Author: admin

ಶ್ರೀಲಂಕಾ: ಶ್ರೀಲಂಕಾ ನೌಕಾಪಡೆ ಸಿಬ್ಬಂದಿ ಗುರುವಾರ ಮುಂಜಾನೆ ನೆಡುಂತೀವು ಬಳಿಯ ರಾಮೇಶ್ವರಂ ಮತ್ತು ತಂಗಚಿಮಾಡಂನಿಂದ 19 ಮೀನುಗಾರರನ್ನು ಬಂಧಿಸಿದ್ದಾರೆ. ಮಾಹಿತಿ ಪ್ರಕಾರ, ಮೀನುಗಾರರು ಅಲೆಕ್ಸ್ ಮತ್ತು ಆಂಟನ್ ಶಶಿಕುಮಾರ್ ಅವರ ಒಡೆತನದ ಎರಡು ದೋಣಿಗಳಲ್ಲಿ ದ್ವೀಪದ ಬಳಿ ಮೀನುಗಾರಿಕೆಯಲ್ಲಿ ತೊಡಗಿದ್ದರು ಎಂದು ಹೇಳಲಾಗಿದೆ. ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಎಲ್ಲಾ 19 ಮೀನುಗಾರರನ್ನು ಹೆಚ್ಚಿನ ತನಿಖೆಗಾಗಿ ಕಂಕಸಂತುರೈ ಬಂದರಿಗೆ ಕರೆದೊಯ್ಯಲಾಯಿತು. ನಾಲ್ಕು ದಿನಗಳ ಹಿಂದೆಯಷ್ಟೇ ರಾಮೇಶ್ವರಂ ಮತ್ತು ತಂಗಚಿಮಡಂನ 23 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿತ್ತು. ಇದನ್ನು ವಿರೋಧಿಸಿ ಮೀನುಗಾರರು ಮರುದಿನ ಸಮುದ್ರಕ್ಕೆ ಇಳಿಯುವುದನ್ನು ನಿಲ್ಲಿಸಿದರು. ತಮಿಳುನಾಡಿನ ಹಲವು ರಾಜಕೀಯ ಪಕ್ಷಗಳು ಬಂಧನವನ್ನು ಖಂಡಿಸಿದ್ದು, ಮೀನುಗಾರರನ್ನು ಶ್ರೀಲಂಕಾ ದೇಶದಿಂದ ಬಿಡುಗಡೆ ಮಾಡಿಸುವಂತೆ ಭಾರತದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

Read More

ತುಮಕೂರು: ಶಾಲೆಯಲ್ಲಿ ಊಟ ಸೇವಿಸಿದ್ದ ಇಬ್ಬರು ಶಿಕ್ಷಕರು ಸೇರಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಗಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸೀನಪ್ಪನಹಳ್ಳಿನಲ್ಲಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಮೊಸರನ್ನ ಸೇರಿಸಿದ್ದ ವಿದ್ಯಾರ್ಥಿಗಳು. ನಿನ್ನೆ ರಾತ್ರಿ ವಿದ್ಯಾರ್ಥಿಗಳು ಮನೆಗೆ ಹೋದಾಗ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಕೂಡಲೇ ರಾತ್ರೋರಾತ್ರಿ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿದ ಪೋಷಕರು, ಕುಣಿಗಲ್ ತಾಲ್ಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಅದರಲ್ಲಿ 12 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಟ್ಟು 80 ವಿದ್ಯಾರ್ಥಿಗಳಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಾಗಿದೇ. ಸ್ಥಳಕ್ಕೆ ಕುಣಿಗಲ್ ಟಿಹೆಚ್ ಓ ಹಾಗೂ ಆರೋಗ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದರೂ ಗಂಭೀರಗೊಂಡ 10 ವಿದ್ಯಾರ್ಥಿಗಳಿಗೆ ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

