Subscribe to Updates
Get the latest creative news from FooBar about art, design and business.
- ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
- ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
- ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
- ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
Author: admin
ಭಾರತದಿಂದ ಚೀನಾಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 28 ಲಕ್ಷ ನವಿಲು ಗರಿಗಳನ್ನು ಮುಂಬೈ ವಲಯದ ಕಳ್ಳಸಾಗಣೆ ನಿಗ್ರಹ ದಳವಾದ ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಮುಂಬೈನ ಜವಾಹರಲಾಲ್ ನೆಹರು ಬಂದರು ಅಥಾರಿಟಿ ಮೂಲಕ “ಡೋರ್ ಮ್ಯಾಟ್ ತೆಂಗಿನ ನಾರು” ಎಂದು ಸುಳ್ಳು ಹೇಳಿ ನವಿಲುಗರಿಯನ್ನು ರಫ್ತು ಮಾಡಲು ಬಂಡಲ್ ಮಾಡಿ ಇಡಲಾಗಿತ್ತು ಎನ್ನಲಾಗಿದೆ. ಆದರೆ ಡಿಆರ್ ಐಗೆ ಲಭಿಸಿದ ಮಾಹಿತಿ ಮೇರೆಗೆ ಸರಕು ರವಾನೆಯನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅಂದಾಜು 28 ಲಕ್ಷ ನವಿಲು ಗರಿ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 1962ರ ಕಸ್ಟಮ್ಸ್ ಕಾಯ್ದೆಯ ಸೆಕ್ಷನ್ 110ರ ಅನ್ವಯ ಸುಮಾರು 2.10 ಕೋಟಿ ರೂಪಾಯಿ ಮೌಲ್ಯದ ನವಿಲುಗರಿಯನ್ನು ವಶಪಡಿಸಿಕೊಳ್ಳಲಾಗಿದೆ. 1972ರ ವನ್ಯಜೀವಿ ರಕ್ಷಣಾ ಕಾಯ್ದೆಯ ಶೆಡ್ಯೂಲ್ 2ರ ಪ್ರಕಾರ ನವಿಲುಗರಿ ರಫ್ತು ನಿಷೇಧಿಸಲಾಗಿತ್ತು. ನವಿಲು ಗರಿ ಕಳ್ಳಸಾಗಣೆ ಮಾಡುತ್ತಿರುವುದನ್ನು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟಿಯನ್ ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿರುವುದಾಗಿ…
ಏನೂ ಅರಿಯದ ಕಂದಮ್ಮಗಳ ಮೇಲೂ ಕಾಮ ಪಿಶಾಚಿಗಳು ಎರಗುತ್ತಾರಂದ್ರೆ ಕಾನೂನಿನ ಬಿಸಿ ತಟ್ಟದ ಪರಿಣಾಮವೋ ಏನೋ.. ಹೌದು, ಮೂರು ವರ್ಷದ ಮುಗ್ದ ಬಾಲಕಿ ಮೇಲೆ ಇಲ್ಲೊಬ್ಬ ಕಾಮುಕ ಅತ್ಯಾಚಾರ ನಡೆಸಿರುವ ಘಟನೆ ಮಡಿಕೇರಿಯ ಅರೆಕಾಡು ಗ್ರಾಮ ವ್ಯಾಪ್ತಿಯ ಖಾಸಗಿ ಸಂಸ್ಥೆಯ ತೋಟದಲ್ಲಿ ನಡೆದಿದೆ. ತೋಟಕ್ಕೆ ಕಾಫಿ ಕೊಯ್ಯಲೆಂದು ಬಂದಿದ್ದ ಅಸ್ಸಾಂನ ಕಾರ್ಮಿಕ ದಂಪತಿಯ ಏಕಮಾತ್ರ ಪುತ್ರಿ ಮೇಲೆ ಅದೇ ತೋಟದ ವಾಹನದ ಚಾಲಕ ಎರವರ ಮಣಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಮಗುವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಾಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಮಿಕ ವರ್ಗ ಸಿದ್ದಾಪುರ ಪೊಲೀಸ್ ಠಾಣೆ ಎದುರು ಜಮಾಯಿಸಿ ಚಾಲಕನ ಕೃತ್ಯವನ್ನು ಖಂಡಿಸಿದ್ದಾರೆ.
