Author: admin

ಬೆಂಗಳೂರು: ಇರಾನ್‌ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ರಾಜ್ಯದ ವಿವಿಧೆಡೆ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ನಿಯಮಗಳನ್ನು ಉಲ್ಲಂಘಿಸಿ ಬೀದಿಗಿಳಿಯುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಎಚ್ಚರಿಕೆ ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ನಗರದಲ್ಲಿ ಯಾವುದೇ ರೀತಿಯ ಸಭೆ ಅಥವಾ ಪ್ರತಿಭಟನೆ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಅನುಮತಿಯಿಲ್ಲದೆ ನಿಯಮ ಬಾಹಿರವಾಗಿ ಪ್ರತಿಭಟನೆ ನಡೆಸುವವರ ವಿರುದ್ಧ ಈಗಾಗಲೇ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದರು. ಹೈಕೋರ್ಟ್ ಆದೇಶದಂತೆ ಪ್ರತಿಭಟನೆಗಳು ಕೇವಲ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ನಡೆಯಬೇಕು. ಅದನ್ನು ಬಿಟ್ಟು ಏಕಾಏಕಿ ಬೀದಿಗೆ ಬಂದು ಸಾರ್ವಜನಿಕರಿಗೆ ತೊಂದರೆ ಕೊಡುವುದು ನಿಯಮಬಾಹಿರ. ಅಂತಹವರನ್ನು ಬೀದಿಗೆ ಬರಲು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಖಮೇನಿ ಹತ್ಯೆ ವಿರೋಧಿಸಿ ಬೆಂಗಳೂರು ಮತ್ತು ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಯಾ ಸಮುದಾಯದವರು ಪ್ರತಿಭಟನೆ ನಡೆಸಿದ್ದರು.…

Read More

ಚಿಕ್ಕನಾಯಕನಹಳ್ಳಿ: ತಾಲೂಕಿನ ಯಾವುದೇ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಸಿ.ಬಿ. ಸುರೇಶ್‌ ಬಾಬು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ನೀರು ವ್ಯರ್ಥವಾಗಿ ಹರಿಯದಂತೆ ನೋಡಿಕೊಳ್ಳುವುದು ವಾಟರ್‌ಮನ್‌ಗಳ ಜವಾಬ್ದಾರಿ. ಈ ಬಗ್ಗೆ ಅಧಿಕಾರಿಗಳು ನಿರಂತರ ನಿಗಾ ಇಡಬೇಕು ಮತ್ತು ನೀರಿನ ಲಭ್ಯತೆಯ ಬಗ್ಗೆ ವಾರಕ್ಕೊಮ್ಮೆ ವರದಿ ನೀಡಬೇಕು.  ನೀರಿನ ಅಭಾವ ತೀವ್ರವಾಗಿರುವ ಕಡೆಗಳಲ್ಲಿ ಅಗತ್ಯವಿದ್ದರೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಅಂತಾ ಸೂಚನೆ ನೀಡಿದರು. ಪ್ರಸ್ತುತ ಜಾತ್ರೆಗಳ ಸೀಸನ್ ಆಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಹಾಗೂ ಪಂಚಾಯಿತಿ ಅಧಿಕಾರಿಗಳು ಜಾತ್ರಾ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು. ಜಾನುವಾರುಗಳಿಗೆ ಮೇವು: ಬೇಸಿಗೆಯ ಹಿನ್ನೆಲೆಯಲ್ಲಿ…

