Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಕೋಟನೂರ್ ಲುಂಬಿಣಿ ಉದ್ಯಾನದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದರು. ನಗರದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಯ ಕಾರ್ಯಕರ್ತರು ಬೀದಿಗಳಿದು ಭಾರೀ ಪ್ರತಿಭಟನೆ ನಡೆಸಿದ್ದರು. ಘಟನೆ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಸದ್ಯ ಆರೋಪಿಗಳ ಯಾವುದೇ ಮಾಹಿತಿಗಳನ್ನು ಹಂಚಿಕೊಂಡಿಲ್ಲ. ಸೂಕ್ತ ತನಿಖೆಯ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕಲಂ 295 ಐಪಿಸಿ ಹಾಗೂ 3(1)(ಯು)(ವಿ)(ಟಿ) ಎಸ್‌ಸಿ/ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶಿಕ್ಷಕಿ ದೀಪಿಕಾ ಅವರನ್ನು ಕೊಲೆ ಮಾಡಲಾಗಿದ್ದ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು, ಪ್ರಕರಣ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿತೀಶ್ (21) ಬಂಧಿತ ಆರೋಪಿಯಾಗಿದ್ದಾನೆ. ಡಿವೈಎಸ್ ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್ ಮಾಡಿಯೇ ಕೊಲೆ ಮಾಡಿರುವುದು ತಿಳಿದು ಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು ಎಂದು ತಿಳಿದುಬಂದಿದೆ. ದೀಪಿಕಾರನ್ನು ಕೊಲೆಗೈದ ನಂತರ ಎರಡು ದಿನಗಳ ಕಾಲ ನಿತೇಶ್ ಗ್ರಾಮದಲ್ಲೇ ಇದ್ದನು. ಬಳಿಕ ಯಾವಾಗ ದೀಪಿಕಾಳ ಶವ ಪತ್ತೆಯಾಯ್ತೋ ಅಂದಿನಿಂದ ನಾಪತ್ತೆಯಾಗಿದ್ದನು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್ ನನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ. ಸದ್ಯ, ಆರೋಪಿಯನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ.…
29ನೇ ಮಹಡಿಯಿಂದ ಜಿಗಿದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರು ಬಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ ನಡೆದಿದೆ. ಬಾಲಕಿ ಅಪಾರ್ಟ್‍ಮೆಂಟ್ ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು ಎನ್ನಲಾಗಿದ್ದು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್ ವೇರ್ ಎಂಜಿನಿಯರ್, ತಾಯಿ ಗೃಹಿಣಿ ಎಂದು ಮಾಹಿತಿ ದೊರಕಿದೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಬಾಲಕಿ ಮಂಗಳವಾರ(ಜ.೨೩) ರಾತ್ರಿ ಮಲಗಿದ್ದವಳು, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್ ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್‍ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್‍ಮೆಂಟ್ ಅಸೋಸಿಯೇಷನ್ ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.…
ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿವೇಕ್ ನಗರದ ಮಾಯಾ ಬಜಾರ್ ಸ್ಲಂನಲ್ಲಿ ನಡೆದ ಘಟನೆ ಇದಾಗಿದ್ದು, ಕೊಲೆಯಾದ ರೌಡಿ ಶೀಟರ್ ನನ್ನು ಸತೀಶ್ ಅಲಿಯಾಸ್ ಮಿಲ್ಟ್ರಿ ಸತೀಶ್ ಎಂದು ಗುರುತಿಸಲಾಗಿದೆ. ಮಿಲಿಟ್ರಿ ಸತೀಶ್ ಮಾಯಾ ಬಜಾರ್ ಸ್ಲಂನಲ್ಲಿ ವಾಸಿಸುತ್ತಿದ್ದು, ರಾತ್ರಿ ಮನೆಯ ಹೊರಗಡೆ ಮಲಗಿದ್ದಾಗ, ಬೆಳಗ್ಗಿನ ಜಾವ ಮೂರು ಗಂಟೆಯ ಹೊತ್ತಿಗೆ ಆತನ ಮನೆಯ ವಠಾರಕ್ಕೆ ಬಂದ ದುಷ್ಕರ್ಮಿಗಳು ಆತನನ್ನು ಕೊಚ್ಚಿ ಪರಾರಿಯಾಗಿದ್ದಾರೆ. ಹಳೇ ವೈಷಮ್ಯ ಅಥವಾ ವೈಯಕ್ತಿಕ ಕಾರಣಕ್ಕೆ ಕೊಲೆ ಅನುಮಾನ ವ್ಯಕ್ತಪಡಿಸಲಾಗಿದ್ದು, ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಕೊಲೆಗಾರರು ಮಿಲಿಟ್ರಿ ಸತೀಶ್ ಗೆ ಪರಿಚಿತರೇ ಆಗಿರುವುದರಿಂದ ಪೊಲೀಸರಿಗೆ ಕೆಲವು ಸಂಶಯಗಳಿವೆ. ಜತೆಗೆ ಸ್ಥಳದ ಸಿಸಿ ಟಿವಿ ದೃಶ್ಯಾವಳಿಗಳ ಫೊಟೇಜ್ ಪಡೆದು ತಪಾಸಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿವೇಕನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಮೈಸೂರಿನಲ್ಲಿ ಹೆತ್ತ ತಾಯಿ, ಸಹೋದರಿಯನ್ನು ಕರೆಗೆ ತಳ್ಳಿ ಪಾಪಿ ಅಣ್ಣನೇ ಕೊಲೆ ಮಾಡಿರುವ ಘಟನೆ ನಡೆದಿದ್ದು, ಪ್ರೇಮಕತೆಯು ದುರಂತ ಅಂತ್ಯ ಕಂಡಿದೆ. ತನ್ನ ತಂಗಿ ಅನ್ಯಧರ್ಮೀಯ ಯುವಕನನ್ನು ಲವ್ ಮಾಡುತ್ತಿದ್ದಳೆಂಬ ಒಂದೇ ಕಾರಣಕ್ಕೆ ಅಣ್ಣನೊಬ್ಬ ಆಕೆಯೊಂದಿಗೆ ತನ್ನ ತಾಯಿಯನ್ನೂ ಕೆರೆಗೆ ತಳ್ಳಿ ಕೊಲೆಗೈದಿದ್ದಾನೆ. ಸಹೋದರಿ ಪ್ರೀತಿಗೆ ವಿರೋಧಿಸಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಮೃತ ತಾಯಿ ಅನಿತಾ(43) ಹಾಗೂ ಸಹೋದರಿ ಧನುಶ್ರೀ (19) ಯನ್ನು ಮರೂರಿನ ಕೆರೆಯಲ್ಲಿ ತಳ್ಳಿ ಪಾಪಿ ಅಣ್ಣ ನಿತಿನ್ ಹತ್ಯೆ ಮಾಡಿದ್ದಾನೆ. ಧನುಶ್ರೀ ಮತ್ತು ಅನಿತಾರನ್ನು ನೆಂಟರ ಮನೆಗೆ ಕರೆದೊಯ್ಯುವುದಾಗಿ ಹೇಳಿ ಕೆರೆದಡಕ್ಕೆ ಕರೆದುಕೊಂಡ ಬಂದ ನಿತಿನ್ ಇಬ್ಬರನ್ನೂ ಕೆರೆಗೆ ನೂಕಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಇಬ್ಬರ ಮೃತದೇಹವನ್ನು ಕೆರೆಯಿಂದ ಹೊರಗೆ ತರಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ: ವಿವಾಹಿತ ಪುರುಷನಿಗೆ ವಿವಾಹಿತ ಮಹಿಳೆ ಮೇಲೆ ಲವ್ ಶುರುವಾಗಿ, ಗಂಡನಿಂದ ದೂರ ಉಳಿದು ಪ್ರಿಯಕರನೊಂದಿಗೆ ನೆಲೆಸಿದ್ದಳು. ಪ್ರಿಯಕರನೊಂದಿಗೆ ಇದ್ದುಕೊಂಡು ಭರ್ಜರಿ ಹಣ ಖರ್ಚು ಮಾಡಿ ಕೊನೆಗೆ ಮಹಿಳೆ ಮರಳಿ ಪತಿಯೊಂದಿಗೆ ಹಿಂತಿರುಗಿ ಹೋಗಿದ್ದಾಳೆ. ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದವರು ಮದುವೆಯಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದರೂ, ರೊಟ್ಟಿ ತರಲೆಂದು ಹೋದಾಗ ರೊಟ್ಟಿ ಮಾಡುವ ಸುಜಾತಾಳ ಮೇಲೆ ಲವ್ ಶುರುವಾಗಿ ಹೋಯ್ತು. ಆಕೆಯೂ ವಿವಾಹಿತಳಾಗಿದ್ದು, ಆಕೆಗೆ ಒಂದು ಮಗುವಿದೆ. ಒಂದು ರೊಟ್ಟಿಯಿಂದ ಶುರುವಾದ ಪ್ರೀತಿ ಪ್ರೇಮದಿಂದಾಗಿ ಸಜಾತ ತನ್ನ ಗಂಡನನ್ನು ಬಿಟ್ಟು ಸೌದತ್ತಿ ಜೊತೆ ಓಡಿ ಹೋಗಿ ಕಳೆದ ಆರು ತಿಂಗಳಿನಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಇತ್ತ, ಪತ್ನಿ ಕಾಣೆಯಾಗಿದ್ದಾಳೆ ಎಂದು ಪತಿ ಮಹೇಶ್ ಮಹಾರಾಷ್ಟ್ರ ಸಾಂಗ್ಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದರು. ಅದರಂತೆ ಮಹಿಳೆಯನ್ನು ಪ್ರಿಯಕರನ ಜೊತೆ ಪತ್ತೆ ಹಚ್ಚಿದ ಸಾಂಗ್ಲಿ ಪೊಲೀಸರು ರಾಜಿ ಪಂಚಾಯ್ತಿ ನಡೆಸಿದ್ದಾರೆ. ಹೀಗೆ ಪ್ರಿಯಕರನ ಜೊತೆಗಿದ್ದ ಸುಜಾತ ಅಲ್ಲಿಗೆ ಇಲ್ಲಿಗೆ ಎಂದು ಸುತ್ತಾಡಿ, ಭರ್ಜರಿ ಹಣ…
ಮುಂಬೈ: ಪುಣೆಯ ಧವಲ್ಪುರಿ ಫಾಟಾ ಬಳಿ ರಾತ್ರಿ 2:30ಕ್ಕೆ ಅಹ್ಮದ್ನಗರ-ಕಲ್ಯಾಣ ಹೆದ್ದಾರಿಯಲ್ಲಿ ತಡರಾತ್ರಿ ಟ್ರಾಕ್ಟರ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ನಂತರ ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಐವರನ್ನು ಪಾರ್ನರ್ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೆ, ಒಬ್ಬರನ್ನು ಅಹ್ಮದ್ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ವೇಳೆ ಆರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ತಲುಪಿಸಲು ಸಹಾಯ ಮಾಡಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ತಪ್ಪಲಿನಲ್ಲಿರುವ ರಾಮದೇವರ ಬೆಟ್ಟದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಸುಮಾರು ಕಿಲೋಮೀಟರ್ಗಟ್ಟಲೆ ಬೆಂಕಿ ಆವರಿಸುತ್ತಿದ್ದು ಬೆಟ್ಟದ ಸಮೀಪ ಇರುವ ಜನರು ಭಯಭೀತಿಯಲ್ಲಿದ್ದಾರೆ. ಕಿಡಿಗೇಡಿಗಳಿಂದ ರಾಮದೇವರ ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಬಗ್ಗೆ ಭಾರಿ ಶಂಕೆ ವ್ಯಕ್ತವಾಗಿದೆ. ಸ್ಥಳೀಯರಿಂದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ದೊರೆತಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ದೌಡಯಿಸಿದ್ದಾರೆ. ಅಗ್ನಿಶಾಮಕ ಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು: ಬಂಡೆ ಬ್ಲಾಸ್ಟ್ ಮಾಡುವ ವೇಳೆ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಧಾರುಣವಾಗಿ ಸಾವಿಗೀಡಾಗಿರುವ ಘಟನೆ ತುಮಕೂರು ತಾಲ್ಲೂಕು ಕೌತಮಾರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಮೊಹಮ್ಮದ್ ಅಬೂಲ್(29) ಹಾಗೂ ಛತ್ತೀಸ್ಗಡ ಮೂಲದ ಮೋನು (24) ಎಂದು ಗುರುತಿಸಲಾಗಿದೆ. ಕೌತಮಾರನಹಳ್ಳಿ ಸಮೀಪವಿರುವ ಕರ್ನಾಟಕ ಸ್ಟೋನ್ ಕ್ರಷರ್ನಲ್ಲಿ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತರಾಗಿದ್ದು, ಮತ್ತೊಬ್ಬನಿಗೆ ತೀವ ಗಾಯಗಳಾಗಿದೆ. ತುಮಕೂರಿನ ಹನೀಫ್ ಎಂಬುವವರಿಗೆ ಸೇರಿದ ಕರ್ನಾಟಕ ಸ್ಟೋನ್ ಕ್ರಷರ್ನಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಡಪಾಯಿಗಳ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ತುಮಕೂರು ತಾಲ್ಲೂಕು ವ್ಯಾಪ್ತಿಯಲ್ಲಿ 30 ಕ್ಕೂ ಹೆಚ್ಚು ಕ್ರಷರ್ ಗಳಿದ್ದು ಬಹುತೇಕ ಹೊರರಾಜ್ಯದ ಕಾರ್ಮಿಕರೇ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಾರೆ, ಆದರೆ ಬಹುತೇಕ ಕ್ರಷರ್ ಮಾಲೀಕರು ಸುರಕ್ಷತಾ ಸಾಧನ ನೀಡುವುದೇ ಇಲ್ಲ,ಅಲ್ಲದೆ ಕಾರ್ಮಿಕ ಇಲಾಖೆಯೂ ಸಹ ಈಬಗ್ಗೆ ಗಮನ ಹರಿಸುವುದಿಲ್ಲ,ಗಣಿ ಮತ್ತು ಭೂ ವಿಜ್ಙಾನ ಇಲಾಖೆ…
ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್ ನನ್ನು ಪೊಲೀಸರು ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ. ಮಗನನ್ನು ಪತ್ತೆ ಹಚ್ಚಿದ ನಂತರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ ಹಾಗೂ ಬಾಲಕ ಸುರಕ್ಷಿತವಾಗಿದ್ದಾನೆ ಎಂದು ತಿಳಿಸಿದ್ದಾರೆ. ಟ್ಯೂಷನ್ ತರಗತಿ ಹೋಗಿದ್ದ ಬಾಲಕ ಪರಿಣವ್ ನಾಪತ್ತೆಯಾಗಿದ್ದ. ತಂದೆ ತಡವಾಗಿ ಟ್ಯೂಷನ್ ತರಗತಿ ನಡೆಯತ್ತಿದ್ದಲ್ಲಿಗೆ ಬಂದು ವಿಚಾರಿಸಿದಾಗ ಬಾಲಕ ಅಲ್ಲಿಂದ ಟ್ಯೂಷನ್ ಮುಗಿಸಿ ತೆರಳಿರುವುದು ಗೊತ್ತಾಗಿತ್ತು ಎನ್ನಲಾಗಿದೆ. ಅಂದಿನಿಂದ ಆತ ನಾಪತ್ತೆಯಾಗಿದ್ದ ಹಾಗೂ ಮಾರತ್ತಹಳ್ಳಿ, ಯಮಲೂರು ಮತ್ತು ಮೆಜೆಸ್ಟಿಕ್ ನಲ್ಲಿರುವ ವಿವಿಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಬಾಲಕನ ಚಲನವಲನಗಳು ಪತ್ತೆಯಾಗಿದ್ದವು. ಹುಡುಗನ ಬಳಿ ಹಣವಿರಲಿಲ್ಲ. ಹಣಕ್ಕಾಗಿ ಆತ ವ್ಯಕ್ತಿಯೊಬ್ಬನಿಗೆ ತನ್ನ ಮಾರ್ಕರ್ ಪೆನ್ ಮಾರಾಟ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವುದು ಕಂಡುಬಂದಿದೆ ಎಂದು ಪರಿಣವ್ ತಂದೆ ಸುಕೇಶ್ ತಿಳಿಸಿದ್ದಾರೆ. ಪರಿಣವ್ ಭಾನುವಾರ ಮಧ್ಯಾಹ್ನ 12.15ರ ಸುಮಾರಿಗೆ ನಾಪತ್ತೆ ಆಗಿದ್ದ. ಆತ ಟ್ಯೂಷನ್ ಸೆಂಟರ್ ನಿಂದ ಮಾರತ್ತಹಳ್ಳಿವರೆಗೆ ನಡೆದು ಬಂದಿದ್ದು, ನಂತರ…