Author: admin

ಬೆಂಗಳೂರು: ನಗರದ ಬಿ. ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ & ಟೆಕ್ನಾಲಜಿ ಸೆಂಟ‌ರ್ ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾರ್ಪಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿಯವರನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್, ಭಾರತೀಯ ಜನತಾ ಪಾರ್ಟಿ ರಾಜ್ಯಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹಾಗೂ ಶಾಸಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ವಡಗಾಂವ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಗೆ ಔರಾದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮೀ ಬಿ. ಭೇಟಿ ನೀಡಿ, ಶಾಲೆ ಮಕ್ಕಳ ಹಾಜರಾತಿ, ಬಿಸಿಯೂಟಸೇರಿದಂತೆ ಅನೇಕ ವಿಷಯಗಳ ಮಾಹಿತಿ ಪಡೆದರು. ಶಾಲೆಯ ಸ್ವಚ್ಛತೆ ಮತ್ತು ಮಕ್ಕಳ ಕಲಿಕೆಯ ಬಗ್ಗೆ ಪರಿಶೀಲಿದರು ಅಡುಗೆ ಕೋಣೆಯನ್ನು ವೀಕ್ಷಿಸಿ ಮಾತನಾಡಿದ ಅವರು, ಅಡುಗೆ ಕೋಣೆಯಲ್ಲಿ ಬರಿ ಕತ್ತಲು ನೋಡಿ, ಕತ್ತಲಿನಲ್ಲಿ ಅಡುಗೆ ಮಾಡುವುದಾದರೂ ಹೇಗೆ? ಅಡುಗೆ ಕೋಣೆ ಸ್ವಚ್ಛತೆ ಮಾಡುವಂತೆ ಶಿಕ್ಷಕರಿಗೆ ತರಾಟೆಗೆ ತೆಗೆದುಕೊಂಡರು. ಎರಡು ದಿವಸದೊಳಗೆ ಸಂಪೂರ್ಣ ಅಡುಗೆ ಕೋಣೆ ಸ್ವಚ್ಛಗೊಳಿಸಿ ಬಣ್ಣ ಹಚ್ಚುವಂತೆ ಹೇಳಿದರು. ಇದೆ ವೇಳೆ ವಡಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಹೇಡೆ, ಬಲಭೀಮ ECO, ಈಶ್ವರ ECO, ರವಿಂದ್ರ ಡಿಗ್ಗಿ CRP ಮುಖ್ಯ ಶಿಕ್ಷಕ ಪ್ರೇಮಕುಮಾರ, ಶಿಕ್ಷಕರಾದ ಕಾಮಶೇಟ್ಟಿ, ಜಯಕುಮಾರ, ಸೇರಿದಂತೆ ಮೂರು ಶಾಲೆಯ ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್

Read More

ಒಡಿಶಾ: ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿ ಎರಡು ಬೈಕ್ ​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದೆ. ಸೊರಡ ಸಮೀಪದ ಕೇಶರಿಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನಗಳಲ್ಲಿ ತಲಾ ಮೂವರು ಪ್ರಯಾಣಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದರು. ಮೃತರನ್ನು ಆಶುರಬಂದ್‌ ನ ಶ್ರೀಕಾಂತ್ ಗೌಡ, ದುಲಾದದ ಮನೋಜ್ ಡಾಕುವಾ, ಗೋಪಾಲಪುರ ಸಶನ್‌ ನ ಮಹೇಂದ್ರ ನಾಯಕ್, ಸೊರಡದ ಜಯಂತ್ ಬಡತ್ಯ ಮತ್ತು ಸನಾ ಸೊರಡದ ರಜನಿ ಗೌಡ ಎಂದು ಗುರುತಿಸಲಾಗಿದೆ. 43 ವರ್ಷದ ರಜನಿ ಅವರನ್ನು ಹೊರತುಪಡಿಸಿ ಉಳಿದವರೆಲ್ಲರೂ 30ರಿಂದ 35ರೊಳಗಿನವರು ಎಂಬುದು ತಿಳಿದುಬಂದಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಜಯಂತ್ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯ ಸ್ಥಿತಿ…

Read More

ಮೈಸೂರು ಜಿಲ್ಲೆ: ಮೂವರು ಅಯ್ಯಪ್ಪ ಮಾಲಾಧಾರಿಗಳು ಕಪಿಲಾ ನದಿಯಲ್ಲಿ ಮುಳುಗಿ ಜಲಸಮಾಧಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನ ಹೆಜ್ಜಿಗೆ ಸೇತುವೆ ಬಳಿ ಘಟನೆ ನಡೆದಿದ್ದು, ಮೃತ ಮೂವರು ತುಮಕೂರು ಮೂಲದ ನಿವಾಸಿಗಳಾಗಿದ್ದಾರೆ. ಸ್ನಾನ ಮಾಡಲು 6 ಮಂದಿ ನದಿಗೆ ಇಳಿದಿದ್ದಾಗ ದುರಂತ ನಡೆದಿದೆ ಎಂದು ತಿಳಿದು ಬಂದಿದೆ. ಅದರಲ್ಲಿ ಮೂವರು ಮಾಲಾಧಾರಿಗಳು ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಉಳಿದ ಮೂವರು ಕೊಡಗು ಮೂಲದವರಾಗಿದ್ದಾರೆ.

