Author: admin

ಪಾವಗಡ: ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗಗಳ ಶ್ರೇಯಸ್ಸಿ ಗಾಗಿ ಗಣನೀಯಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಸನ್ಮಾನಿಸಲು ಸರ್ಕಾರ ತೀರ್ಮಾನಿಸಿದ್ದು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಪ್ರಿಲ್ 5ರಂದು ನಡೆಯುವ ಬಾಬು ಜಗಜೀವನರಾಮ್ ಅವರ 119ನೇ ಜಯಂತಿ ಹಾಗೂ ಏಪ್ರಿಲ್ 14ರಂದು ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಸಮಾಜಸೇವೆ, ಶಿಕ್ಷಣ, ಸಮಾನತೆ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದವರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗುತ್ತದೆ. ಅರ್ಹರು ತಮ್ಮ ಸೇವಾ ವಿವರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 8ರೊಳಗಾಗಿ ತಾಲೂಕುಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಜಿ.ಇ.ಮಲ್ಲಿಕಾರ್ಜುನಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬಳ್ಳಾರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಬ್ಯಾಂಕ್ ವಲಯ ಯೋಜನೆಗಳನ್ನು ಜನರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಹೇಳಿದರು. ಗುರುವಾರ ನಗರದ ಜಿಪಂ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್‌ನ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ; ಇದರಿಂದ ಸರ್ಕಾರದ ಯೋಜನೆಗಳು ಸಫಲತೆ ಕಾಣುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಬಡಜನರು ಆರ್ಥಿಕವಾಗಿ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು. ಜನರು ನೆರವಿಗಾಗಿ ಸಲ್ಲಿಸುವ ಲೋನ್ ಅರ್ಜಿಗಳನ್ನು ಸಕಾಲದಲ್ಲಿ ಇತ್ಯರ್ಥಗೊಳಿಸುವ ಮೂಲಕ ಬಡಜನರ ಕಣ್ಣೊರೆಸುವ ಕೆಲಸ ಮಾಡಬೇಕು ಎಂದು ಸಂಸದರು ಸೂಚಿಸಿದರು. ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು…

Read More

ಬೆಂಗಳೂರು: ಸಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಮಾಧ್ಯಮಗಳು ಸಮಾಜದಲ್ಲಿ ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ (ಕೋಲಾರ) ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಕರೆ ಕೊಟ್ಟರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಡಾಕ್ಟರ್ ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯ, ಜ್ಞಾನಭಾರತಿ, ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ‘ಮಾಧ್ಯಮ ಹಬ್ಬ 2026’ ಕಾರ್ಯಾಗಾರದ ಸಮಾರೋಪ ಸಮಾರಂಭ ದಲ್ಲಿ ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಜನರನ್ನು ದಿಕ್ಕುತಪ್ಪಿಸುವಂತಹ, ಅವರಿಗೆ ಸುಳ್ಳು ಸಂದೇಶವನ್ನು ಕೊಟ್ಟು ಅವರಲ್ಲಿ ಮಾನಸಿಕ ಗೊಂದಲವನ್ನು ಉಂಟು ಮಾಡುವುದು ಪತ್ರಕರ್ತರ ಕೆಲಸವಲ್ಲ. ಸತ್ಯ ಅಸತ್ಯತೆಯನ್ನು ತಿಳಿದುಕೊಂಡು ಸುದ್ದಿ, ಲೇಖನಗಳನ್ನು ಬರೆಯಬೇಕು. ಸಾಮಾಜಿಕ ಹೊಣೆಗಾರಿಕೆ ಮರೆತ ಮಾಧ್ಯಮ ಬಹಳ ಕಾಲ ಜನಸಾಮಾನ್ಯರ ವಿಶ್ವಾಸಾರ್ಹತೆ ಪಡೆಯಲಾರದು ಎಂದು ಭಾವಿ ಪತ್ರಕರ್ತರಾಗುವ ವಿದ್ಯಾರ್ಥಿಗಳನ್ನು ಅವರು ಎಚ್ಚರಿಸಿದರು. ತಂತ್ರಜ್ಞಾನ ಎಷ್ಟೇ ಮುಂದುವರೆದರೂ,…

Read More

ಕೊರಟಗೆರೆ : ಕೆರೆಗಳಲ್ಲಿ ರೈತರ ಜಮೀನಿಗೆ ಮಣ್ಣು ತುಂಬಲು ಅವಕಾಶ ಮಾಡಿ ಕೊಡಬೇಕು, ಜಮೀನುಗಳ ಮಣ್ಣು ಮಳೆ ಬಂದ ವೇಳೆ ಕೊಚ್ಚಿಕೊಂಡು ಕೆರೆ–ಕಟ್ಟೆಗಳಿಗೆ ಸೇರುತ್ತಿದೆ, ಇದು ಮತ್ತೆ ರೈತರ ಜಮೀನಿಗೆ ಸೇರಬೇಕು ಎಂದು ರಾಜ್ಯ ಹಸಿರು ಸೇನೆ ಸಂಚಾಲಕ ಆನಂದ್ ಪಾಟೇಲ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದರು. ಅರಣ್ಯ ಇಲಾಖೆಯು ಸುಮಾರು ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಿ ರೈತರನ್ನು ಶೋಷಣೆ ಮಾಡುತ್ತಿದೆ ಎಂದು ಹೇಳಿದರು. ನಗರ ವ್ಯಾಪ್ತಿಗಳಲ್ಲಿ ಸುಮಾರು 50 ರಿಂದ 60 ವರ್ಷ ರೈತರು ಉಳುಮೆ ಮಾಡಿಕೊಂಡು ಟಿ.ಟಿ.ಕಟ್ಟಿ ಅರ್ಜಿ ಸಲ್ಲಿಸಿದ್ದು, ಇದುವರೆಗೂ ಸರ್ಕಾರ ಸ್ಪಷ್ಟ ನಿರ್ಧಾರ ಕೊಟ್ಟಿಲ್ಲ, ಕೆ.ಐ.ಎ.ಡಿ.ಬಿ ಇಲಾಖೆ ರೈತರ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಇಂದು ಈ ಪ್ರದೇಶದಲ್ಲಿ ದೊಡ್ಡ ದೊಡ್ಡ ಕಂಪನಿಗಳು ಬಂದಿವೆ ಎಂದು ಹೇಳಿದರು. ಸ್ಥಳೀಯ ನಿರುದ್ಯೋಗಿ ಯುವಕರಿಗೆ ಉದ್ಯೋಗ ಭರವಸೆ ನೀಡಿ ಭೂಮಿ ಸ್ವಾಧೀನ…

Read More

ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3 (2026)’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಪ್ರತಿಷ್ಠಿತ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಏಪ್ರಿಲ್ 18ರಂದು ನಗರದ ವಿಶ್ವಕರ್ಮ ಬಾಂಕ್ವೇಟ್ ಹಾಲ್‌ನಲ್ಲಿ ಜರುಗಲಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಪರಿಣಿತ ಮಾರ್ಗದರ್ಶಕರಿಂದ ಸ್ಪರ್ಧಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುವುದು.  ಆಸಕ್ತಿಯುಳ್ಳ ಮಕ್ಕಳು, ಯುವಕರು ಹಾಗೂ ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ಗಳಿಸಲು ಸೂಕ್ತ ವೇದಿಕೆ ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ. “ಪ್ರತಿಯೊಬ್ಬರೂ ತಮ್ಮಲ್ಲಿರುವ ಕಲಾತ್ಮಕ ಪ್ರತಿಭೆಯನ್ನು ಹೊರಹಾಕಲು ಇದೊಂದು ಸುವರ್ಣಾವಕಾಶ. ಆಸಕ್ತಿಯುಳ್ಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.” — ರಂಜನಾ ಪಾಟೀಲ್, ಕಾರ್ಯಕ್ರಮದ ಆಯೋಜಕಿ. ನೋಂದಣಿ ಮಾಡಿಕೊಳ್ಳುವುದು ಹೇಗೆ? ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು 8088980416 ಅಥವಾ 8618038059 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡುವ…

