Subscribe to Updates
Get the latest creative news from FooBar about art, design and business.
- ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
- ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
- ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
- ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
- ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ 14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
- ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ವಾಜಪೇಯಿ ಅವರ 101ನೇ ಜಯಂತಿ: ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ: ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
- “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
Author: admin
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಮೊದಲಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎ ಸ್‌ಐಟಿಗೆ ಅಭಿನಂದನೆ ಹೇಳ್ತೇನೆ ಎಂದರು. ಇದು ಐತಿಹಾಸಿಕ ತೀರ್ಪು. ನ್ಯಾಯಾಲಯಕ್ಕೆ ನಮ್ಮ ಎಸ್‌ಐಟಿ ಎಲ್ಲಾ ದಾಖಲೆಯನ್ನು ಕೊಟ್ಟಿತ್ತು ಪೊಲೀಸರು ಬೇಗ ತನಿಖೆ ಮುಗಿಸಿದ್ದಾರೆ, ಅಭಿನಂದನೆ ಸಲ್ಲಿಸುತ್ತೇನೆ. ಪ್ರಜ್ವಲ್ ರೇವಣ್ಣ ಕೇಸನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಹುಬ್ಬಳ್ಳಿ: ರೇವಣ್ಣಗೆ ಶಿಕ್ಷೆ ವಿಧಿಸಿರುವ ವಿಚಾರದಲ್ಲಿ ಬಿಜೆಪಿಗೇಕೆ ಮುಜುಗರ ಯಾಕಾಗುತ್ತದೆ ಎಂದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಬಿಜೆಪಿಗೆ ಮುಜುಗರ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಶಿಕ್ಷೆ ಆಗಿದೆ, ನಮಗೆ ಮುಜುಗರ ಯಾಕೆ ಆಗುತ್ತೆ? ಕಾಂಗ್ರೆಸ್ ನವರು ಯಾವ ಯಾವ ಅಪರಾಧಿಗಳ ಜೊತೆ ಇದ್ರು ಗೊತ್ತಾ? ಖಲಿಸ್ತಾನಿ ಟೆರರಿಸ್ಟ್ ಜೊತೆ ರಾಹುಲ್ ಗಾಂಧಿ ಫೋಟೋ ಇದೆ. ಯಾಸಿನ್ ಮಲ್ಲಿಕ್ ಜೊತೆ ಇಲ್ಲಿರುವವರ ಫೋಟೋ ಇದೆ. ಅವರದ್ದು ಸಪ್ರೇಟ್ ಪಕ್ಷ, ನಮ್ಮದು ಅಲೈನ್ಸ್ ಆಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಿದೆ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು. ಇನ್ನೂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐಟಿ ಮಾಡಿದ್ದಾರೆ, ತನಿಖೆ ಆಗಲಿ. ಭಾರೀ ಅಪರಾಧ ಆಗಿದೆ ಅಂತ ಮೊದಲೇ ಬಿಂಬಿಸೋದು ಸರಿಯಲ್ಲ. ವೀರೇಂದ್ರ ಹೆಗಡೆ…
