Subscribe to Updates
Get the latest creative news from FooBar about art, design and business.
- 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
- ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್ ಶಿಪ್ ಗೆ ಸರ್ವೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ
- ಬಿಡದಿ ಟೌನ್ ಶಿಪ್ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
- ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
- ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
- ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
- ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
- ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
Author: admin
ಬೆಂಗಳೂರು: ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದ ಖತರ್ನಾಕ್ ಗ್ಯಾಂಗನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗುರು, ರುದ್ರೇಶ್, ಸಂದೀಪ್, ಪ್ರಭಾವತಿ, ರೇಣುಕಾ ಬಂಧಿತರು. ಆರೋಪಿಗಳಾದ ಗುರು ಮತ್ತು ರೇಣುಕಾ ಇಬ್ಬರು ಪತಿ-ಪತ್ನಿ. ರೇಣುಕಾ ಹಣದ ಆಸೆಗೆ ಬಿದ್ದು ತನ್ನ ಸ್ನೇಹಿತೆ ಬಳಿಯೇ ಹಣ ದೋಚಲು ಸಂಚು ರೂಪಿಸಿ ಕೆಮಿಕಲ್ ಇದ್ದ ಕರ್ಚಿಫ್ ಮುಖಕ್ಕೆ ಇಟ್ಟು ಬಳಿಕ ಕೈ-ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದರು. ಸದ್ಯ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಮಾಡಿದ್ದ ಸಾಲ ತೀರಿಸಲು ಅಡ್ಡದಾರಿ ಹಿಡಿದಿದ್ದ ಪ್ರಭಾವತಿ ಎಂಬ ಮಹಿಳೆ ತನ್ನ ಗ್ಯಾಂಗ್ ನೊಂದಿಗೆ ಜನವರಿ 14ರ ಬೆಳಗ್ಗೆ 9.20 ಗಂಟೆ ಸುಮಾರಿಗೆ ಕೊಡಿಗೆಹಳ್ಳಿ ಸಮೀಪದ ತಿಂಡ್ಲು ಸರ್ಕಲ್ ನಲ್ಲಿ ಇರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್ಗೆ ನುಗ್ಗಿ ಅಟ್ಟಹಾಸ ಮೆರೆದಿದ್ದಳು. ಅನುಶ್ರೀ ಎಂಬ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಮಾಂಗಲ್ಯ ಸರ ಸೇರಿದಂತೆ ಚಿನ್ನಾಭರಣ ಕಸಿದು ಪರಾರಿಯಾಗಿದ್ದರು. ಘಟನೆ ಸಂಬಂಧ ಐವರು ಆರೋಪಿಗಳನ್ನು…
ಬಿಜೆಪಿ ಮತ್ತು ಆರ್ಎಸ್ಎಸ್ ಅಯೋಧ್ಯೆಯ ರಾಮ ಮಂದಿರದ ಉದ್ಘಾಟನಾ ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದ್ದು, ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದು ತಮ್ಮ ಪಕ್ಷದ ನಾಯಕರಿಗೆ ಕಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ನೀಡಲಾಗಿದ್ದು, ಕಾರ್ಯಕ್ರಮಕ್ಕೆ ಹೋಗದಿರಲು ಪಕ್ಷ ತೀರ್ಮಾನ ಕೈಗೊಂಡಿರುವ ಕೆಲವು ದಿನಗಳ ನಂತರ ನಾಗಾಲ್ಯಾಂಡ್ನಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ‘ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭವು ಪ್ರಧಾನಿ ಸುತ್ತ ಕೇಂದ್ರೀಕೃತವಾಗಿರುವ ರಾಜಕೀಯ ಕಾರ್ಯಕ್ರಮವಾಗಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಇದಕ್ಕೆ ಚುನಾವಣಾ ಪರಿಮಳವನ್ನು ನೀಡುತ್ತಿದೆ ಮತ್ತು ಅದಕ್ಕಾಗಿಯೇ ನಾವು ಭಾಗವಹಿಸಲು ಕಷ್ಟವಾಗುತ್ತಿದೆ’ ಎಂದು ಗಾಂಧಿ ಹೇಳಿದರು. ನಮ್ಮ ಪ್ರಮುಖ ವಿರೋಧಿಗಳಾಗಿರುವ ಬಿಜೆಪಿ ಮತ್ತು ಆರ್ಎಸ್ಎಸ್ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಚುನಾವಣಾ ಕಾರ್ಯಕ್ರಮವಾಗಿ ಪರಿವರ್ತಿಸಿರುವಾಗ ರಾಮ…
ಪಾವಗಡ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕಿನ ವೈ. ಎನ್. ಹೋಸಕೊಟೆ ಯಲ್ಲಿ ಸಿ.ಐ.ಟಿ.ಯು. ಮಹಿಳಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿ ಇರುವ ಯೋಜನೆಗಳಾದ ICDS, MDM NHM, ICPS, SSA, MNREG, ಮುಂತಾದ ಯೋಜನೆಗಳನ್ನು ದೀರ್ಘಾವಧಿ ಯೋಜನೆಗಳಾಗಿ ಖಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಮಹಿಳಾ ಘಟಕದ ಕಾರ್ಯದರ್ಶಿ ಶಿವಗಂಗಮ್ಮ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಈ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳು ಸೇರಿದಂತೆ 1 ಕೋಟಿ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕೊಟ್ಟು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು. 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ನೀಡಲು ಕಾನೂನು ರಚಿಸಬೇಕು. NEP ನಿಲ್ಲಿಸಬೇಕು, ಈ ಯೋಜನೆಗಳಲ್ಲಿ ದುಡಿಯುವ ಗುತ್ತಿಗೆ ಒಳಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಿ,…
ತುರುವೇಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ, ಫೆಬ್ರವರಿ 1ರಂದು ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯು ತುರುವೇಕೆರೆಯ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತುರುವೇಕೆರೆ ಕ್ಷೇತ್ರ ಯೋಜನಾಧಿಕಾರಿ ಯಶೋಧರ್ ರವರು ಹೇಳಿದರು. ತುರುವೇಕೆರೆ ಪಟ್ಟಣದ ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯಲ್ಲಿ, ತಾಲೂಕು ಯೋಜನಾಧಿಕಾರಿ ಅನಿತಾ ಶೆಟ್ಟಿ, ಕ್ಷೇತ್ರ ಯೋಜನಾಧಿಕಾರಿ ಯಶೋಧರ್, ನೇತೃತ್ವದಲ್ಲಿ ಕರೆದ ಜಂಟಿ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ 2011ನೇ ವರ್ಷದಲ್ಲಿ ಪ್ರಾರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಸಂಘಟನೆ, ಸೌಲಭ್ಯ ವಂಚಿತರ ಸಬಲೀಕರಣ ಹಾಗೂ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ಗ್ರಾಮೀಣರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಾ ಬಂದಿದೆ , ಜೊತೆಗೆ ಈ ಯೋಜನೆಯು ಶಿಸ್ತು ,ನೈತಿಕ ಮೌಲ್ಯಗಳು, ಜನರಲ್ಲಿ ಧಾರ್ಮಿಕ, ಜಾಗೃತಿ ಮೂಡಿಸುವ ವಿವಿಧ ಧ್ಯೇಯೋದ್ದೇಶಗಳನ್ನು ಹೊಂದಿದ್ದು, ಈ ಯೋಜನೆಯ ಕನಸುಗಾರರು ಮತ್ತು ಮಾರ್ಗದರ್ಶಕರು ಆದ ಪೂಜ್ಯಶ್ರೀ ಡಿ ವೀರೇಂದ್ರ ಹೆಗ್ಗಡೆ ಮತ್ತು…
