Subscribe to Updates
Get the latest creative news from FooBar about art, design and business.
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
Author: admin
ಕೌಟುಂಬಿಕ ಜಗಳ ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. ಆರೋಪಿಯಾದ ಪತಿ ವಿಕಾಸ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕಿಂಗ್ ಗುತ್ತಿಗೆದಾರರಾದ ಕುಮಾರ್ ಅವರು ಅತಿಯಾದ ಮದ್ಯಪಾನದ ಅಮಲಿನಲ್ಲಿ ಮನೆಗೆ ಬಂದಿದ್ದ ಮತ್ತು ಪತ್ನಿ ಜತೆಗೆ ತೀವ್ರವಾಗಿ ಜಗಳವಾಡಿದ್ದಾನೆ. ಈ ಜಗಳವು ತಾರಕಕ್ಕೇರಿ ಆಕೆಯನ್ನು ಮೂರನೇ ಮಹಡಿಯಿಂದ ಎಸೆದಿದ್ದಾನೆ. ಆ ಬಳಿಕ ಆತನೇ ಪತ್ನಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ವೈದ್ಯರು ಆಕೆ ಸತ್ತಿರುವ ವಿಷಯ ತಿಳಿಸಿದ್ದಾರೆ.
ನಾಗ್ಪುರ: ಪರಿಚಯಸ್ಥ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಜಾಮೀನು ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯು ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ನಗರದ ಜಾರಿಪಟ್ಕ ಪ್ರದೇಶದ ನಿವಾಸಿ ಭರತ್ ಗೋಸ್ವಾಮಿ (33) ಕೊಲೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗೋಸ್ವಾಮಿ ತನಗೆ ಪರಿಚಯವಿರುವ ಮಹಿಳೆಯ ಮನೆಗೆ ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಮಹಿಳೆಯ 14 ವರ್ಷದ ಮಗಳ ಮೇಲೆಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದಲ್ಲದೆ ಈ ವಿಚಾರ ಬಹಿರಂಗಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಎಫ್ ಐಆರ್ ದಾಖಲಾಗಿದೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಗೋಸ್ವಾಮಿಯನ್ನು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರಕ್ಕಾಗಿ ಬಂಧಿಸಿದ್ದಾರೆ.
ಬೀದರ್: 75 ನೇ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ವನ್ನು ಬೀದರ್ ಜಿಲ್ಲೆಯ ಕೌಠಾ ಬಿ ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವೀನಾ ಗೌತಮ್ ಮೇತ್ರೆ, ಸುರೇಖಾ ಆಹಾರ ಸರಬರಾಜು ಇಲಾಖೆ ಬೀದರ್,ವಿಶೇಷ ಉಪನ್ಯಾಸಕರಾದ ನಂದಾದೀಪ್ ಬೋರಾಳೆ, ಅನಿಲ್ ಕುಮಾರ್ ಸಮಾಜ ಕಲ್ಯಾಣ್ ಇಲಾಖೆ ಬಿರೇಂದ್ರ ಸಿಂಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಶೇರಾಣಾಪಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕಾ ಅಧಿಕಾರಿಗಳು, ಆಶಾ ಕಾರ್ಯಕಾರ್ತೆಯರು, ಅಂಗವಾಡಿ ಕಾರ್ಯಕರ್ತೆಯರು, ಶಾಲೆ ಶಿಕ್ಷಕರು, ಮಕ್ಕಳು, ಯುವಕರು, ಹಿರಿಯರು ಮಹಿಳೆಯರು, ಸಾವಿರಾರು ಜನರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್
ಹೆಚ್.ಡಿ. ಕೋಟೆಯಲ್ಲಿ ಅದ್ದೂರಿಯಾಗಿ ನಡೆದ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕೃತ ಗಿರಿಜನ ಮುಖಂಡ ಸೋಮಣ್ಣ ಆಗಮಿಸಿದರು. ಹೆಚ್.ಡಿ. ಕೋಟೆ ಪಟ್ಟಣದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆ ಹಾಗೂ ಮಹದೇಶ್ವರ ಕಲಾಬಳಗ ಮಲಾರ ಮಹದೇವಸ್ವಾಮಿ ತಂಡ ಕಾರ್ಯಕ್ರಮ ಆಯೋಜಿಸಿತ್ತು. ಹಿರಿಯ ಪತ್ರಕರ್ತ ಬಸವರಾಜು ಹಾಗೂ ವೇದಿಕೆಯ ಗಣ್ಯರು ಕಾರ್ಯಕ್ರಮದ ಉದ್ಘಾಟನೆ ಮಾಡಿದರು. ವಿಶೇಷ ಉಪನ್ಯಾಸ ನೀಡಿದ ಪ್ರೌಢ ಶಾಲೆ ಶಿಕ್ಷಕ ರಂಗರಾಜೇಗೌಡ, ವಿದ್ಯಾರ್ಥಿಗಳು ವಿವೇಕಾನಂದರ ಜೀವನವನ್ನು ಹೆಚ್ಚು ಅಧ್ಯಯನವನ್ನು ಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಅದರಿಂದ ವಿದ್ಯಾರ್ಥಿಗಳು ದುಷ್ಟ ಚಟಾಗಳಿನಿಂದ ದೂರ ಇರಬೇಕು ಎಂದರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಮೊತ್ತ ಸೋಮಣ್ಣರನ್ನು ವಿಶೇಷವಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬೈರೇಗೌಡ ಮಾತನಾಡಿದರು. ಕಾರ್ಯಕ್ರಮದ ಸಂಘಟಕ ಮಲಾರ ಮಹದೇವಸ್ವಾಮಿ ಕಾರ್ಯಕ್ರಮದ ಎಲ್ಲಾ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ…
ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಗಡುವು ಸಮೀಪಿಸುತ್ತಿದೆ. ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. ಹೀಗಿದ್ದರೂ ವಾಹನ ಮಾಲೀಕರು ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಉದಾಸೀನತೆ ತೋರುತ್ತಿದ್ದು, ಇಂತಹ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸುವ ಸಲುವಾಗಿ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ತೀರ್ಮಾನಿಸಲಾಗಿದೆ. ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದರೂ ಇದುವರೆಗೂ ಕೇವಲ 10 ಲಕ್ಷ ವಾಹನಗಳಿಗೆ ಮಾತ್ರ ನಂಬರ್ ಪ್ಲೇಟ್ ಹಾಕಿಸಲಾಗಿದೆ. ಇನ್ನೂ ಭಾರಿ ಸಂಖ್ಯೆಯ ವಾಹನಗಳ ಮಾಲೀಕರು HSRP ನಂಬರ್ ಪ್ಲೇಟ್ ಹಾಕಿಸಿಲ್ಲ. ಗಡುವು ಮುಗಿದ ನಂತರ ವಾಹನಗಳ ಪರಿಶೀಲಿಸಿ ದಂಡ ವಿಧಿಸಲಾಗುವುದು. ದ್ವಿಚಕ್ರ ವಾಹನಗಳಿಗೆ 390 ರೂ. ನಿಂದ 440 ರೂ., 4 ಚಕ್ರದ ವಾಹನಗಳಿಗೆ 680 ರೂ. ನಿಂದ 690…
ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಮೃತರನ್ನು ಸಾಗರ್ ಕಡಕೋಳ(17), ಶ್ವೇತಾ(13), ಗೋವಿಂದ(13), ಬಸವರಾಜ(17) ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಮೃತರು ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಹಾವೀರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆ ಶಾಲಾ ಬಸ್ ನಲ್ಲಿ ಹೊರಡುವಾಗ ದುರಂತ ಸಂಭವಿಸಿದೆ. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಹುಲಿಗೆ ವೇಗವಾಗಿ ಸಾಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಹುಲಿ ಸ್ಥಳದಲ್ಲೇ ಮೃತಪಟ್ಟಿದೆ. ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಸಾವು ಒಂದು ಕಡೆ ಆತಂಕಕ್ಕೆ ಕಾರಣವಾಗಿದ್ದರೆ, ಇನ್ನೊಂದು ಕಡೆ ಮಂಡಕಳ್ಳಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಹುಲಿಗಳ ಸಂಚಾರವೂ ಜನರಿಗೆ ಭಯವನ್ನು ಹುಟ್ಟಿಸಿದೆ. ಈ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾರನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪುಣೆಯ ಹೊರವಲಯದಲ್ಲಿರುವ ಹೋಟೆಲ್ ವೊಂದರಲ್ಲಿ ಶನಿವಾರ ರಾತ್ರಿ ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಟೆಕ್ಕಿಯನ್ನು ಆಕೆಯ ಗೆಳೆಯನೇ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆರೋಪಿಯಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಂಪ್ರಿ ಚಿಂಚ್ ವಾಡದ ಹಿಂಜೆವಾರಿ ಪ್ರದೇಶದ ಓಯೋ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹೋಟೆಲ್ ಗೆ ಆಗಮಿಸಿ ಮಹಿಳೆಯ ಶವವನ್ನು ಹೊರತೆಗೆದರು. ಶವ ನೆಲದ ಮೇಲೆ ಬಿದ್ದಿದ್ದು, ಕೋಣೆಯಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಪೊಲೀಸರ ಪ್ರಕಾರ, ಮಹಿಳೆಯನ್ನು ವಂದನಾ ದ್ವಿವೇದಿ ಎಂದು ಗುರುತಿಸಲಾಗಿದೆ ಮತ್ತು ಆಕೆಯ ಗೆಳೆಯ ರಿಷಬ್ ನಿಗಮ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೂಲತಃ ಉತ್ತರ ಪ್ರದೇಶದವರು. ಇವರಿಬ್ಬರ ನಡುವೆ ಪರಸ್ಪರ ಸಂಬಂಧವಿದ್ದು, ಜಗಳವೇ ಕೊಲೆಗೆ ಕಾರಣ ಎಂಬುದು ಈವರೆಗಿನ ತನಿಖೆಯಿಂದ ತಿಳಿದುಬಂದಿದೆ. ಈ ದುರಂತ ಘಟನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಆರೋಪಿಯನ್ನು ಈಗ ವಿಚಾರಣೆ ನಡೆಸಲಾಗುತ್ತಿದೆ. ಹೋಟೆಲ್ ನ ಸಿಸಿಟಿವಿ ಫೂಟೇಜ್ ನಲ್ಲಿ ರಿಷಬ್ ತಡರಾತ್ರಿ ಕೋಣೆಯಿಂದ…
ನವದೆಹಲಿ: ಪೊಲೀಸ್ ತರಬೇತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 450 ಕ್ಕೂ ಅಧಿಕ ವಾಹನಗಳು ಸುಟ್ಟು ಹೋಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಇಲಾಖೆ ತಿಳಿಸಿದೆ. ಮಧ್ಯರಾತ್ರಿ 12.30 ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಸತತ ಕಾರ್ಯಾಯರಣೆಯಿಂದಾಗಿ, ಬೆಳಗ್ಗೆ 4 ಗಂಟೆಗೆ ಬೆಂಕಿ ಹತೋಟಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ತಿಳಿದು ಬಂದಿಲ್ಲ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ: ತಾಲೂಕಿನ ನಂದಿಗಿರಿಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈತನನ್ನು ಚಿಂತಾಮಣಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ನಾರಾಯಣಸ್ವಾಮಿ(37) ಎಂದು ಗುರುತಿಸಲಾಗಿದೆ. ಇನ್ನು ಈತ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೋಗಿದ್ದನಂತೆ. ಈ ಹಿನ್ನಲೆ ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುವಕ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇನ್ನು ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.