Subscribe to Updates
Get the latest creative news from FooBar about art, design and business.
- 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
- ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್ ಶಿಪ್ ಗೆ ಸರ್ವೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ
- ಬಿಡದಿ ಟೌನ್ ಶಿಪ್ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
- ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
- ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
- ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
- ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
- ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
Author: admin
ಭತ್ತ ಕಟಾವು ಮಾಡುವ ಯಂತ್ರದ ಲಾರಿ ಮತ್ತು ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಜಿನಕನಹಳ್ಳಿ ಬಳಿ ನಡೆದಿದೆ. ಪತಿ ಸಂತೋಷ್(32), ಪತ್ನಿ ಸೌಮ್ಯ(27) ಹೆಣ್ಣು ಮಗು ನಿತ್ಯಸಾಕ್ಷಿ (4) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪುತ್ರ ಅಭಿ(9)ಗಾಯಗೊಂಡಿದ್ದು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಮೂವರು ಕೊಳ್ಳೇಗಾಲ ತಾಲ್ಲೂಕು ಪಾಳ್ಯ ಗ್ರಾಮದ ನಿವಾಸಿಗಳಾಗಿದ್ದಾರೆ. ಮೂವರು ಬೈಕ್ ನಲ್ಲಿ ತೆರಳುತ್ತಿದ್ದು ಈ ವೇಳೆ ಅಪಘಾತ ಸಂಭವಿಸಿದೆ. ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ? ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ, ಉತ್ತರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಕಿತ್ತಾಟ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒಕ್ಕೂಟದಿಂದ ಹೊರ ಬರುವ ವಿಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸೋತರೇ ಗಾಂಧಿ ಕುಟುಂಬದ ಮೇಲೆ ಬರಬಾರದು, ಬಲಿಪಶು ಮಾಡಲೆಂದೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘಮಂಡಿ ಘಟಬಂಧನ್ ನಾಯಕನನ್ನಾಗಿ ಮಾಡಲಾಗುತ್ತಿದೆ ಎಂದು ವ್ಯಂಗ್ಯವಾಡಿದರು. ರಾಮಮಂದಿರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ, ಪ್ರಹ್ಲಾದ್ ಜೋಶಿ, ಯಾರು ರಾಜಕಾರಣ ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಎಲ್ಲರಿಗೂ ಆಹ್ವಾನ ಇತ್ತು, ಸಹಜವಾಗಿ ಬಂದಿದ್ದರೇ ಚರ್ಚೆ ಆಗುತ್ತಿರಲಿಲ್ಲ. ಎಲ್ಲಿ ವೋಟ್ ಸಿಗುತ್ತೆ ಅಲ್ಲಿಗೆ ಹೋಗುವ ವಿಚಾರ ಕಾಂಗ್ರೆಸ್ ನದ್ದು ಎಂದು ಕಿಡಿ ಕಾರಿದರು.
NITI ಆಯೋಗ್ ವರದಿಯ ಪ್ರಕಾರ, ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಬಡವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಒಂಬತ್ತು ವರ್ಷಗಳಲ್ಲಿ 24.82 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಲಾಗಿದೆ. ಬಡತನ ಅನುಪಾತವು 2013-14 ರಲ್ಲಿ 29.17 ಪ್ರತಿಶತದಿಂದ 2022-23 ರಲ್ಲಿ 11.28 ಕ್ಕೆ ಇಳಿದಿದೆ. ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶಗಳಲ್ಲಿ ಬಡತನ ಕಡಿಮೆ ಇದೆ. ಉತ್ತರ ಪ್ರದೇಶದಲ್ಲಿ 5.94 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಬಿಹಾರದಲ್ಲಿ 3.77 ಕೋಟಿ ಮತ್ತು ಮಧ್ಯಪ್ರದೇಶದಲ್ಲಿ 2.30 ಕೋಟಿ ರೂ. ಬಹು ಆಯಾಮದ ಬಡತನವನ್ನು ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದಲ್ಲಿನ ಪ್ರಗತಿಯ ಆಧಾರದ ಮೇಲೆ ಅಳೆಯಲಾಗುತ್ತದೆ. ವರದಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಇದು ತುಂಬಾ ಉತ್ತೇಜನಕಾರಿಯಾಗಿದೆ. ಇದು ಅಂತರ್ಗತ ಬೆಳವಣಿಗೆಯನ್ನು ಹೆಚ್ಚಿಸುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮ ಆರ್ಥಿಕತೆಯಲ್ಲಿ ಪರಿವರ್ತಕ ಬದಲಾವಣೆಗಳ ಮೇಲೆ ಕೇಂದ್ರೀಕರಿಸುತ್ತದೆ ಮತ್ತು ಎಲ್ಲಾ ಭಾರತೀಯರಿಗೆ ಸಮೃದ್ಧ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ನಾವು ಕೆಲಸ…
ಚಳಿಗಾಲದ ಅಲೆ ಉತ್ತರ ಭಾರತದ ರಾಜ್ಯಗಳ ಮೇಲೆ . ಇನ್ನೆರಡು ದಿನ ದಟ್ಟ ಮಂಜು ಕವಿದಿರುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಮಂಜಿನಿಂದಾಗಿ ಹಲವಾರು ವಿಮಾನಗಳು ವಿಳಂಬಗೊಂಡಿದ್ದರಿಂದ ಪ್ರಯಾಣಿಕರು ಗಂಟೆಗಳ ಕಾಲ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡರು. ಗೋವಾದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಮುಂಬೈಗೆ ಬಂದಿಳಿಯಿತು. ಮಂಜಿನ ನಂತರ ವಿಮಾನ ಕಾರ್ಯಾಚರಣೆಗಳ ಬಗ್ಗೆ ಪ್ರಯಾಣಿಕರಿಗೆ ನಿಖರವಾದ ಮಾಹಿತಿಯನ್ನು ಒದಗಿಸುವಂತೆ ಡಿಜಿಸಿಎ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಪ್ರತಿಭಟನೆಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾದಂತೆ ನಿರ್ಬಂಧಗಳನ್ನು ಬಿಗಿಗೊಳಿಸಲಾಗಿದೆ. ತಾತ್ಕಾಲಿಕವಾಗಿ ನಿಷೇಧಿತ ವಾಹನಗಳನ್ನು ತಡೆಯಲು ಗಡಿಯಲ್ಲಿ ಪೊಲೀಸ್ ತಪಾಸಣೆ ಮುಂದುವರಿದಿದೆ.