ತುರುವೇಕೆರೆ: ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ 851ನೇ ಜಯಂತಿಯನ್ನು ಆಚರಿಸಲಾಯಿತು. ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳ ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿ ತಹಶೀಲ್ದಾರ್ ರೇಣು ಕುಮಾರ್ ಹೇಳಿದರು. ಅಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಭೋವಿ ಸಮಾಜದ ಪ್ರತಿಭಾವಂತ…
ಕೊರಟಗೆರೆ: ರಾಷ್ಟ್ರೀಯ ಹಬ್ಬಗಳ ಪೂರ್ವಭಾವಿ ಸಭೆಗಳಿಗಾಗಲಿ ರಾಷ್ಟ್ರೀಯ ಹಬ್ಬದ ದಿನದಲ್ಲಿ ಕಾರ್ಯಕ್ರಮಕ್ಕೆ ಗೈರಾಗುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಂದು ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ. ಎಚ್ಚರಿಕೆ ನೀಡಿದ್ದಾರೆ. ಇಂದು ಕೊರಟಗೆರೆ ತಾಲೂಕು ಕಚೇರಿ ಕೋರ್ಟ್ ಆವರಣದಲ್ಲಿ ನಡೆದ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ವಿರುದ್ಧ ತಹಶೀಲ್ದಾರ್ ಮಂಜುನಾಥ್ ಕೆ ಗರಂ ಆಗಿದ್ದಾರೆ. ವರ್ಷದಲ್ಲಿ ಮೂರು ರಾಷ್ಟ್ರೀಯ ಹಬ್ಬಗಳು ಬರುತ್ತವೆ ಅಂತಹ ರಾಷ್ಟ್ರೀಯ ಹಬ್ಬಗಳಲ್ಲಿ ಅಧಿಕಾರಿಗಳು ತಪ್ಪದೇ ಇರಲೇಬೇಕು. ಇನ್ನು ಮುಂದೆ ರಾಷ್ಟ್ರೀಯ ಹಬ್ಬಗಳ ದಿನದಂದು ಕಾರ್ಯಕ್ರಮಕ್ಕೆ ಹಾಜರಾಗದೆ ತಪ್ಪಿಸಿಕೊಂಡರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಬದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಹಶೀಲ್ದಾರ್ ಮಂಜುನಾಥ್ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು. ಇನ್ನು ಇದೇ ಸಂದರ್ಭದಲ್ಲಿ ಕೆಲವು ಇಲಾಖೆ ಅಧಿಕಾರಿಗಳು ಮಾತ್ರ ಹಾಜರಾಗಿದ್ದು ಹಾಜರಾಗದೆ ಇದ್ದ ಅಧಿಕಾರಿಗಳ ಮೇಲೆ ಬೇಸರ ವ್ಯಕ್ತಪಡಿಸಿದರು. ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ಕವಟಗಿಮಠ ಮನೆತನ ಶಿಕ್ಷಣ, ಕೃಷಿ, ಸಹಕಾರಿ, ವ್ಯಾಪಾರ, ಸರಾಫಿ ವೃತ್ತಿ ಹಾಗೂ ರಾಜಕೀಯದಲ್ಲಿ ಮಹತ್ತರವಾಗಿ ತೊಡಗಿಸಿಕೊಂಡು ಕಳೆದ ಮೂರು ತಲೆಮಾರುಗಳಿಂದ ಸಮಾಜಮುಖಿಯಾಗಿ ದಾಖಲಾರ್ಹ ಕೊಡುಗೆಯನ್ನು ನೀಡುತ್ತಾ ಬಂದಿದೆ. ಸಹಕಾರಿ ಕ್ಷೇತ್ರದ ಶಕ್ತಿ ಕಲ್ಲಯ್ಯಸ್ವಾಮಿ ಕವಟಗಿಮಠ: ಮಹಾಂತೇಶ ಕವಟಗಿಮಠ ಅವರ ಅಜ್ಜನವರಾದ ಕಲ್ಲಯ್ಯನವರು ಪ್ರಯತ್ನ ಶೀಲತೆಗೆ ವ್ಯಾಖ್ಯಾನವಾಗಿದ್ದರು. ಕೃಷಿ, ವಾಣಿಜ್ಯಗಳಲ್ಲದೇ ಸಹಕಾರಿ ಕ್ಷೇತ್ರದಲ್ಲಿ ಯೂತಮ್ಮ ಹೆಜ್ಜೆಗುರುತುಗಳನ್ನು ಅಚ್ಚಳಿಯದೆ ಮೂಡಿಸಿದ್ದರು. ಹತ್ತೊಂಬತ್ತರ ಹರೆಯದಲ್ಲಿಯೇ ಸಹಕಾರಿ ಕ್ಷೇತ್ರಕ್ಕೆ ಕಾಲಿರಿಸಿ, ಚಿಕ್ಕೋಡಿ ಭಾಗದಲ್ಲಿ ಸಹಕಾರಿ ತತ್ವವನ್ನು ಪ್ರಚಾರಗೊಳಿಸಿದ ಶ್ರೇಯಸ್ಸು ಕಲ್ಲಯ್ಯ ಸ್ವಾಮಿಯವರಿಗೆ ಸಲ್ಲುತ್ತದೆ. ಸಹಕಾರ ತತ್ವಗಳ ಅನುಷ್ಠಾನಕ್ಕೆ ಕಟಿಬದ್ಧರಾಗಿ ಅಂದು ಗೆಳೆಯರೊಂದಿಗೆ ಚಿಕ್ಕೋಡಿ ಭಾಗದಲ್ಲಿ ನೆಟ್ಟ ಸಹಕಾರದ ಮರಇಂದು ಹೆಮ್ಮರವಾಗಿ ಬೆಳೆದಿದೆ. ಚಿಕ್ಕೋಡಿಯ ಭಾಗದಲ್ಲಿ ಸಹಕಾರಕ್ಷೇತ್ರದ ಮೊದಲ ಸಂಸ್ಥೆ ಎಲ್.