Author: admin

ದ್ವಿತೀಯ ಪಿಯುಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ನಿರ್ಣಾಯಕ ಘಟ್ಟವಾಗಿರುವುದರಿಂದ, ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿ ಸಾಧನೆ ಮಾಡಬೇಕು ಎಂದು ಶಾಸಕ ಹೆಚ್.ಟಿ. ಮಂಜು ಹೇಳಿದರು. ಅವರು ಕೃಷ್ಣರಾಜಪೇಟೆ ಪಟ್ಟಣದ ಶ್ರೀ ಕೃಷ್ಣರಾಜ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳ ಸಾಧನೆಗೆ ದ್ವಿತೀಯ ಪಿಯುಸಿ ಪರೀಕ್ಷೆಯು ನಿರ್ಣಾಯಕವಾದ ಘಟ್ಟವಾಗಿರುವುದರಿಂದ ಶ್ರದ್ಧಾ ಭಕ್ತಿಯಿಂದ ವ್ಯಾಸಂಗ ಮಾಡಿ ಗುರಿ ಸಾಧಿಸಲು ಸಂಕಲ್ಪ ಮಾಡಬೇಕು. ವಿದ್ಯೆಯ ಜ್ಞಾನದ ಬೆಳಕಿನ ಶಕ್ತಿಯು ಯಾರೂ ಕದಿಯಲಾಗದ ಆಸ್ತಿಯಾಗಿರುವುದರಿಂದ, ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಟ ನಡೆಸಿ ಸಮ ಸಮಾಜವನ್ನು ನಿರ್ಮಿಸಲು ವಿದ್ಯೆಯ ಜ್ಞಾನದ ಶಕ್ತಿಯನ್ನು ಬಳಸಿಕೊಳ್ಳಬೇಕು. ಯುವಶಕ್ತಿಯು ಬಲಿಷ್ಠ ಶಕ್ತಿಯಾಗಿದ್ದು, ಸುಭದ್ರವಾದ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ನಿರ್ಣಾಯಕವಾಗಿರುವುದರಿಂದ ಯುವಜನರು ದೇಶಪ್ರೇಮವನ್ನು ಬಳಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು. ಸೇವಾ ಮನೋಭಾವನೆ ಹಾಗೂ ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ಮಂಜು ಕರೆ ನೀಡಿದರು. ಬಂಡಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿಕ್ಷಣ ತಜ್ಞರಾದ ಗುಬ್ಬಿಯ ಡಾ. ಜಿ.ಬಿ. ಮಲ್ಲಪ್ಪ ಮಾತನಾಡಿ…

Read More

ಶಾಲೆಗೆ ರಜೆ ಸಿಗಬೇಕೆಂಬ ಉದ್ದೇಶದಿಂದ ಒಂದನೇ ತರಗತಿ ವಿದ್ಯಾರ್ಥಿಯನ್ನು 8ನೇ ತರಗತಿ ವಿದ್ಯಾರ್ಥಿಯೋರ್ವ ಹತ್ಯೆಗೈದ ಘಟನೆ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಶಾಲೆಯೊಂದರಲ್ಲಿ ವರದಿಯಾಗಿದೆ. ನಾಪತ್ತೆಯಾಗಿದ್ದ ಒಂದನೇ ತರಗತಿ ವಿದ್ಯಾರ್ಥಿ ಎರಡು ದಿನಗಳ ನಂತರ ಶಾಲೆಯ ಬಳಿಯ ಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದಾನೆಂದು ತಿಳಿದು ಬಂದಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತನಿಖೆಯ ವೇಳೆ ಆತನ ಶಾಲೆಯ ಹಿರಿಯ ವಿದ್ಯಾರ್ಥಿಯೇ ಬಾಲಕನ ಕೊಲೆ ಮಾಡಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜನವರಿ 30ರಂದು ಖಾಸಗಿ ಶಾಲೆಯೊಂದರಲ್ಲಿ ಊಟದ ವಿರಾಮದ ವೇಳೆ ಒಂದನೇ ತರಗತಿ ವಿದ್ಯಾರ್ಥಿ ನಾಪತ್ತೆಯಾಗಿದ್ದ ಎನ್ನಲಾಗಿದೆ. ಭಾರೀ ಹುಡುಕಾಟದ ಬಳಿಕ ಎರಡು ದಿನಗಳ ನಂತರ ಹುಡುಗನ ಮೃತ ದೇಹ ಪತ್ತೆಯಾಗಿದೆ. ಶಾಲೆಯಿಂದ 400 ಮೀಟರ್ ದೂರದಲ್ಲಿರುವ ಕೊಳದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಬಾಲಕನ ತಲೆಗೆ ಪೆಟ್ಟು ಬಿದ್ದಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.ಪೊಲೀಸರು ಸಾವಿನ ತನಿಖೆಯನ್ನು ಪ್ರಾರಂಭಿಸಿದಾಗ, ಸುಳಿವುಗಳು ಅದೇ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಯ ಪಾತ್ರವನ್ನು ತೋರಿಸಿದವು ಎಂದು…

