Author: admin

ಬೀದರ್: ಜಿಲ್ಲೆಯ ಕೌಡಗಾಂವ ಗ್ರಾಮದ ಮೈನ್ ರೋಡ್ ನಲ್ಲಿ ಸುಮಾರು 42 ವರ್ಷಗಳಿಂದ ಇದ್ದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಹೈವೆ ರಸ್ತೆ ನಿರ್ಮಾಣಕ್ಕಾಗಿ 2 ವರ್ಷಗಳ ಹಿಂದೆ ತೆರವುಗೊಳಿಸಲಾಗಿತ್ತು. ತೆರವುಗೊಳಿಸುವ ವೇಳೆ ಮತ್ತೆ ಮೂರ್ತಿ ನಿರ್ಮಿಸುವ ಭರವಸೆ ನೀಡಲಾಗಿತ್ತು. ಆದರೆ, ಈವರೆಗೂ ಪ್ರತಿಮೆ ನಿರ್ಮಾಣ ಮಾಡದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಮೇಲ್ಜಾತಿಯವರ ಮುಲಾಜಿಗೊಳಪಟ್ಟು ಅಧಿಕಾರಿಗಳು ಪ್ರತಿಮೆ ನಿರ್ಮಾಣದಿಂದ ಹಿಂದೆ ಸರಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಪ್ರತಿಮೆ ತೆರವು ನಡೆಸುವ ವೇಳೆ ಔರಾದ್ ತಹಶೀಲ್ದಾರ್ ಮತ್ತೆ ಪ್ರತಿಮೆಯನ್ನ ಸ್ಥಾಪನೆ ಮಾಡೋದಾಗಿ ಹೇಳಿದ್ದರು. ಆದ್ರೆ ಇದೀಗ ಪ್ರತಿಮೆ ನಿರ್ಮಾಣ ಮಾಡದೇ ಇಲ್ಲಿನ ಜನತೆಯ ಭಾವನೆಗಳ ಜೊತೆಗೆ ಆಟವಾಡಿದ್ದಾರೆ. ಈ ಹಿನ್ನೆಲೆಯಲ್ಲಿ 20/01/2024 ಎಂದು ಸಮಾಜದ ಹಿರಿಯರು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಯನ್ನು ಈ ಸ್ಥಳದಲ್ಲಿ ಸ್ಥಾಪಿಸಿದ್ದು, ಇದಕ್ಕೆ ಇಲ್ಲಿನ ಸವರ್ಣೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಸ್ಥಳಕ್ಕೆ ಬೀದರ್ ಜಿಲ್ಲೆಯ A C, DSP ಔರಾದ…

Read More

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಲಿ ಅಂಗಾಂಗ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಹೊರ ವಲಯದ ಮತ್ತಾವರ ಬಳಿ ಹುಲಿ ತಲೆ, ನಾಲ್ಕು ಉಗುರು, ಎರಡು ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ವಿಚಾರ ತಿಳಿದು DFO ರಮೇಶ್ ಬಾಬು ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ, ಹುಲಿ ಅಂಗಾಂಗ ಮಾರಾಟ ಮಾಡಲು ಮುಂದಾಗಿದ್ದ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದ ಸತೀಶ್, ಚಂದ್ರೇಗೌಡ ಎಂಬವರನ್ನು ಬಂಧಿಸಿದ್ದಾರೆ.

Read More

ರಾಜ್ಯ ಸರ್ಕಾರ 6 ತಿಂಗಳಿನಲ್ಲಿ ಎರಡನೇ ಬಾರಿಗೆ ಮದ್ಯದ ಮೇಲಿನ ತೆರಿಗೆ ಹೆಚ್ಚಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಲು ಸಜ್ಜಾಗಿದೆ. ಸರ್ಕಾರದ ಐದು ಗ್ಯಾರಂಟಿಗಳಿಗೆ ಹಣ ಹೊಂದಿಸಲು ತೆರಿಗೆ ಹೆಚ್ಚಿಸಲಾಗುತ್ತಿದೆ ಎಂದು ಚರ್ಚೆಗಳಾಗುತ್ತಿವೆ. ಗ್ಯಾರಂಟಿ ಯೋಜನೆಗಳಿಗೆ ಕೋಟಿ, ಕೋಟಿ ಹಣದ ಅವಶ್ಯಕತೆಯಿದ್ದು, ಈ ಹಣವನ್ನು ಹೊಂದಾಣಿಕೆ ಮಾಡಲು ಸರ್ಕಾರ ತೆರಿಗೆ ಹೆಚ್ಚಳಕ್ಕೆ ಮುಂದಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ.

Read More

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅಸ್ಸಾಂನಲ್ಲಿ ಪೊಲೀಸರು ಭದ್ರತೆ ನೀಡುತ್ತಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯು ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಯಾತ್ರೆ ವಿರುದ್ಧ ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ಹಿಂಸಾಚಾರವನ್ನು ಅನಾವರಣಗೊಳಿಸಿದ್ದಾರೆ. ಸೋನಿತ್‌ಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ. ಅಸ್ಸಾಂ ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ನೀಡಿದ್ದಾರೆ. ಯಾರನ್ನೂ ಬಂಧಿಸಲು ಸಿದ್ಧರಿಲ್ಲ. ಯಾತ್ರೆಯ ಮೇಲಿನ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಸ್ಸಾಂ ಮುಖ್ಯಮಂತ್ರಿ ಮತ್ತು ಡಿಜಿಪಿಗೆ ಕೇಂದ್ರ ನಿರ್ದೇಶನ ನೀಡಬೇಕು ಎಂದು ಖರ್ಗೆ ಹೇಳಿದರು.

Read More

ರಾಜಸ್ಥಾನ: 17 ವರ್ಷದ ಶಾಲಾ ವಿದ್ಯಾರ್ಥಿನಿ ಮೇಲೆ ಆಕೆಯ ಶಿಕ್ಷಕನೇ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಭೀಕರ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಆರೋಪಿಯನ್ನು ಪ್ರಹ್ಲಾದ್ ಅಂಬರಂ ಮೇಘವಾಲ್ ಎಂದು ಗುರುತಿಸಲಾಗಿದೆ. ಆತನನ್ನು ಜೈಪುರದಲ್ಲಿ ಬಂಧಿಸಿರುವ ಪೊಲೀಸರು ಬಾರ್ಮರ್‌ ಗೆ ಕರೆತಂದಿದ್ದಾರೆ. ಹಳ್ಳಿಯೊಂದರ ಬಾವಿಯೊಳಗೆ ಬಾಲಕಿಯ ಶವ ಪತ್ತೆಯಾಗಿರುವ ಬಗ್ಗೆ ಬಾರ್ಮರ್‌ನ ಪೊಲೀಸರಿಗೆ ಭಾನುವಾರ ಮಾಹಿತಿ ಸಿಕ್ಕಿತ್ತು. ನಂತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಬಾಲಕಿಯ ತಂದೆ, ಮಗಳ ಶವವನ್ನು ಗುರ್ತಿಸಿದ್ದರು. ನಂತರ ಮೃತಳ ಶಿಕ್ಷಕ ಪ್ರಹ್ಲಾದ್ ವಿರುದ್ದ ಬಾಲಕಿ ತಂದೆ ದೂರು ನೀಡಿದ್ದರು. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು. ಬಾಲಕಿ ಮೇಲೆ ಹಲ್ಲೆ ಅಥವಾ ಕತ್ತು ಹಿಸುಕಿದ ಯಾವುದೇ ಲಕ್ಷಣಗಳಿಲ್ಲದ ಕಾರಣ ಬಾಲಕಿ ಹೇಗೆ ಸಾವನ್ನಪ್ಪಿದ್ದಾಳೆ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. IPC ಸೆಕ್ಷನ್ 302 (ಕೊಲೆ),  376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯಿದೆ ಅಡಿಯಲ್ಲಿ ಶಿಕ್ಷಕನ ವಿರುದ್ಧ ಎಫ್‌ ಐಆರ್…

