Author: admin

ಮಂಡ್ಯ: ಮಹಿಳೆಯೊಬ್ಬಳು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪದ್ಮ.ವಿ (36) ಮೃತ ದುರ್ದೈವಿಯಾಗಿದ್ದಾರೆ. ಪದ್ಮ ರಾಮನಗರ ತಾಲೂಕಿನ ಅಂಕನಹಳ್ಳಿ ಗ್ರಾಮದವಳು. ಮಂಡ್ಯದ ಸಿದ್ದರಾಜು ಎಂಬಾತನನ್ನು ಪ್ರೀತಿಸಿ ಪದ್ಮ ಮದುವೆ ಆಗಿದ್ದಳು. ಸಿದ್ದರಾಜು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ. 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಜೀವನ ನಡೆಸುತ್ತಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದರು. ಇತ್ತೀಚೆಗೆ ಸಿದ್ದರಾಜು ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಇದರಿಂದ ನೊಂದ ಪದ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Read More

ಮಂಡ್ಯ: ಯುವಕನ ಮೃತದೇಹವು ಕೈ ಹಾಗೂ ಕತ್ತುಕೊಯ್ದು ಕೊಂಡು ನೇಣು ಬಿಗಿದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಘಟನೆ ನಡೆದಿದೆ. ವಿನಯ್ ಕುಮಾರ್ (24) ಮೃತ ದುರ್ದೈವಿ. ಆತ್ಮಹತ್ಯೆಗೂ ಮುನ್ನ ಮೊಬೈಲ್ ಸಿಮ್ ತೆಗೆದು ಬಿಸಾಡಿದ್ದಾನೆ. ಮೊಬೈಲ್ ಪೂರ್ತಿ ರೀಸ್ಟಾರ್ಟ್ ಮಾಡಿದ್ದಾನೆ. ಯಾವುದೋ ಬಲವಾದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ. ಸದ್ಯ ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಿದ್ದಾರೆ. ಜತೆಗೆ ಯುವಕನ ಮೊಬೈಲ್ ವಶಕ್ಕೆ ಪಡೆದು ತನಿಖೆಯನ್ನು ಮುಂದುವರಿಸಿದ್ದಾರೆ.

Read More

ಗೋವಾ ಹೋಟೆಲ್​ ಮ್ಯಾನೇಜರ್ ಒಬ್ಬರು ಪತ್ನಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ​ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಕಟಿಯಾರ್ ಎಂಬ ಆರೋಪಿ ತನ್ನ ಪತ್ನಿ ದೀಕ್ಷಾ ಗಂಗ್ವಾರ್(27) ಅವರ ಸಾವನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಿಸಿದ್ದರು. ಪೊಲೀಸರು ಗಂಗ್ವಾರ್ ಮಹಿಳೆಯ ಶವವನ್ನು ಫೇಮಸ್​ ಆಗಿರುವ ಬೀಚ್ ಬಳಿ ಪತ್ತೆ ಮಾಡಿದ್ದಾರೆ. ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು, ಅವರು ಬೇರೊಬ್ಬ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದರು. ಅವರಿಬ್ಬರ ನಡುವೆ ಈಕೆ ಅಡ್ಡಬರುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ.

Read More

ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಶಾಂಕ್(26) ಬಂಧಿತ ಆರೋಪಿಯಾಗಿದ್ದಾನೆ. ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ.

Read More

ನೋಯ್ಡಾ: ವ್ಯಕ್ತಿಯೊಬ್ಬನನ್ನು ಇಬ್ಬರು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದು ಹತ್ಯೆ ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಹಳೆಯ ವೈಷಮ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯನ್ನು ಹತ್ಯೆ ಮಾಡಿದ್ದಲ್ಲದೆ ದೇಹವನ್ನು ಬೈಕ್ ಗೆ ಕಟ್ಟಿ ಕಿಲೋಮೀಟರ್ ಗಳವರೆಗೆ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ನೋಯ್ಡಾದ ಬರೋಲಾದಲ್ಲಿ ಅನುಜ್ ಮತ್ತು ಅವರ ಸೋದರ ಸಂಬಂಧಿ ನಿತಿನ್ ಅವರು ಮೆಹಂದಿ ಹಾಸನ್ಗೆ ಚಾಕುವಿನಿಂದ ಇರಿದಿದ್ದಾರೆ. ನಂತರ ಅವರ ಕಾಲನ್ನು ಬೈಕ್ಗೆ ಕಟ್ಟಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದರು. ಕೆಲವು ವರ್ಷಗಳ ಹಿಂದೆ ಮೆಹೆಂದಿ ಹಸನ್ ಅನುಜ್ ತಂದೆಯ ಮೇಲೆ ಹಲ್ಲೆ ನಡೆಸಿದ್ದ ಮತ್ತು ದಾಳಿಗೆ ಸೇಡು ತೀರಿಸಿಕೊಳ್ಳಲು ಆತ ಬಯಸಿದ್ದಾಗಿ ಎಂದು ಹಂತಕರು ಪೊಲೀಸರಿಗೆ ತಿಳಿಸಿದ್ದಾರೆ.

Read More

ನಾಳೆ ಅಯೋಧ್ಯೆಯ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ತೆರಳಲಿದ್ದಾರೆ. ಅಯೋಧ್ಯೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಾಣ ಪ್ರತಿಷ್ಠಾ ದಿನದಂದು ಪ್ರಧಾನಿಯವರು ಸರಯೂ ಸ್ನಾನ ಮುಗಿಸಿ ದೇವಸ್ಥಾನಕ್ಕೆ ಬರಲು 2 ಕಿ.ಮೀ. ನಂತರ ಹನುಮಂಗಡಿ ದೇವಸ್ಥಾನಕ್ಕೆ ಭೇಟಿ ನೀಡಿ. ಲೋಕಾರ್ಪಣೆ ಕಾರ್ಯಕ್ರಮಕ್ಕೂ ಮುನ್ನ ಅಯೋಧ್ಯೆಯಲ್ಲಿ ಭರದ ಸಿದ್ಧತೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಆಗಮಿಸಲಿದ್ದು, ಮಧ್ಯಾಹ್ನ 12.05 ರಿಂದ ಸಮರ್ಪಣಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಜನವರಿ 22ರಂದು ದೀಪಾವಳಿಯಂತೆ ರಾಮಮಂದಿರ ಉದ್ಘಾಟನೆಯನ್ನು ಮನೆಯಲ್ಲಿ ಮಣ್ಣಿನ ದೀಪಗಳನ್ನು ಹಚ್ಚಿ, ಬಡವರಿಗೆ ಅನ್ನ ನೀಡುವ ಮೂಲಕ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮೋದಿ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು. ಸಮರ್ಪಣೆ ಸಮಾರಂಭದ ನಂತರ ತಮ್ಮ ಕ್ಷೇತ್ರಗಳ ಜನರು ಅಯೋಧ್ಯೆಗೆ ರೈಲು ಪ್ರಯಾಣವನ್ನು ಸುಗಮಗೊಳಿಸುವಂತೆ ಅವರು ಮಂತ್ರಿಗಳನ್ನು ಕೇಳಿದ್ದಾರೆ. ವ್ಯವಸ್ಥೆಗಳನ್ನು ಖುದ್ದಾಗಿ ಪರಿಶೀಲಿಸಲು ಮತ್ತು ಅವರ ಕ್ಷೇತ್ರಗಳಿಂದ…

Read More

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಗೆ ಸಂಬಂಧಿಸಿದಂತೆ ಜನವರಿ 22 ರಂದು ಮಹಾರಾಷ್ಟ್ರದಲ್ಲಿ ಸಾರ್ವಜನಿಕ ರಜೆ ಘೋಷಿಸುವುದರ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ, ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ನಾಲ್ವರು ಕಾನೂನು ವಿದ್ಯಾರ್ಥಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಇಂದು ಬೆಳಗ್ಗೆ 10.30ಕ್ಕೆ ಪಿಐಎಲ್ ಅನ್ನು ಪರಿಗಣಿಸಲಿದೆ. ನ್ಯಾಯಮೂರ್ತಿಗಳಾದ ಜಿ.ಎಸ್. ಕುಲಕರ್ಣಿ ಮತ್ತು ನೀಲಾ ಗೋಖಲೆ ಅವರ ಪೀಠವು ಅರ್ಜಿಯನ್ನು ಪರಿಗಣಿಸಲಿದೆ. ಮುಂಬೈನ ಎಂಎನ್‌ ಎಲ್‌ ಯು, ಜಿಎಲ್‌ ಸಿ ಮತ್ತು ಎನ್ ಐಆರ್‌ ಎಂಎ ಕಾನೂನು ಶಾಲೆಯ ವಿದ್ಯಾರ್ಥಿಗಳಾದ ಶಿವಂಗಿ ಅಗರ್ವಾಲ್, ಸತ್ಯಜೀತ್ ಸಿದ್ಧಾರ್ಥ್ ಸಾಳ್ವೆ, ವೇದಾಂತ್ ಗೌರವ್ ಅಗರ್ವಾಲ್ ಮತ್ತು ಖುಷಿ ಸಂದೀಪ್ ಬಾಂಗಿ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಧಾರ್ಮಿಕ ಸಮಾರಂಭವನ್ನು ಆಚರಿಸಲು ಸಾರ್ವಜನಿಕ ರಜಾದಿನವನ್ನು ಘೋಷಿಸುವುದು ಸಂವಿಧಾನವು ಖಾತರಿಪಡಿಸಿರುವ ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸುತ್ತಾರೆ. ಅಯೋಧ್ಯೆ ರಾಮಮಂದಿರದ ಸಮರ್ಪಣೆಯ ದಿನವಾದ ಜನವರಿ 22 ರಂದು ಅನೇಕ ರಾಜ್ಯಗಳು ಸಂಪೂರ್ಣ ಅಥವಾ ನಿರ್ಬಂಧಿತ ರಜೆಯನ್ನು…

Read More

ಜನವರಿ 22 ಸೋಮವಾರ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಪ್ರಮುಖ ಮಠಾಧೀಶರು ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಿಂದ ವಿವಿಧ ಮಠಾಧೀಶರು ಪ್ರಯಾಣ ಬೆಳೆಸಿದ್ದಾರೆ. ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಮಹಾಸ್ವಾಮಿಜಿ, ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗದ ಶಾಂತವೀರ ಮಹಾಸ್ವಾಮೀಜಿ, ಸಿದ್ದರಾಮೇಶ್ವರ ಮಹಾ ಸಂಸ್ಥಾನ ಭೋವಿ ಗುರುಪೀಠ ಚಿತ್ರದುರ್ಗದ ಇಮ್ಮಡಿ ಸಿದ್ದರಾಮಯ್ಯ ಮಹಾಸ್ವಾಮೀಜಿ, ಶ್ರೀ ವಾಲ್ಮೀಕಿ ಗುರುಪೀಠ ರಾಜನಳ್ಳಿ ಹರಿಹರದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಜಿ, ಮಹಾಸ್ವಾಮೀಜಿ ಪಂಚಮಸಾಲಿ ಗುರುಪೀಠ ಹರಿಹರದ ವಚನಾನಂದ ಸ್ವಾಮೀಜಿ ಮತ್ತು ಮಹಾಸ್ವಾಮೀಜಿ ಭಗೀರಥ ಪೀಠ ಮಧುರೆದ ಪುರುಷೋತ್ತಮಾನಂದ ಪುರಿ ಮಠಾಧೀಶರು ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜನವರಿ 22ರಂದು ರಾಮಮಂದಿರ ಉದ್ಘಾಟನೆಯ ನೇರ ಪ್ರಸಾರ ವೀಕ್ಷಿಸಲಿಕ್ಕಾಗಿ ಈಗಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಬಿಜೆಪಿ ಆಡಳಿತವಿರುವ…

Read More

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರೆಯಲು ಅಡೆತಡೆ ಇರುವುದಿಲ್ಲ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಸಿದ್ದರಾಮಯ್ಯ 5 ವರ್ಷ ಮುಂದುವರಿಯಬೇಕೆಂಬುದು ಜನರ ಆಶಯ. ಅದ್ದರಿಂದ ಯತೀಂದ್ರ ಅವರ ಹೇಳಿಕೆ ತಪ್ಪಲ್ಲ. ನಾನು ಸದಾಕಾಲ ಸಿದ್ದರಾಮಯ್ಯ ಪರವಾಗಿಯೇ ಮಾತನಾಡುತ್ತೇನೆ. ಅದರಲ್ಲಿ ಯಾವುದೇ ಹಿಂಜರಿಕೆ ಇಲ್ಲ. ಸಿದ್ದರಾಮಯ್ಯ ಅವರ ಅಧಿಕಾರವನ್ನು ಮುಂದುವರೆಸುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎನ್. ರಾಜಣ್ಣ, ಮುದ್ದಹನುಮೇಗೌಡ ಅವರು ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ. ಈ ವಿಚಾರ ಚರ್ಚೆಯೂ ಆಗಿದೆ. ಆದರೆ ಟಿಕೆಟ್ ನೀಡುವ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಹೈಕಮಾಂಡ್ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

Read More

ಕಾಂಗ್ರೆಸ್ ಪಕ್ಷವನ್ನ ಹಿಂದೂ ವಿರೋಧಿ ಎಂದು ಟೀಕಿಸಿರುವ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಬಗ್ಗೆ ಟೀಕೆ ಟಿಪ್ಪಣಿ ಮಾಡೋದು ಬಿಟ್ಟು ಬಿಡಬೇಕು. ಕಾಂಗ್ರೆಸ್ ಹಿಂದೂ ವಿರೋಧಿ ಅಲ್ಲ. ಹಿಂದೂ ವಿರೋಧಿ ಆಗಿದ್ದರೆ 135 ಸೀಟ್ ಹೇಗೆ ಬರುತ್ತಿದ್ದವು? ಎಂದು ಪ್ರಶ್ನಿಸಿ ಬಿಜೆಪಿಗೆ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಜಗದೀಶ್ ಶೆಟ್ಟರ್, ರಾಮ ಮಂದಿರ ಅನ್ನೋದು ಧಾರ್ಮಿಕತೆ, ಧರ್ಮದ ಸಂಕೇತ, ಧರ್ಮ ಜಾಗೃತಿ ಮಾಡಲು, ದೇಶವನ್ನು ಒಂದು ಮಾಡಲು ಇರುವಂಥದ್ದು. ಶ್ರೀರಾಮ ಮಂದಿರದ ವಿಚಾರದಲ್ಲಿ ರಾಜಕಾರಣ ಮಾಡಬಾರದು. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಬರಬಾರದು. ಆಹ್ವಾನ ಬಂದಂಥವರು ಬೇರೆ ಬೇರೆ ಕಾರಣದಿಂದ ಹೋಗಲ್ಲ ಅಂತಾ ಕಾಂಗ್ರೆಸ್‌ ನವರು ಹೇಳಿದ್ದಾರೆ. ಅದಕ್ಕೆ ಬಿಜೆಪಿ ಅವರು ಟೀಕೆ ಮಾಡಿದ್ದಾರೆ ಎಂದರು. ಮತ್ತೆ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಬಿಜೆಪಿಯಿಂದ ನನ್ನನ್ನು ಯಾರೂ ಸಂಪರ್ಕ…

Read More