Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಸರಗೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಸುಮಾರು ವರ್ಷಗಳ ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಕಿಮ್ಮತ್ತು ಕೊಟ್ಟಿರುವ ಹಾಗೂ ಸಾಗುವಳಿ ಚೀಟಿ ನೀಡಬೇಕೆಂದು ಒತ್ತಾಯಿಸಿ ಸರಗೂರು ಅಭಿವೃದ್ಧಿ ಹೋರಾಟ ಸಮಿತಿ ಹಾಗೂ ಭೂ ಹಕ್ಕುದಾರರ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳದೊಂದಿಗೆ ಗುರುವಾರದಂದು ಜಿಲ್ಲಾಧಿಕಾರಿಗಳು ಬರಬೇಕು ಪಟ್ಟು ಹಿಡಿದು ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ್ ಮೋಹನಕುಮಾರಿರವರಿಗೆ ಮನವಿ ಸಲ್ಲಿಸಿದರು. ನಂತರ ಸಭೆ ಕುರಿತು ಮಾತನಾಡಿದ ಸರಗೂರು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ ರವರು ಕುಂದೂರು, ಲಂಕೆ, ಹುನಗಹಳ್ಳಿ, ಹಾದನೂರು, ಪುರದಕಟ್ಟೆ, ಬರಗಿ, ಮೊಳೆಯೂರು ಇನ್ನೂ ಗ್ರಾಮಗಳಲ್ಲಿ ಸಾವಿರಾರು ರೈತರಿಗೆ ಭೂಮಿಯನ್ನು ಉಳುಮೆ ಮಾಡಿಕೊಂಡು ಬರುತ್ತಿದ್ದಾರೆ. ಅನುಭೋಗದಲ್ಲಿ ಇದ್ದರೂ ಸಾಗುವಳಿ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂದು ತಾಲೂಕು ಆಡಳಿತ ವಿರುದ್ಧ ವಿವಿಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ನೂರಾರು ವರ್ಷಗಳಿಂದ ರೈತರು ಭೂಮಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಸಾಗುವಳಿ ಕ್ರಮಬದ್ಧಗೊಳಿಸಬೇಕೆಂದು ಈ ಹಿಂದೆ ಹಲವು ಬಾರಿ ಶಾಸಕರು ಹಾಗೂ…
ಸರಗೂರು: ಆದಿಕರ್ನಾಟಕ ಮಹಾಸಭಾ ಮಾಜಿ ಗೌರವಾಧ್ಯಕ್ಷ ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ ಪಟ್ಟಣ ಪ್ರವಾಸ ಮಂದಿರದಲ್ಲಿ ಮಂಗಳವಾರದಂದು ಆದಿ ಕರ್ನಾಟಕ ಮಹಾಸಭಾದ ವತಿಯಿಂದ ನಡೆಯಿತು. ಬಸವರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನುಡಿನಮನ ಸಲ್ಲಿಸಲಾಯಿತು. ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನಾ ರಾಜಣ್ಣ ಮಾತನಾಡಿ, ಮಹಾಸಭಾದ ಗೌರವಾಧ್ಯಕ್ಷ ಬಸವರಾಜು, ‘ಯಾರನ್ನೂ ದ್ವೇಷಿಸದ, ಟೀಕಿಸದ, ಅಸೂಯೆ ಪಡದ ಅಜಾತ ಶತ್ರು. ರಾಜ್ಯ ಕಂಡ ಅತ್ಯಂತ ಮೇಧಾವಿ, ಮುತ್ಸದ್ದಿ ರಾಜಕಾರಣಿ ಎಂದರು. ಸುಶಿಕ್ಷಿತ, ಬುದ್ಧಿವಂತ ರಾಜಕಾರಣಿ. ಎಲ್ಲರನ್ನೂ ವಿಶ್ವಾಸದಿಂದ ಕಾಣುತ್ತಿದ್ದ ಅಪರೂಪದ ನಾಯಕ. ಸಾರ್ವಜನಿಕರು ಹಾಗೂ ಸಮಾಜದವರನ್ನು ಅತ್ಯಂತ ಆತ್ಮೀಯವಾಗಿ ಕಂಡು ಸ್ಪಂದಿಸುತ್ತಿದ್ದರು ಎಂದು ನೆನಪಿಸಿಕೊಂಡರು. ಮಹಾಸಭಾದ ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ಬಸವರಾಜು ಅವರು ಸಾರ್ವಜನಿಕ ಜೀವನದಲ್ಲಿ ಎಂದಿಗೂ ಏಕವಚನ ಪದ ಬಳಕೆ ಮಾಡದಂತೆ ನಡೆದುಕೊಂಡಿದ್ದರು. ಅವರ ವ್ಯಕ್ತಿತ್ವ ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಹೇಳಿದರು. ದಲಿತ ಸಮುದಾಯಕ್ಕೆ ಸಮಾಜಕ್ಕೆ ಉತ್ತಮವಾಗಿ ಸಂದೇಶಗಳನ್ನು ನೀಡುತ್ತಾ ಯುವ ಪೀಳಿಗೆ ಯುವಕರಿಗೆ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡಿರುವ ನ್ಯಾಯಾಲಯ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರಕರಣದ ಹಿನ್ನೆಲೆ: ಈ ಹಿಂದೆ ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠವು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಓಲಾ (Ola), ಊಬರ್ (Uber) ಸೇರಿದಂತೆ ವಿವಿಧ ಅಗ್ರಿಗೇಟರ್ ಕಂಪನಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದವು. ಹೈಕೋರ್ಟ್ ಆದೇಶದ ಪ್ರಮುಖಾಂಶಗಳು: ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದೆ. ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್‌ಗಳು ತಮ್ಮ ವಾಹನಗಳನ್ನು ಸಾರಿಗೆ ವಾಹನಗಳಾಗಿ ಬಳಸಲು ಅನುಮತಿ ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಹ ಅರ್ಜಿಗಳನ್ನು ಪರಿಶೀಲಿಸಿ ಸರ್ಕಾರವು ಅನುಮತಿ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ.…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ತನಿಖೆ ನಡೆಸಿ, ಆರೋಪಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಜ್ಯ ಗೃಹ ಇಲಾಖೆಯು ಒಟ್ಟು 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ. ಯಾರಿಗೆ ಎಷ್ಟು ಬಹುಮಾನ? ಡಿಜಿ ಮತ್ತು ಐಜಿಪಿ ಹುದ್ದೆಯ ಅಧಿಕಾರಿಗಳು: ತಲಾ 20,000 ರೂ.ಗಳಂತೆ ಒಟ್ಟು 25 ಲಕ್ಷ ರೂ. ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ ಶ್ರೇಣಿಯ ಅಧಿಕಾರಿಗಳು: ತಲಾ 8,000 ರೂ.ಗಳಂತೆ ಒಟ್ಟು 3 ಲಕ್ಷ ರೂ. ಇತರೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ: ತಲಾ 5,000 ರೂ.ಗಳಂತೆ ಒಟ್ಟು 2 ಲಕ್ಷ ರೂ. ಜಿಲ್ಲಾ ಮಟ್ಟದ ಅಧಿಕಾರಿಗಳು: ತಲಾ 5,000 ರೂ.ಗಳಂತೆ ಒಟ್ಟು 1 ಲಕ್ಷ ರೂ. ಯಶಸ್ವಿ ತನಿಖೆಗೆ ಸಂದ ಗೌರವ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಸಂಕೀರ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಭೇದಿಸಿ, ಸೂಕ್ತ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯದಲ್ಲಿ ಅಪರಾಧ ಸಾಬೀತುಪಡಿಸುವಲ್ಲಿ…
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಬಸ್ ಹರಿದು ನಾಲ್ಕು ವರ್ಷದ ಹೆಣ್ಣುಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆಯ ವಿವರ: ಮೃತ ಬಾಲಕಿಯನ್ನು ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಗಬ್ಬೂರಿನಿಂದ ದೇವದುರ್ಗಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಗು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ, ಬಸ್ ಬರುವುದನ್ನು ಗಮನಿಸದೆ ಅಚಾನಕ್ಕಾಗಿ ಅಡ್ಡ ಬಂದಿದೆ ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲು: ಘಟನೆಗೆ ಸಂಬಂಧಿಸಿದಂತೆ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಅಥವಾ ಮಗು ಆಕಸ್ಮಿಕವಾಗಿ ಅಡ್ಡ ಬಂದಿದ್ದರಿಂದ ಈ…
