Author: admin

ಗುಬ್ಬಿ: ರಾಜ್ಯ ಬಜೆಟ್‌ನಲ್ಲಿ ತುಮಕೂರು ಜಿಲ್ಲೆಗೆ ನಿರೀಕ್ಷಿತ ಅನುದಾನ ಸಿಗದಿರುವ ಬಗ್ಗೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಒಟ್ಟಾಗಿ ಸಭೆ ನಡೆಸಿ, ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಕಾಮಗಾರಿಗಳ ಪಟ್ಟಿಯನ್ನು ಬಜೆಟ್‌ಗೂ ಮುನ್ನ ಸಲ್ಲಿಸಲಾಗಿತ್ತು. ಆದರೆ, ಬಜೆಟ್‌ನಲ್ಲಿ ಜಿಲ್ಲೆಗೆ ಯಾವುದೇ ವಿಶೇಷ ಅನುದಾನ ಘೋಷಣೆಯಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯ ವಿಷಯವನ್ನು ಹೊರತುಪಡಿಸಿ ನೋಡಿದರೆ, ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್ ಎಲ್ಲ ವರ್ಗದ ಜನರಿಗೂ ಅನುಕೂಲವಾಗುವಂತಿದೆ ಎಂದು ಅವರು ಶ್ಲಾಘಿಸಿದರು. ವಸತಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, “ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಗುಬ್ಬಿ ತಾಲೂಕಿಗೆ ಮನೆಗಳು ಮಂಜೂರಾಗಿರಲಿಲ್ಲ. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ವಸತಿ ಸೌಲಭ್ಯ ಸಿಕ್ಕಿಲ್ಲ. ಈ ಬಗ್ಗೆ ಜನ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದು ಕಷ್ಟವಾಗುತ್ತಿದೆ” ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡರು.…

Read More

ಗುಬ್ಬಿ: ತಾಲ್ಲೂಕಿನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳ ಸುರಿಮಳೆಯೇ ಬಂದಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಕಾರ್ಯಕ್ರಮದ ಚಾಲನೆ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿದರು. ಸಭೆಯ ಆರಂಭದಿಂದಲೇ ಸಾರ್ವಜನಿಕರು ಸಾಲು ಸಾಲು ಅರ್ಜಿಗಳನ್ನು ಸಲ್ಲಿಸಿದರು. ಮುಖ್ಯವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪೌತಿ ಖಾತೆ, ದುರಸ್ತಿ ಹಾಗೂ ಸಾಗುವಳಿ ಚೀಟಿ ಇದ್ದರೂ ಖಾತೆ ಆಗದಿರುವ ಬಗ್ಗೆ ಅನೇಕರು ದೂರಿದರು. ಪಿಂಚಣಿ ಸಮಸ್ಯೆ ಹಾಗೂ ಕಂದಾಯ ಗ್ರಾಮಗಳ ಘೋಷಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಬಗೆಹರಿಸುವಂತೆ ಮನವಿ ಮಾಡಿದರು. ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಇ-ಸ್ವತ್ತು ಮತ್ತು ಇ–ಖಾತೆ ಆಗುತ್ತಿಲ್ಲ. ಇದರಿಂದ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಪಟ್ಟಣದ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು. ಆಧಾರ್ ತಿದ್ದುಪಡಿ ಮತ್ತು ಪಡಿತರ ಚೀಟಿ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ…

Read More

ತುಮಕೂರು: ನಗರದ ಬನಶಂಕರಿಯಲ್ಲಿ ಪೌರಕಾರ್ಮಿಕರೊಬ್ಬರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯಲ್ಲಿದ್ದ ದವಸ ಧಾನ್ಯ ಸೇರಿದಂತೆ ಎಲ್ಲಾ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಅಯ್ಯಪ್ಪ ಎಂಬುವವರ ಮನೆಗೆ ಈ ಅನಾಹುತ ಸಂಭವಿಸಿದೆ. ಘಟನೆ ನಡೆದ ಸಮಯದಲ್ಲಿ ಅಯ್ಯಪ್ಪ ಅವರು ಮನೆಯಿಂದ ಹೊರಗಡೆ ಹೋಗಿದ್ದರು ಎನ್ನಲಾಗಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಮನೆಯಲ್ಲಿದ್ದ ದಿನಬಳಕೆಯ ಸಾಮಗ್ರಿಗಳು ಸಂಪೂರ್ಣವಾಗಿ ನಾಶವಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಬೆಂಕಿ ಅವಘಡದಿಂದ ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಅಯ್ಯಪ್ಪ ಅವರ ಕುಟುಂಬಕ್ಕೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ತಕ್ಷಣವೇ ಸ್ಪಂದಿಸಬೇಕು ಎಂದು ಸಿಪಿಎಂ (CPM) ಪಕ್ಷ ಒತ್ತಾಯಿಸಿದೆ. “ಅಯ್ಯಪ್ಪ ಅವರ ಕುಟುಂಬ ಈಗ ಸಂಕಷ್ಟದಲ್ಲಿದೆ. ಅವರಿಗೆ ಕೂಡಲೇ ಆರ್ಥಿಕ…

