Subscribe to Updates
Get the latest creative news from FooBar about art, design and business.
- ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
- ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ 14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
- ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ವಾಜಪೇಯಿ ಅವರ 101ನೇ ಜಯಂತಿ: ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ: ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
- “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
- ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು: ಪಿಎನ್ ಕೆ
- ಹಿಂದೂಗಳ ಮೇಲಿನ ದೌರ್ಜನ್ಯ ಸಹಿಸಲ್ಲ: ಬಾಂಗ್ಲಾ ವಿರುದ್ಧ ಗುಡುಗಿದ ದೊಡ್ಡಹಳ್ಳಿ ಅಶೋಕ್
- ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
Author: admin
ಸರಗೂರು: ನಿರಂತರವಾಗಿ ದಶಕಗಳ ಕಾಲ ನಮ್ಮ ಸಂಘ ಕಣ್ಣೀರು ಒರೆಸಲು, ನ್ಯಾಯ ಕೊಡಿಸುವ ಅತ್ಯಂತ ಪ್ರಾಮಾಣಿಕ ಪ್ರಯತ್ನ ಮಾಡಿಕೊಂಡು ಬರುತ್ತಿದೆ ಎಂದು ವನ್ಯಜೀವಿ ಮಂಡಳಿ ಸದಸ್ಯ ಹಾಗೂ ಅರಣ್ಯ ಇಲಾಖೆ ಹೊರಗುತ್ತಿಗೆದಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ವಕೀಲ ಸಂಕೇತ ಪುಯ್ಯಯ ತಿಳಿಸಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸೋಮವಾರದಂದು ಅರಣ್ಯ ಇಲಾಖೆ ಹೊರಗುತ್ತಿಗೆದಾರ ನೌಕರರ ರಾಜ್ಯ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸಭೆ ನೌಕರರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು, ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಅತ್ಯಂತ ಪವಿತ್ರ ಗ್ರಂಥವನ್ನು ನಮಗಾಗಿ ಕೊಟ್ಟು ಹೋಗಿದ್ದಾರೆ. ನಮಗೆ ಸಮಾನತೆ ಸಿಕ್ಕುತ್ತದೆ ಎಂದರೆ ಅದು ಸಂವಿಧಾನ ಮೂಲಕ ನಮಗೆ ದೊರೆಯುತ್ತವೆ ಎಂದರು. ನಾಗರಹೊಳೆ, ಹುಣಸೂರು, ವೀರಹೊಸಹಳ್ಳಿ, ಕಲ್ಲಹಳ್ಳ, ಮೇಟಿಕುಪ್ಫೆ, ಮತ್ತಿ, ಅಂತರಸಂತೆ, ಡಿಪಿಕುಪ್ಪೆ ವಲಯಗಳಲ್ಲಿ ಹೊರಗುತ್ತಿಗೆದಾರಗಿ ನೌಕರರಾಗಿ ಕೆಲಸ ಮಾಡುತ್ತಿದ್ದು, ಅವರ ತಿಂಗಳ ಸ್ಯಾಲರಿ ಹಾಗೂ ಪಿಎಫ್ ಸರಿಯಾಗಿ ನೀಡುತ್ತಿಲ್ಲ ಎಂದು ನಮ್ಮ ಗಮನಕ್ಕೆ ತಂದಿದ್ದಿರಾ, ಅದರಂತೆ ನಾವು ದಿನನಿತ್ಯ ಕಾಡಿನಲ್ಲಿ ಕೆಲಸ ಮಾಡಿಕೊಂಡು…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ನಾಗುರ (ಎಂ) ಗ್ರಾಮದ ಯುವ ರೈತ ಅಂಬಾದಾಸ ಭೀಮರಾವ ಪೊಲೀಸ್ ಪಾಟೀಲ್ (26) ಸಾಲದ ಬಾಧೆಯಿಂದ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೃಷಿ ಚಟುವಟಿಕೆಗಾಗಿ ಖಾಸಗಿ ಸಾಲ ಮಾಡಿದ್ದು, ಸರಿಯಾದ ಸಮಯಕ್ಕೆ ಮಳೆ ಬೆಳೆ ಇಲ್ಲದ ಕಾರಣ ಸಾಲ ತೀರಿಸಲು ಸಾಧ್ಯವಾಗದೇ ಸಾವಿಗೆ ಶರಣಾದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಸಂತಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯ ಔರಾದ ಪಟ್ಟಣದ ಉದ್ಭವಲಿಂಗ ದೇವಸ್ಥಾನದ ಅಭಿವೃದ್ಧಿಗೆ ಒಂದು ಕೋಟಿ ಅನುದಾನವನ್ನು ನನ್ನ ಸಂಸದರ ಅಡಿಯಲ್ಲಿ ಅನುದಾನ ನೀಡುತ್ತೇನೆ, ಇನ್ನೂ ಅವಶ್ಯಕತೆಯಿದ್ದಲ್ಲಿ ಮುಜರಾಯಿ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದರು ಈ ಸಂದರ್ಭದಲ್ಲಿ ತಹಶೀಲ್ದಾರ ಮಹೇಶ್ ಪಾಟೀಲ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್ ಘಾಟೆ, ಬಸವರಾಜ ದೇಸಾಯಿ ಶರಣಪ್ಪಾ ಪಾಟೀಲ್, ಕುಮಾರ್ ದೇಸಾಯಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ನೂತನ ತಾಲೂಕು ಸರಗೂರಿನಲ್ಲಿ ತಾಲೂಕು ಮಟ್ಟದ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಶಾಸಕ ಅನಿಲ್ ಚಿಕ್ಕಮಾಧು ಹೇಳಿದರು. ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸೋಮವಾರ ತಾಲೂಕು ಆದಿಕರ್ನಾಟಕ ಮಹಾಸಭಾ, ಡಾ.ಬಿ.ಆರ್.ಅಂಬೇಡ್ಕರ್ ಟ್ರಸ್ಟ್ ತಾಲೂಕು ಶಾಖೆಯಿಂದ ನಡೆದ 2024–25ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಕೋಟೆ ತಾಲೂಕಿನಲ್ಲಿ ನಿರ್ಮಾಣಗೊಂಡ ಮಾದರಿಯಲ್ಲಿಯೇ ಸರಗೂರಿನಲ್ಲಿಯೂ ಭವನ ನಿರ್ಮಾಣಕ್ಕೆ ಮುಂದಾಗಲಾಗುವುದು. ಈಗಾಗಲೇ ನಿವೇಶನ ಕುರಿತ ಕಡತ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದು, ಅತೀ ಶೀಘ್ರದಲ್ಲೆ ನಿವೇಶನ ಮಂಜೂರಾಗಲಿದೆ. ಜನಾಂಗದ ಬೇಡಿಕೆಯಂತೆ 10 ಕೋಟಿ ರೂ.ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರಲ್ಲಿ ಅನುದಾನಕ್ಕಾಗಿ ಮಾತುಕತೆ ನಡೆಸಲಾಗುವುದು. ಭವನ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ಇರಲಿದೆ” ಎಂದು ಅವರು ತಿಳಿಸಿದರು. ಸಮಾಜಕ್ಕಾಗಿ ಓದಿ: “ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ಮಕ್ಕಳು ಅತ್ಯಂತ ಬುದ್ಧಿವಂತ ಮಕ್ಕಳು. ತಮಗಾಗಿ ಓದದೇ ಸಮಾಜದ ಏಳಿಗೆಗಾಗಿ ಓದಬೇಕು. ಅಂಬೇಡ್ಕರ್…
ಸರಗೂರು: ಬಲದಂಡೆ ನಾಲೆ ಸೇತುವೆ ಕುಸಿದು ಬಿದ್ದ ಪರಿಣಾಮ ಭತ್ತ ತುಂಬಿದ್ದ ಲಾರಿ ನಾಲೆಗೆ ಬಿದ್ದಿರುವ ಘಟನೆ ತಾಲೂಕಿನ ಶ್ರೀಚಿಕ್ಕದೇವಮ್ಮನ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಹಾಗೂ ವಿವಿಧ ಗ್ರಾಮಗಳಿಗೆ ತೆರಳುವ ರಸ್ತೆಯ ಸೇತುವೆ ಹಾಲುಗಡ ಗಣೇಶನ ಗುಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಗಮನಕ್ಕೆ ಬಂದ ಕೂಡಲೇ ಶಾಸಕ ಅನಿಲ್ ಚಿಕ್ಕಮಾದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ತಾಲೂಕಿನ ಕಬಿನಿ ಬಲದಂಡೆ ಕಾಲುವೆಗಳು ಸೇತುವೆ ಶಿಥಿಲಕೊಂಡಿರುವ ಸೇತುವೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು. ಕೋತ್ತೇಗಾಲ, ಚಿಕ್ಕ ದೇವಮ್ಮ ಬೆಟ್ಟಕ್ಕೆ ಹೋಗುವ ಸೇತುವೆಗಳು ಈಗಾಗಲೇ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಭರವಸೆ ನೀಡಿದರು. ಅಧಿಕಾರಿಗಳಿಗೆ ಈ ಭಾಗ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೇರೆ ರಸ್ತೆ ಮಾಡಬೇಕು ಅವರಿಗೆ ಯಾವುದೇ ರೀತಿಯಲ್ಲಿ ತೊಂದರೆ ಉಂಟಾಗಬಾರದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಘಟನೆ ವಿವರ: ತಾಲೂಕಿನ ಇಟ್ನ ಗ್ರಾಮದಿಂದ…
ವರದಿ: ನಂದೀಶ್ ನಾಯ್ಕ ಪಿ., ಪಾವಗಡ ವೈ.ಎನ್.ಹೊಸಕೋಟೆ: ಹಲವು ದಶಕಗಳಿಂದ ಉತ್ತಮ ಗುಣಮಟ್ಟದ ಕೈಮಗ್ಗ ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾಗಿರುವ ವೈ.ಎನ್.ಹೊಸಕೋಟೆ ನೇಕಾರರಿಗೆ ಮತ್ತೊಮ್ಮೆ ರಾಜ್ಯಮಟ್ಟದ ಉತ್ತಮ ನೇಕಾರ ಪ್ರಶಸ್ತಿ ದೊರೆತಿರುವುದು ನಮ್ಮ ವೃತ್ತಿಗೆ ದೊರೆತ ಗೌರವವಾಗಿದೆ ಎಂದು ಸ್ಥಳೀಯ ನೇಕಾರರು ಸಂತಸ ವ್ಯಕ್ತಪಡಿಸಿದ್ದಾರೆ. ಇಲ್ಲಿನ ನೇಕಾರ ಎಂ.ವಿ.ಪ್ರಕಾಶ್ ಆಕರ್ಷಕ ರೇಷ್ಮೆ ಸೀರೆ ನೇಯುವ ಮೂಲಕ 2024–25 ನೇ ಸಾಲಿನ ರಾಜ್ಯಮಟ್ಟದ ಉತ್ತಮ ನೇಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೈಮಗ್ಗ ಮತ್ತು ಜವಳಿ ಇಲಾಖೆಯು ಪ್ರತಿವರ್ಷ ರಾಜ್ಯಮಟ್ಟದಲ್ಲಿ ಉತ್ತಮ ನೇಕಾರರನ್ನು ಗುರ್ತಿಸಿ ಪ್ರಶಸ್ತಿ ಪ್ರಧಾನ ಮಾಡುತ್ತಿದೆ. ಈ ವರ್ಷ ವೈ.ಎನ್.ಹೊಸಕೋಟೆಯ ಎಂ.ವಿ.ಪ್ರಕಾಶ್ ನೇಯ್ದಿರುವ ರೈನ್ ಬೋ ಕಳಾಂಜಲಿ ಎನ್ನುವ ಸೀರೆ ಪ್ರಥಮ ಸ್ಥಾನ ಪಡೆಯುವ ಮೂಲಕ ಅವರಿಗೆ ರಾಜ್ಯ ಮಟ್ಟದ ಉತ್ತಮ ನೇಕಾರ ಪ್ರಶಸ್ತಿ ತಂದುಕೊಟ್ಟಿದೆ. ಆಗಸ್ಟ್ 7 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರಶಸ್ತಿ ಪತ್ರ, ಫಲಕ ಮತ್ತು 25 ಸಾವಿರ ನಗದು ಹಣವನ್ನು ಪ್ರಶಸ್ತಿ…
