Subscribe to Updates
Get the latest creative news from FooBar about art, design and business.
- ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
- ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
- ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
- ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
- ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ 14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
- ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ವಾಜಪೇಯಿ ಅವರ 101ನೇ ಜಯಂತಿ: ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ: ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
- “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
Author: admin
ಪಾವಗಡ : 2025-26ನೇ ಶೈಕ್ಷಣಿಕ ಸಾಲಿನ ವೈ.ಎನ್.ಹೊಸಕೋಟೆ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ದೊಡ್ಡಹಳ್ಳಿಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿ ಭಾಗ್ಯಲಕ್ಷ್ಮಿ ಆರ್. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಧನುಷ್ ಎನ್ನುವ ವಿದ್ಯಾರ್ಥಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೀರೇಶ್, ಮುಖ್ಯ ಶಿಕ್ಷಕರಾದ ಲಕ್ಷ್ಮ ನಾಯ್ಕ ಮತ್ತು ಶಾಲಾ ಸಿಬ್ಬಂದಿ ಶುಭಾ ಹಾರೈಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಲಿದೆ. ಈಗಾಗಲೇ ವಿಶೇಷ ನ್ಯಾಯಾಲಯ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‌ಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿ, ಜು.30ರಂದು ತೀರ್ಪು ಕಾಯ್ದಿರಿಸಿತ್ತು. ಆದರೆ ಬಳಿಕ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಬಳಿ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆಗಳನ್ನು ಕೇಳಿದ್ದರು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ಕೆಲ ಮಾಹಿತಿ ಕೇಳಿ ಆ.1ಕ್ಕೆ ಮುಂದೂಡಿತ್ತು. ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಶುಕ್ರವಾರ ಹೊರಬೀಳಲಿರುವ ತೀರ್ಪು ಬಹಳ ಮಹತ್ವದ್ದಾಗಿರಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂಬ ಇಬ್ಬರು ಆರೋಪಿಗಳು ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಲೇಔಟ್ ನ ನಿಶ್ಚಿತ್(13) ಮತ್ತು ಆತನ ಪೋಷಕರು ವಾಸವಾಗಿದ್ದರು. ನಗರದ ಪ್ರತಿಷ್ಠಿತ ಕಾಲೇಜ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ನಿಶ್ಚಿತ್ ತಂದೆಯ ಬಳಿ ಆರೋಪಿ ಗುರುಮೂರ್ತಿ ಹೆಚ್ಚುವರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆಗಾಗ ಮನೆಗೆ ಹೋಗಿ ಬರುತ್ತಿದ್ದ ಗುರುಮೂರ್ತಿ, ನಿಶ್ಚಿತ್ ನನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಡುವ ಸಂಚು ರೂಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಯತ್ತ ಬರುತ್ತಿದ್ದ ನಿಶ್ಚಿತ್ ನನ್ನು ಆರೋಪಿಗಳು ಅಪಹರಿಸಿದ್ದರು. ಟ್ಯೂಷನ್ ಮುಗಿದು ಸುಮಾರು ಗಂಟೆಗಳಾದರೂ ಮನೆಗೆ ಬಾರದ ಮಗನ ಬಗ್ಗೆ ಪೋಷಕರು ಆಂತಕದಿಂದ ಹುಡುಕಾಟ ನಡೆಸಿದ್ದರು. ಬಳಿಕ ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೊತ್ತಿಗಾಗಲೇ ಬಾಲಕನ ತಂದೆಗೆ ಕರೆ ಮಾಡಿದ್ದ ಆರೋಪಿಗಳು…
ಬೆಂಗಳೂರು: ನಗರದಲ್ಲಿ ಆಟೋ ಪ್ರಯಾಣ ದರ ದುಬಾರಿಗೊಂಡಿದ್ದು, ಪರಿಷ್ಕೃತ ದರ ಶುಕ್ರವಾರದಿಂದ ಜಾರಿಗೆ ಬಂದಿದೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ನಗರ ಜಿಲ್ಲಾಧಿಕಾರಿ ಅವರ ಆದೇಶದಂತೆ ಆಟೋದಲ್ಲಿ ಪ್ರಯಾಣಿಲುವ ಜನರು ಮೊದಲ 2 ಕಿಮೀ (ಕನಿಷ್ಠ ದರ) ಪ್ರಯಾಣಕ್ಕೆ 36 ರೂ.ಪಾವತಿಸಬೇಕಿದೆ. ಬಸ್, ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಳದ ನಂತರ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಆಟೋ ಚಾಲಕರು ಮತ್ತು ಸಂಘಟನೆಗಳು ಆಗ್ರಹಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಕಳೆದ ಜು.14 ರಂದು ಆಟೋ ಪ್ರಯಾಣ ದರ ಹೆಚ್ಚಿಸಿ ಆದೇಶಿಸಿದ್ದರು. ಈ ಆದೇಶವು ಇಂದು ಜಾರಿಗೆ ಬಂದಿದೆ. ಆದೇಶದ ಪ್ರಕಾರ ಮೊದಲ 2 ಕಿಮೀ ಪ್ರಯಾಣದ ಮೊತ್ತವು 30 ರು.ನಿಂದ 36 ರು.ಗೆ ಹೆಚ್ಚಳವಾಗಿದ್ದು, ಉಳಿದಂತೆ ನಂತರದ ಪ್ರತಿ ಕಿಮೀ ದರವನ್ನು 15 ರೂ.ನಿಂದ 18ರೂ.ಗೆ ಹೆಚ್ಚಿಸಲಾಗಿದೆ. ಕಾಯುವಿಕೆ ದರವನ್ನು ಮೊದಲ 5 ನಿಮಿಷಕ್ಕೆ ಉಚಿತ ಮತ್ತು 5 ನಿಮಿಷದ ನಂತರದ ಪ್ರತಿ 15 ನಿಮಿಷದ…
ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ವಲಯದ ಕುರಂಕೋಟೆ ಗ್ರಾಮದ ಶ್ರೀ ದೊಡ್ಡಕಾಯಪ್ಪ (ಆಂಜನೇಯ) ಸ್ವಾಮಿ ದೇವಾಲಯದ ಗುಂಡು ಟೋಪಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಟ್ರಸ್ಟ್ ವತಿಯಿಂದ ಗಿಡ ನಾಟಿ ಮಾಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕ್ಷೇತ್ರದ ಶ್ರೀ ದೊಡ್ಡಕಾಯಪ್ಪ (ಆಂಜನೇಯ) ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ನಿರ್ದೇಶಕ ಪ್ರವೀಣ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕುರಂಕೋಟೆ ಗ್ರಾಮದ ದೇವಾಲಯದ ಆವರಣದ ಗುಂಡು ಟೋಪಿನಲ್ಲಿ ಕಳೆದ ನಾಲ್ಕು ತಿಂಗಳ ಹಿಂದೆ ಸುಮಾರು 2 ಲಕ್ಷದ 80 ಸಾವಿರ ರೂಗಳ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾರ್ಯ ಮಾಡಲಾಗಿತ್ತು. ಪ್ರತಿ ವರ್ಷ ಟ್ರಸ್ಟ್ ವತಿಯಿಂದ ದಶ ಲಕ್ಷ ಗಿಡಗಳನ್ನ ನಾಟಿ ಮಾಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪರಿಸರ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ನಿರ್ದೇಶಕರಾದ ಪ್ರವೀಣ್ ತಿಳಿಸಿದರು. ನಂತರ ಮಾತನಾಡಿದ ಜನ ಜಾಗೃತಿ ವೇದಿಕೆಯ ರಾಜೇಶ್ವರಿ, ಸಂಘದ ಧ್ಯೇಯೋದ್ದೇಶ…
ಸರಗೂರು: ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಗುರುವಾರದಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಆರ್.ಧ್ರುವನಾರಾಯಣ್ ರವರ 64ನೇ ಹುಟ್ಟುಹಬ್ಬವನ್ನು ಸರಳವಾಗಿ ಕೆಕ್ ಕಟ್ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಣೆ ಮಾಡಲಾಯಿತು. ನಂತರ ಮಾತನಾಡಿದ ಪಪಂ ಸದಸ್ಯ ಶ್ರೀನಿವಾಸರವರು ಸರಗೂರು ತಾಲೂಕನ್ನು ಧ್ರುವನಾರಾಯಣ್ ರವರ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಘೋಷಣೆ ಮಾಡಿಸಿದರು. ದಿ ಮಾಜಿ ಶಾಸಕ ಚಿಕ್ಕಮಾದುರವರು ಜೊತೆಗೂಡಿ ಸಾಕಷ್ಟು ಎರಡು ತಾಲ್ಲೂಕನ್ನು ಅಭಿವೃದ್ಧಿ ಪಡಿಸಲು ಮುಂದಾಗಿದ್ದರು. ನಂತರ ಶಾಸಕ ಅನಿಲ್ ಕುಮಾರ್ ರವರ ಶಾಸಕರಾಗಲು ಶ್ರಮ ಪಟ್ಟಿದರು. ಅವರು ಅಧಿಕಾರಿ ಇಲ್ಲದ ಸಮಯದಲ್ಲಿ ತಾಲೂಕಿನ ಜನತೆಗೆ ಕೆಲಸ ಕಾರ್ಯಗಳು ಮಾಡಿಕೊಂಡು ಬರುತ್ತಿದರು. ಕಾಯಕಯೋಗಿ ಎಂದು ಹೆಸರು ಪಡದುಕೊಂಡಿದ್ದರು. ಅವರು ಇವಾಗ ಕೂಡ ನಮ್ಮ ಜೊತೆಯಲ್ಲಿ ಇದ್ದರೆ ಎಂದು ಭಾವನೆ ಇದೆ ಎಂದರು. ತಾಲೂಕಿನ ಜನರ ಮನೆ ಮಾತಾಗಿದೆ ಧ್ರುವನಾರಾಯಣ್ ಹೆಸರು. ಏಕೆಂದರೆ ವಯಸ್ಸಾದರಿಂದ ಸಣ್ಣ ಪುಟ್ಟ ಮಕ್ಕಳವರೆಗೆ ಗೊತ್ತು. ಅವರು ಧ್ರುವತಾರೆ ಕಣ್ಮರೆಯಾಗಿ ಇಂದಿಗೆ ಮೂರು ವರ್ಷಗಳ…
