Author: admin

ಇಂದಿನಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ಸಾರ್ವಜನಿಕರಿಗೆ ತೆರೆಯಲಿದೆ. ಬೆಳಿಗ್ಗೆ 6:30 ರಿಂದ ದರ್ಶನ ಪ್ರಾರಂಭವಾಗುತ್ತದೆ. ಪ್ರತಿದಿನ ಒಂದು ಲಕ್ಷ ಜನರು ಭೇಟಿ ನೀಡಬಹುದು ಎಂದು ಅಂದಾಜಿಸಲಾಗಿದೆ. ಯುಪಿ ಪೊಲೀಸರ ವಿಶೇಷ ತಂಡವು ಸಿಆರ್‌ ಪಿಎಫ್‌ ನಿಂದ ದೇವಾಲಯದ ಭದ್ರತೆಯನ್ನು ವಹಿಸಿಕೊಳ್ಳಲಿದೆ. ಪ್ರಾಣ ಪ್ರತಿಷ್ಠೆಗಾಗಿ ಆಹ್ವಾನಿತ ಅತಿಥಿಗಳಿಗೆ ಮಾತ್ರ ನಿನ್ನೆಯ ದರ್ಶನ. ನಿನ್ನೆ ಮಧ್ಯಾಹ್ನ 12.20 ರಿಂದ 12.30ರ ನಡುವೆ ಪ್ರಾಣ ಪ್ರತಿಷ್ಠೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇವಸ್ಥಾನದ ಗರ್ಭಗೃಹದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನೆರವೇರಿತು. ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭವು ಭಾವನಾತ್ಮಕ ಕ್ಷಣವಾಗಿದೆ ಎಂದು ಸಮಾರಂಭದ ನಂತರ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Read More

ಹೆಚ್.ಡಿ.ಕೋಟೆ: ದಲಿತ ಸಂಘರ್ಷ ಸಮಿತಿ ಸರ್ವ ಸದಸ್ಯರ ಸಭೆ ಹೆಚ್ ಡಿ ಕೋಟೆ ತಾಲೂಕಿನ ಅಂಬೇಡ್ಕರ್ ಭವನದಲ್ಲಿ  ನಡೆಯಿತು. ಕಾರ್ಯಕ್ರಮವನ್ನು ವೇದಿಕೆಯ ಗಣ್ಯರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ  ಮಾತನಾಡಿದ ಕೆ.ಎನ್.ಲಿಂಗಪ್ಪ, ಸ್ವಾಭಿಮಾನ ಸಮಾನತೆ ಸ್ವಾವಲಂಬನೆ ಕನಸು ಹೊತ್ತು ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸುತ್ತ ಬಂದಿದೆ,  ಪ್ರಸ್ತುತ ವರ್ತಮಾನದ ಪರಿಸ್ಥಿತಿಯಲ್ಲಿ ಸಂಘಟನೆ ಬಲವರ್ಧನೆ ಆಗಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಸಂಚಾಲಕರದ ಕೋಟೆ ಬೆಟ್ಟಯ್ಯ ಮಾತನಾಡಿ,  ಕೋಮುವಾದಿಗಳು, ಮತ್ತು ಬಂಡವಾಳ ಶಾಹಿಗಳು ಒಡ್ದುವ ಸವಾಲುಗಳಿಗೆ ಪ್ರತ್ಯುತ್ತರ ನೀಡಲು ಕಾರ್ಯಕರ್ತರಲ್ಲಿ ನೈತಿಕತೆ ಬದ್ಧತೆ ದೃಢತೆ ಬೆಳಸಿಕೊಳ್ಳುವುದು ಅತ್ಯವಶ್ಯಕ ಎಂದು ಹೇಳಿದರು ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಹೋಬಳಿ ವಾರು ತಾಲೂಕುವಾರು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹೆಗ್ಗನೂರು ನಿಂಗರಾಜು, ಆಲಗೂಡು ಶಿವಕುಮಾರ್, ಮುತ್ತು, ಸಿದ್ದರಾಜು, ಮಹೇಶ್ ಮಲಾರ, ದಾಸಯ್ಯ, ಪುಟ್ಟರಾಜು, ಸೋಮಸುಂದರ್ ಹಾಗೂ ಸುಮಾರು ಐನೂರಕ್ಕೂ ಅಧಿಕ ಕಾರ್ಯ ಕರ್ತರು,…

