Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಎಲೆಕ್ಟ್ರಾನಿಕ್ ಸಿಟಿ ಸಮೀಪ ಚಲಿಸುತ್ತಿದ್ದ ಬೈಕ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ನಡೆದಿದೆ. ಬೈಕ್ ಚಲಿಸುತ್ತಿರುವಾಗಲೇ ಏಕಾಏಕಿ ಹೊಗೆ ಬಂದಿದ್ದು, ಇದನ್ನು ಗಮನಿಸಿದ ಸವಾರ ಕೂಡಲೇ ರಸ್ತೆ ಬದಿಗೆ ಸ್ಕೂಟರ್ ನಿಲ್ಲಿಸಿದ್ದಾನೆ. ಬಳಿಕ ಕ್ಷಣ ಮಾತ್ರದಲ್ಲಿ ಬೆಂಕಿ ಕಾಣಿಸಿಕೋಂಡು ಸುಟ್ಟು ಕರಕಲಾಗಿದೆ. ಎಂಜಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಅಡ್ಡ ಬಂದ ಬೈಕ್ ಸವಾರನ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿ ಹೊಡೆದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲಗಣಿ ಕ್ರಾಸ್ ಬಳಿ ನಡೆದಿದೆ. ಬಸ್ ನ ವೊಳಗೆ ಸಿಲುಕಿಕೊಂಡಿದ್ದವರನ್ನು ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ. ಬಸ್ ನಲ್ಲಿದ್ದ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಬಸ್ ಜಮಖಂಡಿಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಗದಗ: ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬೈಕ್ ಗೆ ಸರ್ಕಾರಿ ಜೀಪ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಪ್ಪ ಮಾದರ(55) ಮೃತ ರ್ದುದೈವಿ. ಧಾರವಾಡ ಕೆಸಿಸಿ ಬ್ಯಾಂಕ್ ಗೆ ಸೇರಿದ ಜೀಪ್ ಇದಾಗಿದ್ದು, ಜೀಪ್ ಡಿಕ್ಕಿ ರಭಸಕ್ಕೆ ಸವಾರ ನೂರು ಅಡಿ ದೂರ ಬಿದ್ದಿದ್ದಾನೆ. ಅಪಘಾತ ಬಳಿಕ ಚಾಲಕ ಸ್ಥಳದಲ್ಲೇ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆ ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾವೇರಿ: ಪ್ರಿಯಕರನೊಬ್ಬ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೀ(20) ಚಾಕು ಇರಿತಕ್ಕೋಳಗಾದ ಯುವತಿಯಾಗಿದ್ದಾಳೆ. ಇನ್ನು ಪ್ರಿಯಕರ ಮಹೇಶ್ ಮೈಸೂರು ಹಾಗೂ ಲಕ್ಷ್ಮೀ 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ತನ್ನ ಪ್ರಿಯತಮೆಯು ಬೇರೆ ಯುವಕನ ಜೊತೆ ಆಕೆ ಸಂಪರ್ಕದಲ್ಲಿದ್ದಾಳೆಂಬ ಅನುಮಾನದಿಂದ ಚಾಕು ಇರಿದಿದ್ದಾನೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕೂಡಲೇ ಲಕ್ಷ್ಮೀಯನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಡಿಸ್ ಚಾರ್ಜ್ ಮಾಡಲಾಗಿದೆ. ಲಕ್ಷ್ಮೀಗೆ ಚಾಕು ಇರಿದ ಮಹೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಹರಿಯಾಣ: ದೆಹಲಿಯ ಖ್ಯಾತ ಎಸಿಪಿ ಪುತ್ರನನ್ನು ಮದುವೆಗೆಂದು ಕೆರೆದುಕೊಂಡು ಹೋಗಿ ಆತನ ಸ್ನೇಹಿತರೇ ಕೊಲೆ ಮಾಡಿರುವ ಘಟನೆ ಸೋನೆಪತ್ ನಲ್ಲಿ ನಡೆದಿದೆ. ಲಕ್ಷ್ಯ ಚೌಹಾಣ್(24) ಮೃತ ವ್ಯಕ್ತಿ. ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್ ಪಾಲ್ ಸಿಂಗ್ ಅವರ ಪುತ್ರನಾದ ಚೌಹಾಣ್ ತೀಸ್ ಹಜಾರಿ ನ್ಯಾಯಾಲಯದ ವಕೀಲರಾಗಿದ್ದರು. ಲಕ್ಷ್ಯ ಸ್ನೇಹಿತರಾದ, ವಿಕಾಸ್ ಭಾರದ್ವಾಜ್ ಮತ್ತು ಸಹಚರ ಅಭಿಷೇಕ್ ಕಾಲುವೆಗೆ ತಳ್ಳಿ ಕೊಲೆ ಮಾಡಿ ಪರಾರಿಯಾಗಿದ್ದರು. ಸ್ನೇಹಿತರ ಜೊತೆ ಮದುವೆಗೆ ಹೋದ ಮಗ ಮರಳಿ ಬರದ ಕಾರಣ ತಂದೆ ಯಶ್ ಪಾಲ್ ಸಿಂಗ್ ಅವರು ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ದೂರು ದಾಖಲಿಸಿಕೊಂಡು ಶೋಧ ಕಾರ್ಯ ನಡೆಸಿದಾಗ ಚೌಹನ್ ಅವರ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಚೌಹಣ್ ಅವರು ಭಾರದ್ವಾಜ್ ಬಳಿ ಸಾಲ ಪಡೆದಿದ್ದು, ಹಣವನ್ನು ಮರುಪಾವತಿಸಿರಲಿಲ್ಲ. ಇದನ್ನು ಭಾರದ್ವಾಜ್, ಅಭಿಷೇಕ್ ಬಳಿ ಹೇಳಿದ್ದಾನೆ. ಹೀಗಾಗಿ ಇಬ್ಬರು ಸೇರಿ ಚೌಹಣ್ ಕೊಲೆಗೆ ಸಂಚು ರೂಪಿಸಿ ಮದುವೆಗೆ…
ದಾವಣಗೆರೆ: ಜಿಲ್ಲೆಯ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಡಿಸಿಆರ್ ಬಿ ಪೊಲೀಸರ ಕಾರ್ಯಾಚಣೆ ನಡೆಸಿದಾಗ ಸಿಕ್ಕ ಖೋಟಾ ನೋಟುಗಳು. ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಓರ್ವ ಇಂಜಿನಿಯರ್ ಸೇರಿ ಆರು ಜನರ ಗ್ಯಾಂಗ್ ವೊಂದನ್ನ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಬರೋಬರಿ 7.70 ಲಕ್ಷ ರೂಪಾಯಿ ಮೌಲ್ಯದ ಐದು ನೂರು ಹಾಗೂ ಎರಡು ನೂರು ಮುಖಬೆಲೆಯ ಖೋಟಾ ನೋಟು ವಶಪಡಿಸಿಕೊಂಡಿದ್ದಾರೆ. ಖೋಟಾ ನೋಟು ತಯಾರು ಮಾಡಲು ಬಳಸುತ್ತಿದ್ದ ಲ್ಯಾಪ್ ಟಾಪ್ ಸೇರಿ ಮೂರು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳ ವಶ ಪಡಿಸಿಕೊಂಡಿದ್ದಾರೆ. ದಾವಣಗೆರೆ ಮೂಲದ ಕುಬೇರಪ್ಪ ತಳವಾರ್, ಹರೀಶ್ ಗೌಡ, ಶಿವಮೊಗ್ಗದ ಭದ್ರಾವತಿ ಮೂಲದ ಇಂಜಿನಿಯರ್ ಜೆ. ರುದ್ರೇಶ್, ಮೈಸೂರಿನ ಮನೋಜ್ ಗೌಡ, ಮಂಡ್ಯದ ಸಂದೀಪ್ ಹಾಗೂ ಚಿತ್ರದುರ್ಗ ಮೂಲದ ಕೃಷ್ಣ ನಾಯ್ಕ ಬಂಧಿತ ಆರೋಪಿಗಳು. ಇಂಜಿನಿಯರ್ ರುದ್ರೇಶ್ ಕೊರೊನಾ ದಲ್ಲಿ ಕೆಲಸ ಕಳೆದುಕೊಂಡು ಕೆಲ ತಿಂಗಳು ಕೋಳಿ ಫಾರ್ಮ್ ಇಟ್ಟುಕೊಂಡಿದ್ದ. ವಿಶೇಷವಾಗಿ ಮೈಸೂರಿನಲ್ಲಿ ರಿಸರ್ವ್ ಬ್ಯಾಂಕಿನ ನೋಟು ಮುದ್ರಣ…
ಬಾಗಲಕೋಟೆ: ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಮಗ ಕೊಲೆ ಮಾಡಿಸಿದ್ದಾನೆ. ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ ಮಾಡಿಸಿದ ಮಗ. ಮಾಂತೇಶ್ ಮರಡಿಮಠ ಕೊಲೆ ಮಾಡಿದ ಆರೋಪಿ. ಚೆನ್ನಪ್ಪನ ಕುಟುಂಬ 37 ಎಕರೆ ಜಮೀನನ್ನು ಹೊಂದಿದ್ದರು. ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ದಿನಾಲೂ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪನನ್ನು ಕೊಲೆ ಮಾಡಲು ಯೋಚನೆ ರೂಪಿಸಿ, ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ ಮಾಂತೇಶ್ ಮರಡಿಮಠ ಎಂಬುವನಿಗೆ 3 ಲಕ್ಷ ರೂ. ನೀಡಿ ಚೆನ್ನಪ್ಪನನ್ನು ಕೊಲೆ ಮಾಡುವಂತೆ ಸುಫಾರಿ ನೀಡಿದ್ದಾರೆ. ಸುಫಾರಿ ಪಡೆದ ಮಾಂತೇಶ್ ಮರಡಿಮಠ ಜನವರಿ 25ರ ರಾತ್ರಿ ರಾಂಪುರ ಗ್ರಾಮದ ಬಳಿ ಚೆನ್ನಪ್ಪನನ್ನು ಮಚ್ಚಿನಿಂದ ಕೊಚ್ಚಿ, ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣದ…
