Author: admin

ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ. ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ.  ಜನ ಅಷ್ಟೇ ಅಲ್ಲ, ಜಾನುವಾರುಗಳು ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಕೈ ತೋರಿಸುತ್ತದೆ.  ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಜನ ಮತ್ತು ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ ಪದೇ ಪದೇ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೆಂದು ಟೀಕಿಸುತ್ತಾರೆ. ನಾನು ಆ ಪದ ಬಳಸಲ್ಲ ಸರ್ಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯ ಕಾಂಗ್ರೆಸ್  ಸರ್ಕಾರ…

Read More

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ತಾಯಿ ಮೃತಪಟ್ಟಿದ್ದು ಮಗ ಗಂಬೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ಗೆ ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಹಿಂಬದಿ ಕುಳಿತಿದ್ದ ತಾಯಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಮೃತರನ್ನು ನೇತ್ರಾವತಿ ಎಂದು ಗುರುತಿಸಲಾಗಿದೆ. ಮಗ ರಾಜುಗೆ ಗಂಭೀರ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಕಲಬುರಗಿ:  ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ ಕುಡಿದ ನಶೆಯಲ್ಲಿದ್ದ ಮಗ ಕ್ಷುಲ್ಲಕ ಕಾರಣಕ್ಕೆ ಕಟ್ಟಿಗೆಯಿಂದ ಹೆತ್ತ ತಾಯಿಯನ್ನೇ ಹೊಡೆದು ಕೊಂದ ಘಟನೆ ನಡೆದಿದ್ದು, ಶೋಭಾ(45) ಕೊಲೆಯಾದ ತಾಯಿ. ಅನೀಲ್ ಹೆತ್ತ ತಾಯಿಯನ್ನೇ ಕೊಂದ ಕ್ರೂರಿ ಮಗ. ಕೊಲೆ ಮಾಡಿದ ಅನಿಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕೊಂಚಾವರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ, ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿಎಂ  ಸಿದ್ದರಾಮಯ್ಯ ಆಗ್ರಹಿಸಿದರು. 14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು…

Read More

ಸ್ಪೀಕರ್ ಯು.ಟಿ ಖಾದರ್, ಫೆಬ್ರವರಿ 12 ರಂದು ಬಜೆಟ್ ಅಧಿವೇಶನವು ಪ್ರಾರಂಭವಾಗಲಿದ್ದು, ಉದ್ಘಾಟನಾ ದಿನ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಲಾಪಕ್ಕೆ ಶಾಸಕರು ಗೈರಾಗಬಾರದು. ದಿನಕ್ಕೊಂದು ಹೋಟೆಲ್ ನಿಂದ ಸವಿಯಾದ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಫೆಬ್ರವರಿ 16 ರಂದು ಬಜೆಟ್ ಮಂಡನೆಯೊಂದಿಗೆ ಫೆಬ್ರವರಿ 23 ರವರೆಗೆ ಅಧಿವೇಶನವನ್ನು ವಿಸ್ತರಿಸಲಾಗುವುದು. ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯವು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗಳನ್ನು ಒಳಗೊಂಡಿರುತ್ತದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು.

Read More

ಒಂದು ಸುಳ್ಳನ್ನ ನೂರು ಬಾರಿ ಹೇಳಿದರೆ ಅದು ಸತ್ಯವಾಗುವುದಿಲ್ಲ ಸಿಎಂ ಸಿದ್ದರಾಮಯ್ಯ ಅವರೇ. ಯುಪಿಎ ಅವಧಿಗೆ ಹೋಲಿಸಿದರೆ ಎನ್ ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ 3 ಪಟ್ಟು ಹೆಚ್ಚು ಹಣ ದೊರೆತಿದೆ ಎನ್ನುವ ಸತ್ಯ ನಿಮಗೂ ಗೊತ್ತು. 14 ಬಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುವುದು ಬಿಟ್ಟು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ, ಕಳೆದ 20 ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಒಟ್ಟು ಅನುದಾನ, ತೆರಿಗೆ ಹಂಚಿಕೆ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ. ಮತ್ತೊಂದು ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿರುವ ಬಿಜೆಪಿ,  ಸಿದ್ದರಾಮಯ್ಯ ಅವರ “ಸ್ಲೀಪಿಂಗ್‌ ಸರ್ಕಾರ” ಕಳೆದ 9 ತಿಂಗಳಿಂದಲೂ ನಿದ್ದೆ ಮಾಡುತ್ತಲೇ ಇದೆ. ಎಚ್ಚರಿಸುವ ಕೆಲಸ ಮಾಡಿದರೆ ಸಿಎಂ ಸಿದ್ದರಾಮಯ್ಯ ಅವರಿಗೆ ಇರಿಸು ಮುರಿಸಾಗುತ್ತದೆ. ಸ್ವಾಮಿ ಸಿದ್ದರಾಮಯ್ಯರವರೇ, ನಿಮ್ಮ ಸಾಧನೆ ಏನು ಹೇಳಿ ಎಂದು…