Read More

ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುವ ಮಹಿಳಾ ದಿನಾಚರಣೆ ಮಹಿಳೆಯರ ಸಾಧನೆ, ಹೋರಾಟ ಮತ್ತು ಸಮಾಜಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸುವ ಮಹತ್ವದ ದಿನವಾಗಿದೆ. ಮಹಿಳೆಯರು ಸಮಾಜದ ಅರ್ಧಭಾಗವಾಗಿದ್ದು, ಅವರ ಶಕ್ತಿ ಮತ್ತು ಸಾಮರ್ಥ್ಯವೇ ಒಂದು ರಾಷ್ಟ್ರದ ಪ್ರಗತಿಯ ಮೂಲವಾಗಿದೆ. ಆದ್ದರಿಂದ ಮಹಿಳೆಯರ ಸಬಲೀಕರಣವು ಕೇವಲ ಒಂದು ಸಾಮಾಜಿಕ ಚಳವಳಿ ಮಾತ್ರವಲ್ಲ, ಅದು ಸಮಾನತೆ ಮತ್ತು ನ್ಯಾಯಯುತ ಸಮಾಜ ನಿರ್ಮಾಣದ ಪ್ರಮುಖ ಅಂಶವಾಗಿದೆ. ಒಂದು ಕಾಲದಲ್ಲಿ ಮಹಿಳೆಯರನ್ನು ಮನೆಯ ಕೆಲಸಗಳಿಗೆ ಮಾತ್ರ ಸೀಮಿತಗೊಳಿಸಲಾಗುತ್ತಿತ್ತು. ಆದರೆ ಶಿಕ್ಷಣ ಮತ್ತು ಜಾಗೃತಿಯ ಪರಿಣಾಮವಾಗಿ ಇಂದಿನ ಮಹಿಳೆಯರು ಶಿಕ್ಷಣ, ವೈದ್ಯಕೀಯ, ಕೈಗಾರಿಕೆ, ಆಡಳಿತ, ಮಾಧ್ಯಮ ಮತ್ತು ಸಾರಿಗೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ತಮ್ಮ ಪರಿಶ್ರಮ ಮತ್ತು ಶಿಸ್ತುಗಳಿಂದ ಅವರು ಸಮಾಜದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳೆಯರು ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಮಹಿಳಾ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಮಾನವೀಯ…