ಬೆಂಗಳೂರು: ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ (SC/ST/OBC) 22 ಮಠಗಳಿಗೆ ಒಟ್ಟು 40 ಎಕರೆ ಭೂಮಿಯನ್ನು ಮಂಜೂರು ಮಾಡಲು ಒಪ್ಪಿಗೆ ನೀಡಿದೆ. ಈ ಕುರಿತು ವಿವರ ನೀಡಿದ ಸರ್ಕಾರ, ರಾವುತ್ತನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 57 ಮತ್ತು 58 ರಲ್ಲಿ ಈ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದೆ. ಈ ಮಠಗಳು ಮತ್ತು ಧಾರ್ಮಿಕ ಸಂಸ್ಥೆಗಳು ಸರ್ಕಾರಕ್ಕೆ ಕೃಷಿ ಭೂಮಿಯ ಸಬ್-ರಿಜಿಸ್ಟ್ರಾರ್ ಮೌಲ್ಯದ ಕೇವಲ ಶೇಕಡಾ 5 ರಿಂದ 10 ರಷ್ಟು ಮೊತ್ತವನ್ನು ನಾಮಮಾತ್ರ ದರವಾಗಿ ಪಾವತಿಸಬೇಕಾಗುತ್ತದೆ ಎಂದು ಸಚಿವ ಸಂಪುಟ ತಿಳಿಸಿದೆ. ಸಂಪುಟ ಸಭೆಯ ಇತರ ಪ್ರಮುಖ ನಿರ್ಧಾರಗಳು: ವಯೋಮಿತಿ ಸಡಿಲಿಕೆ: ಡಿಸೆಂಬರ್ 31, 2027 ರವರೆಗೆ ಹೊರಡಿಸಲಾಗುವ ಎಲ್ಲಾ ಸರ್ಕಾರಿ ನೇಮಕಾತಿ ಅಧಿಸೂಚನೆಗಳಲ್ಲಿ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ…
ಬೆಂಗಳೂರು: ಮಗಳು ಪ್ರಿಯಕರನ ಜೊತೆ ಪರಾರಿಯಾದ ವಿಚಾರವಾಗಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಪತ್ನಿಯೇ ಆತನನ್ನು ಹತ್ಯೆ ಮಾಡಿರುವ ಘಟನೆ ನಗರದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆಯ ವಿವರ: ಮೃತನನ್ನು ಮುರುಗೇಶ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಪತ್ನಿ ಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಮುರುಗೇಶ್ ಮತ್ತು ಲಕ್ಷ್ಮೀ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದರು. ಈ ಪೈಕಿ ಮೊದಲ ಮಗಳಿಗೆ ಈಗಾಗಲೇ ಮದುವೆಯಾಗಿತ್ತು. ಆದರೆ, ಇತ್ತೀಚೆಗೆ ಎರಡನೇ ಮಗಳು ತಾನು ಪ್ರೀತಿಸುತ್ತಿದ್ದ ಯುವಕನ ಜೊತೆ ಓಡಿ ಹೋಗಿದ್ದಳು. ಕೊಲೆಗೆ ಕಾರಣ: ಮಗಳು ಓಡಿ ಹೋದ ದಿನದಿಂದಲೂ ಮುರುಗೇಶ್ ತನ್ನ ಪತ್ನಿ ಲಕ್ಷ್ಮೀ ಜೊತೆ ಪದೇ ಪದೇ ಜಗಳವಾಡುತ್ತಿದ್ದ ಎನ್ನಲಾಗಿದೆ. ಮಗಳ ವರ್ತನೆಗೆ ಲಕ್ಷ್ಮೀಯೇ ಕಾರಣ ಎಂದು ದೂರುತ್ತಾ ಆಕೆಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಘಟನೆಯ ದಿನ ಕೂಡ ಇದೇ ವಿಚಾರವಾಗಿ ದಂಪತಿ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಪತಿಯ ಕಿರುಕುಳದಿಂದ ಆಕ್ರೋಶಗೊಂಡ ಲಕ್ಷ್ಮೀ, ಮನೆಯಲ್ಲಿದ್ದ ಚಾಕುವಿನಿಂದ ಮುರುಗೇಶ್…
