Subscribe to Updates
Get the latest creative news from FooBar about art, design and business.
- ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
- ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
- ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
- ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
- ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ 14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
- ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ವಾಜಪೇಯಿ ಅವರ 101ನೇ ಜಯಂತಿ: ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ: ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
- “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
Author: admin
ತಿಪಟೂರು: ಇಂದಿನ ಆಧುನಿಕ ಸಮಾಜದಲ್ಲಿ ಶಿಕ್ಷಣದ ಜೊತೆ ಸಂಸ್ಕಾರವನ್ನು ಮೈಗೂಡಿಸಿಕೊಂಡು ಸ್ವಾಸ್ತ್ಯ ಸಮಾಜವನ್ನು ಕಟ್ಟುವಲ್ಲಿ ಪೂಜ್ಯರ ಕೊಡುಗೆ ಅವಿಸ್ಮರಣೀಯವಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತಾಲ್ಲೂಕಿನ ಆಯ್ದ ಶಿಕ್ಷಕರ ಕೊರತೆ ಇರುವ ಶಾಲೆಗಳಾದ ಎಸ್. ಎಲ್.ಬಸವೇ ಗೌಡ ಸಿದ್ದರಾಮಾಕ್ಕ ಪ್ರೌಢ ಶಾಲೆ ಸಾರ್ಥವಳ್ಳಿ, ಹುಲಿಹಳ್ಳಿ ಚಿಕ್ಕಮಲ್ಲಯ್ಯ ಗಂಗಮ್ಮ ಸಂಯುಕ್ತ ಪ್ರೌಢ ಶಾಲೆ ಹಾಲ್ಕುರ್ಕೆ, ಶ್ರೀ ಕಾಡ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆ ಚಿಂದೆನಹಳ್ಳಿ ಗಡಿ, ಶಾಲೆಗಳಿಗೆ ಜ್ಞಾನ ದೀಪ ಶಿಕ್ಷಕರನ್ನು ಒದಗಿಸಿದ್ದು ಮಂಜೂರಾತಿ ಪತ್ರವನ್ನು ತಾಲ್ಲೂಕಿನ ಯೋಜನಾಧಿಕಾರಿ ಉದಯ್ ಕೆ. ಶಾಲೆಯ ಶಿಕ್ಷಕರಿಗೆ ಹಸ್ತಾಂತರಿಸಿದರು. ಯೋಜನಾಧಿಕಾರಿಯವರು ಮಾಹಿತಿ ನೀಡುತ್ತಾ ಪರಮ ಪೂಜ್ಯರು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಹಿತದೃಷ್ಟಿಯಿಂದ ನಮ್ಮ ಯೋಜನೆಯ ಪಾಲುದಾರ ಬಂಧುಗಳ ಮಕ್ಕಳು ವಿವಿಧ ವೃತ್ತಿಪರ ಕೋರ್ಸ್ ಮಾಡುವ ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ, ಶಾಲೆಗಳಲ್ಲಿ ದುಶ್ಚಟ ದುರಭ್ಯಾಸದಿಂದ ದೂರ ಇರಲು ಸ್ವಾಸ್ತ್ಯ ಸಂಕಲ್ಪ…
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕು ಗಡಿ ಭಾಗದ ಗಣಿಭಾದಿತ ಗ್ರಾಮಗಳ ರೈತರಿಗೆ ವಸತಿ ನೀಡಲು ಜಿಲ್ಲೆಯಲ್ಲಿ 857 ಮನೆಗಳು ನಿರ್ಮಾಣಕ್ಕೆ ಸರ್ಕಾರದ ಅನುಮತಿ ನೀಡಿದ್ದರೂ, ಕಿಬ್ಬನಹಳ್ಳಿ ಹೋಬಳಿಯ ಹಿಂಡಿಸ್ ಕೆರೆ ಗ್ರಾಮ ಪಂಚಾಯಿತಿ ಮತ್ತು ಬಿಳಿಗೆರೆ ಪಂಚಾಯಿತಿಗಳನ್ನು ಕಡೆಗಣಿಸಿ ಫಲಾನುಭವಿಗಳ ಆಯ್ಕೆ ಸಾಧ್ಯವಾಗಿಲ್ಲ ಎಂದು ಹಿಂಡಿಸ್ ಕೆರೆಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ತಿಳಿಸಿದರು. ಸಾಕಷ್ಟು ಗ್ರಾಮಗಳನ್ನು ನಿಗದಿಪಡಿಸಿಲ್ಲ, ಪಂಚಾಯಿತಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ಕಾರಣದಿಂದಲೇ ಬಹಳಷ್ಟು ಮಂದಿಗೆ ಕ್ಯಾನ್ಸರ್ ಮತ್ತು ಕ್ಷಯ ರೋಗಕ್ಕೆ ತುತ್ತಾಗಿದ್ದಾರೆ. ರಾಜ್ಯಗಣಿ ಪುನರ್ ಚೇತನ ನಿಗಮ ಇತ್ತ ಗಮನಹರಿಸಿ ತಕ್ಷಣ ವೈದ್ಯಕೀಯ ಮತ್ತು ಶಿಕ್ಷಣ ರೈತರಿಗೆ ಪುನರ್ವಸತಿ ಕಲ್ಪಿಸಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ವೈ.ಜಿ.ರಾಘವೇಂದ್ರ ರಸ್ತೆ ಚರಂಡಿ ಕಟ್ಟಡಗಳ ನಿರ್ಮಾಣಕ್ಕೆ ಅನುದಾನದ ಕೊರತೆ ಇಲ್ಲ ಆದರೆ ಬಡವರಿಗೆ ಮನೆ ನೀಡಲು ಅನುದಾನದ ಕೊರತೆಯ ನೆಪ ಹೇಳುತ್ತಿದ್ದಾರೆ, ಬೆಳಗೆರೆ ಪಂಚಾಯಿತಿಯಲ್ಲಿ 10 ಜನ ಮತ್ತು ಹಿಂಡಿಸಿ ಕೆರೆ ಗ್ರಾಮ ಪಂಚಾಯಿತಿಯ ಕೇವಲ 23 ಅರ್ಹರನ್ನು…
ಸರಗೂರು: ಒಕ್ಕಲಿಗರ ಸಮಾಜವನ್ನು ಬಾಯಿಗೆ ಬಂದಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ್ ಜಿಲ್ಲಾ ಮತ್ತು ತಾಲೂಕಿನಿಂದ ಗಡಿಪಾರು ಮಾಡಬೇಕು. ಎಂದು ಸರಗೂರು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಸುಧೀರ್ ಗೌಡ ಒತ್ತಾಯಿಸಿದರು. ಪಟ್ಟಣದ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಸೋಮವಾರದಂದು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ್ ಒಕ್ಕಲಿಗರ ಸಮಾಜವನ್ನು ಬಾಯಿಗೆ ಬಂದಂತೆ ಮಾತನಾಡಿರುವ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಭೆಯಲ್ಲಿ ಮಾತನಾಡಿದರು. ಈ ವ್ಯಕ್ತಿ ನಮ್ಮ ಸಮಾಜದ ಬಗ್ಗೆ ಕೆಟ್ಟದಾಗಿ ಮಾತನಾಡಿದರುವುದು ತಪ್ಪು. ಇವನು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದರೆ, ಸೀತಾರಾಮ್ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಲಾಗುವುದು. ಯಾವುದೇ ವ್ಯಕ್ತಿ ಯಾವುದೇ ಜನಾಂಗದ ಮೇಲೆ ಕೆಟ್ಟದಾಗಿ ಮಾತನಾಡಬಾರದು. ತಾಲೂಕಿನ ಎಲ್ಲಾ ಗ್ರಾಮಗಳ ಮುಖಂಡರ ಸಮ್ಮುಖದಲ್ಲಿ ಉಗ್ರ ಹೋರಾಟ ಮಾಡಿ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಇಂತ ವ್ಯಕ್ತಿಗಳಿಂದ…
