Author: admin

ನಾಸಿಕ್‌:  ರಾಮಮಂದಿರ ನಿರ್ಮಾಣ ಮಾಡಿದ ಮಾತ್ರಕ್ಕೆ ಜನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುತ್ತಾರೆ ಎಂದಲ್ಲ ಎಂದು  ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂದು ಊಹಿಸಲು ಸಾಧ್ಯವಿಲ್ಲ, ರಾಮ ಮಂದರ ನಿರ್ಮಿಸಿದ ಮಾತ್ರಕ್ಕೆ ಜನರು ಬಿಜೆಪಿಗೆ ಮತ ಹಾಕುತ್ತಾರೆ ಎಂದರ್ಥವಲ್ಲ ಎಂದು ಅವರು ಹೇಳಿದರು. ಮರಾಠಾ ಮೀಸಲಾತಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮರಾಠಾ ಸಮುದಾಯದವರ ಮೀಸಲಾತಿ ವಿಚಾರ ಬಿಟ್ಟು ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸಲಾಗಿದೆ ಎಂದರು. ಟೋಲ್‌ ಪ್ಲಾಜಾಗಳಲ್ಲಿ ಹಣ ಸಂಗ್ರಹದ ಕುರಿತು ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಭೇಟಿಯಾಗುತ್ತಿದ್ದೇನೆ. ಎಲ್ಲಾ ಕಡೆ ಟೋಲ್‌ ಹಣವನ್ನು ಪಡೆಯುತ್ತಾರೆ. ಅದರ ವಿರುದ್ಧವಾಗಿ ನಾನು ಮಾತನಾಡುತ್ತಿಲ್ಲ. ಆದರೆ ಅದರ ವ್ಯವಹಾರದಲ್ಲಿ ಪಾರದರ್ಶಕತೆ ಇರಬೇಕು. ಸರ್ಕಾರದ ಬೊಕ್ಕಸಕ್ಕೆ ಆ ಹಣ ಹೋದರೆ ಒಳ್ಳೆಯದು. ಬದಲಾಗಿ ಟೋಲ್‌ ಸಂಗ್ರಹಿಸುವವರ ಜೇಬಿಗೆ ಅಥವಾ ರಾಜಕೀಯ ಪಕ್ಷದ ಉಪಯೋಗಕ್ಕೆ ಹೋದರೆ ಅದು ತಪ್ಪು ಎಂದು…

Read More

ಕಾಂಗ್ರೆಸ್‌ ನಿಂದ ನಾಯಕರು ನಿರ್ಗಮಿಸುತ್ತಿರುವ ಸರಣಿಯ ನಡುವೆ, ಹಿಮಂತ ಬಿಸ್ವ ಶರ್ಮ ಮತ್ತು ಮಿಲಿಂದ್ ದೇವರ ಅವರಂತಹವರು ಪಕ್ಷದ ಸಿದ್ಧಾಂತಕ್ಕೆ ಹೊಂದಿಕೆಯಾಗದ ಕಾರಣ ಪಕ್ಷದಿಂದ ದೂರವಾಗಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ  ಹೇಳಿಕೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಪಕ್ಷದ ‘ಡಿಜಿಟಲ್ ಮಾಧ್ಯಮ ಸೇನಾನಿ’ಗಳನ್ನು ‌ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷದ ಸಿದ್ಧಾಂತಕ್ಕೆ ಹೊಂದಿಕೆಯಾಗದ ನಾಯಕರು ಪಕ್ಷ ಬಿಡುವುದೇ ಉತ್ತಮ ಎಂದು ಅಭಿಪ್ರಾಯಪಟ್ಟರು. ಹಿಮಂತ ಮತ್ತು ಮಿಲಿಂದ್ ಅವರಂತಹ ನಾಯಕರು ನಮ್ಮ ಪಕ್ಷದಿಂದ ನಿರ್ಗಮಿಸಬೇಕು. ಇದನ್ನು ನಾನು ಸಂಪೂರ್ಣ ಒಪ್ಪುತ್ತೇನೆ. ಹಿಮಂತ ಅವರು ನಿರ್ದಿಷ್ಟ ರೀತಿಯ ರಾಜಕೀಯವನ್ನು ಪ್ರತಿನಿಧಿಸುತ್ತಾರೆ, ಅದು ಕಾಂಗ್ರೆಸ್ ಪಕ್ಷದ ರಾಜಕೀಯವಲ್ಲ’ ಎಂದು ರಾಹುಲ್‌ ಹೇಳಿದರು. ‘ಹಿಮಂತ ಅವರು ಮುಸ್ಲಿಮರ ಬಗ್ಗೆ ನೀಡಿರುವ ಕೆಲವು ಹೇಳಿಕೆಗಳನ್ನು ನೀವು ಕೇಳಿದ್ದೀರಾ? ನಾನು ಅವರೊಂದಿಗೆ ಯಾವ ಚರ್ಚೆಯನ್ನೂ ಮಾಡಲು ಬಯಸುವುದಿಲ್ಲ’ ಎಂದು ರಾಹುಲ್‌ ಹೇಳಿದರು.