ಮೈಸೂರು: ಗೃಹಿಣಿ ಒಬ್ಬರು ಪತಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. 35 ವರ್ಷದ ವಿಜಯಲಕ್ಷ್ಮೀ ಮೃತ ದುರ್ದೈವಿಯಾಗಿದ್ದಾರೆ. ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ ಕಾಲಿಟ್ಟು 12 ವರ್ಷಗಳಾಗಿದ್ದು, ಎರಡು ಮುದ್ದಾದ ಮಕ್ಕಳಿದ್ದಾರೆ. ಆದರೆ ವರದಕ್ಷಿಣೆಗಾಗಿ ಅತ್ತೆ, ಮಾವ, ಮೈದುನ ಮತ್ತು ಪತಿ ಯಾವಗಲೂ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್: ಜಿಲ್ಲೆಯ ವಿವಿಧೆಡೆ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸಕಾ೯ರಿ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದೇ ವೇಳೆ ಬಾಲ್ಯ ವಿವಾಹದ ಬಗ್ಗೆ ಅರಿವು ರೈತರ ಕುರಿತಂತೆ ನಾಟಕ ಪ್ರದರ್ಶಿಸಲಾಯಿತು. ಈ ಸಮಯದಲ್ಲಿ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ನವನಾಥ ವಡಗಾವೆ, ರೆಡ್ಡಿ ರವೀಂದ್ರ, ರಂಜನಾ ಗಾಯಕವಾಡ, ಜೀವನ ಬೇದ್ರೆ ಉಪಸ್ಥಿತರಿದ್ದರು. ಇನ್ನೂ ಬೀದರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಗೌರವ ನಮನ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವ ಆಚರಿಸಲಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್
ಜನಸಾಮಾನ್ಯರು ಮತ್ತು ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ನಗರದ 172 ಇಂದಿರಾ ಕ್ಯಾಂಟೀನ್ ಗಳಲ್ಲಿರುವ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸಮಿತಿ ಅಧ್ಯಕ್ಷರು ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚಿಸಿದ್ದಾರೆ. ತಮ್ಮ ವಲಯದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಪ್ರದೇಶಗಳನ್ನು ಗುರುತಿಸುವಂತೆ ವಲಯಗಳ ಆಯುಕ್ತರಿಗೆ ನಿರ್ದೇಶಿಸಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ 100 ಶೌಚಾಲಯ ನಿರ್ಮಿಸಲು ಶೀಘ್ರ ಟೆಂಡರ್ ಆಹ್ವಾನಿಸಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಅದಕ್ಕಾಗಿ 25 ಕೋಟಿ ರೂಪಾಯಿ ಅನುದಾನವನ್ನು 2024-25ನೇ ಬಜೆಟ್‌ನಲ್ಲಿ ಮೀಸಲಿಡಲು ಪ್ರಸ್ತಾವಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 246 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಈಗಾಗಲೇ ಟೆಂಡರ್ ಅಧಿಸೂಚನೆ ಹೊರಡಿಸಲಾಗಿದೆ. 46 ಒಡಿಎಫ್ ನಿರ್ಮಾಣಕ್ಕೆ ಖಾಸಗಿ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಸಾರ್ವಜನಿಕ ಶೌಚಾಲಯ ಕೊರತೆಯಿರುವ ವಿಚಾರವಾಗಿ ಲೆಟ್ಸ್ ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು, ಮುಖ್ಯ ನ್ಯಾಯಮೂರ್ತಿ ಪ್ರಸನ್ನ…