Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ಬೆಂಗಳೂರು: ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ ಬಳಿಕ ಏಳು ಜನ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ 219 ಎಕ್ಸೈಸಿ ಪಿಲ್ಸ್, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್ 130 ಗ್ರಾಂ ತೂಕದ ಚರಸ್, 100.88 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಪುಲಕೇಶಿನಗರ, ಬಾಣಸವಾಡಿ, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಬೆಂಗಳೂರು: ದುಬೈಯಿಂದ ಬೆಂಗಳೂರಿಗೆ ಇ-ಸಿಗರೇಟ್ ಗಳನ್ನು ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಕೇಂದ್ರ ಸರ್ಕಾರ ನಿಷೇಧಿಸಿರುವ, ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ಶೋಹೇಬ್ ಬಂಧಿತ ಆರೋಪಿಯಾಗಿದ್ದಾರೆ. ಈತ ಬೆಂಗಳೂರಿನ ಹಲವಾರು ಸ್ಮೋಕಿ ಜೋಜ್ ಹಾಗೂ ರೀಟೆಲ್ ಮಾರಾಟ ಮಾಡುವವರಿಗೆ ಅನ್ಲೈನ್ ಮೂಲಕ ಆರ್ಡರ್ ಮಾಡಿಸಿಕೊಂಡು ಪೋರ್ಟರ್ ಮತ್ತು ಡ್ನಜೋ ಮೂಲಕ ಪೂರೈಕೆ ಮಾಡುತ್ತಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ. ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಇರಿಸಲಾಗಿತ್ತು ಹಾಗೂ ಇ-ಸಿಗರೇಟ್ ಒಂದು ಸಿಗರೇಟ್ ಗೆ ಐದರಿಂದ ಆರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಸಿಬಿ ಪೊಲೀಸರು ಅರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ತುಮಕೂರು: ಕರೀಕೆರೆ ಗ್ರಾಮದಲ್ಲಿ ರೈತರೊಬ್ಬರ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ ಎಂದು ಹೇಳಲಾಗಿದೆ. ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಜಾನುವಾರುಗಳು ಸಜೀವ ದಹನಗೊಂಡಿದ್ದು, ರೈತ ನಂದೀಶಯ್ಯ ಎನ್ನುವವರಿಗೆ ಸೇರಿದ ಹಳ್ಳಿಕಾರ್ ತಳಿಯ ಜೋಡಿ ಎತ್ತು, ಒಂದು ಸೀಮೆ ಹಸು ಮತ್ತು ಕರು ಸಜೀವ ದಹನಗೊಂಡಿವೆ ಎನ್ನಲಾಗಿದೆ. ಶೆಡ್ ಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ, ಶೆಡ್ ನಲ್ಲಿ ಇದ್ದ 10 ಸಾವಿರ ಕೊಬ್ಬರಿ ಸಂಪೂರ್ಣ ಭಸ್ಮವಾಗಿದೆ. ರೈತ ನಂದೀಶಯ್ಯಗೆ ಸುಮಾರು 8 ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ನೊಣವಿನಕೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳದಲ್ಲಿ ಸಂಪೂರ್ಣ ಸುಟ್ಟು ಹೋದ ಶೆಡ್, ಅದರಲ್ಲಿ ಸುಟ್ಟು ಕರಕಲಾದ ಪ್ರಾಣಿಗಳ ದೇಹಗಳು ಯಾರದೂ ಮನ ಕಲಕುವಂತಿದೆ.