ಚಲಿಸುತ್ತಿರುವ ದ್ವಿಚಕ್ರ ವಾಹನದ ಮೇಲೆ ಯುವಕ ಮತ್ತು ಯುವತಿ ತಬ್ಬಿಕೊಂಡಿರುವ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಮುಂಬೈನ ಬಾಂದ್ರಾ ರಿಕ್ಲಮೇಶನ್ ಏರಿಯಾದಲ್ಲಿ ನಡೆದಿದೆ. ಸ್ಕೂಟರ್ ನಲ್ಲಿ ಪ್ರೇಮಿಗಳು ಮುಖಾಮುಖಿ ಕುಳಿತು ಪರಸ್ಪರ ಅಪ್ಪಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ಪ್ರಯಾಣಿಕರೊಬ್ಬರು ಚಿತ್ರೀಕರಿಸಿದ್ದಾರೆ. ವಿಡಿಯೋದಲ್ಲಿ ಯುವತಿ ಮತ್ತು ಯುವಕ ಸ್ಕೂಟರ್ ನಲ್ಲಿ ಮುಖಾಮುಖಿಯಾಗಿ ಕುಳಿತು ಒಬ್ಬರನ್ನೊಬ್ಬರು ಬಿಗಿಯಾಗಿ ಅಪ್ಪಿಕೊಳ್ಳುತ್ತಿದ್ದಾರೆ. ಯುವತಿ ವಿಡಿಯೋಗ್ರಾಫರ್ ನತ್ತ ತಿರುಗಿ ಸ್ಮೈಲ್ ಕೊಡುತ್ತಿರುವುದು ಸಹ ವಿಡಿಯೋದಲ್ಲಿ ಕಾಣಬಹುದು. ಹೆಲ್ಮೆಟ್ ಕೂಡ ಧರಿಸದೇ ಈ ಪ್ರೀತಿಯ ಪ್ರದರ್ಶನ ಮಾಡಲಾಗಿದೆ. ವಿಡಿಯೋ ವೈರಲ್ ಆದ ನಂತರ ವಿಡಿಯೋದಲ್ಲಿದ್ದ ಯುವತಿ ಮತ್ತು ಯುವಕನನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಯುವಕ ಹಾಗೂ ಯುವತಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: 2024ನೇ ಲೋಕಸಭೆ ಚುನಾವಣೆ ನೀತಿ ಸಂಹಿತೆ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯದ ಜನತೆಗೆ ಮಧ್ಯಂತರ ಬರ ಪರಿಹಾರವಾಗಿ ಪ್ರತಿ ಹೆಕ್ಟೇರ್ ಗೆ 2,000 ರೂಪಾಯಿಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ವರ್ಗಾಯಿಸಲು ಪ್ರಾರಂಭಿಸಿದೆ ಎಂದು ಹೇಳಿದರು. ರಾಜ್ಯವು ಕೇಂದ್ರ ಸರ್ಕಾರದಿಂದ ನೆರವು ಪಡೆದ ನಂತರ, ಎನ್ ಡಿಆರ್ ಎಫ್ ಮಾನದಂಡಗಳ ಪ್ರಕಾರ ಸಂತ್ರಸ್ತ ರೈತರಿಗೆ ಪರಿಹಾರವನ್ನು ನೀಡಲಾಗುವುದು ಎಂದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದರು. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಯಾವುದೇ ಧರ್ಮದವರಾಗಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದರು
ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಕಾಂಗ್ರೆಸ್ ತೊರೆದಿದ್ದಾರೆ. ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಎಕ್ಸ್ ಮೂಲಕ ಘೋಷಿಸಿದರು. ಈ ಘೋಷಣೆಯು ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದರ ಅಂತ್ಯವನ್ನು ಸೂಚಿಸುತ್ತದೆ ಮತ್ತು 55 ವರ್ಷಗಳ ಕಾಂಗ್ರೆಸ್ ಜೀವನದ ಅಂತ್ಯವನ್ನು ಸೂಚಿಸುತ್ತದೆ. ಮಿಲಿಂದ್ ದಿಯೋರಾ ಶಿವಸೇನೆ ಶಿಂಧೆ ಬಣಕ್ಕೆ ಹೋಗಲಿದ್ದಾರೆ ಎಂಬ ವರದಿಗಳು ಬಂದಿವೆ. ಲೋಕಸಭೆ ಚುನಾವಣೆಗೆ ತಿಂಗಳುಗಳ ಮೊದಲು ದಕ್ಷಿಣ ಮುಂಬೈ ಸ್ಥಾನದ ವಿವಾದದಿಂದಾಗಿ ಪಕ್ಷದ ಮುಂಬೈ ಮಾಜಿ ಅಧ್ಯಕ್ಷರೂ ಆಗಿದ್ದ ಮಿಲಿಂದ್ ದಿಯೋರಾ ಮನಸ್ಸು ಬದಲಾಯಿಸಿದ್ದಾರೆ ಎಂದು ವರದಿಯಾಗಿದೆ. ದಿಯೋರಾ ಶಿವಸೇನೆಯ ಏಕನಾಥ್ ಶಿಂಧೆ ಪಕ್ಷಕ್ಕೆ ಬದಲಾಗುತ್ತಿದ್ದಾರೆ ಎಂದು ವರದಿಯಾಗಿದೆ. 47ರ ಮಿಲಿಂದ್ ದಿಯೋರಾ ಹಲವು ಬಾರಿ ಕೇಂದ್ರ ಸಚಿವರಾಗಿದ್ದ ಮುರಳಿ ದೇವ್ರಾ ಅವರ ಪುತ್ರ. ಭಾರತ ಸಂಗಮ್ ಸೀಟು ಹಂಚಿಕೆ ಮಾತುಕತೆಗೂ ಮುನ್ನ ಈ ಸ್ಥಾನವನ್ನು ಬಿಟ್ಟುಕೊಡುವುದಿಲ್ಲ ಎಂದು ಶಿವಸೇನೆ ಉದ್ಧವ್ ಪಕ್ಷ ಸ್ಪಷ್ಟಪಡಿಸಿತ್ತು. ಇದರ ವಿರುದ್ಧ ಮಿಲಿಂದ್ ದಿಯೋರಾ…
