Subscribe to Updates
Get the latest creative news from FooBar about art, design and business.
- ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
- ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
- ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
- ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
Author: admin
ತುಮಕೂರು: ತುಮಕೂರಿನ ಕಾಳಜಿ ಪೌಂಡೇಶನ್ ತಂಡದ ಸದಸ್ಯರು ಇಂದು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿಗೆ ಭೇಟಿ ನೀಡಿ, ಇಲ್ಲಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳನ್ನು ಮಾತನಾಡಿಸಿ ಕಾಲೇಜಿನ ಕುಂದುಕೊರತೆಗಳ ಕುರಿತು ಮಾಹಿತಿ ಪಡೆದುಕೊಂಡರು. ತುಮಕೂರು ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಪ್ರಾರಂಭವಾಗಿ 30 ವರ್ಷಗಳು ಕಳೆದರೂ ಅಗತ್ಯ ಶೈಕ್ಷಣಿಕ ಸೌಕರ್ಯಗಳಿಂದ ವಂಚಿತವಾಗಿರುವುದು ತುಂಬ ನೋವಿನ ಸಂಗತಿಯಾಗಿದೆ. ಈ ಕಾಲೇಜಿನಲ್ಲಿ ಕಲಿತ ಶೇ.90ರಷ್ಟು ವಿದ್ಯಾರ್ಥಿಗಳು ಸರ್ಕಾರಿ/ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಚಿತ್ರಕಲಾ ಶಿಕ್ಷಕರಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳು ಈ ಕಾಲೇಜಿನಿಂದ ಪಡೆದ ಕಲಾ ಶಿಕ್ಷಣದ ಕೌಶಲ್ಯಗಳಿಂದ ಸ್ವತಂತ್ರ ಉದ್ಯೋಗ ಮಾಡುತ್ತಿದ್ದಾರೆ ಎಂಬುದು ಸಂತಸದ ಸಂಗತಿಯಾಗಿದೆ. ಅಂದರೆ ಶೇ.100ರಷ್ಟು ವಿದ್ಯಾರ್ಥಿಗಳು ನಿರುದ್ಯೋಗ ಭೀತಿಯಿಂದ ಹೊರಗುಳಿದಿದ್ದಾರೆ. ಈ ಕಾಲೇಜಿನಲ್ಲಿ ಕಲಿಸಲಾಗುವ ಬಿ.ವಿ.ಎ ದೃಶ್ಯಕಲಾ ಪದವಿ ಪಡೆದ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿರುವ ಯಾವ ಉದಾಹರಣೆಗಳಿರುವುದಿಲ್ಲ ಎಂಬುದು ಸ್ಪಷ್ಟವಾಗುತ್ತದೆ. 30 ವರ್ಷಗಳಿಂದ ಈ ಕಾಲೇಜಿಗೆ ಸ್ವಂತ ನಿವೇಶನ ಮಂಜೂರು ಮಾಡದೆ ಇರುವುದು ಮತ್ತು ಸ್ವತಂತ್ರ…