Read More

ತುಮಕೂರು: ಜಿಲ್ಲೆಯ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಸ್ವಾಮೀಜಿ ಅವರು ಬುಧವಾರ ಬೆಳಿಗ್ಗೆ ನಾಪತ್ತೆಯಾಗಿ, ಮಧ್ಯಾಹ್ನದ ವೇಳೆಗೆ ಸಿದ್ಧಗಂಗಾ ಮಠದಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಬೆಳಿಗ್ಗೆ ಸುಮಾರು 5 ಗಂಟೆಗೆ ಬೆಳ್ಳಾವಿ ಮಠದಿಂದ ಯಾರಿಗೂ ತಿಳಿಸದೆ, ಕಾಲ್ನಡಿಗೆಯಲ್ಲೇ ಹೊರಟಿದ್ದ ಶ್ರೀಗಳು ಸುಮಾರು 15 ಕಿ.ಮೀ. ನಡೆದುಕೊಂಡು ಸಿದ್ಧಗಂಗಾ ಮಠಕ್ಕೆ ಬಂದು ತಲುಪಿದ್ದರು. ಮಠದಲ್ಲಿ ಸ್ವಾಮೀಜಿ ಕಾಣಿಸದಿದ್ದಾಗ ಆತಂಕಗೊಂಡ ಭಕ್ತರು ಮತ್ತು ಮಠದ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಅವರು ಯಾವುದೇ ವಾಹನ ಬಳಸದೆ ಮತ್ತು ಮೊಬೈಲ್ ಕೂಡ ಕೊಂಡೊಯ್ಯದೆ ತೆರಳಿದ್ದರಿಂದ ಆತಂಕ ಹೆಚ್ಚಾಗಿತ್ತು. ಮೂಲಗಳ ಪ್ರಕಾರ, ಇತ್ತೀಚೆಗೆ ನಡೆದ ಬೆಳ್ಳಾವಿ ಜಾತ್ರೆಯ ಸಂದರ್ಭದಲ್ಲಿ ಮಠದ ಆವರಣದಲ್ಲಿ ಫ್ಲೆಕ್ಸ್ ಅಳವಡಿಸುವ ವಿಚಾರವಾಗಿ ಕೆಲವರು ಸ್ವಾಮೀಜಿಯವರ ಜೊತೆ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಸಿ.ಸಿ ಟಿ.ವಿ ದೃಶ್ಯಾವಳಿ ನೀಡುವಂತೆ ಒತ್ತಡ ಹೇರಿ ಕಿರುಕುಳ ನೀಡಿದ್ದರಿಂದ ಮನನೊಂದು ಅವರು ಮಠ ಬಿಟ್ಟಿದ್ದರು ಎಂದು ಹೇಳಲಾಗುತ್ತಿದೆ. ಶ್ರೀಗಳ ಸ್ಪಷ್ಟನೆ: ಸಿದ್ಧಗಂಗಾ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, “ನಾನು ಗಲಾಟೆಯಿಂದ…

Read More

ತುಮಕೂರು: ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೆತ್ತಿಕೊಂಡಿರುವ ಕಾಮಗಾರಿಗಳ ಕುರಿತು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಮಂಗಳವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಹತ್ವದ ಸಮನ್ವಯ ಸಭೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬಟವಾಡಿ ಮತ್ತು ಮಲ್ಲಸಂದ್ರ ನಡುವೆ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಿದೆ. ಈ ಯೋಜನೆಯಲ್ಲಿ ಮೊದಲು ಭೀಮಸಂದ್ರದಲ್ಲಿ ಹೊಸ ಸೇತುವೆಯನ್ನು ನಿರ್ಮಾಣ ಮಾಡಬೇಕು, ನಂತರ ನಗರದ ಕಡೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಹೊರವಲಯದ ರಂಗಾಪುರ ಬಳಿ ನಡೆಯುತ್ತಿರುವ ಮೇಲುಸೇತುವೆ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಸಾರ್ವಜನಿಕರ ವಾಹನ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಿದರು. ನಗರದ ಹೃದಯಭಾಗದಲ್ಲಿ ಹೆದ್ದಾರಿಗಳು ಹಾದುಹೋಗಿದ್ದು, ರಸ್ತೆಗಳ ಕೆಳಗೆ ನೀರು ಮತ್ತು ಒಳಚರಂಡಿ ಪೈಪ್‌ಲೈನ್‌ಗಳಿವೆ. ಆದ್ದರಿಂದ ಯಾವುದೇ ಹೊಸ ಯೋಜನೆ ಅಥವಾ ದುರಸ್ತಿ ಕಾರ್ಯ ಮಾಡುವಾಗ ಪಾಲಿಕೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವುದು ಕಡ್ಡಾಯ ಎಂದು ತಿಳಿಸಿದರು. ಅಂತರಸನಹಳ್ಳಿ ಮತ್ತು ದೇವರಾಯಪಟ್ಟಣದ ಕೆಳಸೇತುವೆಗಳಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುವ ಸಮಸ್ಯೆಯಿದೆ.…

