Subscribe to Updates
Get the latest creative news from FooBar about art, design and business.
- ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
- ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
- ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
- ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
- ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ 14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
- ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ವಾಜಪೇಯಿ ಅವರ 101ನೇ ಜಯಂತಿ: ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ: ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
- “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
Author: admin
ಬೆಂಗಳೂರು: ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟೀಕಿಸಿದ್ದಾರೆ. ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ನಮ್ಮ ಆರ್ಥಿಕತೆಯನ್ನು ‘ಸತ್ತಿದೆ’ ಎಂದು ಹೇಳಲು ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿಯಾಗಿರಬೇಕು ಎಂದು ದೇವೇಗೌಡರು ಹರಿಹಾಯ್ದಿದ್ದಾರೆ. ನಾನು ಕೂಡ ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಧಾರ ರಹಿತ ಮತ್ತು ಕೋಪದ ಹೇಳಿಕೆಗಳಿಂದ ಆಶ್ಚರ್ಯಚಕಿತನಾಗಿದ್ದೇನೆ. ಆಧುನಿಕ ಇತಿಹಾಸದಲ್ಲಿ ಇಷ್ಟೊಂದು ಅಸ್ಥಿರ, ಅನಾಗರಿಕ ಮತ್ತು ಬೇಜವಾಬ್ದಾರಿಯುತ ರಾಷ್ಟ್ರಮುಖ್ಯಸ್ಥರನ್ನು ನಾನು ಕಂಡಿಲ್ಲ ಎಂದು ಹೇಳಿದ್ದಾರೆ. ಟ್ರಂಪ್ ಭಾರತದೊಂದಿಗೆ ಮಾತ್ರವಲ್ಲ, ಜಗತ್ತಿನಾದ್ಯಂತ ಪ್ರತೀ ದೇಶದೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ತಮ್ಮ ದೀರ್ಘಕಾಲದ ಮಿತ್ರರಾಷ್ಟ್ರಗಳನ್ನು ಬಿಟ್ಟಿಲ್ಲ. ಅವರಲ್ಲಿ ಮೂಲಭೂತವಾಗಿ ಏನೋ ಸಮಸ್ಯೆ ಇದೆ. ರಾಜತಾಂತ್ರಿಕತೆ ಅಥವಾ ರಾಜಕೀಯದ ಮೂಲಕ ಅದನ್ನು ಪತ್ತೆ ಹಚ್ಚಲು ಅಥವಾ ಪರಿಹರಿಸಲು ಸಾಧ್ಯವಿಲ್ಲ. ಅವರ ಕೋಪದ ಸ್ವಭಾವದ ಬಗ್ಗೆ ಇದಕ್ಕಿಂತ ಹೆಚ್ಚಿಗೆ ಹೇಳುವುದು…
ಮಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ದೂರುದಾರ ಗುರುತಿಸಿದ 9ನೇ ಸ್ಥಳದಲ್ಲಿ ಶನಿವಾರ ಮತ್ತೆ ಶೋಧಕಾರ್ಯ ನಡೆಸುತ್ತಿದೆ. ಅಧಿಕಾರಿಗಳು ಉಜಿರೆ–ಧರ್ಮಸ್ಥಳ–ಕೊಕ್ಕಡ ರಾಜ್ಯ ಹೆದ್ದಾರಿ (ಎಸ್‌ಎಚ್ –73) ದ ನೇತ್ರಾವತಿ ನದಿ ದಂಡೆಯ ಪಕ್ಕದಲ್ಲಿರುವ ಸ್ಥಳಕ್ಕೆ ಬೆಳಿಗ್ಗೆ 11:30 ರ ಸುಮಾರಿಗೆ ತಲುಪಿದ್ದು, ಇದು ಸತತ ಐದನೇ ದಿನದ ಶೋಧ ಕಾರ್ಯವಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಎಸ್ ಐಟಿ ಶನಿವಾರ ದೂರುದಾರರ ಸಮ್ಮುಖದಲ್ಲಿ 9ರಿಂದ 12 ರವರೆಗಿನ ನಾಲ್ಕು