Read More

ಔರಾದ: ಬದುಕು ಸುಗಮವಾಗಿರಬೇಕಾದ ರಸ್ತೆಗಳು ಇಂದು ನರಕಯಾತನೆಯ ತಾಣಗಳಾಗಿ ಮಾರ್ಪಟ್ಟಿವೆ. ಇದಕ್ಕೆ ಸಾಕ್ಷಿ ಔರಾದ ತಾಲ್ಲೂಕಿನ ಶೇಂಬೆಳ್ಳಿ ಕ್ರಾಸ್‌ನಿಂದ ಶೇಂಬೆಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ದುಃಸ್ಥಿತಿ. ಕೇವಲ 2.5 ಕಿ.ಮೀ. ಉದ್ದದ ಈ ರಸ್ತೆಯಲ್ಲಿ ಸಂಚರಿಸುವುದೆಂದರೆ ಸಾವಿನ ಜೊತೆ ಸರಸವಾಡಿದಂತೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ. ಗುಂಡಿಗಳ ಸಾಮ್ರಾಜ್ಯ: ಸುಮಾರು ಹತ್ತು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಈ ಡಾಂಬರು ರಸ್ತೆ, ನಿರ್ವಹಣೆಯಿಲ್ಲದೆ ಸಂಪೂರ್ಣ ಹದಗೆಟ್ಟಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ನಿತ್ಯ ಶಾಲೆ–ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಗುಂಡಿಗಳ ನಡುವೆ ಸೈಕಲ್ ಅಥವಾ ಬಸ್‌ಗಳಲ್ಲಿ ಪ್ರಯಾಣಿಸಲು ಹರಸಾಹಸ ಪಡುತ್ತಿದ್ದಾರೆ.  ಇದಲ್ಲದೇ, ಕೃಷಿ ಪ್ರಧಾನವಾದ ಈ ಭಾಗದಲ್ಲಿ ಟ್ರ್ಯಾಕ್ಟರ್‌ ಗಳ ಮೂಲಕ ಕಬ್ಬು, ಮೇವು ಹಾಗೂ ಹೊಟ್ಟು ಸಾಗಿಸುವುದು ದುಸ್ತರವಾಗಿದೆ. ಬಸ್ ಮತ್ತು ಲಾರಿಗಳಂತಹ ದೊಡ್ಡ ವಾಹನಗಳ ಸಂಚಾರವಂತೂ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿದೆ. ಕಳಪೆ ಕಾಮಗಾರಿ ಆರೋಪ: “ಕಳೆದ ವರ್ಷವಷ್ಟೇ ಎರಡು ಬಾರಿ…

