Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ಹಾಸನ: ರಸ್ತೆಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಆಲೂರಿನ ಕೂಡಿಗೆಯಲ್ಲಿ ನಡೆದಿದೆ. ಪ್ರದೀಪ್ (30), ಗುರು (25) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ಹೋಟೆಲ್ ಒಂದರ ಪೂಜೆಗೆ ಹೊರಟಿದ್ದ ವೇಳೆ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ಟೈರ್ ಪಂಕ್ಚರ್ ಆಗಿ ರಸ್ತೆ ಮಧ್ಯೆಯೇ ಟಿಂಬರ್ ತುಂಬಿದ್ದ ಲಾರಿ ನಿಂತಿತ್ತು. ಮುಂಜಾನೆ ಮಂಜು ಆವರಿಸಿದ್ದ ಕಾರಣ ಕಾರಿನ ಚಾಲಕನಿಗೆ ಲಾರಿ ನಿಂತಿರುವುದು ಗಮನಕ್ಕೆ ಬಂದಿಲ್ಲ. ಇದರಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲಿ ಉರುಳಿ ಬಿದ್ದಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಶ್ವ (34), ಸುಷ್ಮ (28) ಆತ್ಮಹತ್ಯೆಗೆ ಶರಣಾದ ದಂಪತಿಯಾಗಿದ್ದಾರೆ. ದಂಪತಿ ತಮಗೆ ಪರಿಚಯಸ್ಥನಾಗಿದ್ದ ಶಿವು ಎಂಬಾತನಿಗೆ ಬೇರೊಬ್ಬರಿಂದ 5 ಲಕ್ಷ ರೂ. ಸಾಲ ಕೊಡಿಸಿದ್ದರು. ಈ ಸಾಲವನ್ನು ಶಿವು ತೀರಿಸಿರಲಿಲ್ಲ. ಸಾಲಕೊಟ್ಟವರು ಹಣ ಕೊಡುವಂತೆ ವಿಶ್ವನನ್ನು ಕೇಳುತ್ತಿದ್ದರು ಎಂದು ತಿಳಿದು ಬಂದಿದೆ. ಇದರಿಂದ ನೊಂದ ದಂಪತಿ ಸಾಲ ನೀಡಿದ್ದ ರಾಜಣ್ಣನ ವಿರುದ್ಧ ಕಿರುಕುಳ ಆರೋಪ ಮಾಡಿ, ವಿಡಿಯೋ ಮಾಡಿ ಸಾಮಾಜಿಕ ಜಲತಾಣದಲ್ಲಿ ವಿಡಿಯೋ ಅಪ್ ಲೋಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಧ್ಯಪ್ರದೇಶ: ಪೋಷಕರ ಹಣೆಗೆ ಗನ್ ಇಟ್ಟು, ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಭನ್ವಾರ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ರಿಷಿಕೇಶ್ ಮೀನಾ ತಿಳಿಸಿದ್ದಾರೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಬಾಲಕಿಯ ಕುಟುಂಬವು ಒಂದು ತಿಂಗಳ ಹಿಂದೆಯಷ್ಟೇ ಆ ಪ್ರದೇಶಕ್ಕೆ ತೆರಳಿತ್ತು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಲಬುರಗಿ: ಚಾಲಕನ ನಿರ್ಲಕ್ಷ್ಯದಿಂದ ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಶಾಲಾ ವಾಹನ ಹರಿದು ಮಗು ಸಾವನ್ನಪ್ಪಿರುವಂತಹ ಘಟನೆ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಮನೋಜ್(2) ಮೃತ ಮಗು. ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿದ ವಾಹನ ಹರಿದು ಮಗು ಮೃತಪಟ್ಟಿದೆ. ವಿದ್ಯಾರ್ಥಿಗಳನ್ನು ಶಾಲೆಯಿಂದ ಮನೆಗೆ ಬಿಟ್ಟು ವಾಹನ ತೆರಳುತ್ತಿರುವಾಗ ಈ ಘಟನೆ ನಡೆದಿದೆ.