ಬೆಂಗಳೂರು: ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್ ಮಾಡುತ್ತಿರುವ ಖಾಸಗಿ ವಾಹನ ಸವಾರರಿಗೆ ಸಂಚಾರಿ ಪೊಲೀಸರು ದಂಡ ವಿಧಿಸುವ ಮೂಲಕ ಶಾಕ್ ನೀಡಿದ್ದಾರೆ. ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ನಡೆಸಲಾದ ಕಾರ್ಯಾಚರಣೆಯಲ್ಲಿ ಒಟ್ಟು 456 ಪ್ರಕರಣ ದಾಖಲಿಸಲಾಗಿದ್ದು, 2,54,500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. 89 ಕಾರು ಚಾಲಕರಿಂದ 44,500, 54 ರೂ. ಆಟೋ ಚಾಲಕರಿಗೆ 27 ಸಾವಿರ ರೂ. 88 ಬೈಕ್ ಸವಾರರಿಂದ 44 ಸಾವಿರ ರೂ, 62 ಕ್ಯಾಬ್ ಚಾಲಕರಿಂದ 32,500 ರೂ. ಸೇರಿದಂತೆ 160 ಇತರೆ ವಾಹನ ಸವಾರರಿಂದ 80 ಸಾವಿರ ರೂಪಾಯಿ ದಂಡ ಸಂಗ್ರಹ ಮಾಡಲಾಗಿದೆ. ಬಸ್ ನಿಲ್ದಾಣಗಳಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಟ್ರಾಫಿಕ್ ಹೆಚ್ಚಾಗುತ್ತಿತ್ತು. ಇದೀಗ ನಡೆಸಲಾದ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲೂ ಪೊಲೀಸರು ಕಾರ್ಯಾಚರಣೆ ಮುಂದುವರಿಸಲು ಚಿಂತನೆ ನಡೆಸಿದ್ದಾರೆನ್ನಲಾಗಿದೆ.
ಬೆಂಗಳೂರು: ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದರೂ ಕೇಂದ್ರದಲ್ಲಿರುವ ಸಚಿವರು, ಸಂಸದರು ಮೌನವಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ಟ್ವಿಟರ್ ನಲ್ಲಿ ನಡೆದ ನಮ್ಮ ಹಕ್ಕುಗಳು ನಮ್ಮ ತೆರಿಗೆಗಳು ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡುತ್ತಿದ್ದರು. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಶೇ.4.71ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ ಶೇ.3.64ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ ಶೇ.1.07 ನಮಗೆ ಕಡಿತ ಆಗಿ ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದ್ದಿದೆ. ರಾಜ್ಯಕ್ಕೆ 1,87000 ಕೋಟಿ ನಷ್ಟ ಆಗಿದೆ ಎಂದರು. ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ಸಿಎಂ ಇದೇ ವೇಳೆ ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು: ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. 2024ರ ತಿದ್ದುಪಡಿ ಮಸೂದೆ ಇದಾಗಿದ್ದು, ವಾಣಿಜ್ಯ, ಕೈಗಾರಿಕೆ, ಉದ್ಯಮ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಹೋಟೆಲ್ ಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಲಿದೆ. ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ನಿಯಮ ಪಾಲಿಸದಿದ್ದಲ್ಲಿ ಉದ್ಯಮಗಳ ಪರವಾನಗಿ ರದ್ದತಿಗೆ ಕಾರಣವಾಗುತ್ತದೆ ಎಂದು ಸರ್ಕಾರ ಸದನದಲ್ಲಿ ಪ್ರತಿಪಾದಿಸಿದೆ.
