Subscribe to Updates
Get the latest creative news from FooBar about art, design and business.
- 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
- ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್ ಶಿಪ್ ಗೆ ಸರ್ವೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ
- ಬಿಡದಿ ಟೌನ್ ಶಿಪ್ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
- ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
- ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
- ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
- ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
- ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
Author: admin
ಹೈಕಮಾಂಡ್ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ರಾಜ್ಯಸಭಾ ಸ್ಥಾನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ರಾಜ್ಯದಲ್ಲಿ 3 ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಡುವುದಾಗಿ ಹೇಳಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು. ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಉಭಯ ನಾಯಕರ ನಡುವೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಯಿತು. ಭೇಟಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಪಕ್ಷದ ಮುಖ್ಯವಾಹಿನಿಯಲ್ಲಿ ಇರುವಂತೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕೆಲವೊಂದು ಪ್ರಮುಖ ವಿಚಾರಗಳನ್ನು ನಾನು ಚರ್ಚೆ ಮಾಡಿದ್ದೇನೆ. ಮಾತುಕತೆಯ ಎಲ್ಲಾ ವಿವರಗಳನ್ನು ಈಗ ಬಹಿರಂಗವಾಗಿ ಹೇಳಲಾಗದು. ಅಮಿತ್ ಶಾ ಭೇಟಿ ಬಹಳ ಸಮಾಧಾನ ತಂದಿದೆ ಎಂದು ತಿಳಿಸಿದರು.
ಬೆಂಗಳೂರು : ವಾಟ್ಸಾಪ್‌ನಲ್ಲಿ ಹುಡುಗಿಯಂತೆ ಚಾಟ್ ಮಾಡಿ ಲೈಂಗಿಕ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅನಿತಾ ಎಂಬ ಯುವತಿಯ ಹೆಸರಲ್ಲಿ ವ್ಯಕ್ತಿಯೋರ್ವನನ್ನು ಸಂಪರ್ಕಿಸಿದ್ದ ಆರೋಪಿ, ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದಾನೆ. ಬಳಿಕ ಫೋಟೊ ಮಾರ್ಫ್ ಮಾಡಿ ಚಾಟ್ ಸಮೇತ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ದೂರಿನ ಮೇರೆಗೆ ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಲಾಗಿದೆ.
ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಆಯೋಜಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರಾಖಂಡ ಸರ್ಕಾರವೂ ಈ ಪ್ರಕ್ರಿಯೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಶ್ರೀರಾಮನ ಜನ್ಮದಿನವಾದ ಜನವರಿ 22 ರಂದು ರಾಜ್ಯದ ಮದ್ಯದಂಗಡಿಗಳು ಮತ್ತು ಬಾರ್ ಗಳು ಬಂದ್ ಮಾಡಲು ಆದೇಶಿಸಲಾಗಿದೆ. ಎಲ್ಲರೂ ಇದನ್ನು ಪಾಲಿಸಬೇಕು ಎಂದು ಉತ್ತರಾಖಂಡ ಅಬಕಾರಿ ಆಯುಕ್ತ ಹರಿಚಂದ್ರ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಹೈದರಾಬಾದ್ ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ ಇದಾಗಿದ್ದು, ನಕಲಿ ಉತ್ಪನ್ನ, ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಬೆಂಗಳೂರು: ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಮೋದಿ ಅವರು ಏನಾದರೂ ಹೇಳಿದರೇ, ಆಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು. ಇನ್ನು ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ವಿಚಾರ ನನ್ನ ಮುಂದೆ ಚರ್ಚೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರು ಯಾವುದನ್ನೂ ಬಿಟ್ಟುಕೊಡುವುದಿಲ್ಲ. ಅವರ ಜೊತೆಗಿರುವ ಪೊಲೀಸರಿಗೂ ಗೊತ್ತಾಗಲ್ಲ ಎಂದು ಹೇಳಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ಡಾ.ಮಂಜುನಾಥ್…
ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪ್ರೇಮಿಗಳನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಬಂಧಿತ ಆರೋಪಿಗಳು. ವೆಂಕಟ್ ನಾಯಕ್(30) ಕೊಲೆಯಾದ ವ್ಯಕ್ತಿ. ಇದೇ ತಿಂಗಳ 9ರಂದು ಹೆಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಆರೋಪಿ ನಂದಿನಿಬಾಯಿ ತನ್ನ ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ತನ್ನ ಪತಿ ವೆಂಕಟ್ ನಾಯಕ್ ತಲೆ ಮೇಲೆ ರುಬ್ಬುವ ಗುಂಡು ಹಾಕಿ ಕೊಲೆ ಮಾಡಿದ್ದರು. ಸದ್ಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಗಂಡ ಮನೆಯಲ್ಲಿ ಇಲ್ಲ ಎಂದು ಹೇಳಿ ನಂದಿನಿ ಬಾಯಿ ಜನವರಿ 9 ರಂದು ಪ್ರಿಯಕರ ನಿತೇಶ್ನನ್ನು ಹೆಚ್ ಎಸ್ ಆರ್ ಲೇಔಟ್ ನ ತನ್ನ ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಗಂಡ ವೆಂಕಟನಾಯಕ್ ದಿಢೀರ್ ಮನೆಗೆ ಬಂದಿದ್ದ. ಮನೆಗೆ ಕಾಲಿಡುತ್ತಿದ್ದಂತೆ ರೂಮ್ ನಲ್ಲಿ ತನ್ನ ಪತ್ನಿ ಬೇರೊಬ್ಬನ ಜೊತೆ ಆತ್ಮೀಯ ಸಲುಗೆಯಲ್ಲಿದ್ದದನ್ನು ಕಂಡು ಕೋಪಗೊಂಡಿದ್ದ. ಬಳಿಕ ಪತಿ–ಪತ್ನಿ ನಡುವೆ ಗಲಾಟೆಯಾಗಿದ್ದು ,ಜಗಳ ತಾರಕ್ಕಕ್ಕೇರಿ ಕೊಲೆ ನಡೆದಿದೆ.…
ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಮಾತ್ರ ಬಾಕಿ ಇದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಮಂಡ್ಯ ಟಿಕೆಟ್ ಜೆಡಿಎಸ್ ಹೋಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದು ಡೌಟ್ ಆಗಿದೆ. ಹೀಗಾಗಿ ಅವರು ಪತ್ತೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಮುಂದಾಗಿದ್ದಾರೆ. ಸಂಸದೆಯಾದ ನಂತರ ಸುಮಲತಾ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಟಿಕೆಟ್ ಸಿಗದಿರೋ ಹಿನ್ನೆಲೆ ಬಿಜೆಪಿ ಮೇಲೆ ಅಸಮಾಧಾನಗೊಂಡಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗುವ ಸಾಧ್ಯತೆ ಇದೆ. ಎರಡು ಮೂರು ದಿನಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ವಿಜಯೇಂದ್ರ ಭೇಟಿ ವೇಳೆ ಮಂಡ್ಯ ಲೋಕಸಭೆ ಕ್ಷೇತ್ರ ಟಿಕೆಟ್ ನೀಡುವಂತೆ ಸುಮಲತಾ ಅವರು ಡಿಮ್ಯಾಂಡ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಬಹುತೇಕ ಜೆಡಿಎಸ್ ಗೆ ಮಂಡ್ಯ ಕ್ಷೇತ್ರ…