Read More

ಬೆಂಗಳೂರು: ವಯಸ್ಸಾದ ಕಾಲದಲ್ಲಿ ದೇವೇಗೌಡರಿಗೆ ಕುಮಾರಸ್ವಾಮಿ ನೋವು ಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆಗೆ ಡಿಕೆಶಿ ಈ ರೀತಿಯ ಉತ್ತರ ನೀಡಿದರು. ನಾನು  ದೇವೇಗೌಡರ ಸಿದ್ಧಾಂತವನ್ನು ಹತ್ತಿರದಿಂದ ನೋಡಿದ್ದೇನೆ. ಪಾಪ ವಯಸ್ಸಾದ ಕಾಲದಲ್ಲಿ ಅವರಿಗೆ ನೋವು ಕೊಟ್ಟಿದ್ದಾರೆ ಎಂದು ದೇವೇಗೌಡರ ಪರ ಬ್ಯಾಟಿಂಗ್ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ದೇವೇಗೌಡರ ಸಿದ್ಧಾಂತವನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲ ಮಾಡಬೇಕು. .ಪಾಪ ವಯಸ್ಸಾದ ಕಾಲದಲ್ಲಿ ಅವರಿಗೆ ಮನೆಯಲ್ಲಿ ಇಂತಹ ನೋವು ಕೊಟ್ಟಿದ್ದಾರೆ. ನಮಗು ಮಕ್ಕಳಿದ್ದಾರೆ. ವಯಸ್ಸಾದ ಕಾಲದಲ್ಲಿ ಏನಾಗುತ್ತೋ ಏನೋ ಭಯವಾಗುತ್ತಿದೆ ಎಂದು ಕುಮಾರಸ್ವಾಮಿಗೆ ಟಾಂಗ್‌ ನೀಡಿದರು.

Read More

ಪಾವಗಡ: ತಾಲ್ಲೂಕಿನ ನಿಡಗಲ್ಲು ಹೋಬಳಿ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿಶಾಲೆ ಬಿ ಸಿ 89 ವಾರ್ಷಿಕೋತ್ಸವವನ್ನು ಶಾಲೆಯ ಆವರಣಲ್ಲಿ ಆಯೋಜನೆ ಮಾಡಲಾಗಿತ್ತು. ಶಾರದಾ ಮಾತೆ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಅಧ್ಯಕ್ಷತೆ ವಹಿಸಿಕೊಂಡ ಪ್ರಾಂಶುಪಾಲ ತಿಪ್ಪೇಸ್ವಾಮಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ನಮ್ಮ ಶಾಲೆಯಲ್ಲಿ 12ನೇ ವಾರ್ಷಿಕೋತ್ಸವ ನಡೆಯುತ್ತಿದೆ, ಪ್ರತಿವರ್ಷ ನಮ್ಮ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ನಮ್ಮ ಶಿಕ್ಷಕರ ಶ್ರಮ ಮತ್ತು ಉತ್ತಮ ಕೊಡುಗೆ ಶಾಲೆ ರಾಜ್ಯದಲ್ಲಿ ದ್ವಿತೀಯ ಸ್ಥಾನಕ್ಕೆ ಏರಲು ಕಾರಣವಾಯಿತು ಎಂದರು. ಕಾರ್ಯಕ್ರಮದಲ್ಲಿ ಪೋಷಕರಾದ ಗೀತಾ, ಶ್ರೀ ಜಯಶೀಲರೆಡ್ಡಿ, ಪತ್ರಕರ್ತ ರಾಮಪ್ಪ, ಶಿಕ್ಷಕರಾದ ಅಶೋಕ ಕೆ.ಎಸ್., ಜಿ.ನಾಗೇಂದ್ರಯ್ಯ, ನರಸಿಂಹಮೂರ್ತಿ, ಕೇಶವಮೂರ್ತಿ, ಮಂಜುನಾಥ್ ಎನ್., ಸುಬ್ರಮಣಿ, ಅಜಯ್, ಪುಷ್ಪಲತಾ, ಕಾವ್ಯ, ಅಡುಗೆ ಸಿಬ್ಬಂದಿ ಮತ್ತು ಕಾವಲುಗಾರರು ಹಾಜರಿದ್ದರು. ವರದಿ: ರಾಮಪ್ಪ ಸಿ.ಕೆ.ಪುರ

