಯಾಗಿರುವುದು ಗೊತ್ತಿದ್ದರೂ ಸಹ, ಈ…
ಬೆಂಗಳೂರು: ಬಿಡದಿ ಟೌನ್ ಶಿಪ್ ಗಾಗಿ (Bidadi Township) ಅಧಿಕಾರಿಗಳು ನಡೆಸುತ್ತಿರುವ ಸರ್ವೆ ಕಾರ್ಯದ ಹಿಂದೆ ರಾಜ್ಯ ಸರ್ಕಾರದ ಚಿತಾವಣೆ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ. ಬಿಡದಿಯಲ್ಲಿ ರೈತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಿಂದ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಳೆದ 500 ದಿನಗಳಿಂದ ಬಿಡದಿಯಲ್ಲಿ ರೈತರು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಅತ್ಯಂತ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರು. ಆದರೆ, ಅಧಿಕಾರಿಗಳು ಏಕಾಏಕಿ ಸ್ಥಳಕ್ಕೆ ಬಂದು ಸರ್ವೆ ಕಾರ್ಯ ಕೈಗೊಳ್ಳಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಿಗೆ ಮತ್ತು ಗೊಂದಲಗಳಿಗೆ ನೇರವಾಗಿ ಸರ್ಕಾರದ ಚಿತಾವಣೆಯೇ ಕಾರಣ ಎಂದು ಕುಮಾರಸ್ವಾಮಿ ದೂರಿದ್ದಾರೆ. “ಯಾವುದೇ ಕೆಟ್ಟ ಅಥವಾ ಹಿಂಸಾತ್ಮಕ ಘಟನೆಗಳಿಗೆ ಅವಕಾಶ ನೀಡಬೇಡಿ. ನಿಮ್ಮ ಶಾಂತಿಯುತ ಹೋರಾಟವನ್ನು ಹೀಗೆಯೇ ಮುಂದುವರಿಸಿ. ಕಾನೂನಾತ್ಮಕವಾಗಿ ನಿಮ್ಮ ಪರವಾಗಿ ಹೋರಾಡಲು ಅನೇಕರು ಸದಾ ಸಿದ್ಧರಿದ್ದಾರೆ. ಸರ್ಕಾರದ ದೌರ್ಜನ್ಯ…
ರಾಮನಗರ: ಬಿಡದಿ ಟೌನ್ ಶಿಪ್ (Bidadi Township) ನಿರ್ಮಾಣದ ವಿಚಾರವಾಗಿ ತಲೆದೂರಿರುವ ಗದ್ದಲ ಮತ್ತು ಜಟಾಪಟಿ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸರ್ಕಾರದ ಈ ಯೋಜನೆಯ ವಿರುದ್ಧ ಜಮೀನು ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರು ತೀವ್ರ ಆಕ್ರೋಶ ಹೊರಹಾಕಿದ್ದು, ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ತಿರುಗಿಬಿದ್ದಿದ್ದಾರೆ. ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜಿಬಿಡಿಎ (GBDA) ಅಧಿಕಾರಿಗಳು ಜೆಎಂಸಿ (JMC) ಸರ್ವೆ ನಡೆಸಲು ಮುಂದಾಗಿದ್ದರು. ಅಧಿಕಾರಿಗಳು ಸರ್ವೆಗಾಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕೆರಳಿದ ಮಂಡಲಹಳ್ಳಿ ಗ್ರಾಮದ ರೈತರು ಮತ್ತು ರೈತ ಮಹಿಳೆಯರು ಅಧಿಕಾರಿಗಳ ಕಾರನ್ನು ಸುತ್ತುವರಿದರು. ಯಾವುದೇ ಕಾರಣಕ್ಕೂ ತಮ್ಮ ಜಮೀನಿನ ಸರ್ವೆ ನಡೆಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದ ರೈತರು, ಅಧಿಕಾರಿಗಳು ಎಷ್ಟೇ ಮನವಿ ಮಾಡಿದರೂ ಕೇಳಲಿಲ್ಲ. ಬಲವಂತವಾಗಿ ಸರ್ವೆ ಮಾಡಲು ಮುಂದಾದ ಅಧಿಕಾರಿಗಳ ಮೇಲೆ ರೈತ ಮಹಿಳೆಯರು ಪೊರಕೆಯಿಂದ ಹೊಡೆದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಸ್ಥಳದಲ್ಲಿ ಪೊಲೀಸರು ಉಪಸ್ಥಿತರಿದ್ದರೂ ಸಹ ರೈತರ ತೀವ್ರ ಆಕ್ರೋಶವನ್ನು ತಡೆಯಲು ಸಾಧ್ಯವಾಗಲಿಲ್ಲ. ಪೊಲೀಸರ ಎದುರೇ…
ಸರಗೂರು: ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ನಿವೃತ್ತಿ ನೌಕರರ ಸಂಘದ ಅಧ್ಯಕ್ಷ ಶಂಭುಮೂರ್ತಿ ಹೇಳಿದರು. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಸೋಮವಾರ ನಿವೃತ್ತಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿನಿಯರಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಣವು ಮಕ್ಕಳ ಜೀವನದ ಭದ್ರ ಬುನಾದಿಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಶಿಸ್ತು, ಪರಿಶ್ರಮ ಹಾಗೂ ಉತ್ತಮ ಸಂಸ್ಕಾರದೊಂದಿಗೆ ವಿದ್ಯಾಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಎಸ್ ಡಿಎಂಸಿ ಅಧ್ಯಕ್ಷ ಎಸ್.ಡಿ. ಸಣ್ಣಸ್ವಾಮಿ ಮಾತನಾಡಿ, ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹೆಚ್ಚಿಸುತ್ತವೆ. ಸರಗೂರಿನಲ್ಲಿ ಕೆಪಿಎಸ್ ಶಾಲೆ ಆರಂಭಿಸಲು ಪ್ರಸ್ತಾವನೆ ನಡೆಯುತ್ತಿದ್ದು, ಬೇರೆಡೆ ಆರಂಭಿಸುವ ಬದಲು ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿಯೇ ಕೆಪಿಎಸ್ ಶಾಲೆ ಆರಂಭಿಸಿದರೆ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಕುರಿತು ಸಂಸದರು ಹಾಗೂ…