Read More

ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನದ ಹಂಚಿಕೆಯಲ್ಲಿ ತಾರತಮ್ಯ ತೋರುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಕೇಂದ್ರದ ನಡೆ ವಿರುದ್ದ ಫೆಬ್ರವರಿ 7 ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯದ ಜಿಎಸ್ ಟಿ ಪಾಲು ಇನ್ನೂ ಬಂದಿಲ್ಲ. ಕೊರೋನಾ ಸಮಯದಲ್ಲಿ ಜಿಎಸ್ ಟಿ ಪಾಲಿನಲ್ಲೂ ಅನ್ಯಾಯ ಮಾಡಿದೆ. ಬರಗಾಲ ಸಮಯದಲ್ಲೂ ಹಣ  ಬಿಡುಗಡೆ ಮಾಡಿಲ್ಲ. ಕೇಂದ್ರ ನುಡಿದಂತೆ ನಡೆದಿಲ್ಲ. ಮಾನದಂಡದಂತೆ ಕೇಂದ್ರದಿಂದ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಕಿಡಿಕಾರಿದರು. ಸಿಎಂ ಸಿದ್ದರಾಮಯ್ಯ ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ನಾವು ಎಷ್ಟು ದಿನ ಧಮ್ ತಡೆದು ಕೂರಬೇಕು.  ಜನರ ಪರವಾಗಿ ನಾವು ಧ್ವನಿ ಎತ್ತುತ್ತೇವೆ. ಪ್ರತಿಭಟನೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಮನವಿ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

Read More

ಬೆಂಗಳೂರು: ಬೆಂಗಳೂರಿನಲ್ಲೂ ಅಂಥಹುದೇ ಒಂದು ಘಟನೆ ನಡೆದಿದೆ. ನನ್ನ ಗಂಡನೊಂದಿಗೆ ಅಕ್ರಮ ಸಂಬಂದ ಇಟ್ಟುಕೊಂಡಿದ್ದಿಯಾ ಎಂಬ ಆಕ್ರೋಶದಿಂದ ಮಹಿಳೆಯೊಬ್ಬರು ಗುಂಪು ಕಟ್ಟಿಕೊಂಡು ಹೋಗಿ ಯುವತಿ ಮನೆ ಮೇಲೆ ದಾಳಿ‌ ಮಾಡಿದ್ದಾರೆ. ಶರಣ್‌ ಎಂಬಾತ ಪ್ರತಿಮಾ ಎಂಬಾಕೆಯ ಜತೆಗೆ ಕಳೆದ ಮೂರು ವರ್ಷಗಳಿಂದ ಆತ್ಮೀಯವಾಗಿದ್ದ ಎನ್ನಲಾಗಿದೆ. ಇದರ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ಸಂಬಂಧವನ್ನು ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಶರಣ್‌ ಪತ್ನಿ ಸಮಂತಾ ಗ್ಯಾಂಗ್‌ ಕಟ್ಟಿಕೊಂಡು ಹೋಗಿ ಪ್ರತಿಮಾಳ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಕೆಂಪರಾಜು, ಶರತ್ ಮತ್ತು ಶರಣ್‌ ಪತ್ನಿ ಸಮಂತಾ ಅವರು ರಾತ್ರಿ 11.30ರ ಹೊತ್ತಿಗೆ ನಮ್ಮ‌ ಮನೆಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ಮಾಡಿದ್ದಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರ‌ಮ ಜರುಗಿಸಬೇಕೆಂದು ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Read More

