Subscribe to Updates
Get the latest creative news from FooBar about art, design and business.
- ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
- ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
Author: admin
ಡಿಸಿಎಂ ಡಿ.ಕೆ. ಶಿವಕುಮಾರ್ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುತ್ತಿದ್ದ ಸಂದರ್ಭದಲ್ಲಿ ಜನರು ಜೈ ಶ್ರೀ ರಾಮ ಎಂದು ಘೋಷಣೆ ಕೂಗಿದ ಘಟನೆ ಬಗ್ಗೆ ವರದಿಯಾಗಿದೆ. ಸುತ್ತೂರು ಜಾತ್ರಾ ಮಹೋತ್ಸವ ಕಾರ್ಯಕ್ರಮದ ವೇದಿಕೆಗೆ ಬರುತ್ತಿದ್ದಂತೆ ಡಿ.ಕೆ. ಶಿವಕುಮಾರ್ ಜನರತ್ತ ಕೈ ಬೀಸಿದರು. ಈ ವೇಳೆ ಒಂದು ಗುಂಪು ಜೋರಾಗಿ ಜೈಶ್ರೀರಾಮ ಎಂದು ಘೋಷಣೆ ಕೂಗಿದೆ. ಬಳಿಕ ಭಾಷಣಕ್ಕೆ ಡಿ.ಕೆ. ಶಿವಕುಮಾರ್ ತೆರಳುವ ವೇಳೆಯಲ್ಲಿಯೂ ಕೂಡ ಯುವಕರ ಗುಂಪು ಮತ್ತೆ ಜೈ ಶ್ರೀರಾಮ ಎಂದು ಕೂಗಿದೆ. ಇದನ್ನು ಕೇಳಿಸಿಕೊಂಡ ಡಿ.ಕೆ. ಶಿವಕುಮಾರ್ ಅವರು ನಾನು ಭಾಷಣ ಶುರು ಮಾಡಬಹುದಾ? ಇನ್ಯಾವುದೇ ಜೈಕಾರ ಇದೆಯಾ ಎಂದು ಹೇಳಿದರು. ಬಳಿಕ ಭಾಷಣ ಆರಂಭ ಮಾಡಿದರು. ಧಾರ್ಮಿಕ ಚಟುವಟಿಕೆಗಳ ಜತೆಗೆ ಜನರಿಗೆ ಹೊಸ ವಿಚಾರಗಳನ್ನೂ ಜಾತ್ರೆ ಮೂಲಕ ತಿಳಿಸುವ ಕಾರಣದಿಂದಲೇ ಹತ್ತೂರಿಗಿಂತ ಸುತ್ತೂರು ಜಾತ್ರೆ ಉತ್ತಮ ಎನ್ನುವ ಮಾತು ಜನಜನಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಮೈಸೂರು ಮಾತ್ರವಲ್ಲದೇ ಕರ್ನಾಟಕದ ನಾನಾ ಭಾಗ, ಹೊರ ರಾಜ್ಯ, ದೇಶಗಳಲ್ಲೂ ಶಿಕ್ಷಣ ಸಂಸ್ಥೆಗಳ ಮೂಲಕ…
ರಾಜ್ಯಕ್ಕೆ ಅಮಿತ್ ಶಾ ಆಗಮನ ವೇಳೆಯಲ್ಲಿ ಅಮಿತ್ ಶಾ ಎದುರಲ್ಲೇ ಮೈಸೂರು–ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಪರಸ್ಪರ ಜಗಳ ಮಾಡಿಕೊಂಡಿದ್ದಾರೆಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವರದಿಯಾಗಿದೆ. ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಲೈನಪ್ ಬಗ್ಗೆ ಸೂಚನೆ ಹಗೂ ಪೊಲೀಸರ ಅನುಮತಿಯನ್ವಯ ನಿಲ್ಲುವಂತೆ ಮನವಿ ವೇಳೆ ಮಾಜಿ ಶಾಸಕ ಪ್ರೀತಮ್ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದು, ಇದಕ್ಕೆ ತಿರುಗೇಟು ನೀಡಿದ ಪ್ರತಾಪ್ ಸಿಂಹ ಇದೆಲ್ಲವನ್ನೂ ಹಾಸನದಲ್ಲಿ ಇಟ್ಕೋ, ನಮ್ಮಲ್ಲಿ ನಡೆಯಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪ್ರೀತಂ ಗೌಡ ಸುಮ್ಮನಾಗದೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಇಬ್ಬರ ನಡುವಿನ ಮಾತಿನ ವಾಕ್ಸಮರವೇ ನಡೆದಿದೆ. ಈ ವೇಳೆ ಅವರನ್ನು ಸ್ಥಳೀಯ ನಾಯಕರು ಸುಮ್ಮನಾಗಿಸಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಜೊತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವೇದಿಕೆ ಹಂಚಿಕೊಳ್ಳಲಿದ್ದಾರೆ. ನಾಯಕರು ಸುತ್ತೂರು ಜಾತ್ರಾಮಹೋತ್ಸವದಲ್ಲಿ ಭಾಗಿಯಾಗಲಿದ್ದು, ಮೈತ್ರಿ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಾತ್ರವಲ್ಲ ಸಿಎಂ…
ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಾಗಲೋ, ಅಥವಾ ಎಲ್ಲಾದರೂ ಹೋಗುವಾಗಲೋ ಹೆಲ್ಮೆಟ್ ಹಾಕೋದಿಲ್ವ? ಹಾಗಾದರೆ ಇನ್ಮುಂದೆ ನೀವು ಹೆಲ್ಮೆಟ್ ಇಲ್ಲದೇ ಮಕ್ಕಳನ್ನು ಕರ್ಕೊಂಡು ಹೋದ್ರೆ ಪೊಲೀಸರು ಕ್ರಮ ತೆಗೆದುಕೊಳ್ಳೋದು ಗ್ಯಾರಂಟಿ. ಯಾಕೆಂದ್ರೆ ‘ಆರು ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಿದ್ದು, ಈ ನಿಯಮವನ್ನು ಪಾಲಿಸಬೇಕು’ ಎಂದು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ನಗರದ ಯಾವುದೇ ಶಾಲಾ–ಕಾಲೇಜು ಬಳಿ ಸಂಚಾರ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಲವು ಪೋಷಕರು, ಮಕ್ಕಳನ್ನು ಹೆಲ್ಮೆಟ್ ಇಲ್ಲದೇ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಇಂಥ ಪೋಷಕರಿಗೆ ಪೊಲೀಸರು, ‘6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಿದೆ. ಇಂದಿನಿಂದಲೇ ಮಕ್ಕಳಿಗೆ ಹೆಲ್ಮೆಟ್ ಹಾಕಿಸಿ’ ಎಂದು ಸೂಚನೆ ನೀಡುತ್ತಿದ್ದಾರೆ ಜತೆಗೆ ಇನ್ನು ಮುಂದಿನ ದಿನಗಳಲ್ಲಿ ಈ ರೂಲ್ಸ್ ಪಾಲಿಸದೇ ಇದ್ದರೆ ಶಿಸ್ತು ಕ್ರಮದ ಬಗ್ಗೆಯೂ ಎಚ್ಚರಿಕೆಯನ್ನೂ ನೀಡುತ್ತಿದ್ದಾರೆ. ಶಾಲೆ–ಕಾಲೇಜು ಬಳಿ ಹೆಲ್ಮೆಟ್ ರಹಿತ ಚಾಲನೆ, ಪರವಾನಗಿ ಇಲ್ಲದೇ ಚಾಲನೆ, ಪಾದಚಾರಿ…
