Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ಬೆಂಗಳೂರು: ಭಾರತೀಯ ಹಾಕಿ ತಂಡದ ಸದಸ್ಯನೊಬ್ಬನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರೋಪಿಯು ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ಎಂದು ತಿಳಿದು ಬಂದಿದೆ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾಗ ಯುವತಿಯೊಬ್ಬಳು ವರುಣ್ ಕುಮಾರ್ ಗೆ ಪರಿಚಯವಾಗಿದ್ದಳು. ಯುವತಿಗೆ 16 ವರ್ಷವಿದ್ದಾಗ ಪ್ರೀತಿ ಮಾಡಿದ್ದ. ಜೊತೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಕೂಡ ಮಾಡಿದ್ದ ಎಂದು ತಿಳಿದು ಬಂದಿದೆ. ಇದಲ್ಲದೇ 2019ರಿಂದ ಯುವತಿ ಜೊತೆಗೆ ಸಂಪರ್ಕದಲ್ಲಿದ್ದ. ಈಗ ಮದುವೆಯಾಗದೇ ವಂಚಿಸಿರುವ ಹಿನ್ನೆಲೆ, ಆರೋಪಿಯ ಮೇಲೆ ಎಫ್ ಐಆರ್ ದಾಖಲಾಗಿದೆ. ಮೂಲತಃ ಹಿಮಾಚಲ ಪ್ರದೇಶದವನಾಗಿದ್ದು, 2017ರಲ್ಲಿ ಭಾರತ ತಂಡದ ಪರ ಹಾಕಿ ಆಟಕ್ಕೆ ಪಾದಾರ್ಪಣೆ ಮಾಡಿದ್ದ ವರುಣ್ ಕುಮಾರ್ ಹಾಕಿ ಇಂಡಿಯಾ ಲೀಗ್ ಪಂಜಾಬ್ ವಾರಿಯರ್ ತಂಡವನ್ನು…
ಧಾರವಾಡ: ಆಸ್ತಿಗಾಗಿ ವೃದ್ಧೆಯನ್ನು ಕೊಲೆ ಮಾಡಿದ ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ನವಲೂರ ಗ್ರಾಮದಲ್ಲಿ ನಡೆದಿದೆ. ಕರೆವ್ವ ಈರಪ್ಪಗೆರಿ ಕೊಲೆಯಾದ ವೃದ್ಧೆ. ದುಷ್ಕರ್ಮಿಗಳು ಆಸ್ತಿ ವಿಚಾರವಾಗಿ ವೃದ್ಧೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾರವಾಡ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ವೃದ್ಧೆಯ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬೆಂಗಳೂರು: ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಅಕ್ಕಿ ಯೋಜನೆಗೆ ಇಂದು(ಫೆಬ್ರವರಿ 06) ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು. ಮತ್ತೊಂದೆಡೆ ವಸಂತ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ನೆಫೆಡ್ ಕಚೇರಿ ಮುಂಭಾಗದಲ್ಲಿ ಭಾರತ್ ಅಕ್ಕಿ ಮಾರಟ ವಾಹನಗಳಿಗೆ ಚಾಲನೆ ನೀಡಲಾಗಿದೆ. ಎಫ್ ಸಿ ಐ ಚೆರ್ಮನ್ ಭೂಪೇಂದ್ರ ಸಿಂಗ್ ಬಾಟಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಒಟ್ಟು 7 ವಾಹನಗಳಿಗೆ ಚಾಲನೆ ನೀಡಿದರು. ಭಾರತ್ ಅಕ್ಕಿ ಯೋಜನೆಗೆ ಚಾಲನೆ ನೀಡದ ಬಳಿಕ ಮಾತನಾಡಿದ ಬಿಎಸ್ವೈ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. 29 ರೂಪಾಯಿಗೆ ಕೆಜಿ ಅಕ್ಕಿ, ಗೋದಿ 50 ರೂ., ಹೆಸರು ಕಾಳು 90 ರೂ., ತೊಗರಿ ಬೇಳೆ 60 ರೂ. ಕೆಜಿಗೆ ಮಾರಾಟ ಮಾಡಲಾಗುತ್ತಿದೆ. ಇಂತಹ ಒಳ್ಳೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಹೆಮ್ಮೆ ಇದೆ. ದೇಶದ ಇತಿಹಾಸದಲ್ಲಿ ಬಡವರು ಮತ್ತು ಮಧ್ಯಮ ವರ್ಗಕ್ಕೆ ಯೋಜನೆ ತಲುಪಲಿದೆ. ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಹತ್ತು…
ಚಿತ್ರದುರ್ಗ: ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ದುರ್ದೈವಿಗಳಾಗಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಟಿಪ್ಪರ್ ಲಾರಿಯೊಂದು ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿ ನಡೆದಿದೆ. ಬನಶಂಕರಿಯಿಂದ ಹೆಬ್ಬಾಳದ ಕಡೆ ಹೊರಟಿದ್ದಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಏಕಾಏಕಿ ರಸ್ತೆಯಿಂದ ಡಿವೈಡರ್‌ಗೆ ಹತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಇಲ್ಲ. ಟಿಪ್ಪರ್ ಚಾಲಕ ಮನೋಹರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಲಾರಿಯನ್ನು ಮೇಲಕ್ಕೆ ಎತ್ತಿದ್ದಾರೆ.