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಬಂಧಿತ ಯುವತಿಯನ್ನು ಸ್ಪೂರ್ತಿ ಎಂದು ಗುರುತಿಸಲಾಗಿದೆ. ಈಕೆ ಸುಮಾರು ಐದು ತಿಂಗಳ ಹಿಂದೆ ಸ್ವಾಮೀಜಿಯವರಿಗೆ ಫೋನ್ ಕರೆ ಮಾಡಿ ತಾನು ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಂಡಿದ್ದಳು. ಕಾಲಕ್ರಮೇಣ ಚಾಟಿಂಗ್ ಮೂಲಕ ನಿಕಟ ಸಂಪರ್ಕ ಬೆಳೆಸಿಕೊಂಡಿದ್ದ ಈಕೆ, ನಂತರ ತನ್ನ ಅಸಲಿ ರೂಪ ತೋರಿಸಿದ್ದಾಳೆ. ಹಣಕ್ಕಾಗಿ ಬೆದರಿಕೆ: ಸ್ವಾಮೀಜಿಯವರ ಜೊತೆಗಿನ ಸಂಪರ್ಕವನ್ನು ಬಳಸಿಕೊಂಡು ಅವರನ್ನು ಬ್ಲ್ಯಾಕ್‌ಮೇಲ್ ಮಾಡಲು ಶುರುಮಾಡಿದ ಸ್ಪೂರ್ತಿ, ಹಣ ನೀಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಹಿಂದೆ ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಅವರ ಬಳಿ 4.5 ಲಕ್ಷ ರೂಪಾಯಿಗಳನ್ನು ಪಡೆದಿದ್ದಳು. ಆದರೆ ಅಷ್ಟಕ್ಕೇ ತೃಪ್ತಳಾಗದ ಆಕೆ, ಮತ್ತೆ 1 ಕೋಟಿ ರೂಪಾಯಿ ನೀಡುವಂತೆ ಒತ್ತಡ ಹೇರಿದ್ದಾಳೆ ಎನ್ನಲಾಗಿದೆ. ಯುವತಿಯ ನಿರಂತರ ಕಿರುಕುಳ ಹಾಗೂ ಬೆದರಿಕೆಯಿಂದ…
ತುರುವೇಕೆರೆ: ತಾಲೂಕಿನ ಹಲವಾರು ಟಿಎಪಿಎಸ್ ಸೇರಿದಂತೆ ತೊರೆಮಾವಿನಹಳ್ಳಿ ಟಿಎಪಿಎಸ್ ನಲ್ಲಿ ಬಾರಿ ಅಕ್ರಮ ಅವ್ಯವಹಾರಗಳು ನಡೆಯುತ್ತಿದ್ದು, ರೈತರಿಗಾಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ್ದಕ್ಕೆ ಉದ್ದೇಶಪೂರ್ವಕವಾಗಿ ನನ್ನನ್ನು ಅಧ್ಯಕ್ಷ ಸ್ಥಾನ ಮತ್ತು ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಲಾಯಿತು ಎಂದು ತೊರೆ ಮಾವಿನಹಳ್ಳಿ ಟಿಎಪಿಎಸ್ ಹಾಲಿ ನಿರ್ದೇಶಕ “ಪಂಚಾಕ್ಷರಿ” ಗಂಭೀರವಾಗಿ ಆರೋಪಿಸಿ ಗುಡುಗಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ನ ಜಿಲ್ಲಾ ನಿರ್ದೇಶಕರಾದ ಸಿದ್ದಲಿಂಗಪ್ಪ ಎಂಬ ವ್ಯಕ್ತಿಯು ಕಡು ಭ್ರಷ್ಟನಾಗಿದ್ದು, ತಾಲೂಕಿನ ಸಹಕಾರ ಸಂಘಗಳಲ್ಲಿನ ಕೆಸಿಸಿ ಸಾಲದ ರಿನಿವಲ್ ಎಂಬ ಹೆಸರಿನಲ್ಲಿ ರೈತರಿಗೆ ಮಹಾ ವಂಚನೆ ಮಾಡಲಾಗಿದೆ, ತಾಲೂಕಿನಲ್ಲಿ ಒಟ್ಟಾರೆ 24 ಪಿ ಎ ಸಿ ಎಸ್ ಗಳು ಚಾಲ್ತಿಯಲ್ಲಿದ್ದು ಸುಮಾರು 25,000 ರೈತರ ಕೆಸಿಸಿ ಸಾಲದ ರಿನಿವಲ್ ಗೆ ಆಯಾ ಪಿಎಸಿಎಸ್ ಸಿಇಓ ಗಳು 500ರಿಂದ ಸಾವಿರ ರೂಗಳನ್ನು ವಸೂಲಿ ಮಾಡುತ್ತಿದ್ದು, ಅದರಲ್ಲಿ1 ರಿನಿವಲ್ ಗೆ 250 ರೂ.ಗಳಂತೆ ಡಿಸಿಸಿ ಬ್ಯಾಂಕ್ ತಾಲೂಕು ನಿರ್ದೇಶಕ ಸಿದ್ದಲಿಂಗಪ್ಪ ವರ್ಷಕ್ಕೆ 50…
ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ. ಅರಮನೆ ರಸ್ತೆಯ ಸಿಐಡಿ ಕಚೇರಿ ಸಮೀಪವಿರುವ ಹೋಟೆಲ್ ರಾಡಿಸನ್ ಬ್ಲೂನಲ್ಲಿ ಅಂದು ಸಂಜೆ 6:30ಕ್ಕೆ ಈ ಸಭೆ ಆಯೋಜನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ಈ ಸಭೆ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ. ವಿಶೇಷವಾಗಿ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಬದಲು ಕೇವಲ ಎರಡು ನಿಮಿಷಗಳ ಕಾಲ ತಮ್ಮದೇ ಭಾಷಣ ಓದಿ ನಿರ್ಗಮಿಸಿರುವುದು ಆಡಳಿತ ಪಕ್ಷದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಸದನದಲ್ಲಿ ಯಾವ ರೀತಿ ಪ್ರತಿಭಟನೆ ನಡೆಸಬೇಕು ಮತ್ತು ವಿರೋಧ ಪಕ್ಷಗಳ ಟೀಕೆಗಳಿಗೆ ಹೇಗೆ ಪ್ರತ್ಯುತ್ತರ ನೀಡಬೇಕು ಎಂಬ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ…