Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ತುಮಕೂರು: ಶಿಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ. ಮರಿಯಪ್ಪ (47) ಕೊಲೆಯಾದ ಶಿಕ್ಷಕರಾಗಿದ್ದಾರೆ. ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿಯ ಕುಳ್ಳಿನಂಜಯ್ಯಪಾಳ್ಯದ ನಿವಾಸಿಯಾಗಿದ್ದ ಮರಿಯಪ್ಪ, ಮೋದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗಿನಜಾವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೈ ಕತ್ತರಿಸಿ, ತಲೆಭಾಗಕ್ಕೆ ಬಲವಾಗಿ ಹೊಡೆದು ಭೀಕರ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಎಎಸ್ ಪಿ ಮರಿಯಪ್ಪ, ಕುಣಿಗಲ್ ಡಿವೈಎಸ್ ಪಿ ಓಂಪ್ರಕಾಶ್ ಹಾಗೂ ಇನ್ಸ್ ಪೆಕ್ಟರ್ ನವೀನ್ ಗೌಡ ಭೇಟಿ ಪರಿಶೀಲನೆ ನಡೆಸಿದರು. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದ ವಿಚಾರದಲ್ಲಿ ಚೀನಾದ ಈ ಯುವತಿ ಎಲ್ಲರಿಗಿಂತ ಒಂದು ಹೆಜ್ಜೆ ಮುಂದಿದ್ದಾಳೆ ಎಂದರೆ ತಪ್ಪಿಲ್ಲ. ಯಾಕೆಂದರೆ ಇವರು ಸೋಷಿಯಲ್ ಮೀಡಿಯಾ ಮೂಲಕ ಬರೋಬ್ಬರಿ 120 ಕೋಟಿ ರೂ. ಗಳಿಸುತ್ತಾರೆ ಎಂದು ವರದಿ ತಿಳಿಸಿದೆ. ಚೀನಾದ ಸೋಷಿಯಲ್ ಮೀಡಿಯಾ ಇನ್ ಫ್ಲ್ಯುಯೆನ್ಸರ್ (Social media influencers) ಜೆಂಗ್ ಕ್ಸಿಯಾಂಗ್ ಕ್ಸಿಯಾಂಗ್ (Zheng Xiang Xiang) ಸೋಷಿಯಲ್ ಮೀಡಿಯಾ ಮೂಲಕ ಕೋಟಿ ಕೋಟಿ ಆದಾಯ ಗಳಿಸುತ್ತಿರುವವರು ಎನ್ನಲಾಗಿದೆ. ಚೀನಾದಲ್ಲಿ ಉತ್ಪಾದನಾ ಕಂಪನಿಗಳ ಸಂಖ್ಯೆಯೇ ಹೆಚ್ಚು, ಈಕೆ ಅವರನ್ನೇ ಟಾರ್ಗೆಟ್ ಮಾಡಿದ್ದಾಳೆ ಎನ್ನಲಾಗಿದೆ. ಅವರು ಆನ್ ಲೈನ್ ಮೂಲಕ ವಿವಿಧ ಉತ್ಪನ್ನಗಳ ಪ್ರಚಾರ ಕ್ರಾಂತಿಯನ್ನೇ ಉಂಟು ಮಾಡಿದ್ದು, ಆ ಮೂಲಕ ಅಪಾರ ಆದಾಯ ಗಳಿಸುತ್ತಿದ್ದಾರೆ ಎನ್ನಲಾಗಿದೆ. ಈಕೆ ಟಿಕ್ ಟಾಕ್ ಆ್ಯಪ್ ನ ಚೀನಾದ ಅವತರಿಣಿಕೆ ಡೌಯಿನ್ ಲ್ಲಿ ಜೆಂಗ್ ಕ್ಸಿಯಾಂಗ್ 50 ಲಕ್ಷಕ್ಕಿಂತ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಉತ್ಪನ್ನಗಳನ್ನು ಪರಿಚಯಿಸುವ ವಿಧಾನ ಬಹು ಜನಪ್ರಿಯವಾಗಿದೆ. ಬಹುತೇಕ ಸೋಷಿಯಲ್ ಮೀಡಿಯಾ ಇನ್ ಫ್ಲ್ಯುಯೆನ್ಸರ್ ಗಳು…
ಯುವ ಜನತೆಗೆ ದೇಶ ಸೇವೆ ಮಾಡುವ ಅವಕಾಶ ಕಲ್ಪಿಸುವ ಉದ್ದೇಶದಿಂದ ರಕ್ಷಣಾ ಇಲಾಖೆ ‘ಅಗ್ನಿಪಥ್’ ಎಂಬ ವಿಶೇಷ ಯೋಜನೆ ಜಾರಿಗೆ ತಂದಿದೆ. ಇದರ ಮೂಲಕ ವಾಯುಪಡೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಗ್ನಿಪಥ್ ಮೂಲಕ ಈಗಾಗಲೇ ಸಾವಿರಾರು ಯುವಜನತೆ ರಾಷ್ಟ್ರ ರಕ್ಷಣೆಗಾಗಿ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಹುದ್ದೆಗಳ ವಿವರ: ಅವಿವಾಹಿತ ಯುವಕ/ಯುವತಿಯರು ಅಗ್ನಿವೀರ್ ಹುದ್ದೆಯ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. ಎಷ್ಟು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂಬ ನಿರ್ದಿಷ್ಟ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ತಿಳಿಸಿಲ್ಲ. ವಿದ್ಯಾರ್ಹತೆ: ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್)/ ಮೂರು ವರ್ಷಗಳ ಡಿಪ್ಲೊಮಾ ಪದವಿ ಪಡೆದಿರಬೇಕು. ವಯೋಮಿತಿ: ಜನವರಿ 2, 2004ರಿಂದ ಜುಲೈ 2, 2007ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ವೇತನ: ಈ ಹುದ್ದೆಗಳಿಗೆ ಮೊದಲ ವರ್ಷ 30,000, ಎರಡನೇ ವರ್ಷದಲ್ಲಿ 33,000, ಮೂರನೇ ವರ್ಷದಲ್ಲಿ 36,500 ನಾಲ್ಕನೇ ವರ್ಷ 40,000 ರೂ. ವೇತನವಿದೆ. ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು…
ಮಂಗಳೂರು ಬೆಡಗಿ , ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ವಯಸ್ಸಾಗೋದೇ ಇಲ್ಲ ಅನ್ಸುತ್ತೆ. ಏಕೆಂದರೆ ಅವರ ಫಿಟ್ ನೆಸ್ ಅಂಥದ್ದು. ಮಾತ್ರವಲ್ಲ ಅವರೊಬ್ಬರು ಅದ್ಭುತ ನಟಿ. ಸ್ಯಾಂಡಲ್ ವುಡ್ ನಲ್ಲಿಯೂ ನಟಿಸಿದ ಈ ಚೆಲ್ವೆ ಬಾಲಿವುಡ್ ಚಿತ್ರಗಳಲ್ಲಿಯೇ ನಟಿಸಿ ಮನೆಮಾತಾಗಿದ್ದರು. ನಟಿ ಶಿಲ್ಪಾ ಶೆಟ್ಟಿ ಈಗ ಆ ಒಂದು ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ತಮ್ಮ 22ನೇ ವಯಸ್ಸಿನಲ್ಲಿ ಕನ್ಯತ್ವವನ್ನು ಕಳೆದುಕೊಂಡಿದ್ದರು ಎಂದು ಈ ಹಿಂದೆ ಸುದ್ದಿಯಾಗಿತ್ತು. ಅಲ್ಲದೇ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಜತೆಗಿನ ಕಿಸ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದರು. ಇದೀಗ ಈ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚಿತ್ರರಂಗ ಪ್ರವೇಶಿಸುವ ಮುನ್ನ ಶಿಲ್ಪಾ ಶೆಟ್ಟಿ ತಮ್ಮ 22ನೇ ವಯಸ್ಸಿನವರೆಗೂ ಕಿಸ್ ಮಾಡಿರಲಿಲ್ಲ. ಆದರೆ ಮೊದಲ ಬಾರಿಗೆ ಅಕ್ಷಯ್ ಕುಮಾರ್ ಜೊತೆಗೆ ಕಿಸ್ ಮಾಡಲಾಗಿದೆ ಎಂಬ ಸುದ್ದಿ ಇತ್ತು. ಈ ಸುಂದರಿಯೊಂದಿಗೆ ಡೇಟ್ ಮಾಡಿದ ಮೊದಲ ನಟ ಅಕ್ಷಯ್…
ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಹಲವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ. ಅಭಿಷೇಕ್ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್ ಶೂಟ್ ಲೋಕೇಶನ್ ಮಾಡಿಕೊಂಡಿರುವ ಅಭಿಷೇಕ್, ರೋಗಿಯೊಬ್ಬರನ್ನು ಬೆಡ್ ಮೇಲೆ ಮಲಗಿಸಿ, ಆಪರೇಷನ್ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿಯು, ಅಭಿಷೇಕ್ ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ. ಅಂತಿಮವಾಗಿ ಆಪರೇಷನ್ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಡಾ. ಅಭಿಷೇಕ್ ಜೋಡಿಯ ಪ್ರಿ-ವೆಡ್ಡಿಂಗ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನದಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೊರನಾಡಿಗೆ ಹೋಗುವ ಮುಖ್ಯರಸ್ತೆ ಬಳಿಯೇ ಈ ಕೃತ್ಯ ನಡೆದಿದ್ದು, ವಾಮಾಚಾರಕ್ಕೆ ಬಳಸಿದ್ದ ಕೂದಲು, ಉಗುರು, ಮಣ್ಣಿನ ಬೊಂಬೆಗಳು, ರಕ್ತ ನದಿ ದಡದಲ್ಲಿ ಪತ್ತೆಯಾಗಿವೆ ಹಾಗೂ ಭದ್ರಾ ನದಿಯಲ್ಲಿ 5-6 ಕುರಿ-ಮೇಕೆಗಳ ಶವ ಕೂಡಾ ಪತ್ತೆಯಾಗಿದೆ. ರಾತ್ರಿ ವೇಳೆ ನಡೆದಿರುವ ವಾಮಾಚಾರದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ವಾಮಾಚಾರದ ರಹಸ್ಯ ಭೇದಿಸಲು ಪೊಲೀಸರು ಮುಂದಾಗಿದ್ದು, ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನದಿಯಿಂದ ಮೇಕೆ-ಕುರಿಗಳ ಶವ ಹೊರಕ್ಕೆ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.
ಕೊಡಗಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಅದರಲ್ಲೂ ಕಾಡಾನೆಗಳು ರಾಜಾರೋಷವಾಗಿ ನಾಡಿನತ್ತ ಹೆಜ್ಜೆ ಹಾಕುತ್ತಿದ್ದು, ಕೃಷಿ ತೋಟಗಳಿಗೆ ಹಾನಿ ಮಾಡುತ್ತಿದೆ. ಈ ಹಿಂದೆಯೂ ಕಾಡಾನೆಗಳು ಉಪಟಳದ ಬಗ್ಗೆ ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಅಂತಹುದ್ದೇ ಘಟನೆ ಬಗ್ಗೆ ವರದಿಯಾಗಿದೆ. ಕೊಡಗಿನ ಕುಶಾಲನಗರ ತಾಲೂಕಿನ ಕಣಿವೆ ಸಮೀಪದ ಚಿನ್ನೇನಹಳ್ಳಿಯಲ್ಲಿ ಕಾಡಾನೆ ದಾಳಿಗೆ ವೃದ್ಧೆಯೊಬ್ಬರು ಕಾಲು ಮುರಿದುಕೊಂಡಿದ್ದಾರೆ. ಚಿನ್ನೇನಹಳ್ಳಿಯ ವೆಂಕಟಮ್ಮ ಆನೆ ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದೆ. ಪರಿಣಾಮ ಅವರ ಕಾಲು ಸಂಪೂರ್ಣ ಜಖಂ ಗೊಂಡ ಸ್ಥಿತಿಯಲ್ಲಿದೆ. ವೆಂಕಟಮ್ಮ ಬಹಿರ್ದೆಸೆಗೆಂದು ತೆರಳಿದಾಗ ಸಲಗವೊಂದು ದಿಢೀರ್ ದಾಳಿ ನಡೆಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳು ವೆಂಕಟಮ್ಮರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ರಾಜ್ಯಸಭೆಯಲ್ಲಿ ವಿದಾಯದ ಭಾಷಣದ ವೇಳೆ ಸದನದ ಎಲ್ಲಾ ಸದಸ್ಯರಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಸಂಸತ್ತಿನ ನಡೆಯತ್ತಿದ್ದ ಬಜೆಟ್ ಅಧಿವೇಶನದಲ್ಲಿ ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್ ಧನಕರ್ ಅವರನ್ನು ವ್ಯಂಗ್ಯ ಮಾಡಿ ಮಾತನಾಡಿದ್ದರು. ಇದಕ್ಕೆ ಬಾರೀ ವಿರೋಧ ವ್ಯಕ್ತವಾಗಿತ್ತು. ಅದಕ್ಕೆ ಈಗ ರಾಜ್ಯಸಭೆಯಲ್ಲಿ ಎಲ್ಲರ ಸಮ್ಮುಖದಲ್ಲಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ. ಜಯಾ ತಮ್ಮ ವಿದಾಯದ ಭಾಷಣದ ವೇಳೆ ಸದನದ ಎಲ್ಲ ಸದಸ್ಯರಲ್ಲಿ, ತಾನು ಮುಂಗೋಪಿ ಆದರೆ ಯಾರನ್ನು ನೋಯಿಸುವ ಉದ್ದೇಶ ಹೊಂದಿಲ್ಲ ಎಂದು ಹೇಳಿ ಕ್ಷಮೆ ಕೇಳಿದ್ದಾರೆ. ಜಯಾ ಅವರ ವಿದಾಯ ಭಾಷಣದಲ್ಲಿ ನಾನು ಏಕೆ ಕೋಪಗೂಳ್ಳುತ್ತೇನೆ ಎಂದು ಜನರು ನನ್ನನ್ನು ಪ್ರಶ್ನೆ ಮಾಡುತ್ತಾರೆ. ಅದು ನನ್ನ ಸ್ವಭಾವ. ನಾನು ನನ್ನನ್ನು ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ. ನಾನು ಏನನ್ನಾದರೂ ಇಷ್ಟಪಡದೇ ಇದ್ದಲ್ಲಿ ಅಥವಾ ಒಪ್ಪದೇ ಇದ್ದರೆ ತಾಳ್ಮೆಯನ್ನು ಕಳೆದುಕೊಳ್ಳುತ್ತೇನೆ. ನಾನು ನಿಮ್ಮಲ್ಲಿ ಯಾರೊಂದಿಗಾದರೂ ಅನುಚಿತವಾಗಿ ವರ್ತಿಸಿದ್ದರೆ…