Read More

ಶಿವಮೊಗ್ಗ:  ಮಾನವರೆಲ್ಲರೂ ಒಂದೇ. ಮನುಕುಲದ ಉದ್ದಾರವೇ ಶ್ರೇಷ್ಟ ಎಂದು ಕೈವಾರ ತಾತಯ್ಯನವರು ನಂಬಿದ್ದು, ಮನುಕುಲದ ಉದ್ದಾರದ ಕುರಿತು ಸಾಕಷ್ಟು ಕೀರ್ತನೆಗಳನ್ನು ರಚಿಸಿ ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಸ್ಮರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬಲಿಜ ಸೇವಾ ಸಂಘ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾತಯ್ಯನವರು ದೇವರ ವಿಶೇಷ ಸೃಷ್ಟಿ. ಅವರು ಭಗವಂತನ ಸ್ವರೂಪ. ಪ್ರತಿಯೊಬ್ಬ ಮನುಷ್ಯ ಸಂಸ್ಕೃತಿಯನ್ನು ಅರಿತಿರಬೇಕು. ಗ್ರಾಮದ ಲೆಕ್ಕಿಗ ಭ್ರಷ್ಟನಾಗಿರಬಾರದು ಎಂದು ಅಂದೇ ಹೇಳಿದ್ದರು. ಬದುಕು ಹೇಗಿರಬೇಕು ಎಂದು ತಿಳಿಸಿಕೊಟ್ಟ ಸಾಂಸ್ಕೃತಿಕ ಹರಿಕಾರರಾದ ಇವರು ಜಾತಿ ವ್ಯವಸ್ಥೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದರು. ಮನುಕುಲದ ಉದ್ದಾರವೇ ಶ್ರೇಷ್ಟವೆಂದು ನಂಬಿದ್ದರು. ಸರಳ ಕನ್ನಡದಲ್ಲಿ ತತ್ವಪದಗಳು ಮತ್ತು ಕಾಲಜ್ಞಾನ ವನ್ನು ರಚಿಸಿ, ಭವಿಷ್ಯದ ಘಟನೆಗಳನ್ನು ಮುನ್ನರಿತಿದ್ದರು. ಇವರ ಕೀರ್ತನೆಗಳು ಭಕ್ತಿ,…

Read More

ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಭೀಮ ಗಾಯನ ಕಾರ್ಯಕ್ರಮವನ್ನು ಮಾರ್ಚ್ 5,  2026 ರಂದು ಬೆಳಿಗ್ಗೆ 10:30 ಗಂಟೆಗೆ ಧಾರವಾಡದ ಡಾ. ಬಿ.ಆರ್.ಅಂಬೇಡ್ಕರ ಪಾರಂಪರಿಕ ಕಟ್ಟಡ ಆವರಣದ ಜ್ಞಾನ ಬುದ್ಧವಿಹಾರ (ಬುದ್ಧ ರಕ್ಕಿಥ ಪ್ರೌಢಶಾಲೆ ಆವರಣ) ದಲ್ಲಿ ಆಯೋಜಿಸಲಾಗಿದೆ.   ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ…