ಕೆಟ್ಟ ಕೊಲೆಸ್ಟ್ರಾಲ್ ನಿಂದಾಗಿ ಹೃದಯಕ್ಕೂ ತೊಂದರೆ ಅಲ್ಲದೆ ಒಳಗಿರುವ ಇನ್ನಿತರ ಪ್ರಮುಖ ಅಂಗಾಂಗ ಗಳಿಗೂ ಸಮಸ್ಯೆ! ಆದರೆ ಈ ಸಮಸ್ಯೆಯಿಂದ ದೂರವಿರಬೇಕು ಎಂದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡಬೇಕು. ನೆನೆಸಿಟ್ಟ ಬಾದಾಮಿ: ಬಾದಾಮಿ ಬೀಜಗಳನ್ನು ಪ್ರತಿದಿನ ನೆನೆ ಸಿಟ್ಟು ನಾಲ್ಕೈದು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆ ಯಲ್ಲಿ ಸೇವನೆ ಮಾಡುವುದರಿಂದ ಹೃದಯಕ್ಕೆ ತುಂಬಾ ಒಳ್ಳೆ ಯದು ಎಂದು ಹೇಳುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಬಲ್ಲದು. ಇದರಿಂದ ಹೃದಯದ ಮೇಲಿನ ಒತ್ತಡವೂ ಕೂಡ ಕಡಿಮೆಯಾ ಗುತ್ತದೆ ತನ್ಮೂಲಕ ಹೃದಯದ ಕ್ಷಮತೆ ಮತ್ತು ಆರೋಗ್ಯ ಎರಡೂ ಹೆಚ್ಚುತ್ತವೆ. ಖರ್ಜೂರ: ನೈಸರ್ಗಿಕ ಸಿಹಿ ಅಂಶಗಳನ್ನು ಒಳಗೊಂಡಿರುವ ಖರ್ಜೂರ ಗಳನ್ನು ಹಸಿಯಾಗಿ ಸೇವನೆ ಮಾಡಬಹುದು, ಇಲ್ಲಾಂದ್ರೆ ಒಣ ಖರ್ಜೂರಗಳನ್ನು ನೆನೆಸಿಟ್ಟು ಬೆಳಗ್ಗೆ ಖಾಲಿ ಹೊಟ್ಟೆಗೆ ತಿನ್ನುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಅಧಿಕ ಪ್ರಮಾಣದ ನಾರಿನಾಂಶ, ದೇಹದ ಜೀರ್ಣಶಕ್ತಿಯನ್ನು ಹೆಚ್ಚಿಸುವಲ್ಲಿ ಹಾಗೂ…
ಅಮೃತಸರ: ಕಿರುತೆರೆ ನಟಿ ಮತ್ತು ನಿರ್ಮಾಪಕಿ ಕವಿತಾ ಚೌಧರಿ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾದರು. ದೂರದರ್ಶನದ ಉಡಾನ್ನಲ್ಲಿ ಐಪಿಎಸ್ ಅಧಿಕಾರಿ ಪಾತ್ರದಲ್ಲಿ ಹೆಸರುವಾಸಿಯಾದ ದೂರದರ್ಶನ ನಟಿ ಕವಿತಾ ಚೌಧರಿ ಅವರು, ಹೃದಯಾಘಾತದಿಂದ ಗುರುವಾರ ಕವಿತಾ ಅಮೃತಸರದಲ್ಲಿ ಕೊನೆಯುಸಿರೆಳೆದರು. ಕವಿತಾ ಅವರು ದೂರದರ್ಶನದಲ್ಲಿ ಹಲವಾರು ಟಿವಿ ಶೋಗಳಲ್ಲಿ ನಟಿಸಿದ ಜನಪ್ರಿಯತೆಯನ್ನು ಗಳಿಸಿದರು. ಅವರು ಯುವರ್ ಆನರ್, ಅಪ್ರಾಧಿ ಕೌನ್!, ಮತ್ತು IPS ಡೈರೀಸ್ನಂತಹ ಕಾರ್ಯಕ್ರಮಗಳ ಭಾಗವಾಗಿದ್ದರು. ಕವಿತಾ ಅವರು ಪೊಲೀಸ್ ಅಧಿಕಾರಿ ಕಾಂಚನ್ ಚೌಧರಿ ಭಟ್ಟಾಚಾರ್ಯ ಅವರ ಕಿರಿಯ ಸಹೋದರಿಯಾಗಿದ್ದರು. ಅವರು ಭಾರತದಲ್ಲಿ ಭಾರತೀಯ ಪೊಲೀಸ್ ಸೇವೆಯಲ್ಲಿ ಎರಡನೇ ಮಹಿಳಾ ಅಧಿಕಾರಿಯಾಗಿದ್ದರು.
