Author: admin

ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಅರೆಸ್ಟ್ ಮಾಡಲಾಗಿದ್ದು, ಎಸ್ ಐಟಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಇನ್ಸ್ ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್‌ ನನ್ನು ಎಸ್ ‌ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದ. ಲಕ್ಷ್ಮೀಕಾಂತ್ ಇನ್ಸ್ ಪೆಕ್ಟರ್, ಶ್ರೀಧರ್ ಪೂಜಾರಿ ಡಿವೈಎಸ್‌ ಪಿ, ಚಂದ್ರಾದರ ಇನ್ಸ್ ಪೆಕ್ಟರ್ ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರ್ ಆಗುವಂತೆ ಸೂಚನೆ ನೀಡಲಾಗಿದೆ.

Read More

ಬೆಂಗಳೂರು: ನಾಳೆ 75 ನೇ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಸಿದ್ಧವಾಗಿದೆ. ಇನ್ನೂ ಗಣರಾಜ್ಯೋತ್ಸವ ಕಾರ್ಯಕ್ರಮದ ಹಿನ್ನೆಲೆ ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಸೆಂಟ್ರಲ್ ಸ್ಟ್ರೀಟ್ -ಅನಿಲ್ ಕುಂಬ್ಳೆ ರಸ್ತೆಯಿಂದ ಶಿವಾಜಿನಗರ ಬಸ್‌ ನಿಲ್ದಾಣದವರೆಗೂ, ಕಬ್ಬನ್ ರಸ್ತೆ-ಸಿಟಿ ಓ ವೃತ್ತದಿಂದ ಕೆ. ಆ‌ರ್. ರಸ್ತೆ ಮತ್ತು ಕಬ್ಬನ್ ಜಂಕ್ಷನ್‌ವರೆಗೆ, ಎಂಜಿ ರೋಡ್ -ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದವರೆಗೆ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಈ ಬಗ್ಗೆ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು ಕೆಲವೊಂದು ರಸ್ತೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಮಾಡಿದ್ದಾರೆ. ಇನ್ ಫಾಂಟ್ರಿ ರಸ್ತೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಆಗಿದೆ. ಮಣಿಪಾಲ್ ಸೆಂಟರ್ ಗೆ ತೆರಳುವ ವಾಹನಗಳು ಕಬ್ಬನ್ ರಸ್ತೆ ಮೂಲಕ ತೆರಳಬೇಕು. ಕಬ್ಬನ್ ರಸ್ತೆ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿಆ‌ರ್ ವಿ ಜಂಕ್ಷನ್ ಕಡೆ ಸಂಚಾರವನ್ನ ನಿರ್ಬಂಧ ಮಾಡಲಾಗಿದೆ. ಅನಿಲ್ ಕುಂಬ್ಳೆ ವೃತ್ತದಿಂದ ಕಬ್ಬನ್‌ ರಸ್ತೆಗೆ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

Read More

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 25 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ 139 ಚಾಲಕರಿಗೆ ಪದೋನ್ನತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, 25 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿದ 139 ಚಾಲಕರು ಹಿರಿಯ ಚಾಲಕ ಹುದ್ದೆಗೆ ಪದೋನ್ನತಿ ಹೊಂದಿದ್ದು ಸಾಂಕೇತಿಕವಾಗಿ 13 ಚಾಲಕರಿಗೆ ಪದೋನ್ನತಿ ಆದೇಶವನ್ನು ವಿತರಿಸಲಾಯಿತು ಎಂದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 1122 ಅರ್ಹ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕವನ್ನು ವಿತರಿಸಲಾಯಿತು. ಬೆಂಗಳೂರಿನಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ 1122 ಅರ್ಹ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಬಿಎಂಟಿಸಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ದಾವಣಗೆರೆ:  ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿಸಿ ಕೆರೆಗೆ ಎಸೆದ ಘಟನೆ ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದ ಬಳಿ ನಡೆದಿದೆ. ಕಾವ್ಯ(21) ಕೊಲೆಯಾದ ಮಹಿಳೆ‌ಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಳಗೆರೆ ಗ್ರಾಮದ ನಿವಾಸಿ ಸಚಿನ್ (24) ಕೊಲೆ ಮಾಡಿದ ಪತಿಯಾಗಿದ್ದಾನೆ. ದಾವಣಗೆರೆ ತಾಲೂಕಿನ ಕಡ್ಲೆಬಾಳು ಗ್ರಾಮದ ಚೈತ್ರ (21) ಎನ್ನುವ ಯುವತಿ ಜೊತೆ ಸಂಬಂಧ ಇಟ್ಟುಕೊಂಡು ಕಾವ್ಯಾಳನ್ನು ಮದುವೆಯಾಗಿದ್ದನು. ಅಕ್ರಮ ಸಂಬಂಧಕ್ಕೆ ಕಾವ್ಯಾ ಅಡ್ಡಿಯಾಗುತ್ತಿದ್ದಾಳೆ ಎಂದು ಸಚಿನ್ ಮತ್ತು ಚೈತ್ರಾ ಸೇರಿಕೊಂಡು ಕಾವ್ಯಾಳನ್ನು ಕೊಲೆ ಮಾಡಿದ್ದಾರೆ. ಬಳಿಕ ಗೋಣಿ ಚೀಲದಲ್ಲಿ ಕಾವ್ಯಾಳ ಮೃತದೇಹವನ್ನು ತುಂಬಿಸಿ ಕೊಡಗನೂರು ಕೆರೆಗೆ ಹಾಕಿದ್ದರು. 10 ದಿನಗಳ ಹಿಂದೆ ನಡೆದ ಈ ಕೊಲೆ ಪ್ರಕರಣ ಇದೀಗ ಬಯಲಿಗೆ ಬಂದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.

Read More

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸೇತುವೆಗೆ ಕಾರು ಡಿಕ್ಕಿಯಾದ ಪರಿಣಾಮ ಮೂರು ಸಣ್ಣ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಸಿಂಧುಶ್ರೀ(2 ವರ್ಷ), ಹಯ್ಯಾಳಪ್ಪ (5 ತಿಂಗಳ), ರಕ್ಷಾ (3 ತಿಂಗಳ ) ಹಾಗೂ ಲಿಂಗಪ್ಪ (26) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನುಳಿದ ಯಲ್ಲಮ್ಮ (30), ಮಲ್ಲಮ್ಮ (20), ನಾಗಪ್ಪ(35) ಅವರಿಗೆ ಗಂಭೀರ ಗಾಯಗಳಾಗಿದ್ದು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಂಕ್ರಾಂತಿ ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿಗೆ ಹೋಗಿದ್ದ ಕುಟುಂಬವು ಕಳೆದ ರಾತ್ರಿ ನಗರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿದ್ದ ಕಾರು ಓಡಿಸುತ್ತಿದ್ದ ಲಿಂಗಪ್ಪ ಸಾಣೆಕೆರೆ ಬಳಿ ನಿಯಂತ್ರಣ ಕಳೆದುಕೊಂಡ ಕಾರಣ ವಾಹನ ಸೇತುವೆಗೆ ಭಾರೀ ವೇಗದಲ್ಲಿ ಅಪ್ಪಳಿಸಿದೆ. ಸಂಕ್ರಾಂತಿ ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿಗೆ ಹೋಗಿದ್ದ ಕುಟುಂಬವು ಕಳೆದ ರಾತ್ರಿ ನಗರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ನಿದ್ದೆ ಮಂಪರಿನಲ್ಲಿದ್ದ ಕಾರು ಓಡಿಸುತ್ತಿದ್ದ ಲಿಂಗಪ್ಪ ಸಾಣೆಕೆರೆ ಬಳಿ ನಿಯಂತ್ರಣ ಕಳೆದುಕೊಂಡ ಕಾರಣ ವಾಹನ ಸೇತುವೆಗೆ…

Read More

ಹೈದರಾಬಾದ್: ಅನ್ಯಕೋಮಿನ ವ್ಯಕ್ತಿಯೊಬ್ಬ ಕೇಸರಿ ಧ್ವಜವನ್ನು ಅವಮಾನಿಸುವ ರೀಲ್ ಅಪ್ ಲೋಡ್ ಮಾಡಿದ ಘಟನೆ ನಡೆದಿದೆ. ರೀಲ್ ನಲ್ಲಿ ಯುವಕ ಕೇಸರಿ ಧ್ವಜವನ್ನು ಹಿಡಿದಿದ್ದು ಅದರ ಮೇಲೆ ಹಿಂದೂ ಧಾರ್ಮಿಕ ಚಿಹ್ನೆ ‘ಓಂ’ ಎಂದು ಬರೆಯಲಾಗಿದೆ. ರೀಲ್ಸ್ ಕಂಡು ಕೋಪಗೊಂಡ ಜನರು ಮೇದಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅವರನ್ನು ಕಂಡು ಥಳಿಸಿ ವೀಡಿಯೊ ಮಾಡಿದ್ದಾರೆ. ವೀಡಿಯೋದಲ್ಲಿ ಗುಂಪು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಾ ಮುಸ್ಲಿಂ ಯುವಕನನ್ನು ಥಳಿಸಿ, ಆತನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಯ ವಿರುದ್ಧ ಗ್ರಾಮಸ್ಥರು ದೂರು ದಾಖಲಿಸಿದ್ದರೆ, ಇತ್ತ ಹಲ್ಲೆಗೊಳಗಾದ ಯುವಕನೂ ಹಲ್ಲೆ ನಡೆಸಿದ ಗ್ರಾಮಸ್ಥರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾನೆ.