ಸರಗೂರು: ಲಂಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ 2022–25 ರ ಅವಧಿಯಲ್ಲಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾದೇವ ಹಾಗೂ ಉಪಾಧ್ಯಕ್ಷರಾಗಿ ಪದ್ಮ ಸುರೇಶ್ ಆಯ್ಕೆಗೊಂಡರು. ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಂಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ನೂತನ ಎಸ್ಡಿಎಂಸಿ ಆಯ್ಕೆ ಪ್ರಕ್ರಿಯೆ ನಡೆಸಿ ನಂತರ ಗ್ರಾಮದ ಹಿರಿಯರ ಪೋಷಕರ ಸಮ್ಮುಖದಲ್ಲಿ ಬುಧವಾರದಂದು ಆಯ್ಕೆ ಮಾಡಲಾಯಿತು ಎಂದು ಶಾಲೆಯ ಮುಖ್ಯ ಶಿಕ್ಷಕಿ ಶ್ವೇತ ತಿಳಿಸಿದರು. ಮನುಗನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲಂಕೆ ರಮೇಶ್ ಮಾತನಾಡಿ, ಇಡೀ ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಶಾಲಾಭಿವೃದ್ಧಿ ಯೋಜನೆಯನ್ನು ತಯಾರಿಸುವುದು, ಶಾಲೆಯ ವಾರ್ಷಿಕ ಚಟುವಟಿಕೆಗಳ ನೀಲನಕ್ಷೆ ರೂಪಿಸುವುದು ಹಾಗೂ ಶೈಕ್ಷಣಿಕ ಯೋಜನೆಯನ್ನು ಸಿದ್ಧಪಡಿಸುವುದು ಮತ್ತು ಅದನ್ನು ಅನುಪಾಲನೆ ಮಾಡುವ ಜವಾಬ್ದಾರಿ ಎಸ್ ಡಿಎಂಸಿ ಮೇಲಿದೆ ಎಂದು ಹೇಳಿದರು. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಪೋಷಕರು ಸಾಮಾನ್ಯವಾಗಿ ಬಡವರು, ದಿನವಿಡೀ ದುಡಿಯುವವರು. ಅವರಿಗೆ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ…
ಸರಗೂರು: ಇಂದಿನ ದಿನಗಳಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಸಂಘಟನೆಗಳು ಕಾರ್ಯಚಟುವಟಿಕೆಗಳನ್ನು ರೂಪಿಸಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಎಚ್.ಡಿ. ಕೋಟೆ ಮತ್ತು ಸರಗೂರು ಪತ್ರಕರ್ತರ ಸಂಘದ ವತಿಯಿಂದ ಮೈಸೂರು ನಗರದ ಲಲಿತ ಮಹಲ್ ನಲ್ಲಿ ನಡೆದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ತಾಲ್ಲೂಕಿನ ಮಾಹಿತಿಯನ್ನು ಕೆಲವರು ಪತ್ರಕರ್ತರು ಎಂದು ಹೇಳಿ ಪಡೆದುಕೊಳ್ಳುತ್ತಾರೆ, ಆದರೆ ಆ ಮಾಹಿತಿ ಯಾವ ಪತ್ರಿಕೆಗಳಲ್ಲೂ ಪ್ರಕಟಗೊಂಡಿರುವುದಿಲ್ಲ, ಅಂತಹ ನಕಲಿ ಪತ್ರಕರ್ತರನ್ನು ಮಟ್ಟ ಹಾಕಬೇಕು ಎಂದು ಕರೆ ನೀಡಿದರು. ಎಚ್.ಡಿ. ಕೋಟೆ ತಾಲ್ಲೂಕಿನ ಪತ್ರಕರ್ತರ ಬಹುದಿನದ ಬೇಡಿಕೆಯ ರೀತಿ ಇಂದು ಎಚ್.ಡಿ. ಕೋಟೆ ಪಟ್ಟಣದ ಕನಕ ಭವನದ ಪಕ್ಕದಲ್ಲಿ 60*40 ಅಳತೆಯ ಸಿಎ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ತಂದೆಯವರು ರಾಜಕಾರಣಕ್ಕೆ ಬಾರದಂತೆ ವಿಧ್ಯಾಭ್ಯಾಸದತ್ತ ನಮ್ಮನ್ನು ನಡೆಸುತ್ತಿದ್ದರು, ಆದರೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಶಾಸಕ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ನೂರಾರು