ಪಕ್ಕದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲು ಯೋಜಿಸಿದೆ. ಅನಾಮಧೇಯ ದೂರುದಾರ-ಸಾಕ್ಷಿ ಗುರುತಿಸಿದ 15 ಸ್ಥಳಗಳಲ್ಲಿ ಈ ಸ್ಥಳಗಳೂ ಸೇರಿವೆ. ಆತ ಹಲವಾರು ವರ್ಷಗಳಿಂದ ನದಿ ದಂಡೆಯ ಉದ್ದಕ್ಕೂ ಅನೇಕ ಮಾನವ ಶವಗಳನ್ನು ಹೂಳಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಸ್ಮೋಕಿಂಗ್ ಝೋನ್ ಇಲ್ಲದ ಹೊಟೇಲ್ ಬಾರ್ ಗಳ ಪರವಾನಗಿ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಬಿಬಿಎಂಪಿ ಆರೋಗ್ಯ ಇಲಾಖೆ, ಬಾರ್ ಗಳು, ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಂತಹ 412 ಮಾಲೀಕರಿಗೆ ನೋಟಿಸ್ ಕಳುಹಿಸಿದ್ದು, ಸ್ಮೋಕಿಂಗ್ ಝೋನ್ ನಿರ್ಮಿಸುವಂತೆ ಸೂಚಿಸಿದೆ. ನೋಟಿಸ್ ನೀಡಿದ ದಿನಾಂಕದಿಂದ ಒಂದು ವಾರದ ಕಾಲಾವಕಾಶವನ್ನೂ ನೀಡಿದ್ದು, ತಪ್ಪಿದಲ್ಲಿ ಟ್ರೇಡ್ ಲೈಸೆನ್ಸ್ ಅಮಾನತುಗೊಳಿಸಲಾಗುವುದು ಎಂದು ಸೂಚಿಸಲಾಗಿದೆ. ಜೂನ್ 22, 2022 ರ ಸುಪ್ರೀಂ ಕೋರ್ಟ್ ನಿರ್ದೇಶನ ಮತ್ತು ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆ 2003 (COTPA) ಸೆಕ್ಷನ್ 4 ರ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಮಾದಿಗ ಸಂಘಟನೆಗಳ ಒಕ್ಕೂಟದ ಮಾದಿಗ ದಂಡೋರ ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫೆರ್ನಾಂಡಿಸ್ ಹಿಪ್ಪಳಗಾಂವ್ ಅವರ ನೇತೃತ್ವದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಬೀದರ್ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಬೀದರ ನಗರದಲ್ಲಿ ಬೃಹತ್ ಅರೆಬೆತ್ತಲೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಆಗಸ್ಟ್ 16ರೊಳಗೆ ಒಳಮೀಸಲಾತಿ ಜಾರಿ ಮಾಡಲೇ ಬೇಕೆಂದು ಒತ್ತಾಯಿಸಿ ಬೀದರ್ ನಗರದ ಜಿಲ್ಲಾಧಿಕಾರಿ ಕಚೇರಿಯವರೆಗೆ ಅರೆಬೆತ್ತಲೆ ಮೂಲಕ ಪ್ರತಿಭಟಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ, ದಲಿತ ವಿರೋಧಿ ರಾಜ್ಯ ಸರ್ಕಾರ, ಒಳಮೀಸಲಾತಿ ಜಾರಿಗೆ ಹಿಂದೇಟು ಹಾಕುತ್ತಿದೆ. ಸುಮಾರು 35 ವರ್ಷಗಳಿಂದ ಮಾದಿಗ ಸಮುದಾಯದಿಂದ ಹೋರಾಟ ನಡೆಸುತ್ತಿದ್ದರು ಕೂಡಾ ಇನ್ನು ನ್ಯಾಯ ಸಿಕ್ಕಲ್ಲಾ. ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ , ದಲಿತರ ಪಾಲಿಗೆ ಸತ್ತಿದೆ ಸರ್ಕಾರ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾವು ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ.…
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಪರಮೇಶ್ವರ್, ‘ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದ ಪೋಸ್ಟ್ ಗಳಿಗಾಗಿ ಸರ್ಕಾರ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಸಮಾಜದಲ್ಲಿ ಭಾವನೆಗಳನ್ನು ಕೆರಳಿಸುವ ಪೋಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಕೊಲೆ, ಅತ್ಯಾಚಾರ ಮತ್ತು ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ಅನ್ನು ರಚಿಸಿದೆ. ಈ ಸಂಬಂಧ ಅನಾಮಧೇಯ ಮಾಜಿ ನೌಕರನೋರ್ವ ನೀಡಿದ ಮಾಹಿತಿ ಮೇರೆಗೆ ಅಸ್ತಿಪಂಜರಗಳ ಹೊರತೆಗೆಯುವ ಕೆಲಸ ಮಾಡಲಾಗುತ್ತದೆ. ನಾವು ಇದನ್ನು ಗಮನಿಸುತ್ತಿದ್ದೇವೆ. ಅವರು ಯಾವುದೇ ರೀತಿಯಲ್ಲಿ ಸಮಾಜದಲ್ಲಿ ಭಾವನೆಗಳನ್ನು ಪ್ರಚೋದಿಸುತ್ತಿದ್ದರೆ, ನಾವು ಅವುಗಳನ್ನು ತಡೆಯಲು ಪ್ರಯತ್ನಿಸುತ್ತೇವೆ. ನಿಮಗೆ ತಿಳಿದಿರುವಂತೆ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ.…
ಚಾಮರಾಜನಗರ: ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಇಂದು ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಚಾಮರಾಜನಗರ ಜಿಲ್ಲೆಯ ಗಾಜನೂರಿನ ಸ್ವಗ್ರಹದಲ್ಲಿ ವಾಸಿಸುತ್ತಿದ್ದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ರಾಜ್ ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ತಮ್ಮ 92ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿರುವ ವಿಚಾರ ನಾಗಮ್ಮನವರಿಗೆ ತಿಳಿದಿರಲಿಲ್ಲ, ಕಂದಾ ಒಮ್ಮೆ ನನ್ನನ್ನು ಬಂದು ನೋಡಿಕೊಂಡು ಹೋಗು ಅಂತ ಅವರು ಈ ಹಿಂದೆ ಹೇಳಿದ್ದರು. ಆ ವಿಚಾರ ಎಲ್ಲರ ಹೃದಯ ಕರಗಿಸಿತ್ತು. ತಮ್ಮ ಕೊನೆಯ ದಿನದವರೆಗೂ ಅವರು ಅಪ್ಪು ಇಲ್ಲ ಎನ್ನುವ ಸತ್ಯವನ್ನು ತಿಳಿಯಲು ಸಾಧ್ಯವಾಗಲಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪದ ತನಿಖೆ ನಡೆಸುತ್ತಿದ್ದ ಸಿಐಡಿಗೆ, ಆರೋಪಗಳಿಗೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು, ಹನಿಟ್ರ್ಯಾಪ್ ಪ್ರಯತ್ನಗಳ ಕುರಿತು ಸಚಿವರ ಹೇಳಿಕೆಗಳನ್ನು ಬೆಂಬಲಿಸಲು ಯಾವುದೇ ಗಣನೀಯ ಪುರಾವೆಗಳು ಸಿಕ್ಕಿಲ್ಲ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ. ವರದಿ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಪರಮೇಶ್ವರ್ ಅವರು, ಸಚಿವ ರಾಜಣ್ಣ ಹನಿಟ್ರ್ಯಾಪ್ ದೂರು ವಿಚಾರಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ವರದಿ ಕೊಟ್ಟಿದ್ದಾರೆ. ಅದರಲ್ಲಿ ಏನಿದೆ ಎಂಬುದನ್ನು ನಾನು ಇನ್ನೂ ಓದಿಲ್ಲ ಎಂದು ಹೇಳಿದರು. ವರದಿಯಂತೂ ಕೈಸೇರಿದೆ. ಆದರೆ ಇನ್ನೂ ಅದರಲ್ಲಿ ಏನಿದೆ ಎಂದು ನೋಡಿಲ್ಲ. ವರದಿ ನೋಡಿದ ಮೇಲೆ ಮಾತನಾಡುತ್ತೇನೆ. ಪ್ರಕರಣ ಚರ್ಚೆ ಸದನದಲ್ಲಿ ಆಯಿತು. ಇದರ ಬಗ್ಗೆ ನೀವು ಸದ್ದು ಮಾಡಿದಿರಿ. ಈ ಸದ್ದಿಗೆ ಸಿಐಡಿಯವರು ಉತ್ತರ ಕೊಟ್ಟಿದ್ದಾರೆ. ಏನಿದೆ ಮೊದಲು ನೋಡೋಣ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಬೆಂಗಳೂರು: ಮೈಸೂರಿನ ಕೆ.ಆರ್.ನಗರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪು ಹೊರಬೀಳುತ್ತಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ ಘಟನೆ ನಡೆದಿದೆ. ಮೈಸೂರಿನ ಕೆ.ಆರ್. ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದ್ದು, ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ. ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರು ಹಾಕಿದರು. ಈ ತೀರ್ಪು ಬರ್ತಿದ್ದಂತೆ ಪ್ರಜ್ವಲ್ ರೇವಣ್ಣ ಕೋರ್ಟ್‌ನಲ್ಲೇ ಪ್ರಜ್ವಲ್ ರೇವಣ್ಣ ಬಿಕ್ಕಿ ಬಿಕ್ಕಿಅತ್ತರು. ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸ್ ಸಿಬ್ಬಂದಿ ಕೋರ್ಟ್ ಹಾಲ್ ನಿಂದ ಕರೆದೊಯ್ದರು. ಈ ವೇಳೆಯೂ ಜೋರಾಗಿ ಅಳುತ್ತಲೇ ಇದ್ದರು. ಕಣ್ಣೀರು ಒರೆಸುತ್ತಾ ಪ್ರಜ್ವಲ್…
ಸರಗೂರು: ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಸಂಸ್ಥಾಪಕರು ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಹುಟ್ಟು ಹಬ್ಬವನ್ನು ಪಟ್ಟಣದ ಬಸ್ ನಿಲ್ದಾಣದಿಂದ ಮಹಾವೀರ ಸರ್ಕಲ್ ವೃತ್ತ ವರೆಗೂ ಮೆರವಣಿಗೆ ಮಾಡಿಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡಿ ಹಾಗೂ ರೈತ ಅನ್ನದಾತರಿಗೆ ಅನ್ನದಾನ ನೀಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ನಂತರ ಮಾತನಾಡಿದ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಸಂಸ್ಥಾಪಕರು ರಾಜ್ಯಾಧ್ಯಕ್ಷ ಭೂಮಿಪುತ್ರ ಸಿ.ಚಂದನ್ ಗೌಡ, ನಾನು ದೊಡ್ಡ ಸಿದ್ಧಾಂತದ ಮೇಲೆ ನಮ್ಮ ಸಂಘಟನೆಯನ್ನು ಪ್ರಾರಂಭಿಸಿದ್ದು, ನಮ್ಮ ರಾಜ್ಯದ ಯಾವುದೇ ಮೂಲೆಯಲ್ಲಿ ನನ್ನ ಅನ್ನದಾತರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಕೂಡಲೇ ಸ್ಥಳಕ್ಕೆ ಆಗಮಿಸಿ ರೈತರಿಗೆ ಅನುಕೂಲವಾಗವ ನಿಟ್ಟಿನಲ್ಲಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಾನು ಯಾವಾಗಲೂ ಸಿದ್ದ ಎಂದು ತಿಳಿಸಿದರು. ನನ್ನ ಅನ್ನದಾತರು ಹಸಿವಿನಿಂದ ಇರಬಾರದು ಎನ್ನುವುದೇ ನನ್ನ ಉದ್ದೇಶ. ತಾಲ್ಲೂಕಿನ ಕಾಡಂಚಿನ ಭಾಗದಲ್ಲಿ ಹೆಚ್ಚು ರೈತರು ಇದ್ದಾರೆ. ಅರಣ್ಯದಿಂದ ಹಾಗೂ ಯಾವುದೇ ಇಲಾಖೆಯಿಂದ ನನ್ನ ಅನ್ನದಾತರಿಗೆ…
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯ ಪ್ರಮಾಣದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಮಾಡಿರುವ ಇಂತಹ ಸಂದರ್ಭವನ್ನೇ ದುರುಪಯೋಗ ಮಾಡಿಕೊಂಡು ಕಾಳಸಂತೆಕೋರರು ಕೃತಕ ಅಭಾವ ಸೃಷ್ಟಿಸಿ ರೈತರ ಸಂಕಷ್ಟವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಅಲ್ಲಗಳೆಯಲಾಗದು. ಹಾಗಾಗಿ ಗೊಬ್ಬರ ಕೊರತೆ ಕಂಡುಬರುವೆಡೆ ತೀವ್ರ ನಿಗಾ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಸಿಎಂ, ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುವ ಸಾಧ್ಯತೆಗಳು ಇದ್ದು, ಎಲ್ಲಾ ಜಿಲ್ಲೆಗಳಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಬೇಕಿದೆ ಎಂದಿದ್ದಾರೆ. ಜಿಲ್ಲಾ ಕೇಂದ್ರ, ತಾಲ್ಲೂಕು, ಹೋಬಳಿ ಎಲ್ಲೂ ಕೂಡ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಟು, ಕಠಿಣ ಕಾನೂನು…