Read More

ಯುವತಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ಇಂದು(ಫೆ.೮) ಸಂಭವಿಸಿದೆ. ಮೃತರನ್ನು ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ವನಿತಾ ಅನಾರೋಗ್ಯದ ಕಾರಣಕ್ಕೆ ಕೆಲ ದಿನಗಳ ಹಿಂದೆ ಮನೆಗೆ ಬಂದಿದ್ದರು. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯುವತಿ ಬರೆದಿಟ್ಟ ಡೆತ್ ನೋಟ್ ಸಿಕ್ಕಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Read More

ನವದೆಹಲಿ: ರಾಷ್ಟ್ರ ರಾಜಧಾನಿಯ ಮೆಟ್ರೋ ನಿಲ್ದಾಣವೊಂದರ ಬಳಿ ಗೋಡೆ ಕುಸಿತದಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. ಪಿಂಕ್ ಲೈನ್‌ ನಲ್ಲಿರುವ ಗೋಕುಲಪುರಿ ಮೆಟ್ರೋ ನಿಲ್ದಾಣದ ಗೋಡೆಯ ಒಂದು ಭಾಗ ಕುಸಿದಿದ್ದು, ಕಾರವಾಲ್ ನಗರದ 53 ವರ್ಷದ ವಿನೋದ್ ಕುಮಾರ್  ಮೃತಪಟ್ಟಿದ್ದಾರೆ. ಗಾಯಾಳುಗಳು ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು: ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ,  ಇದೇ ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿರುವ ಹೇಳಿಕೆಗಳನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ. ಕೇಂದ್ರ ಹಣಕಾಸು ಆಯೋಗದ ವಿರುದ್ದ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿ ಅವರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಡಿಸೆಂಬರ್ ಆರರಂದು ಹೇಳಿಕೆಯೊಂದನ್ನು ನೀಡಿ ‘’ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್…

Read More

ಅಯೋಧ್ಯೆಯ ನಂತರ ಕಾಶಿ ಮತ್ತು ಮಥುರಾ ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಯುಪಿ ಅಸೆಂಬ್ಲಿಯಲ್ಲಿ ತಮ್ಮ ಭಾಷಣದಲ್ಲಿ ದೇಶದ ಹಿಂದೂ ಸಮುದಾಯವು ಕೇವಲ ಮೂರು ಸ್ಥಳಗಳನ್ನು ಕೇಳುತ್ತಿದೆ ಮತ್ತು ಅವು ಅಯೋಧ್ಯೆ, ಕಾಶಿ ಮತ್ತು ಮಥುರಾ ಎಂದು ಹೇಳಿದರು. ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆಯಾದಾಗ ಈ ದೇಶದ ಜನರೆಲ್ಲ ಸಂಭ್ರಮಿಸಿದರು. ಬಿಜೆಪಿಯದ್ದು ಕೇವಲ ಭರವಸೆಯಲ್ಲ. ಅದನ್ನು ಜಾರಿಗೆ ತರಲಾಯಿತು. ರಾಮಮಂದಿರದಲ್ಲಿ ಮೊದಲು ಪ್ರಾಣ ಪ್ರತಿಷ್ಠೆ ನಡೆಯುತ್ತಿತ್ತು. ಆದರೆ ಹಿಂದಿನ ಸರ್ಕಾರಗಳು ಅಯೋಧ್ಯೆ, ಮಥುರಾ ಮತ್ತು ಕಾಶಿಯ ಅಭಿವೃದ್ಧಿಗೆ ಅಡ್ಡಿಪಡಿಸುವ ಧೋರಣೆ ಅನುಸರಿಸಿವೆ’ – ಯೋಗಿ ಆದಿತ್ಯನಾಥ್ ಹೇಳಿದರು. ಹಿಂದಿನ ಸರ್ಕಾರಗಳು ಅಯೋಧ್ಯೆಯನ್ನು ಹೇಗೆ ಸಂಪರ್ಕಿಸಿದವು ಎಂಬುದು ನಮಗೆ ತಿಳಿದಿದೆ. ಅವರು ಅಯೋಧ್ಯೆಯನ್ನು ನಿಷೇಧ ಮತ್ತು ಕರ್ಫ್ಯೂ ಅಡಿಯಲ್ಲಿ ತಂದರು. ಅಯೋಧ್ಯೆಯು ಶತಮಾನಗಳ ಕಾಲ ಇಂತಹ ಅನ್ಯಾಯಗಳನ್ನು ಎದುರಿಸಿತು. ನಾವು ವಿವರವಾಗಿ ಮಾತನಾಡಿದರೆ 5000 ವರ್ಷಗಳ ಕಾಲ ನಡೆದ ಅನ್ಯಾಯದ ಬಗ್ಗೆ…