Read More

ದೊಡ್ಡಬಳ್ಳಾಪುರ: ಬೈಕ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತವಾಗಿ, ವೃದ್ಧರೊಬ್ಬರು ಗಾಯಗೊಂಡಿರುವ ಘಟನೆ ನಗರದ ಟಿ.ಬಿ. ಸರ್ಕಲ್ ಬಳಿ ನಡೆದಿದೆ. ಹನುಮಂತರಾಯಪ್ಪ(60) ಅಪಘಾತಕ್ಕೆ ಒಳಗಾದ ವ್ಯಕ್ತಿ. ದೊಡ್ಡಬಳ್ಳಾಪುರದ ಕೆಳಗಿನ ಜೂಗಾನಹಳ್ಳಿಯ ನಿವಾಸಿಯಾದ ಇವರು, ದೊಡ್ಡಬಳ್ಳಾಪುರದಿಂದ ದಾಬಸ್‌ ಪೇಟೆ ಕಡೆ ಪ್ರಯಾಣಿಸುವ ವೇಳೆ ಘಟನೆ ನಡೆದಿದೆ. ವೃದ್ಧನ ಕೈ ಕಾಲುಗಳಿಗೆ ಗಾಯಗಳಾಗಿವೆ. ಬೈಕ್ ಮೇಲೆ‌ ಟ್ಯಾಂಕರ್‌ ಹಿಂಬದಿ ಚಕ್ರ ಹರಿದ ಕಾರಣ ಬೈಕ್ ನಜ್ಜುಗುಜ್ಜಾಗಿದ್ದು, ಗಾಯಾಳುವನ್ನು ದೊಡ್ಡಬಳ್ಳಾಪುರದ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆಯ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ರಾಮಮಂದಿರ ಪ್ರತಿಷ್ಠಾಪನೆಗೊಳ್ಳುತ್ತಿರುವ ಈ ಪವಿತ್ರವಾದ ಅಯೋಧ್ಯೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಇಂದು ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದರು. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನಿತರಲ್ಲಿ ನಿಖಿಲ್‌ ಕುಮಾರಸ್ವಾಮಿ ಕೂಡ ಒಬ್ಬರಾಗಿದ್ದಾರೆ. ಜನವರಿ (22) ಆದ ಇಂದು ನಟ ನಿಖಿಲ್‌ ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದೆ. ಶ್ರೀರಾಮ ಜನ್ಮ ಭೂಮಿಯಲ್ಲಿಯೇ ನಿಖಿಲ್ ಕುಮಾರಸ್ವಾಮಿ ಅವರು ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು, ನನ್ನ ಪುಣ್ಯ ಎಂದು ಹೇಳಿದ್ದಾರೆ.

Read More

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿದ್ದು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಮುಂದೆ ಕಾಶಿ, ಮಥುರಾದಲ್ಲೂ ದೇವಾಲಯ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ರಾಮಲಲ್ಲಾ ಮೂರ್ತಿ ಉದ್ಘಾಟನೆಯಾದ ಹಿನ್ನೆಲೆ ಸಾರ್ವಜನಿಕರಿಗೆ ಸಿಹಿ ಹಂಚಿ ನಂತರ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಈ ದಿನ  ನಮ್ಮಲ್ಲರಿಗೂ ಸುದಿನ. ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಾಗಿದೆ. ಮುಂದೆ ಕಾಶಿ ಮಥುರಾದಲ್ಲಿ ದೇವಾಲಯ ನಿರ್ಮಾಣವಾಗಲಿದೆ ಎಂದರು. ಮೋದಿ ವಿಶ್ವನಾಯಕ. ಇಲ್ಲಿ ಸಿಎಂ  ಸಿದ್ದರಾಮಯ್ಯ ಓರ್ವ ಖಳನಾಯಕನ ರೀತಿ ವರ್ತಿಸುತ್ತಿದ್ದಾರೆ.  ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದು ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದರು.

Read More

ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ಇಂದು ನಮ್ಮ ರಾಮ ಬಂದಿದ್ದಾನೆ. ಶ್ರೀರಾಮನ ಆಗಮನದಿಂದ ಇಡೀ ದೇಶದಲ್ಲಿ ಸಂಭ್ರಮ ಮನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು. ಇಂದು ರಾಮಜನ್ಮಭೂಮಿ ಅಯೋಧ್ಯೆ ರಾಮಮಂದಿರದಲ್ಲಿ ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿ ಬಳಿಕ ಸಾರ್ವಜನಿಕ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​ ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು…