ತುಮಕೂರು: ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಗಳು ನಾವು ಕಣ್ಣಾರೆ ಕಂಡ ದೇವರುಗಳು ಎಂದು ಕೆಪಿಸಿಸಿ ವಕ್ತಾರ ಹಾಗೂ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಶಿವಕುಮಾರಸ್ವಾಮೀಜಿಗಳ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ಡಾ.ಬಾಲಗಂಗಾಧರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದ್ದ ಅವರು, ಬಡಜನರಿಗಾಗಿ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳನ್ನು ತೆರೆದು, ಅನ್ನ, ಅಕ್ಷರ, ಆಸರೆ ನೀಡಿ, ನಿಜ ಅರ್ಥದಲ್ಲಿ ಜನರ ಮನಸ್ಸಿನಲ್ಲಿ ನಡೆದಾಡುವ ದೇವರಾಗಿಯೇ ಅಜರಾಮರರಾಗಿದ್ದಾರೆ ಎಂದರು. ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ ಅಧ್ಯಯನ ಪೀಠ ಆರಂಭಿಸಿ ವಿದ್ಯಾರ್ಥಿಗಳು, ಯುವ ಜನರಿಗೆ ಶ್ರೀಗಳ ತತ್ವಾದರ್ಶಗಳನ್ನು ತಿಳಿಸುವ ಕೆಲಸ ಆಗಬೇಕು ಎಂದ ಮುರುಳೀಧರ ಹಾಲಪ್ಪ, ಅವರ ಆದರ್ಶಗಳನ್ನು ನಾವು ಪಾಲಿಸುವ ಮೂಲಕ ಸಮಾಜಕ್ಕೆ ಒಳ್ಳೆಯದನ್ನು ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ ಎಂದು ನುಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹಿರೇಮಠದ ಡಾ.ಶ್ರೀಶಿವಾನಂದಶಿವಾಚಾರ್ಯಸ್ವಾಮೀಜಿ ಮಾತನಾಡಿ, ಡಾ.ಬಾಲಗಂಗಾಧರನಾಥ ಸ್ವಾಮೀಜಿ…
ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು. ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶದಲ್ಲಿ ಮಾತನಾಡಿದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು . ಕುರುಬರೂ ಇದರಲ್ಲಿ ಸೇರಿದ್ದಾರೆ…
ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಆಗಲಿದೆ. ಇದನ್ನು ಬೇಕಾದರೆ ಬೆದರಿಕೆ ಎಂದು ಬೇಕಾದರೂ ತಿಳಿಯಿರಿ. ಬಾಬ್ರಿ ಮಸೀದಿ ನಿರ್ನಾಮ ಮಾಡಿದಂತೆ ಭಟ್ಕಳದಲ್ಲಿ ಮಾಡುವುದು ಖಂಡಿತ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಶಿರ್ಸಿಯ ಸಿಪಿ ಬಜಾರ್ ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ಥಾನ ಕಾಣುತ್ತದೆ ಎಂದು ಕಿಡಿಕಾರಿದರು. ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕೋ ತನಕ ಈ ಹಿಂದೂ ಸಮಾಜ ಸುಮ್ಮನಿರಲ್ಲ. ಈಗ ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ರೆ ಇದು ಹಿಂದೂ ರಕ್ತವೇ ಅಲ್ಲ. ಹಿಂದೂ ಧರ್ಮ ಋಣ ಇಟ್ಟಿಕೊಳ್ಳುವ ಧರ್ಮ ಅಲ್ಲವೇ ಅಲ್ಲ ಎಂದು…