Read More

ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಲೋನ್ ಪಡೆದಿದ್ದ ಐವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವೃದ್ಧೆಯೊಬ್ಬರ ಮನೆಯ ಮೇಲೆ ಲೋನ್ ಪಡೆದು ಈ ಗ್ಯಾಂಗ್​​ ನವರು ವಂಚನೆ ಎಸಗಿದ್ದರು. ವೃದ್ಧೆ ಮನೆ ಮಾರಾಟ ಮಾಡಿ‌ ವಿದೇಶಕ್ಕೆ‌ ತೆರಳಲು ತೀರ್ಮಾನಿದ್ದ ವಿಚಾರವನ್ನು ಪಕ್ಕದ ಮನೆಯ ನಿವಾಸಿ ಮಂಜುನಾಥ್ ಬಳಿ ಹೇಳಿಕೊಂಡಿದ್ದರು. ಈ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಮಂಜುನಾಥ, ತನ್ನ ಸ್ನೇಹಿತರ ಜೊತೆಗೆ ಸೇರಿ ಲೋನ್ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣದ ತನಿಖೆ ನಡೆಸಿದಾಗ ಬ್ಯಾಂಕ್ ಮ್ಯಾನೇಜರ್ ಗಳ ಯಡವಟ್ಟು ಬಯಲಿಗೆ ಬಂದಿದೆ.

Read More

ರಾಜ್ಯ ಸರ್ಕಾರವು ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚವರಿ ಶೇ. 10% ಬದಲಾಗಿ, 10 ಯೂನಿಟ್‌ ಉಚಿತ ವಿದ್ಯುತ್‌ ನೀಡಲು  ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು ಸಭೆ ಬಳಿಕ ಮಾತನಾಡಿ ಮಾಹಿತಿ ನೀಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್, ಗೃಹ ಜ್ಯೋತಿ ಯೋಜನೆ ಅಡಿ ಶೇ.10% ಬದಲು 10 ಯೂನಿಟ್ ವಿದ್ಯುತ್  ನೀಡಲು ನಿರ್ಧಾರ ಮಾಡಲಾಗಿದೆ ಎಂದರು. ವಿದ್ಯುತ್ ಸರಬರಾಜು ಕಂಪನಿಗಳು ಯಪಿಸಿಎಲ್ ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆ ನಡೆಸಲಾಗಿದೆ.  ಸೆಂಟ್ರಲ್ ಇ.ಆರ್. ಸಿಯವರ ಆದೇಶದ ಕುರಿತು ಚರ್ಚೆ ನಡೆಸಲಾಗಿದೆ. ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ 419 ಕೋಟಿ ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು. ಇಂದನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, 48 ಯುನಿಟ್ ಕಡಿಮೆ ಇದ್ದವರಿಗೆ 10% ವಿದ್ಯುತ್ ನೀಡಲು ಈ ಮೊದಲು…

Read More

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯು ಮುಂಬರುವ ಫೆಬ್ರುವರಿ  16ರಂದು ನಡೆಯಲಿದ್ದು, ಆ  ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಮುಖಂಡರ ಸಭೆ, ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಇಂದು ನಡೆಸಲಾಯಿತು. ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್ ಅವರು ಕಣಕ್ಕೆ ಇಳಿಯುತ್ತಿದ್ದು, ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕು ಎಂದು ಸಭೆಯಲ್ಲಿ ಹೆಚ್.ಎಂ. ರಮೇಶ್ ಗೌಡ ಕರೆ ನೀಡಿದರು. ಅಲ್ಲದೆ, ಮಿತ್ರಪಕ್ಷವಾದ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆಲಸ ಮಾಡಬೇಕಿದೆ. ಕಾಂಗ್ರೆಸ್ ದುರಾಡಳಿತದ ವಿರುದ್ಧ ಶಿಕ್ಷಕರು ರೋಸಿ ಹೋಗಿದ್ದಾರೆ. ಶಿಕ್ಷಣ ಹಾಗೂ ಶಿಕ್ಷಕರ ಬಗ್ಗೆ ಸರ್ಕಾರದ ಅಸಡ್ಡೆ ಬಹಳ ಅಪಾಯಕಾರಿ ಆಗಿದೆ. ಈ ಎಲ್ಲಾ ಶಿಕ್ಷಕ ಬಂಧುಗಳ ಗಮನಕ್ಕೆ ತರಬೇಕು ಎಂದು ಇದೇ ವೇಳೆ ಪಕ್ಷದ ಹಿರಿಯ ಮುಖಂಡರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ ಅವರು ಹೇಳಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ…

