Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ಮುಂಬೈ: ರಾಮ ಧ್ವಜ ಕೊಂಡೊಯ್ಯುತ್ತಿದ್ದ ನಾಲ್ಕು ಜನರ ಮೇಲೆ ಗುಂಪೊಂದು ಅಚಾನಕ್ಕಾಗಿ ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮತ್ತೊಂದು ಧರ್ಮದ ಹಲ್ಲೆಕೋರರು ಅಲ್ಲಾ ಹೋ ಅಕ್ಬರ್ ಎಂದು ಘೋಷಣೆ ಕೂಗುತ್ತಾ ವಾಹನಗಳನ್ನು ಜಖಂಗೊಳಿಸಿ, ಹಿಂದೂ ಸಮುದಾಯದವರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಪೂರ್ವ ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಆಕ್ರಮಣಕಾರಿಗಳು ವಾಹನಗಳನ್ನು ಪುಡಿಗಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಹಲವರು ರಕ್ತಸಿಕ್ತರಾಗುವಂತೆ ಹಲ್ಲೆ ನಡೆಸಲಾಗಿದೆ. ವಾಹನಗಳ ಮೇಲೆ ಅಂಟಿಸಿದ್ದ ಹನುಮಂತನ ಸ್ಟಿಕರ್ ಗೆ ದುಷ್ಕರ್ಮಿಗಳು ಎಂಜಲು ಉಗಿದಿದ್ದಾರೆ. ಮುಂಬೈ ಡಿಸಿಪಿ ಜಯಂತ್ ಬಾಜ್ಬಲೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಭಾನುವಾರ ರಾತ್ರಿ 11 ರ ಸುಮಾರಿ ಗೆ ಈ ಘಟನೆ ನಡೆದಿದೆ. ಜೈಶ್ರೀರಾಮ ಎಂದು ಘೋಷಣೆ ಕೂಗುತ್ತಿದ್ದ ನಾಲ್ವರನ್ನು ನಯಾನಗರದಲ್ಲಿ ಮುಸ್ಲಿಂ ಸಮುದಾಯದ ಗುಂಪು ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಘಟನೆ ಕುರಿತಂತೆ ಇದುವರೆಗೂ ಐವರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಮುಂಬಯಿ: ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಯ ಡಿವೈಡರ್ ಗೆ ಡಿಕ್ಕಿಯಾದ ಘಟನೆಯು, ಒಂದು ವಾರದ ಹಿಂದೆಯಷ್ಟೇ ಉದ್ಘಾಟನೆಯಾದ ದೇಶದ ಅತೀ ದೊಡ್ಡ ಸೇತುವೆ ಮುಂಬಯಿ ಟ್ರಾನ್ಸ್ ಹಾರ್ಬರ್ ಲಿಂಕ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ. ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಸೇತುವೆಯ ಡಿವೈಡರ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೃಪಟ್ಟ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಮಧ್ಯಪ್ರದೇಶ ಮೂಲದ ಮೊಹಮ್ಮದ್ ಶಾಬಾದ್(21), ಇಂದ್ರಜೀತ್ (23) ಮೃತ ದುರ್ದೈವಿಗಳು. ಉಳಿದಂತೆ ವಿಷಾನಿಲದಿಂದ ಎಂಟು ಜನರು ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಣಾಪಾದಿಂದ ಪಾರಾಗಿದ್ದಾರೆ. ರವಿವಾರ(ಜ.21) ರಾತ್ರಿ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಈ ಮಹಾ ಸಮಾರಂಭದ ಮೂಲಕ ದೇಶ ರಾಮಮಯವಾಗುತ್ತಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದರು. ಇಡೀ ದೇಶವೇ ರಾಮಮಯವಾಗುತ್ತಿದೆ, ನಂಬಿಕೆ ಮತ್ತು ಭಕ್ತಿಯ ಸಾಗರದಲ್ಲಿ ಮುಳುಗಿದೆ. ತಲೆಮಾರುಗಳ ಹೋರಾಟ ಮತ್ತು ನಿರ್ಣಯವು ವಿಗ್ರಹಾರಾಧನೆಯಲ್ಲಿ ಪರಾಕಾಷ್ಠೆಯಾಗುತ್ತಿದೆ. ಈ ಸಂದರ್ಭದಲ್ಲಿ ತಮ್ಮ ಹಿಂದಿನವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಎಂದು ಯೋಗಿ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಒಂದು ಅದ್ಭುತ, ಮರೆಯಲಾಗದ ಮತ್ತು ಅದ್ಭುತ ಕ್ಷಣ ಬರುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ರಮವು ಪೂರ್ಣಗೊಳ್ಳಲಿದೆ. ಲಕ್ಷಾಂತರ ರಾಮ ಭಕ್ತರು ವರ್ಷಗಳಿಂದ ಕಾಯುತ್ತಿದ್ದು, ಇಂದು ಪ್ರಧಾನಿ ನೇತೃತ್ವದಲ್ಲಿ ನೆರವೇರಲಿದೆ. ಇಡೀ ದೇಶವೇ ರಾಮಮಯವಾಗುತ್ತಿದೆ, ನಂಬಿಕೆ ಮತ್ತು ಭಕ್ತಿಯ ಸಾಗರದಲ್ಲಿ ಮುಳುಗಿದೆ. ತಲೆಮಾರುಗಳ ಹೋರಾಟ ಮತ್ತು ನಿರ್ಣಯವು ವಿಗ್ರಹಾರಾಧನೆಯಲ್ಲಿ ಪರಾಕಾಷ್ಠೆಯಾಗುತ್ತಿದೆ. ಈ ಸಂದರ್ಭದಲ್ಲಿ, ಯೋಗಿ ಆದಿತ್ಯನಾಥ್ ಅವರು ತಮ್ಮ…
ನಟನೆಯಿಂದ ದೂರ ಉಳಿದು ರಾಜಕೀಯದಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ನಟಿ ಖುಷ್ಬು ಸುಂದರ್, ಮೋದಿಯನ್ನು ಭೇಟಿ ಮಾಡಿಸುವ ಮೂಲಕ ತನ್ನ ಅತ್ತೆಯ ಕನಸನ್ನು ನನಸು ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಫೋಟೋಗಳನ್ನು ಶೇರ್ ಮಾಡಿದ್ದಾರೆ. ತಮಿಳುನಾಡಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಯನ್ನು ಖ್ಯಾತ ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಖುಷ್ಬೂ ಜೊತೆಗೆ ಆಕೆಯ ಅತ್ತೆ ದೇವನೈ ಚಿದಂಬರಂ ಪಿಳ್ಳೈ ಕೂಡ ಮೋದಿಯನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ಖುಷ್ಬೂ ಅತ್ತೆಯ ಆಶೀರ್ವಾದ ಪಡೆದರು. ಮೋದಿಯನ್ನು ನೋಡಿ ತುಂಬಾ ಸಂತೋಷವಾಯಿತು. ಈ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನು ಖುಷ್ಬೂ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೋದಿ ಅವರ ಅಭಿಮಾನಿಯಾಗಿರುವ ನನ್ನ ಅತ್ತೆ ಶ್ರೀಮತಿ ದೇವನೈ ಚಿದಂಬರಂ, ಅವರನ್ನು ಕರೆದು ಭೇಟಿ ಮಾಡಿದ್ದಕ್ಕೆ ತುಂಬಾ ಸಂತೋಷವಾಗಿದೆ. ಇಷ್ಟು ಸಂತೋಷ ನೀಡಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳಲು ಪದಗಳೇ ಸಾಲದು…
ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲೆ ಬಿಜೆಪಿ ದಾಳಿ ಖಂಡಿಸಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಹಿರಿಯ ಮುಖಂಡರಿಗೆ ಮನವಿ ಮಾಡಲಾಗಿದೆ. ಮಧ್ಯಾಹ್ನ ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ಭಾರತ್ ಜೋಡೋ ನ್ಯಾಯ ಯಾತ್ರೆಯು ಆಡಳಿತ ವೈಫಲ್ಯದ ಮುಚ್ಚುಮರೆ ಎಂದು ಕಾಂಗ್ರೆಸ್ ಟೀಕಿಸಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ನಡೆಸಿದ ದಾಳಿ ಖಂಡಿಸಿ ಕೆಪಿಸಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಅಸಾಧಾರಣ ಜನಸ್ತೋಮವನ್ನು ನೋಡಿದ ನಂತರ ಬಿಜೆಪಿ ಕ್ರಿಮಿನಲ್ ಗಳು ವ್ಯಾಪಕ ಹಿಂಸಾಚಾರವನ್ನು ಹೊರಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಹೇಳಿದೆ. ರಾಹುಲ್ ಗಾಂಧಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂದ ಬಿಸ್ವಾ ಶರ್ಮಾ ನಡುವಿನ ಮಾತಿನ ಚಕಮಕಿಯ ನಡುವೆ ಸಂಘರ್ಷ ನಡೆದಿದೆ. ಹಿಂದಿನ ದಿನ ಬಿಜೆಪಿ ಕಾರ್ಯಕರ್ತರು ವಾಹನಗಳ ಗಾಜುಗಳನ್ನು ಒಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ ನಿನ್ನೆ ಮತ್ತೆ ಘರ್ಷಣೆ ಸಂಭವಿಸಿದೆ. ಬಿಜೆಪಿ ಕಾರ್ಯಕರ್ತರು…
ರಾಮ ಮಂದಿರವನ್ನು ಸಾಕಾರಗೊಳಿಸಿದ್ದಕ್ಕಾಗಿ ನ್ಯೂಜಿಲೆಂಡ್ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಮೋದಿಯವರ ಪ್ರಯತ್ನದಿಂದ ರಾಮಮಂದಿರ ನಿರ್ಮಾಣ ಸಾಧ್ಯವಾಯಿತು. ಈ ದೇವಾಲಯವನ್ನು 1,000 ವರ್ಷಗಳ ಬಾಳಿಕೆ ಬರುವಂತೆ ನಿರ್ಮಿಸಲಾಗಿದೆ ಎಂದು ನ್ಯೂಜಿಲೆಂಡ್ ನಿಯಂತ್ರಣ ಸಚಿವ ಡೇವಿಡ್ ಸೆಮೌರ್ ಹೇಳಿದ್ದಾರೆ. ಜೈ ಶ್ರೀರಾಮ್….ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಅಭಿನಂದನೆಗಳು. ಮೋದಿಯವರ ಪ್ರಯತ್ನದ ಫಲವಾಗಿ 500 ವರ್ಷಗಳ ಕಾಯುವಿಕೆಯ ನಂತರ ರಾಮಮಂದಿರ ಸಾಕಾರಗೊಂಡಿದೆ. ದೇವಾಲಯವು ಹೊರಾಂಗಣವಾಗಿದೆ ಮತ್ತು ಸಾವಿರ ವರ್ಷಗಳ ಬಾಳಿಕೆ ಬರುವಂತೆ ನಿರ್ಮಿಸಲಾಗಿದೆ”ಎಂದು ಡೇವಿಡ್ ಸೆಮೌರ್ ಹೇಳಿದರು. ರಾಮ ಮಂದಿರಕ್ಕೆ ಭೇಟಿ ನೀಡಿರುವುದು ಸಂತಸ ತಂದಿದೆ ಎಂದು ಡೇವಿಡ್ ಸೆಮೌರ್ ಹೇಳಿದ್ದಾರೆ. ಇಂದಿನ ಪ್ರಪಂಚದ ಸವಾಲುಗಳನ್ನು ಎದುರಿಸಲು, ಭಾರತದ ಕೋಟ್ಯಂತರ ಜನರಿಗೆ ಸಹಾಯ ಮಾಡಲು, ಪ್ರಧಾನಿಯವರು ಅದೇ ಧೈರ್ಯ ಮತ್ತು ಸಂಕಲ್ಪದಿಂದ ಮುಂದುವರಿಯಲಿ ಎಂದು ಅವರು ಹಾರೈಸಿದ್ದಾರೆ. ಮೋದಿ ಎರಡು ಬಾರಿ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ಭಾರತವನ್ನು ಮುಂದಕ್ಕೆ ಕೊಂಡೊಯ್ಯಲು ಮತ್ತು ಸಂಪತ್ತಿನ ವ್ಯವಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು…
ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಮಧ್ಯಾಹ್ನ 12ರಿಂದ 12.30ರೊಳಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಸಮಾರಂಭದ ‘ಮುಖ್ಯ ಗುರು’ ಕೂಡ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10.30ಕ್ಕೆ ಅಯೋಧ್ಯೆ ತಲುಪಲಿದ್ದಾರೆ. ಕೇವಲ 7000 ವಿಶೇಷ ಆಹ್ವಾನಿತ ಅತಿಥಿಗಳಿಗೆ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ವೀಕ್ಷಿಸಲು ಅವಕಾಶವಿದೆ. ಪ್ರಧಾನಮಂತ್ರಿಯವರು ಮಧ್ಯಾಹ್ನ 12.30ಕ್ಕೆ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಹಾಮಸ್ತಕಾಭಿಷೇಕದ ನಂತರ ನಾಳೆಯಿಂದ ದೇವಸ್ಥಾನವನ್ನು ಸಾರ್ವಜನಿಕರಿಗೆ ತೆರೆಯಲಾಗುತ್ತದೆ. ಪ್ರತಿಷ್ಠಾ ದಿನದ ಪೂರ್ವಭಾವಿಯಾಗಿ, ರಾಷ್ಟ್ರ ರಾಜಧಾನಿ ಸೇರಿದಂತೆ ಕಟ್ಟುನಿಟ್ಟಾದ ಜಾಗರೂಕತೆ ಮತ್ತು ಭದ್ರತೆಯನ್ನು ವಿಧಿಸಲಾಗಿದೆ. ಪ್ರಾಣ ಪ್ರತಿಷ್ಠೆಗೆ ಪೂರ್ವಭಾವಿಯಾಗಿ ಅಧಿವಾಸ ಹಾಗೂ ಧಾರ್ಮಿಕ ವಿಧಿ ವಿಧಾನಗಳು ಇದೇ 16ರಂದು ಆರಂಭಗೊಂಡಿವೆ. ಭಾನುವಾರ ವಿವಿಧ ನದಿಗಳು ಮತ್ತು ಪುಣ್ಯ ಕ್ಷೇತ್ರಗಳಿಂದ ಸಂಗ್ರಹಿಸಿದ ನೀರಿನಿಂದ ತುಂಬಿದ 114 ಕಲಶಗಳಲ್ಲಿ ವಿಗ್ರಹವನ್ನು ಸ್ನಾನ ಮಾಡಲಾಯಿತು. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣ ಶಿಲೆಯಲ್ಲಿ ಕೆತ್ತಿದ 51 ಇಂಚಿನ ವಿಗ್ರಹವಾಗಿದೆ. ಇದು 5 ವರ್ಷದ ಬಾಲಕ ರಾಮನ ವಿಗ್ರಹ.…
ರಾಮಕ್ಷೇತ್ರ ಪ್ರಾಣಪ್ರತಿಷ್ಠೆಯ ನಿಮಿತ್ತ ಭಾರೀ ಭದ್ರತೆಯಲ್ಲಿ ಅಯೋಧ್ಯೆ. ನಗರದಲ್ಲಿ 10,000 ಸಿಸಿಟಿವಿ ಕ್ಯಾಮೆರಾಗಳು ಮತ್ತು ವಿಶೇಷ ಡ್ರೋನ್ ಕಣ್ಗಾವಲು ಅಳವಡಿಸಲಾಗಿದೆ. ರಾಜ್ಯ ಪೊಲೀಸರು ಮತ್ತು ಕೇಂದ್ರ ಪಡೆಗಳ ಹೊರತಾಗಿ ಎನ್ ಎಸ್ ಜಿ ಸ್ನೈಪರ್ ತಂಡಗಳು ಕೂಡ ಅಯೋಧ್ಯೆಯಲ್ಲಿ ಭದ್ರತೆಯನ್ನು ಒದಗಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರಲ್ಲದೆ, ಧಾರ್ಮಿಕ, ರಾಜಕೀಯ, ಚಲನಚಿತ್ರ ಮತ್ತು ಸಾಂಸ್ಕೃತಿಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಯೋಧ್ಯೆಯ ಹಳದಿ ವಲಯದಲ್ಲಿ ಮುಖ ಗುರುತಿಸುವಿಕೆ ತಂತ್ರಜ್ಞಾನದೊಂದಿಗೆ AI ಆಧಾರಿತ ಕ್ಯಾಮೆರಾಗಳನ್ನು ಸಹ ನಿಯೋಜಿಸಲಾಗಿದೆ. ಬಾಂಬ್-ಶ್ವಾನದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ.
ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಗಲಾಟೆ ನಡೆದು ತಮ್ಮನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಸಿದ್ದೇಶ್(36) ಕೊಲೆಯಾದ ವ್ಯಕ್ತಿ. ಅವಿವಾಹಿತರಾಗಿದ್ದ ಸಿದ್ದೇಶ್ ಸ್ವಂತ ಮನೆಯಲ್ಲಿ ವಾಸವಾಗಿದ್ದರು. ಅವರ ಸಹೋದರ ಸತೀಶ್ ಮದುವೆಯಾಗಿ ಪತ್ನಿ, ಪುತ್ರಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪ್ರತಿದಿನ ಕುಡಿದು ಬಂದು ಸತೀಶ್ ಮನೆಯ ಬಳಿ ಸಿದ್ದೇಶ್ ಗಲಾಟೆ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಆಸ್ತಿಯಲ್ಲಿ ಪಾಲು ಕೊಡುವಂತೆ ಶುಕ್ರವಾರ ರಾತ್ರಿ ಸಿದ್ದೇಶ್ ಗಲಾಟೆ ಮಾಡಿದ್ದು, ಜಗಳ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ತಮ್ಮನಿಗೆ ಸತೀಶ್ ಹೊಡೆದಿದ್ದಾರೆ. ಸಿದ್ದೇಶ್ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ. ಸ್ಥಳೀಯರು ಅವರಿಗೆ ಹೊಸದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸತೀಶ್ ನನ್ನು ಬಂಧಿಸಲಾಗಿದೆ.