ಚೆನ್ನೈ: ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ, ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ನಟ ಮದನ್ ಬಾಬ್ ಅವರು ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ ಖ್ಯಾತರಾಗಿದ್ದ ಮದನ್ ಬಾಬ್ ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಚೆನ್ನೈನಲ್ಲಿ ಶನಿವಾರ (ಆಗಸ್ಟ್ 2) ಸಂಜೆ ಅವರು ನಿಧನರಾಗಿದ್ದು, ಅನೇಕ ಸೆಲೆಬ್ರಿಟಿಗಳು ಕಂಬಿನಿ ಮಿಡಿದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ ಶರಣು ಸಲಗರ್ ಅವರು ಮಾಜಿ ವಿಧಾನ ಪರಿಷತ್ ಸದಸ್ಯರು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿಜಯ್ ಸಿಂಗ್ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ, ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಶರಣು ಸಲಗರ್ ಅವರು ಪದೇ ಪದೇ ವಿಜಯ್ ಸಿಂಗ್ ಅವರ ಹೆಸರು ಬಳಸಿಕೊಂಡು ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಿತಿ ಕೇಂದ್ರದಿಂದ ಮಾಡಿದ ಕಾಮಗಾರಿಗಳು ಕಳಪೆಮಟ್ಟದಿಂದ ನಡೆಯುತ್ತಿವೆ. ಅದನ್ನು ವಿಜಯ ಸಿಂಗ್ ಅವರು ಬಯಲಿಗೆ ತಂದಿದ್ದರು ಮತ್ತು ಗುಣಮಟ್ಟ ಕಾಮಗಾರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕಿತ್ತು ಮಾಡಿದ್ದರು. ವಿಷಯವನ್ನು ಮುಚ್ಚಿ ಹಾಕಲು ಮತ್ತು ಜನರ ಗಮನ ಬೇರೆ ಕಡೆ ಸೆಳೆಯಲು ಶಾಸಕರು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ಮಗನಾದ್ರು ಎಲ್ಲೂ ಅಹಂಕಾರ ತೋರಿಸಿಲ್ಲ ಅಧಿಕಾರದ ದುರ್ಬಳಕೆಯು ಮಾಡಿಲ್ಲ…
ಬೀದರ್: ಶಾಸಕ ಪ್ರಭು ಚವ್ಹಾಣ್ ಅವರ ಪುತ್ರ ಪ್ರತೀಕ್ ಚವ್ಹಾಣ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಎಸ್ ಐಟಿ ಗೆ ಒಪ್ಪಿಸಬೇಕು ಎಂದು ಏಕ್ತಾ ಫೌಂಡೇಶನ್ ನ ಅಧ್ಯಕ್ಷ ರವೀಂದ್ರ ಸ್ವಾಮಿ ಅವರು ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತೀಕ್ ಚವ್ಹಾಣ್ ಅವರದ್ದು ಇದೊಂದೆ ಪ್ರಕರಣವಿಲ್ಲ. ಇನ್ನು ಹಲವಾರು ಯುವತಿಯರಿಗೆಅವರು ಇದೆ ರೀತಿ ಮಾಡಿ ಮೋಸ ಮಾಡಿದ್ದಾರೆ. ಪ್ರಭು ಚವ್ಹಾಣ್ ಅವರು ನಾಲ್ಕು ಬಾರಿ ಶಾಸಕ ಹಾಗೂ ಎರಡು ಬಾರಿ ಸಚಿವರಾಗಿದ್ದು, ಅವರು ತುಂಬಾ ಪ್ರಭಾವಿಯಾಗಿದ್ದಾರೆ. ಇದರಿಂದಾಗಿ ಈ ಪ್ರಕರಣವನ್ನು ಎಸ್ಐಟಿಯಿಂದ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. ಸಂತ್ರಸ್ತೆ ಯುವತಿಯು ಪ್ರತೀಕ್ ಚವ್ಹಾಣ್ ಮೇಲೆ ಪ್ರಕರಣ ದಾಖಲಿಸಿದ ನಂತರ ಸಂತ್ರಸ್ತೆ ಯುವತಿಯ ಕುಟುಂಬಸ್ಥರ ಮೇಲೂ ಕೂಡ ಪ್ರಕರಣ ದಾಖಲು ಮಾಡಲಾಗುತ್ತದೆ. ಇದು ಹೆದರಿಸುವ ತಂತ್ರವಾಗಿದೆ.ಪ್ರತೀಕ್ ಚವ್ಹಾಣ್ ಮೇಲೆ ಆರೋಪವಿದ್ದರೂ ಸಹ ಅವರ ತಂದೆ ಪ್ರಭು ಚವ್ಹಾಣ್ ಅವರು ಸುದ್ದಿಗೋಷ್ಠಿ ನಡೆಸುತ್ತಾರೆ. ಆದರೆ ಪ್ರತೀಕ್ ಚವ್ಹಾಣ್ ಅವರು…
ಔರಾದ: ತುಕಾರಾಮ ಹಸನ್ಮುಖಿ ಗೆಳೆಯರ ಬಳಗದಿಂದ ಔರಾದ್ ತಾಲ್ಲೂಕು ಈಶಾನ್ಯ ಟೈಮ್ಸ್ ಪತ್ರಿಕೆ ಪತ್ರಕರ್ತ ಸಾದುರೆ ಶಿವಕುಮಾರ್ ಹುಟ್ಟುಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ತುಕಾರಾಮ ಹಸನ್ಮುಖಿ ಮಾತನಾಡಿ ಪತ್ರಿಕಾ ರಂಗದಲ್ಲಿ ನಿಸ್ವಾರ್ಥ ಸೇವೆಯೇ ಮನುಷ್ಯನಿಗೆ ನಿಜವಾದ ಆತ್ಮತೃಪ್ತಿ ಎಂದರು. ಇದೇ ವೇಳೆ ತುಕಾರಾಮ ಹಸನ್ಮುಖಿ, ಗಣಪತಿ ಸೇಂಬೆಳ್ಳಿ, ಮಲ್ಲಿಕಾರ್ಜುನ ಜೋನ್ನೇಕೆರಿ, ವೈಜಿನಾಥ ನಾಗೂರ್, ಜಗ್ಗನಾಥ್ ಜಂಬಗಿ, ರಾತಿಕಾಂತ್ ಪಾಟೀಲ್, ಬಸವರಾಜ್ ಲಾಧ, ಲಕ್ಷಿಮನ್, ವಿಲಾಸ್ ಹಸನ್ಮುಖಿ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು : ನಗರದ ರೈಲ್ವೆ ಪ್ರಯಾಣಿಕರ ವೇದಿಕೆಯಿಂದ ಇಂದು (ಆ.3) ತುಮಕೂರು — ಬೆಂಗಳೂರು ಫಾಸ್ಟ್ ಪ್ಯಾಸೆಂಜರ್ ರೈಲಿನ 12ನೇ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಣೆ ಮಾಡಲಾಯಿತು. ರೈಲಿನ ಹುಟ್ಟುಹಬ್ಬವನ್ನು ನಗರದ ರೈಲ್ವೆ ಪ್ರಯಾಣಿಕರ ವೇದಿಕೆ ಕಳೆದ 12 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ. ರೈಲ್ವೆ ಪ್ರಯಾಣಿಕರ ವೇದಿಕೆ ಅಧ್ಯಕ್ಷ ಕರ್ಣಮ್ ರಮೇಶ್, ರೈಲ್ವೆ ಪ್ರಯಾಣಿಕರ ವೇದಿಕೆ ಖಜಾಂಚಿ ಬಾಲಾಜಿ, ಹಾಗೂ ಸದಸ್ಯ ಶಿವಕುಮಾರ ಸ್ವಾಮಿ ಮಾತನಾಡಿದರು. ಬೆಂಗಳೂರಿಗೆ ಪ್ರತಿದಿನ ಸಂಚರಿಸುವ ಉದ್ಯೋಗಿಗಳಿಗೆ ಅನುಕೂಲವಾಗಲೆಂದು ನೈಋುತ್ಯ ರೈಲ್ವೆ ಅಧಿಕಾರಿಗಳ ಮನವೊಲಿಸಿದ್ದ ರೈಲ್ವೆ ಪ್ರಯಾಣಿಕರ ವೇದಿಕೆ 2013ರಂದು