ಬೆಂಗಳೂರು: ಅನಾರೋಗ್ಯ ಕಾರಣಗಳಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲೇ ನಿಗಾ ಇರಿಸಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಚಾಮರಾಜನಗರ: ಪತ್ನಿ ‘ಉಪೇಂದ್ರ’ ಚಿತ್ರದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡಿನ ರೀಲ್ಸ್ ಮಾಡಿದ್ದರಿಂದ ನೊಂದ ಪತಿಯೋರ್ವ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಚಾಮರಾಜನಗರದ ಹನೂರು ಪ್ರದೇಶದಲ್ಲಿ ನಡೆದಿದೆ. ಪಿ.ಜಿ.ಪಾಳ್ಯ ಗ್ರಾಮದ ಕುಮಾರ್(34) ಸಾವನ್ನಪ್ಪಿದವರಾಗಿದ್ದಾರೆ. ಕುಮಾರ್ ಅವರ ಪತ್ನಿ ರೂಪಾ ಇತ್ತೀಚಿಗೆ ತಮ್ಮ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದರು. ಈ ರೀಲ್ಸ್ ವಿಚಾರವನ್ನು ಮುಂದಿಟ್ಟುಕೊಂಡು ಕೆಲವರು ಕರಿಮಣಿ ಮಾಲಿಕ ಯಾರು ಅಂತ ಕುಮಾರ್ ಅವರ ಕಾಲೆಳೆದಿದ್ದಾರೆನ್ನಲಾಗಿದೆ. ಇದರಿಂದ ನೊಂದು ಕುಮಾರ್ ಸಾವಿಗೆ ಶರಣಾಗಿದ್ದಾರೆನ್ನಲಾಗಿದೆ. ಸಾವಿಗೂ ಮುನ್ನ ಕುಮಾರ್ ಯಾವುದೇ ಡೆತ್ ನೋಟ್ ಬರೆದಿಲ್ಲ ಎನ್ನಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಪ್ಪರ್ ಭದ್ರಾ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆಯಾಗದಿರುವ ಕುರಿತು ಪ್ರಸ್ತಾಪಿಸಿದರು. ಈ ವೇಳೆ ವಿಕ್ಷಗಳು ಸಿಎಂ ಸುಳ್ಳು ಹೇಳುತ್ತಿದ್ದಾರೆ ಎಂದು ಗದ್ದಲ ಉಂಟು ಮಾಡಿದರು. ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾಗ ಮಂಡಿಸಿದ ಬಜೆಟ್ ನಲ್ಲಿ 5300 ಕೋಟಿ ರೂಪಾಯಿ ಅಪ್ಪರ್ ಭದ್ರಾ ಯೋಜನೆ ಕೊಡುವುದಾಗಿ ಹೇಳಿದ್ದರು. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಆಗಿ ಘೋಷಿಸಲಾಗಿದೆ ಎಂದು ಸಾರಿದರೂ ಇದುವರೆಗೂ ಒಂದೂ ರೂಪಾಯಿಯೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದಾಗ ಸದನ ಕದನ ಭೂಮಿಯಾಗಿ ಪರಿವರ್ತನೆಯಾಯಿತು. ಈ ಯೋಜನೆ ನಿಲ್ಲಬಾರದು ಎಂಬ ಕಾರಣಕ್ಕೆ 1000 ಕೋಟಿ ರೂಪಾಯಿ ರಾಜ್ಯ ಸರ್ಕಾರದಿಂದ ನೀಡಲಾಗಿದೆ. ಕೇಂದ್ರ ಸರ್ಕಾರ ಏಳು ಕೋಟಿ ಕನ್ನಡಿಗರಿಗೆ ಅವಮಾನ ಮಾಡುತ್ತಿದೆ ಎಂದು ಸಿಎಂ ಜರಿದರು. ಮುಖ್ಯಮಂತ್ರಿಯೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಪಕ್ಷಗಳು ಗದ್ದಲ ಎಬ್ಬಿಸಿದವು. ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಸರ್ಕಾರ ವಿಪಕ್ಷಗಳ…