Read More

ಮಂಡ್ಯ: ಮೇಲುಕೋಟೆ ಶಿಕ್ಷಕಿ ‘ದೀಪಿಕಾ’ ಹತ್ಯೆ ಬೆನ್ನಲ್ಲೇ ಮಂಡ್ಯದಲ್ಲಿ ಮತ್ತೊಂದು ಭೀಕರ ಕೃತ್ಯ ನಡೆದಿದ್ದು, ಮಂಡ್ಯದ ಕಲ್ಲಹಳ್ಳಿ ಸಮೀಪದ ರೈಲ್ವೇ ಗೇಟ್ ಬಳಿಯ ಮೋರಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಮಂಡ್ಯದ ಸೆಂಟ್ರಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇವಲ 2 ದಿನದ ಅಂತರದಲ್ಲಿ ಇಬ್ಬರು ಮಹಿಳೆಯರ ಕೊಲೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ.

Read More

ಉತ್ತರಾಖಂಡ: ಹರಿದ್ವಾರದ ಹರ್ ಕಿ ಪೌರಿಯಲ್ಲಿ ಮೂಢನಂಬಿಕೆಗೆ ಅಪ್ರಾಪ್ತ ಏಳು ವರ್ಷದ ಬಾಲಕ ಬಲಿಯಾದ ಘಟನೆ ನಡೆದಿದೆ. ಗಂಗಾ ನದಿಯಲ್ಲಿ ಮುಳುಗಿಸುವುದರಿಂದ ಮಗು ರಕ್ತದ ಕ್ಯಾನ್ಸರ್ ನಿಂದ ಗುಣಮುಖವಾಗಲಿದ್ದಾನೆ ಎಂದು ಪವಾಡದ ನಿರೀಕ್ಷೆಯಲ್ಲಿ ಆತನ ಚಿಕ್ಕಮ್ಮ ಸುಧಾ ಸುಮಾರು ಐದು ನಿಮಿಷಗಳ ಕಾಲ ಗಂಗಾ ನದಿಯಲ್ಲಿ ಮುಳುಗಿಸಿದ್ದಾರೆ. ಅವರು ಮಗುವನ್ನು ಗಂಗಾ ನದಿಯಲ್ಲಿ ಮುಳುಗಿಸಿದಾಗ, ಸುತ್ತಮುತ್ತಲಿನ ಸ್ಥಳೀಯರಿಗೆ ಅನುಮಾನವಾಯಿತು. ಗಲಾಟೆ ಮಾಡಿ ಮಗುವನ್ನು ರಕ್ಷಿಸಲು ಯತ್ನಿಸಿದರು. ಆದರೆ, ಅಷ್ಟರಲ್ಲೇ ಮಗುವಿನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಮಗುವಿನ ಶವದ ಎದುರು ಕುಳಿತ ಮಹಿಳೆಯೋರ್ವಳು ವಿಕಾರವಾಗಿ ನಗುತ್ತ, ಮಗು ಜೀವಂತವಾಗಿ ಬರುತ್ತದೆ ಎಂದು ಜನರಿಗೆ ಹೇಳುತ್ತಿರುವುದು ವಿಡಿಯೋದಲ್ಲಿದೆ. ಇವಳು ಮಾನಸಿಕ ಅಸ್ವಸ್ಥಳಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಒಂದು ಲಾರಿಗೆ ಹೆದ್ದಾರಿಯಲ್ಲಿಯೇ ಬೆಂಕಿ ಹೊತ್ತಿಕೊಂಡರೆ, ಇನ್ನೊಂದು ಲಾರಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ. ಇನ್ನು ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಗೆ ದಾಖಲಿಸಲಾಗಿದೆ.

Read More

ಬೆಂಗಳೂರು: ಡಿವೈಡರ್ ಮೇಲೆ ಹಾರಿ ಮುಂದೆ ಬರುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಅಪಘಾತಕ್ಕೊಳಗಾದ ಬೈಕ್ ಚಾಲಕನ ಮುಖ ಹಾಗೂ ದೇಹದ ಕೆಲ ಭಾಗಗಳಲ್ಲಿ ರಕ್ತಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಲಾರಿಯ ವೇಗದ ಚಾಲನೆ ನಡುವೆ ಮುಂದೆ ಬರುತಿದ್ದ ಎರಡು ಕಾರುಗಳು ಅಪಘಾತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿವೆ. ಕುಡಿದು ಲಾರಿ ಚಲಾಯಿಸಿ ಅಪಘಾತ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತವಾದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರಿ ಠಾಣಾ ಪೊಲೀಸರು, ಲಾರಿ ವಶಕ್ಕೆ ಪಡೆದು ಚಾಲಕನ ಮಾಹಿತಿ ಕಲೆಹಾಕುತ್ತಿದ್ದಾರೆ.

Read More