ಆನೇಕಲ್: ಬಿಬಿಎ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ಬೆಂಗಳೂರಿನ ಹೊಸ ರೋಡ್ ಬಳಿಯ ಪಿಇಎಸ್ ಕಾಲೇಜಿನಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ವಿಘ್ನೇಶ್.ಕೆ(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ದುರ್ದೈವಿ ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿಯಾಗಿದ್ದು, ಬಿಬಿಎ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಎಚ್.ಡಿ.ಕೋಟೆ: ಪತ್ನಿಯ ಶೀಲ ಶಂಕಿಸಿದ ಪತಿಯೋರ್ವ 12 ವರ್ಷಗಳಿಂದ ಮನೆ ಬಾಗಿಲಿಗೆ ಮೂರು ಬೀಗ ಜಡಿದು ಪತ್ನಿಯನ್ನು ದಿಗ್ಬಂಧನಲ್ಲಿರಿಸಿದ ಅಮಾನವೀಯ ಕೃತ್ಯ ಎಚ್.ಡಿ.ಕೋಟೆ ತಾಲೂಕಿನ ಎಚ್.ಮಟಕೆರೆಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದ ಸುಮಾ ಮನೆಯಲ್ಲಿ ದಿಗ್ಬಂಧನದ ಜೀವನ ನಡೆಸುತ್ತಿರುವ ಮಹಿಳೆಯಾಗಿದ್ದಾರೆ. ಇವರ ಪತಿ ಸಣ್ಣಾಲಯ್ಯನ ವಿಪರೀತ ಅನುಮಾನದ ಪ್ರವೃತ್ತಿಯಿಂದಾಗಿ 12 ವರ್ಷಗಳ ಕಾಲ ಪತ್ನಿ ಅಜ್ಞಾತ ವಾಸ ಅನುಭವಿಸಿದ್ದಾಳೆ. 12 ವರ್ಷದ ಹಿಂದೆ ಸಣ್ಣಾಲಯ್ಯನನ್ನು ವಿವಾಹವಾಗಿದ್ದ 3ನೇ ಪತ್ನಿ ಸುಮಾಗೆ ಇಬ್ಬರು ಮಕ್ಕಳಿದ್ದಾರೆ. ಸಣ್ಣಾಲಯ್ಯ ಸುಮಾ ಅವರನ್ನು ವಿವಾಹವಾಗುವುದಕ್ಕೂ ಮೊದಲು ಎರಡು ವಿವಾಹವಾಗಿದ್ದ. ಈತನ ಕಾಟ ಸಹಿಸಲಾಗದೇ ಅವರು ದೂರವಾಗಿದ್ದರು. ವಿವಾಹವಾದಂದಿನಿಂದ ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಸಣ್ಣಾಲಯ್ಯ ಮನೆಯ ಬಾಗಿಲಿಗೆ ಮೂರು ಬೀಗ ಜಡಿದು ಆಕೆಯನ್ನು ದಿಗ್ಬಂಧನದಲ್ಲಿ ಜೀವನ ಕಳೆಯುವಂತೆ ಮಾಡಿದ್ದ. ಮನೆಯ ಕಿಟಕಿಗಳನ್ನೂ ಬಿಡದೇ ಮುಚ್ಚಿ, ಭದ್ರಪಡಿಸಿ ಪತ್ನಿ ಯಾರೊಂದಿಗೂ ಮಾತನಾಡದಂತೆ ಎಚ್ಚರವಹಿಸಿದ್ದ. ಮನೆಯೊಳಗೆ ಶೌಚಾಲಯ ಕೂಡ ಇಲ್ಲದೇ ಪತ್ನಿ ಇಡೀ ದಿನ ಮನೆಯೊಳಗೆ ಕೂರಬೇಕಿತ್ತು. ಬಕೆಟ್…
ಇಂದು ಕೇಂದ್ರವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದು ಇದಕ್ಕೂ ಮುನ್ನವೇ ಬೆಲೆ ಏರಿಕೆ ಬಿಸಿ ತಟ್ಟಿದೆ. ಹೌದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 14 ರೂ. ಹೆಚ್ಚಳವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1769 ರೂ, ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ಬೆಲ 1887 ರೂ. ಮುಂಬೈನಲ್ಲಿ 1723 ರೂ. ಚೆನ್ನೈನಲ್ಲಿ 1937 ರೂ. ಆಗಿದೆ.
ನಮ್ಮ ಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಶಸ್ತಿಗಳ ಆಯ್ಕೆ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿ ಬಿಡುತ್ತೇನೆ. ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ ಎಂದರು. ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರ ರವೀಂದ್ರ ಕಲಾಕ್ಷೇತ್ರಕ್ಕೆ ಆಧುನಿಕ ಸ್ಪರ್ಶ ಒದಗಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕ್ರಮಕ್ಕೆ ಸಾಂಸ್ಕೃತಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ವಜ್ರ ಮಹೋತ್ಸವದ ಸಂಭ್ರಮದಲ್ಲಿರುವ ರವೀಂದ್ರ ಕಲಾಕ್ಷೇತ್ರಕ್ಕೆ ಕೇಂದ್ರೀಕೃತ ಹವಾನಿಯಂತ್ರಣ ವ್ಯವಸ್ಥೆ ಸೇರಿ ವಿವಿಧ ಅತ್ಯಾಧುನಿಕ ಸೌಲಭ್ಯಗಳ ಅಳವಡಿಕೆಗೆ ಇಲಾಖೆ ಮುಂದಾಗಿದ್ದು, ಈ ನವೀಕರಣಕ್ಕೆ ₹24 ಕೋಟಿ ವೆಚ್ಚವಾಗಲಿದೆಯೆಂದು ಲೋಕೋಪಯೋಗಿ ಇಲಾಖೆ ಅಂದಾಜಿಸಿದೆ.