Read More

ಊರು: ಸುರಪುರವೆಂಬ ಹಳ್ಳಿ, ಮಿತ್ರರ ಹೆಸರು: ಸೋಮ, ಭೀಮ, ಮತ್ತು ಚಾಮ. ವರ್ಗ: ಸ್ವಲ್ಪ ಮಧ್ಯಮ ವರ್ಗದ ಬಡತನದ ಜೀವನ, ಮಾತಿಗೆ ಸೇರುವ ಜಾಗ: ಊರ ಹೊರಗಿನ ಅರಳಿ ಕಟ್ಟೆ. ಭೀಮ:- (ಮತ್ತೆ ಅದೇ ಅರಳಿ ಕಟ್ಟೆ ಮೇಲೆ ಕುಳಿತು, ಎಲೆ ಅಡಿಕೆ ಹಾಕಿಕೊಂಡು ಚಾಮನೊಡನೆ ಮಾತನಾಡುತ್ತಾ “ಸಾನೆ ಬಿಸ್ಲು ಅಲ್ವನ್ಲಾ?”, ಅನ್ನುವಾಗ ಅಲ್ಲಿಗೆ ಬರಿಗಾಲಲ್ಲಿ ನಡೆದುಕೊಂಡು ಸೋಮ ಬರುತ್ತಾನೆ, ಅವನನ್ನು ನೋಡಿದ ಭೀಮ ಮುಖ ಬೇರೆ ಕಡೆ ತಿರುಗಿಸಿಕೊಳ್ಳುತ್ತಾನೆ) ಸೋಮ:- (ಮೆಲು ಧನಿಯಲ್ಲಿ) ಯಾಕಪ್ಪ ಭೀಮು ಮುಖ ಆ ಕಡೆ ತಿರುಗಿಸಿಕೊಳ್ಳುತ್ತೀ ನನ್ನ ನೋಡಿ. ಭೀಮ:- (ಖೈಡಾಗಿ) ಇನ್ನೇನು ನಡೆ ಮುಡಿ ಹಾಸಿ ಹಾರ ಹಾಕನೆ? ಸೋಮ:- ಯಾಕಪ್ಪ ಹೀಗೆಲ್ಲಾ ಮಾತನಾಡುತ್ತೀ, ನಾನು ಹಣ ಸಿಗದೆ ಬಹಳ ನೊಂದಿದಿನಪ್ಪಾ… ಭೀಮ:- ಅವತ್ತೇನೋ ವದರಾಡಿಕೊಂಡು ಹೋದೆ ನಂಗೆ ಸಾನೆ ಜನ ಅಔರೆ ದುಡ್ಡು ಕೊಡಕ್ಕೆ ಅಂತ, ಎಲ್ಲ ಮುಖಕ್ಕೆ ಮಂಗಳಾರತಿ ಎತ್ತಿ ಕಳಿಸವ್ರೆ ನಂಗೆ ಗೊತ್ತಿಲ್ವೇ? ಇವನು ಬಂದ ಗ್ಯಾರಂಟಿ ಗಿರಾಕಿ…

Read More

ಮಧುಗಿರಿ: ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳು ಮತ್ತು ಶಾಲಾ ಕಟ್ಟಡಗಳ ಮೇಲೆ ಬೆಳೆದಿರುವಂತಹ ಗಿಡಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ರಸ್ತೆ ಬದಿಗಳಲ್ಲಿ ನೆಡಲಾಗಿರುವ ಗಿಡಗಳಿಗೆ ನಿಯಮಿತವಾಗಿ ನೀರು ಹಾಕಿ ಸಮರ್ಪಕವಾಗಿ ಸಂರಕ್ಷಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದರು. ಅವರು ತಾಲೂಕಿನ ಮಿಡಿಗೇಶಿ ಹೋಬಳಿಯಲ್ಲಿ ಸುಮಾರು 7.95 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಮುಂದಿನ ವಾರ ಕೆಲವು ಗ್ರಾಮಗಳಿಗೆ ಸ್ವತಃ ಭೇಟಿ ನೀಡಿ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಲಾಗುವುದು. ಅಷ್ಟರೊಳಗೆ ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಶಾಲಾ ಕಟ್ಟಡಗಳ ಮೇಲ್ಛಾವಣಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿರಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಹೆಚ್ಚು ಬಡವರು ವಾಸವಿರುವ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹಳ್ಳಿಗಾಡಿನ ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಿ ಉನ್ನತ ಹುದ್ದೆಗಳನ್ನು ಗಳಿಸುವಂತಾಗಬೇಕು. ಗುತ್ತಿಗೆದಾರರು ಕಾಮಗಾರಿಗಳನ್ನು ವಿಳಂಬ ಮಾಡದೆ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಕೆಲವು ಗಡಿ ಭಾಗದ ರಸ್ತೆಗಳು…