ಒಣಹಣ್ಣುಗಳು ಎಂದರೆ ಡ್ರೈ ಫ್ರೂಟ್ಸ್ ಹಲವು ರೀತಿಯಲ್ಲಿ ಆರೋಗ್ಯಕ್ಕೆ ವರದಾನವಿದ್ದಂತೆ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ಅವುಗಳನ್ನು ಹಾಗೆಯೇ ತಿನ್ನುವುದಕ್ಕಿಂತ ನೆನೆಸಿಟ್ಟು ತಿನ್ನುವುದು ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ ಎಂದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ಸ್ವಲ್ಪ ಸುಸ್ತು, ಬಾಯಾರಿಕೆ ಎಂದಾಗಲೆಲ್ಲಾ ಒಂದೆರಡು ಒಣದ್ರಾಕ್ಷಿಯನ್ನು ಬಾಯಿಗೆ ಒತ್ತರಿಸಿಕೊಳ್ಳುತ್ತೇವೆ. ಆದರೆ, ಇದನ್ನು ಹಾಗೆಯೇ ತಿನ್ನುವುದಕ್ಕಿಂತ ರಾತ್ರಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಆರೋಗ್ಯಕ್ಕೆ ಇನ್ನೂ ಉತ್ತಮ ಎಂದು ಹೇಳಲಾಗುತ್ತದೆ. ಪ್ರೋಟೀನ್, ಫೈಬರ್, ರಂಜಕ ಮತ್ತು ಕಬ್ಬಿಣದ ಅಂಶಗಳಲ್ಲಿ ಸಮೃದ್ಧವಾಗಿರುವ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮೆಮೊರಿ ಪವರ್ ಹೆಚ್ಚಾಗುತ್ತದೆ. ಆರೋಗ್ಯಕ್ಕೆ ವರದಾನವಾಗಿರುವ ಅಂಜೂರವನ್ನು ಕಚ್ಚಾ ಸೇವಿಸುವುದಕ್ಕಿಂತ ಅದನ್ನು ರಾತ್ರಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ರೋಗನಿರೋಧಕ ಶಕ್ತಿಯ ಬಲಗೊಳ್ಳುತ್ತದೆ. ಮಾತ್ರವಲ್ಲ, ಇದು ಮಲಬದ್ಧತೆ ಸಮಸ್ಯೆಗೂ ಉತ್ತಮ ಪರಿಹಾರವಾಗಿದೆ. ಒಮೆಗಾ 3 ಕೊಬ್ಬಿನಾಮ್ಲಗಳ ಸಮೃದ್ಧ ಮೂಲವಾಗಿರುವ ವಾಲ್ನಟ್ನಲ್ಲಿ ವಿಟಮಿನ್ ಇ, ಫೋಲಿಕ್ ಆಮ್ಲ, ಪ್ರೋಟೀನ್ ಮತ್ತು…
ಬೆಂಗಳೂರು: ಬೆಂಗಳೂರಿನ ಯಶವಂತ ಪುರ ಮೆಟ್ರೋ ಸ್ಟೇಷನ್ ಬಳಿ ಬೆಳಗ್ಗೆ 10.30ಕ್ಕೆ ನಡೆದ ಅಪಘಾತದಲ್ಲಿ ಕೆಎಸ್ ಆರ್ ಟಿಸಿ ಬಸ್ಸಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ನಾಗಸಂದ್ರ ನಿವಾಸಿ ರಾಜೇಂದ್ರ(45) ಮೃತ ದುರ್ದೈವಿ. ಬೈಕ್ ನಲ್ಲಿ ಬರುವ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಜೇಂದ್ರ ಅವರು ಎಡಬದಿಯಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದರು. ಆಗ ಬಲಭಾಗದಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ರಾಜೇಂದ್ರ ಅವರು ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಸ್ ನ ಚಕ್ರ ರಾಜೇಂದ್ರ ಅವರ ತಲೆ ಮೇಲೆ ಹರಿದ ಹಿನ್ನಲೆಯಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.