Author: admin

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಕನಾಳ ಗ್ರಾಮದಲ್ಲಿ ಮಳೆಯ ಹಿನ್ನೆಲೆ ಎರಡು ಮನೆಗಳು ಧರೆಗುರುಳಿದೆ. ಗ್ರಾಮದ ರಾಘು ಇಡುಕಪ್ಪ ನಾಯ್ಕ ಮತ್ತು ದಾಕ್ಷಾಯಿಣಿ ಇಡುಕಪ್ಪ ನಾಯ್ಕ ಎಂಬವರಿಗೆ ಸೇರಿದ ಮನೆ ಅಬ್ಬರದ ಗಾಳಿಮಳೆಗೆ ಕುಸಿದು ಬಿದ್ದು ಸಾಕಷ್ಟು ಹಾನಿಯುಂಟಾಗಿದೆ. ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಇಲ್ಲದೇ ಆ ಬಡ ಕುಟುಂಬ ಇದೀಗ ಬೀದಿಪಾಲಾಗಿದೆ. ಸಂತ್ರಸ್ಥರಿಗೆ ವಾಸ ಮಾಡಲು ಸೂರಿಲ್ಲದೇ ಪರದಾಡುವ ಸ್ಥಿತಿ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಆ ಕುಟುಂಬದವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮಯೂರ್ಭಂಜ್: ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ 11 ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಒಂದು ತಿಂಗಳಿಗೂ ಹೆಚ್ಚು ಕಾಲ ಪದೇ ಪದೇ ಅತ್ಯಾಚಾರ ಎಸಗಿದ  ಘಟನೆ ನಡೆದಿದ್ದು, ಈ ಸಂಬಂಧ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಜೂನ್ 14 ಮತ್ತು ಜುಲೈ 27 ರ ನಡುವೆ ಅಪ್ರಾಪ್ತ ಬಾಲಕಿಯ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಆಗಸ್ಟ್ 3 ರಂದು ಖುಂಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಫ್‌ ಐಆರ್ ದಾಖಲಿಸಿಕೊಂಡ ಪೊಲೀಸರು ಬುಧವಾರ ಸಂತ್ರಸ್ತೆಯ ಭಾವ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಕ ಆರೋಪಿಯನ್ನು ರೂರ್ಕೆಲಾದ ಮಕ್ಕಳ ರಕ್ಷಣಾ ಗೃಹಕ್ಕೆ ಕಳುಹಿಸಲಾಗಿದ್ದರೆ, ಉಳಿದ ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆಸ್ಪತ್ರೆಯಲ್ಲಿ ಬಾಲಕಿ ಮತ್ತು ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಹುಡುಗಿಯ ಹೇಳಿಕೆಯನ್ನು ಸಹ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಬೆಂಗಳೂರು: ಬೆಂಗಳೂರಿನ ಹಳದಿ ಮೆಟ್ರೋ ಲೈನ್ ಆ.10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು,  ಯೆಲ್ಲೋ ಲೈನ್ ಕನಿಷ್ಠ 8 ಲಕ್ಷ ಜನರಿಗೆ ಅನುಕೂಲ ಆಗಲಿದೆ. ಪ್ರಧಾನಿಯವರು ಬೆಳಗ್ಗೆ ಬೆಂಗಳೂರಿಗೆ ಬರಲಿದ್ದು, ಹೆಲಿಕಾಪ್ಟರ್ ಮೂಲಕ ಮೇಖ್ರಿ ವೃತ್ತದ ಬಳಿ ಇರುವ ಮಿಲಿಟರಿ ಮೈದಾನಕ್ಕೆ ಆಗಮಿಸುವರು. ಬಳಿಕ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ ಮೂಲಕ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ ಗೆ ಬಂದು ತಲುಪುವರು. ಅಲ್ಲಿ ಬೆಂಗಳೂರು–ಬೆಳಗಾವಿ ನಡುವಿನ ವಂದೇ ಭಾರತ್ ರೈಲಿನ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ವಿವರಿಸಿದರು. ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಿಂದ ಸೌತ್ ಎಂಡ್ ವೃತ್ತದ ಮೂಲಕ ರಾಗಿಗುಡ್ಡ ತಲುಪುವರು. ಬಳಿಕ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್‌ ನಲ್ಲೂ ಕಾರ್ಯಕ್ರಮ ಇದೆ. ಪ್ರಧಾನಿಯವರು ಬರುವ ಸಂದರ್ಭವನ್ನು ಬೆಂಗಳೂರಿನ ಮಹಾಜನತೆ ಕಾತುರದಿಂದ ಕಾಯುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಪ್ರಧಾನಿಯವರನ್ನು ಬಹಳ ಸಂತೋಷದಿಂದ ಸ್ವಾಗತಿಸಲು…

Read More

ಬೀದರ್ : ಸುಳ್ಳು ಸುದ್ದಿಗಳು ಸಮಾಜಕ್ಕೆ ಕಂಟಕವಾಗಿರುತ್ತದೆ ಎಂದು ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಗರದ ಮೈಲೂರು ರಸ್ತೆಯಲ್ಲಿರುವ ಜಿ.ಎನ್.ಡಿ ಕಾಲೇಜು ಕ್ಯಾಂಪಸ್‌ ನ ಗುರುನಾನಕ ಭವನ ಅವರಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಹಯೋಗದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪತ್ರಕರ್ತರಿಗೆ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವುದರ ಜೊತೆಗೆ ಈ ಅಂಗಗಳ ನ್ಯೂನ್ಯತೆಯನ್ನು ಎತ್ತಿ ಹಿಡಿಯುವ, ಪ್ರಗತಿದಾಯಕ ಕಾರ್ಯ ಮಾಡಿದರೆ ಅವನ್ನು ಪ್ರಶಂಸಿಸುವ ಕಾರ್ಯ ಮಾಧ್ಯಮಗಳು ಮಾಡುತ್ತವೆ. ಲೇಖನಿ ಖಡ್ಗಕ್ಕಿಂತ ಹರಿತವಾದದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸುದ್ದಿಯಲ್ಲಿ ನಿಖರತೆ ಇರುವುದು ಮುಖ್ಯವಾಗಿದೆ ಎಂದು ಹೇಳಿದರು. ಸುಳ್ಳು ಸುದ್ದಿಗಳು ಸಮಾಜಕ್ಕೆ ಕಂಟಕವಾಗಿರುತ್ತದೆ. ಇತ್ತೀಚಿಗೆ ಎಲ್ಲಾ ಕ್ಷೇತ್ರಗಳು ಕಲುಷಿತಗೊಂಡಿದೆ. ಅದೇ ರೀತಿ ಮಾಧ್ಯಮ ಕ್ಷೇತ್ರ ಕೂಡ ಹಾದಿ ತಪ್ಪುತ್ತಿರುವುದು ನಾವು ನೋಡುತ್ತಿದ್ದೇವೆ. ಮಹಿಳೆ ಮತ್ತು…

