Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ದಾವಣಗೆರೆ: ಪ್ರಿಯತಮೆಗಾಗಿ ಪತ್ನಿಯನ್ನೇ ಕೊಂದು ಕೆರೆಗೆಸೆದ ಘಟನೆ ದಾವಣಗೆರೆ ತಾಲ್ಲೂಕಿನ ಕೊಡಗನೂರು ಕೆರೆಯಲ್ಲಿ ನಡೆದಿದೆ. ಕಾವ್ಯ ಕೊಲೆಯಾಗಿರುವ ಗೃಹಿಣಿಯಾಗಿದ್ದು, ಪತಿ ಸಚಿನ್ ಆರೋಪಿಯಾಗಿದ್ದಾನೆ. ಕಳೆದ ಐದು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ, ಮುದ್ದಾದ ಒಂದು ಮಗು ಕೂಡ ಇತ್ತು. ಆದರೆ, ಬೇರೆ ಮಹಿಳೆಯರ ಚಟ ಹೊಂದಿದ್ದ ಸಚಿನ್ ದಾವಣಗೆರೆ ತಾಲ್ಲೂಕಿನ ಕಡ್ಲೆಬಾಳು ಗ್ರಾಮದ ನಿವಾಸಿ ಚೈತ್ರ ಎಂಬಾಕೆಯನ್ನು ಪ್ರೀತಿಸಿ, ಆಕೆಯನ್ನು ಕೂಡ ಎರಡನೇ ಮದುವೆಯಾಗಿದ್ದ ಎಂದು ಹೇಳಲಾಗುತ್ತಿದೆ. ಇನ್ನು ಇವರಿಬ್ಬರ ಸಂಬಂಧಕ್ಕೆ ಮೊದಲನೇ ಪತ್ನಿಯಾದ ಕಾವ್ಯ ಅಡ್ಡಿಯಾದ ಕಾರಣದಿಂದಾಗಿ, ಆಕೆಯನ್ನು ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ತುಂಬಿಕೊಂಡು ದಾವಣಗೆರೆ ತಾಲ್ಲೂಕಿನ ಕೊಡಗನೂರು ಕೆರೆಗೆ ತಂದು ಹಾಕಿದ್ದಾರೆ ಎನ್ನಲಾಗಿದೆ. ಇತ್ತ ಕಾವ್ಯ ಕಾಣದೇ ಇರುವುದರಿಂದ ಅವರ ತವರು ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಅನುಮಾನಗೊಂಡ ಪೊಲೀಸರು ಗಂಡ ಸಚಿನ್ ನನ್ನು ಪೊಲೀಸ್ ಭಾಷೆಯಲ್ಲಿ ವಿಚಾರಿಸಿದಾಗ ಗಂಡ ಬಾಯ್ಬಿಟ್ಟಿದ್ದಾರೆ. ಸಚಿನ್ ಹಾಗೂ ಚೈತ್ರ ಸೇರಿಕೊಂಡು ಕಾವ್ಯಾಳ ಕತೆ ಮುಗಿಸಿ ಮೃತದೇಹ ಕೆರೆಗೆ ಎಸೆದಿದ್ದಾರೆ.
