Subscribe to Updates
Get the latest creative news from FooBar about art, design and business.
- ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
- ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
- ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
- ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
- ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
- ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
Author: admin
ಭೋಪಾಲ್: ಗರ್ಭಿಣಿ ಮಹಿಳೆಯನ್ನೂ ಬಿಡದ ಕಾಮುಕರು. ಗರ್ಭಿಣಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈಯಲು ಯತ್ನಿಸಿದ ಭೀಕರ ಘಟನೆ ಮಧ್ಯಪ್ರದೇಶದ ಮೊರೇನಾ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತೆಯ ಪತಿ ಸುರೇಶ್ ಸಂಖ್ವಾರ್ ಮೊರೆನಾ ಜಿಲ್ಲೆಯ ಅಂಬಾಹ್ ಪಟ್ಟಣದ ಚಾಂದ್‌ಪುರದ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಆಕೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಸುರೇಶ್ ಅದನ್ನು ನಿರಾಕರಿಸಿದ್ದ. ಹಾಗಾಗಿ ಮಹಿಳೆ ಪತಿ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದಳು. ತನ್ನ ಪತಿ ಮಾಡಿದ ಅತ್ಯಾಚಾರಕ್ಕೆ ಮಾತನಾಡಿ ಸಂಧಾನ ನಡೆಸಲು ಆರೋಪಿಗಳ ಮನೆಗೆ ತೆರಳಿದ್ದರು. ಈ ವೇಳೆ 38 ವರ್ಷದ ಸಂತ್ರಸ್ಥೆಯ ಮೇಲೆ ಅಲ್ಲಿನ ಮೂವರು ಆರೋಪಿಗಳು ಅತ್ಯಾಚಾರ ಮಾಡಿದ್ದಾರೆ. ಮಹಿಳೆಗೆ ಶೇ.80 ರಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಪತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಮ್ಯಾಜಿಸ್ಟ್ರೇಟ್ ಬಳಿ ಸಂಸ್ತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಪೊಲೀಸರು ಈವರೆಗೆ ಹೇಳಿಕೆ ದಾಖಲಿಸಿಲ್ಲ. ಆದ್ರೆ ತನಿಖೆ ಮುಂದುವರಿಸುತ್ತಿದ್ಧಾರೆ…
ಶಾಲೆಯ ಮೆಟ್ಟಿಲು ಹತ್ತಿ ಆಟ-ಪಾಠಗಳನ್ನು ಕಲಿಯಬೇಕಾದ ಪ್ರಾಯದಲ್ಲಿಯೇ ಹಿಂದಿನ ಕಾಲದಲ್ಲಿ ಹುಡುಗ – ಹುಡುಗಿಗೆ ಮದುವೆ ಮಾಡಿಸಲಾಗುತ್ತಿತ್ತು.ಆದರೆ ಅಂತಹ ಅನಿಷ್ಟ ಪದ್ಧತಿಗೆ ಬ್ರೇಕ್ ಹಾಕಲಾಗಿದೆ. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಇದು ಸಂಪೂರ್ಣ ನಿಯಂತ್ರಣ ಬಂದಿಲ್ಲ ಅನ್ನೋದಕ್ಕೆ ಈ ಘಟನೆಯೇ ಇದೀಗ ಸಾಕ್ಷಿಯಾಗಿದೆ. ಹೌದು, ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ. ಇಂತಹದ್ದೆ ಒಂದು ಘಟನೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ತಂದೆ ತಾಯಿಗೆ ಮಾಹಿತಿಯನ್ನು ನೀಡದ ಅಪ್ರಾಪ್ತ ಬಾಲಕಿಯನ್ನು ಆಕೆಯ ದೊಡ್ಡಪ್ಪ ದೊಡ್ಡಮ್ಮ ಯುವಕನೊಂದಿಗೆ ಮದುವೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಯುವತಿ ಎಂಟನೇ ತರಗತಿಯಲ್ಲಿ ಓದುತ್ತಿದ್ದು, ಈಗ ಆಕೆಗೆ ಕೇವಲ 14 ವರ್ಷವಾಗಿದೆಯಷ್ಟೆ. ಯುವಕನಿಗೆ 24 ವರ್ಷವಾಗಿದೆ. ದೂರುದಾರ ಮಹಿಳೆಯ ಅತ್ತೆ, ಭಾವ, ಭಾವನ ಪತ್ನಿ ವಿರುದ್ದ ದೂರು ದಾಖಲು ಮಾಡಲಾಗಿದೆ. ಇದೇ ತಿಂಗಳು 15 ರಂದು ಯುವತಿಯ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ…
ಇಂಡೋ -ಗಲ್ಫ್ ಇಂಟರ್ ನ್ಯಾಷನಲ್ ಥ್ರೋಬಾಲ್ ಕೂಟದಲ್ಲಿ ಪಾಲ್ಗೊಳ್ಳಲು ಭಾರತ ಮಹಿಳಾ ತಂಡ ಸಿದ್ಧವಾಗಿದೆ. ಫೆ.23 ರಿಂದ 25ರ ತನಕ ಬಹರೇನ್ ನಲ್ಲಿ ಕೂಟ ನಡೆಯಲಿದೆ. ಅನುಭವಿ ಆಟಗಾರ್ತಿ ಸಂಪೂರ್ಣ ಹೆಗಡೆ ನೇತೃತ್ವದಲ್ಲಿ ಭಾರತ ತಂಡ ಕಣಕ್ಕೆ ಇಳಿಯಲಿದೆ. ಫೆ.21 ರಂದು ಬೆಂಗಳೂರು ವಿಮಾನ ನಿಲ್ದಾಣದಿಂದ ಭಾರತೀಯ ತಂಡ ಬಹರೇನ್ ಗೆ ಪ್ರಯಾಣ ಬೆಳೆಸಲಿದೆ. ಭಾರತ ತಂಡ ಹೀಗಿದೆ ಸಂಪೂರ್ಣ ಹೆಗಡೆ(ನಾಯಕಿ), ಕೀರ್ತನಾ ಪರಮೇಶ್ವರನ್ , ತನಿಶಾ ಜೈನ್, ಆಯ್ಲಾ ರಚಿತಾ ವಿಜಯ್ , ಕಲ್ಪನಾ ಚಲ್ಲಾ, ಪಾವನಿ ಚೋಡಿಸೆಟ್ಟಿ, ಅನಿತಾ ವೀಣಾ, ದೀಪಾ ಹೆಬ್ಬಾರ್, ಪೃಶಾ ಉತ್ಪಲಾಕ್ಷಿ ಶ್ರೀನಿವಾಸನ್ ಎನ್.ಎಸ್. ಸುಬ್ರಮಣ್ಯ(ತರಬೇತುದಾರರು), ಡಿ.ಸಂತೋಷ್( ತೀರ್ಪುಗಾರರು), ವಿವೇಕ್ ಹೆಗಡೆ(ಮಾಧ್ಯಮ).
ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಯುವರಾಜ್ ಸಿಂಗ್ ಅವರ ತಾಯಿ ತಮ್ಮ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೇ ಕಳ್ಳತನ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಸುಮಾರು 70,000 ರೂ. ನಗದು ಮತ್ತು ಚಿನ್ನಾಭರಣ ಕಾಣೆಯಾಗಿದೆ ಎನ್ನಲಾಗಿದೆ. ಯುವ ರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಅವರು ತಮ್ಮ ಮನೆಯಲ್ಲಿದ್ದ 70,000 ಸಾವಿರ ನಗದು ಮತ್ತು ಚಿನ್ನಾಭರಣ ಕಾಣೆಯಾಗಿದೆ ಎಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯೇ ಕಳ್ಳತನ ಮಾಡಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಸಿಬ್ಬಂದಿ ಸಾಕೇತ್ರಿಯ ಲಲಿತಾ ದೇವಿ, ಮನೆಕೆಲಸಕ್ಕಾಗಿ ಮತ್ತು ಅಡುಗೆ ಕೆಲಸಕ್ಕಾಗಿ ನೇಮಕಗೊಂಡ ಬಿಹಾರ ಮೂಲದ ವ್ಯಕ್ತಿ ಸಲೀಂದರ್ ದಾಸ್ ಕಳ್ಳತನ ಮಾಡಿರಬಹುದು ಎಂದು ಶಂಕಿಸಿದ್ದಾರೆ. 2023ರಲ್ಲಿ ಗುರುಗಾಂವ್ ನಲ್ಲಿದ್ದಾಗ ಒಂದು ತಿಂಗಳು ತಾನು ಮನೆಯಲ್ಲಿ ಇರಲಿಲ್ಲ. ಹಾಗಾಗಿ ನಮ್ಮ ಮನೆಯ ಜವಾಬ್ದಾರಿಯನ್ನು ಆರೋಪಿಗಳಾಗಿರುವ ಮನೆಗೆಲಸದವರು ನೋಡಿಕೊಳ್ಳುತ್ತಿದ್ದರು. ನಂತರ ಇಬ್ಬರು ಆರೋಪಿಗಳು ಕೆಲಸವನ್ನು…
ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿಯೋರ್ವ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಮಾಹೆ ವಿವಿಯಲ್ಲಿ ಫೆ.17 ರಂದು ವರದಿಯಾಗಿದೆ. ಬಿಹಾರ ಮೂಲದ ಸತ್ಯಂ ಸುಮನ್(19) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಎಂಸಿಎಚ್ ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದ ಜಿಗಿದು ಸಾವಿಗೆ ಶರಣಾಗಿದ್ದಾನೆ. ಸತ್ಯಂ ಸುಮನ್ ಕಟ್ಟಡದಿಂದ ಜಿಗಿಯುತ್ತಿದ್ದಂತೆ ಇತರ ವಿದ್ಯಾರ್ಥಿಗಳು ಭಯಗೊಂಡಿದ್ದು, ವಿದ್ಯಾರ್ಥಿಗಳು ಆತಂಕದಿಂದ ಅತ್ತಿತ್ತ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸತ್ಯಂ ಸುಮನ್ ಎಂಸಿಎಚ್ ಪಿ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೊಬೈಲ್ ಮೂಲಕ ಕಾಪಿ ಮಾಡುವ ವೇಳೆ ಸತ್ಯಂ ಸುಮನ್ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಯಿಂದ ಆತನನ್ನು ಪರೀಕ್ಷಾ ಉಸ್ತುವಾರಿ ಹೊರದಬ್ಬಿದ್ದಾರೆ. ಇದರಿಂದ ಮನನೊಂದು ಆತ ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಆರೋಪಗಳು ಕೇಳಿಬಂದಿವೆ. ಮಣಿಪಾಲ…
ಬೆಂಗಳೂರು: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಬಾರತ ಸಂವಿಧಾನ ಹಾಗೂ ರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತದ ಸಂವಿಧಾನ ಜಾರಿಗೆ ಬಂದು 75 ನೇ ವರ್ಷಕ್ಕೆ ಕಾಲಿಟ್ಟಿದೆ. 75 ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಭಾಷಣಕಾರರು, ಖ್ಯಾತ ಚಿಂತಕರಾದ ಪ್ರೊ: ಅಸುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖದೇವ್ ಥೋರಟ್, ಪ್ರೊ, ಕಾಂಚಾ, ಪ್ರಶಾಂತ್ ಭೂಷಣ್,…
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಸ್ಯಕಾಶಿ ಸಿದ್ದರ ತಪೋ ಭೂಮಿ ಆಯುರ್ವೇದಿಕ್ ದಿವ್ಯ ಔಷಧಿಗಳ ತಾಣವೆಂದು ಹೆಸರುವಾಸಿಯಾದ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ಆವರಣದಲ್ಲಿ ಮತ್ತು ಬೆಟ್ಟದ ಮೇಲಿನ ಸಿದ್ದೇಶ್ವರ ಸ್ವಾಮಿಯ ಗುಹಾಲಯಗಳಲ್ಲಿ ಕಸದ ಬುಟ್ಟಿಗಳನ್ನು ಸ್ಪಿರೀಟ್ ಆಫ್ ಗಿವಿಂಗ್ ತಂಡದವರು ಅಳವಡಿಸಿದ್ದಾರೆ. ದೇವಾಲಯದ ಆವರಣದಲ್ಲಿ ಬಿದ್ದಿದಂತಹ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಬಾಟಲ್, ಕಸ ಕಡ್ಡಿ ಇತ್ಯಾದಿಗಳನ್ನು ಸ್ವಚ್ಛಪಡಿಸಿ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪ್ಲಾಸ್ಟಿಕ್ ಮುಕ್ತ ಪುಣ್ಯಕ್ಷೇತ್ರ ವಾಗುವಂತೆ ಜಾಗೃತಿ ಮೂಡಿಸಿದರು. ಸ್ಪಿರೀಟ್ ಆಫ್ ಗಿವಿಂಗ್ ತಂಡ ವತಿಯಿಂದ ಮಾತನಾಡಿದ ಭವ್ಯ ಪುಣ್ಯಕ್ಷೇತ್ರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಪರಿಸರವನ್ನು ಅತ್ಯಂತ ಸ್ವಚ್ಛವಾಗಿ ಇಡಬೇಕಾಗಿರೋದು ಎಲ್ಲರ ಕರ್ತವ್ಯವಾಗಿರುತ್ತದೆ. ಪ್ಲಾಸ್ಟಿಕ್ ಕವರ್ ಮತ್ತು ಪ್ಲಾಸ್ಟಿಕ್ ಬಾಟಲ್ ಗಳು ಮಣ್ಣಿನಲ್ಲಿ ಕೊಳೆಯುವ ವಸ್ತುಗಳಲ್ಲಿ ಅದರಿಂದ ಪಶು ಪ್ರಾಣಿ ಪಕ್ಷಿಗಳ ಜೀವ ಹಾನಿ ಆಗುವುದು ಹೆಚ್ಚಾಗುತ್ತಿದ್ದು ಬುದ್ದುವಂತರಾದ ನಾವುಗಳು ತುಂಬಾ ಎಚ್ಚರವಹಿಸಬೇಕಿದೆ ಎಂದರು. ವರದಿ: ಮಂಜುಸ್ವಾಮಿ…
ತುಮಕೂರು: ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಮಲಗೋನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಹಕಾರಿ ತತ್ವಗಳಿಗೆ ವಿರುದ್ಧವಾಗಿ ಗ್ರಾಮ ಸಭೆ ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ಅಧಿಕಾರಿಗಳ ಏಕಪಕ್ಷೀಯ ನಿರ್ಧಾರದಿಂದಾಗಿ ಎರಡು ಮೂರು ತಂಡಗಳಾಗಿ ವಿಂಗಡನೆಯಾಗಿರುವ ಸದಸ್ಯರ ನಡುವೆ ಜಟಾಪಟಿ ನಡೆದ ಘಟನೆ ನಡೆದಿದೆ. ನರಸಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಉಪ ಕೇಂದ್ರ ಮಲಗೋನಹಳ್ಳಿ ಗ್ರಾಮದಲ್ಲಿ ಕಾನೂನು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಇಲ್ಲಿ ಒಂದು ಹಾಲು ಉತ್ಪಾದಕರ ಸಹಕಾರಿ ಸಂಘವನ್ನು ನೋಂದಣಿ ಮಾಡಿಸಲು ಒಂದು ತಂಡ ಪ್ರಯತ್ನಿಸುತ್ತಿದ್ದು, ರಾಜಕೀಯ ಕಾರಣಗಳಿಂದ ಈಗಾಗಲೇ ಎರಡು ಮೂರು ತಂಡಗಳಾಗಿ ವಿಂಗಡನೆಯಾಗಿರುವ ಗ್ರಾಮಸ್ಥರ ನಡುವೆ ಇದು ಅಶಾಂತಿ ಸೃಷ್ಟಿಗೆ ಕಾರಣವಾಗಿದೆ. ಕಾನೂನು ಬಾಹಿರವಾಗಿ ಹಾಲು ಉತ್ಪಾದಕರ ಸಹಕಾರಿ ಸಂಘದ ನೋಂದಣಿ ಮಾಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಚಾರ ತಿಳಿದು ಗ್ರಾಮಸ್ಥರು ಸಂಬಂಧಪಟ್ಟ ಕೆಎಂಎಫ್ ತುಮುಲ್ ಅಧಿಕಾರಿಗಳಿಗೆ ಹಾಗೂ ಸಹಕಾರಿ ಸಂಘಗಳ ನೋಂದಣಿ ಅಧಿಕಾರಿಗಳಿಗೆ ಈ ವಿಚಾರವಾಗಿ ಹಲವು…
