Subscribe to Updates
Get the latest creative news from FooBar about art, design and business.
- 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
- ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್ ಶಿಪ್ ಗೆ ಸರ್ವೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ
- ಬಿಡದಿ ಟೌನ್ ಶಿಪ್ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
- ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
- ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
- ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
- ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
- ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
Author: admin
ಪಾವಗಡ: ಕರ್ನಾಟಕ ರಾಜ್ಯದ ಸುಪ್ರಸಿದ್ಧ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗಿದೆ, ಪಾವಗಡ ತಾಲೂಕಿನ ನಾಗಲಮಡಿಕೆ ಗ್ರಾಮದಲ್ಲಿ ನಡೆಯುವ ಈ ಜಾತ್ರೆಗೆ ಆಂಧ್ರ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸ್ವಾಮಿಗೆ ನಮಿಸುತ್ತಾರೆ. ಬೆಳಗಿನ ಜಾವದಿಂದಲೇ ಸುಬ್ರಮಣ್ಯೇಶ್ವರ ಸ್ವಾಮಿಗೆ ಶಾಸ್ತ್ರೋಕ್ತವಾಗಿ ವಿವಿಧ ಪೂಜಾ ಕೈಂಕರಿಗಳನ್ನು ನೆರವೇರಿಸಿದ್ದು, ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ದೇವಸ್ಥಾನದ ಬ್ರಹ್ಮ ರಥೋತ್ಸವಕ್ಕೆ ವಿಶೇಷ ಹೋಮ ಹವನಗಳನ್ನು ನಡೆಸಿ ಶಾಸಕರಾದ ಎಚ್ ವಿ ವೆಂಕಟೇಶ್ ಹಾಗೂ ಪಾವಗಡ ತಹಸಿಲ್ದಾರ್ ಡಿಎನ್ ವರದರಾಜ ಅವರು ರಥ ಎಳೆಯುವ ಮೂಲಕ ಚಾಲನೆ ನೀಡಿದ್ದರು. ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಚ್ ವಿ ವೆಂಕಟೇಶ್, ಕೆಲ ಕಾರಣಾಂತರಗಳಿಂದಾಗಿ ಅಂತ್ಯ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕುಂಠಿತವಾಗಿದೆ, ದೇವಸ್ಥಾನದಲ್ಲಿ ಪಾರುಪತ್ತೆ ನಡೆಸುವವರ ಮತ್ತು ಪ್ರಧಾನ ಅರ್ಚಕರ ನಡುವಿನ ಗುದ್ದಾಟ ಒಂದು ಕಾರಣವಾಗಿದೆ,…
ಬೀದರ್: ಜಿಲ್ಲೆಯ ನೂತನ ನಗರ ಪೊಲೀಸರು ಒಂದು ಕೋಟಿಗೂ ಅಧಿಕ ಮೌಲ್ಯದ ವಿವಿಧ ನಮೂನೆಯ ಅಕ್ರಮ ಪಾನ್ ಮಸಾಲ ಇತರೆ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ನೂತನ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೊಳ್ಳಾರ-ಕೆ ಕೈಗಾರಿಕಾ ಪ್ರದೇಶದ ಗೋದಾಮಿನಲ್ಲಿ, ಸರ್ಕಾರದ ಅಥವಾ ಸಂಬಂಧಿಸಿದ ಕಂಪೆನಿಯವರ ಪರವಾನಿಗೆ ಇಲ್ಲದೇ, ಮೂಲ ಕಂಪನಿಯವರ ಹೆಸರನ್ನು ಬಳಸಿಕೊಂಡು ಅಕ್ರಮವಾಗಿ ಪಾನ್ ಮಸಾಲಾ, ಜರ್ದಾಗಳಲ್ಲಿ (ಗುಟಕಾ) ವಿಷಪೂರಿತ ಪದಾರ್ಥಗಳಿಂದ ಕಲಬೆರಕೆ ಮಾಡಿ ತಯಾರಿಸಿ, ಪ್ಯಾಕ್ ಮಾಡಿ ಸಂಗ್ರಹಿಸಿಟ್ಟಿರುವ ಬಗ್ಗೆ ನಿಖರ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರ ತಂಡ, ಪಾನ್ ಮಸಾಲಾ ಇತರೆ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಬೀದರ ಉಪ-ವಿಭಾಗ ಡಿ.ಎಸ್ಪಿ ಶಿವನಗೌಡ ಪಾಟೀಲ್ ರವರ ಮಾರ್ಗದರ್ಶದಲ್ಲಿ ನೂತನ ನಗರ ಪೊಲೀಸ್ ಠಾಣೆಯ ಪ್ರಭಾರಿ ಪಿ.ಐ. ವಿಜಯಕುಮಾರ, ತಸ್ಮೀಮ್ ಸುಲ್ತಾನಾ, ಪಿ.ಎಸ್.ಐ. ಬಸವರಾಜ, ಎ.ಎಸ್.ಐ. ವಿಜಯಕುಮಾರ, ಧನರಾಜ, ರಾಮಣ್ಣಾ, ಪ್ರವೀಣಕುಮಾರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ದಾಳಿ ವೇಳೆ ಪಾನ್ ಮಸಾಲಾ ಪ್ಯಾಕಿಂಗ್ ಮಾಡುವ ಯಂತ್ರಗಳು, ವಿವಿಧ…
ತಿಪಟೂರು: ಸಾಮಾಜಿಕ ಕೆಳಸ್ತರದ ವರ್ಗದಿಂದ ಉನ್ನತ ವರ್ಗದವರಿಗೂ ಸರ್ವ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನದೇ ಆದ ವಿಶಿಷ್ಟ ಸೇವೆಗಳ ಮೂಲಕ ಸಾಮರಸ್ಯವನ್ನು ಮೂಡಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ, ಆದಿಚುಂಚನಗಿರಿಯ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 11ನೇ ಪುಣ್ಯಾರಾಧನಾ ಸಮಾರಂಭ ಹಾಗೂ 50ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಕಾಳಕಳಿ ಕಾರಣದಿಂದಲೇ, ಜಗತ್ತಿನಾದ್ಯಂತ ಚಿರಸ್ಮರಣಿಯಾಗಿದ್ದು, ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಪ್ರಜ್ವಲಿಸುತ್ತಿದ್ದಾರೆ. ಸ್ವಾಮೀಜಿಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಕ್ಕೆ ಸಾಕ್ಷಿಯಾಗಿ “ಕರ್ನಾಟಕ ವನಸಂವರ್ಧನ ಟ್ರಸ್ಟ್” ಪ್ರಾರಂಭಿಸಿ ರಾಜ್ಯದಾದ್ಯಂತ ಕೋಟ್ಯಾಂತರ ಸಸಿ ನಡೆಸುವ ಕಾರ್ಯಕ್ರಮವನ್ನು…
ತಿಪಟೂರು: ಮನುಷ್ಯನು ರಾಗ, ದ್ವೇಷಗಳನ್ನು ಮರೆತು ಪರಸ್ಪರರ ಜೊತೆ ಪ್ರೀತಿ, ವಿಶ್ವಾಸದಿಂದ ಬೆರೆಯುತ್ತಾ ಜೀವನ ನಡೆಸಿದಾಗ ಮಾತ್ರ ಮಾನಸಿಕ ಹಾಗೂ ಆತ್ಮತೃಪ್ತಿಯು ದೊರಕುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಮಕರಸಂಕ್ರಾಂತಿಯ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ರಾಶಿಪೂಜೆ ಹಾಗೂ ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು. ಮಾನವ ತನ್ನ ಜೀವನದಲ್ಲಿ ಹಣ, ಐಶ್ವರ್ಯದ ಸಂಪಾದನೆಗಾಗಿ ಹೆಚ್ಚು ಶ್ರಮಿಸುತ್ತಾನೆ. ಮಾನವೀಯ ಮೌಲ್ಯಗಳನ್ನು ಮರೆತು ತನ್ನ ಸುಖವೇ ಪರಮಸುಖವೆಂದು ಭಾವಿಸುತ್ತಾ ಪರಮಾತ್ಮನನ್ನು ಕಾಣುವ ಗೋಜಿಗೆ ಹೋಗದೇ ಸ್ವಾರ್ಥದಿಂದ ತನ್ನಪಾಡಿಗೆ ತಾನಿರುತ್ತಾನೆ. ಜೀವನದಲ್ಲಿ ಅಂತರಂಗದಲ್ಲಿರುವ ಪರಮಾತ್ಮನನ್ನು ಹುಡುಕದೇ ಎಲ್ಲೆಲ್ಲಿಗೋ ಹೋಗುತ್ತೇವೆ. ಆದರೆ ಪರಮಾತ್ಮ ನಮ್ಮಲ್ಲಿಯೇ ನೆಲೆಸಿರುತ್ತಾನೆ ಎಂಬುದು ತಿಳಿದೇ ಇರುವುದಿಲ್ಲ. ಮಾನವನ ಮನಸ್ಸಿನಲ್ಲಿ ಎಲ್ಲಾರೀತಿಯ ವಿಚಾರಗಳು ನೆಲೆಸಿದ್ದು ಉತ್ತಮ ವಿಚಾರಗಳನ್ನು…
ತಿಪಟೂರು: ತಾಲೂಕಿನ ಹಾಲ್ಕುರಿಕೆ ರಸ್ತೆಯ ಹರಿಸಮುದ್ರ ಗೇಟ್ ಬಳಿ ಡೀಸೆಲ್ ಒತ್ತೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿದ್ದು, ಇದೇ ವೇಳೆ ಡೀಸೆಲ್ ತುಂಬಿಕೊಳ್ಳಲು ಅಕ್ಕ ಪಕ್ಕದ ಗ್ರಾಮಸ್ಥರು ಮುಂದಾದ ಘಟನೆ ನಡೆದಿದೆ. ಹಾಸನದಿಂದ ಚಿತ್ರದುರ್ಗಕ್ಕೆ ಅತಿ ವೇಗದಲ್ಲಿ ಚಲಿಸುತ್ತಿದ್ದ ಡೀಸೆಲ್ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಟ್ರಾನ್ಸ್ ಫಾರ್ಮ್ ಕಂಬಕ್ಕೆ ಹೊಡೆದು ಮಗುಚಿ ಬಿದ್ದಿದೆ. ಬೈಕ್ ನಲ್ಲಿದ್ದ ಕುಳಿತಿದ್ದ ಭೈರನಾಯಕನಹಳ್ಳಿ ಮೂಲದ ಗೃಹಿಣಿ ಸರ್ವಮಂಗಳ(47) ಎಂಬವರಿಗೆ ಅಪಘಾತದಲ್ಲಿ ಗಂಭೀರವಾಗಿ ಗಾಯವಾಗಿದ್ದು, ಅವರು ಚಿಕತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸರ್ವಮಂಗಳ ಅವರು, ಗೃಹಲಕ್ಷ್ಮಿ ಯೋಜನೆಯ ಹಣ ಸಿಗದ ಕಾರಣ ಹೊನ್ನವಳ್ಳಿಯ ನಾಡಕಚೇರಿಯಲ್ಲಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿ ಹಿಂದಿರುಗುತ್ತಿದ್ದರು ಈ ವೇಳೆ ಹರಿಸಮುದ್ರ ಗೇಟ್ ನ ಬಳಿ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ ರಸ್ತೆಯ ತುಂಬೆಲ್ಲ ನೀರಿನಂತೆ ಇಂಧನ ಡೀಸೆಲ್ ಹರಿದಿದ್ದು, ಈ ವೇಳೆ ಸುತ್ತಮುತ್ತಲಿನ ಗ್ರಾಮಸ್ಥರು ಬಿಂದಿಗೆ, ಬಕೇಟು, ಡೀಸೆಲ್ ಕ್ಯಾನ್ ಗಳನ್ನು ಗಳನ್ನು ಹಿಡಿದು ಮನಸೋ…
ನೆಲಮಂಗಲ: ಕರ್ನಾಟಕ ರಣಧೀರರ ವೇದಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಇಂದು ನೂತನ ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ ಹಾಗೂ 2024 ರ ಸಂಘಟನೆಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿಸಲಾಯಿತು. ಪದಾಧಿಕಾರಿಗಳ ಸೇರ್ಪಡೆ ಹಾಗೂ 2024 ರ ಸಂಘಟನೆಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಾಡು-ನುಡಿ, ನೆಲ-ಜಲ,ಗಡಿ-ಭಾಷೆಯ ವಿಚಾರದಲ್ಲಿ ನಮ್ಮ ಸಂಘಟನೆಯ ಸಕ್ರಿಯವಾಗಿ ಹೋರಾಟಗಳನ್ನು ಮಾಡುತ್ತಿದ್ದು ಸಂತೋಷಕರವಾದ ವಿಚಾರವಾಗಿರುತ್ತದೆ, ಆದರೆ ಇತ್ತೀಚಿನ ದಿನಗಳಲ್ಲಿ ಈ ಮಂಡು ಸರ್ಕಾರಗಳು ಇಲ್ಲಸಲ್ಲದ ಕೇಸುಗಳನ್ನಾಗಿ ಕನ್ನಡಪರ ಹೋರಾಟಗಾರರನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಈ ಕೂಡಲೇ ಇಂತಹ ನೀಚ ಕೃತ್ಯಗಳನ್ನು ಕೈ ಬಿಡದಂತೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ್ಯಂತ ಬೃಹತ್ ಮಟ್ಟದ ಹೋರಾಟವನ್ನು ಮಾಡಬೇಕಾಗುತ್ತದೆ, ಏನು ಈಗ ನೂತನವಾಗಿ ಸೇರ್ಪಡೆಗೊಂಡಿರುವಂತಹ ಎಲ್ಲಾ ಕಾರ್ಯಕರ್ತರು ನಾಡು ನುಡಿ ವಿಚಾರಕ್ಕೆ ಕಾನೂನು ಬದ್ಧವಾಗಿ ಹೋರಾಟ ಮಾಡುವಲ್ಲಿ ಸೈನಿಕರಂತೆ ಸಿದ್ಧವಾಗಬೇಕು. ಅಂಬೇಡ್ಕರ್ ರವರು ನೀಡಿದಂತಹ ಸಂವಿಧಾನವನ್ನು ಅರ್ಥಗರ್ಭಿತವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ, ಸ್ವತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಕನ್ನಡದ ಕಲೆ…
ಅಯೋಧ್ಯೆಯನ್ನು ಮಾದರಿ ಸೌರ ನಗರವನ್ನಾಗಿ ಪರಿವರ್ತಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಪ್ರಯತ್ನಿಸುತ್ತಿದೆ. ಭಾರತದಲ್ಲಿ ಪ್ರಥಮ ಬಾರಿಗೆ ಸೋಲಾರ್ ಬೋಟ್ ಮೂಲಕ ಸರಯು ಯಾತ್ರೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಸರಯೂ ನದಿಯಲ್ಲಿ ಸೌರ ಶಕ್ತಿಯ ಇ-ಬೋಟ್ ಅನ್ನು ಪ್ರಾರಂಭಿಸಲಾಗಿದೆ. ಉತ್ತರ ಪ್ರದೇಶ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಂಸ್ಥೆ ಅಯೋಧ್ಯೆಯ ಸರಯೂ ನದಿಯಲ್ಲಿ ಬೋಟ್ ಸೇವೆಯ ನಿಯಮಿತ ಕಾರ್ಯಾಚರಣೆಗೆ ರೂಪುರೇಷೆ ಸಿದ್ಧಪಡಿಸಿದೆ. ಸರಯೂ ಘಾಟ್ ನ ದಡದಲ್ಲಿ ದೋಣಿಯನ್ನು ಜೋಡಿಸಲು, ಪ್ರತಿ ಮೂಲೆಯಿಂದ ಬಿಡಿ ಭಾಗಗಳು ಮತ್ತು ಇತರ ಉಪಕರಣಗಳನ್ನು ತರಲಾಗಿದೆ. ಪ್ರಸ್ತುತ, ಒಂದು ಬೋಟ್ ಮುಗಿದ ನಂತರ, ಪರೀಕ್ಷಾ ಹಂತದ ಪ್ರಕ್ರಿಯೆ ನಡೆಯುತ್ತಿದೆ. ಜನವರಿ 22 ರಂದು ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಲಾರ್ ಬೋಟ್ ಉದ್ಘಾಟಿಸಬಹುದು ಎಂದು ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಿಯಮಿತವಾಗಿ ಬೋಟ್ ಕಾರ್ಯಾಚರಣೆ ನಡೆಸಲಾಗುತ್ತದೆ. ಡ್ಯುಯಲ್ ಮೋಡ್ ಆಪರೇಟಿಂಗ್ ಬೋಟ್ ಆಗಿದ್ದು 100 ಪ್ರತಿಶತ ಸೌರ ವಿದ್ಯುತ್…
ಕೇರಳ: ಕೇರಳದ ಗುರುವಾಯೂರಿನಲ್ಲಿರುವ ಪ್ರಸಿದ್ಧ ಶ್ರೀಕೃಷ್ಣ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮೋದಿ ಸಾಂಪ್ರದಾಯಿಕ ಮಲಯಾಳಿ ಶೈಲಿಯಲ್ಲಿ ಬಿಳಿ ಮುಂಡು, ಶರ್ಟ್ ಮತ್ತು ಶಾಲು ಧರಿಸಿದ್ದರು. ಗುರುವಾಯೂರು ದೇವಾಲಯದಲ್ಲಿ ನಡೆದ ಬಿಜೆಪಿ ನಾಯಕ , ನಟ ಸುರೇಶ್ ಗೋಪಿ ಅವರ ಮಗಳು ಭಾಗ್ಯಾ ಸುರೇಶ್ ಅವರ ಮದುವೆಯಲ್ಲಿ ಮೋದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ತಾಳಿ ಕಟ್ಟಿದ ನಂತರ ನವ ದಂಪತಿಗಳು ಪರಸ್ಪರ ಹಾರ ಬದಲಾಯಿಸುವಾಗ ಮೋದಿಯವರೇ ದಂಪತಿ ಕೈಗೆ ಹಾರ ಕೊಟ್ಟಿದ್ದಾರೆ. ಸುರೇಶ್ ಗೋಪಿ ಅವರ ಮಗಳ ಮದುವೆಗೂ ಮುನ್ನ ಬೆಳಗ್ಗೆ ದೇವಸ್ಥಾನದಲ್ಲಿ, ವಿವಾಹವಾದ ದಂಪತಿಗಳಿಗೆ ಪ್ರಧಾನಿ ಆಶೀರ್ವದಿಸಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದೇವಾಲಯಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಬೆಳಗ್ಗೆ 7.35ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ಆಗಮಿಸಿದ ಪ್ರಧಾನಿ ಮೋದಿ ಶ್ರೀಕೃಷ್ಣ ಕಾಲೇಜು ಮೈದಾನದಲ್ಲಿ ಬಂದಿಳಿದಿದ್ದು, ನೂರಾರು ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ಅವರನ್ನು ಸ್ವಾಗತಿಸಲು…
ಹೈದರಾಬಾದ್: ಆಟೋ ಚಾಲಕನೊಬ್ಬ ಪತ್ನಿಯ ತಲೆಯನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 41 ವರ್ಷದ ಪತ್ನಿ ಪುಷ್ಪಲತಾ ಮೃತ ದುರ್ದೈವಿ. ಪತಿ ಪತ್ನಿಯನ್ನು ಹತ್ಯೆ ಮಾಡಿ ಹರಿತವಾದ ಚಾಕುವಿನಿಂದ ತಲೆಯನ್ನು ಕತ್ತರಿಸಿರುವ ಭಯಾನಕ ಘಟನೆ ವರದಿಯಾಗಿದೆ. ಸರ್ಕಾರಿ ವಸತಿ ಗೃಹದಲ್ಲಿ ವಾಸವಿದ್ದ ಹಂತಕ, ಪತ್ನಿ ಬೇರೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬುದನ್ನು ತಿಳಿದು, ಹೆಂಡತಿ ತಲೆಯನ್ನು ಕತ್ತರಿಸಿ ಮನೆಯಲ್ಲಿಯೇ ಇಟ್ಟುಕೊಂಡಿದ್ದ. 41 ವರ್ಷದ ಪತ್ನಿ ಪುಷ್ಪಲತಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ವಿಜಯ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆತ ಕೊಲೆಗೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಪತ್ನಿಗೆ ಬೇರೊಬ್ಬರ ಜತೆ ಸಂಬಂಧವಿದೆ ಎಂದು ಶಂಕಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ವಿಜಯ್ ಹಾಗೂ ಪುಷ್ಪಲತಾ ತನ್ನ ಸಹೋದರಿಯ ಹೊಸ ಮನೆಗೆ ಹೋಗಿದ್ದರು. ಅಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ.
ಪಾವಗಡ ಶಾಸಕರಾದ ಹೆಚ್.ವಿ. ವೆಂಕಟೇಶ್ ರವರು ನಾಗಲಮಡಿಕೆ ಅಂತ್ಯ ಸುಬ್ರಮಣ್ಯ ದೇಗುಲಕ್ಕೆ ಭೇಟಿ ನೀಡಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತಾಲ್ಲೂಕಿನ ಜನತೆಗೆ ಒಳಿತಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು. ತದನಂತರ ತೇರು ಎಳೆಯುವ ಮೂಲಕ ಶ್ರೀ ಕ್ಷೇತ್ರ ನಾಗಲಮಡಿಕೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ನನ್ನ ಅವಧಿಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಲಾಗುವುದೆಂದು ಇದೇ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಈ ಭಾಗದ ಹಲವು ಪ್ರಮುಖ ಮುಖಂಡರು ಮತ್ತು ಗ್ರಾಮಸ್ಥರು ಶಾಸಕರ ಜೊತೆಯಲ್ಲಿದ್ದರು. ವರದಿ: ರಾಮಪ್ಪ ಸಿ.ಕೆ. ಪುರ, ಪಾವಗಡ