ಅಯೋಧ್ಯೆಯ ರಾಮ ಮಂದಿರವು ದಿನನಿತ್ಯ ಹರಿದು ಬರುತ್ತಿರುವ ಭಕ್ತರ ಸಂಖ್ಯೆ ಮತ್ತು ಆದಾಯದಿಂದ ಬೆರಗುಗೊಳಿಸುತ್ತದೆ. ‘ಪ್ರಾಣ ಪ್ರತಿಷ್ಠೆ’ ಮುಗಿದ ಕೆಲವೇ ದಿನಗಳಲ್ಲಿ ದೇವಸ್ಥಾನಕ್ಕೆ ಕೋಟಿಗಟ್ಟಲೆ ಕಾಣಿಕೆ ಸಿಕ್ಕಿತು. 15 ದಿನಗಳಲ್ಲಿ ರಾಮ ಮಂದಿರಕ್ಕೆ 12.8 ಕೋಟಿ ಆದಾಯ ಬಂದಿದೆ. ಅಯೋಧ್ಯೆಗೆ ರಾಮ ಭಕ್ತರ ನೂಕು ನುಗ್ಗಲು ದಿನೇ ದಿನೇ ಹೆಚ್ಚುತ್ತಿದೆ ಎನ್ನುವುದನ್ನು ಅಂಕಿ ಅಂಶಗಳು ತೋರಿಸುತ್ತಿವೆ. 15 ದಿನಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಿತ್ಯ ಸರಾಸರಿ 2 ಲಕ್ಷ ಭಕ್ತರು. ಶೋ ಆದಾಯದಲ್ಲೂ ಭಾರಿ ಏರಿಕೆಯಾಗಿದೆ. 15 ದಿನಗಳಲ್ಲಿ 12.8 ಕೋಟಿ ರೂ. ಕಾಣಿಕೆ ದೊರೆತಿದೆ. ಸಮರ್ಪಣಾ ದಿನವಾದ ಜನವರಿ 22 ರಂದು ಮಾತ್ರ 3.17 ಕೋಟಿಗಳನ್ನು ಪ್ರದರ್ಶನವಾಗಿ ಸ್ವೀಕರಿಸಲಾಗಿದೆ. ಪ್ರತಿಷ್ಠಾ ಮೊದಲು ಸರಾಸರಿ ಮಾಸಿಕ ಕೊಡುಗೆ 40-50 ಲಕ್ಷ ರೂ. ಗರ್ಭಗುಡಿಯಲ್ಲಿ ಇರಿಸಲಾಗಿರುವ ನಾಲ್ಕು ಪೆಟ್ಟಿಗೆಗಳು ಸೇರಿದಂತೆ ದೇವಾಲಯದ ಆವರಣದಲ್ಲಿ ಅಥವಾ ಆನ್ ಲೈನ್‌ನಲ್ಲಿ ಇರಿಸಲಾಗಿರುವ ಕಾಣಿಕೆ ಪೆಟ್ಟಿಗೆಗಳ ಮೂಲಕ ಭಕ್ತರು ದೇಣಿಗೆ ನೀಡಬಹುದು.
ಜಮ್ಮು-ಕಾಶ್ಮೀರದಲ್ಲಿ ಮನೆಗೆ ಬೆಂಕಿ ತಗುಲಿ ಮೂವರು ಸಹೋದರಿಯರು ಸಜೀವ ದಹನವಾಗಿದ್ದಾರೆ. ರಾಂಬನ್ ಜಿಲ್ಲೆಯ ಧನ್ಮಸ್ತ-ತಜ್ನಿಹಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಂದು ಮುಂಜಾನೆ ಮೂರು ಅಂತಸ್ತಿನ ಮನೆಗೆ ಬೆಂಕಿ ಕಾಣಿಸಿಕೊಂಡಿದೆ. ಮೃತರನ್ನು ಬಿಸ್ಮಾ (18), ಸೈಕಾ (14) ಮತ್ತು ಸಾನಿಯಾ (11) ಎಂದು ಗುರುತಿಸಲಾಗಿದೆ. ಸಹೋದರಿಯರು ಮಹಡಿಯ ಮೇಲೆ ಮಲಗಿದ್ದರು. ಬೆಂಕಿ ವ್ಯಾಪಿಸಿದ ನಂತರ ಅವರು ಮನೆಯೊಳಗೆ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನು ಹೊರತೆಗೆದಿದ್ದಾರೆ. ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಭಾವನೆ ಹೆಚ್ಚಿಸಿಕೊಳ್ಳುವ ಮೂಲಕ ಜಾನ್ವಿ ಕಪೂರ್ ಇದೀಗ ಸುದ್ದಿಯಲ್ಲಿದ್ದಾರೆ. ಜೂನಿಯರ್ ಎನ್ ಟಿಆರ್ ನಟನೆಯ ‘ದೇವರ’ ಸಿನಿಮಾಗೆ ಜಾನ್ವಿ ಕಪೂರ್ ನಾಯಕಿಯಾಗಿದ್ದು, ಆ ಸಿನಿಮಾಗೆ ಅವರು 5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ದೇವರ ಸಿನಿಮಾದ ಬೆನ್ನಲ್ಲೇ ರಾಮ್ ಚರಣ್ ನಟನೆಯ ಹೊಸ ಚಿತ್ರಕ್ಕೂ ಜಾನ್ವಿ ಕಪೂರ್ ನಾಯಕಿಯಾಗಿದ್ದಾರೆ. ಆ ಸಿನಿಮಾಕ್ಕೆ ಅವರು 6 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಒಂದು ಚಿತ್ರ ಮುಗಿದು, ಮತ್ತೊಂದು ಚಿತ್ರವನ್ನು ಒಪ್ಪಿಕೊಳ್ಳುವಾಗ ಪ್ರತಿಬಾರಿಯೂ ಒಂದೊಂದು ಕೋಟಿ ಏರಿಕೆ ಮಾಡುತ್ತಿರುವ ಜಾನ್ವಿ ಸದ್ಯದಲ್ಲೇ ತನ್ನ ಸಂಭಾವನೆಯನ್ನು 10 ಕೋಟಿಗೆ ಏರಿಕೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಜಾನ್ವಿ ಕಪೂರ್ ಗೆ ಬಹಳ ಜನಪ್ರಿಯತೆ ಇದೆ. ಶ್ರೀದೇವಿಯ ಮಗಳು ಎಂಬ ಕಾರಣಕ್ಕೆ ಅವರನ್ನು ಅಭಿಮಾನಿಗಳು ಇಷ್ಟಪಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಜಾನ್ವಿ ಕಪೂರ್ ತುಂಬ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಗ್ಲಾಮರಸ್ ಆದಂತಹ ಫೋಟೋಗಳನ್ನು ಪೋಸ್ಟ್ ಮಾಡುತ್ತಾರೆ.
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಇದೀಗ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ವಿ.ಸೋಮಣ್ಣ ಅವರಿಗೆ ಟಿಕೆಟ್ ಕೈತಪ್ಪಿದೆ. ಮಾಜಿ ಸಚಿವ ಸೋಮಣ್ಣ ಅವರ ಬದಲು ನಾರಾಯಣ ಭಾಂಡಗೆಗೆ ಟಿಕೆಟ್ ನೀಡಲಾಗಿದೆ. ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಛತ್ತೀಸ್ ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್ ಸಿಂಗ್, ಹರಿಯಾಣದಲ್ಲಿ ಸುಭಾಷ್ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್.ಪಿ.ಎನ್ ಸಿಂಗ್ ಗೆ ಟಿಕೆಟ್ ನೀಡಲಾಗಿದೆ.
ಮಧುಗಿರಿ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಹಿನ್ನೆಲೆ ಪಾವಗಡ ಗೇಟ್ ಸರ್ಕಲ್ ನಲ್ಲಿ ಇರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆಯನ್ನು ಇಂದು ನೇರವೇರಿಸಲಾಯಿತು. ಸಂವಿಧಾನ ಜಾಗೃತಿ ಜಾಥಾ ವಾಹನ ಮಧುಗಿರಿಗೆ ಬಂದ ಹಿನ್ನೆಲೆ ಶಾಲಾ, ಕಾಲೇಜಿನ ಮಕ್ಕಳು ಹಾಗೂ ವಿವಿಧ ಜಾನಪದ ಕಲಾ ತಂಡಗಳು ನೃತ್ಯದ ಮೂಲಕ ಜಾಥಾ ರಥವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಈ ಸಮಯದಲ್ಲಿ ಸ್ತಬ್ಧ ಚಿತ್ರ ವಾಹನದಲ್ಲಿ ಇರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ಮಾಲೆಯನ್ನು ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು ಆಡಳಿತದ ವಿವಿಧ ಅಧಿಕಾರಿಗಳು, ತಾಲ್ಲೂಕಿನ ಮುಖಂಡರು ಸಾರ್ವಜನಿಕರು ಹಾಜರಿದ್ದರು.