ನವದೆಹಲಿ: ದೆಹಲಿಯಲ್ಲಿ ಶನಿವಾರ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಸಮಾವೇಶದ ನಡೆದಿದ್ದು ಪ್ರಧಾನಿ ನರೇಂದ್ರ ಮೋದಿ ಜನರಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಗೆ 370 ಕೇವಲ ಒಂದು ಅಂಕಿ ಅಂಶವಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿಜಯ ಸಾಧಿಸುವ ಗುರಿಯನ್ನು ಇಡಬೇಕು ಆದರೆ ಇದು ಕೇಸರಿ ಸಿದ್ಧಾಂತಕ್ಕೆ ಗೌರವ ಸಲ್ಲಿಸುವ ಮಾರ್ಗವಾಗಿದೆ ಎಂದರು. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಕಳೆದುಕೊಂಡ 161 ಸ್ಥಾನಗಳನ್ನು ಪರಿಗಣಿಸಿ, ನಾಯಕರು ಖುದ್ದಾಗಿ ಭೇಟಿ ನೀಡಿ ಸಾರ್ವತ್ರಿಕ ಚುನಾವಣೆಗೆ ಮುನ್ನ ಸುಮಾರು 430 ಸ್ಥಾನಗಳಲ್ಲಿ ಆಸರೆಯಾಗಿದ್ದಾರೆ ಎಂದು ನಡ್ಡಾ ಸಮಾವೇಶದಲ್ಲಿ ಹೇಳಿದರು. ಈ ಬಾರಿ ಈ ಎಲ್ಲಾ ಸ್ಥಾನಗಳಲ್ಲಿ ತಮ್ಮ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಿಳೆಯರು ಬಿಜೆಪಿಗೆ ಕೇವಲ ಮತದಾರರಲ್ಲ, ಆದರೆ ಎನ್ಡಿಎ ಸರ್ಕಾರವು ಅವರಿಗೆ ಮಾಡಿದ ಕೆಲಸವನ್ನು ಬೆಂಬಲಿಸುವ ಮತ್ತು ಅಂಗೀಕರಿಸುವ ಮೂಲಕ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಮೇಲೆ ಚುನಾವಣಾ ಆಶೀರ್ವಾದವನ್ನು ನೀಡುವ ‘ತಾಯಿ ಮತ್ತು ಸಹೋದರಿಯರು’ ಎಂದು ಪ್ರಧಾನಿ…
ಬೆಂಗಳೂರು: ಸಂವಿಧಾನವೇ ನಮ್ಮ ಧರ್ಮ ಗ್ರಂಥ, ಬಿಜೆಪಿಯವರು ಹಾಗೂ ಹಿಂದುತ್ವವಾದಿಗಳು ಹೇಳುವ ಗ್ರಂಥ ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತ ಸಂವಿಧಾನ ಹಾಗೂ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಅವರು, ಸಂವಿಧಾನದಲ್ಲಿ ಕೆಲವರಿಗೆ ನಂಬಿಕೆ, ಗೌರವ ಇಲ್ಲ. ಅವರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ ಅಂತೇನಿಲ್ಲ, ಗೊತ್ತಿದ್ದೂ ದಾರಿ ತಪ್ಪಿಸುತ್ತಿದ್ದಾರೆ. ಯಾರು ದಾರಿ ತಪ್ಪಿಸುತ್ತಿದ್ದಾರೆ ಎಂದು ನನ್ನ ಬಾಯಿಯಿಂದ ಹೇಳಿಸಬೇಡಿ ಎಂದಿದ್ದಾರೆ. ಶುಕ್ರವಾರ ಮಂಡನೆಯಾದ ಬಜೆಟ್‍ನ ಮೊದಲ ಪುಟದಲ್ಲೇ ಸಂವಿಧಾನದ ಪೀಠಿಕೆಯಲ್ಲಿ ಹಾಕಿಸಲಾಗಿದೆ. ಇದು ಇತಿಹಾಸಲ್ಲೇ ಮೊದಲ ಬಾರಿಗೆ ಬಜೆಟ್‍ನಲ್ಲಿ ಸಂವಿಧಾನದ ಪೀಠಿಕೆ ಉಲ್ಲೇಖ ಆಗಿರುವುದು. ಜನರಿಗೆ ಸಂವಿಧಾನದ ಮಹತ್ವ ಅರ್ಥ ಆಗಬೇಕು. 75 ವರ್ಷ ಆದರೂ ಇನ್ನೂ ಕೂಡ ಎಲ್ಲರಿಗೂ ಸಂವಿಧಾನದ ಹಕ್ಕುಗಳು ಸಿಕ್ಕಿಲ್ಲ. ಸಂವಿಧಾನಕ್ಕೆ ಯಾರೇ ಧಕ್ಕೆ ತರುವ ಪ್ರಯತ್ನ ಮಾಡಿದ್ರೂ ಜನರು ಅದನ್ನು ವಿಫಲಗೊಳಿಸಬೇಕು ಎಂದಿದ್ದಾರೆ. ರಾಜಕೀಯ, ಸಾಮಾಜಿಕ ಅಸಮಾನತೆ ಇನ್ನೂ ಹೋಗಿಲ್ಲ, ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಜಾಗೃತಿ ಎಲ್ಲರಲ್ಲೂ ಬರಬೇಕು. ಸಂವಿಧಾನ ಏನ್ ಹೇಳುತ್ತೆ ಎಂದು ಎಲ್ಲರಿಗೂ…