ಹತ್ಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಮೂರನೇ ದಿನವಾದ ಇಂದು ನಡೆಯುತ್ತಿರುವ ಉತ್ಖನನ ಕಾರ್ಯಾಚರಣೆಯಲ್ಲಿ 6ನೇ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ದೂರುದಾರ ಗುರುತಿಸಿದ ಸ್ಥಳ ಸಂಖ್ಯೆ 6 ರಲ್ಲಿ ಭಾಗಶಃ ಅಸ್ಥಿಪಂಜರದ ಅವಶೇಷಗಳು ಕಂಡುಬಂದಿವೆ ಎಂದು ತಿಳಿದು ಬಂದಿವೆ. ಎಸ್ ಐಟಿ ದಳ ನೇತ್ರಾವತಿ ನದಿಯ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸಾಕ್ಷಿ–ದೂರುದಾರರ ಸಮ್ಮುಖದಲ್ಲಿ 6ನೇ ಸ್ಥಳದಲ್ಲಿ ಶೋಧ ಕಾರ್ಯವನ್ನು ಪ್ರಾರಂಭಿಸಿತು. ಎಸ್ ಐಟಿಯು ಧರ್ಮಸ್ಥಳದ ಕಾಡುಪ್ರದೇಶದಲ್ಲಿ ಗುರುತಿಸಲಾದ ಪಾಯಿಂಟ್ ನಂಬರ್ 6 ರಲ್ಲಿ ಹಿಟಾಚಿ ಯಂತ್ರವನ್ನು ಬಳಸಿ ಉತ್ಖನನ ಕಾರ್ಯವನ್ನು ಕೈಗೊಂಡಿತು. ಈ ಸ್ಥಳದಲ್ಲಿ ನಡೆದ ಒಂದೂವರೆ ಗಂಟೆಗಳ ತೀವ್ರ ಶೋಧದ ನಂತರ, ಮೂಳೆ ರೀತಿಯ ವಸ್ತು ಪತ್ತೆಯಾಗಿದೆ. ನಂತರ ಆ ವಸ್ತುವನ್ನು ಎಚ್ಚರಿಕೆಯಿಂದ ಸಂಗ್ರಹಿಸಿ, ಫಾರೆನ್ಸಿಕ್ ವಿಶ್ಲೇಷಣೆಗಾಗಿ ರವಾನಿಸಲಾಗಿದೆ. ಈ ಕಳೇಬರವು ಮಾನವನದ್ದೇ ಎಂಬುದನ್ನು ಖಚಿತಪಡಿಸಲು ಡಿಎನ್ ಎ ಪರೀಕ್ಷೆ ಸೇರಿದಂತೆ ವೈಜ್ಞಾನಿಕ ವಿಶ್ಲೇಷಣೆ ನಡೆಯಲಿದೆ. ನಮ್ಮತುಮಕೂರಿನ…
ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಹಾಗೂ ನಟ ಪ್ರಥಮ್ ಸಮರ ಸಾರಿದ್ದಾರೆ. ಈ ವಿಚಾರವಾಗಿ ಪ್ರಥಮ್, ನಟಿ ರಮ್ಯಾ ಹಲವಾರು ಹೇಳಿಕೆ ನೀಡಿದ್ದಾರೆ. ದರ್ಶನ್ ಈ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ನಡುವೆ ನಟ ದರ್ಶನ್ ಶಕ್ತಿಪೀಠ ಕಾಮಾಕ್ಯ ದೇಗುಲಕ್ಕೆ ವಿಜಯಲಕ್ಷ್ಮೀ ಜೊತೆಗೆ ಭೇಟಿ ನೀಡಿದ್ದಾರೆ. ನಟ ದರ್ಶನ್ ವಿರುದ್ಧದ ಆರೋಪಗಳಿಗೆ ಪತ್ನಿ ವಿಜಯಲಕ್ಷ್ಮೀ ತಿರುಗೇಟು ನೀಡಿದ್ದಾರೆ. ಕಾಮಾಕ್ಯ ದೇಗುಲದಲ್ಲಿ ಪತಿ ದರ್ಶನ್ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವಿಜಯಲಕ್ಷ್ಮೀ, ‘’ಹೆಚ್ಚು ಜನರು ನಿಮ್ಮನ್ನು ಕೆಳಕ್ಕೆ ತಳ್ಳಲು ಪ್ರಯತ್ನಿಸಿದರೆ, ದೇವರು ನಿಮ್ಮನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯುತ್ತಾನೆ. ದೇವರು ನಿಮ್ಮೆಲ್ಲರನ್ನು ಆಶೀರ್ವದಿಸಲಿ ಎಂದು ಬರೆದುಕೊಂಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂಬ ನಟಿ ರಮ್ಯಾ ಅವರ ಪೋಸ್ಟ್ ಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್, ಮೆಸೇಜ್ ಮಾಡಿದ್ದಾರೆ ಎಂದು ರಮ್ಯಾ ಆರೋಪಿಸಿದ್ದರು. ಅತ್ತ ನಟ ಪ್ರಥಮ್ ತನ್ನ ಮೇಲೆ ದರ್ಶನ್ ಫ್ಯಾನ್ಸ್ ಜೀವ ಬೆದರಿಕೆಯೊಡ್ಡಿದ್ದಾರೆ…