Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ತಿಪಟೂರು: ಕರ್ನಾಟಕ ಸೇರಿದಂತೆ ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಅದರಂತೆ ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ವಿವಿಧ ಶಾಲಾ-ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಇತರೆ ಚಟುವಟಿಕೆಗಳು ನಡೆದವು. ಈ ಬಾರಿಯ 75ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ಠಾಗೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಮತ್ತು ಠಾಗೂರ್ ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. “75ನೇ ಗಣರಾಜ್ಯೋತ್ಸವ ದಿನವನ್ನು ಅತ್ಯಂತ ಉತ್ಸಾಹ ಮತ್ತು ದೇಶಭಕ್ತಿಯ ಭಾವನೆಗಳಿಂದ ಆಚರಿಸಲಾಗುತ್ತದೆ. ಈ ಬಾರಿಯ ಪರೇಡ್ ನಲ್ಲಿ ನಮ್ಮ ಶಾಲೆಯ ಮಕ್ಕಳು ಭಾಗವಹಿಸಿ ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುವುದು ಇಡೀ ಶಾಲೆಗೆ ಹೆಮ್ಮೆ ಪಡುವ ವಿಷಯ. ಎಂದು ಠಾಗೂರ್ ವಿದ್ಯಾ ಸಂಸ್ಥೆಯ ಆಡಳಿತ ಕಾರ್ಯದರ್ಶಿಯಾದ ಶಶಿಕಲಾ ಆರ್ ಅನಿಲ್ ರವರು ತಿಳಿಸಿದರು.” “ನಮ್ಮ ಶಾಲೆಯ ಮಕ್ಕಳು ಪರೇಡ್ ಗೆ ಒಂದು ವಾರದ ಮುಂಚೆ ಅಭ್ಯಾಸದ ತಾಲಿಮು ನಡೆಸುತ್ತಿದ್ದರು. ಶಿಸ್ತಿನಿಂದ ಅಭ್ಯಾಸ ಮಾಡಿ ಇಂದು ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುವುದು ಶಾಲೆಗೆ ಹೆಮ್ಮೆಯ…
ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರದ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಬಂದಿದ್ದ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ರಾಜಸ್ಥಾನದ ರಸ್ತೆ ಬದಿಯ ಅಂಗಡಿಯಿಂದ ಚಹಾ ಸೇವಿಸಿದ್ದಾರೆ. ನಂತರ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಫೇಸ್ ಬುಕ್ ನಲ್ಲಿ ಯುಪಿಎ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ. ನರೇಂದ್ರ ಮೋದಿಜಿಯವರ ನಾಯಕತ್ವದಲ್ಲಿ ಭಾರತವು ವಿಶ್ವಗುರು ಎಂಬುದನ್ನು ಪ್ರತಿದಿನ ಸಾಬೀತುಪಡಿಸುತ್ತಿದೆ ಎಂದು ಕೆ ಸುರೇಂದ್ರನ್ ತಿಳಿಸಿದರು. ಹವಾ ಮಹಲ್ ಗೆ ಭೇಟಿ ನೀಡಿದ ಪ್ರಧಾನಿಯವರು ಫ್ರೆಂಚ್ ಅಧ್ಯಕ್ಷರಿಗೆ ರಾಮಮಂದಿರದ ಮಾದರಿಯನ್ನು ನೀಡಿದರು. ಕರಕುಶಲ ಮಾರುಕಟ್ಟೆಯಲ್ಲಿ ಪ್ರಧಾನ ಮಂತ್ರಿ ಮ್ಯಾಕ್ರನ್ ಯುಪಿಐ ವಹಿವಾಟುಗಳನ್ನು ವಿವರಿಸುವ ಮತ್ತು ಒಟ್ಟಿಗೆ ಚಹಾ ಸೇವಿಸುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಮ್ಯಾಕ್ರನ್ ಯುಪಿಐ ವಹಿವಾಟು ನಡೆಸುತ್ತಿರುವುದನ್ನು ತುಣುಕಿನಲ್ಲಿ ಕಾಣಬಹುದು. ನಿನ್ನೆ ಸಂಜೆ ಜೈಪುರಕ್ಕೆ ಆಗಮಿಸಿದ…
