Subscribe to Updates
Get the latest creative news from FooBar about art, design and business.
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
Author: admin
ಮುಂದಿನ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವರು ಘೋಷಣೆ ಮಾಡಿದರು. ಮುಂದಿನ 7 ದಿನಗಳಲ್ಲಿ ಸಿಎಎ ಜಾರಿಗೆ ಬರಲಿದೆ. ಈ ಕಾನೂನು ಬಂಗಾಳದಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ಜಾರಿಯಾಗಲಿದೆ ಎಂದರು. “ಮುಂದಿನ ಏಳು ದಿನಗಳಲ್ಲಿ ಸಿಎಎ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಜಾರಿಗೆ ಬರಲಿದೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ, ”ಎಂದು ಶಾಂತನು ಠಾಕೂರ್ ಸಾರ್ವಜನಿಕ ಸಭೆಯಲ್ಲಿ ಹೇಳಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಿಎಎಯನ್ನು ಜಾರಿಗೆ ತರುತ್ತದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದರು. ಸಿಎಎಯನ್ನು ವಿರೋಧಿಸುತ್ತಿರುವ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿರಿಸಿಕೊಂಡಿವೆ. ಕೋಲ್ಕತ್ತಾದ ಐಕಾನಿಕ್ ಎಸ್ ಪ್ಲೇನೇಡ್ ನಲ್ಲಿ ನಡೆದ ರ್ಯಾಲಿಯಲ್ಲಿ, ಒಳನುಸುಳುವಿಕೆ, ಭ್ರಷ್ಟಾಚಾರ, ರಾಜಕೀಯ ಹಿಂಸಾಚಾರ…
ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ. ಇಬ್ಬರು ಮಲಯಾಳಿಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ. ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮಿ (55) ಮತ್ತು ವರ್ಗೀಸ್ (68) ಮೃತ ಮಲಯಾಳಿಗಳು. ಮಲಪ್ಪುರಂ ಮೂಲದ ಬಶೀರ್ ಅವರ ಜಮೀನಿನಲ್ಲಿ ಪಟಾಕಿ ಕಾರ್ಖಾನೆ ಇತ್ತು. ಸ್ಫೋಟದ ರಭಸಕ್ಕೆ ಪಟಾಕಿ ತಯಾರಿಸುತ್ತಿದ್ದ ಚಿಕ್ಕ ಕಟ್ಟಡ ಸಂಪೂರ್ಣ ನಾಶವಾಗಿದೆ. ಅಪಘಾತದ ವೇಳೆ ಕಟ್ಟಡದಲ್ಲಿ 9 ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ತೋಟದ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಲಿಡ್ ಫೈರ್ ವರ್ಕ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಗೆ ಪರವಾನಗಿ ಇದೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.
ಜ್ಞಾನವಾಪಿಯಲ್ಲಿನ ಕಮಾನುಗಳನ್ನು ತೆರೆಯುವ ಬೇಡಿಕೆಯನ್ನು ತುರ್ತಾಗಿ ಪರಿಗಣಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಬೇಡಿಕೆಯೊಂದಿಗೆ ಹಿಂದೂ ಮಹಿಳೆಯರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಜ್ಞಾನವಾಪಿಗೆ ಸಂಬಂಧಿಸಿದ ಮಹತ್ವದ ಸಾಕ್ಷ್ಯಾಧಾರಗಳು ವಾಲ್ಟ್ ನಲ್ಲಿದ್ದು, ಸಮೀಕ್ಷೆ ನಡೆಸಲು ಪುರಾತತ್ವ ಇಲಾಖೆಗೆ ಸೂಚಿಸಬೇಕು ಎಂಬುದು ಮನವಿಯಲ್ಲಿನ ಆಗ್ರಹವಾಗಿದೆ. ಜ್ಞಾನವಾಪಿಯಲ್ಲಿರುವ ಹತ್ತು ವಾಲ್ಟ್‌ಗಳನ್ನು ತೆರೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಸಂಕೀರ್ಣದಲ್ಲಿ ಎ.ಎಸ್.ಐ. ನಿನ್ನೆ ಹಿಂದೂ ಪಂಥದ ವಕೀಲರು ನಡೆಸಿದ ವೈಜ್ಞಾನಿಕ ಪರೀಕ್ಷೆಯ ವರದಿಯ ವಿವರ ಬಹಿರಂಗವಾಗಿತ್ತು. ಪುರಾತತ್ತ್ವ ಶಾಸ್ತ್ರದ ಸಮೀಕ್ಷೆಯ ವರದಿಯು ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ಹಿಂದೂ ದೇವಾಲಯವಿದೆ ಎಂದು ತೋರಿಸಿದೆ ಎಂದು ಹಿಂದೂ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಜೈನ್ ಪ್ರಕಾರ, ಅಸ್ತಿತ್ವದಲ್ಲಿರುವ ಜ್ಞಾನವಾಪಿ ಹಿಂದೂ ದೇವಾಲಯದ ಹಲವಾರು ಅವಶೇಷಗಳನ್ನು ಹೊಂದಿದೆ ಎಂದು ಸಮೀಕ್ಷೆಯು ಕಂಡುಹಿಡಿದಿದೆ. ಅರ್ಜಿದಾರರಲ್ಲಿ ಒಬ್ಬರಾದ ರಾಖಿ ಸಿಂಗ್ ಪರ ವಕೀಲರಾದ ಮದನ್ ಮೋಹನ್ ಯಾದವ್, ಮಸೀದಿಯಲ್ಲಿ ಪರ್ಷಿಯನ್ ಭಾಷೆಯಲ್ಲಿ ಕಲ್ಲಿನ…