Read More

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ವಿ. ಲೋಕೇಶ್‌ ಅವರನ್ನು ವಜಾ ಮಾಡಿದ್ದು, ಡಾ. ಸೈಯದ್ ಅಲ್ತಾಫ್ ಅವರನ್ನು ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ.ವಿ. ಲೋಕೇಶ್ ಅವರ ವಿರುದ್ಧ ಅಧಿಕಾರ ದುರ್ಬಳಕೆ, ಅಕ್ರಮ ಸೇವಾ ಬಡ್ತಿ, ವೈದ್ಯಕೀಯ ನಿರ್ಲಕ್ಷ್ಯ ಸೇರಿ ವಿವಿಧ ಆರೋಪಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದವು. ಪೆಟ್‌ ಸ್ಕ್ಯಾನ್‌ ದರ ನಿಗದಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಕಾರ್ಯಾದೇಶ ರದ್ದುಪಡಿಸಿದೆ.

Read More

ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಕರ್ನಾಟಕವೇ ಸ್ಫೂರ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಾವಲಂಬಿ ಬಲಿಷ್ಠ ಭಾರತ ನಿರ್ಮಾಣದ ಮಹಾ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕರ್ನಾಟಕವೇ ಸ್ಫೂರ್ತಿ, ಅಣ್ಣ ಬಸವಣ್ಣ ನವರ ಕಾಯಕ ತತ್ವವೇ ಪ್ರೇರಣೆ ಇದಕ್ಕೆ ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ’ ಸಾಕ್ಷಿ ಸಂಕೇತವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ಚಲೋ ಹಳ್ಳಿ ನಡೆಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಮೃದ್ಧ ಕರ್ನಾಟಕ ಮೋದಿ ಜೀ ಅವರ ಆದ್ಯತೆಯಾಗಿರುವಾಗ ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ಚಲೋ ದಿಲ್ಲಿ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ ಎಂದಿದ್ದಾರೆ.

Read More

ಕೋಲಾರ: ಗುಂಪೊಂದು ನಾಲ್ವರ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಕಾಮದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ದಾರಿ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಮನೆಗೆ ನುಗ್ಗಿ ಹಲ್ಲೆ, ಗೃಹೋಪಯೋಗಿ ವಸ್ತು ಧ್ವಂಸಗೊಳಿಸಿದ್ದಾರೆ. ಅಲ್ಲದೇ ಭೀರಪ್ಪ, ಅಶ್ವತ್ಥ್​​​​, ಲಕ್ಷ್ಮಮ್ಮ, ಶಾರದಮ್ಮ ಎಂಬುವರ ಮೇಲೆ ಹಲ್ಲೆ ಮಾಡಿದೆ. ಪ್ರಕಾಶ್,​​ ರಮೇಶ್​​​ ಎಂಬುವರು ಹಲ್ಲೆ ಮಾಡಿಸಿದ್ದಾರೆಂದು ಆರೋಪಿಸಲಾಗಿದ್ದು, ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ: ವಿದ್ಯಾನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿನಿಯನ್ನು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಖದೀಮನೋರ್ವ ಕಿಡ್ನಾಪ್ ಮಾಡಲು ಯತ್ನಿಸಿ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದ್ದು, ಶಾಲೆಯ ಕಂಪೌಂಡ್ ಬಳಿ ಹೊಂಚುಹಾಕಿ ಕುಳಿತಿದ್ದ ಖದೀಮ, ವಿದ್ಯಾರ್ಥಿ ಹೊರಗಡೆ ಬರುತ್ತಿದ್ದಂತೆ ಆಕೆಯ ಮೂಗಿಗೆ ಬಟ್ಟೆಯಿಂದ ಮುಚ್ಚಿ ಅಪಹರಿಸಲು ಪ್ರಯತ್ನಿಸಿದ್ದಾನೆ. ಕಿಡ್ನಾಪರ್, ಸುಮಾರು 200 ಮೀಟರ್‌ ತನಕ ವಿದ್ಯಾರ್ಥಿನಿಯನ್ನು ಎಳೆದುಕೊಂಡು ಹೋಗಿದ್ದಾನೆ. ಬಳಿಕ ಬಾಲಕಿ ಆತನ ಕೈಕಚ್ಚಿ ಶಾಲೆಯ ಆವರಣಕ್ಕೆ ಓಡಿ ಬಂದಿದ್ದಾಳೆ. ಸದ್ಯ, ವಿಷಯ ತಿಳಿಯುತ್ತಿದ್ದಂತೆ ವಿದ್ಯಾನಗರ ಸರ್ಕಾರಿ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More