ಹೆಚ್ಚಿನರಿಗೆ ಊಟ ಹೊಟ್ಟೆ ತುಂಬಿದ ತೃಪ್ತಿ ಸಿಗಬೇಕೆಂದರೆ ಸ್ವಲ್ಪ ಮೊಸರನ್ನ ತಿನ್ನಲೇಬೇಕು. ಇನ್ನೂ ಕೆಲವರು ರಾತ್ರಿ ಊಟಕ್ಕೆ ಮೊಸರು ಬಳಸುವುದಿಲ್ಲ, ರಾತ್ರಿ ಮೊಸರು ಬಳಸಿದರೆ ಕಫ ಆಗುತ್ತದೆ ಎಂದು ಹೇಳುತ್ತಾರೆ. ರಾತ್ರಿ ಊಟಕ್ಕೆ ಮೊಸರು ಬಳಸಬಹುದೇ? ಇದರ ಕುರಿತು ಆಯುರ್ವೇದ ಏನು ಹೇಳುತ್ತದೆ ಎಂದು ನೋಡೋಣ ಬನ್ನಿ: ರಾತ್ರಿ ವೇಳೆ ಊಟಕ್ಕೆ ಮೊಸರು ಸೇವನೆ ಮಾಡಲೇಬಾರದು ಎಂದು ಹೇಳಲಾಗುತ್ತದೆ. ಅದರಲ್ಲೂ ಅಸ್ತಮಾ ಮತ್ತು ಮೂಳೆ ಸಮಸ್ಯೆ ಇರುವಂತಹ ಜನರು ಮೊಸರನ್ನು ರಾತ್ರಿ ವೇಳೆ ಸೇವಿಸಲೇಬಾರದು. ಆಯುರ್ವೇದದ ಪ್ರಕಾರ ರಾತ್ರಿ ಹೊತ್ತು ಮೊಸರು ತಿನ್ನುವುದು ಆರೋಗ್ಯಕ್ಕೆ ಅಷ್ಟು ಒಳ್ಳೆಯದಲ್ಲ. ಮೊಸರು ಹುಳಿ ಮತ್ತು ಸಿಹಿ ಮಿಶ್ರಿತ. ಇದನ್ನು ರಾತ್ರಿ ಹೊತ್ತು ತಿನ್ನುವುದರಿಂದ ಕೆಲವರಿಗೆ ಕಫ ಆಗುವುದು. ಯಾರಿಗೆ ಬೇಗನೆ ಶೀತ, ಕಫ ಸಮಸ್ಯೆ ಬರುತ್ತದೋ ಅವರು ಮೊಸರನ್ನು ರಾತ್ರಿ ಹೊತ್ತು ಮೊಸರು ತಿನ್ನದಿರುವುದು ಒಳ್ಳೆಯದು. ಮೊಸರಿನಲ್ಲಿ ಕ್ಯಾಲ್ಸಿಯಂ, ಪೋಸ್ಪರಸ್ ಮತ್ತು ಇತರ ಕೆಲವೊಂದು ಖನಿಜಾಂಶಗಳು ಇವೆ. ಇದು ಮೂಳೆ ಹಾಗೂ ಹಲ್ಲುಗಳಿಗೆ ಅಗತ್ಯವಾಗಿ…
ಅಹ್ಮದೀಯ ತತ್ವ ಪ್ರಚಾರದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಮುಸ್ಲಿಮ್ ಗುಂಪುಗಳ ನಡುವೆ ಕಿತ್ತಾಟ ನಡೆದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ದೇವತಗಲ್ ಗ್ರಾಮದಲ್ಲಿ ವಿಜಯನಗರ ಜಿಲ್ಲೆಯಿಂದ ಬಂದಿದ್ದ ಮೌಲ್ವಿಗಳು ಅಹ್ಮದೀಯ ತತ್ವದ ಬಗ್ಗೆ ಪ್ರಚಾರ ಮಾಡಿದ್ದಾರೆ. ಅಹ್ಮದಿ ಮಸೀದಿಯಲ್ಲಿ ಮುಸ್ಲಿಮರಿಗೆ ಧರ್ಮದ ಆಚರಣೆ ಬಗ್ಗೆ ಪ್ರವಚನ ನೀಡಿದ್ದಾರೆ. ಪ್ರವಚನದಿಂದ ಆಕ್ರೋಶಗೊಂಡ ಮುಸ್ಲಿಂ ಧರ್ಮದ ಉಳಿದ ಪಂಗಡದ ಮುಖಂಡರು ಅಹ್ಮದೀಯ ಪಂಗಡ ತತ್ವ ಪ್ರಚಾರ ನಡೆಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ನೀವು ಮುಸ್ಲಿಮರೇ ಅಲ್ಲ ನಿಮ್ಮ ತತ್ವ ಪ್ರಚಾರ ಮಾಡಬೇಡಿ ಎಂದು ಗಲಾಟೆ ಮಾಡಿದ್ದಾರೆ. ಘಟನೆಯಲ್ಲಿ ಸಾದತ್ ಅಹಮದ್, ಸೈಯದ್ ಪಹೀಮ್, ಖಾಜಿ ಮೊಹಮದ್ ರಫಿ ಸೇರಿ ಆರು ಜನರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಲಾಗಿದೆ ಎಂದು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯಬಜೆಟ್ ಮಂಡನೆ ಮಾಡುತ್ತಿದ್ದಾಗ, ಗ್ಯಾರಂಟಿ ಯೋಜನೆಗಳನ್ನ ಟೀಕಿಸಿದ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಕೇಂದ್ರ ಮಾಡದ ಕೆಲಸ ನಾವು ಮಾಡಿದ್ದೇವೆ. ಗ್ಯಾರಂಟಿ ಯೋಜನೆಯಿಂದ ನಮ್ಮತ್ತ ಮೆಚ್ಚುಗೆ ಬಂದಿದೆ. ಮಹಿಳೆಯರು ಯುವಕರಿಂದ ಗ್ಯಾರಂಟಿ ಮೇಲೆ ನಂಬಿಕೆ ಬಂದಿದೆ. ನಮ್ಮ ಗ್ಯಾರಂಟಿ ಕದ್ದು ಅವರ ಗ್ಯಾರಂಟಿ ಎಂದು ಬಿಂಬನೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದರು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ, ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ…
ಕೇಂದ್ರದ ವಿರುದ್ಧ ಅಜಯ್ ಮಾಕನ್ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದೆ ಎಂದು ಆರೋಪಿಸಲಾಗಿದೆ. ಕಾಂಗ್ರೆಸ್ ನೀಡಿದ ಚೆಕ್‌ಗಳನ್ನು ಬ್ಯಾಂಕ್ ಗಳು ಸ್ವೀಕರಿಸುವುದಿಲ್ಲ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿದರು. ಕೇಂದ್ರ ಪ್ರಜಾಪ್ರಭುತ್ವವನ್ನು ಹೆಪ್ಪುಗಟ್ಟಿದೆ. ನಿನ್ನೆಯಿಂದ ಯುವ ಕಾಂಗ್ರೆಸ್ ಖಾತೆಗಳನ್ನೂ ಸ್ಥಗಿತಗೊಳಿಸಲಾಗಿದೆ. ಯುವ ಕಾಂಗ್ರೆಸ್ ಸದಸ್ಯತ್ವ ಶುಲ್ಕ ಖರೀದಿಸಿದ ಖಾತೆಯನ್ನೂ ಸ್ಥಗಿತಗೊಳಿಸಲಾಗಿದೆ. ಆದಾಯ ತೆರಿಗೆ ಇಲಾಖೆ 210 ಕೋಟಿ ರೂ. ಆ ಹಣ ಕಾರ್ಪೊರೇಟ್ ಫಂಡಿಂಗ್ ಅಲ್ಲ. ಕ್ರೌಡ್ ಫಂಡಿಂಗ್ ಮೂಲಕ ಹಣ ಸಂಗ್ರಹಿಸಲಾಗಿದೆ. 2018-19ರ ಆದಾಯ ತೆರಿಗೆ ಇಲಾಖೆ ರಿಟರ್ನ್ಸ್‌ಗಳ ಹಿನ್ನೆಲೆಯಲ್ಲಿ ಚುನಾವಣೆಯ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕಾಂಗ್ರೆಸ್ ಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ನವದೆಹಲಿ: ಗುರುವಾರ ತಡರಾತ್ರಿ ಪೇಂಟ್ ತಯಾರಿಕಾ ಕಾರ್ಖಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿಯ ಆಲಿಪುರದ ದಯಾಲ್‌ಪುರದಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಿಂದ ಬೆಂಕಿ ಹೊತ್ತಿಕೊಂಡಿದ್ದು ಸ್ಫೋಟದಿಂದಾಗಿ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಲ್ಲಿಸುಟ್ಟು ಕರಕಲಾದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ., ಇನ್ನೂ ಕೆಲವರು ನಾಪತ್ತೆಯಾಗಿರುವ ಸಾಧ್ಯತೆ ಇದೆ. ಹಾಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಸಿಬ್ಬಂದಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನುಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿ: ಗುರುವಾರ ತಡರಾತ್ರಿ ಪೇಂಟ್ ತಯಾರಿಕಾ ಕಾರ್ಖಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿಯ ಆಲಿಪುರದ ದಯಾಲ್‌ಪುರದಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಿಂದ ಬೆಂಕಿ ಹೊತ್ತಿಕೊಂಡಿದ್ದು ಸ್ಫೋಟದಿಂದಾಗಿ ಕೆಲವು ಮನೆಗಳು ಮತ್ತು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.…
