Author: admin

ಮಂಗಳೂರು: ಧರ್ಮಸ್ಥಳ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸಾಕ್ಷಿಗಳು ಲಭಿಸಿರುವ ಬಗ್ಗೆ ವರದಿಯಾಗಿದೆ. ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್ ಅವರು ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಮಂಗಳವಾರದ ಕಾರ್ಯಾಚರಣೆಯ ವೇಳೆ ಸುಮಾರು 2.5 ಅಡಿ ಆಳದಲ್ಲಿ ಕೆಂಪು ಬಣ್ಣದ ರವಿಕೆ, PAN ಕಾರ್ಡ್ ಹಾಗೂ ATM ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಎಸ್‌ ಐಟಿಯು ಈ ಬೆಳವಣಿಗೆಯ ನಂತರ ತಕ್ಷಣ ಸ್ಥಳದ 10 ಅಡಿ ಆಳದವರೆಗೆ ಉತ್ಖನನ ಕಾರ್ಯಾಚರಣೆಯನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದ್ದು, ಇದು ಅವರ ವೃತ್ತಿಪರ ಬದ್ಧತೆಯನ್ನು ತೋರಿಸುತ್ತದೆ. ಈ ಕಾರ್ಯವು ಶ್ರಮದಾಯಕವಾದರೂ, ಯಾವುದೇ ಸಾಕ್ಷ್ಯವನ್ನು ಕಡೆಗಣಿಸದೆ ಸಮಗ್ರವಾಗಿ ಪರಿಶೀಲಿಸುವ ದೃಢ ಸಂಕಲ್ಪ ಮಾಡಿರುವ ಎಸ್ ಐಟಿಯ ಕಾರ್ಯವೈಖರಿಯು ಶ್ಲಾಘನೀಯ ಎಂದು ವಕೀಲ ಮಂಜುನಾಥ್ ಎನ್ ಹೇಳಿದ್ದಾರೆ. ಪತ್ತೆಯಾಗಿರುವ PAN ಕಾರ್ಡ್…

Read More

ನವದೆಹಲಿ: ಪಿಎಂ- ಕಿಸಾನ್ ಯೋಜನೆಯ 20ನೇ ಕಂತಿನ 20,500 ಕೋಟಿ ರೂ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್​ 2ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ಇದರಿಂದ ದೇಶ 9.7 ಕೋಟಿ ರೈತರಿಗೆ ಸಹಾಯವಾಗಲಿದೆ. 2019ರಲ್ಲಿ ಆರಂಭವಾದ ಈ ಯೋಜನೆ ಐದು ವರ್ಷ ಪೂರ್ಣಗೊಳಿಸಿದ್ದು, ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು. ಇಲ್ಲಿಯವರೆಗೆ ಈ ಯೋಜನೆಯಡಿ 19 ಕಂತುಗಳಲ್ಲಿ 3.69 ಲಕ್ಷ ಕೋಟಿ ರೂ ಹಣವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ರೈತರ ಕೃಷಿ ಚಟುವಟಿಕೆಗಳಾದ ಬೀಜ ಖರೀದಿ ಮತ್ತು ರಸಗೊಬ್ಬರದ ಖರ್ಚಿಗೆ ಹಣ ನೆರವಾಗಲಿದೆ. ಪಿಎಂ ಕಿಸಾನ್​ ಯೋಜನೆಯ ಮುಂದಿನ ಕಂತಿನ ಹಣ ಆಗಸ್ಟ್​ 2ರಂದು ಬಿಡುಗಡೆಯಾಗಲಿದ್ದು, 20,500 ಕೋಟಿ ಹಣ ದೇಶದ 9.7 ಕೋಟಿ ರೈತರ ಖಾತೆಗೆ ಜಮೆಯಾಗಲಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ಪಿಸ್ತೂಲ್‌ ನಿಂದ ಮಿಸ್ ​​ಫೈರ್ ಆದ ಗುಂಡು ತಗುಲಿ ಯುವತಿಯ ಒಂದು ಕಿಡ್ನಿಗೆ ತೀವ್ರ ಹಾನಿಯಾದ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇಚಲ್ (32) ಎಂಬವರು ಕಿಡ್ನಿ ಕಳೆದುಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರವಾನಗಿ ಪಡೆದ ಪಿಸ್ತೂಲ್ ಹೊಂದಿದ್ದ ಈಕೆಯ ಸ್ನೇಹಿತನಾದ ನಿಖಿಲ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಾಕ್ಸ್ ಟೌನ್‌ನ ನಿವಾಸಿಯಾಗಿದ್ದ ರೇಚಲ್ ಜುಲೈ 28ರಂದು ರಾತ್ರಿ ಹೊರಮಾವು ಸಮೀಪದ ಆಶೀರ್ವಾದ ಕಾಲೊನಿಯಲ್ಲಿರುವ ನಿಖಿಲ್ ನಾಯಕ್‌ ನ ಮನೆಗೆ ತೆರಳಿದ್ದರು. ನಿಖಿಲ್ ನಾಯಕ್ ಶೌಚಾಲಯಕ್ಕೆ ಹೋಗಿದ್ದಾಗ ರೇಚಲ್ ಆತನ ಪಿಸ್ತೂಲ್ ಹಿಡಿದು ನೋಡುತ್ತಿದ್ದಾಗ ಮಿಸ್​​ ಫೈರ್ ಆಗಿದೆ. ಗುಂಡು ರೇಚಲ್‌ ಅವರ ಹೊಟ್ಟೆಗೆ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ನಿಖಿಲ್ ನಾಯಕ್ ಆಕೆಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ರೇಚಲ್ ಅವರ ಒಂದು ಕಿಡ್ನಿ ಹಾನಿಗೊಳಗಾಗಿದ್ದು, ವೈದ್ಯರು ತೆಗೆದು ಹಾಕಿದ್ದಾರೆ. ಇದೀಗ ರೇಚಲ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಆಕೆಯ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.…

Read More

ಬೆಳ್ತಂಗಡಿ: ಅನಾಮಧೇಯ ವ್ಯಕ್ತಿಯೋರ್ವ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರವೂ ಆತ ಗುರುತಿಸಿದ ಸ್ಥಳದಲ್ಲಿ ಅಗೆಯುವ ಕಾರ್ಯ ಮುಂದುವರಿದಿದೆ. ಸೋಮವಾರ ವಿಶೇಷ ತನಿಖಾ ತಂಡ ಎಸ್‌ ಐಟಿ ಅಧಿಕಾರಿಗಳ ಸಮ್ಮುಖದಲ್ಲಿ ಅನಾಮಧೇಯ ವ್ಯಕ್ತಿ 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಕ್ಕೆ ಮಾರ್ಕಿಂಗ್ ಮಾಡಲಾಗಿದ್ದು, ಪೊಲೀಸ್ ಭದ್ರತೆ ನೀಡಲಾಗಿದೆ. ನೇತ್ರಾವತಿ ದಡದಲ್ಲಿ ಸಾಕ್ಷಿದಾರ ಗುರುತಿಸಿದ 2 ಪಾಯಿಂಟ್ ಗಳಲ್ಲಿ ಮೃತದೇಹ ಸಿಕ್ಕಿಲ್ಲ, ಹಲವು ವರ್ಷಗಳ ಹಿಂದೆ ಈ ಪ್ರದೇಶಗಳಲ್ಲಿ ತಾನು ಹೂತಿರುವುದಾಗಿ ದೂರುದಾರ ಹೇಳಿದ್ದಾನೆ. ಮಳೆಗಾಲದಲ್ಲಿ ಪ್ರವಾಹದ ಸಂದರ್ಭದಲ್ಲಿ ಈ ಪ್ರದೇಶಗಳಿಂದ ಮೃತದೇಹ ಕೊಚ್ಚಕೊಂಡು ಹೋಗುವ ಸಾಧ್ಯತೆ  ಅಥವಾ ಮೃತದೇಹದ ಮೇಲೆ ಮತ್ತಷ್ಟು ಮಣ್ಣು ಬಿದ್ದು ಮುಚ್ಚಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇನ್ನುಳಿದ ಪಾಯಿಂಟ್ ಗಳಲ್ಲಿಯೂ ಮೃತದೇಹಕ್ಕಾಗಿ ತೀವ್ರ ಹುಡುಕಾಟ ಮುಂದುವರಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಬಳ್ಳಾರಿ: ಕಸದ ವಾಹನ ಹರಿದು 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದಿದೆ. ಮಹಾನಗರ ಪಾಲಿಕೆ ಕಸ ಸಂಗ್ರಹಿಸುವ ಟಾಟಾ ಏಸ್ ವಾಹನ ಹರಿದು ಶೈಲಜಾ- ಸಮರ ದಂಪತಿ ಪುತ್ರ ವಿಕ್ಕಿ (3) ಮೃತಪಟ್ಟಿದ್ದಾನೆ. ಬೆಳಗ್ಗೆ ಬಾಪುಜಿ ನಗರದಲ್ಲಿ ಕಸ ಸಂಗ್ರಹಿಸಲು ವಾಹನ ಬಂದಿತ್ತು. ಈ ವೇಳೆ, ರಸ್ತೆ ಬದಿ ಆಟ ಆಡುತ್ತಿದ್ದ ವಿಕ್ಕಿ ತಲೆ ಮೇಲೆ ವಾಹನ ಹರಿದಿದೆ. ಕೂಡಲೇ ಮಗುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆಸ್ಪತ್ರೆ ಮುಟ್ಟುವುದರಲ್ಲೇ ವಿಕ್ಕಿ ಸಾವನ್ನಪ್ಪಿದ್ದಾನೆ ಮಗುವನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪಾಲಿಕೆ ಮೇಯರ್ ನಂದೀಶ್ ಹಾಗೂ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇನ್ನೂ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದಂದ ಮಗು ಬಲಿಯಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ದೊಡ್ಡಬಳ್ಳಾಪುರ: ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ದ ಎಫ್‌ಐಆರ್‌ ದಾಖಲಾಗಿದೆ. ಜುಲೈ 22ರ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಜೀವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು.   ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೀದರ್: ಜಿಲ್ಲೆಯ ಔರಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಔರಾದ್ ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಜು.31ರಂದು ಬೆಳೆಗ್ಗೆ 10:30ಕ್ಕೆ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ. ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಪ್ರಭು ಚವ್ಹಾಣ್ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಎಂಎಲ್ಸಿ ವಿಜಯ್ ಸಿಂಗ್ ಸಸಿ ನೆಡುವ ಮೂಲಕ ಚಾಲನೆ ನೀಡುವರು. ಪತ್ರಕರ್ತ ದೇವಯ್ಯ ಗುತ್ತೇದಾರ್ ಉಪನ್ಯಾಸ ನೀಡುವರು. ಸಂಘದ ಜಿಲ್ಲಾಧ್ಯಕ್ಷ ಡಿ.ಕೆ. ಗಣಪತಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿ. ತಹಶೀಲ್ದಾರ್ ಮಹೇಶ್ ಪಾಟೀಲ್, ತಾಪಂ ಇಒ ಶಿವಕುಮಾರ್ ಘಾಟೆ, ಸಿಪಿಐ ರಘುವೀರ ಸಿಂಗ್ ಠಾಕೂರ್, ಶರಣಪ್ಪ ಚಿಟಮೇ, ಶಿವಕುಮಾರ ಸ್ವಾಮಿ, ನಾಗಶೆಟ್ಟಿ ಧರಂಪುರೆ, ಪೃಥ್ವಿರಾಜ್ ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿವಾನಂದ ಮೊಕ್ತೆದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ:…

Read More

ಸರಗೂರು:  ಸರ್ಕಾರ ಪ್ರತಿ ಕುಟುಂಬದಲ್ಲಿರುವ ಅರ್ಹರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಅನುಮೋದನೆ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿ ಮಾಡಿದೆ. ಅರ್ಹರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಉಪ ತಹಸೀಲ್ದಾರ್ ಮಹದೇವ ಮೂರ್ತಿ ತಿಳಿಸಿದರು. ತಾಲೂಕಿನ ಮುಳ್ಳೂರು ಗ್ರಾಪಂ ವ್ಯಾಪ್ತಿಯ ಮುಳ್ಳೂರು ಗ್ರಾಮದ ಅಂಬೇಡ್ಕರ್ ಭವನದಲ್ಲಿ  ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಸಾಮಾಜಿಕ ಭದ್ರತಾ ಯೋಜನೆಗಳ  ಕಂದಾಯ ಅದಾಲತ್ ಹಾಗೂ ಪಿಂಚಣಿ ಈ ಪೌತಿ ಖಾತೆ ಅದಾಲತ್ ಮತ್ತು ಜನ ಸಂಪರ್ಕ ಸಭೆ ಸಭೆಯನ್ನು ಮಂಗಳವಾರದಂದು ಹಮ್ಮಿಕೊಂಡಿದ್ದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಅನುದಾನ ಬಿಡುಗಡೆಗೊಳಿಸುತ್ತಿದೆ. ಆದರೆ ಇದು ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂಬ ಕಾರಣದಿಂದ ಪ್ರತಿ ತಿಂಗಳ 15 ರೊಳಗೆ ಜನರ ಬಳಿ ಹೋಗಿ ಅರ್ಹರನ್ನು ಗುರುತಿಸಿ ಮನೆ ಬಾಗಿಲಿಗೆ ಪಿಂಚಣಿ ಅನು ಮೋದನೆ ಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.…

Read More

ದಿಯೋಘರ್: ಗ್ಯಾಸ್ ಸಿಲಿಂಡರ್ ತುಂಬಿದ್ದ ಟ್ರಕ್ ಗೆ  ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಗಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಿಂಡು 68 ವರ್ಷದ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್ ನಲ್ಲಿ ಈ ಭೀಕರ ಘಟನೆ ವರದಿಯಾಗಿದ್ದು, ಬೀದಿನಾಯಿಗಳ ದಾಳಿಗೆ 71 ವರ್ಷದ ಸೀತಪ್ಪ ಎಂಬುವವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೀತಪ್ಪ ಅವರು ಸೋಮವಾರ ಬೆಳಗ್ಗೆ ವಾಕಿಂಗ್​ಗೆ ಹೋಗುತ್ತಿದ್ದಾಗ 8 ರಿಂದ 9 ಬೀದಿನಾಯಿಗಳು ದಾಳಿ ಮಾಡಿದ್ದು, ಕೈ, ಕಾಲಿನ ಅರ್ಧ ಮಾಂಸವನ್ನೇ ಕಚ್ಚಿ ತಿಂದಿವೆ. ಅಷ್ಟೇ ಅಲ್ಲದೆ ಮುಖಕ್ಕೂ ಕಚ್ಚಿವೆ. ನಾಯಿಗಳ ದಾಳಿಗೆ ವೃದ್ಧ ಸೀನಪ್ಪ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಬೆಳಗಿನ ಜಾವ 3 ಗಂಟೆಗೆ ಸೀತಪ್ಪ ಕಂಬಳಿ ಸುತ್ತಿಕೊಂಡು ವಾಕಿಂಗ್ ಮಾಡುತ್ತಿದ್ದರು. ಕಂಬಳಿಯಲ್ಲಿ ಸುತ್ತಿಕೊಂಡು ಓಡಾಡುತ್ತಿದ್ದ ಅವರನ್ನು ನೋಡಿ ಬೀದಿ ನಾಯಿಗಳು ಮುಗಿಬಿದ್ದಿವೆ. ಸೀತಪ್ಪ ಅವರ ಕೈ ಮತ್ತು ಇತರ ಭಾಗಗಳನ್ನು ನಾಯಿಗಳು ಪದೇ ಪದೇ ಕಚ್ಚಿದವು. ಬಳಿಕ ಸ್ಥಳೀಯರು ನಾಯಿಗಳನ್ನು ಓಡಿಸಿ, ಕೂಡಲೇ ಯಲಹಂಕದ ಸರ್ಕಾರಿ ಆಸ್ಪತ್ರೆಗೆ…

Read More