ಧಾರವಾಡ: ಯುವಕರಿಬ್ಬರು ಬೈಕ್ ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ ಘಟನೆ ಧಾರವಾಡದ ಡೈರಿ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ಅರವಟಗಿ ಗ್ರಾಮದ ಕಲ್ಲನಗೌಡ ಪಾಟೀಲ್ ಹತ್ಯೆಯಾದವರು. ಸುನಿಲ್ ಜಕ್ಕನ್ನವರ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸುನೀಲ್‌, ಕಲ್ಲನಗೌಡ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಯುವಕರ ಗ್ಯಾಂಗ್‌ ಏಕಾಏಕಿ ಅಡ್ಡಗಟ್ಟಿದೆ. ನಂತರ ರಾಡ್ ತೆಗೆದು ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ತಲೆಗೆ ಗಂಭೀರ ಗಾಯವಾಗಿದ್ದರಿಂದ ರಕ್ತಸ್ರಾವವಾಗಿ ಕಲ್ಲನಗೌಡ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾದ ಗಾಯಗೊಂಡಿರುವ ಸುನಿಲ್‌ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ದಾಳಿಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

Read More

ಬಾರ್ಲಿ ನೀರನ್ನು ಸೇವಿಸುವುದರಿಂದ ಈ ಸಮಸ್ಯೆಗಳನ್ನು ನಿಯಂತ್ರಣದಲ್ಲಿಡಬಹುದು: ಬಾರ್ಲಿ ನೀರನ್ನು ಆಯುರ್ವೇದದಲ್ಲಿ ಬಹಳ ದಿನಗಳಿಂದ ಬಳಸಲಾಗುತ್ತಿದೆ. ಇದು ಹಲವು ಸಮಸ್ಯೆಗಳಿಗೆ ರಾಮಬಾಣ. ಸಕ್ಕರೆಯನ್ನು ನಿಯಂತ್ರಿಸಲು ಬಾರ್ಲಿ ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಕಿಡ್ನಿ ಸಮಸ್ಯೆಗಳು, ಜೀರ್ಣಕ್ರಿಯೆ ಸಮಸ್ಯೆಗಳು, ಕೊಲೆಸ್ಟ್ರಾಲ್ ಮತ್ತು ಹೃದಯದ ಸಮಸ್ಯೆಗಳು ನಿಯಂತ್ರಣದಲ್ಲಿರುತ್ತವೆ. ಬಾರ್ಲಿ ನೀರಿನಲ್ಲಿ ಫೈಬ‌ರ್ ಸಮೃದ್ಧವಾಗಿದೆ. ಹಾಗಾಗಿ ಸಕ್ಕರೆ ಇರುವವರಿಗೆ ತುಂಬಾ ಒಳ್ಳೆಯದು. ಈ ಪೌಷ್ಟಿಕ ಪಾನೀಯವನ್ನು ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಬರುವುದಿಲ್ಲ & ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ನುಗ್ಗೆ ಸೊಪ್ಪು ಹಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ: ಹೇಗೆ ಗೊತ್ತೇ? ಆಯುರ್ವೇದದಲ್ಲಿ ಔಷಧಿಗಳ ತಯಾರಿಕೆಯಲ್ಲಿ ನುಗ್ಗೆ ಮರದ ಪ್ರತಿಯೊಂದು ಭಾಗವನ್ನು ಬಳಸಲಾಗುತ್ತದೆ. ಹಾಗೆಯೇ ನುಗ್ಗೆ ಸೊಪ್ಪಿನಲ್ಲಿ ಹಲವಾರು ಆರೋಗ್ಯ ಗುಣಗಳಿವೆ. ಆಹಾರದ ಭಾಗವಾಗಿ ಇದನ್ನು ಬಳಸಿದರೆ, ಜ್ವರ ಕಡಿಮೆಯಾಗುತ್ತದೆ. ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ತಲೆನೋವು ಕಡಿಮೆಯಾಗೋಕೆ ಇದು ರಾಮಬಾಣ. ರಕ್ತವು ಶುದ್ಧಿಯಾಗುತ್ತದೆ. ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಬೆಟ್ಟದ ನೆಲ್ಲಿಕಾಯಿ: ಬೆಟ್ಟದ…

Read More