ಬೆಂಗಳೂರು: ಡೇ ಕೇರ್ ಸೆಂಟರ್ ನ 3ನೇ ಮಹಡಿಯಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಕೇರಳ ಮೂಲದ ಟೆಕ್ಕಿ ದಂಪತಿಯ ಪುತ್ರಿ ಜಿನಾ ಮೃತ ಮಗು. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಜನವರಿ 22 ರ ಮಧ್ಯಾಹ್ನ ಖಾಸಗಿ ಫ್ರೀ ಸ್ಕೂಲ್ ಮೂರನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ‘ವಾಸ್ತವಾಂಶ ಮರೆಮಾಡಿ, ಸರಿಯಾದ ಮಾಹಿತಿ ನೀಡದೆ, ನಿರ್ಲಕ್ಷ್ಯ ವಹಿಸಿರುವ ಫ್ರೀ ಸ್ಕೂಲ್ ವಿರುದ್ದ ಮಗುವಿನ ತಂದೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬೀದರ್: ಸ್ಕಾರ್ಪಿಯೋ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೀದರ್ – ಔರಾದ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಧರಿ ಹನುಮಾನ್ ದೇವಾಸ್ಥಾನದ ಬಳಿ ಗುರುವಾರ ಸಂಜೆ ನಡೆದಿದೆ. ಔರಾದ ತಾಲೂಕಿನ ಧುಪತಮಹಾಗಾಂವ ಗ್ರಾಮದ ಸುಖದೇವ್ (38) ಹಾಗೂ ಲಾಧಾ ಗ್ರಾಮದ ಸಿದ್ದು ಮುಚಳಂಬೆ (40) ಮೃತಪಟ್ಟವರು. ಸಾವನ್ನಪ್ಪಿದ ಇಬ್ಬರೂ ಜೆಸ್ಕಾಂ ಇಲಾಖೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ವಹಿಸಿ ಗ್ರಾಮದಿಂದ ಸಂತಪೂರ ಜೆಸ್ಕಾಂ ಇಲಾಖೆ ಕಛೇರಿಗೆ ತೆರಳುವ ವೇಳೆ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಕಾರ್ಪಿಯೋ ಹಾಗೂ ಇಂಡಿಕಾ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರರು ಇಬ್ಬರು ಈ ಅಪಘಾತದಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಸ್ಥಳಕ್ಕೆ ಔರಾದ ಸಿಪಿಐ ರಘುವೀರ್ ಸಿಂಗ್ ಠಾಕೂರ್ ಹಾಗೂ ಪಿಇಎಸ್ ಮೆಹಬೂಬ್ ಅಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ:…
ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಹೋಬಾದಲ್ಲಿ ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ, ಚಿನ್ನಾಭರಣ ದೋಚಿ ಹಣ ತುಂಬಿದ್ದ ಬ್ಯಾಗ್ ನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ರಕ್ತಸಿಕ್ತವಾಗಿದ್ದ ವ್ಯಾಪಾರಿಯನ್ನು ಕುಟುಂಬದವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದು ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್ಪಿ ಅಪರ್ಣಾ ಗುಪ್ತ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ಜ್ಯುವೆಲರಿ ಮಾಲೀಕನಿಗಾಗಿ ಹೊಂಚು ಹಾಕಿ ಕುಳಿತಿದ್ದರು. ಈ ಘಟನೆಯಲ್ಲಿ ಅಲಿಪುರ ನಿವಾಸಿ ದೂಳಿಚಂದ್ರ ಎಂಬುವವರ ಪುತ್ರ ಅಜಯ್ ಕಾಂತ್ ಗೆ ಗಂಭೀರ ಗಾಯಗಳಾಗಿವೆ.
ರೆಬೆಲ್ ಸ್ಟಾರ್ ಅಂಬರೀಶ್ ಇಂದು ಈ ಭೂಮಿಯ ಮೇಲೆ ಇಲ್ಲ. ಆದ್ರೆ, ಅಂಬರೀಶ್ ನನಗೂ ಕೆಲ ಜವಾಬ್ದಾರಿಗಳನ್ನು ಬಿಟ್ಟು ಹೋಗಿದ್ದಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಅಂಬರೀಶ್ ಸಿನಿಮಾರಂಗ ಹಾಗೂ ರಾಜಕೀಯ ರಂಗ ಎರಡಲ್ಲೂ ಸಕ್ರಿಯರಾಗಿ ಸೇವೆ ಸಲ್ಲಿಸಿದವರು. ಅವರು ನನಗೂ ಕೆಲ ಜವಾಬ್ದಾರಿಗಳನ್ನು ಬಿಟ್ಟು ಹೋಗಿದ್ದಾರೆ. ಅದನ್ನು ನಿಭಾಯಿಸಲೇಬೇಕು. ನಾನು ಮಂಡ್ಯ ಬಿಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ನಾಲ್ಕು ಮುಕ್ಕಾಲು ವರ್ಷಗಳಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೇ ರಾಜಕಾರಣ ಮಾಡಿಕೊಂಡ ಬಂದಿರುವ ಸಂಸದೆ ನಾನು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಕಳೆದ ನಾಲ್ಕು ಮುಕ್ಕಾಲು ವರ್ಷಗಳ ನನ್ನ ಟ್ರ್ಯಾಕ್ ರೆಕಾರ್ಡ್ ತೆಗೆದು ನೋಡಿ. ಒಂದೇ ಒಂದು ಕಪ್ಪುಚುಕ್ಕೆ ಇಲ್ಲ. ಈ ನಿಟ್ಟಿನಲ್ಲಿ ನನಗೆ ಮಂಡ್ಯ ಕ್ಷೇತ್ರದ ಟಿಕೆಟ್ ಸಿಗುವ ನಿರೀಕ್ಷೆಯಿದೆ ಎಂದಿದ್ದಾರೆ. ಲೋಕಸಭೆ ಚುನಾವಣೆಗೆ ದಳ – ಕಮಲ ಪಕ್ಷಗಳು ಜಂಟಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು,…
ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. ಸಿಎಂಗೆ ತಮ್ಮ ಕೆ.ಪಿ.ಎಸ್.ಸಿ. ಆರ್ಡರ್ ವಿಳಂಬದ ಬಗ್ಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಪೊಲೀಸರು ಪರಶುರಾಮ್ ರನ್ನು ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗದಂತೆ ತಡೆದರು. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ರನ್ನು ಭೇಟಿ ಮಾಡಲು, ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲೇ ಏಕಾಏಕಿ ನುಗ್ಗಲು ಯತ್ನಿಸಿದ್ದಾರೆ. ಗಣರಾಜ್ಯೋತ್ಸವ ಪರೇಡ್ ಮಧ್ಯೆದಲ್ಲಿ ಮನವಿ ಪತ್ರ ಪ್ರದರ್ಶಿಸಿದ್ದಾರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನ ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಲಾಗಿದೆ.