ತುಮಕೂರು–ಬೆಂಗಳೂರು ಫಾಸ್ಟ್ ಪ್ಯಾಸೆಂಜರ್ ರೈಲಿನ ಬೇಡಿಕೆ ಈಡೇರಿಸಿಕೊಂಡಿತ್ತು. ನೂತನ ರೈಲು ಆರಂಭಕ್ಕೆ ಕಾರಣವಾಗಿದ್ದ ಪ್ರಯಾಣಿಕರ ವೇದಿಕೆ ರೈಲ್ವೆ ಪ್ರಯಾಣಿಕರಿಗೆ ವಿವಿಧ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಪ್ರಯಾಣಿಕರ ಸಂಕಷ್ಟ ನಿವಾರಣೆಗೆ ಆರಂಭಗೊಂಡ ರೈಲಿನ ಹುಟ್ಟುಹಬ್ಬದ ದಿನಾಚರಣೆ ಸಂಭ್ರಮ ಇಂದಿಗೂ ಮುಂದುವರೆದಿದೆ. ರೈಲು ಆರಂಭಗೊಂಡ ನೆನಪಿಗಾಗಿ ಆ.3 ರಂದು ಪ್ರತಿ ವರ್ಷವೂ ರೈಲಿಗೆ ಹುಟ್ಟುಹಬ್ಬ ಆಚರಿಸಿ, ಪ್ರಯಾಣಿಕರೊಂದಿಗೆ ವೇದಿಕೆಯ ಪದಾಧಿಕಾರಿಗಳು…
ಬೆಂಗಳೂರು: ಅತ್ಯಾಚಾರಕ್ಕೆ ಸಂಬಂಧಿಸಿದ ಒಂದು ಪ್ರಕರಣದಲ್ಲಿ ಅಪರಾಧಿ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, ತನಿಖಾ ಹಂತದಲ್ಲಿ ಸಂತ್ರಸ್ತ ಮಹಿಳೆ ದಿಟ್ಟವಾಗಿ ನಿಂತಿದ್ದು ಅಪರಾಧಿಗೆ ಶಿಕ್ಷೆ ನೀಡಲು ನೆರವಾಯ್ತು. ಆಗಸ್ಟ್ 1 ರಂದು ವಿಶೇಷ ನ್ಯಾಯಾಲಯವು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತು. ಶಿಕ್ಷೆ ವಿಧಿಸಿದ ಕೂಡಲೇ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿ ಬಿ.ಕೆ.ಸಿಂಗ್ ಅವರು, ದೂರುದಾರ ಮಹಿಳೆಯ ಹೇಳಿಕೆಯನ್ನು ದೃಢೀಕರಿಸಲು ಜೈವಿಕ, ತಾಂತ್ರಿಕ, ಡಿಜಿಟಲ್, ಮೊಬೈಲ್ ಮತ್ತು ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲಾಯಿತು. ಬಳಿಕ ನಮಗೆ ಸಿಕ್ಕ ಸಾಕ್ಷಿಗಳು, ತಜ್ಞರ ವರದಿಯನ್ನು ಆರೋಪಪಟ್ಟಿಯಲ್ಲಿ ಸೇರಿಸಲಾಗಿತ್ತು. ಅತ್ಯಾಚಾರದ ವಿಡಿಯೋಗಳನ್ನು ಇಟ್ಟುಕೊಂಡು ಪ್ರಜ್ವಲ್ ಸಂತ್ರಸ್ತರ ಮಹಿಳೆಯರನ್ನು ಬೆದರಿಸುತ್ತಿದ್ದ. ವಿಡಿಯೋ ಮೂಲಕ ಅವರನ್ನ ಮೌನವಾಗಿರುವಂತೆ ಮಾಡುತ್ತಿದ್ದ. ಆದರೆ, ಈ ವಿಡಿಯೋಗಳಲ್ಲಿ ಪ್ರಜ್ವಲ್ ಮುಖ ಮಾತ್ರ ಸೋರಿಸಿರಲಿಲ್ಲ. ಸೋರಿಕೆಯಾಗಿದ್ದ ಇತರೆ ವಿಡಿಯೋಗಳಲ್ಲಿದ್ದ ದೇಹಗಳ ಭಾಗಗಳು, ಪ್ರಸ್ತುತ ಅಪರಾಧ ಸಾಬೀತಾಗಿರುವ ಪ್ರಕರಣದ ವಿಡಿಯೋದಲ್ಲಿದ್ದ ದೇಹದ…
ಸರಗೂರು: ಹೆಚ್.ಡಿ.ಕೋಟೆ ತಾಲ್ಲೂಕು ಹಾಗೂ ಸರಗೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕಬಿನಿ ಜಲಾಶಯ ಹಾಗೂ ನುಗು ಜಲಾಶಯದ ಹಿನ್ನೀರಿನಲ್ಲಿ ಅಕ್ರಮ ರೆಸಾರ್ಟ್ ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸ್ಥಳೀಯ ಶಾಸಕರು, ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಅವಕಾಶಮಾಡಿಕೊಟ್ಟಿದ್ದಾರೆಂದು