Read More

ಪಾವಗಡ: ತಾಲೂಕಿನ   ಕನ್ನಮೇಡಿ ಗ್ರಾಮದಲ್ಲಿ ಬುಧವಾರ  ಕನ್ನಮೇಡಿ ಆರ್ಯವೈಶ್ಯ ಸಂಘ (ರಿ) ಇವರ ವತಿಯಿಂದ ಪಾವಗಡದ S.S.K ಸಂಘದ ನೂತನವಾಗಿ ನಿರ್ದೇಶಕರುಗಳು ಆಯ್ಕೆಯಾಗಿರುವವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. K.S ರಾಜಗೋಪಾಲ್, G ಅನಿಲ್ ಕುಮಾರ್, K.V ಶ್ರೀನಿವಾಸ್, Y.R ಮೋಹನ್ ಕುಮಾರ್, M S ರಘುನಂದನ್, G.C ಅನಿಲ್ ಕುಮಾರ್, M.V ಕೃಷ್ಣಕುಮಾರ್, N R ಅಶ್ವತ್ ಕುಮಾರ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯದರ್ಶಿಗಳಾದ ಜಿ. ಲವಕುಮಾರ್ ವಹಿಸಿದರು. ಜ್ಞಾನ ಬೋಧಿನಿ ಶಾಲೆಯ ಕಾರ್ಯದರ್ಶಿಗಳಾದ  ಡಾ. K.S ಅನಿಲ್ ಕುಮಾರ್ ಮತ್ತು ಶ್ರೀದೇವಿ ಕಾಲೇಜಿನ  ಪ್ರೊಫೆಸರ್ ಡಾ. K.S ರಾಮಕೃಷ್ಣ , ಅವೋಪ ಅಧ್ಯಕ್ಷರಾದ  V.A ರಾಮಕೃಷ್ಣ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಗ್ರಾಮಸ್ಥರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ವರದಿ: ನಂದೀಶ್ ನಾಯ್ಕ, ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಸರಗೂರು:   ಸ್ತನ್ಯಪಾನವನ್ನು ಸಂರಕ್ಷಿಸಿ, ಪೋತ್ಸಾಹಿಸಿ, ಮುಂದುವರಿಸಲು ಸರ್ಕಾರ, ಆರೋಗ್ಯ ಇಲಾಖೆ, ಸಂಘ–ಸಂಸ್ಥೆಗಳು, ಕುಟುಂಬದ ಸದಸ್ಯರೆಲ್ಲರೂ ಹೊಣೆ ಹೊರಬೇಕಾಗಿದೆ ಸ್ತನ್ಯಪಾನವನ್ನು ಸಂರಕ್ಷಿಸಲು ಸಂಘ–ಸಂಸ್ಥೆಗಳು ಮುಂದೆ ಬರಬೇಕು. ಕುಟುಂಬದ ಸದಸ್ಯರೆಲ್ಲರೂ ತಾಯಿಗೆ ಮಾನಸಿಕ ಬೆಂಬಲ ನೀಡಿ ಪೋತ್ಸಾಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ಟಿ ರವಿಕುಮಾರ್ ತಿಳಿಸಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸರಗೂರುವತಿಯಿಂದ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಹೆಚ್.ಡಿ.ಕೋಟೆ ಇವರ ಸಹಯೋಗದೊಂದಿಗೆ ಬುಧವಾರದಂದು ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯ ಕ್ರಮವನ್ನು ಆಯೋಜಿಸಲಾಗಿ ಕಾರ್ಯ ಕ್ರಮದ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಗುವಿಗೆ 2 ವರ್ಷ ತುಂಬುವ ತನಕ ಎದೆಹಾಲನ್ನು ಮುಂದುರಿಸಬೇಕು. ಇದು ಮಗುವಿನ ಮೆದುಳು ಬೆಳವಣಿಗೆಗೂ ಅವಶ್ಯಕ ಹಾಗೂ ಮಗುವಿನ ಬುದ್ಧಿಮಟ್ಟವನ್ನು ಹೆಚ್ಚಿಸುತ್ತದೆ. ಸೂಕ್ತ ರೀತಿಯಲ್ಲಿ ಎದೆಹಾಲುಣಿಸುವುದರಿಂದ ತಾಯಿ ಬೇಗ ಗರ್ಭ ಧರಿಸುವುದಿಲ್ಲ. ಇದು ನೈಸರ್ಗಿಕ ಕುಟುಂಬ ಯೋಜನೆ ಇದ್ದಂತೆ. 2 ವರ್ಷ ಸರಿಯಾಗಿ ಎದೆಹಾಲುಣಿಸಿದ ತಾಯಿಂದಿರಿಗೆ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ಬರುವುದು ಅಪರೂಪ…