ಬೆಂಗಳೂರು: ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ತಂದೆಯೇ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ ನ ಮನೆಯೊಂದರಲ್ಲಿ ಸುರೇಶ್ ಎಂಬವರು ಮಗ ನರ್ತನ್ ಬೋಪಣ್ಣ(32) ಅವರನ್ನು ಕೊಲೆ ಮಾಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮನೆಗೆ ತೆರಳಿದಾಗ, ನರ್ತನ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಎನ್ನಲಾಗಿದೆ. ಜೀವನ್ಮರಣ ಸ್ಥಿತಿಯಲ್ಲಿದ್ದ ನರ್ತನ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದಾ ಕಾಲ ಕುಡಿತದ ಗುಂಗಿನಲ್ಲೇ ಇರುತ್ತಿದ್ದ ಸುರೇಶ್ ಕುಡಿಯಲು ಹಣ ಬೇಕು ಎಂದು ಮಗನನ್ನು ಪೀಡಿಸುತ್ತಿದ್ದರು ಎನ್ನಲಾಗಿದೆ. ಕುಡಿಯಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ತಂದೆ ಮಗನನ್ನು ಕೊಂದಿದ್ದಾರೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮವಾಗಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು. ದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಪುಷ್ಪ ಗುಚ್ಛ ಇರಿಸಿ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾಧಿಕಾರಿಗಳು ಸಾಥ್ ನೀಡಿದರು.
ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ ಭವತಾರಿಣಿ ಹಠಾತ್ ನಿಧನರಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ಅವರ ಮೃತದೇಹವನ್ನು ಚೆನ್ನೈನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದೆಂದು ಹೇಳಲಾಗುತ್ತಿದೆ. ಅವರ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಎಂಡಿ ವಿ ಅನ್ನುಕುಮಾರ್ ಧ್ವಜಾರೋಹಣವನ್ನು ನೆರವೇರಿಸಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ರಾಷ್ಟ್ರೀಯ ಹಬ್ಬಗಳಲ್ಲಿ ಸಿಬ್ಬಂದಿಗಳು ಪಾಲ್ಗೊಂಡು, ರಾಷ್ಟ್ರ ನಿರ್ಮಾಣದಲ್ಲಿ ತಮ್ಮೆಲ್ಲ ವನ್ನು ಸಮರ್ಪಿಸಿದ ಮಹಾನ್ ಚೇತನಗಳ ಕಾರ್ಯ, ತ್ಯಾಗ, ನಿಸ್ವಾರ್ಥಸೇವೆಯನ್ನು ಸ್ಮರಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಏಳು ವರ್ಷಗಳ ಅಪಘಾತ ರಹಿತ ಸೇವೆ ಸಲ್ಲಿಸಿರುವ ಚಾಲಕರಿಗೆ ಬೆಳ್ಳಿ ಪದಕ ಪ್ರಧಾನ ಮಾಡಿ ರೂ 2,000 ಗಳ ನಗದು ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದಲ್ಲಿ, ಡಾ.ಕೆ. ನಂದಿನಿ ದೇವಿ ಭಾ ಆ ಸೇ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ), ಆಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.