Read More

ರಾಮಕ್ಷೇತ್ರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) 3 ಜನರನ್ನು ಬಂಧಿಸಿದೆ. ನಿನ್ನೆ ಅಯೋಧ್ಯೆ ಜಿಲ್ಲೆಯಲ್ಲಿ ನಡೆಸಿದ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಗೆ ಭಯೋತ್ಪಾದಕ ಸಂಪರ್ಕವಿದೆ ಎಂದು ಶಂಕಿಸಲಾಗಿದೆ. ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ), ಪ್ರಶಾಂತ್ ಕುಮಾರ್ ಅವರು ಅಯೋಧ್ಯೆಯಲ್ಲಿ ನಡೆಸಿದ ಶೋಧದ ವೇಳೆ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಶಂಕಿತರನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ. ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ. ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಸದ್ಯಕ್ಕೆ ಪತ್ತೆಯಾಗಿಲ್ಲ ಎಂದು ಡಿಜಿಪಿ ಹೇಳಿದ್ದಾರೆ. ಜನವರಿ 22ರಂದು ನಡೆಯಲಿರುವ ರಾಮಮಂದಿರ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಡ್ರೋನ್‌ ಗಳ ಮೂಲಕ ಪೊಲೀಸ್ ತಪಾಸಣೆ ಮತ್ತು ಕಣ್ಗಾವಲು ಕೂಡ ತೀವ್ರಗೊಳಿಸಲಾಗಿದೆ. ರಾತ್ರಿ ದೃಷ್ಟಿ ಸಾಧನಗಳು (ಎನ್‌ ವಿಡಿ) ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ತಂತ್ರಜ್ಞಾನಗಳನ್ನು ಬಳಸಿಕೊಂಡು ಸರ್ಕಾರವು ನಗರದಾದ್ಯಂತ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಜನವರಿ 22…

Read More

ಗುಜರಾತ್ ‌ನಲ್ಲಿ ನಡೆದ ದೋಣಿ ಅಪಘಾತದಲ್ಲಿ 14 ಸಾವು ಸಂಭವಿಸಿದೆ. ಮೃತರಲ್ಲಿ 12 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದ್ದಾರೆ. ವಡೋದರ ಸಮೀಪದ ಹರಣಿ ಸರೋವರದಲ್ಲಿ ಈ ದುರ್ಘಟನೆ ನಡೆದಿದೆ. ದೋಣಿಯಲ್ಲಿ 27 ಮಂದಿ ಇದ್ದರು. ಕೆರೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರವಾಸೋದ್ಯಮದ ಅಂಗವಾಗಿ ವಡೋದರದ ಹರಣಿ ಸರೋವರದಲ್ಲಿ ದೋಣಿ ವಿಹಾರಕ್ಕೆ ಬಂದಿದ್ದ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳ ತಂಡ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಅವರಲ್ಲಿ 23 ಮಕ್ಕಳು ಮತ್ತು ನಾಲ್ವರು ಶಿಕ್ಷಕರು. ಅಪಘಾತದ ವೇಳೆ ದೋಣಿಯಲ್ಲಿದ್ದ ಯಾರೂ ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದುವರೆಗೆ ಸುಮಾರು 11 ಮಕ್ಕಳನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ರಕ್ಷಣಾ ತಂಡವಲ್ಲದೆ ಎನ್‌ ಡಿಆರ್ ‌ಎಫ್ ತಂಡವನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣದ ಸಹಾಯ ಮತ್ತು ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಧ್ಯಕ್ಷೆ ದ್ರೌಪದಿ ಮುರ್ಮು ಕೂಡ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು,…

Read More

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ಸಕಲೇಶಪುರ ತಾಲೂಕಿನ ಪೊಲೀಸ್ ಕ್ವಾಟರ್ಸ್ ನಲ್ಲಿ ನಡೆದಿದೆ. ಸೋಮಶೇಖರ್(39) ಸಾವಿಗೆ ಶರಣಾದವರಾಗಿದ್ದಾರೆ. ಇವರು ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೋಮಶೇಖರ್ ಪತ್ನಿ ಆತನ ವಿರುದ್ಧ ಕಿರುಕುಳದ ಆರೋಪ ಮಾಡಿ ಡಿವೈಎಸ್ ಪಿಗೆ ದೂರು ನೀಡಿದ್ದರು. ಇದರಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸೋಮಶೇಖರ್ ಪತ್ನಿ ಶಿಕ್ಷಕಿಯಾಗಿದ್ದು, ಇಬ್ಬರ ನಡುವೆ ಕೌಟುಂಬಿಕ ಕಲಹಗಳಿದ್ದವು ಎನ್ನಲಾಗಿದೆ. ಸಕಲೇಶಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More