ಬೆಂಗಳೂರು/ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ– ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ. ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ ಅವರು, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಮ್ಮ ರಾಷ್ಟ್ರ ಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು, ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. ನವಿಲುಗಳ ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕ ಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ…
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ (ಸಿದ್ದರಬೆಟ್ಟ) ಗ್ರಾಮದಲ್ಲಿನ ದೇವಾಲಯಕ್ಕೆ ತೆರಳಿದ್ದ ವೃದ್ಧೆಯ ಚಲನ-ವಲನ ಗಮನಿಸಿ ವೃದ್ದೆಯು ಬಸ್ ಸ್ಟಾಂಡ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಆರೋಪಿಗಳಾದ ರಂಗರಾಜು ಮತ್ತು ಶ್ರೀದೇವಿ ವೃದ್ಧೆಯ ಗಮನವನ್ನು ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣವನ್ನು ಕದ್ದು ಪಾರಾರಿಯಾಗಿದ್ದರು. ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ ಕೊರಟಗೆರೆ ಪೊಲೀಸ್ ತಂಡ ಮಿಂಚಿನ ಕಾರ್ಯಚರಣೆ ಮೂಲಕ ಎರಡೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲ್ಲೂಕಿನ ಹೂಲೀಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಳ್ಳಿ ಗ್ರಾಮದ ಬಸಮ್ಮ ಎಂಬ ವೃದ್ಧೆಯು ಸಿದ್ದರಬೆಟ್ಟದ ದೇವಸ್ಥಾನಕ್ಕೆ ಬಂದಿದ್ದರು, ಇವರ ಗಮನ ಬೇರೆಡೆ ಸೆಳೆದು ವೃದ್ಧೆಯನ್ನು ಯಾಮಾರಿಸಿ ಬ್ಯಾಗ್ ನಲ್ಲಿದ್ದ ಸುಮಾರು 100 ಗ್ರಾಂ ಚಿನ್ನಾಭರಣ ಕದ್ದು ಪಾರಾರಿಯಾಗಿದ್ದ ಇಬ್ಬರು ಕಳ್ಳರನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡು ವೃದ್ಧೆಗೆ ಹಿಂತಿರುಗಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳಾದ ರಂಗರಾಜು ಮತ್ತು ಶ್ರೀದೇವಿ ಶಿರಾ ತಾಲ್ಲೂಕಿನ ಮೂಕನಹಳ್ಳಿ ಗ್ರಾಮದ ವಾಸಿಗಳು…
ಕೊರಟಗೆರೆ : ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜ್ಞಾನಾರ್ಜನೆಗಾಗಿ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಬೆಳೆಗಳಲ್ಲಿ ಬೆಳೆಯುವ ಬೆಳೆಗಳ ಬಗ್ಗೆ ಅರಿವು ಮೂಡಿಸಲು ಪ್ರವಾಸ ಕೈಗೊಂಡು ತರಬೇತಿ ನೀಡಲಾಗುವುದು ಎಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದ ವಿಸ್ತಾರಣ ಪ್ರಾಧ್ಯಾಪಕರಾದ ಮಧುಶ್ರೀ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕೋಡ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಮೂರು ತಿಂಗಳ ಶಿಬಿರದಲ್ಲಿ ಬೆಳೆ ಸಮೀಕ್ಷೆ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾವಹಿಸಿ ಮಾತನಾಡಿದರು. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದಿಂದ ೨೦ ಜನ ವಿದ್ಯಾರ್ಥಿಗಳಲ್ಲಿ ೧೦ ಜನ ವಿದ್ಯಾರ್ಥಿಗಳು ಹಾಗೂ ೧೦ ಜನ ವಿದ್ಯಾರ್ಥಿನಿಯರ ತಂಡ ಮೂರು ತಿಂಗಳ ಕಾಲ ಕೋಡ್ಲಹಳ್ಳಿ ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ಬೆಳೆಯುವ ಬೆಳಗಳ ಸಮೀಕ್ಷೆ, ರೋಗ ನಿವಾರಣೆ, ಕೀಟ ನಿವಾರಣೆ ಸೇರಿದಂತೆ ರೈತರಿಗೆ ಯಾವ ರೀತಿ ಬೆಳೆಗಳನ್ನ ಬೆಳೆದರೆ ಉತ್ತಮ ಫಸಲು ಬೆಳೆಯಬಹುದು ಎಂದು ತಿಳಿಸಿಕೊಡಲಾಗುವುದು ಎಂದು…
ಕೊರಟಗೆರೆ: ನಮ್ಮ ಜನಪ್ರಿಯ ಶಾಸಕರು, ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ರವರ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದ್ದು, ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ತಿಳಿಸಿದರು. ಡಾ.ಜಿ.ಪರಮೇಶ್ವರ ರವರ 74ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಬುಧವಾರ 6ನೇ ತಾರೀಖು ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹೊಳವನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಡಾ.ಜಿ.ಪರಮೇಶ್ವರ್ ಅಭಿಮಾನಿಗಳ ಬಳಗದಿಂದ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಮ್ಮ ನೆಚ್ಚಿನ ಜನಪ್ರಿಯ ಶಾಸಕರಾಗಿರುವ ಡಾ.ಜಿ.ಪರಮೇಶ್ವರ ರವರ ಆದೇಶದಂತೆ ಅವರ ಜನ್ಮ ದಿನದಂದು ಇವರದೇ ಸಿದ್ಧಾರ್ಥ ಆಸ್ಪತ್ರೆಯ…
ವಾಷಿಂಗ್ಟನ್: ಮಹಿಳೆಯರ ಬಗ್ಗೆ ಅಮೆರಿಕ ಅಧ್ಯಕ್ಷ ಬಳಸುವ ಪದಗಳು ಪದೇ ಪದೇ ಟೀಕೆಗೊಳಪಡುತ್ತಿವೆ. ಇದೀಗ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೊಲಿನ್ ಲೀವಿಟ್ ಅವರನ್ನು ಹೋಲಿಸಿರುವ ರೀತಿ ವ್ಯಾಪಕ ಟೀಕೆಗೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಲೀವಿಟ್ ಬಗ್ಗೆ ಮಾತನಾಡಿರುವ ಟ್ರಂಪ್ ಆಕೆ ಸ್ಟಾರ್ ಆಗಿಬಿಟ್ಟಿದ್ದಾಳೆ. ಆ ಮುಖ, ಬುದ್ಧಿವಂತಿಕೆ, ತುಟಿಗಳು, ಅವು ಚಲಿಸುವ ರೀತಿ.. ಅವುಗಳು ಚಲಿಸುವಾಗ ಮಷಿನ್ ಗನ್ ರೀತಿ ಕಾಣುತ್ತದೆ ಎಂದು ವರ್ಣಿಸಿದ್ದಾರೆ. ಅಲ್ಲದೇ ಇಂತಹ ಪತ್ರಿಕಾ ಕಾರ್ಯದರ್ಶಿ ಬೇರೆ ಅಧ್ಯಕ್ಷರಿಗೆ ಸಿಕ್ಕಿರಲಿಕ್ಕಿಲ್ಲ. ಆಕೆಯೊಂದು ಅದ್ಭುತ ಎಂದು ಬಣ್ಣಿಸಿದ್ದಾರೆ. ಟ್ರಂಪ್ ಹೀಗೆ ಮಾತಾಡುತ್ತಿರುವುದು ಇದೇ ಮೊದಲಲ್ಲ. ಈ ಮುಂಚೆ ತಮ್ಮ ಮಗಳು ಸೇರಿದಂತೆ ಹೆಂಗಳೆಯರ ಬಗ್ಗೆ ಕೀಳುಪದಗಳನ್ನು ಬಳಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಧರ್ಮಪುರ: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಕುರಿತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪಿಗೆ ಯಾರೇ ಆದರೂ ತಲೆ ಬಾಗಬೇಕಾಗುತ್ತದೆ. ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್‍ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದರು. ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ಬಂದ ತಕ್ಷಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತಿನಲ್ಲಿಟ್ಟಿದ್ದರು. ಆಗ ಅಪರಾಧಿನೋ, ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರಯಿಕ್ರಿಯಿಸಲ್ಲ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವರದಿ: ಹಾದನೂರು ಚಂದ್ರ ಸರಗೂರು : ರಾಜ್ಯ ಹೆದ್ದಾರಿ ರಸ್ತೆಗೆ ಹೊಂದಿಕೊಂಡಂತೆ ಖಾಸಗಿ ವ್ಯಕ್ತಿಯೊಬ್ಬ ನಿಯಮ ಮೀರಿ ಕಟ್ಟಡ ಕಟ್ಟಿ ರಾಜರೋಷವಾಗಿ ಹೊಟೇಲ್ ತೆರೆದಿದ್ದರು ಸಹ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ಕಣ್ಣು ಮುಚ್ಚಿ ಕುಳಿತಿರುವುದನ್ನು ಕಾಣಬಹುದಾಗಿದೆ. ತಾಲ್ಲೂಕಿನ ಮೈಸೂರು ಮಾನಂದವಾಡಿ ಮುಖ್ಯ ರಸ್ತೆಯ ಮೈಸೂರು ಮತ್ತು ಎಚ್.ಡಿ.ಕೋಟೆ ತಾಲ್ಲೂಕಿನ ಗಡಿಭಾಗದಲ್ಲಿ ಮೈಸೂರು ತಾಲ್ಲೂಕಿಗೆ ಸೇರಿಕೊಂಡಂತೆ ಇರುವ ಕಂಚಮಹಳ್ಳಿ– ಮಂಡನಹಳ್ಳಿ ಗ್ರಾಮದ ಮಧ್ಯದಲ್ಲಿರುವ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಫಿಸ್ ಲ್ಯಾಂಡ್ ಗ್ರೂಪ್ ನವರು ನಿರಂತರ ಪೂಜಾರಿ ಎಂಬ ಹೆಸರಿನ ಹೋಟೆಲ್ ನ್ನು ಮೂರು ಎಕರೆ ಜಾಗದಲ್ಲಿ ನಿರ್ಮಾಣ ಮಾಡಿದ್ದಾರೆ, ಈ ಹಿಂದೆ ತನ್ನ ಹದ್ದುಬಸ್ತಿಗೆ ಕಾಂಪೌಂಡ್ ನಿರ್ಮಾಣ ಮಾಡಿಕೊಂಡು ವಹಿವಾಟು ನಡೆಸುತ್ತಿದ್ದು, ಒಂದು ವರ್ಷದ ಈಚೆಗೆ ಕಾಂಪೌಂಡ್ ನಿಂದ ಹೊರಬಂದು ಸುಮಾರು 50 ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿ ಇಲ್ಲಿ ಕ್ಯಾಂಟೀನ್ ತೆರೆದಿದ್ದಾರೆ. ರಾಜ್ಯ ಹೆದ್ದಾರಿ ರಸ್ತೆ ಆಗಿರುವುದರಿಂದ ಪ್ರತಿನಿತ್ಯ ಮೈಸೂರಿನಿಂದ ಕೇರಳ ರಾಜ್ಯಕ್ಕೆ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು,…