Read More

ಬಿಗ್ ಬಾಸ್ ಖ್ಯಾತಿಯ ಇಶಾನಿ, ನಟ ದರ್ಶನ್ ಹುಟ್ಟು ಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಲಿದ್ದು, ದರ್ಶನ್ ಅವರ ಹುಟ್ಟುಹಬ್ಬದ ದಿನದಂದು ಇಶಾನಿ ಅವರು ದರ್ಶನ್ ಕುರಿತಾದ ವಿಶೇಷವಾದ ಹಾಡೊಂದನ್ನು ರಿಲೀಸ್ ಮಾಡಲಿದ್ದಾರಂತೆ. ಈಗಾಗಲೇ ಹಾಡಿಗಾಗಿ ಸರ್ವ ರೀತಿಯಲ್ಲಿ ಅವರೂ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದರ್ಶನ್ ತಮ್ಮ ಹುಟ್ಟು ಹಬ್ಬವನ್ನು  ಫೆಬ್ರವರಿ 16ರಂದು  ಆಚರಿಸಿಕೊಳ್ಳಲಿದ್ದು, ಈಗಾಗಲೇ ಅಭಿಮಾನಿಗಳಿಗೆ ದರ್ಶನ್ ಸಂದೇಶವೊಂದನ್ನು ರವಾನಿಸಿದ್ದು, “ಯಾರೂ ಕೇಕ್ ಮತ್ತು ಬ್ಯಾನರ್ ಕಟ್ಟದಂತೆ ಹೇಳಿದ್ದಾರೆ. ಜೊತೆಗೆ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ದವಸ ಧಾನ್ಯಗಳನ್ನು ಉಡುಗೊರೆಯಾಗಿ ನೀಡಿ” ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.  

Read More

ಕೊರಟಗೆರೆ: ಪರರ ವಸ್ತುಗಳಿಗೆ ಆಸೆ ಪಡುವ ಜನರ ಮಧ್ಯೆ ಕೊರಟಗೆರೆಯ ಪತ್ರಕರ್ತನೊಬ್ಬ ರಸ್ತೆಯಲ್ಲಿ ಸಿಕ್ಕ ಮೊಬೈಲನ್ನು ಬಳಸದೆ ಕೇವಲ 8 ಗಂಟೆಯಲ್ಲಿ ಮೊಬೈಲ್ ಮಾಲೀಕನನ್ನು ಪತ್ತೆ ಹಚ್ಚಿ ಮೊಬೈಲ್ ಹಿಂತಿರುಗಿಸುವುದರೊಂದಿಗೆ ಮಾನವೀಯತೆ ಮೆರದಿದ್ದಾರೆ. ಸುಮಾರು ಹದಿನೈದು ಸಾವಿರ ಬೆಲೆ ಬಾಳುವ ಮೊಬೈಲ್ ಮಧುಗಿರಿ ತಾಲ್ಲೂಕಿನ ರಂಟವಳಲು ಗ್ರಾಮದ ರಸ್ತೆಯಲ್ಲಿ ಮೊಬೈಲ್ ಮಾಲೀಕ ಉಮೇಶ್ ಕಳೆದುಕೊಂಡಿದ್ದು, ಅದೇ ರಸ್ತೆ ಮಾರ್ಗವಾಗಿ ಕೋಡಿಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಮತ್ತು ಸ್ನೇಹಿತರು ರಸ್ತೆಯಲ್ಲಿ ಬಿದ್ದಿದ್ದ ಮೊಬೈಲ್ ಅನ್ನು ಗಮನಿಸಿ ಅದನ್ನು ತೆಗೆದುಕೊಂಡು ಬಳಸದೆ ಮೊಬೈಲ್ ಮಾಲೀಕರನ್ನು ಪತ್ತೆ ಹಚ್ಚಲು ಮುಂದಾಗಿದ್ದರು. ಕೇವಲ 8 ಗಂಟೆಯಲ್ಲಿ ಮೊಬೈಲ್ ಮಾಲೀಕನನ್ನು ಪತ್ತೆ ಹಚ್ಚಿದ್ದಾರೆ ಮಧುಗಿರಿ ತಾಲ್ಲೂಕಿನ ಹೊಸಕೆರೆ ಗೊಲ್ಲರಹಟ್ಟಿ ಗ್ರಾಮದ ರೈಸ್ ಮಿಲ್ ಕಾರ್ಮಿಕ ಉಮೇಶ್ ಎಂಬುವ ವ್ಯಕ್ತಿಯ ಮೊಬೈಲ್ ಮಾಲೀಕನಾಗಿದ್ದು ಕೇವಲ 8 ಗಂಟೆಯಲ್ಲಿ ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ರವರು ಮೊಬೈಲ್ ಹಿಂತಿರುಗಿಸಿ ಮಾನವೀಯತೆ ಮೆರೆದಿದ್ದಾರೆ.. ಮೊಬೈಲ್ ಮಾಲೀಕ ಉಮೇಶ್ ಮಾನವೀಯತೆ…