Read More

ಧಾರವಾಡ :  ಇಂದು (ಮಾ.3) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಎಡಿಸಿ ಅವರಾದ ಗೀತಾ ಸಿ.ಡಿ. ಅವರು ಮಾತನಾಡಿ, ನಮ್ಮ ಭಾರತ ದೇಶದಲ್ಲಿ ಸಮಾಜಗಳು, ಜಾತಿಗಳು, ಧರ್ಮಗಳು, ತಮ್ಮದೇ ವೈಭವವನ್ನು ಸಮಾಜದ ಮೇಲೆ ಪ್ರಭಾವ ಬಿರುತ್ತಾ ಬಂದಿವೆ. ಸಂಸ್ಕøತಿಗಳು, ಕಲೆಗಳು, ವಿಚಾರಗಳು ಭಿನ್ನವಾದಂತಹ ದೇಶದಲ್ಲಿ ಒಂದು ಚಿಕ್ಕ ಧರ್ಮದಲ್ಲಿ ಜನಿಸಿದಂತಹ ಶ್ರೀ ಯೋಗಿನಾರೇಯಣ ಯತೀಂದ್ರರ ಅವರು ಮಹಾನ್ ಪುರುಷರಾಗಿದ್ದಾರೆ ಎಂದು ಹೇಳಿದರು. ಕರ್ನಾಟಕ ಭೂಮಿ ವಿವಿಧ ಮಹಾಪುರುಷರನ್ನು ಜನ್ಮ ನೀಡಿದ ಪವಿತ್ರ ನಾಡಾಗಿದೆ. ಪ್ರತಿ ಜನಾಂಗಕ್ಕೂ ಒಬ್ಬ ಮಹಾನ್ ವ್ಯಕ್ತಿ ಇದ್ದು ಅವರು ತಮ್ಮ ಸಮುದಾಯದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬೆಳೆಸಿದವರು. ಇಂತಹ ಮಹನೀಯರ ಜೀವನಚರಿತ್ರೆ ಮತ್ತು ತತ್ವಗಳು ಇಂದಿನ ಪೀಳಿಗೆಗೆ ಮಾದರಿಯಾಗಬೇಕು ಎಂದು ಅವರು ಹೇಳಿದರು. ಸಂಸ್ಕೃತಿ ಎಂದರೆ ಕೇವಲ ಆಚರಣೆಗಳಲ್ಲ.…

Read More

ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು ಒಂದೇ ಮಂಟಪದಲ್ಲಿ ಇಬ್ಬರು ಪುರುಷರನ್ನು ಮದುವೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಏನಿದು ಘಟನೆ? ಥೈಲ್ಯಾಂಡ್‌ನ ಪ್ರಖೋನ್ ಚಾಯ್ ಜಿಲ್ಲೆಯ 37 ವರ್ಷದ ಡುವಾಂಗ್ಡುವಾನ್ ಕೆಟ್ಸಾರೊ ಎಂಬ ಮಹಿಳೆ ಈ ಸಾಹಸಕ್ಕೆ ಕೈಹಾಕಿದವರು. ಮಾಜಿ ಗಾಯಕಿ ಹಾಗೂ ಹಾಡು ಬರಹಗಾರ್ತಿಯಾಗಿರುವ ಇವರು, ಆಸ್ಟ್ರೇಲಿಯಾ ಮೂಲದ ಇಬ್ಬರು ಪುರುಷರನ್ನು ಏಕಕಾಲಕ್ಕೆ ವರಿಸಿದ್ದಾರೆ. ಇವರ ಪತಿಯರಲ್ಲಿ ಒಬ್ಬರು ಆಸ್ಟ್ರೇಲಿಯಾದ ನಿವೃತ್ತ ಪೊಲೀಸ್ ಅಧಿಕಾರಿ ರೋಮನ್ ಹಾಗೂ ಮತ್ತೊಬ್ಬರು ರೋಮನ್ ಅವರ ಸ್ನೇಹಿತ ಮ್ಯಾಕಿ. ಕಳೆದ 5 ವರ್ಷಗಳಿಂದ ಡುವಾಂಗ್ಡುವಾನ್ ಈ ಇಬ್ಬರ ಜೊತೆಗೂ ಡೇಟಿಂಗ್ ಮಾಡುತ್ತಿದ್ದರು. ಮೊದಲು ರೋಮನ್ ಅವರ ಪರಿಚಯವಾಗಿತ್ತು, ನಂತರ ಅವರ ಮೂಲಕ ಮ್ಯಾಕಿ ಪರಿಚಯವಾಯಿತು. ಐದು ವರ್ಷಗಳ ಕಾಲ ಮೂವರೂ ಪರಸ್ಪರ ಸಂಬಂಧದಲ್ಲಿದ್ದರು. ಕೊನೆಗೆ ಇಬ್ಬರನ್ನೂ ಮದುವೆಯಾಗಲು ನಿರ್ಧರಿಸಿದ ಮಹಿಳೆಗೆ ಇಬ್ಬರು ವರರು ಕೂಡ ಒಪ್ಪಿಗೆ ನೀಡಿದ್ದರು. 29 ಲಕ್ಷ…