Read More

ಭವ್ಯ ಭಾರತಕ್ಕೆ ಸಾಕ್ಷಿಯಾದ 500 ವರ್ಷಗಳ ಹಿಂದೂ ಧರ್ಮದ ಕನಸಾಗಿದ್ದ ಅಯೋಧ್ಯೆಯ ರಾಮಮಂದಿರ ಇಂದು ನನಸಾಗಿ ದೇಶದಲ್ಲೇ ಸಂಭ್ರಮ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಕೊರಟಗೆರೆ ಪಟ್ಟಣದ ಪ್ರತಿ ಗಲ್ಲಿ ಗಲ್ಲಿಯಲ್ಲಿ ಮನೆ ಮನೆಯಲ್ಲಿಯೂ ರಾಮನ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಪ್ರತಿ ದೇವಸ್ಥಾನದಲ್ಲಿ ಬೆಳಗ್ಗಿನಿಂದ ಸಂಜೆವರೆಗೂ ಹೋಮ ಹವನಗಳನ್ನು ಮಾಡುತ್ತಾ ಭಕ್ತರು ರಾಮ ಭಜನೆ ಮಾಡಿದರು. ಕೊರಟಗೆರೆಯ ಪಟ್ಟಣದ ಕನ್ನಿಕ ಪರಮೇಶ್ವರಿ ಸಮುದಾಯ ಭವನದಲ್ಲಿ ಹಾಗೆಯೇ ಪಟ್ಟಣದ ಎಚ್ ಎಸ್ ಆರ್ ಸರ್ಕಲ್ ನಲ್ಲಿ ಮತ್ತು ಕೆಎಸ್ ಆರ್ ಟಿಸಿ ಮುಂಭಾಗದಲ್ಲಿ ರಾಮನ ಭಾವಚಿತ್ರಗಳಿಗೆ ವಿಶೇಷ ಹೂವಿನ ಅಲಂಕಾರವನ್ನು ಮಾಡಿ ಹಬ್ಬವನ್ನು ಆಚರಿಸಲಾಯಿತು. ಬಣ್ಣದ ಪೆನ್ಸಿಲ್ ಗಳನ್ನು ಬಳಸಿ ಲಕ್ಷ ಅಕ್ಷರದಲ್ಲಿ ರಾಮನ ಹೆಸರಿನಲ್ಲಿ ಮೂಡಿ ಬಂದ ಅಯೋಧ್ಯೆ ಹಾಗೂ ಶ್ರೀ ರಾಮನ ಭಾವಚಿತ್ರ ವಿಶೇಷವಾಗಿ ಗಮನ ಸೆಳೆಯಿತು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

Read More

ಅಯೋಧ್ಯೆಯಲ್ಲಿ ನಡೆಯುತ್ತಿರೋ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಸಚಿವ ಕೆ.ಎನ್. ರಾಜಣ್ಣ ಕುಟುಂಬದಿಂದ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಧುಗಿರಿ ತಾಲೂಕಿನ ಕಿತ್ತಗಳ್ಳಿ ಗ್ರಾಮದಲ್ಲಿ ಕೆ.ಎನ್. ರಾಜಣ್ಣ ಕುಟುಂಬದಿಂದ ಪೂಜೆ ಸಲ್ಲಿಸಲಾಯಿತು. ಕಿತ್ತಗಳ್ಳಿ ಗ್ರಾಮದಲ್ಲಿ ಇರುವ ರಾಮ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಹೋಮ ನಡೆಸಿ ಪೂಜೆ ಸಲ್ಲಿಸುತ್ತಿರುವ ಕುಟುಂಬದವರು ವಿಧಿ ವಿಧಾನದಂತೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಹೋಮದಲ್ಲಿ ಪಾಲ್ಗೊಂಡ ಸಚಿವ ಕೆ.ಎನ್. ರಾಜಣ್ಣ ಪತ್ನಿ ಶಾಂತಲ ಹಾಗೂ ಸಂಬಂಧಿಕರು, ಕೆ.ಎನ್. ರಾಜಣ್ಣ ನಿರ್ಮಾಣ ಮಾಡಿರುವ ದೇವಸ್ಥಾನವಾಗಿದ್ದು 2006ರಲ್ಲಿ ನಿರ್ಮಿಸಲಾಗಿದೆ. ಪಾಳು ಬಿದ್ದಿದ್ದ ದೇವಸ್ಥಾನವನ್ನು ಕೆ.ಎನ್ ರಾಜಣ್ಣ ಜೀರ್ಣೋದ್ಧಾರ ಮಾಡಿದ್ದಾರೆ. ಅಂದಾಜು 20 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದ ದೇವಸ್ಥಾನದಾಲ್ಲಿ ಇಂದು ವಿಶೇಷ ಪೂಜಾ ಕಾರ್ಯಕ್ರಮಗಳು ಮುಂಜಾನೆಯಿಂದಲೂ ನೆರವೇರುತ್ತಿವೆ. ಇಂದು ಅಯೋಧ್ಯೆ ದೇವಸ್ಥಾನದ ಉದ್ಘಾಟನೆಯ ಸಮಯಕ್ಕೆ ಸರಿಯಾಗಿ ಪೂಜೆ ಸಲ್ಲಿಕೆ ಮಾಡಲಾಗುವುದು.

