Author: admin

ತಿಪಟೂರು: ಜಲಮೂಲಗಳ ಸಂರಕ್ಷಣೆ ಅತ್ಯಂತ ಮಹತ್ವವಾದದ್ದು, ಜಲವಿಲ್ಲದಿದ್ದರೆ ಬದುಕಲು ಅಸಾಧ್ಯ ಹಾಗಾಗಿ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿದರು. ತಿಪಟೂರು ತಾಲೂಕಿನ ಸುಕ್ಷೇತ್ರ ಕೆರಗೋಡಿ- ರಂಗಾಪುರ ಶ್ರೀ ಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ನಮ್ಮೂರು ನಮ್ಮ ಕೆರೆ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಮಾಡಲಾದ 610 ನೇ ಕೆರೆ ಹಸ್ತಾಂತರ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಲ ಇಲ್ಲದೆ ಯಾರೊಬ್ಬರೂ ಬದುಕಲು ಸಾಧ್ಯವಿಲ್ಲ ಅಗ್ನಿ ವಾಯು ಕೂಡ ಮುಖ್ಯ ಆದರೆ ನಾವು ಮುಖ್ಯವಾದವುಗಳನ್ನೇ ಮರೆಯುತ್ತಿದ್ದೇವೆ. 2022 ರಲ್ಲಿ ಉಂಟಾದ ಅತಿವೃಷ್ಟಿಯನ್ನು ನಾವೆಲ್ಲರೂ ನಮ್ಮ ಕಣ್ಣೆದುರೇ ನೋಡಿದ್ದೇವೆ. ಕೆರೆ ಕುಂಟೆಗಳು ಕಾಲುವೆಗಳು ಸರಿಯಾಗಿದ್ದರೆ ನೀರು ಸರಿಯಾಗಿ ಹರಿಯುತ್ತದೆ ಅದರಿಂದ ಕೆರೆಕುಂಟೆ ಗಳ ಉಳಿವಿಗೆ ಸಂಸ್ಥೆಯ ಯೋಜನೆಯ ಮೂಲಕ ಕಾರ್ಯಕ್ರಮವನ್ನು ರೂಪಿಸಿದ್ದು ಇದಕ್ಕೆ ಗ್ರಾಮಸ್ಥರ ಸಹಕಾರವು ಮುಖ್ಯ ಎಂದರು. ಗ್ರಾಮದ ಕೆರೆ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಹಲವಡೆ ಕೆರೆ ಅಭಿವೃದ್ಧಿ…

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯಲ್ಲಿ ಅತ್ಯಂತ ಅದ್ಧೂರಿಯಿಂದ ಸಂವಿಧಾನ ಜಾಗೃತಿ ಜಾಥ ಯಶಸ್ವಿ ಕಂಡಿದೆ. ಬೂದಗವಿ(ಸಿದ್ದರಬೆಟ್ಟ) ಗ್ರಾಮ ಪಂಚಾಯತ್ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮಕ್ಕೆ ಬಂದ ಸಂವಿಧಾನ ಜಾಗೃತಿ ಜಾಥಾ ರಥವನ್ನು ವಿವಿಧ ಕಲಾ ತಂಡಗಳೊಂದಿಗೆ ಕುಂಭ ಕಳಸ ಹೊತ್ತು ಮಹಿಳೆಯರು ಸ್ವಾಗತಿಸಿಕೊಂಡು ಗ್ರಾಮ ಪಂಚಾಯತ್ ಆಡಳಿತ ವರ್ಗ ಚಾಲನೆ ನೀಡಿತು. ಕೊರಟಗೆರೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ,ಸಮಾಜ ಕಲ್ಯಾಣ ಇಲಾಖೆ ರಾಜ್ಯ ಸರ್ಕಾರ ಆದೇಶದಂತೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳನ್ನ ತಳಿರು ತೋರಣಗಳಿಂದ ಸಿಂಗರಿಸಿ ಅತ್ಯಂತ ಆತ್ಮೀಯವಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘು ನಂದನ್, ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಭಾರತೀಯರಾದ ನಾವೆಲ್ಲರೂ ಅತ್ಯಂತ ಹೆಮ್ಮೆಯಿಂದ ಗೌರವಿಸಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ನಿಲುವುಗಳನ್ನ ಪಾಲಿಸಬೇಕು. ಈ ಕಾರ್ಯಕ್ರಮವು…