Read More

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಮಾರ್ಚ್ 25ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ಮಹಾರಥೋತ್ಸವದ ಅಂಗವಾಗಿ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ಜಾತ್ರಾ ಕಾರ್ಯಕ್ರಮಗಳು ನಡೆಯಲಿದ್ದು, ಮಾರ್ಚ್ 26ರಂದು ರಾತ್ರಿ 10 ಗಂಟೆಗೆ ಬಿಲ್ವವೃಕ್ಷ ವಾಹನೋತ್ಸವ, ಮಾರ್ಚ್ 27ರಂದು ರಾತ್ರಿ 10 ಗಂಟೆಗೆ ಬೆಳ್ಳಿಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಜರುಗಲಿವೆ. ಪ್ರತಿ ವರ್ಷದಂತೆ ದನಗಳ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬರುವ ರಾಸುಗಳಿಗೆ ನೀರು ಮತ್ತು ನೆರಳಿನ ಸೌಲಭ್ಯ ಕಲ್ಪಿಸಲಾಗುವುದು. ಜಾತ್ರೆಯಲ್ಲಿ ಆಯ್ಕೆ ಮಾಡುವ ಉತ್ತಮ ರಾಸುಗಳಿಗೆ ಮಾರ್ಚ್ 25ರ ಸಂಜೆ 5 ಗಂಟೆಗೆ ಬಹುಮಾನ ವಿತರಿಸಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಜಾತ್ರೆಗೆ ಆಗಮಿಸಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಸೌಕರ್ಯ ಲಭ್ಯವಿರುತ್ತದೆ. ಜಾತ್ರಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮಧುಗಿರಿ: ತಾಲೂಕಿನ ಪುರವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಹರು ಯುವ ಕ್ರೀಡಾ ಸಂಘದ ವತಿಯಿಂದ ಈರಣ್ಣ ನಾಯಕ ಕಪ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಗ್ರಾಮೀಣ ಯುವಕರಲ್ಲಿ ಕ್ರೀಡಾಸ್ಪೂರ್ತಿ ಬೆಳೆಸುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಟೋರ್ನಮೆಂಟ್ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಪಂದ್ಯಾವಳಿ ಮಾ. 7 ಮತ್ತು ಮಾ.8 ರಂದು ಎರಡು ದಿನಗಳ ಕಾಲ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಅಮೆಚೂರ್ ಕಬಡ್ಡಿ ತಂಡಗಳು ಭಾಗವಹಿಸಲಿವೆ. ರೋಚಕ ಪೈಪೋಟಿಗೆ ವೇದಿಕೆ ಸಿದ್ದವಾಗಿದ್ದು, ಕ್ರೀಡಾಭಿಮಾನಿಗಳಿಗೆ ಮನರಂಜನೆಯೊಂದಿಗೆ ಉತ್ಸಾಹಭರಿತ ಪಂದ್ಯಗಳು ಕಾದಿವೆ. ಪ್ರತಿ ತಂಡಕ್ಕೆ ಪ್ರವೇಶ ಶುಲ್ಕ 1,001 ನಿಗದಿಪಡಿಸಲಾಗಿದೆ. ಕ್ರೀಡಾಪಟುಗಳು ಹಾಗೂ ಪ್ರೇಕ್ಷಕರಿಗೆ ಊಟದ ವ್ಯವಸ್ಥೆ ಇರಲಿದೆ. ಅಂಪೈರ್‌ ಗಳ ತೀರ್ಮಾನವೇ ಅಂತಿಮವಾಗಿರುತ್ತದೆ ಹಾಗೂ ಉತ್ತಮ ಕ್ರೀಡಾಸ್ಪೂರ್ತಿ ಮತ್ತು ಶಿಸ್ತಿನ ಆಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಎಲ್ಲಾ ತಂಡಗಳು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಟೋರ್ನಮೆಂಟ್ ಯಶಸ್ವಿಗೊಳಿಸುವಂತೆ…

Read More