Subscribe to Updates
Get the latest creative news from FooBar about art, design and business.
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Author: admin
ಹಲಾಲ್ ನಿಷೇಧ ವಿಚಾರವಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಕಳುಹಿಸಿದೆ. ರಾಜಕೀಯ ಉದ್ದೇಶದ ಮೇಲೆ ಹಲಾಲ್ ನಿಷೇಧ ಹೇರಲಾಗಿದೆ ಎಂದು ಸೂಚಿಸಿದ ಅರ್ಜಿಯನ್ನು ಪರಿಶೀಲಿಸಿ ಈ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಇಂದು ಅರ್ಜಿದಾರರಿಗೆ ಈ ವಿಷಯದಲ್ಲಿ ಮೊದಲು ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಸೂಚಿಸಿದೆ. ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸುವುದು ರಾಷ್ಟ್ರವ್ಯಾಪಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಧಾರ್ಮಿಕ ನಂಬಿಕೆಯ ವಿಷಯವಾಗಿದೆ ಎಂದು ಅರ್ಜಿದಾರರು ಸೂಚಿಸಿದರು. ಹಲಾಲ್ ನಿಷೇಧ ಆದೇಶದ ಅಡಿಯಲ್ಲಿರುವ ಪ್ರಸ್ತಾವನೆಗಳ ವಿರುದ್ಧ ನ್ಯಾಯಾಲಯದ ಆದೇಶ ಹೊರಡಿಸಬೇಕೆಂಬ ಅರ್ಜಿದಾರರ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ಈ ವಿಷಯವನ್ನು ಕೂಲಂಕಷವಾಗಿ ಪರಿಗಣಿಸಿದ ನಂತರ ಅಂತಹ ವಿಷಯಗಳನ್ನು ನಿರ್ಧರಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಎರಡು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶ ಸರ್ಕಾರವು ಕಳೆದ ವರ್ಷ ನವೆಂಬರ್ ನಲ್ಲಿ ಹಲಾಲ್ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಉತ್ಪಾದನೆ,…
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹಿಸಾರ್ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಮತ್ತು ಹರಿಯಾಣ ಉಪ ಪೊಲೀಸ್ ವರಿಷ್ಠಾಧಿಕಾರಿ ಜೋಗಿಂದರ್ ಶರ್ಮಾ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಪವನ್ ಅವರ ತಾಯಿ ಸಲ್ಲಿಸಿದ್ದ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜೋಗಿಂದರ್ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು. ಹಿಸಾರ್ ಮೂಲದ ಪವನ್ ಜನವರಿ 1 ರಂದು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮರಣೋತ್ತರ ಪರೀಕ್ಷೆಯ ನಂತರ ಪವನ್ ಕುಟುಂಬವು ಮೃತ ದೇಹವನ್ನು ಸ್ವೀಕರಿಸಲು ಸಿದ್ಧರಿರಲಿಲ್ಲ. ಆರೋಪಿಗಳನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಬಂಧಿಸಬೇಕು ಎಂದು ಆಗ್ರಹಿಸಿ ಶವ ಸ್ವೀಕರಿಸಲು ಕುಟುಂಬ ನಿರಾಕರಿಸಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಆರೋಪಿಗಳು ಮೃತ ಪವನ್ ನನ್ನು ಮನೆ ಖಾಲಿ ಮಾಡುವಂತೆ ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಜಯ್ಬೀರ್, ಈಶ್ವರ್ ಜಜಾರಿಯಾ, ಪ್ರೇಮ್ ಖತಿ, ಅರ್ಜುನ್ ಮತ್ತು ಹಾಕಿ ಕೋಚ್ ರಾಜೇಂದ್ರ ಸಿಹಾಗ್…
ಪೊಂಗಲ್ ಹಬ್ಬದಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಕಿಟ್ ಜೊತೆಗೆ 1000 ರೂಪಾಯಿಗಳನ್ನು ಜನರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ. ಜನವರಿ 15 ರಂದು ರಾಜ್ಯದಲ್ಲಿ ಪೊಂಗಲ್ ಆಚರಿಸಲಾಗುತ್ತದೆ. ಇದಕ್ಕೂ ಮುನ್ನ ಪಡಿತರ ಅಂಗಡಿಗಳ ಮೂಲಕ ಕಿಟ್ ವಿತರಿಸಲಾಗುತ್ತಿತ್ತು. ಆದಾಯ ತೆರಿಗೆ ಪಾವತಿದಾರರು ಮತ್ತು ಪಿಎಸ್ ಯುಗಳಲ್ಲಿ ಕೆಲಸ ಮಾಡುವ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರನ್ನು ಹೊರತುಪಡಿಸಿ ಎಲ್ಲಾ ಪಡಿತರ ಚೀಟಿದಾರರಿಗೆ ಕಿಟ್‌ನೊಂದಿಗೆ ರೂ.1000 ಉಡುಗೊರೆಯಾಗಿ ನೀಡಲಾಗುವುದು. ಸರ್ಕಾರದ ಪೊಂಗಲ್ ಕಿಟ್ ನಲ್ಲಿ ಅಕ್ಕಿ ಮತ್ತು ಸಕ್ಕರೆ ಇದೆ. ಕಿಟ್ ಮತ್ತು ಆರ್ಥಿಕ ಸಹಾಯದ ಹೊರತಾಗಿ, ಸೀರೆ ಮತ್ತು ಮುಂಡಗಳನ್ನು ನೀಡಲಾಗುವುದು. ಕಿಟ್ ಪಡಿತರ ಅಂಗಡಿಗಳ ಮೂಲಕ ವಿತರಿಸಿದಾಗ, ಹಣಕಾಸಿನ ನೆರವು ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗಳಿಗೆ ಹೋಗುತ್ತದೆ. 1.15 ಕೋಟಿ ಕುಟುಂಬಗಳಿಗೆ ಆರ್ಥಿಕ ನೆರವು ದೊರೆಯಲಿದೆ. ಜನವರಿ 10 ರೊಳಗೆ ಮೊತ್ತವನ್ನು ಪಾವತಿಸಲಾಗುವುದು ಎಂದು ಸರ್ಕಾರ ಖಚಿತಪಡಿಸುತ್ತದೆ. ಮುಖ್ಯಮಂತ್ರಿ ಸ್ಟಾಲಿನ್ ಮಾತನಾಡಿ, ಡಿಎಂಕೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ತುಮಕೂರು: ವಯೋಸಹಜವಾಗಿ ಮೃತಪಟ್ಟ ದಲಿತ ವ್ಯಕ್ತಿಯ ಶವವನ್ನು ಉಪದ್ರವ ನಿವಾರಣಾ ಆದೇಶ ಹೊರಡಿಸಿ ಹೊರತೆಗೆದು ಮತ್ತೊಂದು ಸ್ಥಳದಲ್ಲಿ ಶವಸಂಸ್ಕಾರ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿಯ ದುರ್ಗದಹಳ್ಳಿಯಲ್ಲಿ ನಡೆದಿದೆ. ವೃದ್ಧ ಪೆದ್ದಯ್ಯ ವಯೋಸಹಜವಾಗಿ ಕಳೆದ ತಿಂಗಳು ಡಿಸೆಂಬರ್ನಲ್ಲಿ ಮೃತಪಟ್ಟಿದ್ದರು. ಮೃತರ ಶವ ಸಂಸ್ಕಾರ ಮಾಡಲು ಗ್ರಾಮದಲ್ಲಿ ಸ್ಮಶಾನ ಇಲ್ಲದ ಕಾರಣ ಮೃತ ಪೆದ್ದಯ್ಯನ ಮಗ ತಿಮ್ಮರಾಜು ‘ನಮ್ಮ ತಂದೆ ಮೃತಪಟ್ಟಿದ್ದಾರೆ. ಊಳಲು ಸ್ಮಶಾನ ಇಲ್ಲ. ನಮ್ಮ ತಂದೆಯ ಶವಸಂಸ್ಕಾರವನ್ನು ಎಲ್ಲಿ ಮಾಡಬೇಕು ಎಂದು ತಹಸೀಲ್ದಾರ್ ಹಾಗೂ ಪಿಡಿಒ ಅವರಿಗೆ ಕೇಳಿದ್ದಾರೆ. ಆದರೆ ಅವರಿಂದ ಸಮರ್ಪಕ ಉತ್ತರ ಬಾರದ ಹಿನ್ನೆಲೆಯಲ್ಲಿ ದುರ್ಗದ ಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಬದಿಯಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಸ್ಮಶಾನಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿರುವ ದುರ್ಗದ ಹಳ್ಳಿಯ ತಿಮ್ಮರಾಜು, ನಾವು ದಲಿತ ಕುಟುಂಬಕ್ಕೆ ವರ್ಗಕ್ಕೆ ಸೇರಿದವರಾಗಿದ್ದು ಭೂಮಿ ಇಲ್ಲದ ಕಾರಣ ಅಧಿಕಾರಿಗಳ ಹೇಳಿಕೆಯಂತೆ ರಸ್ತೆ ಬದಿಯಲ್ಲಿ ಅಂತ್ಯ ಸಂಸ್ಕಾರ ಮಾಡಿರುವುದಾಗಿ…
ಕೊಪ್ಪಳ: ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿ ಹಣವನ್ನು ಗಂಗಾವತಿ ತಾಲೂಕು ಆಡಳಿತದ ವತಿಯಿಂದ ಎಣಿಕೆ ಮಾಡಲಾಯಿತು. ಒಟ್ಟು 22 ದಿನಗಳ ಅವಧಿಗೆ ಅಂದರೆ 2023ರ ಡಿಸೆಂಬರ್ 14 ರಿಂದ 2024ರ ಜನವರಿ 5 ರವರೆಗೆ ಹುಂಡಿಯಲ್ಲಿ ಒಟ್ಟು 27,27,761 ರೂಪಾಯಿಗಳು ಸಂಗ್ರಹವಾಗಿವೆ. ತಹಶೀಲ್ದಾರ್ ವಿಶ್ವನಾಥ್ ಮುರಡಿ ಅವರ ನೇತೃತ್ವದಲ್ಲಿ, ಸಿಸಿ ಕ್ಯಾಮೇರಾ, ಪೊಲೀಸ್ ಬಂದೋಬಸ್ತ್ ನಲ್ಲಿ ಹುಂಡಿ ಹಣವನ್ನು ಎಣಿಕೆ ಮಾಡಲಾಗಿದ್ದು, ನೇಪಾಳ ದೇಶದ ಎರಡು ವಿದೇಶಿ ನೋಟುಗಳು, 3 ವಿದೇಶಿ ನಾಣ್ಯಗಳು ದೊರೆತಿವೆ. ಗ್ರೇಡ್ 2 ತಹಶೀಲ್ದಾರ್ ಮಹಾಂತ್ ಗೌಡ ಪಾಟೀಲ್, ಶಿರಸ್ತೇದಾರ ಮೈಬೂಬ ಅಲಿ, ಕೃಷ್ಣವೇಣಿ, ನರ್ಮದಾ ಬಾಯಿ, ಕಂದಾಯ ನಿರೀಕ್ಷರಾದ ಮಂಜುನಾಥ್ ಹಿರೇವ್ಮಠ, ಮಹೇಶ್ ದಲಾಲ್ ಹಾಗೂ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಇದ್ದರು.
ಬೆಂಗಳೂರು: ರಾಜ್ಯದ ಜನರಿಗೆ ಈಗಾಗಲೇ ವಿದ್ಯುತ್ ಬೆಲೆಯೇರಿಕೆಯಿಂದ ಪರಿತಪಿಸುತ್ತಿರುವ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಮ್ಮೆ ವಿದ್ಯುತ್ ಬೆಲೆಯೇರಿಕೆಯ ಬಿಸಿ ತಾಗುವ ಸಾಧ್ಯತೆ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸೇರಿ ರಾಜ್ಯದ ಎಲ್ಲ ಎಸ್ಕಾಂಗಳು ವಿದ್ಯುತ್ ಬೆಲೆಯೇರಿಕೆ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿಯೇ ಒಂದು ಯೂನಿಟ್ ಗೆ 50-60 ಪೈಸೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೆಸ್ಕಾಂ ಜತೆಗೆ ರಾಜ್ಯದಲ್ಲಿರುವ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ), ಕಲಬುರಗಿ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್-ಮೈಸೂರು) ಕೂಡ ವಿದ್ಯುತ್ ಬೆಲೆಯೇರಿಕೆ ಕುರಿತಂತೆ ಕೆಇಆರ್ ಸಿಗೆ ಪ್ರಸ್ತಾವನೆ ಸಲ್ಲಿಸಿವೆ.