Read More

ತುರುವೇಕೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ 5 ಗ್ಯಾರಂಟಿಗಳ ಬಗ್ಗೆ ವಿಶೇಷ ಅಭಿಯಾನವನ್ನು ನೋಂದಣಿಗಾಗಿ ಮಾಡಲಾಗುತ್ತಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ತಹಶೀಲ್ದಾರ್ ರೇಣುಕುಮಾರ್ ಮನವಿ ಮಾಡಿದರು. ತುರುವೇಕೆರೆ ತಾಲ್ಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಯೋಜನೆ , ಯುವ ನಿಧಿ, ಗೃಹ ಜ್ಯೋತಿ ಯೋಜನೆಗಳಿಗೆ ಸರಿಯಾದ ಫಲಾನುಭವಿಗಳಿಗೆ ತಲುಪುವ ನಿಟ್ಟಿನಲ್ಲಿ ಇದೇ ತಿಂಗಳ 3 –2 –24 ರಿಂದ 6—2–24 ಮತ್ತು 9–2 –24ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ತಾಲೂಕಿನಲ್ಲಿರುವ ಗ್ರಾಮಒನ್ ಬಾಪೂಜಿ ಸೇವಾಕೇಂದ್ರ ಕರ್ನಾಟಕ ಓನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದು ಮತ್ತು ಆಯಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಗಳಲ್ಲಿ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳು ಹಾಗೂ ಗ್ರಾಮಓನ್ ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಸಿಕೊಂಡು ಈ ಯೋಜನೆಯನ್ನು ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ್ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವ ರಾಜಯ್ಯ, ಸಿಡಿಪಿಓ ಗೋಪಾಲಪ್ಪ, ತೋಟಗಾರಿಕಾ ಇಲಾಖೆಯ ಆಂಜನೇಯ…

Read More

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿ ಸೋಮಣ್ಣ ಸದ್ದಿಲ್ಲದೆ ಕ್ಷೇತ್ರದಾದ್ಯಂತ ಓಡಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಎರಡು ತಿಂಗಳದಿಂದ ತುಮಕೂರು ಜಿಲ್ಲೆಯಲ್ಲಿ ಹಾಗೂ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಒಂದು ಇಲ್ಲೊಂದು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಚುನಾವಣಾ ಅಖಾಡವನ್ನು ಸಜ್ಜುಗೊಳಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಹೈಕಮಾಂಡ್ ಮಟ್ಟದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡು ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಸನ್ನದ್ಧರಾಗಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೂಡ ಮಾಜಿ ಸಚಿವ ವಿ ಸೋಮಣ್ಣ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನೊಂದಡೆ ತುಮಕೂರು ಜಿಲ್ಲೆಯಲ್ಲಿ ವಿ.ಸೋಮಣ್ಣ ಮಿಂಚಿನ ಸಂಚಾರ ನಡೆಸಿದ್ದು, ತೆರೆ ಮರೆಯಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಸಮುದಾಯದ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಲಿಂಗಾಯತ, ಗೊಲ್ಲ, ಒಕ್ಕಲಿಗ ಸಮುದಾಯದ ನಾಯಕರ ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆಯನ್ನು ಕೂಡ ಪೂರ್ಣಗೊಳಿಸಿದ್ದಾರೆ. ರಾಜಕೀಯ…