Read More

ಸಿಕ್ಕಿಂನಲ್ಲಿ ಹಲವು ಕಾರುಗಳಿಗೆ ಹಾಲಿನ ಟ್ರಕ್ ಡಿಕ್ಕಿ ಹೊಡೆದ  ಪರಿಣಾಮ ಮೂವರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಈ ಘಟನೆ ನಡೆದಿದೆ. ಸಿಕ್ಕಿಂನ ರಾಣಿಪೂಲ್‌ ನಲ್ಲಿ ಶನಿವಾರ ನಡೆದ ಜಾತ್ರೆಯಲ್ಲಿ ನಿಂತಿದ್ದ ಮೂರು ಕಾರುಗಳಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಆ ಪ್ರದೇಶದಲ್ಲಿ ನೆರೆದಿದ್ದ ಅನೇಕರು ನಜ್ಜುಗುಜ್ಜಾದರು. ಹಾಲಿನ ಟ್ಯಾಂಕರ್ ನ ಬ್ರೇಕ್ ಫೇಲ್‌ ಆಗಿರೋದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಗಳಿಂದ ತಿಳಿದು ಬಂದಿದೆ. ಗಾಯಾಳುಗಳನ್ನು ಸೆಂಟ್ರಲ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಪಘಾತದ ವೇಳೆ ಮೈದಾನ ಜನರಿಂದ ತುಂಬಿತ್ತು. ಹಾಲಿನ ಟ್ಯಾಂಕರ್ ಬದಿಯಲ್ಲಿ ಸಿಕ್ಕಿಂ ಹಾಲು ಒಕ್ಕೂಟದ ಲೇಬಲ್ ಇತ್ತು.

Read More

ಉತ್ತರ ಪ್ರದೇಶ ವಿಧಾನಸಭೆಯ ಎಲ್ಲಾ ಸದಸ್ಯರು ಇಂದು ಅಯೋಧ್ಯೆ ರಾಮ ಮಂದಿರದಲ್ಲಿ ದರ್ಶನ ಪಡೆಯಲಿದ್ದಾರೆ. ಫೆಬ್ರವರಿ 11 ರಂದು ರಾಮಲಲ್ಲಾನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುವಂತೆ ಮುಖ್ಯಮಂತ್ರಿ ಯೋಗಿ ಬುಧವಾರ ಎಲ್ಲಾ ಸದಸ್ಯರಿಗೆ ಮನವಿ ಮಾಡಿದ್ದರು. ವಿಧಾನಸಭೆ ಸ್ಪೀಕರ್ ಸತೀಶ್ ಮಹಾನಾ ಅವರು ಅಯೋಧ್ಯೆಗೆ ಭೇಟಿ ನೀಡುವಂತೆ ಎಲ್ಲ ಸದಸ್ಯರಿಗೆ ಆಹ್ವಾನ ನೀಡಿದ್ದಾರೆ. ಇದಕ್ಕಾಗಿ ಸಾರಿಗೆ ಸಂಸ್ಥೆಯ 10 ಸೂಪರ್ ಲಕ್ಸುರಿ/ಪ್ರೀಮಿಯಂ ಬಸ್ ಗಳನ್ನು ಸ್ಥಾಪಿಸಲಾಗುವುದು. ಯೋಗಿ ಸರ್ಕಾರದ ಪರವಾಗಿ ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಬಸ್‌ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ಎಲ್ಲಾ ಸದಸ್ಯರನ್ನು ಸಾಗಿಸಲು ಈ ಬಸ್‌ ಗಳು ಬೆಳಿಗ್ಗೆ 8:15 ಕ್ಕೆ ವಿಧಾನ ಭವನದ ಮುಂದೆ ಬರುತ್ತವೆ. ಬಸ್‌ ಗಳಲ್ಲಿ ಅಗ್ನಿಶಾಮಕ ಸಾಧನ ಇರಬೇಕು. ಜೊತೆಗೆ ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ಹೊಂದಿರುವುದು ಮುಂತಾದ ಸೂಚನೆಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೇರವಾಗಿ ಅಯೋಧ್ಯೆ ವಿಮಾನ ನಿಲ್ದಾಣ ತಲುಪಲಿದ್ದಾರೆ. ಇದಾದ ಬಳಿಕ ಸಚಿವರು ಸದನದ ಸದಸ್ಯರೊಂದಿಗೆ ದರ್ಶನಕ್ಕೆ…

