Author: admin

ಬೀದರ್: ಡಾ.ಅಂಬೇಡ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಯುವಕನೊರ್ವನ ಮೇಲೆ ಶನಿವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹುಮ್ನಾಬಾದ್ ತಾಲೂಕಿನ ಕುಮಾರ ಚಿಂಚೋಳಿ ಗ್ರಾಮದ ನಿವಾಸಿ ರಾಜಕುಮಾರ್ ರಂಜೇರಿ ಎನ್ನುವ ಯುವಕ ಶಿವು ಎಂಬ ವ್ಯಕ್ತಿಗೆ ಜಾತಿನಿಂದನೆ ಮತ್ತು ಆತನ ಕುಟುಂಬಸ್ಥರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಹಾಗೆಯೇ ಶಿವು ಎಂಬಾತ ದಲಿತ ಕುಟುಂಬಕ್ಕೆ ಸೇರಿದ್ದರಿಂದ ಡಾ.ಅಂಬೇಡ್ಕರ್ ಹಾಗೂ ಅವರು ಬರೆದ ಸಂವಿಧಾನಕ್ಕೂ ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದರ ವಿರುದ್ದ ಮುಕೇಶ್ ಪಾಂಡೆ ಎನ್ನುವವರು ದೂರು ನೀಡಿದ್ದು, ಡಾ.ಅಂಬೇಡ್ಕರ್ ಹಾಗೂ ಅವರು ಬರೆದ ಸಂವಿಧಾನಕ್ಕೆ ಅವಮಾನ ಮಾಡಿರುವ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಅವರನ್ನು ಸಂಪುಟದಿಂದ ವಜಾ ಮಾಡಲಾಗಿತ್ತು. ಇದರ ಬೆನ್ನಲ್ಲೇ  ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್.ರಾಜಣ್ಣ,  ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ  ಎಂದಿದ್ದಾರೆ. ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ಕೆ.ಎನ್.ರಾಜಣ್ಣ ತಲೆ ದಂಡ ಆಗಿದ್ದು, ಸಂಪುಟದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು.  ನನ್ನ ಬಳಿ ಇರುವ ಈ ಷಡ್ಯಂತ್ರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದಿದ್ದಾರೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ…

Read More

ಮುಂಬೈ: 15 ವರ್ಷದ ಶಾಲಾ ಬಾಲಕಿಯ ಮೇಲೆ ಐವರು ಕಾಮುಕರು ಸುಮಾರು 3 ತಿಂಗಳುಗಳಿಂದ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮುಂಬೈಯ ಕಲಾಚೌಕಿ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 25 ವರ್ಷದ ಯುವಕ ಸೇರಿದಂತೆ ನಾಲ್ವರು ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯೊಬ್ಬನ ಗೆಳತಿ ಸಂತ್ರಸ್ತ ಬಾಲಕಿಯ ಮನೆಗೆ ಬಂದು,  ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಪ್ರಶ್ನಿಸಿದಾಗ ವಿಚಾರ ಬೆಳಕಿಗೆ ಬಂದಿದೆ.  ಪೋಷಕರು ಬಾಲಕಿಯ ಮೊಬೈಲ್ ಪರಿಶೀಲಿಸಿದ ವೇಳೆ ವಿಡಿಯೋಗಳು ಮತ್ತು ಸಂದೇಶಗಳು ಪತ್ತೆಯಾಗಿವೆ, ಇದರಿಂದ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯ ಪೋಷಕರು ಸಲ್ಲಿಸಿದ ದೂರಿನ ಆಧಾರದ ಮೇಲೆ, ಐದು ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿದೆ. ಡಿಜಿಪಿ ರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮೇಲ್ದರ್ಜೆಗೇರಿಸಲಾಗಿದೆ. ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರವು ಡಿಜಿಪಿ (ಡಿಸಿಆರ್‌ಇ) ಐಪಿಎಸ್ (ವೇತನ) ನಿಯಮಗಳು 2016ರ ನಿಯಮ 12ರ ಅಡಿಯಲ್ಲಿ ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಮಹಾನಿರ್ದೇಶಕ ಹುದ್ದೆಗೆ ಸಮಾನವಾಗಿದೆ ಎಂದು ಹೇಳಿದೆ. ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಅವರ ಬಂಧನದ ನಂತರ ಕಳೆದ ಮಾರ್ಚ್‌ನಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ನೇತೃತ್ವದ ರಾಜ್ಯ ಸರ್ಕಾರ ನೇಮಿಸಿದ ತನಿಖಾ ಸಮಿತಿಯು ಪ್ರಶ್ನಿಸಿತ್ತು. ಪೊಲೀಸ್ ಪ್ರೋಟೋಕಾಲ್ ಸೇವೆಗಳ ದುರುಪಯೋಗ ಮತ್ತು ಪ್ರಕರಣದಲ್ಲಿ ಡಿಜಿಪಿ ರಾವ್ ಅವರ ಸಂಭಾವ್ಯ ಪಾತ್ರವನ್ನು ತನಿಖೆ ಮಾಡಲು ಗೌರವ್ ಗುಪ್ತಾ ಸಮಿತಿಯನ್ನು ರಚಿಸಲಾಗಿತ್ತು.  ಹೀಗಾಗಿ ಮಾರ್ಚ್…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಕ್ರಾಂತಿ ನಡೆಯಲಿದೆ ಅಂತ ಇತ್ತೀಚೆಗೆ ಬಾಂಬ್ ಸಿಡಿಸಿದ್ದ ಸಚಿವ ಕೆ.ಎನ್.ರಾಜಣ್ಣಗೆ ಆಗಸ್ಟ್ ನಲ್ಲೇ ಹೈಕಮಾಂಡ್ ಶಾಕ್ ನೀಡಿದ್ದು, ಕೆ.ಎನ್.ರಾಜಣ್ಣ ರಾಜೀನಾಮೆಯನ್ನು ಪಡೆಯಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾಯಕತ್ವದ ಬದಲಾವಣೆ, ಚುನಾವಣಾ ಆಯೋಗದ ವಿರುದ್ಧದ ರಾಹುಲ್ ಗಾಂಧಿ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಹೇಳಿಕೆ ನೀಡಿರುವುದೇ ರಾಜೀನಾಮೆ ಪಡೆಯಲು ಕಾರಣ ಅಂತ ಹೇಳಲಾಗ್ತಿದೆ. ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ಸೇರಿದಂತೆ ದೇಶದ ಹಲವೆಡೆ ಮತಕಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪದ ಬಗ್ಗೆ ಚರ್ಚೆಯಾಗುತ್ತಿದ್ದಾಗ, ಕೆ.ಎನ್.ರಾಜಣ್ಣ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡಿದ್ದರು. ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು. ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ ಎಲ್ಲಾರು? ಅಂತ ರಾಜಣ್ಣ ಪ್ರಶ್ನಿಸಿ, ಕಾಂಗ್ರೆಸ್ ಗೆ ಮುಜುಗರ ಸೃಷ್ಟಿಸಿದ್ದರು.…