ಚಿತ್ರದುರ್ಗ: ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಕತ್ತು ಕೊಯ್ದು ಪ್ರಿಯತಮೆ ಹತ್ಯೆಗೆ ಪ್ರಿಯಕರ ಯತ್ನಿಸಿದ ಘಟನೆ ನಡೆದಿದೆ. ಸಮೀನಾ(25) ಅವರ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸಮೀನಾಳನ್ನ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ದಾದಾಪೀರ್ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಸುಲ್ತಾನಪುರದಲ್ಲಿ ವಾಸವಾಗಿದ್ದ ದಾದಾಪೀರ್-ಸಮೀನಾ ಇಬ್ಬರ ನಡುವೆ ಕಳೆದ ಒಂದು ತಿಂಗಳಿಂದ ಆಗಾಗ ಗಲಾಟೆ ನಡೆಯುತ್ತಿತ್ತು. ನಿನ್ನೆ ರಾತ್ರಿ ಕೂಡ ಗಲಾಟೆ ನಡೆದಿದ್ದು ಸಮೀನಾಳ ಕತ್ತು ಕೊಯ್ದು ಹತ್ಯೆಗೆ ದಾದಾಪೀರ್ ಯತ್ನಿಸಿದ್ದಾನೆ. ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಸ್ಥಳೀಯರು ಸಮೀನಾಳನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸಮೀನಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವರದಿ: ಶಿವಕುಮಾರ್ ಮೇಷ್ಟ್ರುಮನೆ ತುಮಕೂರು: ಮೂರು ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗ್ರಂಥಾಲಯದ ಮೇಲ್ವಿಚಾರಕನಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತುಮಕೂರು ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ(ಪೋಕ್ಸೋ) ನ್ಯಾಯಾಲಯವು ತೀರ್ಪು ನೀಡಿದೆ. ಬಾಲಕಿಯು ಅಂಗನವಾಡಿ ಕೇಂದ್ರದಲ್ಲಿ ಓದುತ್ತಿದ್ದಳು. ದಿನಾಂಕ 29—07—2022ರಂದು ಅಂಗನವಾಡಿಗೆ ಕರೆದೊಯ್ಯಲು ಬಾಲಕಿಯ ತಾಯಿ ಮುಂದಾದಾಗ ನಾನು ಅಂಗನವಾಡಿಗೆ ಹೋಗುವುದಿಲ್ಲ ಎಂದು ಬಾಲಕಿ ಹಠ ಮಾಡಿದ್ದಾಳೆ. ಸಂಜೆ ಮನೆಗೆ ಹೋದಾಗ ಮೂತ್ರ ಮಾಡುವ ಜಾಗ ನೋವೆಂದು ಬಾಲಕಿ ತಾಯಿಗೆ ಹೇಳಿಕೊಂಡಿದ್ದಾಳೆ. ತಾಯಿ ಇದರ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ 28—07—2022ರಂದು ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ಅಂಗನವಾಡಿಯ ಮುಂಭಾಗದಲ್ಲಿರುವ ಗ್ರಂಥಾಲಯದ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿರುವ ಸೋಮಶೇಖರ್ ಅಲಿಯಾಸ್ ಶೇಖರಣ್ಣ(45) ಎಂಬಾತ ಅಂಗನವಾಡಿ ಕೇಂದ್ರದ ಪಕ್ಕದಲ್ಲಿರುವ ಹೊಲ(ತೋಟ)ಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿರುವ ವಿಚಾರವನ್ನು ತಿಳಿಸಿದ್ದಾಳೆ. ಈ ಪ್ರಕರಣ ಬಗ್ಗೆ ಘನ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳಾದ ನವೀನ್ ಕುಮಾರ್ ಅವರು ದೋಷಾರೋಪಣಾಪಟ್ಟಿ ಸಲ್ಲಿಸಿದರು.…
ಜೈಪುರ: ಜೆಇಇ ಪರೀಕ್ಷಾರ್ಥಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನಿಹಾರಿಕ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಜನವರಿ 31 ರಂದು ಜೆಇಇ ಮುಖ್ಯಪರೀಕ್ಷೆ ಇದ್ದರಿಂದ ನಿಹಾರಿಕಾ ತಯಾರಿ ನಡೆಸುತ್ತಿದ್ದಳು. ಆದರೆ ಆಕೆ ಪರೀಕ್ಷೆಗೆ ಇನ್ನೆರಡು ದಿನಗಳಿರುವಾಗಲೇ ತನ್ನ ಮನೆಯ ಕೊಠಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್: ಮಮ್ಮಿ-ಪಪ್ಪಾ ನಾನು ಜೆಇಇ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಸೋತಿದ್ದೇನೆ, ಇದಕ್ಕೆ ನಾನೇ ಕಾರಣ. ನಾನು ಕೆಟ್ಟ ಮಗಳು. ನನ್ನನ್ನು ಕ್ಷಮಿಸಿ, ಮಮ್ಮಿ-ಪಪ್ಪಾ ಇದು ನನ್ನ ಕೊನೆಯ ಆಯ್ಕೆಯಾಗಿದೆ ಎಂದು ಬರೆದಿಟ್ಟಿದ್ದಾಳೆ.