ರಾಯಚೂರು: ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಹಿರೇಹುಸೇನಪ್ಪ(18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಿರೇಹುಸೇನಪ್ಪ ಅಂಬೇಡ್ಕರ್ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದ. ವಸತಿ ನಿಲಯದ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಸೇರಿ ಹಿರೇಹುಸೇನಪ್ಪನ ವಿರುದ್ಧ ಉಳಿದ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ಕಿರುಕುಳ ನೀಡಿ, ಜಾತಿನಿಂದನೆ ಮಾಡುತ್ತಿದ್ದರು. ಎಂಬ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯು ವಸತಿ ನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನಿಸಿದ್ದನು. ಅದಕ್ಕೆ ಆತನಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಬಂದಿದೆ. ಇದರಿಂದ ಮನನೊಂದು ವಿದ್ಯಾರ್ಥಿ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ತಿರುಪತಿ: ಸಿಂಹದೊಂದಿಗೆ ಸೆಲ್ಫಿ ಕ್ಲಿಕಿಸಲು ಹೋಗಿ ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ತಿರುಪತಿ ಮೃಗಾಲಯದಲ್ಲಿ ನಡೆದಿದೆ. ಮೃತನನ್ನು ರಾಜಸ್ಥಾನದ ಪ್ರಹ್ಲಾದ್ ಗುರ್ಜರ್ (38) ಎಂದು ಗುರುತಿಸಲಾಗಿದೆ. ವ್ಯಕ್ತಿ ಮದ್ಯಪಾನದ ಅಮಲಿನಲ್ಲಿದ್ದು, ಮೃಗಾಲಯ ಕೇರ್ ಟೇಕರ್ ನ ಎಚ್ಚರಿಕೆಯನ್ನು ನಿರ್ಲಕ್ಷಿಸಿ, ನಾಲ್ಕು ಅಡಿಯ ಸುರಕ್ಷತಾ ಗೋಡೆಯನ್ನು ಹಾರಿ ಸಿಂಹದ ಗುಹೆಗೆ ಪ್ರವೇಶಿಸಿದ್ದಾನೆ. ಪ್ರಹ್ಲಾದ್ ಸಿಂಹದ ಗುಹೆಗೆ ಬೀಳುತ್ತಿದ್ದಂತೆ ಸಿಂಹ ಆತನ ಮೇಲೆ ದಾಳಿ ಮಾಡಿದ್ದು ಆತನನ್ನು ಸಿಂಹದ ದಾಳಿಯಿಂದ ತಪ್ಪಿಸಲು ಮೃಗಾಲಯದ ಸಿಬ್ಬಂದಿಗಳು ಹರಸಾಹಸವೇ ಪಟ್ಟಿದ್ದಾರೆ. ಕೊನೆಗೆ ಸಿಂಹವನ್ನು ಪಂಜರದಲ್ಲಿ ಬಂಧಿಸಿದ ಬಳಿಕ ಪ್ರಹ್ಲಾದ್ ನನ್ನು ಸಿಂಹದ ಬಾಯಿಯಿಂದ ರಕ್ಷಿಸಿದ್ದಾರೆ. ಆದರೆ ತೀವ್ರವಾಗಿ ಗಾಯಗೊಂಡ ಪರಿಣಾಮ ಪ್ರಹ್ಲಾದ್ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗುಜ್ಜರ್ ಏಕಾಂಗಿಯಾಗಿ ಮೃಗಾಲಯಕ್ಕೆ ಭೇಟಿ ನೀಡುತ್ತಿದ್ದು, ಅಧಿಕಾರಿಗಳು ಅವರ ಕುಟುಂಬವನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೃಗಾಲಯದ ಕ್ಯುರೇಟರ್ ಸಿ ಸೆಲ್ವಂ ಹೇಳಿದ್ದಾರೆ.