Read More

ಪ್ರತಿನಿತ್ಯ ಆಹಾರದಲ್ಲಿ ಬೆಲ್ಲ ಸೇವಿಸಿ: ಆರೋಗ್ಯವಾಗಿರಿ ಪ್ರತಿನಿತ್ಯ ನಾವು ಆಹಾರದಲ್ಲಿ ಬಳಸುವ ಬೆಲ್ಲ, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹೌದು, ಬೆಲ್ಲವು ಶ್ವಾಸಕೋಶದ ಆರೋಗ್ಯಕ್ಕೆ ರಾಮಬಾಣ. ಬೆಲ್ಲದ ಉತ್ತಮ ಗುಣಗಳು ಉಸಿರಾಟದ ಸಮಸ್ಯೆಗೆ ಪರಿಹಾರ ನೀಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಬೆಲ್ಲ ಪ್ರಮುಖ ಪಾತ್ರ ವಹಿಸುತ್ತದೆ. ಜೀರ್ಣಕ್ರಿಯೆ ಸುಗಮವಾಗಲು ಪ್ರತಿದಿನ ಬೆಲ್ಲವನ್ನು ನಿಯಮಿತವಾಗಿ ಸೇವಿಸುವುದು ಉತ್ತಮ ಎನ್ನುತ್ತಾರೆ ತಜ್ಞರು. ನಿಮ್ಮ ಆಹಾರದಲ್ಲಿ ಸಕ್ಕರೆ ಬಳಕೆ ಕಡಿಮೆ ಮಾಡಿ: ಆರೋಗ್ಯವಾಗಿರಿ ಸಕ್ಕರೆ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ಕೆಟ್ಟ ಪರಿಣಾಮಗಳ ಕುರಿತು ಜನರಲ್ಲಿ ಈಗ ಜಾಗೃತಿ ಹೆಚ್ಚಾಗುತ್ತಿದೆ. ಹಾಗಾದ್ರೆ, ಸಕ್ಕರೆಯ ಬಳಕೆಯನ್ನು ನಿಯಂತ್ರಿಸಿದರೆ ನಮ್ಮ ದೇಹದಲ್ಲಿ ಯಾವೆಲ್ಲ ಬದಲಾವಣೆಗಳು ಆಗುತ್ತೆ ಗೊತ್ತೇ? ತೂಕ ಇಳಿಕೆಗೆ ಸಹಕಾರಿಯಾಗಿದೆ. ಟೈಪ್ 2 ಡಯಾಬಿಟಿಸ್‌ ನಿಯಂತ್ರಣ ಆಗುತ್ತೆ. ಹೃದಯದ ಆರೋಗ್ಯಕ್ಕೆ ಸಹಕಾರಿ. ಮಾನಸಿಕ ಆರೋಗ್ಯ ಸುಧಾರಣೆ. ಚರ್ಮದ ಆರೋಗ್ಯ ಸುಧಾರಣೆ ಆಗುತ್ತದೆ.

Read More

ಮಹಾರಾಷ್ಟ್ರ: ದೋಣಿಯೊಂದು ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಚಮೋರ್ಶಿಯ ಘನಪುರ ಘಾಟ್ ಬಳಿ ವನಗಂಗಾ ನದಿಯಲ್ಲಿ ಮೆಣಸಿನಕಾಯಿ ಕತ್ತರಿಸಲು ಏಳು ಮಹಿಳೆಯರು ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾಗ ದೋಣಿ ಮಗುಚಿ ಬಿದ್ದಿದ್ದು, ದೋಣಿ ನಿರ್ವಾಹಕ ಈಜಿ ದಡಕ್ಕೆ ಬಂದರೆ, ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ನೀರಿನಲ್ಲಿ ಮುಳುಗಿದರು. ಏಳು ಮಹಿಳೆಯರ ಪೈಕಿ ಒಬ್ಬರನ್ನು ರಕ್ಷಿಸಲಾಗಿದ್ದು, ಓರ್ವ ಮಹಿಳೆಯ ಮೃತಪಟ್ಟಿದ್ದಾರೆ. ಐವರು ನಾಪತ್ತೆಯಾಗಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ರಕ್ಷಣಾ ತಂಡವು ನಾಪತ್ತೆಯಾದ ಮಹಿಳೆಯರಿಗಾಗಿ ಹುಡುಕಾಟ ನಡೆಸುತ್ತಿದೆ. ಸ್ಥಳಕ್ಕೆ ಚಮೋರ್ಶಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮ್ಯಾನ್ಮಾರ್ ಸೇನಾ ವಿಮಾನ ಮಿಜೋರಾಂನ ಲೆಂಗ್ ಪುಯಿ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಿಜೋರಾಂ ಪೊಲೀಸ್ ಮಹಾನಿರ್ದೇಶಕ ಪ್ರಕಾರ, ಬರ್ಮಾ ಸೇನೆಯ ವಿಮಾನ ಅಪಘಾತದಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ. ಪೈಲಟ್ ನೊಂದಿಗೆ ಒಟ್ಟು 14 ಮಂದಿ ವಿಮಾನದಲ್ಲಿದ್ದು, ಆರು ಮಂದಿ ಗಾಯಗೊಂಡಿದ್ದಾರೆ, ಎಂಟು ಮಂದಿ ಸುರಕ್ಷಿತವಾಗಿದ್ದಾರೆ ಎಂದು ಮಿಜೋರಾಂ ಡಿಜಿಪಿ ತಿಳಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಲೆಂಗ್ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತಕ್ಕೆ ಪಲಾಯನಗೈದಿದ್ದ ಮ್ಯಾನ್ಮಾರ್ ಸೈನಿಕರನ್ನು ಕರೆದುಕೊಂಡು ಹೋಗಲು ವಿಮಾನ ಬಂದಿತ್ತು ಎನ್ನಲಾಗಿದೆ. ಮಿಜೋರಾಂನ ಲೆಂಗ್ಪುಯಿಯಲ್ಲಿ ಲ್ಯಾಂಡಿಂಗ್ ವೇಳೆ ವಿಮಾನವು ರನ್  ವೇಯಿಂದ ಜಾರಿ ಪತನಗೊಂಡಿದೆ.