Read More

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ  ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜೀನಾಮೆ ಪತ್ರವನ್ನು ಕೆ.ಎನ್.ರಾಜಣ್ಣ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆಯ ಮೇರೆಗೆ ಸಚಿವ ಕೆ.ಎನ್.ರಾಜಣ್ಣ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದಿದ್ದಾರೆ. ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಕೊರಟಗೆರೆಯ ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದ ಬಳಿಯಿಂದ ಸಿದ್ದರಬೆಟ್ಟದ ರಸ್ತೆ ತನಕ ಸುಮಾರು 30 ಕಿ.ಮೀ. ದೂರ ವ್ಯಾಪ್ತಿಯಲ್ಲಿ 17 ಸ್ಥಳಗಳಲ್ಲಿ ಮಹಿಳೆಯ ದೇಹದ ತುಂಡುಗಳನ್ನು ಎಸೆದಿರುವ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ. ಘಟನೆಗೆ ಸಂಬಂಧಿಸಿದಂತೆ  ಮೂವರು  ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮೃತ ಮಹಿಳೆಯನ್ನು ಗುರುತಿಸಲಾಗಿದೆ. ಲಕ್ಷ್ಮಿದೇವಮ್ಮ(42) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಅಳಿಯ, ವೃತ್ತಿಯಲ್ಲಿ ದಂತ ವೈದ್ಯನಾಗಿರುವ ರಾಮಚಂದ್ರಯ್ಯ ಮತ್ತು ಸತೀಶ್, ಕಿರಣ್ ಎಂಬವರು ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಾಗಿದ್ದಾರೆ. ಸದ್ಯ ಕೊರಟಗೆರೆ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅತ್ತೆಯ ಕಾಟದಿಂದ ಬೇಸತ್ತು ಅಳಿಯ ತನ್ನ ಸ್ನೇಹಿತರ ಜೊತೆಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. 3 ದಿನಗಳ ಕಾಲ ಮೃತದೇಹವನ್ನು ತಮ್ಮ ಬಳಿಯೇ ಇಟ್ಟುಕೊಂಡು ಆ.6ರಂದು ದೇಹವನ್ನು ತುಂಡು ಮಾಡಿ ಎಸೆದಿದ್ದರು. ಬಳಿಕ ರಾಮಚಂದ್ರ ಧರ್ಮಸ್ಥಳಕ್ಕೆ ತೆರಳಿದ್ದ. ಆತನ ಮೇಲೆ ಅನುಮಾನಗೊಂಡು ಪೊಲೀಸರು ವಿಚಾರಣೆ ನಡೆಸಿದ ಬಳಿಕ ಆರೋಪಿ ಸಿಕ್ಕಿಬಿದ್ದಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮೈಸೂರು:  ಮೈಸೂರು ದಸರಾ ಜಂಬೂಸವಾರಿಗೆ ಇಂದಿನಿಂದ ತಾಲೀಮು ಆರಂಭಗೊಂಡಿದೆ. ಈ ಬಾರಿಯೂ ಅಂಬಾರಿ ಹೊರುವ ಆನೆಗಳ ತೂಕವನ್ನು ಪರೀಕ್ಷಿಸಲಾಗಿದೆ. ಅಂಬಾರಿ ಹೊರುವ ಅಭಿಮಾನ್ಯುವಿಗಿಂತಲೂ ಹೆಚ್ಚು ತೂಕವನ್ನು ಭೀಮಾ ಆನೆ ದಾಖಲಿಸಿದ್ದಾನೆ. ಈ ಮೂಲಕ ಹೆಚ್ಚು ಬಲಶಾಲಿ ಆನೆಯಾಗಿ ಭೀಮಾ ಹೊರಹೊಮ್ಮಿದ್ದಾನೆ ತೂಕ ಎಷ್ಟಿದೆ? ಅಭಿಮನ್ಯು : 5,360 ಕೆಜಿ ಭೀಮ :  5,465 ಕೆಜಿ ಧನಂಜಯ : 5,310 ಕೆಜಿ ಕಾವೇರಿ : 3,010 ಕೆಜಿ ಲಕ್ಷ್ಮೀ : 3,730 ಕೆಜಿ ಏಕಲವ್ಯ : 5,305 ಕೆಜಿ ಮಹೇಂದ್ರ : 5,120 ಕೆಜಿ ಕಂಜನ್ : 4,880 ಕೆಜಿ ಪ್ರಶಾಂತ : 5,110 ಕೆಜಿ ನಗರದ ಧನ್ವಂತ್ರಿ ರಸ್ತೆಯಲ್ಲಿರುವ ಸಾಯಿರಾಮ್ ತೂಕ ಮಾಪನ ಕೇಂದ್ರದಲ್ಲಿ ಆನೆಗಳ ತೂಕ ಪರಿಶೀಲನೆ ಮಾಡಿ, ಬಳಿಕ ಮೆರವಣಿಗೆ ನಡೆಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊಪ್ಪಳ: ಮುಸ್ಲಿಮ್ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಅಭಿಯಾನ ಆರಂಭ ಮಾಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ಕೊಪ್ಪಳ ನಗರದ ಕುರುಬರ ಓಣಿಯಲ್ಲಿನ ಕೊಲೆಯಾದ ಗವಿಸಿದ್ದಪ್ಪ ಮನೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಮಸೀದಿ ಮುಂದೆಯೇ ಗವಿಸಿದ್ದಪ್ಪ ನಾಯಕ ಕೊಲೆಯಾಗಿದೆ. ಕೊಲೆ ಮಾಡುವಾಗ ತಡೆಯುವ ಕೆಲಸ ಅಲ್ಲಿದ್ದವರು ಮಾಡಿಲ್ಲ. ಕೊಲೆ ಮಾಡಿದ ಆರೋಪಿ ರೀಲ್ಸ್‌ ನಲ್ಲಿ ಮಚ್ಚು ತೋರಿಸಿದ್ದಾನೆ. ಈಗ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದಾರೆ. ಆ ಹುಡುಗಿಯನ್ನೂ ಅರೆಸ್ಟ್‌ ಮಾಡಬೇಕು. ಮಚ್ಚು ಹಿಡಿದು ಓಡಾಡುವವರಿಗೆ ಸರ್ಕಾರ ಬೆಂಬಲ ನೀಡುತ್ತದೆ ಅಂತ ಆರೋಪಿಸಿದರು. ಲವ್ ಜಿಹಾದ್ ಮಾಡಿದಾಗ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುತ್ತದೆ. ಸರ್ಕಾರ ಮುಸ್ಲಿಂರಿಗೆ ಮಾತ್ರ ರಕ್ಷಣೆ ನೀಡುತ್ತದೆ. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಅಧಿವೇಶನದಲ್ಲಿ ಈ ಕುರಿತು ಪ್ರಶ್ನಿಸುತ್ತೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಕೋಲಾರ: ಅಪ್ರಾಪ್ತ ವಯಸ್ಸಿನ ಬಾಲಕನ ಅತ್ಯಾಚಾರದಿಂದ 18 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಉರಿಗಾಂ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುವತಿ 17 ವರ್ಷದವಳಾಗಿನಿಂದಲೇ ಬಾಲಕ ಅತ್ಯಾಚಾರ ಎಸಗುತ್ತಾ ಬಂದಿದ್ದಾನೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More