ಬೆಳಗಾವಿ: ಅಂಗನವಾಡಿ ಸಹಾಯಕಿಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಕತಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕಲ್ಲಪ್ಪ ಅಲಿಯಾಸ್ ಕಲ್ಯಾಣಿ ಮೋರೆ(44) ಬಂಧಿತ ಆರೋಪಿ. ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಜ.1ರಂದು ಮಕ್ಕಳು ಆರೋಪಿ ಮನೆ ಮುಂದಿರುವ ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಸುಗಂಧಾ ಎಂಬುವವರ ಮೇಲೆ ಹಲ್ಲೆ ಮಾಡಿ ಅವಾಚ್ಯವಾಗಿ ಬೈದು, ಮೂಗು ಕಟ್ ಮಾಡಿದ್ದ. ಸದ್ಯ ಗಾಯಗೊಂಡಿದ್ದ ಸುಗಂಧಾ ಮೋರೆ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ನಾಯಿ ಸುರಕ್ಷಿತವಾಗಿ ಈಜಿ ದಡ ಸೇರಿತು ಆದರೆ ಅದನ್ನು ರಕ್ಷಿಸಲು ಹೋಗಿದ್ದ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಯುವಕ ಸರಳ್ ನಿಗಮ್ ಎನ್ಐಟಿ ಭೋಪಾಲ್ ನಲ್ಲಿ ಬಿ.ಟೆಕ್ ಪಧವೀಧರನಾಗಿದ್ದಾನೆ. ಸರಳ್ ಇಬ್ಬರು ಸ್ನೇಹಿತರ ಜತೆ ಬೆಳಗ್ಗೆ 7.30ರ ಸುಮಾರಿಗೆ ಕೆರ್ವಾ ಅಣೆಕಟ್ಟು ಪ್ರದೇಶದ ಜಂಗಲ್ ಕ್ಯಾಂಪ್ ಗೆ ಹೋಗಿದ್ದರು. ಆ ಮೂವರ ಜತೆಗೆ ನಾಯಿಯೂ ಕೂಡ ಬಂದಿತ್ತು. ಸುಮಾರು ಒಂದು ಗಂಟೆಯ ನಂತರ ಬೆಳಗ್ಗೆ 8:30 ರ ಸುಮಾರಿಗೆ, ಮೂವರು ಜಲಮೂಲದ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ನಾಯಿಯು ಆಕಸ್ಮಿಕವಾಗಿ ನೀರಿಗೆ ಬಿದ್ದಿತು. ನಾಯಿಯನ್ನು ರಕ್ಷಿಸಲು ಗೆಳೆಯರ ಗುಂಪು ಪರಸ್ಪರ ಕೈ ಹಿಡಿದು ನೀರಿಗೆ ಹಾರಿದ್ದಾರೆ. ಹುಡುಗಿಯರು ನೀರಿನಿಂದ ಹೊರಬರುವಲ್ಲಿ ಯಶಸ್ವಿಯಾದರು ಆದರೆ ಬಲವಾದ ಪ್ರವಾಹದಿಂದ ಸರಳ್ ಆಳವಾದ ನೀರಿನಲ್ಲಿ ಮುಳುಗಿದ್ದಾನೆ. ನಂತರ ಯುವತಿಯರು ಓಡಿ ಹೋಗಿ ಸಹಾಯಕ್ಕಾಗಿ ಕೂಗಿದ್ದಾರೆ,ಕಿರುಚಾಟವನ್ನು ಕೇಳಿದ ಜಂಗಲ್ ಕ್ಯಾಂಪ್ ನ…
ಹುಬ್ಬಳ್ಳಿ: ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ನಡೆದಿದೆ. ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಧಾರವಾಡ ಎಸ್ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ. ಹಾಸನ ಮೂಲದ ಮೂವರು ಹಾಗೂ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಮಣಿಕಂಠ (26), ಪವನ (23), ಚಂದನ (31) ಎಂದು ಗುರುತಿಸಲಾಗಿದೆ. ಈ ಮೂವರು ಪರಸ್ಪರ ಗೆಳೆಯರಾಗಿದ್ದು, ಹಾಸನದಿಂದ ಗೋವಾಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮೃತಪಟ್ಟ ಮತ್ತೋರ್ವನನ್ನು ಹರೀಶ್(34) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನಿಂದ ಶಿರಡಿಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.
ಪಾವಗಡ: ಪಟ್ಟಣದ ಪ್ರಮುಖ ಬೀದಿಗಳ ಅಂಗಡಿಯ ವಾಣಿಜ್ಯ ವ್ಯಾಪಾರ ಮಳಿಗೆಗಳಿಗೆ ಭೇಟಿ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಅನ್ಯ ಭಾಷೆಯಲ್ಲಿ ಅಳವಡಿಸಿರುವ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕುವಂತೆ ಒತ್ತಾಯಿಸಿತು. ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಉಪಾಧ್ಯಕ್ಷರಾದ ಸಂಗಮ್ ನರಸೀ ಪಾಟೀಲ್, ಪದಾಧಿಕಾರಿಗಳಾದ ಪಾಳೇಗಾರ್ ಲೋಕೇಶ್, ಬೇಕರಿ ನಾಗರಾಜ್, ಮಲ್ಲಿ, ರಂಗಪ್ಪ, ಮಣಿ, ರಾಜು ಪ್ರಶಾಂತ್, ಮಂಜು, ಆಲ್ಕುಂದ್ ರಾಜ್, ಕುಮಾರ್, ಲಚ್ಚಿ, ಗೋಪಾಲ್, ಶ್ರೀನಿವಾಸ್, ನಾಗೇಂದ್ರ ಮುಂತಾದವರು ಭಾಗವಹಿಸಿದ್ದರು. ವರದಿ : ನಂದೀಶ್ ನಾಯ್ಕ ಪಿ. , ಪಾವಗಡ