Read More

ದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಪ್ರತ್ಯೇಕ ರಾಷ್ಟ್ರ ಮಾಡುವ ಬಗ್ಗೆ ಮಾತನಾಡಿರುವುದು ಅವರ ವ್ಯಕ್ತಿಗತವಾಗಿರಬಹುದು ಪಕ್ಷದ ನಿರ್ಣಯ ಅಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಈ ವಿಷಯದಲ್ಲಿ ಮಾತನಾಡುವುದು ನಂಗೆ ಇಷ್ಟ ಇಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಪಕ್ಷ ಕಾಂಗ್ರೆಸ್. ದೇಶದಲ್ಲಿ ಸರ್ಕಾರ ನಡೆಸಿದೆ. ಅನ್ಯಾಯವಾದರೆ ನ್ಯಾಯ ಬಜೆಟ್ ಚರ್ಚೆ ವೇಳೆ ಮಾತನಾಡುತ್ತೇವೆ. ಅದರಲ್ಲೇನು ಇಲ್ಲ ಎಂದು ಹೇಳಿದ್ದಾರೆ. ಕೃಷಿ ನೀರಾವರಿ ಬೇರೆ ಕಡೆ ಹೆಚ್ಚು ಅನುದಾನ ಕೊಡಬೇಕು ಅಂತಾ ನಾನು ಮಾತನಾಡಿದ್ದೇನೆ. ಬಹಳಷ್ಟು ಕಠುವಾಗಿ ಮಾತನಾಡಿದ್ದೇನೆ. ಆದರೆ ಪ್ರತ್ಯೇಕ ದೇಶದ ಬಗ್ಗೆ ಮಾತನಾಡಿಲ್ಲ. ಒಂದು ರಾಷ್ಟ್ರೀಯ ಪಕ್ಷದ ಸದಸ್ಯರಾಗಿ ಯಾವ ಆಯಾಮದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದು ಹೆಚ್.ಡಿ.ದೇವೇಗೌಡ ಹೇಳಿದರು.

Read More

ರಾಮನಗರ: ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಬಿಡದಿಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಡವರನ್ನು ಲೂಟಿ ಮಾಡಿಕೊಂಡು ಗುಡ್ಡೆ ಹಾಕಿದ್ದಾರೆ. ಅಂಥವರನ್ನು ದೇಶ ಕಟ್ಟು ಅಂತ ಕಳುಹಿಸಿದರೆ ಅವರು ದೇಶ ಕಟ್ಟುತ್ತಾರಾ? ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರೆ ಅಷ್ಟೇ. ಇಂಥವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಹೇಳಿದ್ದಾರೆ. ಸಂಸದ ಡಿ.ಕೆ.ಸುರೇಶ್ ನಿನ್ನೆ ದಿನ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ ಮಾಡುತ್ತಿದೆ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಬುದ್ಧ ಹೇಳಿಕೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ದರು. ಈಗ ವಿಭಜನೆಯ ಮಾತನಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದುವೇಳೆ ವಿಭಜನೆ ಆಯ್ತು ಅಂತ ಇಟ್ಟುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Read More

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ.ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದು, ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ಬಳಿಕ ಇಂದು ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್, ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ, 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ.

Read More

ತುಮಕೂರು : ಕೇಂದ್ರದ ವರಿಷ್ಠರು ಯಾವ ರೀತಿ ಒಪ್ಪಿಗೆ ಸೂಚಿಸುತ್ತಾರೆ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಮಾಜಿ ಸಚಿವ ವಿ ಸೋಮಣ್ಣ ಅವರು ಹಿರಿಯರಿದ್ದಾರೆ. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಹಿಂಗಿತ ವ್ಯಕ್ತಪಡಿಸಿದ್ದಾರೆ ಇದಕ್ಕೆ ಯಾರ ಅಭ್ಯಂತರವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವಿಜೆಂದ್ರ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಕ್ಷದ ಹೈಕಮಾಂಡ್ ಹಾಗೂ ಹಿರಿಯರು ಕುಳಿತು ಚರ್ಚೆ ನಡೆಸಿ ಈ ತೀರ್ಮಾನಕ್ಕೆ ಬರಲಿದ್ದಾರೆ ಎಂದು ಹೇಳಿದರು. ರಾಜ್ಯದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಆಗಬೇಕೆಂಬ ನಿರ್ಧಾರವನ್ನು ಕೇಂದ್ರದ ವರಿಷ್ಠರು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಮೈತ್ರಿಯ ಹಿನ್ನೆಲೆಯಲ್ಲಿ ಟಿಕೆಟ್ ಹಂಚಿಕೆಯ ಕುರಿತಂತೆ ಸದ್ಯದಲ್ಲಿಯೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಅನೇಕ ಮಹಿಳಾಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಗಳು ಪ್ರತಿಯೊಬ್ಬ ಮಹಿಳೆಯರು ತಲುಪಬೇಕು ಎಂಬ ಉದ್ದೇಶದಿಂದ…

Read More