ನವದೆಹಲಿ: ಭಾರತೀಯ ನೌಕಾಪಡೆಯ ಗಸ್ತು ನೌಕೆ ಐಎನ್ ಎಸ್ ಸುಮಿತ್ರಾ, ಸೋಮಾಲಿಯಾದ ಪೂರ್ವ ಕರಾವಳಿ ಮತ್ತು ಏಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಇರಾನ್ ಮೀನುಗಾರಿಕೆ ಹಡಗು ಇಮಾನ್ನ ಅಪಹರಿಸಲಾಗಿತ್ತು. ನಂತರ ಕಡಲ್ಗಳ್ಳರು ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಮಾಡಿಕೊಂಡಿದ್ದರು. ಈ ಪೈಕಿ ಹಡಗಿನಲ್ಲಿ 17 ಮಂದಿ ಭಾರತೀಯ ಮೀನುಗಾರಿದ್ದರು ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಐಎನ್ ಎಸ್ ಸುಮಿತ್ರಾ ಇರಾನ್ ಹಡಗನ್ನು ಅಪಹರಣ ಮಾಡಿದ್ದ ಸೊಮಾಲಿ ಕಡಲ್ಗಳ್ಳರಿಗೆ ಎಚ್ಚರಿಕೆ ಸಂದೇಶ ಕಳುಹಿಸಿತ್ತು. ಕೂಡಲೇ ಹಗಡನ್ನು ಬಿಟ್ಟು ಹೋಗುವಂತೆ ಸೂಚಿಸಿತ್ತು. ನಂತರ ಕಡಲ್ಗಳ್ಳರು ಹಗಡನ್ನು ಬಿಟ್ಟು ದೋಣಿಯಲ್ಲಿ ಪರಾರಿಯಾದರು. ಅರಬ್ಬೀ ಸಮುದ್ರದಲ್ಲಿ ಸೊಮಾಲಿ ಕಡಲ್ಗಳ್ಳರು ತಮ್ಮ ಹಡಗನ್ನು ಅಪಹರಿಸಿದ್ದಾರೆ ಎಂಬ ಸಂಕಷ್ಟದ ಕರೆ ಇರಾನ್ ಹಡಗಿನಿಂದ ಬಂದ ಹಿನ್ನೆಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ನೌಕಾಪಡೆಯು ಅಪಹರಣಕ್ಕೊಳಗಾಗಿದ್ದ ಹಡಗು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಆರೋಗ್ಯಕ್ಕೆ ಏಲಕ್ಕಿ ತುಂಬಾನೇ ಉಪಯುಕ್ತ: ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಏಲಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಲಿನಲ್ಲಿ ಒಂದು ಚಿಟಿಕೆ ಏಲಕ್ಕಿ ಪುಡಿ ಮತ್ತು ಶುಂಠಿ ಹಾಕಿ ಕುಡಿದರೆ, ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ಸ್ಥಿರವಾಗಿರುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ಏಲಕ್ಕಿ ಉಪಯುಕ್ತವಾಗಿದೆ. ಬಾಯಿ ದುರ್ವಾಸನೆ ಸಮಸ್ಯೆಗೆ ಏಲಕ್ಕಿ ರಾಮಬಾಣ. ಮೊಸರನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು: ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ. ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಮೊಸರನ್ನದಲ್ಲಿ ಪೌಷ್ಠಿಕಾಂಶ ಸಮೃದ್ಧವಾಗಿದೆ. ಮೊಸರನ್ನವು ದೇಹವನ್ನು ತಂಪಾಗಿಸುತ್ತದೆ. ತೂಕವನ್ನು ಇಳಿಸಿಕೊಳ್ಳಲು ಸಹಾಯಕ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಲು ಮತ್ತು ಮೀನು ಮಾತ್ರವಲ್ಲ: ಈ ತರಕಾರಿಗಳಲ್ಲಿಯೂ ಇದೆ ಕ್ಯಾಲ್ಸಿಯಂ: ಕ್ಯಾಲ್ಸಿಯಂ ದೇಹಕ್ಕೆ ಬೇಕಾದ ಮುಖ್ಯ ಅಂಶಗಳಲ್ಲಿ ಒಂದಾಗಿದೆ. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾಲ್ಸಿಯಂ ಎಂದಾಕ್ಷಣ ಹಾಲು ಅಥವಾ ಮೀನಿನ ಬಗ್ಗೆ ಯೋಚಿಸುತ್ತಾರೆ. ಕ್ಯಾಲ್ಸಿಯಂ ಅನ್ನು ಹಾಲು ಮತ್ತು ಮೀನಿನಿಂದ ಮಾತ್ರವಲ್ಲದೆ ಕೆಲವು ರೀತಿಯ…
ಬೆಂಗಳೂರು: 14 ವರ್ಷದ ಬಾಲಕಿಗೆ ಬಿಬಿಎಂಪಿ ಕಸದ ಟ್ರಕ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ. ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿಧ್ಯಾರ್ಥಿನಿಯಾಗಿದ್ದಳು. ಪುಲಕೇಶಿನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತೆಲಂಗಾಣ: ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎರಡು ಕುಟುಂಬಗಳಿಗೆ ಸೇರಿದ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದರೆ, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ನಾಲ್ಗೊಂಡ ಜಿಲ್ಲೆಯ ಮಿರ್ಯಾಲಗುಡಾದ ಚೆರುಪಳ್ಳಿ ಮಹೇಶ್ (32), ಅವರ ಪತ್ನಿ ಜ್ಯೋತಿ (30), ಪುತ್ರಿ ರಿಷಿತಾ (6), ಯಾದಾದ್ರಿ ಭುವನಗಿರಿ ಜಿಲ್ಲೆಯ ಗೊಳ್ನೆಪಲ್ಲಿಯ ಭೂಮಾ ಮಹೇಂದರ್ (32) ಮತ್ತು ಅವರ ಮಗ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಸಮಯದಲ್ಲಿ ಸಂತ್ರಸ್ತರು ದೇವಸ್ಥಾನದಿಂದ ಮನೆಗೆ ಹಿಂದಿರುಗುತ್ತಿದ್ದರು ಎಂದು ವರದಿಯಾಗಿದೆ. ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದು, ಮಿರ್ಯಾಲಗುಡ ಪ್ರಾದೇಶಿಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ನಂತರ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಲಾಗಿದೆ. ಅಪಘಾತ ನಡೆಸಿ ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಿಗೆ ಡಿಕ್ಕಿ…