Read More

ಇತ್ತೀಚಿನ ದಿನಗಳಲ್ಲಿ “ಡಿಜಿಟಲ್ ಅರೆಸ್ಟ್” ಎಂಬ ಪದ ಜನರಲ್ಲಿ ಭಯ ಮತ್ತು ಗೊಂದಲವನ್ನುಂಟುಮಾಡುತ್ತಿದೆ. ಕೆಲವರಿಗೆ ಫೋನ್ ಕರೆಗಳು ಬರುತ್ತಿದ್ದು, ತಾವು ಪೊಲೀಸ್ ಅಧಿಕಾರಿಗಳು ಅಥವಾ ಬ್ಯಾಂಕ್ ಅಧಿಕಾರಿಗಳು ಎಂದು ಹೇಳಿಕೊಳ್ಳುವವರು “ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ”, “ನಿಮ್ಮ ಖಾತೆಯಲ್ಲಿ ಅನುಮಾನಾಸ್ಪದ ಹಣ ವ್ಯವಹಾರವಾಗಿದೆ” ಎಂದು ಹೆದರಿಸಿ ಹಣ ವರ್ಗಾವಣೆ ಮಾಡಲು ಒತ್ತಾಯಿಸುತ್ತಿರುವ ಘಟನೆಗಳು ಹೆಚ್ಚಾಗಿವೆ. ಆದರೆ ವಾಸ್ತವವಾಗಿ “ಡಿಜಿಟಲ್ ಅರೆಸ್ಟ್” ಎಂಬುದು ಯಾವುದೇ ಕಾನೂನು ಪ್ರಕ್ರಿಯೆಯಲ್ಲ; ಇದು ಸೈಬರ್ ಅಪರಾಧಿಗಳು ಬಳಸುವ ಮೋಸದ ಹೊಸ ತಂತ್ರ ಮಾತ್ರ. ಭಾರತದಲ್ಲಿ ಯಾರನ್ನಾದರೂ ಬಂಧಿಸಲು ಕಾನೂನುಬದ್ಧ ಪ್ರಕ್ರಿಯೆ ಇದೆ. ಪೊಲೀಸ್ ಇಲಾಖೆ ಅಥವಾ ತನಿಖಾ ಸಂಸ್ಥೆಗಳು ನೇರವಾಗಿ ಬಂದು ಅಥವಾ ಕಾನೂನುಬದ್ಧ ನೋಟಿಸ್ ಮೂಲಕ ಕ್ರಮ ಕೈಗೊಳ್ಳಬೇಕು. ಆಡಿಯೋ ಕರೆ, ವೀಡಿಯೋ ಕರೆ ಅಥವಾ ಸಂದೇಶದ ಮೂಲಕ ಯಾರನ್ನೂ ಬಂಧಿಸುವ ವ್ಯವಸ್ಥೆ ಇಲ್ಲ. ಆದರೆ ಸೈಬರ್ ಮೋಸಗಾರರು ಇದೇ ವಿಷಯವನ್ನು ಬಳಸಿಕೊಂಡು ಜನರನ್ನು ಹೆದರಿಸಿ ಹಣ ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಮೋಸದಲ್ಲಿ ಸಾಮಾನ್ಯವಾಗಿ ಅಪರಾಧಿಗಳು…

Read More

ಕೊರಟಗೆರೆ: ಚಿಕ್ಕನಹಳ್ಳಿ ಒಂದು ಕುಗ್ರಾಮ, ಮಹಾಶಕ್ತಿ ಮತ್ತು ಆದಿಶಕ್ತಿ ದೇವತೆಗಳ ನೆಲೆಯಿಂದ ಗ್ರಾಮಕ್ಕೆ ವಿಶೇಷ ಕಳೆ ಬಂದಿದೆ. ತಾಯಿ ಮಹಿಮೆಗೆ ಇಡೀ ರಾಜ್ಯವೇ ಬೆರಗಾಗಿದ್ದು, ದೇವಿಯ ದರ್ಶನ ಪಡೆಯಲು ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರು, ನಿರ್ದೇಶಕರು,ನಿರ್ಮಾಪಕರು, ನಟ–ನಟಿಯರು ಆಗಮಿಸುತ್ತಿದ್ದಾರೆ ಎಂದು ಚಲನಚಿತ್ರ ನಿರ್ದೇಶಕ ಶಶಾಂಕ್‌ ರಾಜ್ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾ.ಪಂ. ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಮಹಾಶಕ್ತಿ ಮಾರಮ್ಮ, ಆದಿಶಕ್ತಿ ಚೌಡೇಶ್ವರಿ ದೇವಿ, ಕಾಟೇರಮ್ಮ, ಆಘೋರ ರಣ ಭದ್ರಕಾಳಿ ದೇವಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಪ್ರಚಾರವಿಲ್ಲದೆ, ಸಾಕಷ್ಟು ತೊಂದರೆಗಳ ನಡುವೆ ಆದಿ ದೇವತೆಗಳನ್ನು ಇಲ್ಲಿ ಪ್ರತಿಷ್ಠಾಪಿಸಲಾಗಿದೆ. ತಾಯಿ ಪವಾಡ ರಾಜ್ಯದ ಮೂಲೆ ಮೂಲೆಯ ಜನರ ಗಮನ ಸೆಳೆದಿದ್ದು, ದಿನನಿತ್ಯ ಮಹಾ ಪೂಜೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಮಾಧ್ಯಮಗಳ ಪ್ರಚಾರ, ಭಕ್ತರ ಸಹಕಾರ ದೇವಾಲಯದ ಅಭಿವೃದ್ಧಿಗೆ ಅತ್ಯವಶ್ಯಕವಾಗಿ ಬೇಕಿದೆ ಎಂದು ಹೇಳಿದರು. ಬೆಂಗಳೂರು ಭಕ್ತಾದಿ ಆನಂದ್ ಮಾತನಾಡಿ, ಬಾಲ್ಯದಲ್ಲಿ ಈ ಗ್ರಾಮ ನಮಗೆ ಸಾಕಷ್ಟು ಸಿಹಿ ಕನಸುಗಳನ್ನು ಹುಟ್ಟುಹಾಕಿತ್ತು,…