ಜೀರಿಗೆ ಮೆಣಸು ಹೆಚ್ಚು ಆರೈಕೆ ಇಲ್ಲದೇ ಅಧಿಕ ಖಾರ ಹೊಂದಿರುವ ಚಿಕ್ಕ ಚಿಕ್ಕ ಮೆಣಸು. ಇದಕ್ಕೆ ಇದೀಗ ಬಾರಿ ಬೇಡಿಕೆ ಬಂದಿದ್ದು, ಇದನ್ನು ನಾನಾ ಹೆಸರುಗಳಿಂದ ಜೀರಿಗೆ ಮೆಣಸು, ಸೂಜಿ ಮೆಣಸು, ಕಾಗೆ ಗಾಂಧಾರಿ, ಕಾಗೆ ಮೆಣಸು, ಪರ್ ಡೇ ಚಿಲ್ಲಿ ಎಂದೆಲ್ಲ ಕರೆಯುತ್ತಾರೆ. ಅಡಿಕೆ ತೋಟದಲ್ಲಿ ಮನೆ ಹತ್ತಿರ ಇದನ್ನು ಕಾಣಬಹುದು, ಮಾತ್ರವಲ್ಲ ಅತೀ ಸುಲಭವಾಗಿ ಬೆಳೆಯುವ ಬೆಳೆಯೂ ಕೂಡ. ಆದರೆ ವಿಪರ್ಯಾಸವೆಂದ್ರೆ ಕಳೆನಾಶಕ ಯಂತ್ರಗಳ ಮುಖಾಂತರ ಕಳೆ ತೆಗೆಯುವಾಗ ಇದೀಗ ಈ ಗಿಡಗಳು ನಾಶವಾಗುತ್ತಿದ್ದು, ತೀರಾ ಅಪರೂಪವಾಗಿ ಬಿಟ್ಟಿದೆ. ಮನೆ ಹಿತ್ತಲಲ್ಲಿ ಬೆಳೆಯುವ ಈ ಮೆಣಸು ಗರಿಷ್ಠ ಔಷಧೀಯ ಗುಣ ಹೊಂದಿದೆ. ಗಾಂಧಾರಿ ಮೆಣಸಿನ ಜ್ಯೂಸ್ ಆರೋಗ್ಯಕ್ಕೂ ಉತ್ತಮ. ಇದರ ಜೊತೆಗೆ ಹೊಟ್ಟೆ ಉಬ್ಬರಿಸುವುದು, ಅಜೀರ್ಣ, ಸಂಧಿವಾತ ನಿವಾರಿಸುವ ಗಾಂಧಾರಿಯು ಕೊಲೆಸ್ಟ್ರಾಲ್, ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗಾಂಧಾರಿ ಮೆಣಸಿನ ರಸವು ಕ್ಷಾರಯುಕ್ತವಾಗಿದೆ. ಇದು ಜಠರ ಮತ್ತು ಕರುಳುಗಳ ಕಾರ್ಯವನ್ನು ವೃದ್ದಿಸುತ್ತದೆ. ಜೊತೆಗೆ ಆಗಾಗ ಕಂಡು ಬರುವಂತಹ…
ಟೋಲ್ ಕಟ್ಟಲು ನಗದು ಪಾವತಿ ಬದಲು ಕೇಂದ್ರ ಸರ್ಕಾರ ಡಿಜಿಟಲ್ ವ್ಯವಸ್ಥೆಯಾದ ಫಾಸ್ಟಾಗ್ ಜಾರಿ ಮಾಡಿದೆ. ಇದೀಗ ಎಲ್ಲೆಡೆ ಫಾಸ್ಟಾಗ್ ಮೂಲಕವೇ ಟೋಲ್ ಹಣ ಸಂಗ್ರಹ ಮಾಡಲಾಗುತ್ತಿದೆ. ಇತ್ತೀಚಿಗೆ ಒಂದೇ ವಾಹನದ ಫಾಸ್ಟಾಗ್ ನ್ನು ಬದಲಿ ವಾಹನಗಳಿಗೆ ಬಳಸುತ್ತಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಸರ್ಕಾರ ಹೊಸ ನೀತಿಯಡಿ ಕೆವೈಸಿ ಕಡ್ಡಾಯ ಮಾಡಿತ್ತು. ಇಂದಿನಿಂದ ಅಂದರೆ ಫೆಬ್ರವರಿ 1 ರಿಂದ ಕೆವೈಸಿ ಆಗದ ಫಾಸ್ಟಾಗ್ ನಿಷ್ಕ್ರಿಯಗೊಳ್ಳಲಿದೆ. KYC ಪೂರ್ಣಗೊಂಡಾಗ ಮಾತ್ರ ಫಾಸ್ಟಾಗ್ ಮೂಲಕ ಟೋಲ್ ಪಾವತಿ ಮಾಡಲು ಸಾಧ್ಯವಾಗುತ್ತದೆ. KYC ಮಾಡಿಸಲು ನಿನ್ನೆ ಕೊನೆಯ ದಿನವಾಗಿತ್ತು.