ತಿಪಟೂರು: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ತಿಪಟೂರು ತಾಲೂಕಿನ ತಿಮ್ಲಾಪುರ ಗ್ರಾಮದ ಬಳಿ ನಡೆದಿದೆ. ಹೋನ್ನವಳ್ಳಿ ಹೋಗುತ್ತಿರುವ ಮಾರ್ಗಮಧ್ಯೆ ಈ ಘಟನೆ ನಡೆದಿದ್ದು, ಹೊನ್ನವಳ್ಳಿ ಮೂಲೆ ಮನೆ ನಿವಾಸಿ ಸೋಮಶೇಖರ (42) ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಕಾಲು ತುಂಡಾಗಿ ಕಾರಿನ ಮುಂಭಾಗದಲ್ಲೇ ಸಿಲುಕಿಕೊಂಡಿರುವ ದೃಶ್ಯ ಭೀಕರವಾಗಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಅಪಘಾತದಲ್ಲಿ ಉಮೇಶ್ ಎಂಬವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರ ಕಾಲು ಮುರಿತಕ್ಕೊಳಗಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮಶೇಖರ ಅವರು ತನ್ನ ಜಮೀನಿನಲ್ಲಿ ಬೆಳೆದ ಅವರೇಕಾಯಿಯನ್ನು ಕೊಯ್ಡ್ತು ತಿಪಟೂರಿನ ಬೀದಿ ಬದಿಯಲ್ಲಿ ಮಾರಾಟ ಮಾಡಿ ಊರಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಹೊನವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವರದಿ: ಆನಂದ ತಿಪಟೂರು
ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಮಂತ್ರಾಲಯದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗುರುಗಳಾದ ೧೦೦೮ನೇ ಪರಮಪೂಜ್ಯ ಶ್ರೀ ಸುವಿದ್ಯೇಂದ್ರತೀರ್ಥರು ಗ್ರಾಮದ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಗುರುಗಳನ್ನು ಭಕ್ತರು ಗ್ರಾಮದ ಹೊರವಲಯದಿಂದಲೇ ಸ್ವಾಗತಿಸಿ ಬೆಳ್ಳಿರಥದಲ್ಲಿ ಶೋಭಯಾತ್ರೆಯ ಮೂಲಕ ಮಠಕ್ಕೆ ಕರೆದೊಯ್ದರು. ರಾಯರ ಮಠದಲ್ಲಿ ಮೂಲರಾಮದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಗುರುಪಾದ ಪೂಜೆ, ಸಂಸ್ಥಾನ ಪೂಜೆ, ಅನುಗ್ರಹ ಸಂದೇಶ ಮಹಾ ಮಂಗಳಾರತಿ ಕಾರ್ಯಗಳು ನೆರವೇರಿದವು. ಭಕ್ತಾಧಿಗಳು ಗುರುಗಳನ್ನು ಮನೆಗಳಿಗೆ ಆಹ್ವಾನಿಸಿ, ತುಲಾಭಾರ, ಪುಷ್ಪಾರ್ಚನೆ ಮತ್ತು ಪಾದಪೂಜೆ ನೆರವೇರಿಸಿದರು. ಮಠದಲ್ಲಿ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗವಾಯಿತು. ಇದೇ ವೇಳೆ ಶ್ರೀಗಳು ಹಲವು ಭಕ್ತರಿಗೆ ಮುದ್ರಾಧಾರಣೆ ಮಾಡಿದರು. ಈ ಸಂದರ್ಭದಲ್ಲಿ ಮಠದ ಅರ್ಚಕರಾದ ಗುರುರಾಜಾಚಾರ್, ಆನಂದರಾವ್, ಎನ್.ಎಸ್.ಮಂಜುನಾಥ, ಎನ್.ಆರ್.ಅಶ್ವಥ್, ಎನ್.ಸಿ.ಸುಂಬ್ರಮಣ್ಯಂ, ಎನ್.ಎ.ಲಕ್ಷ್ಮಿನಾರಯಣ, ಎನ್.ಎ.ಲಕ್ಷ್ಮಿಶಂಕರ್, ಟಿ.ವಿ.ನಾಗರಾಜು, ಚಂದ್ರಶೇಖರ್ ಮುದ್ರಾಡಿ, ಡಿ.ವಿ.ಅನಿಲ್ ಮುಂತಾದ ಭಕ್ತರು ಇದ್ದರು. ವರದಿ: ನಂದೀಶ್ ನಾಯ್ಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿದರು. ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್, ಆರ್.ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ರಹೀಂಖಾನ್, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿ 20ಕ್ಕೂ ಹೆಚ್ಚು ಶಾಸಕರುಗಳು ಉಪಸ್ಥಿತರಿದ್ದರು.