Read More

ಕೊರಟಗೆರೆ : ವಿದ್ಯಾರ್ಥಿಗಳ ಜ್ಞಾನಾರ್ಜನೆ, ಬುದ್ದಿವಂತಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರವೆಂದು ನಮ್ಮ ಪೂರ್ವಜರು ನಂಬಿದ್ದಾರೆ ಎಂದು ಮುಖ್ಯ ಶಿಕ್ಷಕಿ ಮಂಜುಳ ತಿಳಿಸಿದ್ದಾರೆ. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಕಾರ್ಡಿಯಲ್ ಸ್ಕೂಲ್‌ ನಲ್ಲಿ ಶನಿವಾರ ಶಾರದಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಸಾಮಾನ್ಯವಾಗಿ ಶಾರದಾ ಪೂಜೆಯನ್ನ ಬಹುತೇಕ ಶಾಲಾ ಕಾಲೇಜುಗಳಲ್ಲಿ ಆಚರಣೆ ಮಾಡಲಾಗುತ್ತದೆ. ಜ್ಞಾನ, ಕಲೆ ಮತ್ತು ಶಿಕ್ಷಣದ ದೇವತೆಯಾದ ಶಾರದೆಯನ್ನ ಶಾಲೆಗಳಲ್ಲಿ ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಮಕ್ಕಳಿಗೆ ಶಾರದೆಯ ಬಗ್ಗೆಯನ್ನ ತಿಳಿಸುವ ಸಲುವಾಗ ವಿದ್ಯಾರ್ಥಿಗಳು ಉತ್ತಮ ಉಡುಗೆಗಳನ್ನ ತೊಟ್ಟು, ಶಾಲೆಯನ್ನ ಸಿಂಗಾರಗೊಳಿಸಿ ವಿವಿಧ ಸಾಂಸ್ಕೃತಿಕ ಹಾಡುಗಳಿಗೆ ನೃತ್ಯ ಮಾಡಿ ಎಲ್ಲರೂ ಸೇರಿ ಶಾರದೆ ತಾಯಿಗೆ ವಿಶೇಷ ಪೂಜೆಯನ್ನ ಸಲ್ಲಿಸುವುದು ನಮ್ಮ ಗ್ರಾಮೀಣ ಭಾಗದ ವಾಡಿಕೆಯಾಗಿದೆ ಎಂದು ತಿಳಿಸಿದರು. ಶಾಲೆಯ ಅಧ್ಯಕ್ಷ ಇಸ್ಮಾಯಿಲ್ ಜಬೀವೂಲ್ಲಾ ಮಾತನಾಡಿ, ಪ್ರತಿವರ್ಷ ನಮ್ಮ ಕಾರ್ಡಿಯಲ್ ಸ್ಕೂಲ್‌ನಲ್ಲಿ ಶಾಲೆಯಲ್ಲಿ ಶಾರದ ಪೂಜೆಯನ್ನ ಆಚರಣೆ ಮಾಡಿಕೊಂಡು ಬರುತ್ತಿದ್ದು, ಮಕ್ಕಳು ಸಂತಸದಿಂದ…