ಬೀದರ್: ಜಿಲ್ಲೆಯ ಔರಾದ ತಾಲೂಕಿನಲ್ಲಿ ಕೊಳ್ಳುರ ಗ್ರಾಮದಲ್ಲಿ ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ ಖಂಡ್ರೆ ರವರ ಅನುದಾನದ 2024– 25 ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಕ್ರೋ ಯೋಜನೆ ಅಡಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಒಳಚರಂಡಿ ನಿರ್ಮಾಣ ಕಾಮಗಾರಿಗಾಗಿ 25 ಲಕ್ಷ ಅನುದಾನ ನೀಡಿದ ಸಲುವಾಗಿ ಲೋಕಸಭಾ ಸದಸ್ಯರಾದ ಸಾಗರ್ ಈಶ್ವರ್ ಖಂಡ್ರೆ ಅವರಿಗೆ ಕೊಳ್ಳುರ ಗ್ರಾಮಸ್ಥರಿಂದ ಅದ್ದೂರಿಯಾಗಿ ಸನ್ಮಾನ ಮಾಡಿ ಅಭಿನಂದಿಸಿದರು. ಅಭಿನಂದನ ಸಮಾರಂಭ ಉದ್ದೇಶಿಸಿ ಮಾತನಾಡಿದ ಸಾಗರ್ ಖಂಡ್ರೆ, ಔರಾದ ತಾಲೂಕಿನ ಪ್ರತಿ ಹಳ್ಳಿಗಳಲ್ಲಿಯೂ ಮೂಲಭೂತ ಸೌಕರ್ಯಗಳು ಕಲ್ಪಿಸಿಕೊಡುವುದು ಜನರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಕೆಲಸಗಳಿಗೆ ನಾನು ಸಿದ್ದನಿದ್ದೇನೆ ಎಂದರು. ತಾಲೂಕಿನ ಅಭಿವೃದ್ಧಿಗೆ ನಾನು ಸದಾ ದುಡಿಯುತ್ತೇನೆ ತಾಲೂಕಿನಲ್ಲಿ ಅನೇಕ ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆಹರಿಸಿ ಜನರಿ ಕಷ್ಟಗಳಿಗೆ ಸ್ಪಂದಿಸುತ್ತೇವೆ ಮತ್ತು ಜನರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಕುಂದು ಕೊರತೆಗಳನ್ನು ನಿವಾರಿಸುತ್ತೇವೆ…
ತಿಪಟೂರು: ಇಂದಿನ ಆಧುನಿಕ ಸಮಾಜದಲ್ಲಿ ಶಿಕ್ಷಣದ ಜೊತೆ ಸಂಸ್ಕಾರವನ್ನು ಮೈಗೂಡಿಸಿಕೊಂಡು ಸ್ವಾಸ್ತ್ಯ ಸಮಾಜವನ್ನು ಕಟ್ಟುವಲ್ಲಿ ಪೂಜ್ಯರ ಕೊಡುಗೆ ಅವಿಸ್ಮರಣೀಯವಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತಾಲ್ಲೂಕಿನ ಆಯ್ದ ಶಿಕ್ಷಕರ ಕೊರತೆ ಇರುವ ಶಾಲೆಗಳಾದ ಎಸ್. ಎಲ್.ಬಸವೇ ಗೌಡ ಸಿದ್ದರಾಮಾಕ್ಕ ಪ್ರೌಢ ಶಾಲೆ ಸಾರ್ಥವಳ್ಳಿ, ಹುಲಿಹಳ್ಳಿ ಚಿಕ್ಕಮಲ್ಲಯ್ಯ ಗಂಗಮ್ಮ ಸಂಯುಕ್ತ ಪ್ರೌಢ ಶಾಲೆ ಹಾಲ್ಕುರ್ಕೆ, ಶ್ರೀ ಕಾಡ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆ ಚಿಂದೆನಹಳ್ಳಿ ಗಡಿ, ಶಾಲೆಗಳಿಗೆ ಜ್ಞಾನ ದೀಪ ಶಿಕ್ಷಕರನ್ನು ಒದಗಿಸಿದ್ದು ಮಂಜೂರಾತಿ ಪತ್ರವನ್ನು ತಾಲ್ಲೂಕಿನ ಯೋಜನಾಧಿಕಾರಿ ಉದಯ್ ಕೆ. ಶಾಲೆಯ ಶಿಕ್ಷಕರಿಗೆ ಹಸ್ತಾಂತರಿಸಿದರು. ಯೋಜನಾಧಿಕಾರಿಯವರು ಮಾಹಿತಿ ನೀಡುತ್ತಾ ಪರಮ ಪೂಜ್ಯರು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಹಿತದೃಷ್ಟಿಯಿಂದ ನಮ್ಮ ಯೋಜನೆಯ ಪಾಲುದಾರ ಬಂಧುಗಳ ಮಕ್ಕಳು ವಿವಿಧ ವೃತ್ತಿಪರ ಕೋರ್ಸ್ ಮಾಡುವ ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ, ಶಾಲೆಗಳಲ್ಲಿ ದುಶ್ಚಟ ದುರಭ್ಯಾಸದಿಂದ ದೂರ ಇರಲು ಸ್ವಾಸ್ತ್ಯ ಸಂಕಲ್ಪ…