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 150 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದ್ದು, ವಿಶೇಷವಾಗಿ ಅವುಗಳಲ್ಲಿ ಅತೀ ಹೆಚ್ಚು ಬಿಜೆಪಿ ಸೋತಿರುವ ಕ್ಷೇತ್ರಗಳೇ ಆಗಿರುತ್ತದೆ ಎನ್ನಲಾಗಿದೆ. ಸದ್ಯ ಚುನಾವಣೆ ಘೋಷಣೆಗೂ ಮುನ್ನವೇ ದೆಹಲಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಮಂಡಿ ಲೋಕಸಭಾ ಕ್ಷೇತ್ರವೂ ಇದರಲ್ಲಿ ಒಂದು. ಇಲ್ಲಿಯೂ ನಿಗದಿತ ಸಮಯಕ್ಕಿಂತ ಮೊದಲು ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದ್ದು, ಕಳೆದುಹೋದ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸಮಯಕ್ಕಿಂತ ಮುಂಚಿತವಾಗಿ ಪ್ರಚಾರವನ್ನು ಪ್ರಾರಂಭಿಸುವುದು ಬಿಜೆಪಿಯ ತಂತ್ರಗಾರಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಹೊರಬೀಳುತ್ತಿದ್ದು, ಇದರಲ್ಲಿ ವಿಶೇಷವಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಹೆಸರು ಕೂಡ ಮುಂಚೂಣಿಯಲ್ಲಿದೆ. ಕಳೆದ ಕೆಲವು ಸಮಯದಿಂದ ಕಂಗನಾ ರಣಾವತ್ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಕಂಗನಾ ರಣಾವತ್ ಕೂಡ ಇದನ್ನು ಅಲ್ಲಗಳೆಯದೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ…
ನಮೋ ಭಾರತ ವತಿಯಿಂದ ಆಯೋಜನೆಗೊಂಡಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಶರ್ಟ್ ಬಿಚ್ಚಿ ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ನಡೆದಿದೆ. ಈ ಘಟನೆಯಿಂದ ಬಿಜೆಪಿ ಕಾರ್ಯಕರ್ತರು ಸಹ ತಿರುಗಿ ಬಿದ್ದು ಸ್ಥಳದಲ್ಲಿ ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ವರದಿ ತಿಳಿಸಿದೆ. ಈ ಘಟನೆ ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. ನಮೋ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ತೆರಳಿದ್ದರು. ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ಮಹಡಿ ಮೇಲೆ ನಿಂತು ಕಪ್ಪು ಬಾವುಟ ಪ್ರದರ್ಶನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಬಿಜೆಪಿ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಿಡಿದೆದ್ದರು. ಕಾಂಗ್ರೆಸ್ ಕಾರ್ಯಕರ್ತರು ಇದ್ದ ಬಿಲ್ಡಿಂಗ್ ಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು. ವಿಜಯಪುರ ರಸ್ತೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ಕಾರ್ಯಕರು ಆಕ್ರೋಶಗೊಂಡು ಲೈಟ್ ಕಂಬ ಹತ್ತಿ ಹುಡುಕಾಡಲು…