ಕೆಲವೊಂದು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿಯಾಗಿ ಆರೋಪಿಸಲಾಗಿರುತ್ತದೆ ಕಿಡಿಗೇಡಿಗಳ ವಿರುದ್ಧ ಶಾಸಕರು ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಸೂಚಿಸಿದ್ದಾರೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಮಾಜಿ ತಾಪಂ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ ತಿಳಿಸಿದರು. ತಾಲ್ಲೂಕಿನಲ್ಲಿ ಅಕ್ರಮ ರೆಸಾರ್ಟ್ ಗಳ ನಿರ್ಮಾಣದ ಬಗ್ಗೆ ನನಗೆ ಯಾವುದೇ ಲಿಖಿತ ದೂರುಗಳು ಸ್ವೀಕೃತವಾಗಿರುವುದಿಲ್ಲ. ಆದ್ದರಿಂದ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿನ ಅಂಶಗಳನ್ನು ದೂರುಗಳೆಂದು ಆಧರಿಸಿ ತಾಲ್ಲೂಕಿನಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣವಾಗುತ್ತಿದ್ದಲ್ಲಿ ಅಥವಾ ಕಾರ್ಯನಿರ್ವಹಿಸುತ್ತಿದ್ದಲ್ಲಿ ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೋರುತ್ತೇನೆ. ಎಂದು ಜಿಲ್ಲಾಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಮಾಡಿದ್ದಾರೆ ಎಂದರು. ತಾಲೂಕಿನಲ್ಲಿ ಇಲ್ಲಸಲ್ಲದ ಆರೋಪಗಳನ್ನು ಶಾಸಕರ ವಿರುದ್ಧ ಲೋಕಲ್ ಮಾಧ್ಯಮಗಳಲ್ಲಿ ಕಿಡಿಗೇಡಿಗಳು ಪ್ರಸಾರ…
ಸರಗೂರು: ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಸರಗೂರು ಯೂಥ್ ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ಮಸಹಳ್ಳಿ ನವೀನ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸರಗೂರು ಯೂಥ್ ಬ್ಲಾಕ್ ವತಿಯಿಂದ ಶನಿವಾರ ಕಳೆದ ಲೋಕಸಭಾ ಚುನಾವಣೆಯಲ್ಲಿ ನಡೆದಂತಹ ಮತಗಳ್ಳತನ ವಿಚಾರವಾಗಿ ಚುನಾವಣೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ಅ.5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶಕ್ಕೆ ಯೂಥ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಬೇಕು ಎಂದು ಸಭೆಯ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರನ್ನು ಮನವಿ ಮಾಡಿ ಮಾತನಾಡಿದರು. ಎಐಸಿಸಿ ಅಧ್ಯಕ್ಷರು ಮತ್ತು ರಾಜ್ಯ ಸಭಾ ವಿರೋಧ ಪಕ್ಷದ ನಾಯಕರು ಆದ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ…