Author: admin

ನಿರ್ವಹಣೆ ಕೊರತೆಯಿಂದ ಕಳೆಗುಂದಿದ್ದ ಕಸ್ತೂರ ಬಾ ರಸ್ತೆಯಲ್ಲಿರುವ ವೆಂಕಟಪ್ಪ ಕಲಾ ಗ್ಯಾಲರಿ, ಮುಂದಿನ ಒಂಬತ್ತು ತಿಂಗಳಲ್ಲಿ ಆಧುನಿಕ ಸ್ಪರ್ಶದೊಂದಿಗೆ ಕಲಾ ಪ್ರಪಂಚಕ್ಕೆ ತೆರೆದುಕೊಳ್ಳಲಿದೆ. ‘ಸ್ಮಾರಕ ದತ್ತು’ ಯೋಜನೆಯಡಿ ಬ್ರಿಗೇಡ್ ಫೌಂಡೇಷನ್ ಈ ಕಟ್ಟಡದ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದೆ. ಗ್ಯಾಲರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ನವೀಕರಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

Read More

ಉತ್ತರಪ್ರದೇಶ: ಯುವಕನೊಬ್ಬ ರಾಮಮಂದಿರದ ಪ್ರತಿಕೃತಿಯನ್ನು ಪಾರ್ಲೆ ಜಿ ಬಿಸ್ಕಿಟ್ ಗಳನ್ನು ಬಳಸಿ ನಿರ್ಮಿಸುವ ಮೂಲಕ ತನ್ನ ವಿಶಿಷ್ಟ ಪ್ರತಿಭೆ ಪ್ರದರ್ಶಿಸಿದ್ದಾನೆ. ಯುವಕನನ್ನು ದುರ್ಗಾಪುರ ಮೂಲದ ಛೋತನ್ ಘೋಷ್ ಎಂದು ಗುರುತಿಸಲಾಗಿದೆ. 4*4 ಅಡಿ ಆಯತದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಕೃತಿಗೆ 20 ಕೆಜಿ ಬಿಸ್ಕೆಟ್ ಬಳಸಲಾಗಿದೆ. ತನ್ನ ಸ್ನೇಹಿತರ ಸಹಾಯದಿಂದ ಛೋತನ್ ಘೋಷ್ ಐದು ದಿನದಲ್ಲಿ ನಿರ್ಮಿಸಿದ್ದಾರೆ. ಛೋತನ್ ಘೋಷ್ ನ ಕಲೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Read More

ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ಒಂದಲ್ಲ ಒಂದು ದಿನ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ಆದ್ರೆ ನಾನಂತೂ ದೈವಿ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ, ಅಯೋಧ್ಯೆ ರಾಮಮಂದಿರ 140 ಕೋಟಿ ಜನರದ್ದು ಎಂದು ತಿಳಿಸಿದ್ದಾರೆ.

Read More

ಶ್ರೀರಾಮನ ಕಟೌಟ್ ಹಾಗೂ ಪ್ಲೆಕ್ಸ್​ ಅನ್ನು ಬ್ಲೇಡ್​​ನಿಂದ ಹರಿದಿದ್ದ ಇಬ್ಬರು ಆರೋಪಿಗಳನ್ನ ಮುಳಬಾಗಿಲು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮುಳಬಾಗಿಲು ನಗರದ ಗುಣಗಂಟೆಪಾಳ್ಯದಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣ ನಡೆದಿತ್ತು. ನಿನ್ನೆ ರಾತ್ರಿ 10.44ರ ಸುಮಾರಿಗೆ ದುಷ್ಕರ್ಮಿಗಳು ಬ್ಲೇಡ್​ನಿಂದ ಹರಿದು ಹಾಕಿದ್ದರು. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಇದೀಗ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಶ್ರೀರಾಮನ ಕಟೌಟ್ ​ನ್ನು ಹರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜನವರಿ 22 ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಲವಕುಶ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​​ ಮತ್ತು ಪುತ್ರ ಅಯೋಧ್ಯೆ ಧ್ರುವ ಚಾರಿಟಬಲ್​​ ಟ್ರಸ್ಟ್​​ ವತಿಯಿಂದ ನಗರದಲ್ಲಿ ರಾಮನ ಶೋಭಾಯಾತ್ರೆ, ಸೀತರಾಮ ಕಲ್ಯಾಣೋತ್ಸವ ಮತ್ತು ಮಹಾಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಾಂಕ 21 ಮತ್ತು 22 ರಂದು ಎರಡು ದಿನ ಈ ಕಾರ್ಯಕ್ರಮಗಳು ನಡೆಯಲಿದ್ದವು.ಹೀಗಾಗಿ ನಗರದಲ್ಲಿ ಬ್ಯಾನರ್​ ಮತ್ತು ಶ್ರೀರಾಮ ಕಟೌಟ್​ ನಿಲ್ಲಿಸಲಾಗಿತ್ತು.

Read More

ಅಯೋಧ್ಯೆ ರಾಮಮಂದಿರ ವಿಚಾರವಾಗಿ ಬಿಜೆಪಿ ನಡೆಯನ್ನು ಟೀಕಿಸುವ ಭರದಲ್ಲಿ ಭಗವಾನ್ ಶ್ರೀರಾಮನನ್ನು ಕಾಂಗ್ರೆಸ್ ಸಚಿವ ಕೆ.ಎನ್.ರಾಜಣ್ಣ ಅವಮಾನಿಸಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡುತ್ತಾ, ನಾನು ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್ ಅಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತಾ ಹೇಳ್ತಿದ್ರು. ಟೂರಿಂಗ್ ಟಾಕೀಸ್ ಅಲ್ಲಿ ಗೊಂಬೆ ಇಟ್ಟಿದ್ದಾರೆ ಅನಿಸ್ತು ಎಂದು ಹೇಳಿಕೆ ನೀಡಿದ್ದಾರೆ. ಈಗೆಲ್ಲಾ ಶ್ರೀರಾಮನ ದೇವಸ್ಥಾನ ಕಟ್ಟಿಸ್ತಿದ್ದಾರೆ ಅಲ್ಲಿ. ಇನ್ನೊಂದು ಐದಾರು ತಿಂಗಳು ಕಳೀಲಿ ಏನೇನ್ ಬರ್ತವೆ, ಏನೇನು ಅಂತೇಳಿ. ಯಾವತ್ತೂ ಕೂಡ ಶ್ರೀರಾಮ ಎಲ್ಲಾ ಜನರನ್ನ ಆಶೀರ್ವದಿಸುವ ದೇವರು. ಅದಕ್ಕೋಸ್ಕರ ರಾಮರಾಜ್ಯದ ಕಲ್ಪನೆ ಬಂದಿದ್ದು ಎಂದು ತಿಳಿಸಿದ್ದಾರೆ. ಈಗ ಅದು ಬಿಜೆಪಿ ಶ್ರೀರಾಮನೋ, ಮೋದಿ ಶ್ರೀರಾಮನೋ ನೋಡೋಣ. ಅದು ಏನಾಗುತ್ತೆ ಅಂತಾ. ನಮ್ಮೂರಲ್ಲಿ ನೂರಾರು ವರ್ಷ ಇತಿಹಾಸ ಇರುವಂತಹ  ಶ್ರೀರಾಮನ ದೇವಸ್ಥಾನಗಳಿವೆ. ಈಗ ಅದನ್ನ ಬಿಟ್ಟು ಇವರು ಚುನಾವಣೆಗೋಸ್ಕರ ದೇವಸ್ಥಾನಗಳನ್ನ ಕಟ್ಟಿ, ಜನರಿಗೆ ಮೋಸ ಮಾಡೋ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Read More

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಇನ್ನಷ್ಟು ಬಿಆರ್ಎಸ್ ನಾಯಕಿ ಕೆ ಕವಿತಾಗೆ ಸಮನ್ಸ್ ಮಾಡಬಹುದು. ಇಡಿ ನೋಟೀಸ್ ವಿರುದ್ಧ ಕವಿತಾ ಈ ಹಿಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಬಿಆರ್‌ಎಸ್ ನಾಯಕನನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯದ ಆದೇಶವಿಲ್ಲದ ಪರಿಸ್ಥಿತಿಯಲ್ಲಿ ಇಡಿ ನಡೆ. ಈ ಪ್ರಕರಣದಲ್ಲಿ ಕವಿತಾ ಅವರನ್ನು ಕಳೆದ ವರ್ಷ ಮೂರು ಬಾರಿ ವಿಚಾರಣೆ ನಡೆಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರೀಯ ಸಂಸ್ಥೆ ಹೇಳಿಕೆ ದಾಖಲಿಸಿಕೊಂಡಿದೆ. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಈ ಹಿಂದೆ ಹೇಳಿದ್ದರು. ಕೇಸರಿ ಪಕ್ಷವು ತೆಲಂಗಾಣದಲ್ಲಿ ಹಿಂಬಾಗಿಲು ಪ್ರವೇಶಿಸಲು ಸಾಧ್ಯವಾಗದ ಕಾರಣ ಕೇಂದ್ರವು ಇಡಿಯನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ ನಾಲ್ಕನೇ ಸಮನ್ಸ್ ಜಾರಿ ಮಾಡಿದೆ. ಜನವರಿ 18ರಂದು ಹಾಜರಾಗುವಂತೆ ಸೂಚನೆ ನೀಡಿದೆ.

Read More

ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದ ವೇಳೆ ಮೈದಾನಕ್ಕೆ ಅತಿಕ್ರಮ ಪ್ರವೇಶ ಮಾಡಿ ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡ ಆರೋಪದ ಮೇಲೆ ಪೊಲೀಸ್ ಕಸ್ಟಡಿಗೆ ಪಡೆದು ಬಿಡುಗಡೆಗೊಂಡ ಯುವಕನಿಗೆ  ಹೂವಿನ ಹಾರ ಹಾಕಿ ಸ್ವಾಗತಿಸಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೌಂಡರಿ ಗೆರೆ ಬಳಿ ನಿಂತಿದ್ದ ಕೊಹ್ಲಿ ಬಳಿ ಅಭಿಮಾನಿ ಓಡಿ ಬಂದು ವಿರಾಟ್ ರನ್ನು ಅಪ್ಪಿಕೊಂಡರು. ಆಗ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನನ್ನು ತುಕೋಗಂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಆತನನ್ನು ವಿವರವಾಗಿ ಪ್ರಶ್ನಿಸಲಾಯಿತು. ನಂತರ ಮಂಗಳವಾರ ಸಂಜೆ ಪೊಲೀಸರು ಅವರನ್ನು ಬಿಡುಗಡೆಗೊಳಿಸಿದರು. ಪೊಲೀಸ್ ಠಾಣೆಯಿಂದ ಹೊರಬಂದ ಅವರನ್ನು ಕುಟುಂಬಸ್ಥರು ಹಾಗೂ ಸ್ನೇಹಿತರು ಸ್ವಾಗತಿಸಿದರು. ಈ ಆರತಕ್ಷತೆ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Read More

ಜಾರ್ಖಂಡ್: ಪೋಷಕರೇ ಹೆತ್ತ ಮಗಳನ್ನೇ ಹತ್ಯೆ ಮಾಡಿದ್ದಾರೆ. ರಾಮಗಢ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ನಿಶ್ಚಿತ ಠೇವಣಿ ಹಣ ನೀಡಲು ನಿರಾಕರಿಸಿದ ತಮ್ಮ ಹದಿಹರೆಯದ ಮಗಳನ್ನು ಹತ್ಯೆ ಮಾಡಿದ ಆರೋಪದ ಮೇಲೆ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿ ಖುಷಿ ಕುಮಾರಿ(17)ಜನವರಿ 13 ರಂದು ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ನಿಶ್ಚಿತ ಠೇವಣಿ ಹಣ ಕೊಡಲು ನಿರಾಕರಿಸಿದ ಕಾರಣ ತಂದೆ ಮತ್ತು ಮಲತಾಯಿ ತನ್ನ ಸಹೋದರಿಯನ್ನು ಕೊಂದು ಮೃತದೇಹ ನೇಣು ಹಾಕಿದ್ದಾರೆ ಎಂದು ಆರೋಪಿಸಿ ಖುಷಿ ಕುಮಾರಿಯ ಸಹೋದರ, ಭದಾನಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೆಚ್ಯೂರ್ ಆಗಲಿದ್ದ 6 ಲಕ್ಷ ರೂಪಾಯಿ ನಿಶ್ಚಿತ ಠೇವಣಿ ಹಣವನ್ನು ಪೋಷಕರಿಗೆ ನೀಡಲು ಖುಷಿ ನಿರಾಕರಿಸಿದ್ದರು ಎಂದು ಆಕೆಯ ಸಹೋದರ ಹೇಳಿದ್ದಾರೆ. ಸಂತ್ರಸ್ತೆಯ ಸಹೋದರ ಸೋಮವಾರ ದೂರು ನೀಡಿದ ನಂತರ, ಸುನೀಲ್ ಮಹತೋ ಮತ್ತು…

Read More

ಜನವರಿ 22 ರಂದು ನಡೆಯಲಿರುವ  ಅಯೋಧ್ಯೆ ಶ್ರೀರಾಮ ಮಂದಿರ ಪ್ರಾಣ-ಪ್ರತಿಷ್ಠಾ ಸಮಾರಂಭಕ್ಕೆ,  ತಮಿಳುನಾಡಿನಿಂದ  ಪಟಾಕಿಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ  ಬೆಂಕಿ ಹೊತ್ತಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ  ಸಂಭವಿಸಿದೆ. ಈ ದುರ್ಘಟನೆಯು ಉನ್ನಾವೋ ಜಿಲ್ಲೆಯ ಪೂರ್ವಾ ಖಾರ್ಗಿ ಖೇಡಾ ಗ್ರಾಮದ ಬಳಿ ನಡೆದಿದೆ. ಈ ಘಟನೆಯ ವಿಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Read More

ನವದೆಹಲಿ: ದೆಹಲಿಯ ಏರೋಸಿಟಿಯಲ್ಲಿರುವ ಪಂಚತಾರಾ ಹೋಟೆಲ್ ಗೆ ನಕಲಿ ಯುಪಿಐ ಪಾವತಿ ಮಾಡುವ ಮೂಲಕ, 5 ಲಕ್ಷಕ್ಕೂ ಹೆಚ್ಚು ಹಣವನ್ನು ವಂಚಿಸಲು ಯತ್ನಿಸಿದ  ಆರೋಪಿ ಮಹಿಳೆಯನ್ನು ದೆಹಲಿ ಪೋಲಿಸರು ಬಂಧಿಸಿದ್ದಾರೆ. ಮಹಿಳೆಯು ಡಿಸೆಂಬರ್ 30 ರಂದು ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಬಳಿಇರುವ  ಹೋಟೆಲ್ ಗೆ ಭೇಟಿ ನೀಡಿ 15 ದಿನಗಳ ಕಾಲ ಅಲ್ಲಿಯೇ ತಂಗಿ ಹೋಟೆಲ್ ಗೆ ನಕಲಿ ಪಾವತಿ ಮಾಡಿದ್ದರು. ಇದರಿಂದ ಸಂಶಯಗೊಂಡ ಹೋಟೆಲ್  ಸಿಬ್ಬಂದಿಯು ಮಹಿಳೆಯನ್ನು ನಕಲಿ ಪಾವತಿ ಬಗ್ಗೆ ವಿಚಾರಿಸಿದಾಗ ಆಕೆ ಗಲಾಟೆ ಮಾಡಿದ್ದಾಳೆ ಎನ್ನಲಾಗಿದೆ. ಪಂಚತಾರಾ ಹೋಟೆಲ್ ನಲ್ಲಿ 15 ದಿನಗಳ ವಾಸ್ತವ್ಯದ ವೇಳೆ ಮಹಿಳೆ 2.11 ಲಕ್ಷ ರೂ. ಸ್ಪಾ ಬಿಲ್ ಮತ್ತು ರೂ. 5.80 ಲಕ್ಷ ಹೋಟೆಲ್ ಬಿಲ್ ಸೇರಿದಂತೆ 7 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿದ್ದಾರೆ. ಮಹಿಳೆ ಯುಪಿಐ ಬಳಸಿ ಬಿಲ್ ಪಾವತಿಸಿದ್ದಾಳೆ ಆದರೆ ಹೋಟೆಲ್ ನ ಖಾತೆಯು ಹಣವನ್ನು   ಸ್ವೀಕರಿಸಿರುವುದಿಲ್ಲ. ಇದರಿಂದಾಗಿ  ಅನುಮಾನಗೊಂಡ ಹೋಟೆಲ್ ಮಾಲಿಕ ಮಹಿಳೆ…

Read More