Read More

ದೆಹಲಿ ಚಲೋ ಮಾರ್ಚ್ ಎದುರಿಸಲು ಹರಿಯಾಣ ಸಿದ್ಧತೆ ನಡೆಸಿದೆ. 13 ರಂದು ಸಂಯುಕ್ತ ಕಿಸಾನ್ ಮೋರ್ಚಾ, ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಗಳಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿಪಡಿಸಲು ಕಾನೂನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಪಾದಯಾತ್ರೆಯ ಉದ್ದೇಶವಾಗಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸರ್ಕಾರ ಫೆಬ್ರವರಿ 13 ರವರೆಗೆ ಮೊಬೈಲ್ ಇಂಟರ್ನೆಟ್, ಬಲ್ಕ್ ಎಸ್ಎಂಎಸ್ ಮತ್ತು ಎಲ್ಲಾ ಡಾಂಗಲ್ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿತು. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈ ಆದೇಶವು ಫೆಬ್ರವರಿ 11 ರಂದು ಬೆಳಿಗ್ಗೆ 6 ರಿಂದ ಫೆಬ್ರವರಿ 13 ರ ರಾತ್ರಿ 11:59 ರವರೆಗೆ ಜಾರಿಯಲ್ಲಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹರಿಯಾಣ ಸರ್ಕಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಮೊಬೈಲ್ ನೆಟ್‌ವರ್ಕ್‌ಗಳಲ್ಲಿ ಧ್ವನಿ ಕರೆಗಳನ್ನು ಹೊರತುಪಡಿಸಿ…

Read More

ಸರಗೂರು:  ಫೆ.26ರ ಸೋಮವಾರದಿಂದ ಫೆ.೨28ರವರೆಗೆ  ಕಂದೇಗಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವನ್ನು ಆಚರಿಸಲು ಜಾತ್ರಾ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ತಾಲ್ಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದೇಗಾಲ ಗ್ರಾಮದ ಮಹದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ  ಪೂರ್ವಭಾವಿ ಸಭೆಯಲ್ಲಿ ಕಮಿಟಿ ಅಧ್ಯಕ್ಷ ಮತ್ತು ಸರ್ವಸದಸ್ಯರು ಸುತ್ತಮುತ್ತಲಿನ ಗ್ರಾಮದ ಮುಖಂಡರೊಂದಿಗೆ ಮಂಗಳವಾರ ದಂದು ನಡೆದ ಸಭೆಯಲ್ಲಿ  ಫೆ.26ರಿಂದ ಫೆ.28ರ ವರೆಗೆ ಮಹದೇಶ್ವರ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಎಂದು ಕಮಿಟಿಯವರು ತೀರ್ಮಾನಿಸಲಾಯಿತು. ಪೂರ್ವಭಾವಿ ಸಭೆ ನಡೆಸಿದ ಅವರು, ‘ಜಾತ್ರಾ ದಿನಗಳಂದು 10 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಅವರ ಸೌಕರ್ಯಕ್ಕೆ ಕೊರತೆಯಾಗದಂತೆ ಈಗಿನಿಂದಲೇ ಅವಶ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ’ ಎಂದರು. ಜಿಲ್ಲೆಯ ವಿವಿಧ ತಾಲ್ಲೂಕಿನ ಭಾಗಗಳಲ್ಲದೆ  ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚು ಬಸ್‌ಗಳನ್ನು ನಿಯೋಜಿಸಬೇಕು. ಕಳೆದ ಬಾರಿಗಿಂತ ಕನಿಷ್ಠ ಶೇ 10ರಷ್ಟು ಬಸ್‌ಗಳನ್ನು ಹೆಚ್ಚು ಮಾಡಬೇಕಿದೆ’ ಎಂದರು. ಜಾತ್ರಾ ಗೆ ಬರುವವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು.…

Read More

ಬೆಂಗಳೂರು: ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ರಾಮಲಿಂಗಾರೆಡ್ಡಿ ನ್ಯಾಯಾಲಯಕ್ಕೆ ಹಾಜರಾಗದೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಜೆ.ಪ್ರೀತ್ ಅವರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು: ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ ನಲ್ಲಿ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮಾತನಾಡಿದ ಸಿಎಂ,  ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ, ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು ಎಂದು ಮುಖ್ಯಮಂತ್ರಿಗಳು ಪಟ್ಟಿ ಮಾಡಿದರು. ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನಗಳನ್ನು ನಾವು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013 ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ98 ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ…

Read More

ಖಾಸಗಿ ಶಾಲಾ ಬಸ್‌ ಗೆ ಟ್ಯಾಂಕರ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಮಕ್ಕಳಿದ್ದ ಬಸ್‌ ಉರುಳಿ ಬಿದ್ದ ಘಟನೆ ಮೈಸೂರಿನ ಸಾಲಿಗ್ರಾಮ- ಭೇರ್ಯ ಹೆದ್ದಾರಿಯಲ್ಲಿ ಬರುವ ಕುರುಬಹಳ್ಳಿ ಗೇಟ್ ಬಳಿ ನಡೆದಿದೆ. ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದ ಸಿಇಟಿ ಖಾಸಗಿ ಶಾಲೆಗೆ ಸೇರಿ ಮಿನಿ ಬಸ್ ಇದಾಗಿದೆ. ಟ್ಯಾಂಕರ್‌ ವಾಹನವು ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿತ್ತು. ಕುರುಬಹಳ್ಳಿ ಗ್ರಾಮದಿಂದ ಇದೇ ಮಾರ್ಗವಾಗಿ ಶಾಲಾ ಮಕ್ಕಳಿದ್ದ ಮಿನಿ ಬಸ್‌ ಮಿರ್ಲೆ ಗ್ರಾಮಕ್ಕೆ ಹೋಗುತ್ತಿತ್ತು. ಕುರುಬಹಳ್ಳಿ ಗೇಟ್ ಬಳಿ ಏಕಾಏಕಿ ಶಾಲಾ ಮಕ್ಕಳಿರುವ ಮಿನಿ ಬಸ್‌ಗೆ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಯಲ್ಲಿ ಮಿನಿ ಬಸ್‌ ಉರುಳಿ ಬಿದ್ದಿದೆ. ಶಾಲಾ ಬಸ್ ‌ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್‌ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಯಗೊಂಡ ಮಕ್ಕಳನ್ನು ರವಾನಿಸಲಾಗಿದೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಬಳ್ಳಾಪುರ:  ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ  ಚಿಕ್ಕಬಳ್ಳಾಪುರದ ಚಿಂತಾಮಣಿ – ಶ್ರೀನಿವಾಸಪುರ ರಸ್ತೆಯ ಹಂದಿಜೋಗಿಗಡ್ಡೆ ಗೇಟ್ ಬಳಿ ನಡೆದಿದೆ. ಊಲವಾಡಿ ಗ್ರಾಮದ ಮನೋಜ್ ಕುಮಾರ್(24) ಮೃತ ದುರ್ದೈವಿಯಾಗಿದ್ದಾರೆ. ಮತ್ತೊಬ್ಬ ಸವಾರ ನರಸಿಂಹಮೂರ್ತಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Read More