ತುಮಕೂರು: ಬಿಜೆಪಿ ಪಕ್ಷಕ್ಕೆ ಪುನರ್ ಸೇರ್ಪಡೆಗೊಂಡಿರುವ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಅವರು ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಅಲ್ಲದೆ ವಿಶೇಷ ಪೂಜೆಯನ್ನು ಕೂಡ ಸಲ್ಲಿಸಿದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಪುನರ್ ಸೇರ್ಪಡೆ ಆಗಿದ್ದೇನೆ, ಅಲ್ಲದೆ ನೆನ್ನೆ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿಯೂ ಕೂಡ ನಾನು ಭಾಗವಹಿಸಿದ್ದೇನೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದವನ್ನು ಪಡೆಯಲು ಬಂದಿದ್ದೇನೆ ಎಂದು ತಿಳಿಸಿದರು. ರಾಜ್ಯದ ಎಲ್ಲಾ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ನಾನು ಬಿಜೆಪಿ ಪುನರ್ ಸೇರ್ಪಡೆ ನಿರ್ಧಾರದ ಕುರಿತು ಆತ್ಮೀಯವಾಗಿ ಹಾಗೂ ಗೌರವಯುತವಾಗಿ ಬರಮಾಡಿಕೊಂಡಿದ್ದಾರೆ ಎಂದು ಹೇಳಿದರು. ನಾನು ಈ ಹಿಂದೆ ಬಿಜೆಪಿಯನ್ನು ಬಿಟ್ಟು ಹೊರ ಹೋಗಿದ್ದೆ ಆದರೆ ನಂತರ ದಿನಗಳಲ್ಲಿ ನಾನು ಯಾವುದೇ ಜಿಲ್ಲೆಗೆ ಹೋದರು ಕೂಡ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ನೀವು ಪುನಃ ಬಿಜೆಪಿಗೆ ವಾಪಸ್ ಬರಬೇಕೆಂಬ ಆಶಯವನ್ನು ವ್ಯಕ್ತಪಡಿಸುತ್ತಿದ್ದರು…
ಚಿತ್ರದುರ್ಗ: ಮಂಡ್ಯದಲ್ಲಿ ಹನುಮ ಧ್ವಜ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಚಿತ್ರದುರ್ಗದ ಎಸ್.ಜೆಎಂ ಶಾಲಾ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಧ್ವಜಸ್ಥಂಭದಲ್ಲಿ ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಷ್ಟ್ರ ಧ್ಬಜ ಹಾಗೂ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಆದರೆ, ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಸಿಎಂ ಅಸಮಾಧಾನ ಹೊರಹಾಕಿದರು.
ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ್ದಾರೆ. ಈ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಮನೆಗೆ ಆಗಮಿಸಿದ ಸೂರಜ್ ರೇವಣ್ಣ ಡಿ.ಕೆ.ಶಿವಕುಮಾರ್ ರಹಸ್ಯ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸೂರಜ್, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿದ್ದಾರೆ. ಜಿಲ್ಲೆಯ ಪ್ರತಿನಿಧಿಯಾಗಿ ಅಭಿವೃದ್ಧಿ ಕಾರ್ಯಗಳ ಕುರಿತ ಅವರನ್ನು ಭೇಟಿ ಮಾಡುವುದು ಅಗತ್ಯವಿದೆ. ಹೀಗಾಗಿ ಭೇಟಿ ಮಾಡಲಾಯಿತು ಅಂತಾ ಅವರು ತಿಳಿಸಿದ್ದಾರೆ.
ಕಲಬುರಗಿ: ನಿತೀಶ್ ಕುಮಾರ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮುಂಚೆಯೇ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡುವಾಗ ನಿತೀಶ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದರು. ಅದು ಇಂದು ನಿಜವಾಗಿದೆ ಎಂದು ಅವರು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳೊಂದಿಗೆ ಚರ್ಚಿಸಲು ಆರು ಜನರ ಸಮಿತಿ ರಚಿಸಲಾಗಿದೆ. ವಿವಿಧ ಪಕ್ಷಗಳೊಂದಿಗೆ ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿದೆ ಎಂದು ಇದೇ ವೇಳೆ ಅವರು ತಿಳಿಸಿದರು.