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕು ಗಡಿ ಭಾಗದ ಗಣಿಭಾದಿತ ಗ್ರಾಮಗಳ ರೈತರಿಗೆ ವಸತಿ ನೀಡಲು ಜಿಲ್ಲೆಯಲ್ಲಿ 857 ಮನೆಗಳು ನಿರ್ಮಾಣಕ್ಕೆ ಸರ್ಕಾರದ ಅನುಮತಿ ನೀಡಿದ್ದರೂ, ಕಿಬ್ಬನಹಳ್ಳಿ ಹೋಬಳಿಯ ಹಿಂಡಿಸ್ ಕೆರೆ ಗ್ರಾಮ ಪಂಚಾಯಿತಿ ಮತ್ತು ಬಿಳಿಗೆರೆ ಪಂಚಾಯಿತಿಗಳನ್ನು ಕಡೆಗಣಿಸಿ ಫಲಾನುಭವಿಗಳ ಆಯ್ಕೆ ಸಾಧ್ಯವಾಗಿಲ್ಲ ಎಂದು ಹಿಂಡಿಸ್ ಕೆರೆಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ತಿಳಿಸಿದರು. ಸಾಕಷ್ಟು ಗ್ರಾಮಗಳನ್ನು ನಿಗದಿಪಡಿಸಿಲ್ಲ, ಪಂಚಾಯಿತಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ಕಾರಣದಿಂದಲೇ ಬಹಳಷ್ಟು ಮಂದಿಗೆ ಕ್ಯಾನ್ಸರ್ ಮತ್ತು ಕ್ಷಯ ರೋಗಕ್ಕೆ ತುತ್ತಾಗಿದ್ದಾರೆ. ರಾಜ್ಯಗಣಿ ಪುನರ್ ಚೇತನ ನಿಗಮ ಇತ್ತ ಗಮನಹರಿಸಿ ತಕ್ಷಣ ವೈದ್ಯಕೀಯ ಮತ್ತು ಶಿಕ್ಷಣ ರೈತರಿಗೆ ಪುನರ್ವಸತಿ ಕಲ್ಪಿಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ವೈ.ಜಿ.ರಾಘವೇಂದ್ರ ರಸ್ತೆ ಚರಂಡಿ ಕಟ್ಟಡಗಳ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ ಆದರೆ ಬಡವರಿಗೆ ಮನೆ ನೀಡಲು ಅನುದಾನದ ಕೊರತೆಯ ನೆಪ ಹೇಳುತ್ತಿದ್ದಾರೆ, ಬೆಳಗೆರೆ ಪಂಚಾಯಿತಿಯಲ್ಲಿ 10 ಜನ ಮತ್ತು ಹಿಂಡಿಸಿ ಕೆರೆ ಗ್ರಾಮ ಪಂಚಾಯಿತಿಯ ಕೇವಲ 23 ಅರ್ಹರನ್ನು…
ಸರಗೂರು: ಒಕ್ಕಲಿಗರ ಸಮಾಜವನ್ನು ಬಾಯಿಗೆ ಬಂದಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ್ ಜಿಲ್ಲಾ ಮತ್ತು ತಾಲೂಕಿನಿಂದ ಗಡಿಪಾರು ಮಾಡಬೇಕು. ಎಂದು ಸರಗೂರು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಸುಧೀರ್ ಗೌಡ ಒತ್ತಾಯಿಸಿದರು. ಪಟ್ಟಣದ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಸೋಮವಾರದಂದು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ್ ಒಕ್ಕಲಿಗರ ಸಮಾಜವನ್ನು ಬಾಯಿಗೆ ಬಂದಂತೆ ಮಾತನಾಡಿರುವ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಭೆಯಲ್ಲಿ ಮಾತನಾಡಿದರು. ಈ ವ್ಯಕ್ತಿ ನಮ್ಮ ಸಮಾಜದ ಬಗ್ಗೆ ಕೆಟ್ಟದಾಗಿ ಮಾತನಾಡಿದರುವುದು ತಪ್ಪು. ಇವನು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದರೆ, ಸೀತಾರಾಮ್ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗುವುದು. ಯಾವುದೇ ವ್ಯಕ್ತಿ ಯಾವುದೇ ಜನಾಂಗದ ಮೇಲೆ ಕೆಟ್ಟದಾಗಿ ಮಾತನಾಡಬಾರದು. ತಾಲೂಕಿನ ಎಲ್ಲಾ ಗ್ರಾಮಗಳ ಮುಖಂಡರ ಸಮ್ಮುಖದಲ್ಲಿ ಉಗ್ರ ಹೋರಾಟ ಮಾಡಿ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಇಂತ ವ್ಯಕ್ತಿಗಳಿಂದ…