Read More

ತುಮಕೂರು : ಜೈವಿಕ ಇಂಧನ ಸಂಶೋಧನೆ ಮತ್ತು ಗುಣಮಟ್ಟ ಖಾತ್ರಿ ಪ್ರಯೋಗಾಲಯ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ  ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಶ್ವ ವಿದ್ಯಾನಿಲಯದಿಂದ ನೂರು ಅರಣ್ಯ ಸಸಿಗಳನ್ನು ಕೊರಟಗೆರೆ ತಾಲ್ಲೂಕಿನ ತೀತಾ ಗ್ರಾಮಕ್ಕೆ ನೀಡಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಂತೋಷ ಮಾತನಾಡಿ ಜೈವಿಕ ಇಂಧನ ಮತ್ತು ಅರಣ್ಯ ಸಸಿಗಳ ಬಗ್ಗೆ ಕಾರ್ಯಕ್ರಮವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು  ಜೈವಿಕ ಇಂಧನಗಳನ್ನು ಸಸ್ಯ, ಪ್ರಾಣಿ ಅಥವಾ ಸೂಕ್ಷ್ಮ ಜೀವಿಗಳಿಂದ ಪಡೆಯಲಾಗುತ್ತದೆ. ಮುಖ್ಯವಾಗಿ ಬಳಕೆಯಲ್ಲಿರುವ ಜೈವಿಕ ಇಂಧನಗಳೆಂದರೆ-ಜೈವಿಕ ಡೀಸಲ್, ಜೈವಿಕ ಎಥನಾಲ್, ಬಯೋಗ್ಯಾಸ್ ಇತ್ಯಾದಿ ಇವು ಪರಿಸರ ಸ್ನೇಹಿ ನವೀಕರಿಸಲಾಗುವ ಇಂಧನ ಮೂಲಗಳು, ಇವು ಇಂಗಾಲ ತಟಸ್ಥ, ಅಂದರೆ-ಜೈವಿಕ ಇಂಧನಗಳನ್ನು ಉರಿಸಿದಾಗ ಬರುವ ಇಂಗಾಲದ ಡೈ ಆಕ್ಷಡನ್ನು ಸಸ್ಯಗಳು ಹೀರಿಕೊಂಡು ವಾತಾವರಣದಲ್ಲಿರುವ ಒಟ್ಟು ಇಂಗಾಲದ ಅಂಶವನ್ನು ಸಮಪ್ರಮಾಣದಲ್ಲಿರಿಸುತ್ತವೆ. ಜೈವಿಕ ಡೀಸಲ್ : ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಬೆಳೆಯುವ ಹೊಂಗೆ, ಜಮೋಘ, ಜೀವುಸಿಪ್ಪೆ ಸಿಮರೂಬ ಮತ್ತಿತರ…

Read More

ಕೊರಟಗೆರೆ : ತಾಲೂಕು ಆಡಳಿತದಿಂದ ಆ.15 ರಂದು ನಡೆಯುವ 79ನೇ ಸ್ವಾತಂತ್ರ್ಯ ದಿನಾಚರಣೆ ಸಾರ್ವಜನಿಕರ, ಸಂಘ ಸಂಸ್ಥೆಗಳ ಹಾಗೂ ವಿವಿಧ ಇಲಾಖಾ ಆಧಿಕಾರಿಗಳ ಸಹಕಾರ ನೀಡುವ ಮೂಲಕ ವಿಜೃಂಭಣೆಯಿಂದ ಆಚರಣೆ ಮಾಡಬೇಕೆಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು. ಅವರು ಪಟ್ಟಣದ ತಾಲೂಕು ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನಾಚರಣೆಯನ್ನು ಕಳೆದ ಬಾರಿ ಆಚರಣೆ ಮಾಡಿದಂತೆ ಈ ಬಾರಿಯೂ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಆ.15 ರಂದು ಬೆಳಗಿನ ಜಾವ ಪ್ರಭಾತ್ ಬೇರಿಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮ ತಾಲೂಕಿನ ವಿವಿಧ ಧಾರ್ಮಿಕ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಸ್ಥಳಗಳ ಸ್ಥಬ್ದ ಚಿತ್ರಗಳೊಂದಿಗೆ ಶಾಲಾ ಮಕ್ಕಳ ಮೇರವಣಿಗೆಯೊಂದಿಗೆ ಸರ್ಕಾರಿ ಕಿರಿಯ ಕಾಲೇಜು ಕ್ರೀಡಾಂಗನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಕವಾಯಿತುನೊಂದಿಗೆ ದ್ವಜಾರೋಹಣ ನೆರವೇರಲಿದೆ ಹಾಗೂ ಈಬಾರಿ ನಿವೃತ್ತ ಸೈನಿಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ವಾಸವಿ ಯುವಜನ ಸಂಘದಿಂದ ಸಿಹಿ…