ಮುಂಬಯಿ: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಕ್ಲಿಪ್ ಗಳನ್ನು ಹಂಚಿಕೊಂಡ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಮುಂಬಯಿ ಪೊಲೀಸರು. ಮಕ್ಕಳ ಅಶ್ಲೀಲತೆಯ ಮೂರು ಪ್ರಕರಣಗಳಲ್ಲಿ ಫಿರೋಜ್ ಹವಾರಿಯಾ, ವಿಕ್ಕಿ ಡಿಜೆ, ನನ್ಹಕ್ ಕುಮಾರ್ ಸೇರಿ ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮಕ್ಕಳ ಅಶ್ಲೀಲ ವೀಡಿಯೊ ಕ್ಲಿಪ್ ಗಳನ್ನು ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಐಪಿ ವಿಳಾಸ, ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಮ್ ಖಾತೆ ಪ್ರೊಫೈಲ್, ಫೋನ್ ನಂಬರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತವು ಬ್ರಹ್ಮೋಸ್ ಕ್ಷಿಪಣಿಗಳನ್ನು ರಫ್ತು ಮಾಡಲಿದೆ ಮಾರ್ಚ್ ವೇಳೆಗೆ ಕ್ಷಿಪಣಿಗಳ ರಫ್ತು ಆರಂಭವಾಗಲಿದೆ ಎಂದು ಡಿಆರ್ ಡಿಒ ಅಧ್ಯಕ್ಷ ಸಮೀರ್ ಹೇಳಿದ್ದಾರೆ. ವಿ. ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಗಳಿಗಾಗಿ ವಿನ್ಯಾಸಗೊಳಿಸಲಾದ ಉಡಾವಣಾ ಸಾಮಗ್ರಿಗಳ ಸಾಗಣೆ ಹತ್ತು ದಿನಗಳಲ್ಲಿ ಪ್ರಾರಂಭವಾಗಲಿದೆ ಎಂದು ಕಾಮತ್ ಮಾಹಿತಿ ನೀಡಿದರು. ಸುಮಾರು 4.94 ಲಕ್ಷ ಕೋಟಿ ಮೌಲ್ಯದ ಡಿಆರ್ ಡಿಒ ಉತ್ಪನ್ನಗಳಿಗೆ ಜಾಗತಿಕ ಆರ್ಡರ್ ಗಳನ್ನು ಪಡೆದುಕೊಂಡಿದೆ ಎಂದು ಸಮೀರ್ ವಿ ಕಾಮತ್ ಹೇಳಿದರು.ದೇಶೀಯವಾಗಿ ಅಭಿವೃದ್ಧಿಪಡಿಸಿದ ಆಕಾಶ್ ಕ್ಷಿಪಣಿಗಳು ಮತ್ತು ಅರ್ಜುನ್ ಟ್ಯಾಂಕ್‌ಗಳು ಸೇರಿದಂತೆ ವಿವಿಧ ರಕ್ಷಣಾ ಸಾಧನಗಳ ರಫ್ತು ಎರಡು ವರ್ಷಗಳಲ್ಲಿ ಪ್ರಾರಂಭವಾಗಲಿದೆ. ಬ್ರಹ್ಮೋಸ್ ಮಧ್ಯಮ-ಶ್ರೇಣಿಯ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯಾಗಿದ್ದು, ಇದನ್ನು ಜಲಾಂತರ್ಗಾಮಿ ನೌಕೆಗಳು, ಹಡಗುಗಳು ಮತ್ತು ಯುದ್ಧ ವಿಮಾನಗಳಿಂದ ಉಡಾವಣೆ ಮಾಡಬಹುದಾಗಿದೆ. ಹಲವು ದೇಶಗಳು ಇದನ್ನು ಖರೀದಿಸಲು ಆಸಕ್ತಿಯನ್ನು ವ್ಯಕ್ತಪಡಿಸಿವೆ. ತನ್ನ ಸ್ವಂತ ಅಗತ್ಯಗಳಿಗಾಗಿಯೂ ಆಮದು ಮಾಡಿಕೊಳ್ಳುತ್ತಿದ್ದ ಭಾರತದ ರಕ್ಷಣಾ ವಲಯಕ್ಕೆ ಇದು ದೊಡ್ಡ ಜಿಗಿತವಾಗಿದೆ ಎಂದು ಅವರು ತಿಳಿಸಿದರು.
ಕಾಡಿನಲ್ಲಿ ಆನೆಗಳಿಗೆ ಮೇವು ಹಾಗೂ ನೀರು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ ಎಂದು ಹೇಳಿದರು. ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ಮೀಸಲಿಡಲಾಗಿದೆ. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ – ಮಾನವ ಸಂಘರ್ಷ ನಿಲ್ಲಲಿದೆ ಎಂದರು.
ಮೊದಲ ಜನಸ್ಪಂದನಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ತರುವಾಯ ಮತ್ತೊಮ್ಮೆ ಜನರ ಬಳಿಗೆ ಸರ್ಕಾರವನ್ನು ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ನೇತೃತ್ವದಲ್ಲಿ ಫೆಬ್ರವರಿ 8ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ನಿಮ್ಮ ಅಹವಾಲುಗಳೊಂದಿಗೆ ಬನ್ನಿ, ನಾವು ಅವುಗಳನ್ನು ಆಲಿಸಿ, ಪರಿಹರಿಸುತ್ತೇವೆ ಎಂದಿದ್ದಾರೆ.