Read More

ತಿಪಟೂರು: ನಗರದ ಹಳೆ ಬಸ್ ನಿಲ್ದಾಣ ಮುಂಭಾಗದ ನಗರಸಭಾ ಮಳಿಗೆಯಲ್ಲಿ ಕರ್ನಾಟಕ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಯೋಜನೆಯಾದ ಕರ್ನಾಟಕ ಒನ್ ಸಮಗ್ರ ನಾಗರೀಕ ಸೇವಾ ಕೇಂದ್ರವನ್ನು ಶಾಸಕ ಕೆ. ಷಡಕ್ಷರಿ ಉದ್ಘಾಟಿಸಿದರು. ವೈದ್ಯರಾದ ಡಾ.ಜಿ.ಬಿ. ವಿವೇಚನ್ ಮತ್ತು ಡಾ. ಜಿ. ಎಸ್.ಶ್ರೀಧರ್, ಇ-ಆಡಳಿತ ಇಲಾಖೆಯ ಸಂಯೋಜನಾಧಿಕಾರಿಗಳಾದ ಉಮೇಶ್, ಎಲ್.ಸುರೇಶ್, ಎ.ಆರ್. .ಟಿ .ಓ .ಸುಧಾಮಣಿ, ಸಿಡಿಪಿಓ ಅಶೋಕ್, ಬೆಸ್ಕಾಂ A.W. ಮನೋಹರ್, ಗ್ರೇಡ್ 2 ತಹಶೀಲ್ದಾರ್ ಜಗನ್ನಾಥ್, ಶಿರಸ್ತೆದಾರ್ ರವಿಕುಮಾರ್, ಕೆ.ಎಂ.ಎಫ್ ನಿರ್ದೇಶಕ ಮಾದೀಹಳ್ಳಿ ಪ್ರಕಾಶ್, ಪತ್ರಕರ್ತ ಬಿ.ಟಿ.ಕುಮಾರ್, ಕರ್ನಾಟಕ ಒನ್ ನ ಜಿ. ರೋಹನ್ ರಾಜ್, ಎಐಟಿಯುಸಿ ಗೋವಿಂದರಾಜ್ ಮುಖಂಡರಾದ ಶಾಂತಪ್ಪ ಮತ್ತು ಲೋಕನಾಥ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು

Read More

ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಕೋರ ಹೋಬಳಿಯ ಅಮೃತಗಿರಿ ಮತ್ತು ಅವಳಿಪಾಳ್ಯ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಯುವಪಡೆ ನೊಂ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ದೇವರಾಜ್ ಗೌಡ್ರು ಗ್ರಾಮ ಘಟಕವನ್ನ ಉದ್ಘಾಟಿಸಿದರು. ನಾಡ ಪ್ರಭು ಕೆಂಪೇಗೌಡರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ವಿಶೇಷ ಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೆಂಪೇಗೌಡರು ನಡೆದು ಬಂದ ಹಾದಿ,  ಪರಂಪರೆ ಮತ್ತು ಅವರ ಆಳ್ವಿಕೆಯ ವಿಚಾರಗಳನ್ನು ಸಂಘಟನೆಯ ನೂತನ ಕಾರ್ಯಕರ್ತರ ಮನ ಮುಟ್ಟುವಂತೆ ಮಾತನಾಡಿ ನೂತನವಾಗಿ ಸ್ಥಾಪನೆಗೊಂಡಿರುವ ನಾಡ ಪ್ರಭು ಕೆಂಪೇಗೌಡ ಒಕ್ಕಲಿಗರ ಯುವ ವೇದಿಕೆಯು ಕನ್ನಡ ನಾಡು ನುಡಿ ನೆಲ ಜಲ ಭಾಷೆ ಸಂಸ್ಕೃತಿಯ ಪರ ಹೋರಾಟ ಮಾಡುತ್ತದೆ ಮತ್ತು ನೊಂದವರ ಪರ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರಿಗೆ ಮತ್ತು ದೇಶಸೇವೆ ಮಾಡಿದ ಹಿರಿಯ ಸೈನಿಕರೊಬ್ಬರಿಗೆ ಸನ್ಮಾನ ಮಾಡಲಾಯಿತು ನಂತರ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚಿನ ಅಂಕ ಪಡೆದ  ವಿದ್ಯಾರ್ಥಿ-…

Read More