Read More

ತುರುವೇಕೆರೆ: ತಾಲೂಕಿನ ಕೊಡುಗೆಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಲ್ಕೆರೆ ಸದಸ್ಯ ಗಂಗಾಮಣಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅವಿರೋಧವಾಗಿ ಇವರು ಆಯ್ಕೆಗೊಂಡಿದ್ದು, ಹದಿನಾರು ಸದಸ್ಯರಿರುವ ಪಂಚಾಯತಿಯಲ್ಲಿ, ಹಿಂದಿನ ಅಧ್ಯಕ್ಷರಾದ ರೂಪ ರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಸೇವಂತಿ ಗಂಗಾಮಣಿ ಅವರನ್ನು ಹೊರತುಪಡಿಸಿ ಯಾವುದೇ ನಾಮಪತ್ರಗಳು ಸಲ್ಲಿಸದ ಕಾರಣ, ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ವೈಯಂ ರೇಣು ಕುಮಾರ್ ಅವರು ಘೋಷಣೆ ಮಾಡಿದರು. ಘೋಷಣೆ ಆಗುತ್ತಿದ್ದಂತೆ, ನೂತನ ಅಧ್ಯಕ್ಷರರಿಗೆ ಆದಿ ಜಾಂಬವ ಕ್ಷೇಮಾಭಿವೃದ್ಧಿ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಸಿ.ಎಸ್. ಮೂರ್ತಿ ನೆಮ್ಮದಿ ಗ್ರಾಮ ಇವರು ಅಧ್ಯಕ್ಷರನ್ನು ಅಭಿನಂದಿಸಿದರು. ಹಾಗೂ ಅಧ್ಯಕ್ಷರ ಬೆಂಬಲಿಗರು ಮತ್ತು ಹಿತೈಷಿಗಳು ಪಟಾಕಿ ಸಿಡಿಸಿ ಸಿಹಿ ಸಂಭ್ರಮಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ರಾಜ್ಯಲಕ್ಷ್ಮಿ ಸಿ.ಪಿ., ಪಿಡಿಒ ಗೋಪಿನಾಥ್ . ಕಾಂಗ್ರೆಸ್ ಮುಖಂಡರಾದ ಕಲ್ಕೆರೆ ರಾಘು, ದಿನೇಶ್, ರಮೇಶ್, ದೇವರಾಜ್, ಕಿರಣ್ ಕುಮಾರ್,…

Read More

ಬೀದರ್: ಜಿಲ್ಲೆಯಲ್ಲಿ ಸಮಾಜ ವಿರೋಧಿ ಹಾಗೂ ಅಕ್ರಮ ಕಾನೂನು ಬಾಹಿರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ತೊಡಕಾಗಿದ್ದ 5 ಜನ ರೌಡಿಗಳನ್ನು ಗಡಿಪಾರು ಮಾಡಲಾಗಿದೆ . ಬೀದರ ಜಿಲ್ಲೆಯ ಬೀದರ ನಗರ ಮತ್ತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಮತ್ತು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಧಕ್ಕೆ ತರುವ 5 ಜನ ಸಮಾಜಘಾತುಕರನ್ನು ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಿಗೆ 6 ತಿಂಗಳವರೆಗೆ ಪ್ರವೇಶಿಸಿದಂತೆ ಬೀದರ್ SP ರವರು ನೀಡಿದ ಪ್ರಸ್ತಾವನೆ ಮೇರೆಗೆ ಬೀದರ್ ಜಿಲ್ಲಾಧಿಕಾರಿ ರವರು ಗಡಿಪಾರು ಆದೇಶ ಮಾಡಿರುತ್ತಾರೆ. ಗಡಿಪಾರು ಆದ ವ್ಯಕ್ತಿಗಳಿಗೆ 6 ತಿಂಗಳ ವರೆಗೆ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿ ಹಾಗೂ ಗಡಿ ಪಾರಾದ ಜಿಲ್ಲೆಯಲ್ಲೂ ಇವರ ಮೇಲೆ ನಿಗಾ ವಹಿಸಲಾಗುವುದು. ಕಳುಹಿಸಿ ಕೊಟ್ಟ ಜಿಲ್ಲೆಯಲ್ಲಿ ಉತ್ತಮ ವರ್ತನೆ ತೋರಿದಲ್ಲಿ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ…

Read More