ಲಕ್ನೋ: ನಾನು ರಾಮಭಕ್ತನಾಗಿದ್ದರಿಂದ ರಾಮನನ್ನು 14 ವರ್ಷಗಳ ಕಾಲ ವನವಾಸಕ್ಕೆ ಕಳುಹಿಸಲಾಗಿದೆ, ಕಾಂಗ್ರೆಸ್ ಪಕ್ಷವು 6 ವರ್ಷಗಳ ಬದಲಿಗೆ 14 ವರ್ಷಗಳ ಕಾಲ ನನ್ನನ್ನು ಹೊರಹಾಕಬೇಕೆಂದು ನಾನು ಬಯಸುತ್ತೇನೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ನಂತರ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿರುವುದರ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಆಚಾರ್ಯ ಪ್ರಮೋದ್ ಕೃಷ್ಣಂ ಅಸಮಾಧಾನ ವ್ಯಕ್ತಪಡಿಸಿದರು. ವಿರೋಧಿ ಚಟುವಟಿಕೆಗಳಿಂದಾಗಿ ನನ್ನನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ಪತ್ರ ಬರೆದಿದೆ ಎಂದು ನನಗೆ ನಿನ್ನೆ ತಿಳಿಯಿತು. ನನ್ನನ್ನು ಬಿಡುಗಡೆ ಮಾಡಿದ್ದಕ್ಕಾಗಿ ನಾನು ಕಾಂಗ್ರೆಸ್ ಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಯಾವ ಚಟುವಟಿಕೆಗಳು ಪಕ್ಷ ವಿರೋಧಿ ಎಂಬುದನ್ನು ತಿಳಿಸಬೇಕು? ಶ್ರೀರಾಮನ ಹೆಸರನ್ನು ತೆಗೆದುಕೊಳ್ಳುವುದು ಪಕ್ಷ…
ಬೆಂಗಳೂರು: ಇಂದೇ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಎನ್ ಡಿಆರ್ಎಫ್ ಅಡಿ ಬರ ಪರಿಹಾರ ಘೋಷಣೆ ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದೇ ಗೃಹ ಸಚಿವರು ಘೋಷಣೆ ಮಾಡಿದರೆ ರೈತರ ಪರ ಕಾಳಜಿ ಇದೆ ಅಂತ ಒಪ್ಪುತ್ತೇವೆ. ಇಲ್ಲದಿದ್ದರೆ ರೈತರ ಪರ ಯಾವುದೇ ಕಾಳಜಿ ಇಲ್ಲ, ಕೇವಲ ನಾಟಕ ಮಾಡುತ್ತಿದ್ದಾರೆ ಅಂತ ಅನಿಸುತ್ತದೆ ಎಂದರು. ಬರ ಪೀಡಿತ ತಾಲೂಕುಗಳನ್ನು ಸೆಪ್ಟೆಂಬರ್ 13 ರಂದು ಘೋಷಣೆ ಮಾಡಿದ್ದು, 18,172 ಕೋಟಿ ಬರ ಪರಿಹಾರಕ್ಕಾಗಿ ಸೆಪ್ಟೆಂಬರ್ 23 ರಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಕೇಂದ್ರ ಕೃಷಿ ಕಾರ್ಯದರ್ಶಿಯನ್ನೂ ಭೇಟಿ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಮಾಡಿದ್ದೇವೆ. ಜನವರಿಯಲ್ಲೂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಸಭೆ ಮಾಡಿ ಯಾವ ತೀರ್ಮಾನವೂ ಕೈಗೊಂಡಿಲ್ಲ ಎಂದರು.