Read More

ಬೆಂಗಳೂರು: ರಾಜ್ಯ ಸರ್ಕಾರವು ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸುವ ಮೊದಲು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ಸರ್ಕಾರವು ಅನುಸರಿಸಲಿರುವ ಕಾರ್ಯವಿಧಾನದ ಬಗ್ಗೆ ಸ್ಪಷ್ಟನೆ ನೀಡಬೇಕು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಒಮ್ಮತ ಮೂಡಿಸುವುದು ಅತ್ಯಗತ್ಯ ಎಂದು ಹೇಳಿದರು. ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರವು ಗೊಂದಲದಲ್ಲಿದೆ. ಬಾಕಿ ಇರುವ ನೇಮಕಾತಿಗಳನ್ನು ಯಾವ ಆಧಾರದ ಮೇಲೆ ಮಾಡಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಬೇಕಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಮುಂದೆ ಹಲವು ಸಮುದಾಯಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿವೆ. ಆ ಶಿಫಾರಸುಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಬೇಕು ಅಂತಾ ಅವರು ಒತ್ತಾಯಿಸಿದರು. ಒಳ ಮೀಸಲಾತಿ ಜಾರಿಗೆ ಕಾನೂನು ರೂಪಿಸಿರುವುದರಿಂದ ಸಹಜವಾಗಿಯೇ ಎಲ್ಲಾ…

Read More

ರಾಯಚೂರು : ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ ಎಬಿ–ಪಿಎಂ–ಜೆಎವೈ—ಸಿಎಂಎಸ್–ಎಆರ್‌ ಕೆ  (AB–PM–JAY—CMs–ArK)  ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ, ವೈದ್ಯಕೀಯ ಮತ್ತು ವೈದ್ಯಕೀಯೇತರ ವಂಚನೆ ಅಥವಾ ಉದ್ದೇಶಪೂರ್ವಕವಾಗಿ ಅಥವಾ ವಿವೇಚನಾಯುತವಾಗಿ ಅಧಿಕಾರ ದುರುವಯೋಗದಂತಹ ಯಾವುದೇ ಆರೋಪಗಳು ಕಂಡುಬಂದಲ್ಲಿ ಆರೋಪಿತರ ವಿರುದ್ಧ ದೂರು/ಮಾಹಿತಿ ನೀಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಟ್ಟು ಇಂತಹ ಪ್ರಕರಣಗಳ ಮಾಹಿತಿ ಪಡೆದು ವಿಚಾರಣೆ ನಡೆಸಲು ವಿಜಲ್ ಬ್ಲೋವರ್ ಪಾಲಿಸಿ ( (Whistle Blower Policy) ಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಸರ್ಕಾರದ ಆದೇಶದ ಅನ್ವಯ ಅನುಷ್ಠಾನಗೊಳಿಸಲಾಗಿರುತ್ತದೆ. ಅದರಂತೆ, ಎಬಿ-ಪಿಎಂ-ಜೆಎವೈ—ಸಿಎಂಎಸ್–ಎಆರ್‌ ಕೆ (AB–PM–JAY—CMs–ArK) ಅನುಷ್ಠಾನದಲ್ಲಿ ಭಾಗಿಯಾಗಿರುವ ಯಾವುದೇ ಪಾಲುದಾರರ ವಿರುದ್ಧ ಕೇಳಿಬರುವ ಅಂತಹ ಆರೋಪದ ಮೇಲೆ ದೂರುಗಳನ್ನು ಸ್ವೀಕರಿಸಲು, ವಿಚಾರಿಸಲು, ಅಂತಹ ದೂರು ನೀಡುವ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡಲು ಹಾಗೂ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಬಹಿರಂಗಪಡಿಸುವಿಕೆಯ ವಿರುದ್ಧ ಸಾಕಷ್ಟು ಸುರಕ್ಷತೆಗಳನ್ನು…

Read More