Read More

ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ನಾಗವಲ್ಲಿ ಸಮೀಪದ ರಂಗಾಪುರ ಬಳಿಯ ಸೋಪನಹಳ್ಳಿ ಗೇಟ್‌ನಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಕೇರಳದ ರಷೀದ್ ಅಲಿ (25) ಮತ್ತು ಅಮೀನ್ (23) ಮೃತಪಟ್ಟ ದುರ್ದೈವಿಗಳು. ಇವರು ಆಂಧ್ರಪ್ರದೇಶದಿಂದ ಕೇರಳಕ್ಕೆ ಲಾರಿಯಲ್ಲಿ ಕಡಪ ಕಲ್ಲುಗಳನ್ನು ಸಾಗಿಸುತ್ತಿದ್ದರು. ಪ್ರಯಾಣದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯು ರಸ್ತೆ ಬದಿಯ ಅರಳಿ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಕುಣಿಗಲ್–ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಹಂಪ್ಸ್ (ವೇಗ ತಡೆ) ಅಳವಡಿಸಬೇಕು ಮತ್ತು ಅಪಘಾತ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈ ಕುರಿತು ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದಾರ ಮಹಾಸಭಾ ನೇತೃತ್ವದಲ್ಲಿ ಮಾದಿಗ ಸಮುದಾಯದ ಪ್ರಮುಖರು ಶುಕ್ರವಾರ ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರವು ಒಂದು ಕಡೆ ಒಳಮೀಸಲಾತಿ ಜಾರಿಗೆ ಆದೇಶ ಹೊರಡಿಸಿ, ಇನ್ನೊಂದೆಡೆ ತಾಂತ್ರಿಕ ಕಾರಣಗಳನ್ನು ನೀಡಿ ಅದನ್ನು ಜಾರಿಗೊಳಿಸದೆ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರವು ಇತ್ತೀಚೆಗೆ ವಿವಿಧ ಇಲಾಖೆಗಳಲ್ಲಿ 56 ಸಾವಿರ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಈ ಹಂತದಲ್ಲಿ ಒಳಮೀಸಲಾತಿ ಅನ್ವಯಿಸದಿದ್ದರೆ ವಿದ್ಯಾವಂತ ನಿರುದ್ಯೋಗಿ ಯುವಕರ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಅವರು ಎಚ್ಚರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳಮೀಸಲಾತಿ ಜಾರಿಗೆ ತಂದಿದ್ದು, ಅದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಆದರೂ ಪೂರ್ಣ ಪ್ರಮಾಣದಲ್ಲಿ ಜಾರಿಯಾಗದಿರುವುದು ಸಮುದಾಯದ 35 ವರ್ಷಗಳ ಸುದೀರ್ಘ ಹೋರಾಟವನ್ನು ಅಣಕಿಸಿದಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ…

Read More

ಕೊರಟಗೆರೆ: ತಾಲ್ಲೂಕಿನ ಸಮಸ್ತ ಆಡಳಿತದ ಕೇಂದ್ರಬಿಂದುವಾಗಿರುವ ಕೊರಟಗೆರೆ ಮಿನಿ ವಿಧಾನಸೌಧವು ಸರಿಯಾದ ನಿರ್ವಹಣೆಯಿಲ್ಲದೆ ಕೇವಲ 15 ವರ್ಷಗಳಲ್ಲೇ ಶಿಥಿಲಾವಸ್ಥೆ ತಲುಪಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 2013ರಲ್ಲಿ ಉದ್ಘಾಟನೆಗೊಂಡ ಈ ಭವ್ಯ ಕಟ್ಟಡವು ಈಗ ಬಿರುಕು ಬಿಟ್ಟಿದೆ. ಮಳೆ ಬಂದಾಗ ಛಾವಣಿ ಹಾಗೂ ಗೋಡೆಗಳಿಂದ ನೀರು ಸೋರುತ್ತಿದ್ದು, ಕಚೇರಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಸಾರ್ವಜನಿಕ ಶೌಚಾಲಯಗಳು ಸಮರ್ಪಕವಾಗಿಲ್ಲ. ಕಟ್ಟಡದಲ್ಲಿರುವ ಶೌಚಾಲಯಗಳಿಗೆ ಬೀಗ ಹಾಕಲಾಗಿದ್ದು, ದೂರದ ಗ್ರಾಮಗಳಿಂದ ಬರುವ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹತ್ತು ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊರಗಿನ ಶೌಚಾಲಯವೂ ಬಳಕೆಯಾಗದೆ ಹಾಳಾಗಿದೆ. ತಹಶೀಲ್ದಾರ್ ನ್ಯಾಯಾಲಯದ ಕೋಣೆ ಸೇರಿದಂತೆ ಕಚೇರಿಯ ಹಲವು ಭಾಗಗಳಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‌ಗಳು ಒಡೆದು ಹೋಗಿವೆ. ಇದು ಸಿಬ್ಬಂದಿ ಮತ್ತು ಸಾರ್ವಜನಿಕರ ಸುರಕ್ಷತೆಗೆ ಆತಂಕ ತಂದೊಡ್ಡಿದೆ. ಕಚೇರಿ ಆವರಣದಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಜನರು ನೀರಿಗಾಗಿ ಪರದಾಡುವಂತಾಗಿದೆ. ತಾಲ್ಲೂಕು ಆಡಳಿತದ ಈ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ…

Read More