Read More

ಬೆಂಗಳೂರು: ರಾಜ್ಯದಲ್ಲಿರುವ 100 ಕೋಟಿ ಭೂಕಂದಾಯ ದಾಖಲೆಗಳಲ್ಲಿ 35.36 ಕೋಟಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಡಿಸೆಂಬರ್ ಅಂತ್ಯದ ವೇಳೆಗೆ ಉಳಿದ 65 ಕೋಟಿ ಪುಟಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು ಎಂದು ಅವರು ಹೇಳಿದರು. ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಗುರಿಯನ್ನು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಹೇಳಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ‘ಭೂ ಸುರಕ್ಷಾ’ ಯೋಜನೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಸಚಿವರು, ಇಂದಿನಿಂದ ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಕಚೇರಿಗಳು ಸಹ ದಾಖಲೆಗಳನ್ನು ಸ್ಕ್ಯಾನ್ ಮಾಡಲು ಪ್ರಾರಂಭಿಸುತ್ತವೆ ಎಂದು ಹೇಳಿದರು. 246 ತಾಲ್ಲೂಕುಗಳ ತಹಶೀಲ್ದಾರ್ ಕಚೇರಿಯಲ್ಲಿ, ‘ಎ’ ಮತ್ತು ‘ಬಿ’ ಖಾತಾಗಳನ್ನು ಸ್ಕ್ಯಾನ್ ಮಾಡಲಾಗಿದೆ. ಭೂ ಮಾಲೀಕರು ಡಿಜಿಟಲೀಕರಣಕ್ಕಾಗಿ ‘ಭೂ ಸುರಕ್ಷಾ’ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಹೇಗೆ ಅರ್ಜಿ ಸಲ್ಲಿಸಬೇಕೆಂದು ತಿಳಿದಿಲ್ಲದಿದ್ದರೆ ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು. ರಾಜ್ಯದ ಕಂದಾಯ ಇಲಾಖೆಯು ಕಳೆದ ವರ್ಷದಿಂದ…

Read More

ಬೆಳಗಾವಿ: ಹಳ್ಳ ದಾಟಲು ಹೋಗಿ ಬೈಕ್ ಸಮೇತ ವ್ಯಕ್ತಿ ನೀರಲ್ಲಿ ಕೊಚ್ಚಿ ಹೋದ ಘಟನೆ ಬೆಳಗಾವಿಯ ತಾರಿಹಾಳ ಬಳಿ ನಡೆದಿದೆ ಪಂಚಾಯತ್‌ ಸಿಬ್ಬಂದಿ ಸುರೇಶ್‌ ನಿಜಗುಣಿ ಗುಂಡನ್ನವರ್ (50) ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಎಂದು ಗುರುತಿಸಲಾಗಿದೆ.  ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನು ಬೈಕ್ ಮೂಲಕ ದಾಟಲು ಮುಂದಾಗಿದ್ದೇ ದುರ್ಘಟನೆಗೆ ಕಾರಣವಾಗಿದೆ. ಪಂಚಾಯತ್‌ ನಲ್ಲಿ ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಘಟನೆ ನಡೆದಿದೆ. ಸದ್ಯ ಸುರೇಶ್ ಗಾಗಿ ಅಗ್ನಿಶಾಮಕದಳ ಸಿಬ್ಬಂದಿ, ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More