ಕಾರವಾರ: ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಸೀಬರ್ಡ್ ಬಸ್ ಪಲ್ಟಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ನಡೆದಿದೆ. ಬೆಳಗಿನ ಜಾವ 3:15ಕ್ಕೆ ಸಂಭವಿಸಿದ ಅಪಘಾತದಲ್ಲಿ 8ಕ್ಕೂ ಅಧಿಕ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಗಾಯಾಳುಗಳನ್ನು ಅಂಕೋಲಾ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರ ಬಾಬಣ್ಣ ಲೇಔಟ್ ನಲ್ಲಿ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೇಮಂತ್ ಮೃತ ದುರ್ದೈವಿ. ಕಿರಣ್, ಅಕ್ಷಯ್ ಆರೋಪಿಗಳಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಆರೋಪಿಗಳು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಗಾಯಗೊಂಡಿದ್ದ ಹೇಮಂತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೇಮಂತ್ ಮೃತಪಟ್ಟಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಕಳೆದ ಜುಲೈನಲ್ಲಿ ಆರ್ ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್ ಐಎಗೆ ವರ್ಗಾವಣೆಯಾಗಿತ್ತು. ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಪತ್ತೆಯಾಗಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.
ಮನುಷ್ಯ ಜೋರಾಗಿ ಹಸಿವಾದಾಗ ಊಟ ಮಾಡ್ತಾನೆ. ತಪ್ಪಿದ್ರೆ ಜಂಕ್ ಫುಡ್ಡೋ ಅಥವಾ ಫ್ರೂಟ್ರ್ಸ್ ಇಲ್ಲವೇ ಏನಾದರೂ ತಿಂಡಿ ತಿನಿಸುಗಳನ್ನು ತಿನ್ನಬಹುದು. ಆದರೆ ಹಸಿ ಬೆಕ್ಕನ್ನು ತಿಂದ ಉದಾಹರಣೆ ಬಗ್ಗೆ ನೀವೇನಾದ್ರೂ ಕೇಳಿದ್ದೀರಾ.. ಇಲ್ಲ ಅಲ್ವ.. ಹೌದು, ಇಂತಹ ಅಪರೂಪದ ಘಟನೆಯೊಂದು ನೆರೆಯ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಕುಟ್ಟಿಪ್ಪುರಂನಲ್ಲಿ ಕಳೆದ ಐದು ದಿನಗಳಿಂದ ತಿನ್ನಲು ಏನೂ ಸಿಗದೇ ಹಸಿವಿನಿಂದ ಕಂಗೆಟ್ಟಿದ್ದ ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಬೆಕ್ಕಿನ ಮಾಂಸವನ್ನು ಸೇವಿಸಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಇಲ್ಲಿನ ಜನನಿಬಿಡ ಬಸ್ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಅಸ್ಸಾಂನ ಧುಬ್ರಿ ಜಿಲ್ಲೆಯ 27 ವರ್ಷದ ವ್ಯಕ್ತಿ ಬೆಕ್ಕಿನ ಹಸಿ ಮಾಂಸ ತಿನ್ನುತ್ತಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರು ಈ ದೃಶ್ಯವನ್ನು ಗಮನಿಸಿದ್ದು, ಪೊಲೀಸರು ಇದನ್ನು ದೃಢ ಪಡಿಸಿದ್ದಾರೆ.” ಮಾಹಿತಿ ಸಿಕ್ಕ ನಂತರ ನಾವು ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಆ ವ್ಯಕ್ತಿಯನ್ನು ವಿಚಾರಿಸಿದಾಗ, ಕಳೆದ ಐದು ದಿನಗಳಿಂದ…
ಬೆಂಗಳೂರು: ಗೃಹಿಣಿ ನೇಣು ಬಿಗಿದುಕೊಂಡು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ನ ಶ್ರೀ ಕಂಠೇಶ್ವರ ನಗರದಲ್ಲಿ ನಡೆದಿದೆ. ಪ್ರೇಮಲತಾ(35) ಮೃತ ಮಹಿಳೆಯಾಗಿದ್ದಾಳೆ. ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ಶಿವಶಂಕರ್ ಕೊಲೆ ಮಾಡಿರಬಹುದು ಎಂಬ ಆನುಮಾನವಿದೆ. ಮಹಿಳೆಯನ್ನು ಕೊಲೆ ಮಾಡಿದ ಬಳಿಕ ನೇಣು ಬಿಗಿಯಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆಕೆಯ ಗಂಡನೇ ಕೊಲೆ ಮಾಡಿ ನೇಣು ಬಿಗಿದಿರಬಹುದು ಎಂಬ ಶಂಕೆಯನ್ನು ಪ್ರೇಮಲತಾ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ.