Author: admin

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿ ಏರುತ್ತಿದ್ದಂತೆ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಸದ್ಯ ರಾಜ್ಯದ 183 ಗ್ರಾಮಗಳಲ್ಲಿ ನೀರಿನ ತೀವ್ರ ಅಭಾವ ಎದುರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ 21 ಜಿಲ್ಲೆಗಳ 144 ತಾಲ್ಲೂಕುಗಳಲ್ಲಿನ ಒಟ್ಟು 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಪೈಕಿ 31 ಗ್ರಾಮಗಳಿಗೆ ಈಗಾಗಲೇ 96 ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 152 ಗ್ರಾಮಗಳಲ್ಲಿ ನೀರಿನ ಕೊರತೆ ನೀಗಿಸಲು 154 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಸಾರ್ವಜನಿಕರಿಗೆ ನೀರು ಒದಗಿಸಲಾಗುತ್ತಿದೆ ಎಂದು ತಿಳಿಸಿದರು. ಮಾರ್ಚ್ ತಿಂಗಳಲ್ಲಿ ಸುಮಾರು 1,053 ಕೊಳವೆ ಬಾವಿಗಳನ್ನು ಫ್ಲಷಿಂಗ್ (ಶುಚಿಗೊಳಿಸುವಿಕೆ) ಮತ್ತು ಆಳಗೊಳಿಸುವ ಮೂಲಕ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಅಭಾವ ಎದುರಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO) ಅಗತ್ಯ ಸೂಚನೆ ನೀಡಲಾಗಿದ್ದು, ತುರ್ತು ಸಂದರ್ಭಗಳಲ್ಲಿ…

Read More

ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಪಂಗಡದವರಿಗೆ (ST) ಹೆಚ್ಚಳ ಮಾಡಲಾದ ಶೇ.7ರಷ್ಟು ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಸೋಮವಾರ ನಗರದ ವಾಲ್ಮೀಕಿ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ನಡೆದ ಸಮುದಾಯದ ಮುಖಂಡರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಸರ್ಕಾರವು ಹೆಚ್ಚುವರಿ ಮೀಸಲಾತಿಯನ್ನು ಪರಿಗಣಿಸದೆ, ಹಳೆಯ ಶೇ.3ರಷ್ಟು ಮೀಸಲಾತಿಯ ಅನ್ವಯವೇ 56 ಸಾವಿರ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಮುಖಂಡರು ತೀವ್ರವಾಗಿ ಖಂಡಿಸಿದರು. ನಾಗಮೋಹನ್ ದಾಸ್ ವರದಿಯಂತೆ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದರೂ, ಕೇಂದ್ರ ಸರ್ಕಾರ ಇದನ್ನು ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಲು ವಿಳಂಬ ಮಾಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಮುಖಂಡ ಕುಪ್ಪೂರ್ ಶ್ರೀಧರ್ ಆಗ್ರಹಿಸಿದರು. ಮೀಸಲಾತಿ ಸಮಸ್ಯೆಯನ್ನು ಸರಿಪಡಿಸಿದ ನಂತರವಷ್ಟೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ತಮ್ಮ ಬೇಡಿಕೆಗಳ…

Read More

ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಹಂಪಲಾಪುರ ಸಮೀಪದ ಜಮೀನಿನಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಉಳುಮೆ ಮಾಡಲು ಬಿಡದೆ, ತಾಲ್ಲೂಕು ಆಡಳಿತ ಹಾಗೂ ಪೊಲೀಸರು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ದಲಿತ ರೈತರು ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಮಂಜೂರಾತಿ ಪತ್ರವನ್ನೂ ಹೊಂದಿದ್ದಾರೆ. ಆದರೆ, ಈ ಜಮೀನು ಅರಣ್ಯ ಇಲಾಖೆಗೆ ಸೇರಿದ್ದೆಂದು ಹೇಳಿ ತಾಲ್ಲೂಕು ಆಡಳಿತ ರೈತರನ್ನು ಅಲ್ಲಿಂದ ತೆರವುಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡಲು ಬಂದಿದ್ದ ಟ್ರ್ಯಾಕ್ಟರ್‌ಗಳನ್ನು ದಂಡಿನಶಿವರ ಪೊಲೀಸರು ವಾಪಸ್ ಕಳುಹಿಸುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಮೇಲ್ವರ್ಗದವರು ಉಳುಮೆ ಮಾಡುವಾಗ ಯಾವುದೇ ಅಡ್ಡಿಪಡಿಸದ ಆಡಳಿತ, ದಲಿತರ ವಿಷಯದಲ್ಲಿ ಮಾತ್ರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಸರ್ಕಾರ ದಲಿತರಿಗೆ ಮಂಜೂರಾದ ಜಮೀನಿನ ರಕ್ಷಣೆಗೆ ಆದೇಶ ನೀಡಿದ್ದರೂ ಸ್ಥಳೀಯ ಅಧಿಕಾರಿಗಳು ಅದನ್ನು ಪಾಲಿಸುತ್ತಿಲ್ಲ. ನ್ಯಾಯ ಸಿಗುವವರೆಗೂ ಜಮೀನಿನಲ್ಲಿಯೇ ಅಹೋರಾತ್ರಿ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ಎಚ್ಚರಿಸಿದ್ದಾರೆ.…

Read More

ಗುಬ್ಬಿ: ತಾಲೂಕಿನ ಬಂಡನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ನೂರಾರು ರೈತರು ಸೋಮವಾರ ಹೊಸಕೆರೆಯ ಬೆಸ್ಕಾಂ (BESCOM) ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಬೇಸಿಗೆಯ ಸಮಯದಲ್ಲಿ ಬೆಸ್ಕಾಂ ಅಧಿಕಾರಿಗಳು ಸರಿಯಾಗಿ ವಿದ್ಯುತ್ ನೀಡದೆ ರೈತರನ್ನು ಸತಾಯಿಸುತ್ತಿದ್ದಾರೆ. ವಿದ್ಯುತ್ ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಎಂಬುದು ತಿಳಿಯದಂತಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಶಾಲಾ ಮಕ್ಕಳಿಗೆ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳ ಓದಿಗೆ ತೀವ್ರ ತೊಂದರೆಯಾಗುತ್ತಿದೆ. ಅಲ್ಲದೇ ತೋಟದ ಮನೆಗಳಲ್ಲಿ ವಾಸಿಸುವ ರೈತರು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ,  ಕಳೆದ ಹಲವು ವರ್ಷಗಳಿಂದ ಈ ಸಮಸ್ಯೆ ಬಗ್ಗೆ ಮನವಿ ಮಾಡುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಸ್ಥಳಕ್ಕೆ ಭೇಟಿ ನೀಡಿದ ಬೆಸ್ಕಾಂ ಎಇಇ ರಾಜೇಶ್ ಅವರು ರೈತರ ಅಹವಾಲುಗಳನ್ನು ಆಲಿಸಿದರು. “ಪ್ರಸ್ತುತ ಲಿಂಕ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಅದನ್ನು…

Read More

ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಮಾದರ ಮಹಾಸಭಾದ ಕೊರಟಗೆರೆ ತಾಲೂಕು ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಒಳ ಮೀಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 56,432 ಹುದ್ದೆಗಳ ನೇಮಕಾತಿಗೆ ವಿರೋಧ: ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ 56,432 ಹುದ್ದೆಗಳನ್ನು ಹಳೆಯ ಮೀಸಲಾತಿ ಪದ್ಧತಿಯಲ್ಲೇ ಭರ್ತಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 2022ರ ಹೊಸ ಮೀಸಲಾತಿಯನ್ನು ಸಂವಿಧಾನದ 9ನೇ ಷೆಡ್ಯೂಲ್‌ ಗೆ ಸೇರಿಸಲು ಸರ್ವಪಕ್ಷಗಳ ಸಭೆ ಕರೆದು, ಪರಿಶಿಷ್ಟ ಜಾತಿಗೆ ಶೇ. 17 ಮತ್ತು ಪ.ಪಂಗಡಕ್ಕೆ ಶೇ. 7 ರಷ್ಟು ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು  ಎಂದು ಒತ್ತಾಯ ಮಾಡಿದರು. ಬೆಳಗಾವಿ ಅಧಿವೇಶನದ ತೀರ್ಮಾನದಂತೆ ಪ್ರವರ್ಗ–ಎ (ಶೇ. 6), ಬಿ (ಶೇ. 6) ಮತ್ತು…

Read More

ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕಾಗಿ ಅವರು ನೀಡಿದ್ದ ಭರವಸೆಯಂತೆ ಮಂಗಳವಾರ ₹2.50 ಲಕ್ಷ ನಗದು ಸಹಾಯಧನವನ್ನು ಹಸ್ತಾಂತರಿಸಿದರು. ಈ ಹಿಂದೆ ಗ್ರಾಮಸ್ಥರು ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಗೆ ಸಹಕರಿಸುವಂತೆ ಭೀಮಸೇನರಾವ್ ಸಿಂದೆ ಅವರಲ್ಲಿ ವಿನಂತಿಸಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದ ಅವರು, ಮೂರ್ತಿ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವುದಾಗಿ ಮಾತು ಕೊಟ್ಟಿದ್ದರು. ಅದರಂತೆ ಮಂಗಳವಾರ ಚಿಕ್ಲಿ ಗ್ರಾಮಕ್ಕೆ ಭೇಟಿ ನೀಡಿದ ಸಿಂದೆ ಅವರು, ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ₹2 ಲಕ್ಷ 50 ಸಾವಿರ ಮೊತ್ತವನ್ನು ಹಸ್ತಾಂತರಿಸುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಭೀಮಸೇನರಾವ್ ಸಿಂದೆ ಅವರ ಈ ಉದಾತ್ತ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಂತು ಬೆಂಬಲ ನೀಡುತ್ತಿರುವ ಅವರಿಗೆ ಚಿಕ್ಲಿ (ಜೆ) ಗ್ರಾಮದ ಪರವಾಗಿ ಹೃತ್ಪೂರ್ವಕವಾಗಿ ಅಭಿನಂದಿಸಿ, ಧನ್ಯವಾದಗಳನ್ನು ಸಮರ್ಪಿಸಲಾಯಿತು.…

Read More

ತುಮಕೂರು: ಕೆರೆಗಳ ಗೋಡು ಮಣ್ಣನ್ನು ತಮ್ಮ ತೋಟಗಳಿಗೆ ಹಾಕಿಕೊಳ್ಳಲು ರೈತರಿಗೆ ಅನುಮತಿ ನೀಡಬೇಕು. ಕೈಗಾರಿಕೆ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ಕೈಬಿಡಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಒಳಗೊಂಡಂತೆ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರುಸೇನೆಯ ರಾಜ್ಯ ಸಂಚಾಲಕ ಆನಂದ ಪಟೇಲ್ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೈಗಾರಿಕೆಗಳ ಅಭಿವೃದ್ಧಿ ಹೆಸರಿನಲ್ಲಿ ಕೆಐಎಡಿಬಿ ಎಂಬ ಸಂಸ್ಥೆಯ ಮೂಲಕ ರೈತರ ಫಲವತ್ತಾದ ಭೂಮಿಯನ್ನು ಅತ್ಯಂತ ಕಡಿಮೆ ಬೆಲೆಗೆ ಸ್ವಾಧೀನ ಪಡಿಸಿಕೊಂಡು ಕೆಲವು ವರ್ಷಗಳ ನಂತರ ಉದ್ದಿಮೆದಾರರಿಗೆ ಮಾರಾಟ ಮಾಡುವ ಮೂಲಕ ರಿಯಲ್ ಎಸ್ಟೇಟ್ ದಂಧೆಗೆ ಕುಮ್ಮಕ್ಕು ನೀಡುತ್ತಿದೆ. ಅನ್ನ ಬೆಳೆಯುವ ರೈತನ ಬಳಿ ಭೂಮಿ ಇರಬೇಕೇ ಹೊರತು, ಉದ್ದಿಮೆದಾರರ ಬಳಿ ಅಲ್ಲ. ಸರ್ಕಾರ ಕೆಐಎಡಿಬಿ ಮೂಲಕ ಇದುವರೆಗೂ ರೈತರಿಂದ ಕೈಗಾರಿಕೆಗಳಿಗೆ ವಶಪಡಿಸಿಕೊಳ್ಳಲಾದ ಭೂಮಿ, ಸ್ಥಾಪನೆಯಾದ ಕೈಗಾರಿಕೆಗಳು, ಕೆಲಸ ಮಾಡುತ್ತಿರುವ ಉದ್ಯೋಗಿಗಳ ವಿವರ ನೀಡಲಿ. ಸರ್ಕಾರ ಈ ವಿಚಾರವಾಗಿ ಮೊದಲು ಶ್ವೇತ ಪತ್ರ…

Read More

ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು ಸ್ಥಳಕ್ಕೆ ತಲುಪುವಷ್ಟರಲ್ಲಿ ವಧು ಮತ್ತು ವರ ಇಬ್ಬರೂ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಪಟ್ಟಣದ ಕರಡಿಪುರ ನಿವಾಸಿಯಾದ ಯುವತಿ ಹಾಗೂ ಆಂಧ್ರಪ್ರದೇಶ ಮೂಲದ ಯುವಕನಿಗೆ ಹಿರಿಯರು ಮಾರ್ಚ್ 7 ಮತ್ತು 8 ರಂದು ವಿವಾಹ ನಿಶ್ಚಯಿಸಿದ್ದರು. ಮದುವೆಯ ತಯಾರಿಗಳು ಜೋರಾಗಿ ನಡೆಯುತ್ತಿದ್ದವು. ಈ ನಡುವೆ, ವಧುವಿಗೆ ಇನ್ನೂ 18 ವರ್ಷ ತುಂಬಿಲ್ಲ ಎಂಬ ವಿಷಯ ತಿಳಿದ ಯಾರೋ ಅಪರಿಚಿತರು 112 ತುರ್ತು ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ದೂರು ಬಂದ ತಕ್ಷಣ ಮಧುಗಿರಿ ಪೊಲೀಸರು ಕಲ್ಯಾಣ ಮಂಟಪಕ್ಕೆ ಧಾವಿಸಿದ್ದಾರೆ. ಆದರೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗುವಷ್ಟರಲ್ಲಿ ವಧು ಮತ್ತು ವರ ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದರು. ಪರಿಶೀಲನೆಯಲ್ಲಿ ವಧುವಿಗೆ 18 ವರ್ಷ ಪೂರ್ಣಗೊಳ್ಳಲು ಇನ್ನು ಕೇವಲ ಮೂರು ತಿಂಗಳು ಬಾಕಿ ಇರುವುದು ದೃಢಪಟ್ಟಿದೆ. ಕಾನೂನುಬದ್ಧವಾಗಿ ಮದುವೆಯಾಗಲು ಯುವತಿಗೆ 18 ವರ್ಷ ತುಂಬುವುದು…

Read More

ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ ಸಾಧನೆಯಾಗಿದೆ ಎಂದು ತಹಶೀಲ್ದಾರ್ ಮಮತಾ ಎಂ. ಹೇಳಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಮಹಿಳಾ ದಿನಾಚರಣೆ’ ಹಾಗೂ ‘ಮಹಿಳಾ ಸಾಧಕರಿಗೆ ಸನ್ಮಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಗೆ ಕೇವಲ ವರ್ಷದ ಒಂದು ದಿನವಷ್ಟೇ ಗೌರವ ಸೀಮಿತವಾಗಬಾರದು. ಸಮಾಜದಲ್ಲಿ ಸೂಕ್ತ ಸ್ಥಾನಮಾನ ಸಿಗುವಂತೆ ಪ್ರತಿಯೊಬ್ಬ ಮಹಿಳೆಯೂ ಸಾಧನೆ ಮಾಡಬೇಕು. ಮೊದಲು ಒಬ್ಬ ಹೆಣ್ಣು ಮತ್ತೊಬ್ಬ ಹೆಣ್ಣಿಗೆ ಗೌರವ ನೀಡುವ ಗುಣ ಬೆಳೆಸಿಕೊಳ್ಳಬೇಕು. ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಗಳು ನಿಲ್ಲಬೇಕು. ನಮ್ಮೊಳಗೆ ನಾವು ಮೊದಲು ಸಮಾನತೆ ಕಂಡುಕೊಂಡಾಗ ಮಾತ್ರ ಸಮಾಜದಿಂದ ಸಮಾನತೆಯನ್ನು ನಿರೀಕ್ಷಿಸಲು ಸಾಧ್ಯ ಎಂದು ಅವರು ಮಾರ್ಮಿಕವಾಗಿ ನುಡಿದರು. ಪ್ರತಿಯೊಬ್ಬ ಮಹಿಳೆಯಲ್ಲೂ ಅಪಾರ ಶಕ್ತಿಯಿದೆ. ಕಷ್ಟದ ಸಂದರ್ಭಗಳಲ್ಲಿ ಮತ್ತು ಅವಕಾಶಗಳು ದೊರೆತಾಗ ಆ ಶಕ್ತಿ ಅನಾವರಣಗೊಳ್ಳುತ್ತದೆ. ಅದನ್ನು ಸದ್ಬಳಕೆ…

Read More

ತುಮಕೂರು (ಕೊರಟಗೆರೆ): ಗ್ರಾಮೀಣ ಭಾಗದ ಬಾಲಕಿಯರ ಶಿಕ್ಷಣಕ್ಕೆ ಅನುಕೂಲವಾಗಲೆಂದು ಸರ್ಕಾರದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡವೊಂದು ಮೂಢನಂಬಿಕೆಯ ಕಾರಣಕ್ಕೆ ಒಂದು ದಿನವೂ ಬಳಕೆಯಾಗದೆ ಹಾಳಾಗುತ್ತಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ವರದಿಯಾಗಿದೆ. ಸುಮಾರು ಏಳು–ಎಂಟು ವರ್ಷಗಳ ಹಿಂದೆ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುಮಾರು ₹69 ಲಕ್ಷ ವೆಚ್ಚದಲ್ಲಿ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾರ್ಥಿ ನಿಲಯದ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲಾಗಿತ್ತು. ಇದರಲ್ಲಿ ವಸತಿ ಕೊಠಡಿಗಳು, ಅಡುಗೆಮನೆ, ಶೌಚಾಲಯ ಹಾಗೂ ಸೋಲಾರ್ ವ್ಯವಸ್ಥೆಯಂತಹ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿತ್ತು. ಆದರೆ, ಅಂದಿನಿಂದ ಇಂದಿನವರೆಗೂ ಈ ಕಟ್ಟಡದ ಬಾಗಿಲು ತೆರೆದಿಲ್ಲ. ಅಡ್ಡಿಯಾದ ಮೂಢನಂಬಿಕೆ: ಈ ವಿದ್ಯಾರ್ಥಿನಿಲಯದ ಸಮೀಪದಲ್ಲೇ ಗ್ರಾಮದೇವತೆ ‘ಏಳುಮಂದೆಮ್ಮ’ ದೇವಸ್ಥಾನವಿದೆ. ದೇವಿಯ ಪಾರಂಪರಿಕ ಕಟ್ಟುಪಾಡುಗಳ ಪ್ರಕಾರ, ಋತುಸ್ರಾವವಾದ ಮಹಿಳೆಯರು ಅಥವಾ ಬಾಣಂತಿಯರು ಈ ಭಾಗದಲ್ಲಿ ಸಂಚರಿಸಬಾರದು ಎಂಬ ಬಲವಾದ ನಂಬಿಕೆ ಗ್ರಾಮದಲ್ಲಿದೆ. ಒಂದು ವೇಳೆ ಈ ನಿಯಮವನ್ನು ಮೀರಿದರೆ ದೇವಿಯ ಮುನಿಸಿಗೆ ಗುರಿಯಾಗಿ ಅನಾಹುತಗಳು ಸಂಭವಿಸಬಹುದು ಎಂಬ ಭಯ…

Read More