Read More

ಆನೇಕಲ್: ತನ್ನ ಪ್ರೇಯಸಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿವಾಹಿತ ಮಹಿಳೆಯಾಗಿದ್ದ ದಿವ್ಯಾ ಎಂಬಾಕೆಯು ತನ್ನ ಪತಿಯಿಂದ ವಿಚ್ಚೇದನ ಪಡೆದಿದ್ದಳು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲೇ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲು ಆರಂಭಿಸಿದ್ದಳು. ಗಂಡ ಹೆಂಡತಿ ಎಂದು ಹೇಳಿ ಚಿಕ್ಕನಾಗಮಂಗಲದ ಬಾಡಿಗೆ ಮನೆ ಪಡೆದು ಕಳೆದ ಆರು ತಿಂಗಳಿನಿಂದ ಲೀವ್​ ಇನ್ ರಿಲೇಷನ್ ​ನಲ್ಲಿದ್ದರು. ಅನ್ಬರಾಸನ್ ಜೊತೆ ಪ್ರೀತಿಯಲ್ಲಿ ಇರುವಾಗಲೇ ವಿದ್ಯಾಗೆ ಸಂತೋಷ್ ಎಂಬ ಯುವಕನ ಜೊತೆ ಲವ್ವಿಡವ್ವಿ ಶುರು ಮಾಡಿದ್ದಾಳೆ. ಈ ವಿಚಾರ ಅನ್ವರಸನ್ ​ಗೆ ತಿಳಿದಿದೆ. ಅಲ್ಲದೆ, ಮನೆಯಲ್ಲಿ ಸಂತೋಷ್ ಹಾಗೂ ವಿದ್ಯಾ ಜೊತೆಯಲ್ಲಿದ್ದಾಗ ಅನ್ಬರಾಸನ್ ಕಣ್ಣಾರೆ ಕಂಡಿದ್ದನು. ಆದರೆ, ಈ ವಿಚಾರ ತಿಳಿದು ವಿದ್ಯಾಗೆ ಬುದ್ಧಿ ಹೇಳಿದರೂ ಆಕೆ ಕೇಳಿರಲಿಲ್ಲ. ಇದರಿಂದ ಮನನೊಂದು ಅನ್ಬರಾಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪೋಷಕರು ಮೊದಲು ಯುಡಿಆರ್…

Read More

ಚಿಕ್ಕಮಗಳೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ. ಸಹನಾ ಬಾನು(18) ಮೃತ ದುರ್ದೈವಿಯಾಗಿದ್ದಾರೆ. ಈಕೆ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿಯಾಗಿದ್ದಾರೆ. ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನುಳನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ .

Read More

ಗದಗ: ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನಲ್ಲಿ ಚಿರತೆ ದಾಳಿಯಿಂದ, ನಾಲ್ಕು ಜನ ಗಾಯಗೊಂಡ ಘಟನೆ ಜೀಗೇರಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆಯಷ್ಟೇ ತೋಟದಲ್ಲಿ ಕೆಲಸ ಮಾಡುತ್ತಿದ್ದಾತನ‌ ಮೇಲೆ ದಾಳಿ ಮಾಡಿದ್ದ ಚಿರತೆ, ಸಂಜೆ ವೇಳೆ ಮತ್ತೆ‌ ನಾಲ್ಕು ಜನರ‌ ಮೇಲೆ ದಾಳಿ ನಡೆಸಿದೆ. ಚಿರತೆಯು ಅರಣ್ಯ ಸಿಬ್ಬಂದಿ ಸೇರಿದಂತೆ ಸ್ಥಳೀಯರ ಮೇಲೆ‌ ಎರಗಿದ್ದು, ದಾಳಿಗೊಳಗಾದವರು ಆಸ್ಪತ್ರೆಗೆ‌ ದಾಖಲಾಗಿದ್ದಾರೆ ಎನ್ನಲಾಗಿದೆ. ಚಿರತೆ‌ ದಾಳಿಯಿಂದ ಸುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅರಣ್ಯ‌ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಚಿರತೆ ಸೆರೆ ಹಿಡಿಯಲು‌ ‌ ಪ್ರಯತ್ನ ನಡೆಸಿದ್ದಾರೆ.

Read More

ವಾಣಿಜ್ಯ ನಗರಿ ಮುಂಬೈಯಲ್ಲಿ, ಮುಂಬೈನ ಮಾಹೀಂ ರೈಲ್ವೆ ನಿಲ್ದಾಣದಲ್ಲಿನ ಹಳಿಗಳ ಮೇಲೆ ಜನರು ಅಡುಗೆ ತಯಾರಿಸುತ್ತಿರುವ ಹಾಗೂ ಕೆಲವರು ಹಳಿಯ ಮೇಲೆ ಕುಳಿತು ಓದುತ್ತಿರುವ, ಬಟ್ಟೆಗಳನ್ನು ಒಣಗಿಸಿದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಆಶ್ಚರ್ಯಚಕಿತಗೊಳಿಸಿದೆ. ಸುರಕ್ಷತೆಯ ಪ್ರಶ್ನೆಯನ್ನು ಮೂಡಿಸಿದೆ. ಈ ದೃಶ್ಯವನ್ನು ನೋಡಿದಾಗ ಎಂಥವರು ಒಂದು ಕ್ಷಣ ಗಾಬರಿಯಾಗೋದಂತು ಗ್ಯಾರಂಟಿ.. ರೈಲ್ವೆ ಹಳಿಯ ಮೇಲೆಯೇ ಅಡುಗೆ ಬೇಯಿಸುತ್ತಿರುವ, ಬಟ್ಟೆ ಒಣಗಿಸಿರುವ ಹಾಗೂ ಜನರು, ಮಕ್ಕಳು ಗಿಜಿಗುಟ್ಟುತ್ತಿರುವ  ದೃಶ್ಯ ವೀಡಿಯೋದಲ್ಲಿದೆ. ಈ ವೀಡಿಯೋವನ್ನು ಗಮನಿಸಿ ತಕ್ಷಣವೇ ರೈಲ್ವೆ ಇಲಾಖೆ ಸ್ಥಳಕ್ಕೆ ಭೇಟಿ ನೀಡಬೇಕೆಂದು ಜನರು ಆಗ್ರಹಿಸಿದ್ದಾರೆ. ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರೈಲ್ವೆ ಅಧಿಕಾರಿಯೊಬ್ಬರು, ಮಾಹೀಂ ರೈಲ್ವೆ ಹಳಿಗಳನ್ನು ಮುಖ್ಯವಾಗಿ ರಾತ್ರಿ ವೇಳೆ ಕಾರ್ಯಾಚರಿಸಲು ಬಳಕೆಯಾಗುತ್ತಿದೆ. ಆದರೂ ಕೊಳೆಗೇರಿ ನಿವಾಸಿಗಳು ಈ ಹಳಿಗಳನ್ನು ತಮ್ಮ ಅಗತ್ಯತೆಗೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ. ರೈಲ್ವೆ ಇಲಾಖೆ ನಿರಂತರವಾಗಿ ಪರಿಶೀಲಿಸುತ್ತಿದ್ದು, ಈ ಬಗ್ಗೆ ಗಮನ ಹರಿಸುತ್ತೆ ಎಂದು ತಿಳಿಸಿದ್ದಾರೆ.