ಎಸ್.ಎಂ.ಪಿ. ಸೊಸೈಟಿಯು 1914ರಲ್ಲಿ ಸ್ಥಾಪನೆಗೊಂಡಿತು. 1914 ರಿಂದ 1949ರ ವರೆಗೂ ಅವರು ಈ ಸಂಸ್ಥೆಯ ಕಾರ್ಯಕಾರಿ ಸದಸ್ಯರಾಗಿ ಕೆಲವು ಅವಧಿಗೆ ಅವರು ಈ ಸಂಸ್ಥೆಯ ಚೇಅರ್‌ಮನ್‌ರಾಗಿ ಸೇವೆಸಲ್ಲಿಸಿದರು. ಕಲ್ಲಯ್ಯಸ್ವಾಮಿಯವರು ಸತತ ಇಪ್ಪತ್ತೈದು ವರ್ಷಗಳ ಕಾಲ ತಾಲೂಕಾ ಅಭಿವೃದ್ಧಿ…
ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿಯಾದ ಬೆನ್ನಲ್ಲೆ ಹಲವು ಬಿಜೆಪಿ ನಾಯಕರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗುತ್ತಿದ್ದಾರೆ. ಈ ಮಧ್ಯೆ ಇದೀಗ ಮಾಜಿ ಸಚಿವ ಡಾ.ಕೆ.ಸುಧಾಕರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ ಆರಂಭವಾಗಿದೆ. ಇತ್ತೀಚೆಗಷ್ಟೆ. ಮಾಜಿ ಸಚಿವ ಸಿ.ಟಿ ರವಿ ನಂತರ ಸಂಸದ ಪ್ರತಾಪ್ ಸಿಂಹ ಅವರು ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿದ್ದರು. ಇದೀಗ ಬಿಡದಿ ತೋಟದ ಮನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಸುಧಾಕರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಧರ್ಮದವರಾಗಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡಲ್ಲ. ಯಾರು ಕಾನೂನನ್ನು ಕೈ ತೆಗೆದುಕೊಂಡಿದ್ದಾರೊ ಅವರಿಗೆ ಶಿಕ್ಷೆ ನೀಡಲಾಗುತ್ತದೆ. ಯಾರನ್ನು ಕೂಡ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗ ತಾನೇ ಸಂತ್ರಸ್ತ ಕುಟುಂಬಸ್ಥರು ಅರ್ಜಿಯನ್ನು ಕೊಟ್ಟಿದ್ದಾರೆ. ಸರ್ಕಾರ ಅರ್ಜಿಯನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತದೆ ಎಂದರು. ತಮ್ಮ ವಿರುದ್ದ ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ್ ಕುಮಾರ್ ಹೆಗಡೆ ಅವರು ಇವತ್ತಿನವರೆಗೂ ನಾಪತ್ತೆಯಾಗಿದ್ದರು.ಏಕಾಏಕಿ ಚುನಾವಣೆ ಬಂದ ಮೇಲೆ ಕಾಣಿಸಿಕೊಂಡಿದ್ದಾರೆ.ಅವರು ಕ್ಷೇತ್ರಕ್ಕೆ ಏನಾದರೂ ಕೆಲಸ ಮಾಡಿದ್ದಾರ? ಎಂಪಿ ಆಗಿ ಬಡವರ ಕಷ್ಟ ಕೇಳಿದ್ದಾರಾ? ಎಂದು ತಿರುಗೇಟು ನೀಡಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಾಗದೇ ಏಕಾಂಗಿಯಾಗಿ ಸ್ಪರ್ಧಿಸಲು ಬಿಎಸ್ ಪಿ ನಿರ್ಧಾರ ಮಾಡಿದೆ. ಈ ಕುರಿತು ಬಿಎಸ್ ಪಿ ನಾಯಕಿ ಮಾಯಾವತಿ ಸುದ್ದಿಗೋಷ್ಠೀ ನಡೆಸಿ ಘೋಷಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿಯೇ ಸ್ಪರ್ಧಿಸುತ್ತೇವೆ ಎಂದು ತಿಳಿಸಿದ್ದಾರೆ. ಇಂಡಿಯಾ ಒಕ್ಕೂಟ ಸೇರಲ್ಲ ಎಂದು ಖಡಕ್ ಸಂದೇಶ ರವಾನಿಸಿರುವ ಮಾಯಾವತಿ, ಬಿಎಸ್ ಪಿ ಏಕಾಂಗಿಯಾಗಿ ಸ್ಪರ್ಧಿಸಿದ್ರೆ ಒಳ್ಳೆಯ ರಿಸಲ್ಟ್ ತರುತ್ತದೆ. ಮೈತ್ರಿ ಮಾಡಿಕೊಂಡರೇ ಪಕ್ಷಕ್ಕೆ ಕಷ್ಟ. ಬಹುತೇಕ ಪಕ್ಷಗಳು ಬಿಎಸ್ ಪಿ ಜೊತೆ ಬರಲು ಬಯಸುತ್ತದೆ ಎಂದರು.