Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ಕೆ.ಆರ್.ಪೇಟೆ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಸ್ರೋ ಸಾಧನೆಗಳನ್ನು ಒಳಗೊಂಡ ಸಂಚಾರಿ ಪ್ರದರ್ಶನ ವಾಹನದಲ್ಲಿ ಇಸ್ರೋ ಸಾಧನೆಗಳ ಬಗ್ಗೆ ಸಾಕ್ಷ್ಯ ಚಿತ್ರಗಳ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು . ಭಾರತೀಯರು 2040ರ ವೇಳೆಗೆ ಚಂದ್ರನ ಮೇಲೆ ಕಾಲಿಡಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ಇಸ್ರೋ ಸಂಸ್ಥೆಯು ಬದ್ಧತೆಯಿಂದ ಕೆಲಸ ನಿರ್ವಹಿಸುತ್ತಿದೆ ಎಂದು ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಸಂಚಾಲಕ ಶ್ರೀನಿವಾಸ್ ತಿಳಿಸಿದರು. ಅವರು ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಸಾಧನೆಗಳನ್ನು ಒಳಗೊಂಡ ಸಂಚಾರಿ ಪ್ರದರ್ಶನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಇಸ್ರೋ ಬಾಹ್ಯಾಕಾಶ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಹ ಸಂಶೋಧನಾ ಕೆಲಸಗಳನ್ನು ಮಾಡಿದೆ. ಈ ಎಲ್ಲಾ ಯೋಜನೆಗಳನ್ನು ಪ್ರತಿಬಿಂಬಿಸುವ ಸಂಚಾರಿ ಪ್ರದರ್ಶನ ವಾಹನದಲ್ಲಿ ಆರ್ಯಭಟ, ಭಾಸ್ಕರ, ಕ್ರಯೋಜನಿಕ್ ಎಂಜಿನ್, ಉಪಗ್ರಹ ಉಡಾವಣೆ ಚಂದ್ರಯಾನ, ಮಂಗಳಯಾನ, ನೂತನ ಜಿಪಿಎಸ್ ತಂತ್ರಾಂಶ, ಬಾಹುಬಲಿ ರಾಕೆಟ್ ತಯಾರಿಕೆ, ಪಿಎಸ್ಎಲ್…
ರಾಜ್ಯ ಸ್ಥಾನಮಾನಕ್ಕಾಗಿ ಲಡಾಖ್ ನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ. ಲೇ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ ಜಂಟಿಯಾಗಿ ಪ್ರತಿಭಟನೆಯನ್ನು ಆಯೋಜಿಸಿದ್ದವು. ಲಡಾಖ್ ಗೆ ರಾಜ್ಯ ಸ್ಥಾನಮಾನ, ಸಂವಿಧಾನದ ಆರನೇ ಶೆಡ್ಯೂಲ್ ನ ಅನುಷ್ಠಾನ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಸಂಸದೀಯ ಸ್ಥಾನಗಳಿಗೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಹವಾಮಾನ ವೈಪರೀತ್ಯದ ನಡುವೆಯೂ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅಂಗಡಿ ಮುಂಗಟ್ಟು ಬಂದ್ ಮಾಡಿ ಜನರು ಪ್ರತಿಭಟನೆ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ, ಇದು ಕೇಂದ್ರಾಡಳಿತ ಪ್ರದೇಶವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಅಧಿಕಾರಶಾಹಿ ಆಡಳಿತ ಅನಿರ್ದಿಷ್ಟವಾಗಿ ಮುಂದುವರಿಯಲು ಸಾಧ್ಯವಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆ ಮರುಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯು ಲಡಾಖ್ ಅನ್ನು ಸಂಪೂರ್ಣವಾಗಿ ಮುಚ್ಚಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಲು ಚೀನಾ ಗಡಿ ಮತ್ತು ನುಬ್ರಾ ಕಣಿವೆಯ ಜನರು ಲೇಹ್ ಗೆ ಬಂದರು. ಈ ನಾಲ್ಕು ಬೇಡಿಕೆಗಳು ಜಾರಿಯಾಗುವವರೆಗೂ ಒತ್ತಡ ಹೇರುತ್ತಲೇ ಇರುತ್ತೇವೆ ಎಂಬ ನಿಲುವು…
ಪ್ರಧಾನಿ ನರೇಂದ್ರ ಮೋದಿ ಅವರು ಶಿವ ಸಮ್ಮಾನ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಶಿವ ಸಮ್ಮಾನ್ ಎಂಬುದು ಛತ್ರಪತಿ ಶಿವಾಜಿಯ ಹೆಸರಿನಲ್ಲಿ ರಾಜಮನೆತನದಿಂದ ನೀಡುವ ಪ್ರಶಸ್ತಿಯಾಗಿದೆ. ಪ್ರಶಸ್ತಿಯನ್ನು ಛತ್ರಪತಿ ಉದಯನ್ ರಾಜೇ ಭೋಸಲೆ ಘೋಷಿಸಿದರು. ಈ ಸುದ್ದಿಯನ್ನು ರಾಷ್ಟ್ರೀಯ ಮಾಧ್ಯಮ ಎಎನ್ ಐ ವರದಿ ಮಾಡಿದೆ. ಫೆಬ್ರವರಿ 19 ರಂದು ಸತಾರಾದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಛತ್ರಪತಿ ಶಿವಾಜಿ ಅವರ ಜನ್ಮದಿನದ ಸಂದರ್ಭದಲ್ಲಿ ರಾಜಮನೆತನದಿಂದ ಸ್ಥಾಪಿಸಲಾದ ಪ್ರಶಸ್ತಿಯನ್ನು ಪ್ರಧಾನ ಮಂತ್ರಿಗಳಿಗೆ ಪ್ರದಾನ ಮಾಡಲಾಗುತ್ತದೆ. ಸೈನಿಕ ಶಾಲಾ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮ ನಡೆಯುತ್ತಿದ್ದ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸಿದರು.
ತುಮಕೂರು: ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿದ್ದ ಬಂಧಿತ ಕಳ್ಳತನ ಪ್ರಕರಣದ ಆರೋಪಿಯನ್ನು ಕೊನೆಗೂ ಪುನಃ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಸೈಯದ್ ನನ್ನು ಬಂಧಿಸಿರುವ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಿಂದ ಎಸ್ಕೆಪ್ ಆಗಿದ್ದನು. ಸಿಆರ್ ನಂ. 13/2024 ರ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಕಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ಗುಬ್ಬಿ ಠಾಣೆಗೆ ಕರೆತರಲಾಗಿತ್ತು. ಶುಕ್ರವಾರ ಬೆಳಗ್ಗೆ 4:30 ಕ್ಕೆ ಠಾಣೆಯಿಂದ ಪರಾರಿಯಾಗಿದ್ದನು. ಆರೋಪಿ ಎಡಗೈ ಮೇಲೆ ಸಿರಿಗನ್ನಡಂ ಬಲಗೈ ಮೇಲೆ ಎಲ್ಲಾ ಧರ್ಮದ ಅಚ್ಚೆ ಇರೋದಾಗಿ ಮಾಹಿತಿ ಇದೆ. ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ವಾಸಿ ಆಗಿರೋ ಸೈಯದ್ , ಡ್ಯಾನ್ಸ್ ಕೋರಿಯಾಗ್ರಾಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದನು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ ಆರೋಪಿಯನ್ನು ಪುನಃ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಈ ಪ್ರಕರಣದ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪೊಲೀಸ್ ಸಬ್ ಇನ್ಸ್ಪೆಕ್ಟರ್…
ಪಂಜಾಬ್ ರಾಜ್ಯಪಾಲ ಸ್ಥಾನಕ್ಕೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರೋದಾಗಿ ಬೆನ್ವರಿಲಾಲ್ ಪುರೋಹಿತ್ ವಿವರಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ನಾನು ಪಂಜಾಬ್ ನ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪುರೋಹಿತ್ ರಾಷ್ಟ್ರಪತಿಗಳಿಗೆ ಬರೆದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ರಾಜ್ಯ ಸರ್ಕಾರದೊಂದಿಗೆ ನಡೆಯುತ್ತಿರುವ ಜಗಳದ ನಡುವೆಯೇ ರಾಜ್ಯಪಾಲರು ರಾಜೀನಾಮೆ ನೀಡಿದ್ದಾರೆ.
ಚಿಲಿಯ ವಿನಾ ಡೆಲ್ ಮಾರ್ ನ ವಸತಿ ಪ್ರದೇಶದಲ್ಲಿ ಕಾಡ್ಗಿಚ್ಚಿನಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. 1,100 ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ ಎಂದು ಅಂಕಿಅಂಶಗಳಿಂದ ತಿಳಿದು ಬಂದಿವೆ. 43,000 ಹೆಕ್ಟೇರ್ ಗೂ ಹೆಚ್ಚು ಭೂಮಿ ಸುಟ್ಟು ಹೋಗಿದೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹೆಚ್ಚಿನ ತಾಪಮಾನ ಮತ್ತು ಬಲವಾದ ಗಾಳಿ ಬೆಂಕಿಗೆ ಕಾರಣ. ಇದು ರಕ್ಷಣಾ ಕಾರ್ಯಾಚರಣೆಗೂ ಸವಾಲಾಗಿದೆ. ನಾಲ್ಕು ಕಡೆ ಕಾಡ್ಗಿಚ್ಚು ವ್ಯಾಪಿಸಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ರಕ್ಷಣಾ ಕಾರ್ಯಕರ್ತರು ಮನೆಗಳಿಗೆ ತಲುಪಲು ಸಾಧ್ಯವಾಗದಿರುವುದು ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಿದೆ. ರಕ್ಷಕರೊಂದಿಗೆ ಸಹಕರಿಸುವಂತೆ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಚಿಲಿಯ ಜನರಿಗೆ ಮನವಿ ಮಾಡಿದರು.
ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿಗೆ ಬರುವ ಬಗ್ಗೆ ಅನುಮಾನ ಮೂಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಹೆಬಸೂರು ಭವನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿನ್ನೆ ಮಲ್ಲಿಕಾರ್ಜುನ ಖರ್ಗೆಯವರು 2024ಕ್ಕೂ ಅವರೇ ಅಂತಾ ಹೇಳಿದ್ದಾರೆ. ಇದನ್ನು ನೋಡಿದರೆ ಬಿಜೆಪಿಗೆ ಬರುತ್ತಾರೆ ಏನೋ ಅನ್ನೋ ಅನುಮಾನ ಇದೆ ಎಂದು ಕಾಲೆಳೆದರು. ಇನ್ನೂ ಸಂಸದ ಡಿ.ಕೆ.ಸುರೇಶ್ ಅವರನ್ನು ಪರೋಕ್ಷವಾಗಿ ಮುಟ್ಠಾಳ ಎಂದು ಕರೆದ ಅವರು, ಯಾವ ಮುಟ್ಠಾಳನಾದರೂ ದೇಶ ಇಬ್ಭಾಗಿಸುತ್ತೇವೆ ಅಂತಾ ಹೇಳ್ತಾರಾ ಅಂತ ಪ್ರಶ್ನಿಸಿದರು. ದೇಶ ಇಬ್ಭಾಗಿಸೋಕೆ ಇದೇನೂ ಅವರಪ್ಪನ ಮನೆ ಆಸ್ತಿನಾ? ಎಂದು ಪ್ರಶ್ನಿಸಿದ ಅವರು, ಅಕಸ್ಮಾತ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶ ಒಂದಿರಬೇಕೋ ಬೇಡ್ವೋ. ಈ ಹಿಂದೆ ಇದೇ ಕಾಂಗ್ರೆಸ್ ದೇಶವನ್ನು ತುಂಡರಿಸಿದ್ದು. ಕಾಂಗ್ರೆಸ್ ಪಕ್ಷಕ್ಕೆ ದೇಶ ಅಂದ್ರೆ ಭೂಮಿ ಮಾತ್ರ ಆದರೆ ಬಿಜೆಪಿಯ ಕಾರ್ಯಕರ್ತರಿಗೆ ದೇಶ ಅಂದರೆ ಮಾತೃಭೂಮಿ. ಭೂಮಿಗೂ ಮಾತೃಭೂಮಿಗೂ…
ಹೊಳೆನರಸೀಪುರ: ಖಾಸಗಿ ಶಾಲೆಗಿಂತ ಏನ್ ಕಮ್ಮಿ ಇಲ್ಲ ಸರ್ಕಾರಿ ಶಾಲೆಯ ಸಮಾರಂಭಗಳು ಎಂದು ಶ್ರವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಮ್.ಎಚ್.ಮಹೆಂದ್ರರವರು ಅಭಿಪ್ರಾಯ ಪಟ್ಟರು. ತಾಲ್ಲೂಕಿನ ಶ್ರವಣೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023–24ನೇ ಸಾಲಿನ ಶಾಲಾ ವಾರ್ಷಿಕೋತ್ಸವವನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಪುಟ್ಟರಾಜು ಅವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ನಮ್ಮ ಶಾಲೆ ಎರಡನೇ ಸ್ಥಾನದಲ್ಲಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಕರೆ ನೀಡಿದರು. ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಯತೀಶ್ ಮಾತನಾಡಿ, ತಿಂಗಳಿಗೆ ಒಂದು ಸಲ ಆದರು ಶಾಲೆಗೆ ಭೇಟಿ ನೀಡಿ ಮಕ್ಕಳ ಬಗ್ಗೆ ವಿಚಾರಿಸಿ, ಶಿಕ್ಷಕರಿಗೆ ಪ್ರೋತ್ಸಾಹ ನೀಡಿದರೆ ಉತ್ತಮ ಶಿಕ್ಷಣ ದೊರೆಯುತ್ತದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವಿಶೇಷ ವಿಕಲಚೇತನರ ಮಕ್ಕಳಿಗೆ ಕ್ಷೇತ್ರ ಸಮನ್ವಯ ಸಂಪನ್ಮೂಲ ಶಿಕ್ಷಕರಾದ ಓಂಕಾರಪ್ಪ ಅಂಗವಿಕಲ ದೃಢೀಕರಣ ಪತ್ರ ವಿತರಣೆ ಮಾಡಿದರು. ಬಣ್ಣ ಬಣ್ಣದ ಉಡುಗೆ ತೊಟ್ಟು ಸುಂದರ ಜಾನಪದ…
ಬೀದರ್: ಹೃದಯಾಘಾತ, ರಸ್ತೆ ಅಪಘಾತ ಹಾಗೂ ಇತರ ತುರ್ತು ಸಂದರ್ಭಗಳಲ್ಲಿ ಪ್ರಾಣಾಪಾಯದಲ್ಲಿರುವವರನ್ನು ಹೇಗೆ ರಕ್ಷಿಸಬಹುದು ಎಂಬ ಬಗ್ಗೆ ಬೀದರ್ ಜಿಲ್ಲಾ ಪೊಲೀಸ್ ಅಧಿಕ್ಷಕರ ಕಛೇರಿ ಸಭಾಂಗಣದಲ್ಲಿ ಒಂದು ದಿನದ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ಬೀದರದ ಗುದಗೆ ಆಸ್ಪತ್ರೆಯ ವೈದ್ಯರು ERSS-112 ಮತ್ತು ಬೀದರ್ ಜಿಲ್ಲಾ ಹೈವೆ ಮೊಬೈಲ್ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಶಿಬಿರದಲ್ಲಿ ವಿಶೇಷ ತರಬೇತಿ ನೀಡಿದರು. ಗುದಗೆ ಆಸ್ಪತ್ರೆಯ ಸಂಸ್ಥಾಪಕ ಡಾ.ಚಂದ್ರಕಾಂತ ಗುದಗೆ, ಡಾ.ನಿತೀನ್ ಗುದಗೆ, ಕಾರ್ಡಿಯಾಲೊಜಿಸ್ಟ್ ಡಾ.ಮಹೇಶ ತಮ್ಮ ಸಹದ್ಯೋಗಿಯರೊಂದಿಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ತರಬೇತಿಯನ್ನು ನೀಡಿದರು. ತರಬೇತಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ, ಮೊಸೀ ಮತ್ತಿತರರು ಭಾಗವಹಿಸಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್
ತುರುವೇಕೆರೆ: ಒಂದು ಕುಟುಂಬದ ಪ್ರಗತಿ ಎಂಬುದು ಪುರುಷ ಮತ್ತು ಮಹಿಳೆ ಇವರಿಬ್ಬರ ಸಮಾನ ಜವಾಬ್ದಾರಿಗಳ ಮೇಲೆ ನಿಂತಿರುತ್ತದೆ. ಒಂದು ಸಂದರ್ಭದಲ್ಲಿ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ ಎಂಬ ಮಾತಿನಂತೆಯೇ ಒಂದು ಕುಟುಂಬದಲ್ಲಿ ಮಹಿಳೆಯೊಬ್ಬಳು ಏನಾದರೂ ಸಾಧನೆ ಮಾಡಬೇಕಾದರೆ ಅವಳಿಗೂ ತನ್ನ ಗಂಡ ಮಕ್ಕಳ ಪ್ರೋತ್ಸಾಹ ಪ್ರೇರಣೆ ಅಗತ್ಯವಾಗಿರುತ್ತದೆ ಎಂದು ಗ್ಲೋಬಲ್ ಎಂಬ ಸಿ ಇಂಟರ್ನ್ಯಾಷನಲ್ ಶಾಲೆಯ ಪ್ರಾಂಶುಪಾಲೆ ಶರೀತ ದೇವರ ಮನೆ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತುರುವೇಕೆರೆಯ ಗುರು ಸಿದ್ದರಾಮೇಶ್ವರ ಸಭಾಭವನದಲ್ಲಿ ನಡೆದ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವನ್ನು ತಾಲೂಕಿನ ದಂಡಾಧಿಕಾರಿ ವೈ.ಎಂ.ರೇಣುಕುಮಾರ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಉಪನ್ಯಾಸಕ ಬಸವರಾಜು ಜಿ., ಬಲಿಯಾಗದಿರುವ “ಮನವೇ ಮೊಬೈಲ್ ಎಂಬ ಮಾಯೆಗೆ” ಎಂಬ ವಿಷಯದ ಕುರಿತು ಮೊಬೈಲ್ ನಿಂದ ಆಗುವ ಪ್ರಯೋಜನ ಮತ್ತು ದುಷ್ಪರಿಣಾಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.…