Read More

ನೀವು ಪ್ರತಿದಿನ ಪುದೀನಾ ತಿಂದರೆ ಈ ಅದ್ಭುತ ಪ್ರಯೋಜನಗಳು ನಿಮ್ಮದಾಗುತ್ತದೆ..!: ಪುದೀನಾ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲ. ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಪುದೀನಾದಲ್ಲಿರುವ ಉತ್ಕರ್ಷಣ ನಿರೋಧಕ ಗುಣಗಳು ಚರ್ಮವನ್ನು ರಕ್ಷಿಸುತ್ತದೆ. ಪುದೀನಾ ಚರ್ಮವನ್ನು ತಾಜಾಗೊಳಿಸುತ್ತದೆ ಮತ್ತು ಪುನಃ ಸಕ್ರಿಯಗೊಳಿಸುತ್ತದೆ. ಪುದೀನಾದಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು ಇದು ಕಣ್ಣಿನ ಆರೋಗ್ಯವನ್ನು ಸುಧಾರಿಸಿ, ದೃಷ್ಟಿಯನ್ನು ಸುಧಾರಿಸುತ್ತದೆ. ಬೆಳಿಗ್ಗೆ ಈ ಪಾನೀಯವನ್ನು ಬಳಸುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ..!: ಹಲ್ಲುಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದು, ವಸಡುಗಳಲ್ಲಿ ಕೀವು ಮತ್ತು ಹಲ್ಲುಗಳ ನಡುವಿನ ಕೊಳೆಯಿಂದ ಬಾಯಿಯ ದುರ್ವಾಸನೆ ಉಂಟಾಗುತ್ತದೆ. ಇದನ್ನು ತಪ್ಪಿಸಲು ನೀರಿನಲ್ಲಿ ಲವಂಗವನ್ನು ಕುದಿಸಿ ಆರಿಸಿ ಕುಡಿಯಬಹುದು. 1 ಗ್ಲಾಸ್ ಬೆಚ್ಚಗಿನ ನೀರಿನಲ್ಲಿ 1 ಚಮಚ ನಿಂಬೆ ರಸವನ್ನು ಬೆರೆಸಿ ಬಾಯಿ ಮುಕ್ಕಳಿಸಿದರೆ ಬಾಯಿಯ ದುರ್ವಾಸನೆ ತಡೆಯುತ್ತದೆ. ನೀರಿನಲ್ಲಿ ತುಳಸಿಯನ್ನು ಕುದಿಸಿ ಬಾಯಿ ಮುಕ್ಕಳಿಸಿದರೆ ತುಳಸಿಯಲ್ಲಿರುವ ಬ್ಯಾಕ್ಟಿರಿಯಾ ವಿರೋಧಿ ಗುಣಗಳು ಬಾಯಿಯಿಂದ ಬ್ಯಾಕ್ಟಿರಿಯಾವನ್ನು ತೆಗೆದುಹಾಕುತ್ತದೆ. ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಾಗಬೇಕಂದ್ರೆ ಇವುಗಳನ್ನು ಸೇವಿಸಿ: ನಮ್ಮ ದೇಹ ಸರಿಯಾಗಿ…

Read More

ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಎನ್ನುವಂತೆ ನಡೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ ಎಂದರು. ಇದನ್ನೆಲ್ಲ ನಾವು ಬಿಚ್ಚಿಟ್ಟು ಕಾಂಗ್ರೆಸ್ ‌ನ ಅಸಲೀ ಮುಖವಾಡ ಕನ್ನಡಿಗರ ಮುಂದೆ ಕಳಚಿಡಲಿದ್ದೇವೆ ಎಂದರು. ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವುದೂ ಕೂಡ ವಂಚನೆಯ ಇನ್ನೊಂದು ಮುಖ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಲಿದೆ, ಕಾಂಗ್ರೆಸ್‌ ಸರ್ಕಾರದ ಭಂಡವಾಳ ಸಾಕ್ಷಿ ಸಮೇತ ಬಯಲಿಗೆಳೆಯಲಿದೆ ಎಂದು ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಹುಡುಕಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಬೆಂಗಳೂರಿನಲ್ಲಿ…

Read More