ಅಸ್ಸಾಂ: ಅಸ್ಸಾಂನ ಗೋಲಾಘಾಟ್ ಮತ್ತು ನಾಗಾನ್ ಜಿಲ್ಲೆಗಳ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಚಿನ್ನದ ಬಣ್ಣದ ಹುಲಿ ಕಾಣಿಸಿಕೊಂಡಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ ದಲ್ಲಿ ಚಿನ್ನದ ಬಣ್ಣದ ನಾಲ್ಕು ಹುಲಿಗಳಿವೆ. ಆದರೆ, ಇವು ಕಾಣಸಿಗುವುದು ಭಾರೀ ಅಪರೂಪ ಎನ್ನಲಾಗಿದೆ. ಈ ಹುಲಿಯ ಮೊದಲ ಫೋಟೋ 2020 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇತ್ತೀಚೆಗೆ ಚಿನ್ನದ ಬಣ್ಣದ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅವುಗಳನ್ನು ಅಳಿವಿನಂಚಿನಲ್ಲಿರುವ ಹುಲಿಗಳ ಜಾತಿಯೆಂದು ಪರಿಗಣಿಸಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ‘X’ಖಾತೆಯಲ್ಲಿ ಅಪರೂಪದ ಚಿನ್ನದ ಬಣ್ಣದ ಫೋಟೋ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್. ವಡ್ಡಹಳ್ಳಿಯ ಹೆದ್ದಾರಿಯಲ್ಲೇ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಕಾರಿನಲ್ಲಿದ್ದ ಒಂದು ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಮಹೇಶ್ ಎಂಬುವವರಿಗೆ ಸೇರಿದ ಕಾರು, ತಾಂತ್ರಿಕ ದೋಷದಿಂದ ಹೊತ್ತಿ ಉರಿದಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ನಂಗಲಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಮುಸ್ಲಿಮರ ಓಲೈಕೆ ಹಾಗೂ ಹಿಂದೂಗಳ ಕಡೆಗಣನೆಯನ್ನು ನೋಡಿ ಅವರಿಗೆ ಉಸಿರುಗಟ್ಟುವ ವಾತಾವರಣ ಉಂಟಾಗಿತ್ತು ಎಂದರು. ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮೊದಲಾದ ಕಾರಣಗಳಿಂದ ಇನ್ನಷ್ಟು ನಾಯಕರು ಬಿಜೆಪಿ ಕಡೆ ಬರಲಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನೇನಿದ್ದರೂ ‘ಕಾಂಗ್ರೆಸ್ ಚೋಡೊ’ ಎಂಬ ಘೋಷಣೆ ಕೇಳಿ ಬರಲಿದೆ. ಆಮ್ ಆದ್ಮಿ ಪಕ್ಷ, ಮಮತಾ ಬ್ಯಾನರ್ಜಿಯವರ ಪಕ್ಷ ಕಾಂಗ್ರೆಸ್ ನಾಲಾಯಕ್ ಎಂದು ಓಡಿಸಿದೆ. ಕಾಂಗ್ರೆಸ್ ಪಕ್ಷವನ್ನು ದೆಹಲಿಯಿಂದಲೂ ಹೊರಗೆ ಹಾಕಲಾಗುತ್ತದೆ ಎಂದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ತುಮಕೂರು ಕ್ಷೇತ್ರದಿಂದ ನನ್ನ ಹೆಸರು ಅಂತಿಮವಾಗಿದೆ ಎಂಬ ಮಾಹಿತಿ ನನಗೆ ಸಿಕ್ಕಿದೆ. ಒಂದು ಹೈಕಮಾಂಡ್ ನಾಯಕರು ನನಗೆ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯಲು ಸೂಚನೆ ಕೊಟ್ಟರೇ, ನಾನು ಸ್ಪರ್ಧೆಗೆ ರೆಡಿ ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಮಾಧ್ಯಮದವರು ಚುನಾವಣೆಯಲ್ಲಿನ ಸ್ಪರ್ಧೆ ಬಗ್ಗೆ ಕೇಳುತ್ತಿದ್ರು. ತುಮಕೂರಿಗೆ ನನ್ನ ಹೆಸರು ಅಂತಿಮವಾಗಿದೆ. ನಾಯಕರು ಸೂಚನೆ ಕೊಟ್ರೆ ಸ್ಪರ್ಧೆ ಎಂದಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದು ನನಗೆ ಅತೀವ ಸಂತಸ ತಂದಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ. ಜಗದೀಶ್ ಶೆಟ್ಟರ್ ರಾಜಕಾರಣಿ ಎನ್ನುವುದಕ್ಕಿಂತ ನನಗೆ ಒಳ್ಳೆಯ ಸ್ನೇಹಿತ. ಅವರು ಪಕ್ಷಕ್ಕೆ ಬಂದಿರುವುದು ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಮುಂದೆ ಎದುರಾಗಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಆಯ್ಕೆಯಾಗಿ ಬಂದು ಮೂರನೇ ಬಾರಿಗೆ ದೇಶದ ಪ್ರಧಾನಿ ಆಗಬೇಕೆಂದು ಸೋಮಣ್ಣ ಆಶಿಸಿದ್ದಾರೆ.