ಬೆಂಗಳೂರು: ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿರುವ ಹಿನ್ನೆಲೆ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಕ್ರಾತಿ ಹಬ್ಬಕ್ಕೆ ನಮ್ಮ ಹೊಟ್ಟೆ ಮೇಲೆ ಹೊಡೆಯ ಬೇಡಿ ಎಂದು ನೂರಾರು ಸಂಖ್ಯೆಯಲ್ಲಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ ಎಂದಿದ್ದಾರೆ. ಬೀದಿಬದಿ ವ್ಯಪಾರಿಗಳ ಪ್ರತಿಭಟನೆ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಫುಟ್ ಪಾತ್ ವ್ಯಾಪಾರಿಗಳ ಸಮಸ್ಯೆ ನನ್ನ ಗಮನದಲ್ಲೂ ಇದೆ. ಅವರು ಎರಡು ಮೂರು ಬಾರಿ ನನ್ನನ್ನೂ ಭೇಟಿ ಮಾಡಿದ್ದರು. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಸರಿಪಡಿಸಬೇಕು. ಫುಟ್ ಪಾತ್ಗಳು ಜನರ ಓಡಾಟಕ್ಕೆ ಮುಕ್ತವಾಗಿರಬೇಕು. ಹೈ ಕೋರ್ಟ್ ಆರ್ಡರ್ ಇದೆ. ಅದನ್ನ ಪಾಲಿಸಬೇಕು. ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು…
ರಾಮನಗರ: ರಾಮಮಂದಿರ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೂ ರಾಜಕೀಯ ಉದ್ದೇಶದಿಂದ ಉದ್ಘಾಟನೆ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಅವರು (ಬಿಜೆಪಿ) ಮನೆಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ನಾವು ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ಕೊಡುತ್ತಿದ್ದೇವೆ. ಯಾರಿಗೆ ಮತ ಹಾಕಬೇಕೆಂದು ಜನ ತೀರ್ಮಾನಿಸುತ್ತಾರೆ. ಮಂತ್ರಾಕ್ಷತೆ ಕೊಟ್ಟವರಿಗಾ ಅಥವಾ ಎರಡು ಸಾವಿರ ರೂ. ಕೊಟ್ಟವರಿಗಾ? ಎಂಬುವುದನ್ನು ಜನ ನಿರ್ಧರಿಸುತ್ತಾರೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದರು. ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ಕಟ್ಟಲು ನಾವೂ ಜಾಗ ಹುಡುಕುತ್ತಿದ್ದೇವೆ. 20 ಎಕರೆ ಜಾಗದಲ್ಲಿ ಮಂದಿರ ಕಟ್ಟುತ್ತೇವೆ. ರಾಮಮಂದಿರ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತೇವೆ. ರಾಮಮಂದಿರ ಬಿಜೆಪಿ, ಕಾಂಗ್ರೆಸ್ ಸ್ವತ್ತಲ್ಲ. ರಾಮಮಂದಿರ ಈ ಸಮಾಜದ ಸ್ವತ್ತು. ನಾವು ರಾಮಮಂದಿರ ಬಗ್ಗೆ ನಾವು ಚರ್ಚೆ ಮಾಡಲ್ಲ. ಮಂದಿರ ಕಟ್ಟಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಜಿಲ್ಲಾಧಿಕಾರಿ, ಸಂಸದರು ಇದರ ಬಗ್ಗೆ ಚರ್ಚಿಸುತ್ತಿದ್ದಾರೆ. ಹೆಚ್ಚು ಚರ್ಚೆ ಮಾಡದೇ ರಾಮಮಂದಿರ ನಿರ್ಮಿಸುತ್ತೇವೆ. ಇಲ್ಲದಿದ್ದರೇ ಮಂದಿರ ಕಟ್ಟಿದ್ದೇವೆಂದು…
ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಖಾಸಗಿ ಹೊಟೇಲ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸರಿಯಾದ ಸೆಕ್ಷನ್ ಹಾಕಿ. ಪೋಕ್ಸೋ ಕಾಯ್ದೆಯಡಿ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಕೆಯಾಗಬೇಕು. ಸಾಮೂಹಿಕ ಅತ್ಯಾಚಾರ ನಡೆದಿರುವ ಎಲ್ಲಾ ಪ್ರಕರಣಗಳೂ ಎಸ್ ಐಟಿ ತನಿಖೆಗೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಂತ್ರಿಗಳಾದ ಗೋವಿಂದ ಕಾರಜೋಳ ಮತ್ತು ಡಾ.ಅಶ್ವಥ್ ನಾರಾಯಣ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಬೊಮ್ಮಾಯಿ, ನಾಳೆ (ಜ.14) ಬಿಜೆಪಿ ಮಹಿಳಾ ನಿಯೋಗ ಹಾನಗಲ್ಗೆ ಭೇಟಿ ಕೊಡುತ್ತಿದೆ. ರಾಜ್ಯದಲ್ಲಿ ಸಂಭವಿಸಿದ ಪ್ರಕರಣಗಳ ಬಗ್ಗೆ ನಾವು ಹೋರಾಟ ಮಾಡುತ್ತೇವೆ. ಎಸ್ಐಟಿ ರಚಿಸಿದರೂ ನ್ಯಾಯಾಂಗ ಮೇಲುಸ್ತುವಾರಿಯ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗಿದೆ. ಯುವಕರು ರೂಂನಲ್ಲಿ ಯುವತಿಯನ್ನು ಥಳಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಸಾಮೂಹಿಕ ಅತ್ಯಾಚಾರ ಮುಚ್ಚಿಡುವ ಪ್ರಯತ್ನ…